Subscribe to Updates
Get the latest creative news from FooBar about art, design and business.
Author: kannadanewsnow09
BUDGET BREAKING: ರಾಜ್ಯದ ‘ಲಿಂಗತ್ವ ಅಲ್ಪಸಂಖ್ಯಾತ’ರಿಗೆ ಗುಡ್ ನ್ಯೂಸ್: ಮಾಸಾಶನ ‘800 ರೂ.ನಿಂದ 1,200’ಕ್ಕೆ ಹೆಚ್ಚಳ
ಬೆಂಗಳೂರು: ಲಿಂಗತ್ವ ಅಲ್ಪಸಖ್ಯಾತರ ಬದುಕನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ ಮೈತ್ರಿ ಯೋಜನೆಯಡಿ ನೀಡುವ ಮಾಸಾಶನವನ್ನು 800 ರೂಗಳಿಂದ 1,200ಕ್ಕೆ ಹೆಚ್ಚಿಸಲಾಗುತ್ತದೆ. ಜೊತೆಗೆ ಗುರುತಿಸುವಿಕೆ ಹಾಗೂ ಗುರುತಿನ ಚೀಟಿ ವಿತರಣೆ ಪ್ರಕ್ರಿಯೆಗಳನ್ನು ಸರಳೀಕರಣಗೊಳಿಸಲಾಗುವುದು ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ಇಂದು ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿ ಮಾತನಾಡಿದಂತ ಅವರು, ಅಂಗನವಾಡಿ ಮೂಲಕ ಕೈಗೊಳ್ಳುವ ಚಟುವಟಿಕೆಗಳನ್ನು ಸುಗಮಗೊಳಿಸಲು 90 ಕೋಟಿ ರೂ ವೆಚ್ಚದಲ್ಲಿ 75,938 ಸ್ಮಾರ್ಟ್ ಪೋನ್ ಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕಿಯರಿಗೆ ಒದಗಿಸಲಾಗುವುದು ಎಂದರು. ರಾಜ್ಯದಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1000 ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳನ್ನು 200 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದರು. ವಿವಿಧ ಖಾಯಿಲೆಯಿಂದ ಬಳಲುತ್ತಿರುವಂತ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ತಿಂಗಳು 1000 ರೂ ಪ್ರೋತ್ಸಾಹ ನೀಡಲಾಗುತ್ತದೆ. ಯಂತ್ರಚಾಲಿತ ದ್ವಿಚಕ್ರ ವಾಹನಗಳ್ನು ಒದಗಿಸಲು ಇನ್ನೂ ಬಾಕಿ ಇರುವ 1500 ವಿಶೇಷ ಚೇತನರಿಗೆ 2024-25ನೇ ಸಾಲಿನಲ್ಲಿ ದ್ವಿಚಕ್ರ ವಾಹನಗಳನ್ನು ವಿತರಿಸಲಾಗುವುದು ಎಂದು ಹೇಳಿದರು. https://kannadanewsnow.com/kannada/paytm-payments-bank-goes-missing-from-list-of-32-banks-for-buying-fastags/
ಬೆಂಗಳೂರು: ರಾಜ್ಯ ಸರ್ಕಾರದಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿರಯರಿಗೆ ಗ್ರಾಚ್ಯುಟಿ ಸವಲತ್ತು ಘೋಷಣೆ ಮಾಡಲಾಗಿದೆ. ಇಂದು ಬಜೆಟ್ ಮಂಡಿಸಿ ಮಾತನಾಡಿದಂತ ಸಿಎಂ ಸಿದ್ಧರಾಮಯ್ಯ ಅವರು, ರಾಜ್ಯದಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1000 ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳನ್ನು 200 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದರು. ಅಂಗನವಾಡಿ ಮೂಲಕ ಕೈಗೊಳ್ಳುವ ಚಟುವಟಿಕೆಗಳನ್ನು ಸುಗಮಗೊಳಿಸಲು 90 ಕೋಟಿ ರೂ ವೆಚ್ಚದಲ್ಲಿ 75,938 ಸ್ಮಾರ್ಟ್ ಪೋನ್ ಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕಿಯರಿಗೆ ಒದಗಿಸಲಾಗುವುದು ಎಂದರು. ವಿವಿಧ ಖಾಯಿಲೆಯಿಂದ ಬಳಲುತ್ತಿರುವಂತ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ತಿಂಗಳು 1000 ರೂ ಪ್ರೋತ್ಸಾಹ ನೀಡಲಾಗುತ್ತದೆ. ಯಂತ್ರಚಾಲಿತ ದ್ವಿಚಕ್ರ ವಾಹನಗಳ್ನು ಒದಗಿಸಲು ಇನ್ನೂ ಬಾಕಿ ಇರುವ 1500 ವಿಶೇಷ ಚೇತನರಿಗೆ 2024-25ನೇ ಸಾಲಿನಲ್ಲಿ ದ್ವಿಚಕ್ರ ವಾಹನಗಳನ್ನು ವಿತರಿಸಲಾಗುವುದು ಎಂದರು. ಲಿಂಗತ್ವ ಅಲ್ಪಸಖ್ಯಾತರ ಬದುಕನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ ಮೈತ್ರಿ ಯೋಜನೆಯಡಿ ನೀಡುವ ಮಾಸಾಶನವನ್ನು 800 ರೂಗಳಿಂದ 1,200ಕ್ಕೆ ಹೆಚ್ಚಿಸಲಾಗುತ್ತದೆ. ಜೊತೆಗೆ ಗುರುತಿಸುವಿಕೆ ಹಾಗೂ ಗುರುತಿನ ಚೀಟಿ ವಿತರಣೆ ಪ್ರಕ್ರಿಯೆಗಳನ್ನು ಸರಳೀಕರಣಗೊಳಿಸಲಾಗುವುದು…
ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ, ಪಂಗಡಗಳ ಸಮುದಾಯದವರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್ ನೀಡಲಾಗಿದೆ. ಎಸ್ಸಿ, ಎಸ್ಟಿ ಸಮುದಾಯದ ಜನರಿಗೆ ವಿರಳ ಮತ್ತು ದುಬಾರಿ ವೆಚ್ಚದ ಚಿಕಿತ್ಸೆ ಸೇವೆಗಳನ್ನು ಒದಗಿಸಲು 35 ಕೋಟಿ ರೂ ಗಳ ಕಾರ್ಪಸ್ ಫಂಡ್ ಸ್ಥಾಪಿಸುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ಇಂದು ಬಜೆಟ್ ಮಂಡಿಸಿ ಮಾತನಾಡಿದಂತ ಅವರು, ಎಸ್ಸಿ, ಎಸ್ಟಿ ಹಾಗೂ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರ ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕಾಗಿ ಒಟ್ಟು 2,710 ಕೋಟಿ ರ ಅನುದಾನ ನೀಡಲಾಗುವುದು ಎಂದರು. ಸಮಾಜಕಲ್ಯಾಣ, ಪರಿಶಿಷ್ಟ ಪಂಗಡಗಳ, ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿಗಳ ಭೋಜನ ಮಾಸಿಕ ಭೋಜನ ವೆಚ್ಚ ತಲಾ 100 ರೂ ಹೆಚ್ಚಳ ಮಾಡಲಾಗುವುದು ಎಂದರು. ಕ್ರೈಸ್ಟ್ ಅಡಿಯಲ್ಲಿ 638 ಕೋಟಿ ರೂಗಳ ಅಂದಾಡು ವೆಚ್ಚದಲ್ಲಿ ಒಟ್ಟು 29 ವಸತಿ ಶಾಲಾ ಸಂಕೀರ್ಣಗಳ ನಿರ್ಮಾಣ ಮಾಡಲಾಗುತ್ತದೆ. 20 ಹೋಬಳಿಗಳಲ್ಲಿ…
ಬೆಂಗಳೂರು: ರಾಜ್ಯದ ಮೀನುಗಾರರಿಗೆ ಮತ್ಸ್ಯ ಆಶಾಕಿರಣ ಯೋಜನೆಯಡಿ ಕರಾವಳಿ ಮೀನುಗಾರರ ಪರಿಹಾರದ ರಾಜ್ಯದ ಪಾಲು ರೂ.3000ಕ್ಕೆ ಹೆಚ್ಚಳ ಮಾಡುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ಇಂದು ಬಜೆಟ್ ಮಂಡಿಸಿ ಮಾತನಾಡಿದಂತ ಅವರು ಮೀನುಗಾರಿಕೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಮುಂದಿನ ವರ್ಷಗಳಲ್ಲಿ 3000 ಕೋಟಿ ರೂ.ಗಳಷ್ಟು ಬೃಹತ್ ಗಾತ್ರದ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುವುದಾಗಿ ತಿಳಿಸಿದರು. ಮೀನುಗಾರರ ರಕ್ಷಣೆಗೆ ಸಮುದ್ರ ಅಂಬುಲೆನ್ಸ್ ಖರೀಗಿದೆ 7 ಕೋಟಿ ರೂ ನೀಡಲಾಗುತ್ತದೆ. ವಿವಿಧ ವಸತಿ ಯೋಜನೆಗಳಡಿ 10000 ವಸತಿ ರಹಿತ ಮೀನುಗಾರರಿಗೆ ಮನೆ ನಿರ್ಮಿಸಲು ಸಹಾಯಧನ ನೀಡಲಾಗುತ್ತದೆ ಎಂಬುದಾಗಿ ಘೋಷಿಸಿದರು. https://kannadanewsnow.com/kannada/good-news-for-silk-growers-in-the-state-bivoltine-cocoon-incentive-increased-to-rs-30/
ಬೆಂಗಳೂರು: ರಾಜ್ಯ ಬಜೆಟ್ ನಲ್ಲಿ ರೇಷ್ಮೆ ಬೆಳೆಗಾರರಿಗೆ ಬಂಪರ್ ಗಿಫ್ಟ್ ನೀಡಲಾಗಿದೆ. ರಾಮನಗರ ಮತ್ತು ಶಿಡ್ಲಘಟ್ಟದಲ್ಲಿ 250 ಕೋಟಿ ರ ವೆಚ್ಚದಲ್ಲಿ ಅತ್ಯಾಧುನಿಕ ರೇಷ್ಮೆ ಮಾರುಕಟ್ಟೆ ನಿರ್ಮಾಣದ ಎರಡನೇ ಹಂತದ ಕಾಮಗಾರಿ ಕೈಗೆತ್ತಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ. ಅಲ್ಲದೇ ಬೈವೋಲ್ಟೀನ್ ರೇಷ್ಮೆಗೂಡುಗಳಿಗೆ ನೀಡುವ ಪ್ರೋತ್ಸಾಹಧನವನ್ನು ಪ್ರತಿ ಕೆಜಿಗೆ ರೂ.30 ಹೆಚ್ಚಳ ಮಾಡಲಾಗಿದೆ. ಇಂದು ಬಜೆಟ್ ಮಂಡಿಸಿ ಮಾತನಾಡಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರೇಷ್ಮೆ ನೂಲು ಬಿಚ್ಚಾಣಿಕೆದಾರರು ಉತ್ಪಾದಿಸಿದ ಕಚ್ಚಾ ರೇಷ್ಮೆಗೆ ಪ್ರೋತ್ಸಾಹ ಧನ ನೀಡಲು 12 ಕೋಟಿ ರೂ ಅನುದಾನ ನೀಡಲಾಗುತ್ತದೆ ಎಂದರು. https://kannadanewsnow.com/kannada/breaking-online-registration-process-of-marriages-to-be-launched-on-trial-basis-to-be-extended-across-the-state-soon/
ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು, ದಶಕಗಳ ಕನಸು ನನಸಾಗಿದೆ. ಈ ಮೂಲಕ ಸಿಎಂ ಸಿದ್ಧರಾಮಯ್ಯ ಅವರು ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆ ಪ್ರಕಟಿಸುವ ಮೂಲಕ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. ದಾವಣಗೆರೆಯಲ್ಲಿ ಇದೇ ಫೆ.3&4 ರಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಭರವಸೆಯನ್ನು ಈಡೇರಿಸಿರುವುದಕ್ಕೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಧನ್ಯವಾದ ಸಲ್ಲಿಸಿದ್ದಾರೆ. ಮಂಡ್ಯ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿಯೂ ಉಚಿತ ಬಸ್ ಪಾಸ್ ಬಗ್ಗೆ ಕೆಯುಡಬ್ಲ್ಯುಜೆ ಮಂಡಿಸಿದ್ದ ಹಕ್ಕೊತ್ತಾಯ ಬಗ್ಗೆ ಮುಖ್ಯಮಂತ್ರಿಗಳು ಕೊಟ್ಟ ಮಾತಿನಂತೆ ನಡೆದುಕೊಂಡಿರುವುದನ್ನು ಕೆಯುಡಬ್ಲ್ಯುಜೆ ಸ್ಮರಿಸಿದ್ದು, ಅಭಿನಂದನೆ ಸಲ್ಲಿಸಿದೆ. ಬಸ್ ಪಾಸ್ ಬೇಡಿಕೆ ಈಡೇರಿಸಲು ಸ್ಪಂದಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಎಲ್ಲಾ ಹಂತದಲ್ಲಿಯೂ ಸಹಕಾರ ನೀಡಿದ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೂ ಕರ್ನಾಟಕ ಕಾರ್ಯ ನಿರತ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಬೆಂಗಳೂರಿಗೆ ಇಂದಿನ ಬಜೆಟ್ ನಲ್ಲಿ ಬಂಪರ್ ಗಿಫ್ಟ್ ನೀಡಲಾಗಿದೆ. ನಗರದಲ್ಲಿನ ಪ್ರವಾಸಿ ತಾಣಗಳನ್ನು ಆಕರ್ಷಕವಾಗಿ ಅಭಿವೃದ್ಧಿಗೊಳಿಸುವುದಲ್ಲದೇ, ವಿವಿಧ ಕಾರಿಡಾರ್ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ. ಇಂದು ರಾಜ್ಯ ಬಜೆಟ್ ಮಂಡಿಸಿ ವಿಧಾನಸಭೆಯಲ್ಲಿ ಮಾತನಾಡಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಬೆಂಗಳೂರಲ್ಲಿ ಆಕರ್ಷಕ ಪ್ರವಾಸಿ ತಾಣಗಳನ್ನು ನಿರ್ಮಾಣ ಮಾಡಲಾಗುತ್ತದೆ. ಇದಕ್ಕಾಗಿ ಯೋಜನೆ ರೂಪಿಸಲಾಗುತ್ತಿದೆ. ಬಿಸಿನೆಸ್ ಕಾರಿಡಾರ್ ರೂಪಿಸಲಾಗುತ್ತದೆ ಎಂದರು. 27 ಸಾವಿರ ಕೋಟಿ ವೆಚ್ಚದಲ್ಲಿ 73 ಕಿಲೋಮೀಟರ್ ರಸ್ತೆ ಅಭಿವೃದ್ಧಿಗೊಳಿಸಲಾಗುತ್ತದೆ. ಸ್ಕೈಡ್ ವಾಕರ್ ನಿರ್ಮಾಣ ಮಾಡಲಾಗುತ್ತದೆ. ನಗರಾಭಿವೃದ್ಧಿ ಅಂಗ ಸಂಸ್ಥೆಗಳಾದಂತ ಬಿಎಂಆರ್ ಸಿಎಲ್, ಬಿಬಿಎಂಪಿ, ಬಿಡಬ್ಲ್ಯೂ ಎಸ್ ಎಸ್ ಬಿ ಸೇರಿದಂತೆ ವಿವಿಧ ಸಂಸ್ಥೆಗಳಿಗೆ ಅನುದಾನ ಒದಗಿಸೋದಾಗಿ ತಿಳಿಸಿದ್ದಾರೆ. ಇನ್ನೂ ಸೋಲಾರ್ ಪಾರ್ಕ್ ಅನ್ನು ನಿರ್ಮಾಣ ಮಾಡುವುದಾಗಿಯೂ ಘೋಷಿಸಿರುವಂತ ಸಿದ್ಧರಾಮಯ್ಯ ಅವರು, ಬೆಂಗಳೂರಿಗೆ ರಾಜ್ಯ ಬಜೆಟ್ 2024-25ರಲ್ಲಿ ಬಂಪರ್ ಗಿಫ್ಟ್ ನೀಡಿದ್ದಾರೆ. https://kannadanewsnow.com/kannada/good-news-for-women-repaying-loans-state-govt-to-provide-subsidy-at-6-interest-rate/ https://kannadanewsnow.com/kannada/breaking-online-registration-process-of-marriages-to-be-launched-on-trial-basis-to-be-extended-across-the-state-soon/
ಬೆಂಗಳೂರು : ರಾಜ್ಯ ಸರ್ಕಾರದಿಂದ ಸಾಲ ಮರು ಪಾವತಿ ಮಾಡುವಂತ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಅದೇ ಶೇ.6ರ ಬಡ್ಡಿದರದಲ್ಲಿ ಸಹಾಯಧನ ಸೌಲಭ್ಯವನ್ನು ನೀಡುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ಇಂದು ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿ ಮಾತನಾಡಿದಂತ ಅವರು ರಾಜ್ಯದಲ್ಲಿ ಸಾಲ ಮರು ಪಾವತಿ ಮಾಡುವಂತ ಮಹಿಳೆಯರಿಗೆ ಶೇ.6ರ ಬಡ್ಡಿದರದಲ್ಲಿ ಸಹಾಯಧನ ನೀಡಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ. ಈಗಾಗಲೇ ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಗ್ಯಾರಂಟಿ ಯೋಜನೆಯ ಅಡಿಯಲ್ಲಿ ಶಕ್ತಿ, ಗೃಹಲಕ್ಷ್ಮೀ ಯೋಜನೆ ಜಾರಿಗೊಳಿಸಲಾಗಿದೆ. ಈ ಬೆನ್ನಲ್ಲೇ ಮತ್ತೊಂದು ಗುಡ್ ನ್ಯೂಸ್ ಎನ್ನುವಂತೆ ಸಹಾಯಧನ ಸೌಲಭ್ಯವನ್ನು ಒದಗಿಸೋ ಯೋಜನೆಯನ್ನು ಸಿಎಂ ಸಿದ್ಧರಾಮಯ್ಯ ಇಂದಿನ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ. https://kannadanewsnow.com/kannada/breaking-online-registration-process-of-marriages-to-be-launched-on-trial-basis-to-be-extended-across-the-state-soon/
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕಲಬುರ್ಗಿಯಲ್ಲಿ ವಚನ ಮಂಟಪ ಸ್ಥಾಪನೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಸಚಿವ ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಪ್ರತಿಸ್ಪಂದಿಸಿದ್ದಾರೆ. ಈ ಕುರಿತಂತೆ ನಿನ್ನೆಯಷ್ಟೇ ಸಚಿವ ಪ್ರಿಯಾಂಕ್ ಖರ್ಗೆ ಅವರು, ಬೆಂಗಳೂರು ಅಥವಾ ಕಲಬುರಗಿಯಲ್ಲಿ ‘ವಚನ ಮಂಟಪ’ ಹಾಗೂ ‘ವಚನ ವಿಶ್ವವಿದ್ಯಾಲಯ’ ಸ್ಥಾಪಿಸುವಂತೆ ಮತ್ತು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರದ ಮೂಲಕ ಮನವಿ ಮಾಡಿದ್ದರು. ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವಂತ ಅವರು, ಕನ್ನಡ ನಾಡು ಇಂದು ಇಡೀ ವಿಶ್ವದಲ್ಲಿ ತನ್ನದೇ ಆದ ವಿಶಿಷ್ಟ ಸ್ಥಾನಗಳಿಸಿ, ಭಾರತ ದೇಶದ ಆರ್ಥಿಕ ಯಂತ್ರವಾಗಿ ಕಾರ್ಯ ನಿರ್ವಹಿಸುತ್ತಾ ಒಂದು ಅಮೋಘ ರಾಜ್ಯವಾಗಿ ರೂಪುಗೊಳ್ಳಲು ನಮ್ಮ ನಾಡಿನ ತಾತ್ವಿಕ ಅಡಿಪಾಯವೇ ಕಾರಣ. ಈ ತತ್ವಗಳ ಆಶಯವನ್ನು ಜಗತ್ತಿಗೆ ತಿಳಿಸಲು ಇರುವ ಭಾಷೆಯ ಅಂತರಕ್ಕೆ ಸೇತುವೆ ಕಟ್ಟುವ ಮಹತ್ತರವಾದ ಕೆಲಸ ಮಾಡುವ ನಿಟ್ಟಿನಲ್ಲಿ ಈ ಕೆಳಗಿನ ಎರಡು ಮನವಿಗಳನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿದ್ದರು. 1) ವಚನ ಮಂಟಪ: ನಾಡಿನ ರಾಜಧಾನಿಯಾದ ಬೆಂಗಳೂರಿನಲ್ಲಿ ಅಥವಾ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಪ್ರವಾಸೋದ್ಯಮ ಕ್ಷೇತ್ರಕ್ಕೆ ಬಂಪರ್ ಕೊಡುಗೆಯನ್ನು ಘೋಷಿಸಲಾಗಿದೆ. ರಾಜ್ಯದ ವಿವಿಧ ಪ್ರವಾಸಿ ತಾಣಗಳಲ್ಲಿ ಕೇಬಲ್ ಕಾರ್ ವ್ಯವಸ್ಥೆ, ರೋಪ್ ವೇ ನಿರ್ಮಿಸೋ ನಿರ್ಧಾರವನ್ನು ಕೈಗೊಳ್ಳಲಾಗಿದೆ. ರಾಜ್ಯದ ಪ್ರಸಿದ್ಧ ಪ್ರವಾಸಿ ತಾಣಗಳ ಅಭಿವೃದ್ಧಿ ನಿರ್ಧಾರ ಕೈಗೊಳ್ಳಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. 10 ಪ್ರವಾಸಿ ತಾಣಗಳಲ್ಲಿ ಕೇಬಲ್ ಕಾರ್ ನಿರ್ಮಿಸೋದಕ್ಕೆ ಅನುದಾನವನ್ನು ಒದಗಿಸೋ ಘೋಷಣೆಯನ್ನು ಇಂದಿನ ರಾಜ್ಯ ಬಜೆಟ್ ನಲ್ಲಿ ಸಿಎಂ ಸಿದ್ಧರಾಮಯ್ಯ ಮಾಡಿದ್ದಾರೆ. ಅಂಜನಾದ್ರಿ ಬೆಟ್ಟದ ಸುತ್ತಾಮುತ್ತಾ ಅಭಿವೃದ್ಧಿ ಮಾಡೋಲಾಗುತ್ತದೆ. ಬೆಂಗಳೂರಿನ ಆಕರ್ಷಕ ಪ್ರವಾಸಿ ತಾಣಗಳನ್ನು ಅಭಿವೃದ್ಧಿಗೊಳಿಸಲಾಗುತ್ತದೆ. ಪ್ರವಾಸಿ ತಾಣಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುತ್ತದೆ ಎಂಬುದಾಗಿ ಹೇಳುವ ಮೂಲಕ ಪ್ರವಾಸೋದ್ಯಮಕ್ಕೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ ನೀಡಲಾಗಿದೆ. https://kannadanewsnow.com/kannada/state-govt-to-hike-beer-prices-again/