Author: kannadanewsnow09

ಬೆಂಗಳೂರು: ರಾಜ್ಯದ ಜನರ ಸಮಸ್ಯೆ ನಿವಾರಿಸೋ ನಿಟ್ಟಿನಲ್ಲಿ ಸಿಎಂ ಸಿದ್ಧರಾಮಯ್ಯ ಜನಸ್ಪಂದನ ಕಾರ್ಯಕ್ರಮ ನಡೆಸುತ್ತಿದ್ದಾರೆ. ಡಿಸಿಎಂ ಡಿ.ಕೆ ಶಿವಕುಮಾರ್ ಕೂಡ ಇದೇ ಕಾರ್ಯಕ್ರಮ ಮುಂದುವರೆಸಿದ್ದಾರೆ. ರಾಜ್ಯದ ವಿವಿಧೆಡೆ ಸಚಿವರು ಕೂಡ ಜನಸ್ಪಂದನ ಕಾರ್ಯಕ್ರಮ ನಡೆಸುತ್ತಿದ್ದಾರೆ. ಇದರ ನಡುವೆ ರಾಜ್ಯದ ಜನರ ಸಮಸ್ಯೆಯನ್ನು ಕುಳಿತಲ್ಲೇ ಪರಿಹಾರಿಸೋ ನಿಟ್ಟಿನಲ್ಲಿಯೂ ಸರ್ಕಾರ ಕ್ರಮ ಕೈಗೊಂಡಿದೆ. ಇದಕ್ಕಾಗಿ ಜಸ್ಟ್ ಒಂದು ಟ್ವಿಟ್ ಮಾಡಿದರೇ ಸಾಕು. ಕ್ಷಣಾರ್ಧದಲ್ಲಿ ನಿಮ್ಮ ಸಮಸ್ಯೆಗೆ ಪರಿಹಾರ ದೊರೆಯಲಿದೆ. ಆ ಬಗ್ಗೆ ಮುಂದೆ ಓದಿ. ಮುಖ್ಯಮಂತ್ರಿ ಕಚೇರಿಯ (ಸಿಎಂಒ) ಸಾರ್ವಜನಿಕ ಕುಂದುಕೊರತೆ ಕೋಶದ ಹೊಸ ಉಪಕ್ರಮವು ನಾಗರಿಕರಿಂದ ಮೆಚ್ಚುಗೆಯನ್ನು ಗಳಿಸುತ್ತಿದೆ. ಏಕೆಂದರೆ ಸುಮಾರು ಒಂದು ವರ್ಷದ ಹಿಂದೆ ಎತ್ತಲಾದ ಮತ್ತು ಸಂಬಂಧಪಟ್ಟ ಇಲಾಖೆಗಳು ಪರಿಹರಿಸದ ದೂರುಗಳನ್ನು ಈಗ ಕೆಲವೇ ಗಂಟೆಗಳಲ್ಲಿ ಪರಿಹರಿಸಲಾಗುತ್ತಿದೆ. ಈ ಉಪಕ್ರಮವು ಸಾಮಾಜಿಕ ಮಾಧ್ಯಮಗಳು, ಪತ್ರಗಳು, ಕರೆಗಳು ಮತ್ತು ಇಮೇಲ್ಗಳಂತಹ ವಿವಿಧ ವಿಧಾನಗಳ ಮೂಲಕ ಸಾರ್ವಜನಿಕರಿಂದ ಕುಂದುಕೊರತೆಗಳನ್ನು ಸಂಗ್ರಹಿಸುತ್ತದೆ ಮತ್ತು ತ್ವರಿತ ಪರಿಹಾರಕ್ಕಾಗಿ ಅವುಗಳನ್ನು ಸಂಬಂಧಿತ ಇಲಾಖೆಗಳಿಗೆ ಕಳುಹಿಸಿ, ಪರಿಹರಿಸೋ ನಿಟ್ಟಿನಲ್ಲಿ…

Read More

ಇಂದು ಫೆ.16ರಂದು ರಥ ಸಪ್ತಮೀ. ‌ ಮಾಘ ಮಾಸ ವಿಶೇಷ ಪೌರಾಣಿಕ ಮಹತ್ವವನ್ನು ಹೊಂದಿದೆ. ಪೂಜೆ ಮತ್ತು ದಾನದ ದೃಷ್ಟಿಕೋನದಿಂದ ವಿಶೇಷ ಮಹತ್ವವನ್ನು ಹೊಂದಿರುವ ಅನೇಕ ಶುಭ ದಿನಗಳು ಈ ತಿಂಗಳಲ್ಲಿವೆ. ಅದೇ ಅನುಕ್ರಮದಲ್ಲಿ, ವಸಂತ ಪಂಚಮಿ ಮೊದಲು ಮತ್ತು ನಂತರ ಬರುವ ಅಚಲ ಸಪ್ತಮಿ ತಿಥಿಯನ್ನು ಧಾರ್ಮಿಕ ದೃಷ್ಟಿಯಿಂದ ಬಹಳ ವಿಶೇಷವೆಂದು ಪರಿಗಣಿಸಲಾಗುತ್ತದೆ. ಅಚಲಾ ಸಪ್ತಮಿಯನ್ನು ಕೆಲವು ಸ್ಥಳಗಳಲ್ಲಿ ರಥ ಸಪ್ತಮಿ, ಮಾಘ ಸಪ್ತಮಿ ಎಂದು ಆಚರಿಸಲಾಗುತ್ತದೆ. ​ ಪುರಾಣಗಳಲ್ಲಿ ರಥ ಸಪ್ತಮಿ ಮಾಘ ಮಾಸದ ಶುಕ್ಲ ಪಕ್ಷದ ಸಪ್ತಮಿ ತಿಥಿಯನ್ನು ಅಚಲ ಸಪ್ತಮಿ ಎಂದು ಕರೆಯಲಾಗುತ್ತದೆ. ಮಾಘ ತಿಂಗಳ ಸಪ್ತಮಿ ಆಗಿರುವುದರಿಂದ ಇದನ್ನು ಮಾಘಿ ಸಪ್ತಮಿ ಎಂದೂ ಕರೆಯುತ್ತಾರೆ. ಪೌರಾಣಿಕ ನಂಬಿಕೆಗಳ ಪ್ರಕಾರ, ಈ ದಿನ ಭಗವಾನ್ ಸೂರ್ಯದೇವನು ತನ್ನ ದೈವಿಕ ಬೆಳಕಿನಿಂದ ಇಡೀ ವಿಶ್ವವನ್ನು ಬೆಳಗಿಸುತ್ತಾನೆ. ಆದ್ದರಿಂದ, ಈ ದಿನ ಸೂರ್ಯ ದೇವರನ್ನು ಪೂಜಿಸುವುದು ಬಹಳ ಶುಭವೆಂದು ಪರಿಗಣಿಸಲಾಗಿದೆ. ಅಚಲ ಸಪ್ತಮಿಯನ್ನು ರಥ ಆರೋಗ್ಯ ಸಪ್ತಮಿ, ಭಾನು…

Read More

ಬೆಂಗಳೂರು: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ -2024 ವನ್ನು ಗುರುವಾರ ಕರ್ನಾಟಕ ವಿಧಾನ ಸಭೆಯು ಅಂಗೀಕರಿಸಿತು. ಸದನದಲ್ಲಿ ವಿಧೇಯಕವನ್ನು ಕುರಿತು ಮಾತನಾಡಿದ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರು ವಿಧೇಯಕದ 17ನೇ ಪ್ರಕರಣದಲ್ಲಿ (06) ರಾಜ್ಯ ಸರ್ಕಾರದ ಇಲಾಖೆಗಳು, ಉದ್ಯಮಗಳು, ಸ್ವಾಯತ್ತ ಸಂಸ್ಥೆಗಳು, ಸಹಕಾರ ಮತ್ತು ಸಾರ್ವಜನಿಕ ಉದ್ಯಮಗಳು, ಬ್ಯಾಂಕುಗಳು, ಇತರ ಹಣಕಾಸು ಸಂಸ್ಥೆಗಳು, ಖಾಸಗಿ ಕೈಗಾರಿಕೆಗಳು ಮತ್ತು ವಿಶ್ವವಿದ್ಯಾಲಯಗಳ ಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆಯನ್ನು ಬಳಸಬೇಕು. ನಾಮಫಲಕಗಳ ಒಟ್ಟಾರೆ ವಿಸ್ತೀರ್ಣದಲ್ಲಿ ಕನ್ನಡ ಭಾಷೆಯನ್ನು ಮೇಲ್ಭಾಗದಲ್ಲಿ ಶೇ.60 ರಷ್ಟು ಪ್ರದರ್ಶಿಸುವುದು ಕಡ್ಡಾಯ ಮಾಡಲಾಗಿದೆ. ಶೇ.40 ರಷ್ಟು ಇತರ ಭಾಷೆಯನ್ನು ಕೆಳಭಾಗದಲ್ಲಿ ಬಳಸಬಹುದಾಗಿದೆ. ಈ ಹಿಂದೆ ಇದನ್ನು ಶೇ.50:50 ಎಂದು ಆದೇಶ ಹೊರಡಿಸಲಾಗಿತ್ತು ಎಂದು ವಿವರಿಸಿದರು. ಇದಲ್ಲದೆ, ವಿಧೇಯಕದ 07 (02) ರಲ್ಲಿ ಜಾರಿ ಸಮಿತಿಯಲ್ಲಿ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರನ್ನು ಸಂಚಾಲಕರೆಂದು ಯೋಜಿಸಲಾಗಿತ್ತು. ಆದರೆ, ಕನ್ನಡ ಮತ್ತು…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಮುಖ್ಯಮಂತ್ರಿಗಳ ವಿಶೇಷ ಅನುದಾನದ ಅಡಿಯಲ್ಲಿ ರಾಜ್ಯಾಧ್ಯಂತ ಸಮುದಾಯ ಭವನ ನಿರ್ಮಾಣಕ್ಕಾಗಿ ಅನುದಾನ ಮಂಜೂರು ಮಾಡಿ ಆದೇಶಿಸಿದೆ. ಈ ಕುರಿತಂತೆ ಹಿಂದುಳಿದ ವರ್ಗಗಳ ಕಲ್ಯಾಣ ಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಹಿಂದುಳಿದ ಕಲ್ಯಾಣ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಶಾಸಕರುಗಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಸಮುದಾಯ ಭವನ ನಿರ್ಮಾಣಕ್ಕಾಗಿ ಅನುದಾನ ಮಂಜೂರು ಮಾಡಿರೋದಾಗಿ ತಿಳಿಸಿದ್ದಾರೆ. ಬಸವರಾಜ ರಾಯರೆಡ್ಡಿ ಅವರ ಯಲಬುರ್ಗಾ ವಿಧಾನಸಭಾ ಕ್ಷೇತ್ರಕ್ಕೆ 13 ಕೋಟಿ, ಅಲ್ಲಮಪ್ರಭು ಪಾಟೀಲ್ ಅವರ ಕಲಬುರ್ಗಿ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ 5 ಕೋಟಿ, ಡಿ.ಸುಧಾಕರ್ ಹಿರಿಯೂರು ಕ್ಷೇತ್ರಕ್ಕೆ 1 ಕೋಟಿ, ಹಂಪನಗೌಡ ಬಾದರ್ಲಿಯ ಸಿಂಧನೂರು ಕ್ಷೇತ್ರಕ್ಕೆ 5 ಕೋಟಿ, ಹೆಚ್.ಕೆ ಪಾಟೀಲ್ ಅವರ ಗದಗ ವಿಧಾನಸಭಾ ಕ್ಷೇತ್ರಕ್ಕೆ 10 ಕೋಟಿ ಸೇರಿದಂತೆ ವಿವಿಧ ಶಾಸಕರು, ಸಚಿವರ ಕ್ಷೇತ್ರಗಳಿಗೆ ಸಮುಧಾಯ ಭವನ ನಿರ್ಮಿಸೋದಕ್ಕೆ ರಾಜ್ಯ ಸರ್ಕಾರ ಅನುದಾನ ಮಂಜೂರು ಮಾಡಿ ಆದೇಶಿಸಿದೆ.

Read More

ಬೆಂಗಳೂರು: ಯಾವುದೇ ಪ್ರಮಾಣಪತ್ರವನ್ನು ಆ ಸಂಬಂಧಿತ ಪ್ರಾಧಿಕಾರದಿಂದ ರದ್ದುಗೊಳಿಸಬೇಕು. ಆದರೇ ಪ್ರಮಾಣಪತ್ರವನ್ನು ರದ್ದುಗೊಳಿಸದ ಹೊರತು ಅದನ್ನು ಪ್ರಶ್ನಿಸುವ ಅಧಿಕಾರ ಯಾವುದೇ ಪ್ರಾಧಿಕಾರಕ್ಕೆ ಇಲ್ಲ ಎಂಬುದಾಗಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಅಲ್ಲದೇ ಕಾನೂನು ಪದವಿ ಪ್ರಮಾಣ ಪತ್ರ ಪ್ರಶ್ನಿಸುವ ಹಕ್ಕು ವಕೀಲರ ಪರಿಷತ್ತಿಗೆ ಇಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದೆ. ಬೀದರ್ ನಲ್ಲಿನ ಸಿವಿಲ್ ನ್ಯಾಯಾಲಯದಲ್ಲಿ ಟೈಪಿಸ್ಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಂತ ಶೆಲ್ಹಾನ್ ಎಂಬುವರು, ಕರ್ತವ್ಯದ ವೇಳೆಯಲ್ಲೇ ಕೋರ್ಟ್ ಅನುಮತಿ ಪಡೆದು ಎಲ್ಎಲ್ ಬಿ ಮುಗಿಸಿದ್ದರು. ಬೀದರ್ ಸಿವಿಲ್ ನ್ಯಾಯಾಲಯದ ಸಹಾಯ ರಿಜಿಸ್ಟ್ರಾರ್ ಆಗಿ ನಿವೃತ್ತಗೊಂಡ ಬಳಿಕ, 2018ರಲ್ಲಿ ಅವರು ವಕೀಲಿಕೆ ಮಾಡೋದಕ್ಕಾಗಿ ನೋಂದಣಿಗೆ ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಕೀಲರ ಪರಿಷತ್ ತರಗತಿಗಳಿಗೆ ಹಾಜರಾಗದ ದಾಖಲೆಗಳನ್ನು ತೋರಿಸಿಲ್ಲ ಎನ್ನುವ ಕಾರಣಕ್ಕೆ, ವಕೀಲಿಕೆಯ ಸನ್ನದ್ದು ನೋಂದಣಿಗೆ ನಿರಾಕರಿಸಿತ್ತು. ಈ ವಕೀಲರ ಪರಿಷತ್ ನಿರ್ಧಾರವನ್ನು ಶೆಲ್ಹಾನ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿ ಪ್ರಶ್ನಿಸಿದ್ದರು. ಈ ಅರ್ಜಿಯನ್ನು ನ್ಯಾಯಮೂರ್ತಿ ಅಶೋಕ್…

Read More

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಂತ ಗ್ರಂಥಾಲಯ ಮೇಲ್ವಿಚಾರಕರಿಗೆ ಸರ್ಕಾರ ಭರ್ಜರಿ ಸಿಹಿಸುದ್ದಿಯನ್ನು ನೀಡಿದೆ. ಅದೇ ರಾಜ್ಯ ಸರ್ಕಾರದಿಂದ ಕನಿಷ್ಠ ವೇತನ, ವಾರ್ಷಿಕ ತುಟ್ಟಿಭತ್ಯೆಯನ್ನು ಜಾರಿಗೊಳಿಸಿ ಆದೇಶಿಸಿದೆ. ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಆದೇಶ ಹೊರಡಿಸಲಾಗಿದ್ದು, ಕಾರ್ಮಿಕ ಇಲಾಖೆಯಿಂದ ಜುಲೈ.28, 2022ರಂದು ಕನಿಷ್ಠ ವೇತನ ಪರಿಷ್ಕರಣೆ ಮಾಡಿದೆ. ಅದರಂತೆ ರಾಜ್ಯ ಸರ್ಕಾರದಿಂದ ಗ್ರಾಮ ಪಂಚಾಯ್ತಿ ಗ್ರಾಂಥಾಲಯ ಮೇಲ್ವಿಚಾರಕರಿಗೆ ಕನಿಷ್ಠ ವೇತನ ಹಾಗೂ ವಾರ್ಷಿಕ ವ್ಯತ್ಯಾಸವಾಗು ತುಟ್ಟಿಭತ್ಯೆಯನ್ನು ಪಾವತಿಸುವಂತೆ ಸೂಚಿಸಲಾಗಿದೆ. ಕನಿಷ್ಠ ವೇತನದ ಅನುಸಾರವಾಗಿ ಗ್ರಾಮ ಪಂಚಾಯ್ತಿ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗೆ ಸೇರಿದವರಿಗೆ ಈಗ ವ್ಯತ್ಯಾಸ ಉಂಟಾಗುತ್ತಿದೆ. ಈ ಹಿನ್ನಲೆಯಲ್ಲಿ ಗ್ರಂಥಾಲಯ ಮೇಲ್ವಿಚಾರಕರಿಗೆ 16,382 ರೂ.ಗಳನ್ನು ಕನಿಷ್ಠ ವೇತನ ನಿಗದಿಪಡಿಸಿದೆ. ಅಲ್ಲದೇ ವಾರ್ಷಿಕ ವ್ಯತ್ಯಾಸವಾಗುವ ತುಟ್ಟಿ ಭತ್ಯೆಯನ್ನು ಪಾವತಿಸಲು ಆದೇಶಿಸಲಾಗಿದೆ. ಇನ್ನೂ 2023-24ನೇ ಸಾಲಿಗೆ ಗ್ರಂಥಾಲಯ ಮೇಲ್ವಿಚಾರಕರಿಗೆ ಮಾಸಿಕ ಕನಿಷ್ಠ ವೇತನ 16,382 ಮತ್ತು ವ್ಯತ್ಯಾಸವಾಗುವ ತುಟ್ಟಿ ಭತ್ಯೆ 1,542 ರೂ. ಸೇರಿ 17,924 ರೂ,ಗಳನ್ನು ಪಾವತಿಸುವಂತೆ…

Read More

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 2024-25ನೇ ಸಾಲಿನ ರಾಜ್ಯ ಬಜೆಟ್ ಮಡಿಸಲಿದ್ದಾರೆ. ಗ್ಯಾರಂಟಿ ಯೋಜನೆಗಳ ಮುಂದುವರಿಕೆಗೆ ಸಂಪನ್ಮೂಲ ಕ್ರೂಢೀಕರಣದೊಂದಿಗೆ, ಅಭಿವೃದ್ಧಿಯ ಕನಸಿನ ಅಯವ್ಯಯವನ್ನು ಮಂಡನೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗಾಗಿ ರಾಜ್ಯದ ಜನತೆಯ ಚಿತ್ತ, ಇಂದಿನ 2024-25ನೇ ಸಾಲಿನ ಅಯವ್ಯಯದತ್ತ ನೆಟ್ಟಿದೆ. ಕಳೆದ ವರ್ಷ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 3.25 ಲಕ್ಷ ಕೋಟಿ ಬೃಹತ್ ಗಾತ್ರದ ಬಜೆಟ್ ಮಂಡಿಸಿದ್ದರು. ಇಂದು ಮಂಡಿಸಲಿರುವಂತ ಅಯವ್ಯಯದ ಗಾತ್ರ 3.80 ಲಕ್ಷ ಕೋಟಿ ರೂಪಾಯಿಯ ಬೃಹತ್ ಗಾತ್ರವನ್ನು ದಾಟುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇಂದು ಬೆಳಿಗ್ಗೆ 10.15ಕ್ಕೆ ವಿಧಾನಸಭೆಯಲ್ಲಿ ತಮ್ಮ ಚೊಚ್ಚಲ 2024-25ನೇ ಸಾಲಿನ ಬಜೆಟ್ ಅನ್ನು ಸಿಎಂ ಸಿದ್ಧರಾಮಯ್ಯ ಸತತ 15ನೇ ಬಾರಿಗೆ ಮಂಡಿಸಲಿದ್ದಾರೆ. ವಿಧಾನಸಭಾ ಚುನಾವಣೆಯ ವೇಳೆಯಲ್ಲಿ ಘೋಷಿಸಿದ್ದಂತ 5 ಗ್ಯಾರಂಟಿಗಳನ್ನು ಜಾರಿಗೊಳಿಸಿದ ನಂತ್ರ, ಅವುಗಳನ್ನು ಮುಂದುವರೆಸೋದಕ್ಕಾಗಿ ಸಂಪನ್ಮೂಲ ಕ್ರೂಢೀಕರಣದತ್ತಲೂ ಬಜೆಟ್ ನಲ್ಲಿ ಗಮನ ಹರಿಸಲಿದ್ದಾರೆ ಎನ್ನಲಾಗುತ್ತಿದೆ. ಒಂದೆಡೆ ಕೇಂದ್ರದಿಂದ ಅನುದಾನ ತಾರತಮ್ಯ. ತೆರಿಗೆ ಪಾಲಿನ ಕಡಿತ, ರಾಜ್ಯ ತೆರಿಗೆ…

Read More

ಬೆಂಗಳೂರು: ರಾಜ್ಯದಲ್ಲಿ ಹೊಸ ಜಿಲ್ಲೆಗಳ ಉದಯಕ್ಕೆ ನಾಳೆ ರಾಜ್ಯ ಬಜೆಟ್ ನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನಾಂದಿ ಹಾಡಲಿದ್ದಾರೆ ಎನ್ನಲಾಗುತ್ತಿದೆ. ಬೆಳಗಾವಿ ಹಾಗೂ ತುಮಕೂರು ಜಿಲ್ಲೆಯನ್ನು ವಿಭಜಿಸಿ ಹೊಸ ಜಿಲ್ಲೆಗಳನ್ನು ಘೋಷಣೆ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತ ಫೆಬ್ರವರಿ.8ರಂದು ರಾಜ್ಯ ಸರ್ಕಾರ ಹೊರಡಿಸಿರುವಂತ ಸುತ್ತೋಲೆ ಈಗ ಚರ್ಚೆಗೆ ಗ್ರಾಸವಾಗಿದೆ. ಅದರಲ್ಲಿ ಅಸ್ತಿತ್ವದಲ್ಲಿರುವ ಜಿಲ್ಲೆಗಳ ಮಿತಿ ಪುನರ್ ರಚಿಸುವ ಬಗ್ಗೆ ಉಲ್ಲೇಖಿಸಲಾಗಿದೆ. ಬೆಳಗಾವಿ ಹಾಗೂ ತುಮಕೂರು ಜಿಲ್ಲೆಯ ಹೆಸರು ಉಲ್ಲೇಖ ಮಾಡಲಾಗಿದೆ. ನಾಳೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಡಿಸುತ್ತಿರುವಂತ ಬಜೆಟ್ ನಲ್ಲಿ ಚಿಕ್ಕೋಡಿ, ಗೋಕಾಕ್ ಜಿಲ್ಲೆಗಳನ್ನು ಹೊಸ ಜಿಲ್ಲೆಯಾಗಿ ಘೋಷಣೆ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಅಂದಹಾಗೇ ರಾಜ್ಯದಲ್ಲಿ ದೊಡ್ಡ ಜಿಲ್ಲೆಗಳು ಎಂಬುದಾಗಿ ಬೆಳಗಾವಿ ಹಾಗೂ ತುಮಕೂರು ಕರೆಯಲಾಗುತ್ತಿದೆ. ಈ ಜಿಲ್ಲೆಗಳನ್ನು ವಿಭಜಿಸಿ ಹೊಸ ಜಿಲ್ಲೆಗಳನ್ನು ಘೋಷಣೆ ಮಾಡಲು ಮುಹೂರ್ತ ಫಿಕ್ಸ್ ಆಗಿದೆ ಎಂದು ಹೇಳಲಾಗುತ್ತಿದೆ. ಆ ಬಗ್ಗೆ ನಾಳೆ ಅಧಿಕೃತ ಮಾಹಿತಿ ಹೊರ ಬೀಳುವ ಸಾಧ್ಯತೆ ಇದೆ. https://kannadanewsnow.com/kannada/good-news-for-those-who-have-applied-for-new-bpl-apl-cards-minister-muniyappa-announces-that-cards-will-be-issued-from-april-1/ https://kannadanewsnow.com/kannada/good-news-for-transport-employees-here-are-the-details-of-all-private-hospitals-recognized-by-the-state-government/

Read More

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿಯನ್ನು ಜನರಿಗೆ ವಿತರಣೆ ಮಾಡುವಂತ ಘೋಷಣೆ ಮಾಡಿತ್ತು. ಅದಕ್ಕೆ ಅಕ್ಕಿ ಕೊಡಿ ಅಂತ ಕೇಂದ್ರ ಸರ್ಕಾರವನ್ನು ಕೇಳಿತ್ತು. ಆದ್ರೇ ಅಕ್ಕಿ ಇಲ್ಲ ಎಂದ ಕೇಂದ್ರ ಸರ್ಕಾರ, ಈಗ ಭಾರತ್ ಬ್ರ್ಯಾಂಡ್ ಹೆಸರಲ್ಲಿ ಮಾರುತ್ತಿದೆ ಎಂಬುದಾಗಿ ಸಚಿವ ದಿನೇಶ್ ಗುಂಡೂರಾವ್ ವಾಗ್ಧಾಳಿ ನಡೆಸಿದ್ದಾರೆ. ಈ ಕುರಿತಂತೆ ವಿಧಾನಸಭೆಯಲ್ಲಿ ಮಾತನಾಡಿದಂತ ಅವರು, ಅಕ್ಕಿಯನ್ನು ಕೇಂದ್ರ ಸರ್ಕಾರ 29ರೂಗೆ ಮಾರಾಟ ಮಾಡೋದಕ್ಕೆ ಇಟ್ಟಿದದಾರೆ. ಆದರೇ ಕೇಂದ್ರ ಸರ್ಕಾರ ಸ್ವಲ್ಪ ಬುದ್ಧಿವಂತಿಕೆಯಿಂದ ಯೋಚನೆ ಮಾಡಿದ್ದರೇ ನಾವೇ 34 ರೂಪಾಯಿಗೆ ತೆಗೆದುಕೊಳ್ಳುತ್ತೇವೆ ಅಂತ ಹೇಳಿದ್ದೆವು. ಈಗ ಮಾರಾಟ ಮಾಡುವುದಕ್ಕಿಂತ 5 ರೂ ಹೆಚ್ಚುಕೊಟ್ಟು ಖರೀದಿಗೆ ಪ್ರಸ್ತಾವನೆ ಕಳುಹಿಸಿದ್ದೆವು ಎಂದರು. ನಮಗೆ ಅಕ್ಕಿ ಕೊಡುವುದಕ್ಕೆ ಕೇಂದ್ರ ಸರ್ಕಾರ ಮುಂದೆ ಬರಲಿಲ್ಲ. ಈಗ ಮಾರುಕಟ್ಟೆಯಲ್ಲಿ 29 ರೂ.ಗೆ ಅಕ್ಕಿಯನ್ನು ಭಾರತ್ ಬ್ರ್ಯಾಂಡ್ ಹೆಸರಿನಲ್ಲಿ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಕೇಂದ್ರ ಸರ್ಕಾರ ಯಾವ ರೀತಿಯಾಗಿ ಯೋಜನೆ ಮಾಡುತ್ತಿದೆ ಎಂಬುದು ಗೊತ್ತಾಗುತ್ತದೆ ಎಂದರು.…

Read More

ಬೆಂಗಳೂರು: ಐದು ಗ್ಯಾರಂಟಿಗಳ ಪ್ರಚಾರ ಮತ್ತು ಸಮೀಕ್ಷೆಗಾಗಿ ರಾಜ್ಯ ಕಾಂಗ್ರೆಸ್ ಸರಕಾರ ಜನರ ತೆರಿಗೆ ಹಣವನ್ನು ಮನಸೋ ಇಚ್ಛೆ ಪೋಲು ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ. ವಿಧಾನಸಭೆಯಲ್ಲಿ ಗುರುವಾರ ರಾಜ್ಯಪಾಲರ ಭಾಷಣಾ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು; ಗ್ಯಾರಂಟಿಗಳ ಪ್ರಚಾರಕ್ಕೆ ಕೋಟ್ಯಂತರ ರೂಪಾಯಿ ಸುರಿಯುತ್ತಿರುವ ಸರಕಾರವು, ಬೇಕು ಬೇಕಾದವರಿಗೆ, ಶಾಸಕರ ಕುಟುಂಬಕ್ಕೆ ಸಮೀಕ್ಷೆಯ ಹೆಸರಿನಲ್ಲಿ ಹಣ ಕೊಟ್ಟಿದೆ ಎಂದು ದೂರಿದರು. ʼದ ಪಾಲಸಿ ಪ್ರಂಟ್‌ʼ ಎನ್ನುವ ದಿಕ್ಕಿಲ್ಲದ ಸಂಸ್ಥೆಗೆ ಸಮೀಕ್ಷೆ ಮಾಡುವುದಕ್ಕೆ 7.20 ಕೋಟಿ ರೂ. ಮೊತ್ತದ ಗುತ್ತಿಗೆ ಕೊಡಲಾಗಿದೆ. ಆದರೆ, ಕಂಪನಿಯ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಅದರ ಹಿಂದೆ ಮುಂದೆ ಯಾರಿದ್ದಾರೆ ಎನ್ನುವುದೂ ತಿಳಿದಿಲ್ಲ. ಆದರೂ, ಸರಕಾರ ಇಷ್ಟು ಪ್ರಮಾಣದಷ್ಟು ಹಣವನ್ನು ಆ ಕಂಪನಿಗೆ ಕೊಟ್ಟಿದೆ. ಹಾಗಾದರೆ, ಆ ಕಂಪನಿ ಯಾರದು? ಎಂದು ಮಾಜಿ ಮುಖ್ಯಮಂತ್ರಿಗಳು ಪ್ರಶ್ನಿಸಿದರು. ʼದ ಪಾಲಸಿ ಫ್ರಂಟ್ʼ ಸಲ್ಲಿಸಿದ ಪ್ರಸ್ತಾವನೆಗೆ ಒಂದೇ ದಿನದಲ್ಲಿ…

Read More