Author: kannadanewsnow09

ಹೈದರಾಬಾದ್: ಕಾನೂನುಬಾಹಿರ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದ ನಂತರ ಹೈದರಾಬಾದ್ ಪೊಲೀಸರು ಪಬ್ ಮೇಲೆ ದಾಳಿ ನಡೆಸಿದ ನಂತರ 42 ಮಹಿಳೆಯರು ಸೇರಿದಂತೆ 100 ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಪೊಲೀಸ್ ತಂಡವು ಶುಕ್ರವಾರ ನಗರದ ಐಷಾರಾಮಿ ಬಂಜಾರಾ ಹಿಲ್ಸ್ ಪ್ರದೇಶದ ಟಿಒಎಸ್ ಪಬ್ ಮೇಲೆ ದಾಳಿ ನಡೆಸಿ ಅಶ್ಲೀಲ ನೃತ್ಯ ಪ್ರದರ್ಶನಗಳಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ 140 ಜನರನ್ನು ಬಂಧಿಸಿದೆ ಎಂದು ಹೈದರಾಬಾದ್ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಬಂಧಿತರಲ್ಲಿ ಪಬ್ನ ಮ್ಯಾನೇಜರ್, ಕ್ಯಾಷಿಯರ್ ಮತ್ತು ಡಿಜೆ ಆಪರೇಟರ್ ಸೇರಿದ್ದಾರೆ. ಪುರುಷ ಪೋಷಕರನ್ನು ಆಕರ್ಷಿಸಲು ಮತ್ತು ಲಾಭವನ್ನು ಹೆಚ್ಚಿಸಲು ಅಶ್ಲೀಲ ನೃತ್ಯಗಳನ್ನು ಪ್ರದರ್ಶಿಸಲು ಪಬ್ ವಿವಿಧ ರಾಜ್ಯಗಳ ಮಹಿಳೆಯರನ್ನು ನೇಮಿಸಿಕೊಂಡಿದೆ ಎಂದು ಆರೋಪಿಸಲಾಗಿದೆ. ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ವೆಂಕಟ್ ರಮಣ ನೇತೃತ್ವದ ಪೊಲೀಸ್ ತಂಡವು ನಗರದಲ್ಲಿ ಕಾನೂನುಬಾಹಿರ ಚಟುವಟಿಕೆಗಳ ವಿರುದ್ಧ ದಮನದ ಭಾಗವಾಗಿ ಪಬ್ ಮೇಲೆ ದಾಳಿ ನಡೆಸಿದೆ ಎಂದು ಪೊಲೀಸ್ ಹೇಳಿಕೆ ತಿಳಿಸಿದೆ. ದಾಳಿಯ…

Read More

ಮಂಡ್ಯ: ಎರಡು ದಿನಗಳ ಕಾಲ ನಗರದಲ್ಲಿ ನಡೆದ ಮಂಡ್ಯ ಟೂ ಇಂಡಿಯಾ ಬೃಹತ್ ಉದ್ಯೋಗ ಮೇಳದಲ್ಲಿ 6150 ಅರ್ಜಿಗಳು ಬಂದಿದ್ದು, ಆ ಪೈಕಿ 1,122 ಅಭ್ಯರ್ಥಿಗಳಿಗೆ ನೇರ ನೇಮಕಾತಿ ಪತ್ರ ನೀಡಲಾಗಿದೆ ಇಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಉದ್ಯೋಗ ಮೇಳದ ನಂತರ ಈ ಬಗ್ಗೆ ಹೇಳಿಕೆ ನೀಡಿರುವ ಕೇಂದ್ರ ಸಚಿವರು; ಉಳಿದ ಅಭ್ಯರ್ಥಿಗಳಿಗೆ ಡಿಸೆಂಬರ್ ತಿಂಗಳ ಒಳಗಾಗಿ ಉದ್ಯೋಗ ಕೊಡಿಸಲಾಗುವುದು. ಅದಕ್ಕಾಗಿ ಮಂಡ್ಯದ ಸಂಸದರ ಕಚೇರಿಯಲ್ಲಿ ಸುಸಜ್ಜಿತ ವಾರ್ ರೂಮ್ ತೆರೆಯಲಾಗುವುದು ಹಾಗೂ ದೆಹಲಿಯ ನನ್ನ ಸಚಿವಾಲಯದಲ್ಲಿ ವಿಶೇಷ ಸೆಲ್ ತೆರೆಯಲಾಗುವುದು. ಈ ಬಗ್ಗೆ ನಮ್ಮ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಕೇಂದ್ರ ಸಚಿವರು ಮಾಹಿತಿ ನೀಡಿದರು. ಮಂಡ್ಯದಲ್ಲಿ ಸಮರೋಪವಾದ ಮಂಡ್ಯ ಟೂ ಇಂಡಿಯಾ ಬೃಹತ್ ಉದ್ಯೋಗ ಮೇಳ ನಿರೀಕ್ಷೆಗೂ ಮೀರಿ ಅಭೂತಪೂರ್ವ ಯಶಸ್ಸು ಆಗಿದೆ. ನನಗೆ ಬಹಳ ಸಂತೋಷವಾಗಿದ್ದು, ನನ್ನ ಕ್ಷೇತ್ರದ, ರಾಜ್ಯದ ವಿವಿಧ ಜಿಲ್ಲೆಗಳ ರೈತಾಪಿ ಜನರ ಮಕ್ಕಳಿಗೆ…

Read More

ಉಡುಪಿ : ದಕ್ಷಿಣ ಕನ್ನಡ – ಉಡುಪಿ ಸ್ಥಳೀಯ ಸಂಸ್ಥೆಗಳ ಕರ್ನಾಟಕ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಗೆಲುವು ಶತಸಿದ್ಧ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಶ್ವಾಸ ವ್ಯಕ್ತಪಡಿಸಿದ್ಧಾರೆ. ಉಡುಪಿಯ ಕಾಂಗ್ರೆಸ್ ಭವನದಲ್ಲಿ ನಡೆದ ಚುನಾವಣಾ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಗೆಲುವು ನಿಶ್ಚಿತ. ಕರಾವಳಿಯಲ್ಲಿ ಪಕ್ಷದ ಅಭ್ಯರ್ಥಿ ರಾಜು ಪೂಜಾರಿ ಪರ ಒಲವು ಇದೆ. ಗೆಲುವಿಗೆ ಉತ್ತಮ ವಾತಾವರಣವಿದೆ. ಅದಕ್ಕಾಗಿ ಪಕ್ಷದ ನಾಯಕರು ಶ್ರಮಿಸುತ್ತಿದ್ದಾರೆ ಎಂದು ಹೇಳಿದರು. ಜನಪರ ಕಾರ್ಯಕ್ರಮಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತಿದ್ದೇವೆ. ಮತದಾರರು ಕೂಡ ಕಾಂಗ್ರೆಸ್‌ ಪಕ್ಷದ ಯೋಜನೆಗಳ ಬಗ್ಗೆ ವಿಶ್ವಾಸವಿಟ್ಟಿದ್ದಾರೆ. ಪಂಚ ಗ್ಯಾರಂಟಿ ಯೋಜನೆಗಳು ನಮ್ಮನ್ನು ಕೈ ಬಿಡುವುದಿಲ್ಲ. ಪ್ರತಿ ಪಂಚಾಯತಿಗೆ ಎರಡು ಕೋಟಿ ಅನುದಾನ ತರಲು ಉದ್ಯೋಗ ಖಾತ್ರಿ ಸಹಕಾರಿಯಾಗಿದೆ. ಇದನ್ನು ಜಾರಿಗೆ ತಂದ ಶ್ರೇಯಸ್ಸು ಕಾಂಗ್ರೆಸ್ ಪಕ್ಷಕ್ಕೆ…

Read More

ನವದೆಹಲಿ: ಶಿಗ್ಗಾವಿ, ಸಂಡೂರು, ಚನ್ನಪಟ್ಟಣ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಕಾರ್ಯತಂತ್ರ ರೂಪಿಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ‌. ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಬುಲಾವ್ ಮೇರೆಗೆ ದೆಹಲಿಗೆ ಬಂದಿದ್ದೇನೆ. ಅವರು, ಮಹಾರಾಷ್ಟ್ರ ಜಾರ್ಖಂಡ್ ಸಂಸದೀಯ ಮಂಡಳಿ ಸಭೆ ನಡೆಸಿ ಬಳಿಕ ನಮ್ಮಗೆ ಸಮಯ ನೀಡಲಿದ್ದಾರೆ. ಅವರನ್ನು ಭೇಟಿಯಾಗಿ ಶಿಗ್ಗಾಂವಿ ಉಪ ಚುನಾವಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಲಿದ್ದೇನೆ ಎಂದು ಹೇಳಿದರು. ಶಿಗ್ಗಾವಿಯಲ್ಲಿ ಯಾರು ಅಭ್ಯರ್ಥಿ ಎನ್ನುವುದು ಯಾರು ಗೆಲ್ಲುತ್ತಾರೆ ಎನ್ನುವ ಆಧಾರದ ಮೇಲೆ ನಿರ್ಧಾರ ಆಗುತ್ತದೆ. ನಾಳೆಯ ಸಭೆಯಲ್ಲಿ ಎಲ್ಲವೂ ಚರ್ಚೆಯಾಗಲಿದೆ. ಶಿಗ್ಗಾಂವಿ, ಸಂಡೂರಿನಲ್ಲಿ ಬಿಜೆಪಿ ಅಭ್ಯರ್ಥಿ ಮತ್ತು ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿ ಗೆಲ್ಲುವ ನಿಟ್ಟಿನಲ್ಲಿ ಕಾರ್ಯತಂತ್ರ ಮಾಡಲಿದ್ದೇವೆ. ಇದೇ ಕಾರಣಕ್ಕೆ ಚರ್ಚಿಸಲು ಜೆ. ಪಿ ನಡ್ಡಾ ಅವರು ಕರೆದಿದ್ದಾರೆ ಎಂದು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರೈತರು ಬಹಳ ಸಂಕಷ್ಟದಲ್ಲಿದ್ದಾರೆ. ಕಳೆದ ವರ್ಷ…

Read More

ಬೆಂಗಳೂರು: ದೆಹಲಿಯಲ್ಲಿ ಆಮ್ ಆದ್ಮಿ ಪಾರ್ಟಿಯ ಅರವಿಂದ ಕೇಜ್ರಿವಾಲ್ ಅವರ ಪರಿಸ್ಥಿತಿಯನ್ನು ದೇಶ, ರಾಜ್ಯದ ಜನರು ನೋಡಿದ್ದಾರೆ. ಸುತ್ತಿ ಬಳಸಿ ಮಾತನಾಡುವುದಿಲ್ಲ; ನೇರವಾಗಿ ಹೇಳುತ್ತೇನೆ. ಮುಖ್ಯಮಂತ್ರಿಗಳು ಭಂಡತನ, ಹುಡುಗಾಟಿಕೆ ಬಿಟ್ಟು ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಒತ್ತಾಯಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸಿಎಂ ಅವರು ಕಾಂಗ್ರೆಸ್ ಪಕ್ಷದ ಹೈಕಮಾಂಡಿನ ಬೆಂಬಲ ಇದೆ ಎಂಬಂತೆ ವರ್ತಿಸುತ್ತಿದ್ದಾರೆ. ಎಸ್‍ಟಿ ಅಭಿವೃದ್ಧಿ ನಿಗಮದಲ್ಲಿ ದೋಚಿದ ಹಣವು ಕಾಂಗ್ರೆಸ್ ಹೈಕಮಾಂಡಿಗೆ ತಲುಪಿದೆ ಎಂಬ ವಿಷಯವೂ ಕೇಳಿಬರುತ್ತಿದೆ. ಆದ್ದರಿಂದ ಹೈಕಮಾಂಡ್ ಸಿದ್ದರಾಮಯ್ಯರ ಪರ ನಿಂತಿದೆ ಎಂಬುದು ದೊಡ್ಡ ವಿಚಾರವಲ್ಲ. ಹೈಕೋರ್ಟ್ ತೀರ್ಪಿನಲ್ಲಿ ತಿಳಿಸಿದ ವಿಚಾರಗಳು, ಜನಪ್ರತಿನಿಧಿಗಳ ಕೋರ್ಟಿನ ಆದೇಶದ ಕುರಿತು ಸಿದ್ದರಾಮಯ್ಯನವರು ಇನ್ನೊಂದು ಬಾರಿ ಓದಿದರೆ ತಕ್ಷಣ ರಾಜೀನಾಮೆ ಕೊಡಲು ಅವರಿಗೂ ಅನುಕೂಲವಾಗುತ್ತದೆ ಎಂದು ಪ್ರಶ್ನೆಗೆ ಉತ್ತರಿಸಿದರು. ಮುಖ್ಯಮಂತ್ರಿಯವರು ರಾಜೀನಾಮೆ ಕೊಡುತ್ತಾರೆ. ಕೊಡಲೇಬೇಕಾಗುತ್ತದೆ. ಬಹಳ ದಿನ ಓಡಿಹೋಗಲು…

Read More

ಬೆಂಗಳೂರು: ಬೆಂಗಳೂರಿನ ಭಾಗವಾಗಿ ಬೆಳೆಯುತ್ತಿರುವ ತುಮಕೂರನ್ನು ʼಗ್ರೇಟರ್‌ ಬೆಂಗಳೂರುʼ ವ್ಯಾಪ್ತಿಗೆ ತರುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. https://twitter.com/KarnatakaVarthe/status/1847574682079199354 ತುಮಕೂರಿನಲ್ಲಿ ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶ ನಿರ್ಮಾಣ: ಗೃಹ ಸಚಿವ ಡಾ.ಜಿ ಪರಮೇಶ್ವರ್ ಬೆಂಗಳೂರು: ತುಮಕೂರಿನಲ್ಲಿ ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶ ನಿರ್ಮಾಣ ಮಾಡಲಾಗುತ್ತದೆ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಘೋಷಿಸಿದ್ದಾರೆ. 20 ಸಾವಿರ ಎಕರೆ ವ್ಯಾಪ್ತಿಯಲ್ಲಿ ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶ ತುಮಕೂರಿನಲ್ಲಿ ನಿರ್ಮಾಣವಾಗುತ್ತಿದೆ. ಮೊದಲ ಮತ್ತು ಎರಡನೇ ಹಂತದ ಕಾಮಗಾರಿ ಮುಗಿದಿದೆ. 150 ಕೈಗಾರಿಕೆಗಳು ಹಾಗೂ ಜಪಾನ್‌ ಟೌನ್‌ಶಿಪ್‌ ಬರುತ್ತಿದೆ. ಎಚ್‌ಎಎಲ್‌ ಹೆಲಿಕಾಪ್ಟರ್‌ ತಯಾರಿಕಾ ಕಾರ್ಖಾನೆ ಕೆಲಸ ಅರಂಭಿಸಿದೆ. ಇನ್ನೂ ಹಲವು ದೊಡ್ಡ ಕೈಗಾರಿಕೆಗಳು ಬರಲಿದೆ ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. https://twitter.com/KarnatakaVarthe/status/1847582849156649332 https://kannadanewsnow.com/kannada/minister-byrathi-suresh-is-the-real-thief-in-muda-case-chalavadi-narayanaswamy/ https://kannadanewsnow.com/kannada/priyanka-gandhi-to-file-nomination-as-congress-candidate-for-wayanad-by-election-on-october-23/ https://kannadanewsnow.com/kannada/good-news-for-property-buyers-in-bengaluru-e-khata-to-be-available-within-2-days-of-registration/

Read More

ಬೆಂಗಳೂರು: ಮೈಸೂರು ಮುಡಾ ದಾಖಲೆಗಳನ್ನು ಕಾರು ಮತ್ತು ಹೆಲಿಕಾಪ್ಟರ್‍ನಲ್ಲಿ ತಂದ ಸಚಿವ ಬೈರತಿ ಸುರೇಶ್ ನಿಜವಾದ ಕಳ್ಳ. ಕಾಂಗ್ರೆಸ್‍ನವರು ನಾಲಿಗೆ ಬಿಗಿಹಿಡಿದು ಮಾತನಾಡಬೇಕು. ನಾನು ಕಳ್ಳನಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಎಚ್ಚರಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ವೈಟ್ನರ್ ಹಾಕಿದ್ದು ಯಾರು? ನೀವೇ ಆ ಇಲಾಖೆಗೆ ಸಚಿವರು; ಇ.ಡಿ. ಕೇಳಿದ ತಕ್ಷಣ ನೀವು ದಾಖಲೆ ಕೊಡಬೇಕಿತ್ತು. 3 ಸಾರಿ ನೋಟಿಸ್ ಬಂದರೂ ಯಾಕೆ ದಾಖಲೆ ಕೊಟ್ಟಿಲ್ಲ? ಅಲ್ಲಿಗೆ ಕದ್ದು ಓಡಾಡುವವರು ನೀವಾ ನಾವಾ ಎಂದು ಪ್ರಶ್ನಿಸಿದರು. ಸಚಿವ ಸುರೇಶ್ ಅವರೇ ಮುಖ್ಯಮಂತ್ರಿಗಳನ್ನೂ ಸಿಕ್ಕಿಹಾಕಿಸಿದ್ದಾರೆ. ನೀವು ಮುಖ್ಯಮಂತ್ರಿಗಳ ಮಾನಸಪುತ್ರ ಎಂದ ಅವರು, ಮಾನ್ಯ ಕುಮಾರಸ್ವಾಮಿ ಅವರ ಬಳಿ ಕಡತ ಇರಬಹುದು ಎಂದು ಸುರೇಶ್ ಹೇಳಿದ್ದು, ಹಾಗಿದ್ದರೆ ಅವರೇನು ಸಂಬಂಧಿಸಿದ ಇಲಾಖೆ ಸಚಿವರೇ? ಅವರ ಹತ್ತಿರ ಯಾಕೆ ಇರುತ್ತದೆ ಎಂದು ಪ್ರಶ್ನೆಯನ್ನು ಮುಂದಿಟ್ಟರು. ಛಲವಾದಿ ನಾರಾಯಣಸ್ವಾಮಿ ಫೈಲ್ ಕದ್ದುಕೊಂಡು…

Read More

ಬೆಂಗಳೂರು: ತುಮಕೂರಿನಲ್ಲಿ ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶ ನಿರ್ಮಾಣ ಮಾಡಲಾಗುತ್ತದೆ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಘೋಷಿಸಿದ್ದಾರೆ. 20 ಸಾವಿರ ಎಕರೆ ವ್ಯಾಪ್ತಿಯಲ್ಲಿ ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶ ತುಮಕೂರಿನಲ್ಲಿ ನಿರ್ಮಾಣವಾಗುತ್ತಿದೆ. ಮೊದಲ ಮತ್ತು ಎರಡನೇ ಹಂತದ ಕಾಮಗಾರಿ ಮುಗಿದಿದೆ. 150 ಕೈಗಾರಿಕೆಗಳು ಹಾಗೂ ಜಪಾನ್‌ ಟೌನ್‌ಶಿಪ್‌ ಬರುತ್ತಿದೆ. ಎಚ್‌ಎಎಲ್‌ ಹೆಲಿಕಾಪ್ಟರ್‌ ತಯಾರಿಕಾ ಕಾರ್ಖಾನೆ ಕೆಲಸ ಅರಂಭಿಸಿದೆ. ಇನ್ನೂ ಹಲವು ದೊಡ್ಡ ಕೈಗಾರಿಕೆಗಳು ಬರಲಿದೆ ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. https://twitter.com/KarnatakaVarthe/status/1847582849156649332 https://kannadanewsnow.com/kannada/priyanka-gandhi-to-file-nomination-as-congress-candidate-for-wayanad-by-election-on-october-23/ https://kannadanewsnow.com/kannada/good-news-for-property-buyers-in-bengaluru-e-khata-to-be-available-within-2-days-of-registration/

Read More

ಬೆಂಗಳೂರು: ನಗರದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಇನ್ಮುಂದೆ ಆಸ್ತಿ ನೋಂದಣಿಯಾದ 2 ದಿನಗಳಲ್ಲೇ ಇ-ಖಾತಾ, ಆಸ್ತಿಯನ್ನು ಖರೀದಿಸಿದಂತ ಮಾಲೀಕರಿಗೆ ಸಿಗಲಿದೆ.  ಈ ಬಗ್ಗೆ ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾಹಿತಿ ನೀಡಿದ್ದು, ಆಸ್ತಿ ನೋಂದಣಿಗಾಗಿ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಅಕ್ಟೋಬರ್‌ನಲ್ಲಿ ದಿನ ನಿಗದಿಪಡಿಸಿಕೊಂಡವರಿಗಾಗಿ ಒಂದು ಅಥವಾ ಎರಡು ದಿನದಲ್ಲಿ ಇ – ಖಾತಾ ನೀಡಲು ಬಿಬಿಎಂಪಿ ಅವಕಾಶ ಕಲ್ಪಿಸಿದೆ. ಅಗತ್ಯವಾದ ದಾಖಲೆಗಳನ್ನು ಸಲ್ಲಿಸಿದರೆ ಕೂಡಲೇ ಇ – ಖಾತಾ ಮಾಡಿಕೊಡಲು ಎಲ್ಲ ಸಹಾಯಕ ಕಂದಾಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1847567525376065985 ಬಿಬಿಎಂಪಿ ಅಂತಿಮ ಇ-ಖಾತಾವನ್ನು ಪಡೆಯುವ ವಿಧಾನಬಿಬಿಎಂಪಿ‌ ವ್ಯಾಪ್ತಿಯಲ್ಲಿ 2024ರ ಅಕ್ಟೋಬರ್ ತಿಂಗಳ ಒಳಗೆ ಉಪ-ನೋಂದಣಾಧಿಕಾರಿ ಕಛೇರಿಯಲ್ಲಿ ನೀವು ತುರ್ತು ಆಸ್ತಿ ನೋಂದಣಿಯನ್ನು ಹೊಂದಿದ್ದೀರಾ ? ಬಿಬಿಎಂಪಿ ಅಂತಿಮ ಇ-ಖಾತಾವನ್ನು ಪಡೆಯಲು ದಯವಿಟ್ಟು ಕೆಳಗಿನ ವಿಧಾನವನ್ನು ಅನುಸರಿಸಿ 1. ಆನ್‌ಲೈನ್‌ https://BBMPeAasthi.karnataka.gov.in ನಲ್ಲಿ ವಾರ್ಡ್‌ವಾರು ಇ-ಖಾತಾ ಪಟ್ಟಿಯಿಂದ ನಿಮ್ಮ ಕರಡು ಇ-ಖಾತಾ ಅನ್ನು ಡೌನ್‌ಲೋಡ್ ಮಾಡಿ. 2.…

Read More

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಪುನಃಸ್ಥಾಪಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ನೇತೃತ್ವದ ಕ್ಯಾಬಿನೆಟ್ ಅಂಗೀಕರಿಸಿದ ನಿರ್ಣಯವನ್ನು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಶನಿವಾರ ಅಂಗೀಕಾರ ನೀಡಿದ್ದಾರೆ. “ಒಮರ್ ಅಬ್ದುಲ್ಲಾ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಕ್ಯಾಬಿನೆಟ್ ರಾಜ್ಯ ಸ್ಥಾನಮಾನವನ್ನು ಅದರ ಮೂಲ ರೂಪದಲ್ಲಿ ಪುನಃಸ್ಥಾಪಿಸಲು ಸರ್ವಾನುಮತದ ನಿರ್ಣಯವನ್ನು ಅಂಗೀಕರಿಸಿತು ಎಂದು ಅಧಿಕೃತ ವಕ್ತಾರರನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ. ಕ್ಯಾಬಿನೆಟ್ ಅಂಗೀಕರಿಸಿದ ನಿರ್ಣಯವನ್ನು ಲೆಫ್ಟಿನೆಂಟ್ ಗವರ್ನರ್ ಅನುಮೋದನೆ ನೀಡಿರುವುದಾಗಿ ಅಧಿಕಾರಿಗಳು ಪ್ರತಿಪಾದಿಸಿದರು. ರಾಜ್ಯ ಸ್ಥಾನಮಾನವನ್ನು ಪುನಃಸ್ಥಾಪಿಸುವುದು ಗುಣಪಡಿಸುವ ಪ್ರಕ್ರಿಯೆಯ ಪ್ರಾರಂಭವಾಗಿದೆ, ಸಾಂವಿಧಾನಿಕ ಹಕ್ಕುಗಳನ್ನು ಮರಳಿ ಪಡೆಯುತ್ತದೆ ಮತ್ತು ಜಮ್ಮು ಮತ್ತು ಕಾಶ್ಮೀರದ ಜನರ ಗುರುತನ್ನು ರಕ್ಷಿಸುತ್ತದೆ. ರಾಜ್ಯ ಸ್ಥಾನಮಾನವನ್ನು ಪುನಃಸ್ಥಾಪಿಸಲು ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತ ಸರ್ಕಾರದೊಂದಿಗೆ ಈ ವಿಷಯವನ್ನು ತೆಗೆದುಕೊಳ್ಳಲು ಕ್ಯಾಬಿನೆಟ್ ಮುಖ್ಯಮಂತ್ರಿಗೆ ಅಧಿಕಾರ ನೀಡಿದೆ ಎಂದು ವಕ್ತಾರರು ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ವಿಶಿಷ್ಟ ಗುರುತು…

Read More