Author: kannadanewsnow09

ದಕ್ಷಿಣ ಕನ್ನಡ: ಜಿಲ್ಲೆಯ ಪ್ರಸಿದ್ಧ ಸ್ವ-ಉದ್ಯೋಗ ತರಬೇತಿ ಕೇಂದ್ರದಲ್ಲಿ ಒಂದು ರುಡ್ ಸೆಟ್ ಸಂಸ್ಥೆಯೂ ಒಂದಾಗಿದೆ. ಈ ಸಂಸ್ಥೆಯಿಂದ ಇದೀಗ ಉಚಿತ ಜೇನು ಸಾಕಾಣಿಕೆ ತರಬೇತಿಗಾಗಿ ಸ್ವ-ಉದ್ಯೋಗಾಕಾಂಕ್ಷಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತಂತೆ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ದಿನಾಂಕ 08-01-2024ರಿಂದ 17-01-2024ರವರೆಗೆ 10 ದಿನಗಳ ಕಾಲ ಉಚಿತ ಜೇನು ಸಾಕಾಣಿಕೆ ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಿರೋದಾಗಿ ತಿಳಇಸಿದೆ. ಈ ತರಬೇತಿಗೆ 18 ರಿಂದ 45 ವರ್ಷ ವಯೋಮಾನದವರು ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿಯ ಅವಧಿಯಲ್ಲಿ ಊಟ ಮತ್ತು ವಸತಿ ಸಂಪೂರ್ಣ ಉಚಿತವಾಗಿರುತ್ತದೆ. ಜೊತೆಗೆ ಸಂಸ್ಥೆಯ ಸಮವಸ್ತ್ರ ಉಚಿತವಾಗಿ ನೀಡಲಾಗುತ್ತದೆ. ತರಬೇತಿಯ ಬಳಿಕ ಸ್ವ ಉದ್ಯೋಗ ಕೈಗೊಳ್ಳೋದಕ್ಕೆ ಬ್ಯಾಂಕ್ ನಿಂದ ಸಿಗುವ ಸಾಲದ ಬಗ್ಗೆ ಮಾಹಿತಿ ನೀಡಲಾಗುತ್ತದೆ ಎಂದಿದೆ. ಅರ್ಹ ಆಸಕ್ತ ಸ್ವ ಉದ್ಯೋಗಾಕಾಂಕ್ಷಿಗಳು ವಾಟ್ಸ್ ಆಪ್ ಮೂಲಕವೂ ತಮ್ಮ ಅರ್ಜಿಯನ್ನು 6364561982 ಸಂಖ್ಯೆಗೆ ಸಲ್ಲಿಸಬಹುದಾಗಿದೆ. ಅಲ್ಲದೇ ಆನ್ ಲೈನ್ ಮೂಲಕ www.rudsetitraining.org ಗೆ…

Read More

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೇವನಹಳ್ಳಿಯಲ್ಲಿರುವಂತ 5ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್, ವಾಣಿಜ್ಯ ಮಳಿಗೆಗಳ ಬೋರ್ಡ್ ಹೊಡೆದು ಹಾಕಿ, ಬಂಧನಕ್ಕೆ ಒಳಗಾಗಿ, ಜೈಲು ಸೇರಿದ್ದಂತ ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡಗೆ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಬೆಂಗಳೂರಲ್ಲಿ ವಾಣಿಜ್ಯ ಮಳಿಗೆ, ಕೈಗಾರಿಕೆಗಳ ನಾಮಫಲಕದಲ್ಲಿ ಕನ್ನಡ ಕಡ್ಡಾಯವಾಗಿ ಬರೆಯುವಂತೆ ಆಗ್ರಹಿಸಿ ಕೆಲ ದಿನಗಳ ಹಿಂದೆ ಕರವೇಯಿಂದ ಬೃಹತ್ ಪ್ರತಿಭಟನೆ ನಡೆಸಲಾಗಿತ್ತು. ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಂತ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಸೇರಿದಂತೆ ಹಲವು ಕಾರ್ಯಕರ್ತರು ಕನ್ನಡದಲ್ಲಿ ಬೋರ್ಡ್ ಹಾಕದ ವಾಣಿಜ್ಯ ಮಳಿಗೆಗಳ ನಾಮಫಲಕವನ್ನು ಹೊಡೆದು ಹಾಕಿದ್ದರು. ಈ ಸಂಬಂಧ ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಸೇರಿದಂತೆ 32 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಂತ ನಾರಾಯಣಗೌಡ ಸೆಂಟ್ರಲ್ ಜೈಲು ಸೇರಿದ್ದರು. ಇವರಲ್ಲದೇ 32 ಕರವೇ ಕಾರ್ಯಕರ್ತರು ಕೂಡ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಈ ಪ್ರಕರಣದಲ್ಲಿ ಜಾಮೀನು ಕೋರಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ 5ನೇ ಹೆಚ್ಚುವರಿ…

Read More

ಬೆಂಗಳೂರು: ಕಾಂಗ್ರೆಸ್ ಫೇಸ್ ಬುಕ್ ಪೇಜ್ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿಕೆ ಪೇಜ್ ನಿಂದ ಬಿಜೆಪಿ ನಾಯಕರ ಪೋಟೋ ದುರ್ಬಳಕೆ ಆರೋಪದ ಹಿನ್ನಲೆಯಲ್ಲಿ, ಬಿಜೆಪಿ ದೂರು ನೀಡಿದೆ. ಇಂದು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ತೆರಳಿದಂತ ಬಿಜೆಪಿ ಕಾನೂನು ಪ್ರಕೋಷ್ಠದ ಮುಖಂಡರು, ಕಾಂಗ್ರೆಸ್ ಪಕ್ಷದ ಫೇಸ್ ಬುಕ್ ಪೇಜ್ ನಲ್ಲಿ ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿಯಾಗಿ ಪೋಟೋ ಎಡಿಟ್ ಮಾಡಿ ಪೋಸ್ಟ್ ಮಾಡಲಾಗುತ್ತಿದೆ. ಸುಳ್ಳು ಸುದ್ದಿಯನ್ನು ಪ್ರಕಟಿಸಲಾಗುತ್ತಿದೆ. ಇಂತಹ ಫೇಸ್ ಬುಕ್ ಹ್ಯಾಂಡಲ್ ಮಾಡೋರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿದೆ. ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ, ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಸಿ.ಟಿ ರವಿ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್, ಸಂಸದ ಪ್ರತಾಪ್ ಸಿಂಹ ಪೋಟೋ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿಕೆ ಫೇಸ್ ಬುಕ್ ಪೇಜ್, ಕರ್ನಾಟಕ ಕಾಂಗ್ರೆಸ್ ಪೇಜ್ ವಿರುದ್ಧ…

Read More

ಬೆಂಗಳೂರು:  ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಉನ್ನತ ಶಿಕ್ಷಣ ಸಚಿವರಾದ ಡಾ||ಎಂ.ಸಿ.ಸುಧಾಕರ್ ಮತ್ತು‌ ಮಾಜಿ MLC ಪುಟ್ಟಣ್ಣನವರ ನೇತೃತ್ವದ ಅತಿಥಿ ಉಪನ್ಯಾಸಕರ ನಿಯೋಗದ ಜತೆ ಚರ್ಚಿಸಿ, ಅತಿಥಿ ಉಪನ್ಯಾಸಕರ ನೆರವಿಗೆ ನಿಲ್ಲುವ ಉದ್ದೇಶದಿಂದ ಹಲವು ಮಹತ್ವದ ನಿರ್ಣಯಗಳನ್ನು ಘೋಷಿಸಿದ್ದಾರೆ. ಅದರಲ್ಲಿ ಗೌರವಧನವನ್ನು 5,000ದಿಂದ 8,000ಕ್ಕೆ ಹೆಚ್ಚಳ ಮಾಡುವುದು ಒಂದಾಗಿದೆ. ಈ ಕುರಿತಂತೆ ಎಕ್ಸ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಸಿಎಂ ಸಿದ್ಧರಾಮಯ್ಯ, ಸರ್ಕಾರ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಅತ್ಯಂತ ಸಹಾನುಭೂತಿಯಿಂದ ಪರಿಗಣಿಸಿದೆ. ಅವರಿಗೆ ಸೇವಾನುಭವದ ಆಧಾರದಲ್ಲಿ 5,000 ರೂ. ಗಳಿಂದ 8000 ರೂ. ಗಳಷ್ಟು ಗೌರವಧನ ಹೆಚ್ಚಳ ಮಾಡುವ ಜೊತೆಗೆ ಕೆಲವು ಹೊಸ ಸೌಲಭ್ಯಗಳನ್ನು ನೀಡಲಾಗುವುದು ಎಂದಿದ್ದಾರೆ. ಅತಿಥಿ ಉಪನ್ಯಾಸಕರ ಬಗ್ಗೆ ನಮ್ಮ ಸರ್ಕಾರ ಮಾನವೀಯ ಕಾಳಜಿ ಹೊಂದಿದೆ. ಆದರೆ ಸೇವಾ ಭದ್ರತೆ ನೀಡಲು ಕಾನೂನು ತೊಡಕು ಇರುವುದರಿಂದ ಸಾಧ್ಯವಾಗುವುದಿಲ್ಲ. ವಿರೋಧ ಪಕ್ಷದ ನಾಯಕನಾಗಿದ್ದಾಗಲೂ ಅತಿಥಿ ಉಪನ್ಯಾಸಕರ ಪರವಾಗಿ ನಾನು ದನಿ ಎತ್ತಿ ವೇತನ ಹೆಚ್ಚಳಕ್ಕೆ ಒತ್ತಾಯಿಸಿದ್ದೆ. ಇದೀಗ ಎರಡೇ ವರ್ಷದೊಳಗೆ ನಮ್ಮ ಸರ್ಕಾರ…

Read More

ಹುಬ್ಬಳ್ಳಿ: ವಿವಿಧ ಪ್ರಕರಣಗಳಲ್ಲಿ ಬಂಧನಕ್ಕೆ ಒಳಗಾಗಿ ಜೈಲು ಸೇರಿದ್ದಂತ 1992ರ ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿ ಹಾಗೂ ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಜಾಮೀನಿನ ಬಳಿಕ ಇಂದು ಜೈಲಿನಿಂದ ಬಿಡುಗಡೆ ಮಾಡಲಾಗಿದೆ. 1992ರಲ್ಲಿ ನಡೆದಿದ್ದಂತ ಹುಬ್ಬಳ್ಳಿ ಗಲಭೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಲಾಗಿತ್ತು. ಆ ಬಳಿಕ ಜೈಲು ಸೇರಿದ್ದರು. ಅವರು ಜಾಮೀನಿಗಾಗಿ ಸಲ್ಲಿಸಿದ್ದಂತ ಅರ್ಜಿಯನ್ನು ಹುಬ್ಬಳ್ಳಿಯ 1ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ನಿನ್ನೆ ನಡೆಸಿತ್ತು. ಅಲ್ಲದೇ ಷರತ್ತು ಬದ್ಧ ಜಾಮೀನು ನೀಡಿ ಆದೇಶಿಸಿತ್ತು. ಈ ಹಿನ್ನಲೆಯಲ್ಲಿ ಹುಬ್ಬಳ್ಳಿಯ ಜೈಲಿನಿಂದ 1992ರ ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿ ಹಾಗೂ ಕರಸೇವಕ ಶ್ರೀಕಾಂತ್ ಪೂಜಾರಿ ಅವರನ್ನು ಬಿಡುಗಡೆ ಮಾಡಲಾಗಿದೆ. ಜೈಲಿನಿಂದ ಹೊರ ಬರುತ್ತಿದ್ದಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು. ನಾನು ರಾಮ ಮಂದಿರ ಉದ್ಘಾಟನೆಗೆ ಹೋಗುತ್ತೇನೆ. ನನಗೆ ವಾರೆಂಟ್ ಕೊಟ್ಟಿಲ್ಲ, ಸಮನ್ಸ್ ಕೊಟ್ಟು ಬಂದಿದ್ದರು.  ನನ್ನ ಮೇಲಿದ್ದ ಎಲ್ಲಾ ಕೇಸ್ ಗಳು ಖುಲಾಸೆಯಾಗಿದ್ದವು ಎಂಬುದಾಗಿ ಹೇಳಿದ್ದಾರೆ. https://kannadanewsnow.com/kannada/tunkur-international-airport/ https://kannadanewsnow.com/kannada/aditya-l-1-indias-first-sun-mission-reaches-final-destination-after-126-day-long-journey/

Read More

ಶಿವಮೊಗ್ಗ : ಭದ್ರಾ ಜಲಾಶಯದ ಎಡದಂಡ ನಾಲೆಗೆ ಜ.10 ರಿಂದ ಮತ್ತು ಬಲದಂಡ ನಾಲೆ ಜ.20 ರಿಂದ ನೀರು ಹರಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ತಿಳಿಸಿದರು. ಇಂದು ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಅಭಿವೃದ್ದಿ ಪ್ರಾಧಿಕಾರ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ 2023-24 ನೇ ಸಾಲಿನ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಅಧಿಕಾರಿಗಳು ಮತ್ತು ರೈತ ಮುಖಂಡರೊಂದಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು. ಎಡದಂಡ ನಾಲೆಗೆ ಜ.10 ರಿಂದ ನೀರು ಹರಿಸಲಾಗುತ್ತಿದ್ದು, ಆನ್ ಮತ್ತು ಆಫ್ ಮಾದರಿ ಅನುಸರಿಸಲಾಗುವುದು. ಜ.10 ರಿಂದ 16 ದಿನ ಆನ್ ಮತ್ತು 15 ದಿನ ಆಫ್, ನಂತರ 17 ದಿನ ಆನ್, 15 ದಿನ ಆಫ್, 18 ದಿನ ಆನ್ 15 ದಿನ ಆಫ್ ಮತ್ತು 20 ದಿನ ಆನ್, 15 ದಿನ ಆಫ್ ಇರುತ್ತದೆ. ಬಲದಂಡ ನಾಲೆಗೆ ಜ.20…

Read More

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಮೊದಲ ಸೌರ ಮಿಷನ್ ಆದಿತ್ಯ ಎಲ್ 1 ತನ್ನ ಗಮ್ಯಸ್ಥಾನವನ್ನು ತಲುಪಿದೆ. ಈ ಮೂಲಕ ಇಸ್ರೋದ ಮೊದಲ ಸೂರ್ಯ ಮಿಷನ್ ಯಶಸ್ವಿಯಾಗಿದೆ. ಇಂದು ಇಸ್ರೋದಿಂದ ಸೂರ್ಯನ ಶಿಕಾರಿಗಾಗಿ ಹೊರಟಿದ್ದಂತ ಆದಿತ್ಯ ಎಲ್.1 ಅನ್ನು ಅಂತಿಮ ಕಕ್ಷೆಗೆ ಸೇರ್ಪಡೆ ಮಾಡೋ ಕಾರ್ಯವನ್ನು ಸಂಜೆ 4 ಗಂಟೆಗೆ ನಡೆಸಲಾಯಿತು. ಅಂದುಕೊಂಡಂತೆ ಅಂತಿಮ ಕಕ್ಷೆಗೆ ಸೇರಿಸಲಾಗಿದೆ. ಜನವರಿ 6 ರಂದು ಸಂಜೆ 4 ಗಂಟೆಗೆ ಆದಿತ್ಯ-ಎಲ್ 1 ತನ್ನ ಎಲ್ 1 ಬಿಂದುವನ್ನು ತಲುಪಲಿದೆ ಮತ್ತು ಅದನ್ನು ಅಲ್ಲಿಯೇ ಉಳಿಸಿಕೊಳ್ಳಲು ನಾವು ಅಂತಿಮ ತಂತ್ರವನ್ನು ಮಾಡಲಿದ್ದೇವೆ ಎಂದು ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ಸೋಮವಾರ ಸುದ್ದಿ ಸಂಸ್ಥೆ ಎಎನ್ಐಗೆ ತಿಳಿಸಿದ್ದರು. ತನ್ನ ಅಂತಿಮ ಗಮ್ಯಸ್ಥಾನವನ್ನು ತಲುಪಿದ ನಂತರ, ಬಾಹ್ಯಾಕಾಶ ನೌಕೆಯು ಯಾವುದೇ ಗ್ರಹಣಗಳಿಲ್ಲದೆ ಸೂರ್ಯನನ್ನು ವೀಕ್ಷಿಸಲು ಸಾಧ್ಯವಾಗುತ್ತದೆ ಎಂದಿದ್ದರು. ಅಂದರಂತೆ ಇಂದು, ಇಸ್ರೋದ ಸೂರ್ಯ ಮಿಷನ್, ‘ಆದಿತ್ಯ ಎಲ್ 1’ 37 ಲಕ್ಷ ಕಿಲೋಮೀಟರ್ ದೂರವನ್ನು ಕ್ರಮಿಸಿ 126…

Read More

ಬೆಂಗಳೂರು: ಅತಿಥಿ ಉಪನ್ಯಾಸಕರಿಗೆ ಸೇವಾನುಭವದ ಆಧಾರದಲ್ಲಿ 5,000 ರೂ. ಗಳಿಂದ 8000 ರೂ. ಗಳಷ್ಟು ಗೌರವಧನ ಹೆಚ್ಚಳಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಒಪ್ಪಿಗೆ ಸೂಚಿಸಿದ್ದು ಮಾತ್ರವಲ್ಲದೆ ಇನ್ನಿತರ ಕೆಲವು ಸೌಲಭ್ಯಗಳನ್ನು ವಿಸ್ತರಿಸಿದ್ದಾರೆ. ಈ ಮೂಲಕ ರಾಜ್ಯದ ಅತಿಥಿ ಉಪನ್ಯಾಸಕರಿಗೆ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ. ಅವರು ಇಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮತ್ತು‌ ಮಾಜಿ MLC ಪುಟ್ಟಣ್ಣ ನೇತೃತ್ವದ ಅತಿಥಿ ಉಪನ್ಯಾಸಕರ ನಿಯೋಗದ ಜತೆ ಅವರ ಬೇಡಿಕೆಗಳ ಕುರಿತು ಚರ್ಚಿಸಿದರು. ಅತಿಥಿ ಉಪನ್ಯಾಸಕರ ಬಗ್ಗೆ ನಮ್ಮ ಸರ್ಕಾರ ಮಾನವೀಯ ಕಾಳಜಿ ಹೊಂದಿದೆ. ಆದರೆ ಸೇವಾ ಭದ್ರತೆ ನೀಡಲು ಕಾನೂನು ತೊಡಕು ಇರುವುದರಿಂದ ಸಾಧ್ಯವಾಗುವುದಿಲ್ಲ. ವಿರೋಧ ಪಕ್ಷದ ನಾಯಕನಾಗಿದ್ದಾಗಲೂ ಅತಿಥಿ ಉಪನ್ಯಾಸಕರ ಪರವಾಗಿ ತಾವು ದನಿ ಎತ್ತಿ ವೇತನ ಹೆಚ್ಚಳಕ್ಕೆ ಒತ್ತಾಯಿಸಿದ್ದನ್ನು ಸ್ಮರಿಸಿಕೊಂಡ ಮುಖ್ಯಮಂತ್ರಿಗಳು, ಇದೀಗ ಎರಡೇ ವರ್ಷದೊಳಗೆ ನಮ್ಮ ಸರ್ಕಾರ ಮತ್ತೆ ನಿಮ್ಮ ವೇತನ ಹೆಚ್ಚಳಕ್ಕೆ ಮುಂದಾಗಿದೆ. ಸರ್ಕಾರ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಅತ್ಯಂತ ಸಹಾನುಭೂತಿಯಿಂದ ಪರಿಗಣಿಸಿದೆ ಎಂದು ತಿಳಿಸಿದರು. ಐದು ವರ್ಷಕ್ಕಿಂತ…

Read More

ಬೆಂಗಳೂರು: ವಯೋ ಸಹಜ ಖಾಯಿಲೆಯಿಂದಾಗಿ ಕನ್ನಡದ ಖ್ಯಾತ ಜಾನಪದ ವಿದ್ವಾಂಸ ಪ್ರೊ.ಅಮೃತ ಸೋಮೇಶ್ವರ ಅವರು ಇಂದು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಇಂದು ಎಕ್ಸ್ ಮಾಡಿರುವಂತ ಅವರು, ಪ್ರಖ್ಯಾತ ಜಾನಪದ ವಿದ್ವಾಂಸ, ಸಂಸ್ಕೃತಿ ಚಿಂತಕ ಮತ್ತು ಶಿಷ್ಯರ ಮೆಚ್ಚಿನ ಗುರು ಪ್ರೊ.ಅಮೃತ ಸೋಮೇಶ್ವರ ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬ ಸದಸ್ಯರು ಮತ್ತು ಅಭಿಮಾನಿ ಬಳಗದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ. https://twitter.com/CMofKarnataka/status/1743553181236543943 ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೂಡ ಎಕ್ಸ್ ಮಾಡಿ, ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಸಾಹಿತಿ, ಯಕ್ಷಗಾನ ಪ್ರಸಂಗಕರ್ತ, ಕನ್ನಡ, ತುಳು ಭಾಷೆ ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದ ಸಮಾಜಮುಖಿ ಚಿಂತಕ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪ್ರೊ. ಅಮೃತ ಸೋಮೇಶ್ವರ ಅವರು ನಿಧನ ಹೊಂದಿದ ವಿಷಯ ತಿಳಿದು ಅತ್ಯಂತ ದುಃಖವಾಯಿತು ಎಂದಿದ್ದಾರೆ. ನೂರಾರು…

Read More

ಭೋಪಾಲ್: ಮಧ್ಯಪ್ರದೇಶದ ನೋಂದಣಿಯಾಗದ ಅನಾಥಾಶ್ರಮದಿಂದ ಗುಜರಾತ್, ಜಾರ್ಖಂಡ್ ಮತ್ತು ಇತರ ರಾಜ್ಯಗಳ 26 ಬಾಲಕಿಯರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಈ ಹುಡುಗಿಯರು ಎಲ್ಲಿದ್ದಾರೆಂದು ತಿಳಿದಿಲ್ಲ. ಅವರ ಪ್ರಸ್ತುತ ಸ್ಥಳಗಳ ಬಗ್ಗೆ ಮಾಹಿತಿಯ ಕೊರತೆಯನ್ನು ಅಧಿಕಾರಿಗಳು ಎದುರಿಸುತ್ತಿದ್ದಾರೆ. ಈ ನಡುವೆ ತನಿಖೆಗೆ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌವ್ಹಾಣ್ ಆಗ್ರಹಿಸಿದ್ದಾರೆ ಭೋಪಾಲ್ನ ಪರ್ವಾಲಿಯಾ ಸಡಕ್ ಪೊಲೀಸ್ ಠಾಣೆಯಲ್ಲಿ ಬಾಲನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆ, 2015 ರ ಸೆಕ್ಷನ್ಗಳ ಅಡಿಯಲ್ಲಿ ಮಕ್ಕಳ ಗೃಹದ ವ್ಯವಸ್ಥಾಪಕ ಅನಿಲ್ ಮೆಥ್ಯೂ ಅವರನ್ನು ಆರೋಪಿ ಎಂದು ಹೆಸರಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ಮನೆಯಲ್ಲಿ ನೋಂದಾಯಿತ 68 ಬಾಲಕಿಯರಲ್ಲಿ 6-18 ವರ್ಷದೊಳಗಿನ 26 ಬಾಲಕಿಯರು ಕಾಣೆಯಾಗಿದ್ದಾರೆ ಎಂದು ಎಫ್ಐಆರ್ನಲ್ಲಿ ತಿಳಿಸಲಾಗಿದೆ. ಬಾಲನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆ, 2015 ರ ಪ್ರಕಾರ ಮಕ್ಕಳ ಮನೆಯನ್ನು ನಡೆಸುತ್ತಿಲ್ಲ ಮತ್ತು ನೋಂದಾಯಿಸಲಾಗಿಲ್ಲ ಎಂದು ಎಫ್ಐಆರ್ನಲ್ಲಿ ತಿಳಿಸಲಾಗಿದೆ. ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್…

Read More