Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಸಂಬಂಧ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಅತಿಥಿ ಉಪನ್ಯಾಸಕರ ನಿಯೋಗ ಭೇಟಿ ಮಾಡಿ, ಬೇಡಿಕೆಯ ಮನವಿ ಸಲ್ಲಿಸಿತ್ತು. ಅಲ್ಲದೇ ಈ ಸಂಬಂಧ ಮಹತ್ವದ ಚರ್ಚೆಯನ್ನು ಅವರೊಂದಿಗೆ ಮಾಡಿತ್ತು. ಇಂದಿನ ಸಭೆಯಲ್ಲಿ ಅತಿಥಿ ಉಪನ್ಯಾಸಕರ ಗೌರವಧನವನ್ನು 5,000ದಿಂದ 8,000ಕ್ಕೆ ಹೆಚ್ಚಳ ಮಾಡೋದಕ್ಕೆ ಸಿಎಂ ಸಿದ್ಧರಾಮಯ್ಯ ಸಮ್ಮತಿಸಿದ್ದಾರೆ. ಅಲ್ಲದೇ ಕೆಲ ಬೇಡಿಕೆ ಈಡೇರಿಕೆಗೂ ಭರವಸೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಅತಿಥಿ ಉಪನ್ಯಾಸಕರು ಮುಷ್ಕರವನ್ನು ವಾಪಾಸ್ ಪಡೆದಿರೋದಾಗಿ ತಿಳಿದು ಬಂದಿದೆ. ಅತಿಥಿ ಉಪನ್ಯಾಸಕರ ಬೇಡಿಕೆ ಕುರಿತಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ,ಉನ್ನತ ಶಿಕ್ಷಣ ಸಚಿವ ಡಾಕ್ಟರ್ ಎಂ ಸಿ ಸುಧಾಕರ್ ಹಾಗೂ ಉನ್ನತ ಅಧಿಕಾರಿಗಳ ಸಭೆಯಲ್ಲಿ ಅತಿಥಿ ಉಪನ್ಯಾಸಕರ ಸಂಘಟನೆಗಳ ಮುಖಂಡರೊಂದಿಗೆ ನಡೆದ ಚರ್ಚೆಯ ನಂತರ ಸರ್ಕಾರ ಕೈಗೊಂಡ ನಿರ್ಧಾರಗಳು ಹೀಗಿವೆ. 1)ಮಹಿಳಾ ಅತಿಥಿ ಉಪನ್ಯಾಸಕರಿಗೆ ಇದೇ ಜನವರಿ ತಿಂಗಳಿನಿಂದ ಜಾರಿಗೆ ಬರುವಂತೆ ಮೂರು ತಿಂಗಳ ಕಾಲ ಹೆರಿಗೆ ರಜೆಯನ್ನು ಸಂಬಳ ಸಹಿತ ನೀಡಲು ನಿರ್ಧರಿಸಲಾಗಿದೆ. 2)…
ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೋವಿಡ್ ಸೋಂಕಿನ ಸಂಖ್ಯೆ ಏರಿಕೆಯಾಗಿದೆ. ಇಂದು 297 ಜನರಿಗೆ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಹೀಗಾಗಿ ಸಕ್ರೀಯ ಸೋಂಕಿತರ ಸಂಖ್ಯೆ 1,136ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ( Karnataka Health and Family Welfare Department ) ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಕಳೆದ 24 ಗಂಟೆಯಲ್ಲಿ RTPC ಮೂಲಕ 6,548 ಹಾಗೂ RAT ಮೂಲಕ 808 ಸೇರಿದೆತ 7,356 ಮಂದಿಯನ್ನು ಕೋವಿಡ್ ಸೋಂಕು ಪತ್ತೆ ಪರೀಕ್ಷೆಗೆ ( Covid19 Test ) ಒಳಪಡಿಸಲಾಗಿದೆ ಅಂತ ತಿಳಿಸಿದೆ. ಕಳೆದ 24 ಗಂಟೆಯಲ್ಲಿ ಪರೀಕ್ಷೆಗೆ ಒಳಪಡಿಸಲಾಗದಂತ 7,356ರಲ್ಲಿ ಬೆಂಗಳೂರು ನಗರ 171, ಬಾಗಲಕೋಟೆ 05, ಬಳ್ಳಾರಿ 06, ಬೆಂಗಳೂರು ಗ್ರಾಮಾಂತರ 12, ಚಾಮರಾಜನಗರ 02, ಚಿಕ್ಕಬಳ್ಳಾಪುರ 05, ಚಿತ್ರದುರ್ಗ 05, ದಕ್ಷಿಣ ಕನ್ನಡ 06, ದಾವಣಗೆರೆ 01, ಧಾರವಾಡ 08, ಗದಗ 02,…
ಬೆಂಗಳೂರು: ಮುಂಗಾರಿನಲ್ಲಿ ಬಂದ ಬರಕ್ಕೆ ಸಂಕ್ರಾಂತಿಯಲ್ಲಿ ಬಿಡಿಗಾಸು ಪರಿಹಾರವನ್ನು ರಾಜ್ಯ ಸರ್ಕಾರ ನೀಡಿದೆ ಎಂಬುದಾಗಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಈ ಕುರಿತಂತೆ ಇಂದು ಎಕ್ಸ್ ಮಾಡಿರೋ ಅವರು, ಕಳೆದ ವರ್ಷ ಜೂನ್ ನಲ್ಲಿ ಮುಂಗಾರು ಮಳೆ ಕೈಕೊಟ್ಟಾಗ ಶುರುವಾದ ಬರಕ್ಕೆ 7 ತಿಂಗಳು ಕಾಲ ಕೊಡಲೋ ಬೇಡವೋ ಎಂದು ಮೀನ-ಮೇಷ ಎಣಿಸಿ ಕಡೆಗೆ ‘ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತೆ’ ಕೇವಲ ₹105 ಕೋಟಿ ಬಿಡುಗಡೆ ಮಾಡಿದೆ ಈ ರೈತ ವಿರೋಧಿ ಕಾಂಗ್ರೆಸ್ ಸರ್ಕಾರ ಎಂದು ಗುಡುಗಿದ್ದಾರೆ. ನಾನು ಕಂದಾಯ ಸಚಿವನಾಗಿದ್ದಾಗ 2022 ನೇ ಸಾಲಿನಲ್ಲಿ 13,09,421 ಹೆಕ್ಟೇರ್ ಕೃಷಿ ಜಮೀನಿನಲ್ಲಿ ಬೆಳೆ ಹಾನಿಯಾಗಿತ್ತು. ಆಗ 14.62 ಲಕ್ಷಕ್ಕೂ ಹೆಚ್ಚು ರೈತರಿಗೆ 2031.15 ಕೋಟಿ ರೂ. ನೀಡಲಾಯಿತು ಎಂದು ಕಿಡಿಕಾರಿದ್ದಾರೆ. ಮಳೆಯಾಶ್ರಿತ ಜಮೀನಿಗೆ ಹೆಕ್ಟೇರ್‌ಗೆ 6,800 ರೂ. ಮಾರ್ಗಸೂಚಿ ದರವಿದ್ದು, ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ 6,800 ರೂ. ಸೇರಿಸಿ, ಒಟ್ಟು 13,600 ರೂ. ನೀಡಲಾಯಿತು. ನೀರಾವರಿ ಜಮೀನಿಗೆ ಹೆಕ್ಟೇರ್‌ಗೆ 13,500 ರೂ.…
ಬೆಂಗಳೂರು: ಕನ್ನಡ ನಾಡಿನ ಅಸ್ಮಿತೆಗೆ ಹೆಸರಾದ ಸರ್ಕಾರಿ ಉದ್ದಿಮೆಗಳ ಉತ್ಪನ್ನಗಳ ಎರಡು ಮಾರಾಟ ಮಳಿಗೆಗಳು “ಕಲಾಲೋಕ” ಹೆಸರಿನಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏಪ್ರಿಲ್ ವೇಳೆಗೆ ಆರಂಭವಾಗಲಿವೆ. ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ಅವರು ವಿಮಾನ ನಿಲ್ದಾಣದ ಅಧಿಕಾರಿಗಳ (ಬಿಐಎಎಲ್) ಉಪಸ್ಥಿತಿಯಲ್ಲಿ ಶನಿವಾರ ನಡೆಸಿದ ಸಭೆಯಲ್ಲಿ ಈ ಬಗ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆ ಎಸ್ ಡಿ ಎಲ್), ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ, ಕೆಎಸ್ಐಸಿ (ಕರ್ನಾಟಕ ರೇಷ್ಮೆ ಉದ್ಯಮ ನಿಗಮ), ಕಾಫಿ ಬೋರ್ಡ್ ಮತ್ತು ಲಿಡ್ಕರ್ ಸಂಸ್ಥೆಗಳು ತಯಾರಿಸುವ ಉತ್ಪನ್ನಗಳನ್ನು ಈ ಮಳಿಗೆಗಳಲ್ಲಿ ಮಾರಾಟ ಮಾಡಲಾಗುವುದು. ಇವುಗಳೊಟ್ಟಿಗೆ ನಾಡಿನಲ್ಲಿ ತಯಾರಾಗುವ ಪಾರಂಪರಿಕ ಆಟಿಕೆಗಳಾದ ಚನ್ನಪಟ್ಟಣ ಆಟಿಕೆ, ಇಳಕಲ್ ಸೀರೆ, ಲಂಬಾಣಿ ಕುಸೂತಿ ಇತ್ಯಾದಿ ಉತ್ಪನ್ನಗಳನ್ನು ಕೂಡ ಮಳಿಗೆಗಳಲ್ಲಿ ಮಾರಾಟಕ್ಕೆ ಲಭ್ಯವಾಗಿಸಲಾಗುತ್ತದೆ ಎಂದು ಸಚಿವರು ವಿವರಿಸಿದರು. ಇದಕ್ಕಾಗಿ, ಹೊಸದಾಗಿ ನಿರ್ಮಿಸಿರುವ ಟರ್ಮಿನಲ್-2ರ ದೇಶೀಯ ಮತ್ತು ಅಂತರರಾಷ್ಟ್ರೀಯ…
ಬೆಂಗಳೂರು: ವಿಜಯಪುರದ ಬಿಎಲ್ ಡಿಇ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ, ವಚನ ಪಿತಾಮಹ ಫ.ಗು.ಹಳಕಟ್ಟಿ ಸಂಶೋಧನಾ ಸಂಸ್ಥೆಯ ಬೆಂಗಳೂರು ಶಾಖೆ ನಗರದ ಶಿವಾನಂದ ವೃತ್ತದ ಮನೆಯೊಂದರಲ್ಲಿ ಕಾರ್ಯಾರಂಭವಾಗಿದ್ದು, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಶನಿವಾರ ಖುದ್ದು ಭೇಟಿ ನೀಡಿ ಸಾಹಿತಿ ಗೊ.ರು.ಚನ್ನಬಸಪ್ಪ, ಎಸ್.ಜಿ.ಸಿದ್ದರಾಮಯ್ಯ ಅವರೊಟ್ಟಿಗೆ ಮಾತುಕತೆ ನಡೆಸಿದರು. ತಾಳೆ ಗರಿ ಸೇರಿದಂತೆ ಇತರ ರೂಪಗಳಲ್ಲಿ ಇರುವ ವಚನಗಳ ಸಂಗ್ರಹ ಮತ್ತು ಅವುಗಳನ್ನು ದಾಖಲಿಸುವ ಕೆಲಸವನ್ನು ಇಲ್ಲಿ ಮಾಡುತ್ತಿದ್ದು ಅದನ್ನು ಸಚಿವರು ಪರಿಶೀಲಿಸಿದರು. ಸಚಿವರು ಬಿಎಲ್ ಡಿಇ ಸಂಸ್ಥೆ ಅಧ್ಯಕ್ಷರು ಕೂಡ ಆಗಿದ್ದು, ವಚನ ಸಾಹಿತ್ಯಕ್ಕೆ ಸಂಬಂಧಿಸಿದಂತೆ ವಿವಿಧ ಮೂಲಗಳಿಂದ ಸಂಗ್ರಹಿಸಿರುವ ಬೇರೆ ಬೇರೆ ರೂಪಗಳಲ್ಲಿನ ಮಾಹಿತಿಯನ್ನು ಸ್ಕ್ಯಾನ್ ಮಾಡಿ, ಅದನ್ನು ಟೈಪಿಸುವ ಕೆಲಸ ಮಾಡುತ್ತಿದ್ದು ಅದಕ್ಕೆ ಹಣಕಾಸಿನ ನೆರವು ಕೂಡ ನೀಡಲಾಗುವುದು ಎಂದರು. ಬೆಂಗಳೂರು ಶಾಖೆ ಉಸ್ತುವಾರಿ ಅಶೋಕ ದೊಮ್ಮಲೂರು, ಮಹಾಂತೇಶ ಬಿರಾದರ ಸೇರಿದಂತೆ ಇತರರು ಈ ಸಂದರ್ಭದಲ್ಲಿ ಇದ್ದರು. https://kannadanewsnow.com/kannada/aditya-l-1-indias-first-sun-mission-reaches-final-destination-after-126-day-long-journey/ https://kannadanewsnow.com/kannada/karve-state-president-ta-narayana-gowda-granted-bail/
ಬೆಂಗಳೂರು : ನನ್ನ ಆರೋಗ್ಯ ಸರಿಯಿಲ್ಲ. ಆದರೆ ನಿಮಗೆ ಸಮಯ ನೀಡಿದ್ದೇನೆ. ಮಾತಿಗೆ ತಪ್ಪಬಾರದು ಎಂಬ ಕಾರಣಕ್ಕೆ ವೈದ್ಯರ ವಿಶ್ರಾಂತಿ ಸಲಹೆಯನ್ನು ಲೆಕ್ಕಿಸದೆ ಇಲ್ಲಿಗೆ ಆಗಮಿಸಿದ್ದೇನೆ. ಜನ ಸೇವೆಯೇ ಜನಾರ್ಧನ ಸೇವೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನೆರೆದಿದ್ದ ಸಾರ್ವಜನಿಕರು, ʼತೊಂದರೆ ಇಲ್ಲ ಸಾರ್, ಹುಷಾರಾಗಿ ಇನ್ನೊಮ್ಮೆ ಬನ್ನಿ ಎಂದು ಕೂಗಿದರುʼ. ಆದರೆ ಡಿಸಿಎಂ ಅವರು ಜನರ ಬಳಿ ತೆರಳಿ ಅವರ ಕಷ್ಟ ಆಲಿಸಿ, ಮನವಿ ಸ್ವೀಕರಿಸಿದರು. ಶಿವಾಜಿನಗರದ ಆರ್ಬಿಎಎನ್ಎಂಎಸ್ ಶಾಲಾ ಮೈದಾನದಲ್ಲಿ ಹಮ್ಮಿಕೊಂಡಿದ್ದ “ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮದಲ್ಲಿ, 102 ಡಿಗ್ರಿ ಜ್ವರದ ನಡುವೆಯೂ ಕೈಗೆ ಡ್ರಿಪ್ಸ್ ಸಲೈನ್ ಸೂಜಿ ಹಾಕಿಕೊಂಡೇ ಅಹವಾಲು ಸ್ವೀಕರಿಸಿದ ಡಿಸಿಎಂ ಅವರ ಕಾರ್ಯಬದ್ಧತೆ ಬಗ್ಗೆ ಜನ ಮೆಚ್ಚುಗೆ ವ್ಯಕ್ತಪಡಿಸಿದರು. ಕೆಲವರು ಅಯ್ಯೋ.. ಎಂದರು. ಟ್ಯಾಕ್ಸ್ ಕಡಿಮೆ ಮಾಡಿಸುತ್ತೇನೆ ಆರಾಮಾಗಿರು ಟ್ಯಾನರಿ ರಸ್ತೆಯಲ್ಲಿ ಜ್ಯೋತಿ ಸೇವಾ ಅಂಧ ಮಕ್ಕಳ ಶಾಲೆ ನಡೆಸುತ್ತಿರುವ ಶ್ವೇತಾ ಅವರು “ಸಾರ್, ನಮ್ಮದು ಅಂಧ ಮಕ್ಕಳ ಶಾಲೆ. ಬಿಬಿಎಂಪಿಯವರು…
ಬೆಂಗಳೂರು : ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಬೇಕು ಎಂದು ಹಿಂದುಳಿದ ಸಮುದಾಯಗಳ ಮಠಾಧೀಶರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಇಂದು ಅವರನ್ನು ಭೇಟಿಮಾಡಿ ಈ ಮನವಿ ಸಲ್ಲಿಸಿದರು. ಶ್ರಮಿಕ ವರ್ಗದವರಿಗೆ ಗ್ಯಾರಂಟಿಗಳು ಹೆಚ್ಚು ಉಪಯುಕ್ತ ವಾಗಿವೆ ಎಂದು ಸ್ವಾಮೀಜಿಗಳು ಅಭಿಪ್ರಾಯ ಪಟ್ಟರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯ ಮಂತ್ರಿಗಳು ವರದಿ ನೀಡಲು ಎರಡು ತಿಂಗಳ ಕಾಲ ಅವಧಿ ವಿಸ್ತರಣೆ ಯಾಗಿದೆ. ಜಯಪ್ರಕಾಶ್ ಹೆಗ್ಡೆ ಅವರು ಕಾಂತರಾಜು ಅವರ ವರದಿಯನ್ನೇ ಕೊಡಲು ಸಾಧ್ಯವಿಲ್ಲ ಎಂದಿದ್ದು, ಈ ಬಗ್ಗೆ ಕಾನೂನು ಸಲಹೆ ಪಡೆದು ಮುಂದುವರೆಯಲಾಗುವುದು ಎಂದರು. ಇದೇ ಸಂದರ್ಭದಲ್ಲಿ ಮಠಗಳಿಗೆ ಜಮೀನು ಕೊಡುವ ಬಗ್ಗೆ ಸ್ವಾಮೀಜಿಗಳು ಪ್ರಸ್ತಾಪಿಸಿದರು. ತಹಸೀಲ್ದಾರ್ ಅವರು ಈ ಬಗ್ಗೆ ವರದಿ ನೀಡಲು ಸೂಚಿಸಿದ್ದು, ವರದಿಯನ್ನು ಶೀಘ್ರವಾಗಿ ನೀಡುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಿಗೆ ದೂರವಾಣಿ ಮೂಲಕ ಮಾತನಾಡಿ ಸೂಚಿಸಿದರು. ಭೋವಿ ಸಮುದಾಯ ಚಿತ್ರದುರ್ಗದ ಸಿದ್ದರಾಮೇಶ್ವರ ಸ್ವಾಮೀಜಿ , ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ, ಕಾಗಿನೆಲೆ ಮಹಾಸಂಸ್ಥಾನದ ಕನಕ…
ಬೆಂಗಳೂರು: ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹ ಅವರ ಪ್ರಕರಣಕ್ಕೆ ಸಂಬಂಧಿಸಿ ತಾವು ನೀಡಿದ್ದ ಹೇಳಿಕೆಯ ಬಗ್ಗೆ, ಕುಮಾರಸ್ವಾಮಿ ಏನೇನೋ ಹೇಳುತ್ತಾರೆ, ಅದಕ್ಕೆಲ್ಲ ಉತ್ತರಿಸುವ ಅಗತ್ಯವಿಲ್ಲ ಎಂದು ಜಾರಿಕೊಂಡಿದ್ದ ಸಚಿವರಿಬ್ಬರಿಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರಿಗೆ ಪ್ರತ್ಯುತ್ತರ ನೀಡಿರುವ ಅವರು; ಸಿಎಂ ಸಿದ್ದರಾಮಯ್ಯ ಅವರನ್ನು ಕರ್ನಾಟಕದ ‘ನೀರೋ’ ಎಂದು ಜರೆದಿದ್ದಾರೆ. ಅಲ್ಲದೆ, ದಾಖಲೆ ಇಟ್ಟುಕೊಂಡೇ ವಿಕ್ರಮ ಸಿಂಹ ಪ್ರಕರಣದ ಬಗ್ಗೆ ಮಾತನಾಡಿದ್ದೇನೆ. ಬೇಕಿದ್ದರೆ ದಾಖಲೆಗಳನ್ನು ನಾನೇ ತಂದುಕೊಡುತ್ತೇನೆ. ಆಮೇಲೆ ಕ್ರಮ ಜರುಗಿಸುವ ದಮ್ಮು, ತಾಕತ್ತು ಹಾಗೂ ಸತ್ಯದ ಪರ ನಿಲ್ಲುವ ಗಂಡಸ್ತನ ಇದೆಯಾ? ಎಂದು ಅವರು ಪ್ರಶ್ನಿಸಿದ್ದಾರೆ. ಕರ್ನಾಟಕದ ‘ನೀರೋ’ಗೆ ರಾಜಕೀಯ ಊಳಿಗ ಮಾಡುತ್ತಿರುವ ಗೃಹಮಂತ್ರಿ ಪರಮೇಶ್ವರ್ ಮತ್ತು ಸಿದ್ದಹಸ್ತರು ಹೇಳಿದ್ದಕ್ಕೆಲ್ಲ ‘ಪರಿಪೂರ್ಣ ಸಹಕಾರ’ ಕೊಡುವ ಹಾಸನ ಜಿಲ್ಲಾ ಉಸ್ತುವಾರಿ ಕೆ ಎನ್ ರಾಜಣ್ಣ ಅವರು ಸಂಸದ ಪ್ರತಾಪ್ ಸಿಂಹ ಅವರ ಸಹೋದರನ ಪ್ರಕರಣಕ್ಕೆ…
ಕಲಿಯುಗದಲ್ಲಿ ಆಂಜನೇಯಸ್ವಾಮಿ ಆರಾಧನೆ ಮಾಡುವುದರಿಂದ ಉತ್ತಮ ಫಲಗಳು ಪ್ರಾಪ್ತಿಯಾಗುತ್ತದೆ ನಾವು ಅನೇಕ ದೇವರನ್ನು ಆರಾಧನೆ ಮಾಡುತ್ತೇವೆ ನಮ್ಮ ಕಷ್ಟಗಳು ನಿವಾರಣೆಯಾಗಲಿ ನಮ್ಮ ಇಷ್ಟಾರ್ಥಗಳು ಈಡೇರಬೇಕು ಎಂದು ಎಲ್ಲಾ ದೇವರಲ್ಲಿ ಮೊರೆ ಹೋಗುತ್ತೇವೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ, ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ…
ಉಡುಪಿ: ವಿಶ್ವಕರ್ಮ ಯೋಜನೆಯಡಿ ಬಡವರಿಗೆ ಬ್ಯಾಂಕ್‌ಗಳಿಂದ 1 ಲಕ್ಷ ರೂ. ಸಾಲ ನೀಡುತ್ತಿದ್ದು, ಇದಕ್ಕೆ ಪ್ರಧಾನಿ ನರೇಂದ್ರ ಮೋದಿಯವರೇ ಶ್ಯೂರಿಟಿ, ಅವರೇ ಗ್ಯಾರಂಟಿ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದ ಸಿದ್ದಾಪುರದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ದೇಶದ ಚಿತ್ರಣವನ್ನು ಬದಲಿಸಿದ್ದಾರೆ. ಪ್ರತಿ ಬಡವರು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾಗುತ್ತದೆ ಎಂಬುದನ್ನು ಅವರು ಗಮನದಲ್ಲಿಟ್ಟುಕೊಂಡು ಕೆಲಸ ಮಾಡುತ್ತಿದ್ದಾರೆ. ಹಿಂದೆ ಹಣ ಠೇವಣಿ ಇಟ್ಟು ಬ್ಯಾಂಕ್‌ನಲ್ಲಿ ಖಾತೆ ತೆರೆಯುತ್ತಿದ್ದೆವು. ಆದರೆ ಶೂನ್ಯ ಠೇವಣಿಯಲ್ಲಿ ಖಾತೆ ತೆರೆಯುವ ಕ್ರಮವನ್ನು ಪ್ರಧಾನಿ ಜಾರಿಗೆ ತಂದರು. ಇತ್ತೀಚೆಗೆ ಜಾರಿಯಾದ ವಿಶ್ವಕರ್ಮ ಯೋಜನೆಯಡಿ ಹಲವಾರು ಬಗೆಯ ಉದ್ಯೋಗಗಳಿಗೆ ಒಂದು ಲಕ್ಷ ರೂಪಾಯಿ ಸಾಲ ನೀಡುತ್ತಿದ್ದಾರೆ. ಈ ಸಾಲ ಪಡೆಯಲು ಮನೆ ಪತ್ರ ನೀಡುವಂತಿಲ್ಲ, ಶ್ಯೂರಿಟಿ ಕೊಡಬೇಕಿಲ್ಲ. ಯಾವುದೇ ರೀತಿಯ ಅನಗತ್ಯ ದಾಖಲೆಗಳನ್ನು ಪಡೆಯುವಂತಿಲ್ಲ. ಈ ಸಾಲಕ್ಕೆ ಪ್ರಧಾನಿ ನರೇಂದ್ರ ಮೋದಿಯವರದ್ದೇ ಶ್ಯೂರಿಟಿ, ಅವರದ್ದೇ ಗ್ಯಾರಂಟಿ ಎಂದರು.…