Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಗರದಲ್ಲಿ ಇಂದು ಬೆಚ್ಚಿ ಬೀಳಿಸೋ ಘಟನೆಯೊಂದು ನಡೆದಿದೆ. ವಾಕಿಂಗ್ ಮಾಡುತ್ತಿದ್ದಂತ ಮಹಿಳೆಯೊಬ್ಬರಿಗೆ ಏಕಾಏಕಿ ಕಲ್ಲಿನಿಂದ ಅಪರಿಚಿತ ವ್ಯಕ್ತಿಯೊಬ್ಬ ಕಲ್ಲಿನಿಂದ ಜಜ್ಜಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಕೊಡಿಗೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಸಹಕಾರ ನಗರದಲ್ಲಿ ಇಂದು ಈ ಘಟನೆ ನಡೆದಿದೆ. ವಾಕಿಂಗ್ ಮಾಡುತ್ತಿದ್ದಂತ ಸುನೀತಾ ಎಂಬುವರ ಮೇಲೆ ಏಕಾಏಕಿ ಅಪರಿಚಿತ ವ್ಯಕ್ತಿಯೊಬ್ಬ ಕಲ್ಲಿನಿಂದ ಜಜ್ಜಿದ್ದಾನೆ. ತೀವ್ರ ರಕ್ತಸ್ರಾವದಿಂದ ನರಳುತ್ತಿದ್ದಂತ ಸುನೀತಾರನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಅಲ್ಲದೇ ಮಹಿಳೆಗೆ ಜಜ್ಜಿದಂತ ಅಪರಿಚಿತ ವ್ಯಕ್ತಿಯನ್ನು ಹಿಡಿದು ಥಳಿಸಿದಂತ ಜನರು, ಕೊಡಿಗೆಹಳ್ಳಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಅಂದಹಾಗೇ ಆರೋಪಿ ಮಾನಸಿಕ ಅಸ್ವಸ್ಥನಾಗಿದ್ದು, ಭಿಕ್ಷಾಟನೆ ಮಾಡುತ್ತಿದ್ದನು ಎಂಬುದಾಗಿ ತಿಳಿದು ಬಂದಿದೆ. ಕೊಡಿಗೇಹಳ್ಳಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ. https://kannadanewsnow.com/kannada/ask-rtos-to-check-dl-of-lorry-drivers-in-bengaluru-ramesh-babu-writes-to-cm/ https://kannadanewsnow.com/kannada/sc-leaders-support-bjps-fight-mlc-chalavadi-narayanasamy/
ಬೆಂಗಳೂರು: ನಗರದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯಂದು ಉಗ್ರರ ಕರಿನೆರಳಿನ ಮುನ್ಸೂಚನೆ ತಿಳಿದು ಬಂದಿದೆ ಎನ್ನಲಾಗಿದೆ. ಇದೇ ಕಾರಣಕ್ಕಾಗಿ ಬೆಂಗಳೂರು ನಗರ ಪೊಲೀಸರು ಹೈ ಎಲರ್ಟ್ ಆಗಿದ್ದು, ಹೋಟೆಲ್ ಗಳಲ್ಲಿ ಉಳಿದುಕೊಳ್ಳುವ ಪ್ರವಾಸಿಗರ ಬಗ್ಗೆ ಮಾಹಿತಿ ನೀಡುವಂತೆಯೂ ಸೂಚಿಸಲಾಗಿದೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ದಿನಾಂಕ 15-08-2024ರಂ ನಗರದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಕವಾಯತು ಮತ್ತು ಸಮಾರಂಭಗಳು ನಡೆಯಲಿದೆ ಎಂದಿದ್ದಾರೆ. ಉಗ್ರಗಾಮಿಗಳು ಬೆಂಗಳೂರು ನಗರವನ್ನು ಗುರಿಯಾಗಿಟ್ಟುಕೊಂಡಿರುವ ಹಿನ್ನಲೆಯಲ್ಲಿ ತಾವು ಸಂಘದಲ್ಲಿ ಸದಸ್ಯರಾಗಿರುವ ಹೋಟೆಲ್ ಗಳ ಮಾಲೀಕರಿಗೆ, ಹೋಟೆಲ್ ಗಳ ಮ್ಯಾನೇಜರ್ ಹಾಗೂ ಇತರೆ ನೌಕರರಿಗೆ ಹೋಟೆಲ್ ಗಳಲ್ಲಿ ತಂಗುವ ವಿದೇಶಿಯರು ಮತ್ತು ಸಂಶಯಾಸ್ಪದ ಹಾಗೂ ಅಪರಿಚಿತ ವ್ಯಕ್ತಿಗಳು ಹೋಟೆಲ್ ಗಳಲ್ಲಿ ತಂಗಿದಲ್ಲಿ ಅವರ ಬಗ್ಗೆ ನಿಗಾವಹಿಸಿ, ವಿಶೇಷವೇನಾದರೂ ಕಂಡು ಬಂದಲ್ಲಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ. ಈ ಭದ್ರತಾ ಕಾರ್ಯದಲ್ಲಿ ಪೊಲೀಸರಿಗೆ ಪೂರ್ಣ ಪ್ರಮಾಣದಲ್ಲಿ ಸಹಕರಿಸಬೇಕೆಂದು…
ಬೆಂಗಳೂರು : ಕಾಳ್ಗಿಚ್ಚು ಎಚ್ಚರಿಕೆ, ಗಸ್ತುಪಡೆ ಎಚ್ಚರಿಕೆ, ಅರಣ್ಯ ಹೊದಿಕೆ ಬದಲಾವಣೆ ಎಚ್ಚರಿಕೆ ಆಪ್, ಇ-ಎಫ್.ಐ.ಆರ್ ಸೇರಿದಂತೆ ಅರಣ್ಯ ಮತ್ತು ವೃಕ್ಷ ಸಂಪತ್ತಿನ ಸಂರಕ್ಷಣೆಗಾಗಿ ಕರ್ನಾಟಕ ಅರಣ್ಯ ಇಲಾಖೆ ಐಸಿಟಿ ವಿಭಾಗ ಸಿದ್ಧಪಡಿಸಿರುವ ವಿವಿಧ ಆನ್ವಯಿಕ (ಆಪ್)ಗಳ ಬಗ್ಗೆ ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಪ್ರಶಂಸೆ ವ್ಯಕ್ತಪಡಿಸಿದರು. ಅರಣ್ಯ ಭವನಕ್ಕಿಂದು ಭೇಟಿ ನೀಡಿ ಅರಣ್ಯ ಇಲಾಖೆ ಇಸ್ರೋ ಸಹಯೋಗದಲ್ಲಿ ರೂಪಿಸಿರುವ ವಿವಿಧ ಆಪ್ ಗಳ ಪ್ರಾತ್ಯಕ್ಷಿಕೆ ವೀಕ್ಷಿಸಿ, ಮಾಹಿತಿ ಪಡೆದ ಅವರು ಈಶ್ವರ ಖಂಡ್ರೆ ಅವರು ಅರಣ್ಯ ಸಚಿವರಾದ ಬಳಿಕ ಅರಣ್ಯ ಸಂರಕ್ಷಣೆಗೆ ನೀಡಿರುವ ಆದ್ಯತೆ ಮತ್ತು ತೋರುತ್ತಿರುವ ಕಾಳಜಿಗೆ ಪ್ರಶಂಸೆ ವ್ಯಕ್ತಪಡಿಸಿದರು. 2023-24ನ ಸಾಲಿನಲ್ಲಿ 5 ಕೋಟಿ 48 ಲಕ್ಷ ಸಸಿಗಳನ್ನು ನೆಟ್ಟು, ಅವುಗಳ ಪೈಕಿ ಎಷ್ಟು ಬದುಕುಳಿದಿವೆ ಎಂಬ ಬಗ್ಗೆ ಜಿಯೋ ಟ್ಯಾಗ್ ಮಾಡಿ, ಆಡಿಟ್ ಮಾಡಿಸುತ್ತಿರುವ ಕರ್ನಾಟಕದ ಕ್ರಮ ಎಲ್ಲ ರಾಜ್ಯಗಳಿಗೂ ಅನುಕರಣೀಯ ಎಂದು ಅಭಿಪ್ರಾಯಪಟ್ಟರು. ಈ ಎಲ್ಲ ತಂತ್ರಾಂಶಗಳ ಬಗ್ಗೆ ತಮ್ಮ ಅಧಿಕಾರಿಗಳಿಗೂ ತರಬೇತಿ…
ವಿಜಯಪುರ: ಭೀಮಾತೀರದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ ನಡೆದಿದೆ. ಇನ್ನೋವಾ ಕಾರು ಹತ್ತಿಸಿ ವಕೀಲನನ್ನು ಕಿಲೋಮೀಟರ್ ದೂರದವರೆಗೆ ಹೊತ್ತೊಯ್ದು, ಸತ್ತ ಮೇಲೆ ಕಾರು ಸಹಿತ ಪರಾರಿಯಾಗಿರುವಂತ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ಜಲಜನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಂತ ಭೀಮಾತಿರದ ಹಂತ ಕುಖ್ಯಾತಿಯ ಭಾಗಪ್ಪ ಅವರ ಸಂಬಂಧಿ ಹಾಗೂ ವಕೀಲ ರವಿ ಮೇಲಿನಮನಿ(37)ಗೆ ಇನ್ನೋವ ಕಾರೊಂದು ಡಿಕ್ಕಿ ಹೊಡೆಯಲಾಗಿದೆ. ಆ ಬಳಿಕ ಇನ್ನೋವಕಾರು ಬಸವನಗರದಿಂದ ಜಿ.ಪ ಪ್ರವೇಶದ್ವಾರದವರೆಗೆ ಸುಮಾರು ಎರಡೂವರೆ ಕಿಲೋಮೀಟರ್ ಹೊತ್ತೊಯ್ದಿದೆ ಎನ್ನಲಾಗಿದೆ. ರವಿ ಮೇಲಿನಮಲಿ ಸಾವನ್ನಪ್ಪಿದ ನಂತ್ರ, ಇನ್ನೋವ ಕಾರು ಸಹಿತ ಚಾಲಕ ಪರಾರಿಯಾಗಿದ್ದಾನೆ. ಇದೊಂದು ವ್ಯವಸ್ಥಿತ ಕೃತ್ಯ, ಕೊಲೆ ಎಂಬುದಾಗಿ ಶಂಕಿಸಲಾಗಿದೆ. ಸ್ಥಳಕ್ಕೆ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶಿ, ಎಎಸ್ ಪಿ, ಡಿವೈಎಸ್ಪಿ ಭೇಟಿ ನೀಡಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. https://kannadanewsnow.com/kannada/muhammad-yunus-takes-oath-as-head-of-interim-bangladesh-government/ https://kannadanewsnow.com/kannada/good-day-moment-see-map-kumaraswamys-brothers-property-documents-released-dk-shivakumar/ https://kannadanewsnow.com/kannada/ask-rtos-to-check-dl-of-lorry-drivers-in-bengaluru-ramesh-babu-writes-to-cm/
ಢಾಕಾ: ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನುಸ್ ಅವರು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರರಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಮೈಕ್ರೋಲೆಂಡಿಂಗ್ನಲ್ಲಿ ಪ್ರವರ್ತಕ ಕೆಲಸಕ್ಕಾಗಿ 2006 ರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಗೆದ್ದ 84 ವರ್ಷದ ಯೂನುಸ್ ಅವರನ್ನು ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಮಂಗಳವಾರ ಸಂಸತ್ತನ್ನು ವಿಸರ್ಜಿಸಿದ ನಂತರ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ನೇಮಿಸಲಾಯಿತು. ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆಯಿಂದಾಗಿ ಶೇಖ್ ಹಸೀನಾ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಬೇಕಾಯಿತು. ಅವರು ಪ್ರಸ್ತುತ ಭಾರತದಲ್ಲಿದ್ದಾರೆ. ಗುರುವಾರ, ಯೂನುಸ್ ತನ್ನ ನಾಗರಿಕರಿಗೆ ಸುರಕ್ಷತೆಯ ಭರವಸೆ ನೀಡುವ ಸರ್ಕಾರವನ್ನು ತಲುಪಿಸುವುದಾಗಿ ಭರವಸೆ ನೀಡಿದರು. ನೊಬೆಲ್ ಪ್ರಶಸ್ತಿ ವಿಜೇತರು ಈ ಹಿಂದೆ ಪ್ರಮಾಣ ವಚನ ಸ್ವೀಕರಿಸಲು ಪ್ಯಾರಿಸ್ ನಿಂದ ಪ್ರತಿಭಟನಾ ಪೀಡಿತ ಬಾಂಗ್ಲಾದೇಶಕ್ಕೆ ಮರಳಿದರು. ಸೇನಾ ಮುಖ್ಯಸ್ಥ ಜನರಲ್ ವೇಕರ್-ಉಜ್-ಜಮಾನ್, ಹಿರಿಯ ಅಧಿಕಾರಿಗಳು, ವಿದ್ಯಾರ್ಥಿ ಮುಖಂಡರು ಮತ್ತು ನಾಗರಿಕ ಸಮಾಜದ ಸದಸ್ಯರು ವಿಮಾನ ನಿಲ್ದಾಣದಲ್ಲಿ ಅವರನ್ನು ಸ್ವಾಗತಿಸಿದರು. ವಿಮಾನ ನಿಲ್ದಾಣದಲ್ಲಿ ಭಾವನಾತ್ಮಕ…
ಬೆಂಗಳೂರು: ನಗರದ ಆಸ್ತಿ ತೆರಿಗೆ ಪಾವತಿದಾರರಿಗೆ ಗುಡ್ ನ್ಯೂಸ್ ಎನ್ನುವಂತೆ ಸರ್ಕಾರದ ವತಿಯಿಂದ ಒಂದು ಬಾರಿ ಪರಿಹಾರ(OTS) ಯೋಜನೆಯನ್ನು ಬಿಬಿಎಂಪಿಯಲ್ಲಿ ದಿನಾಂಕ:30-9-2024 ರವರೆಗೆ ವಿಸ್ತರಿಸಲಾಗಿದೆ. ಈ ಕುರಿತಂತೆ ಬಿಬಿಎಂಪಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಒಂದು ಬಾರಿ ಪರಿಹಾರ ಯೋಜನೆಯನ್ನು ವಿಸ್ತರಿಸಿದ್ದಕ್ಕಾಗಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ಉಸ್ತುವಾರಿ ಸಚಿವರಾದ ಡಿ.ಕೆ ಶಿವಕುಮಾರ್ ಅವರ ನೇತೃತ್ವದ ಸರ್ಕಾರಕ್ಕೆ ಬಿಬಿಎಂಪಿ ಕೃತಜ್ಞತೆ ಸಲ್ಲಿಸುತ್ತದೆ ಮತ್ತು ನಾಗರೀಕರ ಮನವಿಗಳ ಮೇರೆಗೆ ಒಂದು ಬಾರಿ ಪರಿಹಾರ ಯೋಜನೆಯನ್ನು ದಿನಾಂಕ:30-9-2024ರವರೆಗೆ ವಿಸ್ತರಿಸಲಾಗಿದೆ ಎಂದಿದೆ. ಒಂದು ಬಾರಿ ಪರಿಹಾರ ಯೋಜನೆ & ಅದರ ಪ್ರಮುಖಾಂಶಗಳು: * ಸಂಪೂರ್ಣ ಬಡ್ಡಿ ಮನ್ನಾ * ದಂಡವನ್ನು ಅರ್ಧಕ್ಕೆ ಇಳಿಸಲಾಗಿದೆ. * ವಸತಿ ಮತ್ತು ಮಿಶ್ರ ಬಳಕೆಯ ಆಸ್ತಿಗಳ ಆಸ್ತಿ ತೆರಿಗೆ ಬಾಕಿ ವಸೂಲಾತಿ ಪರಿಷ್ಕರಣೆ ಮತ್ತು ಮೌಲ್ಯಮಾಪನ ಮಾಡದ ಆಸ್ತಿಗಳಿಗೆ 5-ವರ್ಷಗಳಿಗೆ ಸೀಮಿತವಾಗಿರುತ್ತದೆ. ಎಲ್ಲಾ ಆಸ್ತಿ ತೆರಿಗೆ ಬಾಕಿಗಳನ್ನು ಪಾವತಿಸುವ ಮೂಲಕ ಮುಖ್ಯಧಾರೆಗೆ ಸೇರಲು ಈ ಐತಿಹಾಸಿಕ ಕೊನೆಯ ಅವಕಾಶದ ಪ್ರಯೋಜನವನ್ನು…
ಚಿಕ್ಕಬಳ್ಳಾಪುರ : ವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕವನ್ನು ದೇಶದಲ್ಲೇ ನಂ. 1 ಮಾಡುವ ಗುರಿ ನಮ್ಮ ಸರ್ಕಾರದ್ದು. ಈ ನಿಟ್ಟಿನಲ್ಲಿ ಜಲ ವಿದ್ಯುತ್ ಸೇರಿದಂತೆ ಎಲ್ಲಾ ರೀತಿಯ ಇಂಧನ ಮೂಲಗಳಿಂದ ವಿದ್ಯುತ್ ಉತ್ಪಾದನೆಗೆ ಆದ್ಯತೆ ನೀಡಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಮ್ಮ ಸರ್ಕಾರದ ಕ್ರಮಗಳಿಂದಾಗಿ ಪ್ರಸ್ತುತ ರಾಜ್ಯಕ್ಕೆ ಬೇಕಾದ ವಿದ್ಯುತ್ ಉತ್ಪಾದಿಸುವುದರ ಜತೆಗೆ ವಿದ್ಯುತ್ತನ್ನು ಹೊರ ರಾಜ್ಯಗಳಿಗೆ ಮಾರಾಟ ಮಾಡುವ ಹಂತಕ್ಕೆ ತಲುಪಿದ್ದೇವೆ,”ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಗುರುವಾರ ಸಭೆ ನಡೆಸಿದ ಸಚಿವರು, “ವಿದ್ಯುತ್ ಉತ್ಪಾದನೆ ಒತ್ತು ನೀಡಿ, ಹೊರ ರಾಜ್ಯಗಳಿಗೆ ಮಾರಾಟ ಮಾಡುವ ಹಂತಕ್ಕೆ ತಲುಪಲು ಕಾರಣರಾದ ಇಲಾಖೆಯ ಎಲ್ಲಾ ಅಧಿಕಾರಿ, ಸಿಬ್ಬಂದಿಗೆ ಅಭಿನಂದನೆ ಸಲ್ಲಿಸುತ್ತೇನೆ. ಕಳೆದ ಏಪ್ರಿಲ್‌ನಿಂದ ರಾಜ್ಯದಲ್ಲಿ 1,403 ಕೋಟಿ ರೂ. ಮೌಲ್ಯದ ವಿದ್ಯುತ್ ಮಾರಾಟವಾಗಿದೆ,”ಎಂದಿದ್ದಾರೆ. ಸಮರ್ಪಕ ವಿದ್ಯುತ್ ಪೂರೈಕೆಗಾಗಿ ಸಬ್ ಸ್ಟೇಷನ್ ಗಳ ನಿರ್ಮಾಣ “ವಿದ್ಯುತ್ ಉತ್ಪಾದನೆ ಜತೆಗೆ ಸಮರ್ಪಕ ವಿದ್ಯುತ್…
ಬೆಂಗಳೂರು: ಮುಂದಿನ ವಾರದಲ್ಲಿ ಶಿವಮೊಗ್ಗ, ತುಮಕೂರು, ಮೈಸೂರು ಮಹಾ ನಗರ ಪಾಲಿಕೆಗಳಿಗೆ ಚುನಾವಣೆಯನ್ನು ನಡೆಸುವ ಸಂಬಂಧ ದಿನಾಂಕವನ್ನು ಪ್ರಕಟಿಸುವುದಾಗಿ ರಾಜ್ಯ ಚುನಾವಣಾ ಆಯುಕ್ತರು ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ನೂತನ ಆಯುಕ್ತ ಜಿ.ಎಂಸ್ ಸಂಗ್ರೇಶಿ ಅವರು, ಚುನಾವಣಾ ಆಯೋಗದಿಂದ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಕೆಯಾಗಿರುವಂತ ಅರ್ಜಿಯಲ್ಲಿ 2 ಚುನಾವಣೆಗೆ ಸಂಬಂಧಿಸಿದಂತೆ ವಿಚಾರಣೆಯು ಬಾಕಿ ಇದೆ. ಆ ಎರಡು ಚುನಾವಣಾ ಅರ್ಜಿಯ ವಿಚಾರಣೆ ಪೂರ್ಣಗೊಂಡ ನಂತ್ರ, ತಕ್ಷಣವೇ ಚುನಾವಣೆಗೆ ದಿನಾಂಕ ಘೋಷಿಸುವುದಾಗಿ ಹೇಳಿದರು. ನಿಯಮಾವಳಿಗಳ ಪ್ರಕಾರ ಅವಧಿ ಮುಗಿದಂತ 6 ತಿಂಗಳ ಒಳಗಾಗಿ ಚುನಾವಣೆಗೆ ಸರ್ಕಾರವು ಮುಂದುವರೆಯದೇ ಇದ್ದರೇ ನ್ಯಾಯಾಲಯಕ್ಕೆ ಹೋಗಬೇಕಾಗುತ್ತದೆ. ಅದರಂತೆ ಈಗಾಗಲೇ ಕೋರ್ಟ್ ನಲ್ಲಿ ಸಲ್ಲಿಸಿರುವಂತ ಅರ್ಜಿಯ ವಿಚಾರಣೆ ನಡೆದು, 2 ಕೇಸ್ ವಿಚಾರಣೆ ಮಾತ್ರ ಬಾಕಿ ಇದೆ. ಮುಂದಿನ ವಾರದಲ್ಲಿ ಶಿವಮೊಗ್ಗ, ತುಮಕೂರು, ಮೈಸೂರು ಮಹಾನಗರ ಪಾಲಿಕೆ ಚುನಾವಣೆ ಘೋಷಿಸುವುದಾಗಿ ತಿಳಿಸಿದರು. ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು https://kannadanewsnow.com/kannada/important-decision-from-rbi-now-your-cheque-will-be-cleared-from-the-bank-soon/ https://kannadanewsnow.com/kannada/sc-leaders-support-bjps-fight-mlc-chalavadi-narayanasamy/…
ಬೆಂಗಳೂರು: ನಗರದಲ್ಲಿ ಬಿಎಂಟಿಸಿ ಬಸ್ಸಿನಲ್ಲೇ ಪ್ರಯಾಣಿಕರೊಬ್ಬರ ಜೊತೆಗೆ ನಿರ್ವಾಹಕರೊಬ್ಬರು ಅನುಚಿತವಾಗಿ ವರ್ತಿಸಿದ್ದ ಬಗ್ಗೆ ವರದಿಯಾಗಿತ್ತು. ಈ ಸುದ್ದಿ ಪ್ರಸಾದ ಬೆನ್ನಲ್ಲೇ ಬಿಎಂಟಿಸಿ ನಿರ್ವಾಹಕನನ್ನು ಅಮಾನತುಗೊಳಿಸಿ ಆದೇಶಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಮಾಹಿತಿ ನೀಡಿದ್ದು, ದಿನಾಂಕ 06-08-2024 ರಂದು ಬೆಂಮಸಾಸಂಸ್ಥೆಯ ಘಟಕ – 32 (ಸೂರ್ಯ ಸಿಟಿ) ರ ನಿರ್ವಾಹಕರು ಮಾರ್ಗ ಸಂಖ್ಯೆ ಇವಿ 500 ಡಿಸಿ/7 ರಲ್ಲಿ ಕರ್ತವ್ಯ ನಿರ್ವಹಿಸುತ್ತಿದ ಸಮಯ ಸುಮಾರು ರಾತ್ರಿ 09:40 ಗಂಟೆಗೆ, ಸದರಿ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಅಭಿನವ್ ರಾಜ್ ಎಂಬುವರು ಬಾಕಿ ರೂ.5 ಚಿಲ್ಲರೆ ವಾಪಸ್ಸು ನೀಡುವಂತೆ ಕೋರಿದಾಗ, ಸದರಿ ನಿರ್ವಾಹಕರು ಸಾರ್ವಜನಿಕ ಪ್ರಯಾಣಿಕರ ಎದುರು ಅನುಚಿತವಾಗಿ ವರ್ತಿಸಿರುವುದು ಕಂಡು ಬಂದ ಹಿನ್ನಲೆಯಲ್ಲಿ ಸದರಿ ನಿರ್ವಾಹಕರನ್ನು ಈ ಕೂಡಲೇ ಜಾರಿಗೆ ಬರುವಂತೆ ಅಮಾನತ್ತಿನಲ್ಲಿಡಲಾಗಿದೆ ಎಂದು ತಿಳಿಸಿದೆ. ಸಂಸ್ಥೆಯು ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತಿರುವುದಲ್ಲದೇ, ಸಂಸ್ಥೆಯ ಬಸ್ಸಿನಲ್ಲಿ ಪ್ರಯಾಣಿಸುವುದು ಸುರಕ್ಷಿತ ಎನ್ನುವ ಭಾವನೆ ಉಂಟಾಗಲು ಅಗತ್ಯವಿರುವ ಕ್ರಮಗಳನ್ನು ಸಹ ಕೈಗೊಳ್ಳಲಾಗಿರುತ್ತದೆ.…
ಬೆಂಗಳೂರು: ರಾಜ್ಯ ಸರ್ಕಾರದಿಂದ ಈಗಾಗಲೇ ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿಯನ್ನು ಘೋಷಣೆ ಮಾಡಿ, ಚುನಾವಣೆಯ ಮುನ್ಸೂಚನೆ ನೀಡಿತ್ತು. ಈ ಬೆನ್ನಲ್ಲೇ ರಾಜ್ಯದ ಚುನಾವಣಾ ಆಯೋಗದ ಚುನಾವಣಾ ಆಯುಕ್ತರು ತಾಲ್ಲೂಕು, ಜಿಲ್ಲಾ ಪಂಚಾಯ್ತಿ ಚುನಾವಣೆ ಬಗ್ಗೆ ಮಹತ್ವದ ಅಪ್ ಡೇಟ್ ನೀಡಿದ್ದಾರೆ. ಅದು ಏನು ಅಂತ ಮುಂದೆ ಓದಿ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ನೂತನ ಆಯುಕ್ತ ಜಿ.ಎಂಸ್ ಸಂಗ್ರೇಶಿ ಅವರು, ಕಳೆದ ನಾಲ್ಕು ವರ್ಷಗಳಿಂದ ಅವಧಿ ಮುಗಿದರೂ ತಾಲ್ಲೂಕು, ಜಿಲ್ಲಾ ಪಂಚಾಯ್ತಿ ಹಾಗೂ ಬಿಬಿಎಂಪಿ ಚುನಾವಣೆ ನಡೆಸಿಲ್ಲ. ಈ ಸಂಬಂಧ ಸರ್ಕಾರದ ವಿರುದ್ಧ ನ್ಯಾಯಾಂಗ ಉಲ್ಲಂಘನೆ ಕೇಸ್ ದಾಖಲಿಸಲಾಗಿದೆ ಎಂದರು. ಚುನಾವಣಾ ಆಯೋಗದಿಂದ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಕೆಯಾಗಿರುವಂತ ಅರ್ಜಿಯಲ್ಲಿ 2 ಚುನಾವಣೆಗೆ ಸಂಬಂಧಿಸಿದಂತೆ ವಿಚಾರಣೆಯು ಬಾಕಿ ಇದೆ. ಆ ಎರಡು ಚುನಾವಣಾ ಅರ್ಜಿಯ ವಿಚಾರಣೆ ಪೂರ್ಣಗೊಂಡ ನಂತ್ರ, ತಕ್ಷಣವೇ ಚುನಾವಣೆಗೆ ದಿನಾಂಕ ಘೋಷಿಸುವುದಾಗಿ ತಿಳಿಸಿದರು. ನಿಯಮಾವಳಿಗಳ ಪ್ರಕಾರ ಅವಧಿ ಮುಗಿದಂತ 6 ತಿಂಗಳ ಒಳಗಾಗಿ ಚುನಾವಣೆಗೆ…