Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : ಯಾವ ಕಾಯಕವೂ ಮೇಲು ಅಲ್ಲ. ಕೀಳು ಅಲ್ಲ. ಎಲ್ಲ ಕಾಯಕವೂ ಸಮಾನ ಮತ್ತು ಸಮಾನ ಘನತೆ ಹೊಂದಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಸವಿತಾ ಸಮಾಜ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಲೇಖಕ ಡಾ.ಎಂ.ಎಸ್.ಮುತ್ತುರಾಜ್ ಅವರ ಮಂಗಳವಾದ್ಯ ಕಾದಂಬರಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ನಟರಾಗಿ ಜನಪ್ರಿಯತೆಗಳಿಸಿರುವ ಎಂ.ಆರ್.ಮುತ್ತೂರಾಜ್ ಅವರು ಬಹುಮುಖ ಪ್ರತಿಭೆ. ವೃತ್ತಿ ಘನತೆಯನ್ನು ಕಾಪಾಡುವ ವ್ಯಕ್ತಿತ್ವ. ಇವರು ಕಾಯಕ ಜೀವಿ. ಪ್ರತಿಯೊಬ್ಬರೂ ಘನತೆಯಿಂದ ಕಾಯಕ ಮಾಡಬೇಕು. ಇದನ್ನೇ ಬಸವಣ್ಣನವರು ಕಾಯಕವೇ ಕೈಲಾಸ ಎಂದು ಹೇಳಿದ್ದಾರೆ. ಕೈಲಾಸ, ಸ್ವರ್ಗ, ನರಕ ಎನ್ನುವುದು ಬೇರೆಲ್ಲೂ ಇಲ್ಲ. ಎಲ್ಲವೂ ಇಲ್ಲೇ ಇದೆ ಎಂದರು. ಅಯ್ಯಾ ಎಂದರೆ ಸ್ವರ್ಗ, ಎಲವೋ ಎಂದರೆ ನರಕ ಎಂದು ಬಸವಣ್ಣನವರು ಹೇಳಿದ್ದು ಈ ಕಾರಣಕ್ಕೇ. ಪರಸ್ಪರ ಮನುಷ್ಯರನ್ನು ಮನುಷ್ಯರು ಗೌರವಿಸುವುದೇ ದೊಡ್ಡ ಮೌಲ್ಯ. ಮನುಷ್ಯ ದ್ವೇಷಕ್ಕಿಂತ ಕೆಟ್ಟ ಮೌಲ್ಯ ಬೇರೆ ಇಲ್ಲ. ಅದಕ್ಕೇ ರಾಷ್ಟ್ರಕವಿ ಕುವೆಂಪು ಅವರು “ಸರ್ವ ಜನಾಂಗದ ಶಾಂತಿಯ ತೋಟ” ಎಂದು ಕರೆದಿದ್ದಾರೆ ಎಂದು…
ಮೈಸೂರು: ನಾನು ನ್ಯಾಷನಲ್ ಲೀಡರ್ ಅಂತ ಹೇಳಿಲ್ಲ. ಅಪ್ಪನ ನೆಲೆ ಬಿಡಿಸಿ ಬಾದಾಮಿ ಕ್ಷೇತ್ರಕ್ಕೆ ಓಡಿಸುವವರು ನ್ಯಾಷನಲ್ ಲೀಡರ್. ಸಿಎಂ ಮೇಲೆ ಒತ್ತಡ ತರೋರು ನ್ಯಾಷನಲ್ ಲೀಡರ್ ಅಂತ ಡಾ.ಯತೀಂದ್ರ ಟೀಕೆಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ಇಂದು ನಗರದಲ್ಲಿ ಪ್ರತಾಪ್ ಸಿಂಹ ನ್ಯಾಷನಲ್ ಲೀಡರಾ? ಎಂಬ ಡಾ. ಯತೀಂದ್ರ ಸಿದ್ದರಾಮಯ್ಯ ಟೀಕೆಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದರು. ಅಲ್ಲದೇ ಖಂಡಿತ ನಾನು ನ್ಯಾಷನಲ್ ಲೀಡರ್ ಅಲ್ಲ. ಸಾಮಾನ್ಯ ಕುಟುಂಬದ ಹಿನ್ನೆಲೆಯಲ್ಲಿ ಬಂದು ಬರವಣಿಗೆ ಮೂಲಕ ಹೆಸರು ಸಂಪಾದಿಸಿ ಈ ಸ್ಥಾನಕ್ಕೆ ಬಂದಿದ್ದೇನೆ. ಅಪ್ಪ ಸಿಎಂ ಆಗಿದ್ದರೆ ತನ್ನ ಖಾಸಗಿ ಲ್ಯಾಬ್ ಗೆ ಗುತ್ತಿಗೆ ಪಡೆದು ಕೊಳ್ಳುವಂತವರು ನ್ಯಾಷನಲ್ ಲೀಡರ್ ಎಂದು ಗುಡುಗಿದರು. ಅಪ್ಪನ ನೆಲೆ ಬಿಡಿಸಿ ಬದಾಮಿ ಕ್ಷೇತ್ರಕ್ಕೆ ಓಡಿಸುವವರು ನ್ಯಾಷನಲ್ ಲೀಡರ್ ಆಗಿದ್ದಾರೆ. ತಾನು ಹೇಳಿದ ವರ್ಗಾವಣೆ ಲಿಸ್ಟ್ ಗೆ ಸಹಿ ಮಾಡಿ ಅಂತಾ ಸಿಎಂ ಮೇಲೆ ಒತ್ತಡ ತರುವವರು ನ್ಯಾಷನಲ್ ಲೀಡರ್ ಎಂಬುದಾಗಿ ವಾಗ್ಧಾಳಿ ನಡೆಸಿದರು.…
ಮೈಸೂರು: ರಾಮನ ಪೇಟೆಂಟ್ ಅನ್ನು ಬಿಜೆಪಿ ಗೆ ಕೊಟ್ಟಿದ್ದೆ ಕಾಂಗ್ರೆಸ್. ರಾಮನನ್ನು ಕಾಂಗ್ರೆಸಿಗರೆ ಭಕ್ತಿ ಭಾವದಿಂದ ಪೂಜಿಸಿದ್ದರೆ. ಬಿಜೆಪಿಗೆ ಯಾಕೆ ಈ ಪೇಟೆಂಟ್ ಸಿಗುತ್ತಿತ್ತು ? ಎಂಬುದಾಗಿ ಸಂಸದ ಪ್ರತಾಪ್ ಸಿಂಹ ಕಾಂಗ್ರೆಸ್ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಮನ ಅಸ್ತಿತ್ವವನ್ನೇ ನ್ಯಾಯಾಲಯದಲ್ಲಿ ಪ್ರಶ್ನಿಸದ ಕಾಂಗ್ರೆಸ್ ಗೆ ರಾಮ ಏನೂ ಬಿಜೆಪಿ ಪೇಟೆಂಟ್ ಹಾ ಎಂದು ಕೇಳುವ ನೈತಿಕತೆ ಇಲ್ಲ. ಕಾಂಗ್ರೆಸ್ಗೆ ರಾಮ ರಾಜ್ಯದ ಮೇಲೆ ನಂಬಿಕೆ ಇದ್ಯಾ? ರಾವಣ ರಾಜ್ಯದ ಮೇಲೆ ನಂಬಿಕೆ ಇದ್ಯಾ ಅವರನ್ನೇ ಕೇಳಿ ? ಕಾಂಗ್ರೆಸ್ ಗೆ ಗಾಂಧೀಜಿಯ ರಾಮ ರಾಜ್ಯದ ಮೇಲೆ ನಂಬಿಕೆ ಇಲ್ಲ ಎಂದು ಕಿಡಿಕಾರಿದರು. ಅಯೋಧ್ಯೆ ಮಂತ್ರಾಕ್ಷತೆ ಗೆ ಅನ್ನಭಾಗ್ಯ ಅಕ್ಕಿ ಬಳಸಿದ ಆರೋಪ ವಿಚಾರವಾಗಿ ಮಾತನಾಡಿದಂತ ಅವರು, ಮಂತ್ರಾಕ್ಷತೆ ಸ್ವೀಕರಿಸಲು ಆಗದ ಕೈಗಳಿಗೆ ಮಂತ್ರಾಕ್ಷತೆ ಗೆ ಅಕ್ಕಿ ಕೊಡಲು ಮನಸ್ಸು ಬರುತ್ತಾ ? ಅಕ್ಷತೆ, ಗೋತ್ರದ ಮೇಲೆ ಕಾಂಗ್ರೆಸ್ ಗೆ ಸಿದ್ದರಾಮಯ್ಯಗೆ ನಂಬಿಕೆ ಇಲ್ಲ. ಅಯೋಧ್ಯೆಗೆ…
ಬೆಂಗಳೂರು: ರಾಜ್ಯದಲ್ಲಿ ಸಂಚಾರ ಪೊಲೀಸರು ನಿಯಮ ಉಲ್ಲಂಘಿಸೋ ಸವಾರರ ವಿರುದ್ಧ ಕಾನೂನು ಕ್ರಮ ಕಟ್ಟು ನಿಟ್ಟಾಗಿ ಜರುಗಿಸೋದಕ್ಕೆ ಮುಂದಾಗಿದ್ದಾರೆ. ಅದರಲ್ಲೂ ಪದೇ ಪದೇ ಸಂಚಾರ ನಿಯಮ ಉಲ್ಲಂಘಿಸಿದ್ರೇ ಅಂಥವರ ಡಿಎಲ್ ಅಮಾನತಿಗೆ ಸಾರಿಗೆ ಇಲಾಖೆಗೆ ಕಳುಹಿಸಿಕೊಟ್ಟಿದ್ದಾರೆ. ಹೀಗೆ ನಿಯಮ ಉಲ್ಲಂಘಿಸಿದ 711 ಸವಾರರ ಡಿಎಲ್ ಅನ್ನು ಅಮಾನತುಗೊಳಿಸೋದಕ್ಕೆ ಸಾರಿಗೆ ಇಲಾಖೆಗೆ ಕಳುಹಿಸಿದ್ದಾರೆ. ಈ ಮೂಲಕ ಪದೇ ಪದೇ ನಿಯಮ ಉಲ್ಲಂಘಿಸೋ ವಾಹನ ಸವಾರರಿಗೆ ಶಾಕ್ ನೀಡಿದ್ದಾರೆ. ರಾಜ್ಯಾಧ್ಯಂತ ಸಂಚಾರ ನಿಯಮ ಉಲ್ಲಂಘಿಸೋ ವಾಹನ ಸವಾರರಿಗೆ ಶಾಕ್ ನೀಡೋದಕ್ಕೆ ಸಂಚಾರ ಪೊಲೀಸರು ಮುಂದಾಗಿದ್ದಾರೆ. ಈಗಾಗಲೇ ಬೆಂಗಳೂರಲ್ಲಿ ಸಂಚಾರ ನಿಯಮ ಉಲ್ಲಂಘಿಸೋ ವಾಹನ ಸವಾರರ ಸವಾರರ ವಿರುದ್ಧ ಕೇಸ್ ಹಾಕಿ, ದಂಡವನ್ನು ವಸೂಲಿ ಮಾಡಲಾಗುತ್ತಿದೆ. ಸಿಗ್ನಲ್ ಜಂಪ್, ನೋ ಪಾರ್ಕಿಂಗ್ ಸೇರಿದಂತೆ ವಿವಿಧ ನಿಯಮ ಉಲ್ಲಂಘನೆಗೆ ದಂಡವನ್ನು ವಿಧಿಸಲಾಗುತ್ತಿದೆ. ಇದೀಗ ಇದಷ್ಟೇ ಅಲ್ಲದೇ ಪದೇ ಪದೇ ಸಂಚಾರ ನಿಯಮ ಉಲ್ಲಂಘಿಸೋ ಸವಾರರನ್ನು ಪತ್ತೆ ಹಚ್ಚುತ್ತಿರೋ ಸಂಚಾರ ಪೊಲೀಸರು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳೋದಕ್ಕೆ…
BREAKING: ಖ್ಯಾತ ಸಂಗೀತ ಮಾಂತ್ರಿಕ ‘ಉಸ್ತಾದ್ ರಶೀದ್ ಖಾನ್’ ಇನ್ನಿಲ್ಲ | Music maestro Rashid Khan passes away
ಕೊಲ್ಕತ್ತಾ ಮೂಲದ ಆಸ್ಪತ್ರೆಯಲ್ಲಿ ಪ್ರಾಸ್ಟೇಟ್ ಕ್ಯಾನ್ಸರ್ಗೆ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಸಂಗೀತ ಮಾಂತ್ರಿಕ ಉಸ್ತಾದ್ ರಶೀದ್ ಖಾನ್ ( Renowned music maestro Ustad Rashid Khan ) ಇನ್ನಿಲ್ಲ. 55 ವರ್ಷದ ಕಲಾವಿದ ವಾತಾಯನ ಮತ್ತು ಆಮ್ಲಜನಕದ ಬೆಂಬಲವನ್ನು ಪಡೆಯುತ್ತಿದ್ದರು. ಕಳೆದ ತಿಂಗಳು ಸೆರೆಬ್ರಲ್ ಅಟ್ಯಾಕ್ ಅನುಭವಿಸಿದ ನಂತರ ಸಂಗೀತಗಾರನ ಆರೋಗ್ಯವು ಕುಸಿಯಿತು. ರಾಂಪುರ-ಸಹಸ್ವಾನ್ ಘರಾನಾದ 55 ವರ್ಷದ ಅವರು ಆರಂಭದಲ್ಲಿ ಟಾಟಾ ಮೆಮೋರಿಯಲ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು. ಆದಾಗ್ಯೂ, ನಂತರದ ಹಂತದಲ್ಲಿ, ಅವರು ಕೋಲ್ಕತ್ತಾದಲ್ಲಿ ಪ್ರತ್ಯೇಕವಾಗಿ ತಮ್ಮ ಚಿಕಿತ್ಸೆಯನ್ನು ಮುಂದುವರಿಸಿದ್ದರು. ಅವರ ಆಪ್ತ ಮೂಲಗಳ ಪ್ರಕಾರ, ಕಳೆದ ತಿಂಗಳು ಖಾಸಗಿ ಆಸ್ಪತ್ರೆಗೆ ದಾಖಲಾದಾಗಿನಿಂದ, ಅವರು ಚಿಕಿತ್ಸೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಹಾಜರಾದ ವೈದ್ಯರ ತಂಡವು ಅವರ ವೈದ್ಯಕೀಯ ಸ್ಥಿತಿಯ ಸುಧಾರಣೆಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದೆ. ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಖ್ಯಾತ ಸಂಗೀತ ಮಾಂತ್ರಿಕ ಉಸ್ತಾದ್ ರಶೀದ್ ಖಾನ್ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಈ…
ಪಣಜಿ: ಮೈಂಡ್ಫುಲ್ ಎಐ ಲ್ಯಾಬ್ನ ಸ್ಥಾಪಕಿ ಮತ್ತು ಸಿಇಒ ಮತ್ತು ಬೆಂಗಳೂರು ನಿವಾಸಿ ಸುಚನಾ ಸೇಠ್ (39) ಉತ್ತರ ಗೋವಾದ ಕರಾವಳಿ ಪ್ರದೇಶದಲ್ಲಿರುವ ಕ್ಯಾಂಡೋಲಿಮ್ನ ಹೋಟೆಲ್ನಲ್ಲಿ ತನ್ನ 4 ವರ್ಷದ ಮಗನನ್ನು ಕೊಲೆ ಮಾಡಿದ್ದಾರೆ. ಇಬ್ಬರೂ ಮಗುವಿನ ವಶಕ್ಕಾಗಿ ಹೋರಾಡುತ್ತಿದ್ದರು. ಹುಡುಗನನ್ನು ಉಸಿರುಗಟ್ಟಿಸಿ ಮತ್ತು ಕೆಲವು ಚೂಪಾದ ವಸ್ತುವನ್ನು ಬಳಸಿ ಕೊಲ್ಲಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಈ ಪ್ರಕರಣದಲ್ಲಿ ಇದೀಗ ಕೋರ್ಟ್ ಬಂಧಿತ ಆರೋಪಿ ಸುಚನಾಗೆ 6 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ. ಚಿತ್ರದುರ್ಗದ ಐಮಂಗಳ ಪೊಲೀಸರಿಂದ ಸ್ವಂತ ಮಗನನ್ನೇ ಕೊಂದಂತ ಮೈಂಡ್ಬುಲ್ ಎಐ ಲ್ಯಾಬ್ ನ ಸಿಇಓ ಸುಚನಾ ಸೇಠ್ ಅನ್ನು ಬಂಧಿಸಲಾಗಿತ್ತು. ಆ ಬಳಿಕ ಗೋವಾ ಪೊಲೀಸರಿಗೆ ಆಕೆಯನ್ನು ಹಸ್ತಾಂತರಿಸಲಾಗಿತ್ತು. ಇಂದು ಗೋವಾ ಪೊಲೀಸರು ಸುಚನಾ ಅವರನ್ನು ಮಾಪುಸಾ ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ಪ್ರಕರಣ ವಿಚಾರಣೆ ನಡೆಸಿದಂತ ಕೋರ್ಟ್ ಮುಂದೆ ಪೊಲೀಸರು ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿದ್ದರು. ಸ್ವಂತ ಮಗನನ್ನೇ ಕೊಂದ ಸಿಇಓ ಸುಚನಾ…
ಬೆಂಗಳೂರು: ರಾಜ್ಯ ಜೆಡಿಎಸ್ ನಲ್ಲಿ ಲೋಕಸಭಾ ಚುನಾವಣೆಗೆ ಸಿದ್ಧತೆ ಗರಿಗೆದರಿದೆ. ಲೋಕಸಭಾ ಚುನಾವಣೆ ಸಂಬಂಧ ಈಗಾಗಲೇ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವಂತ ಜೆಡಿಎಸ್, ಕ್ಷೇತ್ರಗಳಲ್ಲಿ ಈಗಿನಿಂದಲೇ ಗೆಲ್ಲೋದಕ್ಕೆ ಪ್ಲಾನ್ ಮಾಡುತ್ತಿದೆ. ಇದಕ್ಕಾಗಿ ಇಂದಿನಿಂದ 2 ದಿನ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ರೆಸಾರ್ಟ್ ಪಾಲಿಟಿಕ್ಸ್ ಆರಂಭಿಸುತ್ತಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಸಮೀಪದಲ್ಲಿರುವಂತ ರೆಸಾರ್ಟ್ ಒಂದರಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರು, ಮುಂಡರ ಸಭೆಯನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಇಂದಿನಿಂದ ಎರಡು ದಿನ ಮಾಡುತ್ತಿದ್ದಾರೆ. ಇಂದು ಸಂಜೆಯ ವೇಳೆಗೆ ಮಂಡ್ಯ ಜಿಲ್ಲೆಯ ಜೆಡಿಎಸ್ ಮುಖಂಡರೊಂದಿಗೆ ರೆಸಾರ್ಟ್ ಗೆ ತೆರಳುತ್ತಿರೋ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು, ಅಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಯಾವ ರೀತಿಯಾಗಿ ಚುನಾವಣೆ ಎದುರಿಸಬೇಕು. ಕಾಂಗ್ರೆಸ್ ಪೈಪೋಟಿಯ ನಡುವೆ ಕ್ಷೇತ್ರವನ್ನು ಹೇಗೆ ಕೆದ್ದುಕೊಳ್ಳಬೇಕು ಎನ್ನುವ ಬಗ್ಗೆ ಎರಡು ದಿನ…
ಬೆಂಗಳೂರು: ಕನ್ನಡ ನಾಮಫಲಕ ಹಾಕೋ ಸಂಬಂಧ ವಾಣಿಜ್ಯ ಮಳಿಗೆಗಳ ಮುಂದಿದ್ದಂತ ಬೋರ್ಡ್ ಹೊಡೆದು ಹಾಕಿದ ಪ್ರಕರಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಅವರನ್ನು ಬಂಧಿಸಿ ಜೈಲಿಗಟ್ಟಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ನೀಡಿದ ಬಳಿಕ ಬಿಡುಗಡೆಯಾಗಿದ್ರು. ಆದ್ರೇ ಇದೀಗ ಬಿಡುಗಡೆಯಾದ ಕೆಲವೇ ಕ್ಷಣದಲ್ಲಿ ಮತ್ತೆ ಕರವೇ ಅಧ್ಯಕ್ಷ ಜೈಲುಪಾಲಾಗಿದ್ದಾರೆ. 2017ರಲ್ಲಿ ನಡೆದಂತ ಪ್ರಕರಣ ಸಂಬಂಧ ಕರವೇ ಅಧ್ಯಕ್ಷ ನಾರಾಯಣಗೌಡ ಅವರನ್ನು ಪೊಲೀಸರು ಬಂಧಿಸಿದ್ದರು. ಈ ಪ್ರಕರಣ ಸಂಬಂಧ ಸಲ್ಲಿಸಲಾಗಿದ್ದಂತ ಜಾಮೀನು ಅರ್ಜಿಯನ್ನು ಕೋರ್ಟ್ ನಾಳೆಗೆ ತೀರ್ಪು ಕಾಯ್ದಿರಿಸಿದೆ. ಈ ಹಿನ್ನಲೆಯಲ್ಲಿ ಆದೇಶ ನಾಳೆಗೆ ಕಾಯ್ದಿರಿಸಿದ ಕಾರಣ ಮತ್ತೆ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ಅಂದಹಾಗೇ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಅವರನ್ನು 2017ರ ಕೇಸ್ ನಲ್ಲಿ ಬಂಧಿಸಲಾಗಿತ್ತು. ಬಂಧನದ ಬಳಿಕ ಅವರು ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನೆಡೆಸಿದ್ದಂತ ಕೋರ್ಟ್ ನಾಳೆಗೆ ತೀರ್ಪು ಕಾಯ್ದಿರಿಸಿದೆ. ಹೀಗಾಗಿ ಮತ್ತೆ ಪರಪ್ಪನಹ ಅಗ್ರಹಾರ ಜೈಲಿಗೆ ಕರವೇ ಅಧ್ಯಕ್ಷ ನಾರಾಯಣಗೌಡ ಶಿಫ್ಟ್ ಆಗಿದ್ದಾರೆ. ಈ ಮೂಲಕ…
ಬೆಂಗಳೂರು: ವಿವಿಧ ಕಾರಣಗಳಿಂದಾಗಿ ಈಗಾಗಲೇ ಬೆಂಗಳೂರಿನ ಪೀಣ್ಯ ಪ್ಲೈ ಓವರ್ ಕ್ಲೋಸ್ ಮಾಡಲಾಗಿತ್ತು. ಈಗ ಮತ್ತೆ ನಾಲ್ಕು ದಿನ ಜನವರಿ.16ರಿಂದ ಕ್ಲೋಸ್ ಆಗಲಿದೆ. ಈ ಮೂಲಕ ಬಂದ್ ಮಾಡಲಾಗುತ್ತಿದೆ. ಈ ಕುರಿತಂತೆ ಬೆಂಗಳೂರು ಸಂಚಾರ ಪೊಲೀಸರು ಮಾಹಿತಿ ನೀಡಿದ್ದು ಜನವರಿ 16ರಿಂದ 19ರವರೆಗೆ ಪೀಣ್ಯ ಮೇಲ್ ಸೇತುವೆಯನ್ನು ಕ್ಲೋಸ್ ಮಾಡಲಾಗುತ್ತಿದೆ. ವಾಹನ ಸವಾರರು ಸರ್ವೀಸ್ ರಸ್ತೆಯನ್ನು ಬಳಸುವಂತೆ ಮನವಿ ಮಾಡಿದೆ. ಜನವರಿ 16ರ ರಾತ್ರಿ 11 ಗಂಟೆಯಿಂದ ಜನವರಿ 19ರ ಬೆಳಗ್ಗೆ 11 ಗಂಟೆಯವರೆಗೆ ಬಂದ್ ಆಗಲಿದೆ. ಲೋಡ್ ಟೆಸ್ಟಿಂಗ್ ಹಿನ್ನಲೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶವಿಲ್ಲ. ಹೀಗಾಗಿ ವಾಹನ ಸವಾರರು ಸಹಕರಿಸುವಂತೆ ಮನವಿ ಮಾಡಿದೆ. https://kannadanewsnow.com/kannada/manual-scavenging-high-court/ https://kannadanewsnow.com/kannada/breaking-break-6-0-magnitude-earthquake-hits-japan-raises-concerns/
ಬೆಂಗಳೂರು : ಅಲ್ಪಸಂಖ್ಯಾತರ ಸಮುದಾಯದ 2.50 ಲಕ್ಷ ವಿದ್ಯಾರ್ಥಿಗಳಿಗೆ 2023-24 ಸಾಲಿನ 170.7 ಕೋಟಿ ರೂ. ವಿದ್ಯಾರ್ಥಿ ವೇತನ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಬಿಡುಗಡೆ ಮಾಡಿದರು. ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಾಥಮಿಕ, ಪ್ರೌಢ, ಪದವಿ ಪೂರ್ವ, ಪದವಿ ಹಾಗೂ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ವಿದ್ಯಾಸಿರಿ ಯೋಜನೆಯಡಿಯಲ್ಲಿ ಹಾಸ್ಟೆಲ್ ಸೌಲಭ್ಯದ ಆರ್ಥಿಕ ನೆರವು ಬಿಡುಗಡೆಗೆ ಚಾಲನೆ ನೀಡಿ , ಇದೇ ಸಂದರ್ಭದಲ್ಲಿ ಇಲಾಖೆಯ ನೂತನ ಡೈರಿ, ಕ್ಯಾಲೆಂಡರ್ ಬಿಡುಗಡೆ ಮಾಡಿದರು. 1 ರಿಂದ 8 ನೇ ತರಗತಿ ವರೆಗಿನ 2, 35, 661 ವಿದ್ಯಾರ್ಥಿಗಳಿಗೆ 1 ಸಾವಿರ ರೂ. ನಿಂದ 3,500 ರೂ. ವರೆಗೆ 90.30 ಕೋಟಿ ರೂ., ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡುವ 280 ವಿದ್ಯಾರ್ಥಿಗಳಿಗೆ ತಲಾ 20 ಲಕ್ಷ ರೂ. ನಂತೆ 25.27 ಕೋಟಿ ರೂ., ಪಿಎಚ್ ಡಿ, ಎಂ ಫಿಲ್ ವ್ಯಾಸಂಗ ಮಾಡುವ 308 ವಿದ್ಯಾರ್ಥಿಗಳಿಗೆ ಮಾಸಿಕ 10…