Subscribe to Updates
Get the latest creative news from FooBar about art, design and business.
Author: kannadanewsnow09
ವಿಜಯಪುರ: ಇಲ್ಲಿನ ಹೊರವಲಯದ ಇಟ್ಟಂಗಿಹಾಳ ಬಳಿ 10 ಎಕರೆ ಜಾಗದಲ್ಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆ ಘಟಕ ಆರಂಭಿಸಲಾಗುವುದು. ಇದರಿಂದ 400 ಮಂದಿಗೆ ಉದ್ಯೋಗ ಸಿಗಲಿದೆ. ಜತೆಗೆ ಬೆಂಗಳೂರಿನಲ್ಲೂ ಕೆಎಸ್ಡಿಎಲ್ ಕಾರ್ಖಾನೆ ವಿಸ್ತರಣೆ ಮತ್ತು ಆಧುನೀಕರಣ ನಡೆಯುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಶನಿವಾರ ಹೇಳಿದ್ದಾರೆ. ಇಲ್ಲಿ ಕೆಎಸ್ಡಿಎಲ್ ಏರ್ಪಡಿಸಿರುವ ಸಾಬೂನು ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಇದಕ್ಕೂ ಮೊದಲು ನಾಗಠಾಣ ಶಾಸಕ ವಿಠಲ ಕಟಕದೊಂಡ ಅವರು ಮಾತನಾಡಿ, ವಿಜಯಪುರದಲ್ಲಿ ಕೂಡ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟಕ ಆರಂಭಿಸಬೇಕು ಎಂದು ಮನವಿ ಮಾಡಿದ್ದರು. ಇದಕ್ಕೆ ಕೂಡಲೇ ಸ್ಪಂದಿಸಿದ ಸಚಿವರು, ತಮ್ಮ ಯೋಜನೆಯನ್ನು ಪ್ರಕಟಿಸಿದರು. ಶಾಸಕ ಬಸವರಾಜ ಯತ್ನಾಳ ಕೂಡ ಸಚಿವರು ಇದುವರೆಗೆ ತೆಗೆದುಕೊಂಡಿರುವ ಉಪಕ್ರಮಗಳ ಬಗ್ಗೆ ಮುಕ್ತ ಪ್ರಶಂಸೆ ವ್ಯಕ್ತಪಡಿಸಿದರು. https://twitter.com/KarnatakaVarthe/status/1878732470251921703 ವಿಜಯಪುರದ ಸಾಬೂನು ಘಟಕದಿಂದ ಉತ್ತರ ಕರ್ನಾಟಕ ಕ್ಕೆ ಮಾತ್ರವಲ್ಲದೆ, ಮಹಾರಾಷ್ಟ್ರ ಕ್ಕೂ ಇಲ್ಲಿಂದಲೇ ಸರಬರಾಜು ಮಾಡುವ ಕೆಲಸ ಮಾಡಲಾಗುವುದು…
ಬೆಂಗಳೂರು: ನಮ್ಮ ಮೆಟ್ರೋ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಇನ್ಮುಂದೆ ಪ್ರತಿ ಸೋಮವಾರದಂದು ಮೆಟ್ರೋ ಸೇವೆ ಬೆಳಿಗ್ಗೆ 4.15ರಿಂದ ಆರಂಭಗೊಳ್ಳಲಿದೆ. ಮತ್ತೆಲ್ಲಾ ದಿನಗಳಂದು ಮೆಟ್ರೋ ಸೇವೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಹೌದು. ಈ ಬಗ್ಗೆ ಬಿಎಂಆರ್ ಸಿಎಲ್ ಮಾಹಿತಿ ನೀಡಿದ್ದು, ಮೆಟ್ರೋ ರೈಲು ಸೇವೆಯು ಪ್ರತಿ ಸೋಮವಾರ ಬೆಳಗ್ಗೆ 4.15 ರಿಂದಲೇ ಆರಂಭವಾಗಲಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಇಂದಿನಿಂದಲೇ ಜಾರಿಗೆ ಬರುವಂತೆ ಸೋಮವಾರದಂದು ಮಾತ್ರ ಮುಂಜಾನೆ 5 ಗಂಟೆಯ ಬದಲಾಗಿ ಬೆಳಗ್ಗೆ 4.15ರಿಂದಲೇ ಮೆಟ್ರೋ ರೈಲು ಸಂಚರಿಸಲಿದೆ. ಉಳಿದಂತೆ ಮತ್ತೆಲ್ಲಾ ದಿನಗಳಂದು ಮೆಟ್ರೋ ಸೇವೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂಬುದಾಗಿ ತಿಳಿಸಿದೆ. https://twitter.com/KarnatakaVarthe/status/1878738584062382586 https://kannadanewsnow.com/kannada/good-news-for-the-people-of-the-state-ac-court-fixes-deadline-for-disposal-of-all-cases-in-next-6-months/ https://kannadanewsnow.com/kannada/good-news-for-property-owners-who-dont-have-khata-in-bengaluru/
ಬೆಂಗಳೂರು : ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೇ ಗೊಂದಲಗಳಿಲ್ಲ. ನಮಗೆ ಸರ್ಕಾರಕ್ಕಿಂತ ಪಕ್ಷವೇ ಮುಖ್ಯ. ಸಿಎಂ ಬದಲಾವಣೆ ಕಾಂಗ್ರೆಸ್ ಹೈಕಮಾಂಡ್ ಗೆ ಬಿಟ್ಟಿದ್ದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಕ್ಕಿಂತ ಪಕ್ಷವೇ ದೊಡ್ಡದು. ಶತಮಾನಗಳ ಇತಿಹಾಸ ಇರುವ ಈ ಪಕ್ಷಕ್ಕೆ ತನ್ನದೇ ಆದ ಬದ್ಧತೆ ಇದೆ. ಪಕ್ಷ ಇದ್ದರೆ ಸರ್ಕಾರ ರಚನೆ ಸಾಧ್ಯ ಎಂದು ಸಚಿವರು ತಿಳಿಸಿದರು. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಬಲವರ್ಧನೆಗೊಂಡಿದೆ. ನಮ್ಮ ಪಕ್ಷದಲ್ಲಿ ಯಾರೇ ಸಚಿವರಾದರೂ ಕಾರ್ಯಕರ್ತರು ಇದ್ದ ಹಾಗೆ ಎಂದು ಅಭಿಪ್ರಾಯಪಟ್ಟರು. ಸಿಎಂ ಬದಲಾವಣೆ ಹೈಕಮಾಂಡ್ ಗೆ ಬಿಟ್ಟಿದ್ದು ಅಧಿಕಾರ ಹಂಚಿಕೆ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಾನು ಪಕ್ಷದ ಶಿಸ್ತಿನ ಸಿಪಾಯಿ, ಮುಖ್ಯಮಂತ್ರಿ ಬದಲಾವಣೆ ಎನ್ನುವ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು, ಪಕ್ಷದ ಚೌಕಟ್ಟಿನ ಒಳಗೆ ಮಾತನಾಡುವ ವಿಶ್ವಾಸ ಇಟ್ಟುಕೊಂಡಿದ್ದೇನೆ ಅಷ್ಟೇ ಎಂದರು. ಇಂದು ಮುಖ್ಯಮಂತ್ರಿ ಹಾಗೂ…
ಬೆಂಗಳೂರು : ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೇ ಗೊಂದಲಗಳಿಲ್ಲ. ನಮಗೆ ಸರ್ಕಾರಕ್ಕಿಂತ ಪಕ್ಷವೇ ಮುಖ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಕ್ಕಿಂತ ಪಕ್ಷವೇ ದೊಡ್ಡದು. ಶತಮಾನಗಳ ಇತಿಹಾಸ ಇರುವ ಈ ಪಕ್ಷಕ್ಕೆ ತನ್ನದೇ ಆದ ಬದ್ಧತೆ ಇದೆ. ಪಕ್ಷ ಇದ್ದರೆ ಸರ್ಕಾರ ರಚನೆ ಸಾಧ್ಯ ಎಂದು ಸಚಿವರು ತಿಳಿಸಿದರು. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಬಲವರ್ಧನೆಗೊಂಡಿದೆ. ನಮ್ಮ ಪಕ್ಷದಲ್ಲಿ ಯಾರೇ ಸಚಿವರಾದರೂ ಕಾರ್ಯಕರ್ತರು ಇದ್ದ ಹಾಗೆ ಎಂದು ಅಭಿಪ್ರಾಯಪಟ್ಟರು. ಸಿಎಂ ಬದಲಾವಣೆ ಹೈಕಮಾಂಡ್ ಗೆ ಬಿಟ್ಟಿದ್ದು ಅಧಿಕಾರ ಹಂಚಿಕೆ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಾನು ಪಕ್ಷದ ಶಿಸ್ತಿನ ಸಿಪಾಯಿ, ಮುಖ್ಯಮಂತ್ರಿ ಬದಲಾವಣೆ ಎನ್ನುವ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು, ಪಕ್ಷದ ಚೌಕಟ್ಟಿನ ಒಳಗೆ ಮಾತನಾಡುವ ವಿಶ್ವಾಸ ಇಟ್ಟುಕೊಂಡಿದ್ದೇನೆ ಅಷ್ಟೇ ಎಂದರು. ಇಂದು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಪಕ್ಷ ಸಂಘಟನೆ ಬಗ್ಗೆ…
ನವದೆಹಲಿ: ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗೆ ಸಹಾಯ ಮಾಡುವವರಿಗೆ 25,000 ರೂ.ಗಳ ಬಹುಮಾನ ನೀಡಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ನಾಗ್ಪುರದಲ್ಲಿ ನಟ ಅನುಪಮ್ ಖೇರ್ ಅವರೊಂದಿಗೆ ರಸ್ತೆ ಸುರಕ್ಷತೆ ಕುರಿತ ಕಾರ್ಯಕ್ರಮದಲ್ಲಿ ಮಾತನಾಡಿದ ಗಡ್ಕರಿ, ಅಪಘಾತದ ನಿರ್ಣಾಯಕ ಮೊದಲ ಗಂಟೆಯಲ್ಲಿ ರಸ್ತೆ ಅಪಘಾತ ಸಂತ್ರಸ್ತರನ್ನು ಆಸ್ಪತ್ರೆಗಳಿಗೆ ಸಾಗಿಸುವ ವ್ಯಕ್ತಿಗೆ ಪ್ರಸ್ತುತ ಬಹುಮಾನ ಸಾಕಾಗುವುದಿಲ್ಲ ಎಂದು ಹೇಳಿದರು. ಅಪಘಾತಗಳಲ್ಲಿ ಗಾಯಗೊಂಡವರಿಗೆ ಮೊದಲ ಏಳು ದಿನಗಳವರೆಗೆ 1.5 ಲಕ್ಷ ರೂ.ವರೆಗಿನ ಆಸ್ಪತ್ರೆ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ಸಚಿವರು ಹೇಳಿದರು. ಈ ಯೋಜನೆಯು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಗಾಯಗೊಂಡವರಿಗೆ ಮಾತ್ರ ಸೀಮಿತವಾಗಿಲ್ಲ. ರಾಜ್ಯ ಹೆದ್ದಾರಿಗಳಲ್ಲಿ ಗಾಯಗೊಂಡ ಜನರಿಗೂ ಅನ್ವಯಿಸುತ್ತದೆ ಎಂದು ಅವರು ಹೇಳಿದರು. ಅಪಘಾತದಲ್ಲಿ ಸಹಾಯ ಮಾಡಿದವರಿಗೆ ಬಹುಮಾನ ನೀಡುವ ಯೋಜನೆಯನ್ನು ಅಕ್ಟೋಬರ್ 2021 ರಲ್ಲಿ ಪ್ರಾರಂಭಿಸಲಾಯಿತು. ಈ ಯೋಜನೆಯ ಪ್ರಕಾರ, ಮಾರಣಾಂತಿಕ ಅಪಘಾತಕ್ಕೊಳಗಾದವರ ಜೀವವನ್ನು ತಕ್ಷಣದ ಸಹಾಯವನ್ನು ಒದಗಿಸುವ ಮೂಲಕ ಮತ್ತು ವೈದ್ಯಕೀಯ ಚಿಕಿತ್ಸೆಗಾಗಿ…
ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ಇಂದಿನಿಂದ ಕುಂಭಮೇಳ ಆರಂಭಗೊಂಡಿದೆ. ದೇಶ, ವಿದೇಶಗಳಿಂದ ಕೋಟ್ಯಂತರ ಜನರು ಕುಂಭಮೇಳದಲ್ಲಿ ಭಾಗಿಯಾಗುತ್ತಿದ್ದಾರೆ. ಕರ್ನಾಟಕದಿಂದಲೂ ಅನೇಕರು ತೆರಳಿದ್ದಾರೆ. ಇಂತಹವರಿಗೆ ಗುಡ್ ನ್ಯೂಸ್ ಎನ್ನುವಂತೆ ಮಹಾ ಕುಂಭಮೇಳದಲ್ಲಿ ನಂದಿನಿ ಹಾಲಿನ ( Nandini Milk ) ಟೀ ಕೂಡ ಲಭ್ಯವಾಗಲಿದೆ. ಹೌದು ಇದಕ್ಕಾಗಿ ಕೆಎಂಎಫ್ ಉತ್ತರ ಪ್ರದೇಶದ ಸರ್ಕಾರದ ಜೊತೆಗೆ ಒಪ್ಪಂದ ಮಾಡಿಕೊಂಡಿದೆ. ಪ್ರಯಾಗರಾಜ್ ನ ಮಹಾ ಕುಂಭಮೇಳದಲ್ಲಿ ಚಹಾ ವಿತರಿಸಲು ಚಾಯ್ ಪಾಯಿಂಟ್ ತೆರೆಯುತ್ತಿದೆ. ಕುಂಭಮೇಳದಾಧ್ಯಂತ 10 ನಂದಿನಿ ಹಾಲಿನ ಚಾಯ್ ಪಾಯಿಂಟ್ ಮಳಿಗೆಯನ್ನು ಸ್ಥಾಪಿಸಲಿದೆ. ಈ ಬೂತ್ ಗಳಿಂದ ಸುಮಾರು 1 ಕೋಟಿ ಕಪ್ ಚಹಾ ವಿತರಿಸುವಂತ ಗುರಿಯನ್ನು ಕೆಎಂಎಫ್ ಹೊಂದಿದೆ ಎಂಬುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ. ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿನ ಮಹಾ ಕುಂಭಮೇಳದಲ್ಲಿ ಸವಿಯುವ ಪ್ರತೀ ಕಪ್ ಚಾಹ ಕೂಡ ನಂದಿನಿಯ ಶ್ರೀಮಂತ ಹಾಗೂ ಉತ್ತಮ ಗುಣಮಟ್ಟದ ಹಾಲಿನಿಂದ ತಯಾರಿಸಲಾಗುತ್ತದೆ. ಚಾಹ ಪ್ರಿಯರಿಗೆ ಸಂತೋಷದ ಅನುಭವ ನೀಡಲಿದೆ ಎಂದು ಪ್ರಕಟಣೆಯಲ್ಲಿ ಕೆಎಂಎಫ್ ಹೇಳಿದೆ. https://kannadanewsnow.com/kannada/opposition-leader-r-ashoka-demands-police-find-out-those-behind-cow-slaughter-incident/…
ಬೆಂಗಳೂರು : ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ರಾಜ್ಯ ಸರ್ಕಾರ ಪತ್ತೆ ಮಾಡಬೇಕೇ ಹೊರತು ಒಬ್ಬ ವ್ಯಕ್ತಿಯನ್ನು ಕಾಟಾಚಾರಕ್ಕೆ ಬಂಧಿಸುವುದಲ್ಲ. ಪೊಲೀಸರು ಇದರ ಹಿಂದಿರುವವರನ್ನು ಹುಡುಕಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಿಂದೂಗಳಿಗೆ ಘಾಸಿಯಾಗುವ ಘಟನೆ ನಡೆದಿದೆ. ಸಂಕ್ರಾಂತಿ ಹಬ್ಬದ ಸಮಯದಲ್ಲೇ ಹಸುಗಳ ಕೆಚ್ಚಲು ಕೊಯ್ದಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ವಹಿಸಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದ್ದೆ. ಈಗ ಕಾಟಾಚಾರಕ್ಕಾಗಿ ಒಬ್ಬನನ್ನು ಬಂಧಿಸಿದ್ದು, ಈತ ಬಿಹಾರದಿಂದ ಬಂದವನು ಎನ್ನಲಾಗಿದೆ. ಆದರೆ ಈತ ಇದೇ ಊರಿನಲ್ಲಿ ಹತ್ತು ವರ್ಷಗಳಿಂದ ನೆಲೆಸಿದ್ದು, ಆತನ ಅಣ್ಣನಿಗೆ ಫ್ಯಾಕ್ಟರಿ ಕೂಡ ಇದೆ. ಪೊಲೀಸರು ಈತನನ್ನು ವಿಚಾರಣೆ ಮಾಡಿ, ಇದರ ಹಿಂದೆ ಯಾರಿದ್ದಾರೆ ಎಂದು ಪತ್ತೆ ಮಾಡಬೇಕಿತ್ತು ಎಂದರು. ಈ ಘಟನೆಯಲ್ಲಿ ಯಾರ ಕೈವಾಡವಿದೆ ಎಂದು ತನಿಖೆ ಮಾಡಬೇಕಿತ್ತು. ಇಲ್ಲಿ ಪಶು ಆಸ್ಪತ್ರೆಯ ಜಾಗವಿದ್ದು, ಅದನ್ನು ವಕ್ಫ್‌ಗೆ ನೀಡಲು ಪ್ರಯತ್ನ ನಡೆದಿತ್ತು. ಸುಮಾರು 500 ಕೋಟಿ ರೂ.…
ಬೆಂಗಳೂರು: ದಿನಾಂಕ 16.01.2025 (ಗುರುವಾರ) ಬೆಳಿಗ್ಗೆ 11:00 ಗಂಟೆಯಿAದ ಮದ್ಯಾಹ್ನ 5:00 ಗಂಟೆಯವರೆಗೆ “66/11ಕೆ.ವಿ ಪಾಟರಿ ರೋಡ್” ಸ್ಟೇಷನ್ ನಲ್ಲಿ ಕೆ.ಪಿ.ಟಿ.ಸಿ.ಎಲ್ ವತಿಯಿಂದ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ಹಳೆ ಬೈಯಪ್ಪನಹಳ್ಳಿ, ನಾಗೇನಪಾಳ್ಯ, ಸತ್ಯನಗರ, ಗಜೇಂದ್ರನಗರ, ಎಸ್.ಕುಮಾರ್ ಲೇಔಟ್, ಆಂಧ್ರ ಬ್ಯಾಂಕ್ ರಸ್ತೆ, ಕುಕ್ಸನ್ ರಸ್ತೆ, ಡೇವಿಸ್ ರಸ್ತೆ, ರಿರ‍್ಡ್ಸ್ ಪರ‍್ಕ್ ರಸ್ತೆ, ಆಯಿಲ್ ಮಿಲ್ ರಸ್ತೆ, ಸದಾಶಿವ ದೇವಸ್ಥಾನ ರಸ್ತೆ, ಕಾಮನಹಳ್ಳಿ ಮುಖ್ಯರಸ್ತೆ, ಕೆ.ಹಚ್.ಬಿ ಕಾಲೋನಿ, ಜೈಭಾರತ್ ನಗರ, ಸಿ.ಕೆ. ಗರ‍್ಡನ್, ಡಿ’ಕೋಸ್ಟಾ ಲೇಔಟ್, ಹಚಿನ್ಸ್ ರಸ್ತೆ, ಉತ್ತರ ರಸ್ತೆ, ವೀಲರ್ ರಸ್ತೆ, ಅಶೋಕ ರಸ್ತೆ, ಬಾಣಸವಾಡಿ ರೈಲು ನಿಲ್ದಾಣ ರಸ್ತೆ, ಮರಿಯಮ್ಮ ಟೆಂಪಲ್ ಸ್ಟ್ರೀಟ್, ಲಾಜರ್ ಲೇಔಟ್, ವಿವೇಕಾನಂದ ನಗರ, ಕ್ಲೈನ್ ರಸ್ತೆ, ಟೆಲಿಫೋನ್ ಎಕ್ಸ್‌ಚೇಂಜ್ ರಸ್ತೆ, ಗ್ಯಾಂಗ್‌ಮೆನ್ ಕ್ವರ‍್ಟರ‍್ಸ್, ಹಚಿನ್ಸ್ ರಸ್ತೆ ಪರ‍್ಕ್ ರಸ್ತೆ, ದೇಶೀಯನಗರ ಸ್ಲಂ, 5ನೇ ಮತ್ತು 6ನೇ ಅಡ್ಡ ಹಚಿನ್ಸ್ ರಸ್ತೆ,…
ಬೆಂಗಳೂರು: ದಿವಂಗತ ಜಯಲಲಿತಾ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಜಪ್ತಿ ಮಾಡಲಾಗಿದ್ದಂತ ಒಡವೆಯನ್ನು ತಮಿಳುನಾಡು ಸರ್ಕಾರಕ್ಕೆ ಹಿಂದಿರುಗಿಸುವ ಆದೇಶ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಅಲ್ಲದೇ ಜಯಲಲಿತಾ ಅವರಿಂದ ಜಪ್ತಿ ಮಾಡಲಾಗಿದ್ದಂತ ಒಡವೆಗಳನ್ನು ತಮಿಳುನಾಡು ಸರ್ಕಾರಕ್ಕೆ ಹಿಂದಿರುಗಿಸುವಂತೆ ಹೈಕೋರ್ಟ್ ಆದೇಶಿಸಿದೆ. ಇಂದು ಜಯಲಲಿತಾಗೆ ಸಂಬಂಧಿಸಿದಂತ ಜಪ್ತಿಯಾದ ಒಡವೆ ತಮಿಳುನಾಡು ಸರ್ಕಾರಕ್ಕೆ ಹಿಂತಿರುಗಿಸಲು ಹೈಕೋರ್ಟ್ ಅನುಮತಿ ಆಕ್ಷೇಪಿಸಿ ಜಯಲಲಿತಾ ವಾರಸುದಾರೆ ಜೆ.ದೀಪಾ ಸಲ್ಲಿಸಿದ್ದಂತ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತು. ನ್ಯಾಯಮೂರ್ತಿ ವಿ ಶ್ರಿಶಾನಂದ ಅವರಿದ್ದಂತ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠವು ಈ ಆದೇಶ ಹೊರಡಿಸಿದೆ. ಅಂದಹಾಗೇ ಕಳೆದ ಮಾರ್ಚ್ 6, 7ರಂದು ದಿವಂಗತ ಜಯಲಲಿತಾ ಅವರ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಗೆ ಪ್ರಕರಣದಲ್ಲಿ ಜಪ್ತಿ ಮಾಡಲಾಗಿದ್ದಂತ ಒಡವೆಯನ್ನು ಹಸ್ತಾಂತರಿಸಬೇಕಿತ್ತು. ಆದರೇ ವಿಶೇಷ ಕೋರ್ಟ್ ಆದೇಶದಿಂದ ತಮ್ಮ ಹಕ್ಕಿಗೆ ಧಕ್ಕೆಯಾಗಿದಂತೆ ಎಂಬುದಾಗಿ ಜೆ.ದೀಪಾ ಅರ್ಜಿಯನ್ನು ಸಲ್ಲಿಸಿದ್ದರು. ಸುಪ್ರೀಂ ಕೋರ್ಟ್ ಆದೇಶದಂತೆ ಕ್ರಮ ಕೈಗೊಳ್ಳಲಾಗಿದೆ ಎಂಬುದಾಗಿ ಎಸ್ ಪಿಪಿ ಕಿರಣ್ ಜವಳಿ…
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳನ್ನು ಅಳವಡಿಸಿರುವವರ ಮೇಲೆ ಎಫ್.ಐ.ಆರ್ ದಾಖಲಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಇಂದು ಪಾಲಿಕೆ ಕೇಂದ್ರ ಕಛೇರಿಯಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲಿಯೂ ಅನಧಿಕೃತ ಜಾಹೀರಾತುಗಳನ್ನು ಅಳವಡಿಸದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಾಲಿಕೆಯ ಎಲ್ಲಾ 8 ವಲಯಗಳಲ್ಲಿ ಅನಧಿಕೃತ ಜಾಹೀರಾತುಗಳನ್ನು ಅಳವಡಿಸಿರುವುದನ್ನು ತೆರವುಗೊಳಿಸಿ, ಅಳವಡಿಸಿರುವವರ ಮೇಲೆ ಎಫ್.ಐ.ಆರ್ ದಾಖಲಿಸಬೇಕು. ಮತ್ತೆ ಯಾವುದೇ ರೀತಿಯ ಅನಧಿಕೃತ ಜಾಹೀರಾತುಗಳು ಅಳವಡಿಸದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಯಿತು. ಆಸ್ತಿಗಳನ್ನು ಟ್ಯಾಕ್ಸ್ ನೆಟ್ ಗೆ ತರಲು ಸೂಚನೆ: ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆಯಿಂದ ಹೊರಗುಳಿದ ಆಸ್ತಿಗಳನ್ನು ಟ್ಯಾಕ್ಸ್ ನೆಟ್ ಗೆ ತರಬೇಕು. ಈ ಸಂಬಂಧ ಆಯಾ ವಲಯ ವ್ಯಾಪ್ತಿಯಲ್ಲಿ ಎಷ್ಟು ಆಸ್ತಿಗಳು ಆಸ್ತಿ ತೆರಿಗೆ ವ್ಯಾಪ್ತಿಯಿಂದ ಹೊರಗುಳಿದಿವೆ ಎಂಬುದನ್ನು ಗುರುತಿಸಿ ಎಲ್ಲಾ ಆಸ್ತಿಗಳನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ…













