Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಬಿಹಾರ ಚುನಾವಣೆಯಲ್ಲಿ ಎನ್ಡಿಎ ಗೆಲ್ಲಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಆದ್ದರಿಂದ ಫಲಿತಾಂಶ ಬಂದ ಬಳಿಕ ರಾಹುಲ್ ಗಾಂಧಿ ಮತಗಳ್ಳತನ ಆರೋಪ ಮಾಡುವುದು ಖಂಡಿತ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಹಾರದ ಚುನಾವಣೆ ಪ್ರತಿಷ್ಠಿತ ಚುನಾವಣೆಯಾಗಿದೆ. ಬಿಹಾರದಲ್ಲಿ ನಕ್ಸಲ್ ಚಟುವಟಿಕೆ ಹೆಚ್ಚಿದ್ದರೂ ಈ ಬಾರಿ ಉತ್ತಮವಾಗಿ ಮತದಾನ ನಡೆದಿದೆ. ಅಮಿತ್ ಶಾ ಗೃಹ ಸಚಿವರಾದ ಬಳಿಕ ನಕ್ಸಲ್ ಚಟುವಟಿಕೆಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. 12 ಕ್ಕೂ ಹೆಚ್ಚು ಸಂಸ್ಥೆಗಳು ಸಮೀಕ್ಷೆ ಮಾಡಿದ್ದು, ಎನ್ಡಿಎ ಅಧಿಕಾರಕ್ಕೆ ಬರಲಿದೆ ಎಂದು ಅಂದಾಜಿಸಲಾಗಿದೆ. ಕಾಂಗ್ರೆಸ್ನ ಘಟಬಂಧನಕ್ಕೆ ಬೆಂಬಲ ಇಲ್ಲ ಎಂದು ಹೇಳಲಾಗಿದೆ ಎಂದರು. ಬಿಹಾರ ಚುನಾವಣೆಯ ಫಲಿತಾಂಶ ಬಂದ ಬಳಿಕ ರಾಹುಲ್ ಗಾಂಧಿ ಮತಗಳ್ಳತನದ ಆರೋಪ ಮಾಡುತ್ತಾರೆ. ರಾಹುಲ್ ಗಾಂಧಿ ನಾಯಕತ್ವದಲ್ಲಿ ಕಾಂಗ್ರೆಸ್ ಸರಣಿಯಾಗಿ ಸೋಲುತ್ತಿದೆ. ಲೋಕಸಭೆ, ವಿಧಾನಸಭಾ ಚುನಾವಣೆಗಳಲ್ಲಿ ರಾಹುಲ್ ಗಾಂಧಿ ಐರನ್ ಲೆಗ್ ಎಂದು ಪ್ರಸಿದ್ಧಿ ಪಡೆದಿದ್ದಾರೆ. ಬಿಹಾರ ಚುನಾವಣೆಯ ಫಲಿತಾಂಶ ಬಂದ ನಂತರ ಅವರು ವಿದೇಶ ಪ್ರವಾಸಕ್ಕೆ ತೆರಳುತ್ತಾರೆ.…
ಶಿವಮೊಗ್ಗ: ಇಂದು ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಜನಸಂಪರ್ಕ ಸಭೆ ನಡೆಸಿದರು. ಈ ಜನಸಂಪರ್ಕ ಸಭೆಗೆ ಭರ್ಜರಿ ರೆಸ್ಪಾನ್ಸ್ ದೊರೆತಿದೆ. ಬರೋಬ್ಬರಿ 66ಕ್ಕೂ ಹೆಚ್ಚು ಜನರು ತಮ್ಮ ಸಮಸ್ಯೆ ಪರಿಹರಿಸುವಂತೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗಳಿಗೆ ಸ್ಥಳದಲ್ಲೇ ಅಧಿಕಾರಿಗಳ ಮೂಲಕ ಸಮಸ್ಯೆ ಪರಿಹರಿಸುವಂತ ಕೆಲಸ ಮಾಡಿದರು. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಂಭಾಗದಲ್ಲಿ ಇಂದು ಶಾಸಕ ಗೋಪಾಲಕೃಷ್ಣ ಬೇಳೂರು ಜನಸಂಪರ್ಕ ಸಭೆಯನ್ನು ನಡೆಸಿದರು. ಈ ಕಾರ್ಯಕ್ರಮ ಉದ್ಘಾಟಿಸಿ, ಜನಸಂಪರ್ಕ ಸಭೆಯನ್ನು ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನೊಂದ ಜನರಿಗೆ ಸ್ಪಂದಿಸಬೇಕು. ಅವರ ಅಹವಾಲುಗಳನ್ನು ಪರಿಹರಿಸಬೇಕು ಎನ್ನುವ ಕಾರಣದಿಂದ ಜನಸಂಪರ್ಕ ಸಭೆ ನಡೆಸಲಾಗಿದೆ. ಇಲ್ಲಿ ಬಂದಿರುವಂತ ಅರ್ಜಿಗಳಲ್ಲಿ ಬಹುತೇಕವು 94ಸಿ ಗೆ ಸಂಬಂಧಿಸಿದ್ದವು. ಸರ್ಕಾರದಿಂದ ಕಾನು, ಕಂದಾಯ ಭೂಮಿ ಪರಿಹಾರಕ್ಕಾಗಿ ಕಂದಾಯ ಹಾಗೂ ಅರಣ್ಯ ಇಲಾಖೆಯಿಂದ ಜಂಟಿ ಸರ್ವೆಗೆ ಸೂಚಿಸಲಾಗಿದೆ. ಆ ಸರ್ವೆ ಬಳಿಕ…
ನವದೆಹಲಿ: ದೆಹಲಿಯ ಕೆಂಪು ಕೋಟೆ ಬಳಿಯ ಮೆಟ್ರೋ ನಿಲ್ದಾಣದ ಬಳಿಯಲ್ಲಿ ಕಾರು ಸ್ಪೋಟ ಘಟನೆಯು ಉದ್ದೇಶ ಪೂರ್ವಕವಲ್ಲ. ಉಗ್ರರ ನಿಜವಾದ ಟಾರ್ಗೆಟ್ ಅಯೋಧ್ಯ ರಾಮಮಂದಿರ್ ಹಾಗೂ ಕಾಶಿ ವಿಶ್ವನಾಥ ದೇವಸ್ಥಾನ ಎಂಬುದಾಗಿ ಮೂಲಗಳಿಂದ ತಿಳಿದು ಬಂದಿದೆ. ಪ್ರಮುಖ ಬಹಿರಂಗಪಡಿಸುವಿಕೆಯಲ್ಲಿ, ದೆಹಲಿ ಕಾರು ಸ್ಫೋಟಕ್ಕೆ ಸಂಬಂಧಿಸಿದ ಭಯೋತ್ಪಾದಕ ಘಟಕವು ಉತ್ತರ ಪ್ರದೇಶದ ಧಾರ್ಮಿಕ ಸ್ಥಳಗಳನ್ನು, ವಿಶೇಷವಾಗಿ ಅಯೋಧ್ಯೆ ಮತ್ತು ವಾರಣಾಸಿಯನ್ನು ಗುರಿಯಾಗಿಸಲು ದೊಡ್ಡ ಯೋಜನೆಗಳನ್ನು ಹೊಂದಿತ್ತು ಎಂದು ಮೂಲಗಳು ಸೂಚಿಸಿವೆ. ಈ ಗುಂಪು ಅಯೋಧ್ಯೆಯಲ್ಲಿ ದೊಡ್ಡ ಸ್ಫೋಟವನ್ನು ನಡೆಸಲು ಉದ್ದೇಶಿಸಿತ್ತು ಎಂದು ಹೇಳಲಾಗಿದೆ, ಅಲ್ಲಿ ಬಂಧಿತ ಆರೋಪಿಗಳಲ್ಲಿ ಒಬ್ಬರಾದ ಡಾ. ಶಾಹೀನ್ ಶಾಹಿದ್ ಈಗಾಗಲೇ ಸ್ಲೀಪರ್ ಸೆಲ್ ಅನ್ನು ಸಕ್ರಿಯಗೊಳಿಸಿದ್ದರು. ಯೋಜನೆಯನ್ನು ಕಾರ್ಯಗತಗೊಳಿಸುವ ಮೊದಲು, ಭಯೋತ್ಪಾದನಾ ನಿಗ್ರಹ ದಳ (ATS) ಮತ್ತು ಸ್ಥಳೀಯ ಪೊಲೀಸರ ಸರಣಿ ದಾಳಿಗಳು ಮತ್ತು ಬಂಧನಗಳು ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲು ಮತ್ತು ಸಂಪೂರ್ಣ ಜಾಲವನ್ನು ಬಯಲು ಮಾಡಲು ಕಾರಣವಾಯಿತು. ‘ಕೆಂಪು ಕೋಟೆ ಸ್ಫೋಟವು ಯೋಜಿತ ಗುರಿಯಾಗಿರಲಿಲ್ಲ’ ದೆಹಲಿಯ ಕೆಂಪು…
ಆನೇಕಲ್: ಶಾಕಿಂಗ್ ಘಟನೆ ಎನ್ನುವಂತೆ ಸ್ಕ್ಯಾನಿಂಗ್ ಗೆ ತೆರಳಿದಂತ ಹೆಣ್ಣು ಮಕ್ಕಳ ಖಾಸಗಿ ಅಂಗ ಮುಟ್ಟಿ, ಲೈಂಗಿಕ ಕಿರುಕುಳವನ್ನು ರೆಡಿಯಾಲಜಿಸ್ಟ್ ಒಬ್ಬರು ನೀಡಿದಂತ ಆರೋಪ ಕೇಳಿ ಬಂದಿದೆ. ಈ ಹಿನ್ನಲೆಯಲ್ಲಿ ಬೆಂಗಳೂರು ಸಮೀಪದ ಆನೇಕಲ್ ನಲ್ಲಿ ಹೀಗೆ ಲೈಂಗಿಕ ಕಿರುಕುಳ ನೀಡಿದಂತ ಕಾಮುಕ ರೆಡಿಯಾಲಜಿಸ್ಟ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಂಗಳೂರು ಸಮೀಪದ ಆನೇಕಲ್ ಪಟ್ಟಣದಲ್ಲಿ ಸ್ಕ್ಯಾನಿಂಗ್ ಸೆಂಟರ್ ವೊಂದರಲ್ಲಿ ರೆಡಿಯಾಲಜಿಸ್ಟ್ ಆಗಿ ಕೆಲಸ ಮಾಡುತ್ತಿದ್ದಂತ ಜಯಕುಮಾರ್ ಎಂಬುವರೇ ಹೀಗೆ ಲೈಂಗಿಕ ಕಿರುಕುಳ ನೀಡಿದಂತ ಆರೋಪಿಯಾಗಿದ್ದಾರೆ. ಅವರ ವಿರುದ್ಧ ಮಹಿಳೆಯೊಬ್ಬರು ನೀಡಿದಂತ ದೂರಿನ ಹಿನ್ನಲೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕೆಲ ದಿನಗಳ ಹಿಂದೆ ಸ್ಕ್ಯಾನಿಂಗ್ ಮಾಡಿಸೋದಕ್ಕೆ ಮಹಿಳೆಯೊಬ್ಬರು ತೆರಳಿದ್ದರು. ಈ ವೇಳೆಯಲ್ಲಿ ಸ್ಕ್ಯಾನಿಂಗ್ ಮಾಡುವ ನೆಪದಲ್ಲಿ ಮಹಿಳೆಯ ಖಾಸಗಿ ಅಂಗಾಂಗವನ್ನು ರೆಡಿಯಾಲಜಿಸ್ಟ್ ಜಯಕುಮಾರ್ ಮುಟ್ಟಿದ್ದಾರೆ. ಇದಕ್ಕೆ ಮಹಿಳೆ ವಿರೋಧ ವ್ಯಕ್ತ ಪಡಿಸಿದಾಗ ಹೊರಗೆ ಹೇಳಿದಂತೆ ಧಮ್ಕಿ ಹಾಕಿದ್ದಾರೆ. ಅಲ್ಲದೇ ಅವಾಚ್ಯ ಶಬ್ದಗಳಿಂದಲೂ ನಿಂದಿಸಿದ್ದಾರೆ. ಈ ಎಲ್ಲವನ್ನು ಮೊಬೈಲ್ ನಲ್ಲಿ ಚಿತ್ರಿಸಿಕೊಂಡು, ಆನೇಕಲ್ ಠಾಣೆಗೆ ತೆರಳಿ…
ಬೆಂಗಳೂರು : ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ ನೋಂದಾಯಿತ ಪ್ರಮಾಣ ಪತ್ರವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಸಹಕಾರ ಇಲಾಖೆಯ ಸಹಕಾರ ಸಂಘಗಳ ಅಪರ ನಿಬಂಧಕರಾದ ಲಕ್ಷ್ಮೀಪತಯ್ಯ ಹಸ್ತಾಂತರಿಸಿದರು. ವಿಧಾನಸೌಧದ ಕಚೇರಿಯಲ್ಲಿ ಸಚಿವರನ್ನು ಭೇಟಿಯಾದ ಲಕ್ಷ್ಮೀಪತಯ್ಯ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು. ಸಚಿವರ ಕನಸಿನ ಯೋಜನೆ ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಯನ್ನು ಕಾರ್ಯರೂಪಕ್ಕೆ ತರುವಲ್ಲಿ ಪ್ರಮುಖ ಪಾತ್ರವಹಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು, ಇದೀಗ ಇನ್ನೊಂದು ಹೆಜ್ಜೆ ಮುಂದೆ ಹೋಗಿ ಗೃಹಲಕ್ಷ್ಮೀ ಯೋಜನೆಯ ಯಜಮಾನಿಯರಿಗಾಗಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘವನ್ನು ಸ್ಥಾಪಿಸಿದ್ದಾರೆ. ನವೆಂಬರ್ 19 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅಧಿಕೃತ ಚಾಲನೆ ಸಿಗಲಿದೆ. ಮಹಿಳೆಯರ ಸುರಕ್ಷತೆಗಾಗಿ ಅಕ್ಕಾಪಡೆಯನ್ನು ಸಜ್ಜುಗೊಳಿಸುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು, ಇದೀಗ ಮನೆಯ ಯಜಮಾನಿಯರ ಸಬಲೀಕರಣಕ್ಕಾಗಿ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಗೃಹಲಕ್ಷ್ಮೀ ಯೋಜನೆಗೆ…
ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಆನ್ ಲೈನ್ ಮೂಲಕ ಮಾಹಿತಿ ಸಲ್ಲಿಸಲು ನಿನ್ನೆ ಕೊನೆಯ ದಿನವಾಗಿತ್ತು. ಈ ದಿನಾಂಕವನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಮಾಹಿತಿ ನೀಡಲಾಗಿದ್ದು, ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಡೆಸಲಾಗಿತ್ತು. ನಿನ್ನೆಯವರೆಗೆ ಆನ್ ಲೈನ್ ಮೂಲಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳದವರಿಗೆ ಅವಕಾಶ ನೀಡಲಾಗಿತ್ತು. ಇನ್ನೂ ಕೆಲವರು ವಿವರ ದಾಖಲಿಸಲು ಅವಕಾಶ ಕೋರಿದ್ದರಿಂದಾಗಿ ಮತ್ತೆ ವಿಸ್ತರಿಸಲಾಗಿದೆ ಎಂದಿದ್ದಾರೆ. ನವೆಂಬರ್.30, 2025ರವರೆಗೆ ಆನ್ ಲೈನ್ ಮೂಲಕ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸ್ವಯಂ ಘೋಷಣೆ ಸಲ್ಲಿಸಲು ಅವಧಿ ವಿಸ್ತರಿಸಲಾಗಿದೆ. ಕಾರಣಾಂತರಗಳಿಂದ ಸಮೀಕ್ಷೆಯಲ್ಲಿ ಭಾಗವಹಿಸಲು ಸಾಧ್ಯವಾಗದವರು ಆನ್ ಲೈನ್ ಮೂಲಕ ತಮ್ಮ ಮಾಹಿತಿ ನೋಂದಾಯಿಸಿಬಹುದು ಎಂದು ತಿಳಿಸಿದೆ. ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಎಲ್ಲರಿಗೂ ಅವಕಾಶ ನೀಡುವ ದೃಷ್ಟಿಯಿಂದ ಆನ್ಲೈನ್ ಲಿಂಕ್ https://kscbcselfdeclaration.karnataka.gov.in ಮೂಲಕ ಸ್ವಯಂ ಪಾಲ್ಗೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ – 8050770004ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ…
ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆಯ ಮತದಾನೋತ್ತರ ಸಮೀಕ್ಷೆಯನ್ನು ವಿವಿಧ ಸಮೀಕ್ಷಾ ಸಂಸ್ಥೆಗಳಿಂದ ಪ್ರಕಟಿಸಲಾಗಿದೆ. ಈ ಸಮೀಕ್ಷೆಯಲ್ಲಿ ಎನ್ ಡಿ ಎ ಬಹುಮತ ಪಡೆಯಲಿದೆ ಎಂಬುದಾಗಿ ಹೇಳಲಾಗುತ್ತಿದೆ. ಮಾಟ್ರಿಜ್ ಮತದಾನೋತ್ತರ ಸಮೀಕ್ಷೆಯ ಪ್ರಕಾರ ಎನ್ ಡಿಎ 147ರಿಂದ 167 ಸೀಟನ್ನು ಗೆಲ್ಲಲಿದೆ. ಕಾಂಗ್ರೆಸ್ ಪಕ್ಷದ ಎಂಜಿಪಿ 70 ರಿಂದ 90 ಸೀಟ್, ಜೆಎಸ್ ಪಿ 0, ಇತರೆ 2ರಿಂದ 6 ಸೀಟು ಗೆಲ್ಲುವ ಸಾಧ್ಯತೆಯನ್ನು ತಿಳಿಸಿದೆ. ಪೀಪಲ್ ಇನ್ ಸೈಟ್ ಸಮೀಕ್ಷೆಯ ಪ್ರಕಾರ ಎನ್ ಡಿಎಗೆ ಸ್ಪಷ್ಟ ಬಹುಮತ ಬರಲಿದೆ ಎಂಬುದಾಗಿ ಹೇಳಲಾಗಿದೆ. ಎನ್ ಡಿಎ 133-143, ಮಹಾಘಟಬಂಧನ್ 93-102, ಇತರೆ 2-9 ಸ್ಥಾನವನ್ನು ಗೆಲ್ಲಲಿವೆ ಎಂಬುದಾಗಿ ಹೇಳಲಾಗಿದೆ. https://twitter.com/ANI/status/1988236009977606355 ಡಿವಿ ರಿಸರ್ಚ್ ನಂತೆ ಎನ್ ಡಿಎಗೆ ಸರಳ ಬಹುಮತ ಬರಲಿದೆ. ಎನ್ ಡಿಎ 132 ರಿಂದ 152, ಮಹಾಘಟಬಂಧನ್ ಗೆ 83-98 ಸೀಟ್, ಜೆಎಸ್ ಪಿ 2ರಿಂದ 4, ಇತರೆ 1 ರಿಂದ 8 ಸೀಟ್ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.…
ಬೆಂಗಳೂರು: ಪ್ರಸಕ್ತ ಸಾಲಿನ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ 4,007 ಸೀಟು ಹಂಚಿಕೆಗೆ ಲಭ್ಯ ಇದ್ದು, ಅವುಗಳ ವಿವರಗಳನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ವೈದ್ಯಕೀಯ ಶಿಕ್ಷಣ ಇಲಾಖೆ ಕೊಟ್ಟಿರುವ ಪಟ್ಟಿಯಲ್ಲಿ ಕ್ಲಿನಿಕಲ್, ಪ್ರೀ ಕ್ಲಿನಿಕಲ್ ಮತ್ತು ಪ್ಯಾರಾ ಕ್ಲಿನಿಕಲ್ ಗೆ ಸೇರಿದ ಸೀಟುಗಳು ಸೇರಿವೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಯಾವ ಕಾಲೇಜಿನಲ್ಲಿ? ಯಾವ ವಿಭಾಗದ ಸೀಟುಗಳು ಎಷ್ಟು ಸಂಖ್ಯೆಯಲ್ಲಿ ಇವೆ ಎಂಬುದನ್ನು ಅಭ್ಯರ್ಥಿಗಳು ನೋಡಿಕೊಂಡು, ಎಚ್ಚರಿಕೆಯಿಂದ ಆಪ್ಷನ್ ಎಂಟ್ರಿ ಮಾಡಬೇಕಾಗುತ್ತದೆ ಎಂದು ಅವರು ಸಲಹೆ ನೀಡಿದ್ದಾರೆ. ಆಪ್ಷನ್ ಎಂಟ್ರಿ ಆರಂಭ ಮತ್ತು ಸೀಟು ಹಂಚಿಕೆ ಬಗ್ಗೆ ಸದ್ಯದಲ್ಲೇ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. https://kannadanewsnow.com/kannada/important-information-for-state-youth-fund-beneficiaries/ https://kannadanewsnow.com/kannada/money-will-be-deposited-in-the-accounts-of-farmers-who-lost-their-crops-due-to-heavy-rains-cm-siddaramaiah-announces/
ಬೆಂಗಳೂರು: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮವು 2025-26ನೇ ಸಾಲಿನ ಹೊಲಿಗೆ ಯಂತ್ರ ವಿತರಣಾ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದ್ದು, ಮರಾಠ ಪ್ರವರ್ಗ -3ಬಿ ಅಡಿಯಲ್ಲಿ 2ಎ ಯಿಂದ 2ಎಫ್ ವರೆಗೆ ಬರುವ ಸಮುದಾಯಕ್ಕೆ ಸೇರಿದ 18 ರಿಂದ 55 ವರ್ಷ ವಯೋಮಿತಿ ಹೊಂದಿದವರಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿದಾರರು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ 3ಬಿಯಲ್ಲಿ ಪಡೆದಿರಬೇಕು. ಒಂದು ಕುಟುಂಬದಲ್ಲಿ ಒಬ್ಬ ಸದಸ್ಯರನ್ನು ಮಾತ್ರ ಈ ಸೌಲಭ್ಯಕ್ಕೆ ಪರಿಗಣಿಸಲಾಗುವುದು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ. 98,000/- ಮತ್ತು ನಗರ ಪ್ರದೇಶದವರಿಗೆ ರೂ. 1.20 ಲಕ್ಷ ರೂ.ಗಳನ್ನು ಮೀರಬಾರದು ಅಂಗವಿಕಲ ಮಹಿಳೆಯರಿಗೆ ಶೇ.5% ರಷ್ಟು, ಮಹಿಳೆಯರಿಗೆ ಶೇ.33% ಹಾಗೂ ತೃತೀಯ ಲಿಂಗಿಗಳಿಗೆ ಶೇ.1% ರಷ್ಟು, ಅವಿವಾಹಿತ ಮಹಿಳೆಯರಿಗೆ ಶೇ.2ರಷ್ಟನ್ನು ಮೀಸಲಿರಿಸಿದೆ. ವಿಧವೆಯರಿಗೆ, ಪರಿತ್ಯಕ್ತ ಮಹಿಳೆಯರಿಗೆ, ಹೆಚ್.ಐ.ವಿ. ಪೀಡಿತರಿಗೆ 35 ವರ್ಷ ವಯೋಮಿತಿ ಮೀರಿರಬಾರದು. ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್ಲೈನ್ನಲ್ಲಿ ಪ್ರತ್ಯೇಕವಾಗಿ ಅರ್ಜಿಯನ್ನು ಸಲ್ಲಿಸುವುದು. ಒಂದು…
ಬೆಂಗಳೂರು : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ “ಯುವನಿಧಿ” ಯೋಜನೆಯ ಫಲಾನುಭವಿಗಳು ಮಾಹೆಯಾನ ನಿರುದ್ಯೋಗ ಭತ್ಯೆಯನ್ನು ಪಡೆಯಲು ಪ್ರತಿ ತಿಂಗಳು 01 ರಿಂದ 25ನೇ ತಾರೀಖಿನೊಳಗೆ ಸ್ವಯಂ–ಘೋಷಣೆಯನ್ನು ಪಲಾನುಭವಿಗಳು ವೆಬ್ ಸೈಟ್ www.sevasindhugs.karnataka.gov.in ನ ಮೂಲಕ ದಾಖಲು ಮಾಡುವುದು ಕಡ್ಡಾಯವಾಗಿರುತ್ತದೆ ಮತ್ತು ನಿಗಧಿತ ಅವಧಿಯೊಳಗೆ ಸಲ್ಲಿಸಬೇಕೆಂದು ಬೆಂಗಳೂರು, ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/science-in-kannada-a-special-campaign-from-param-science-experience-center/ https://kannadanewsnow.com/kannada/extension-of-the-deadline-for-online-registration-in-the-caste-census-survey-in-the-state/














