Author: kannadanewsnow09

ನವದೆಹಲಿ: ಕೇಂದ್ರ ಸಾಹಿತ್ಯ ಅಕಾಡೆಮಿ ತನ್ನ ಪ್ರತಿಷ್ಠಿತ ಯುವ ಮತ್ತು ಮಕ್ಕಳ ಸಾಹಿತ್ಯ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಸಾಹಿತ್ಯ ಅಕಾಡೆಮಿ ಕಾರ್ಯದರ್ಶಿ ಕೆ.ಶ್ರೀನಿವಾಸರಾವ್ ಮಾತನಾಡಿ, ಈ ಬಾರಿ ಯುವ ಪ್ರಶಸ್ತಿಗಳನ್ನು ಸಂಸ್ಕೃತ ಹೊರತುಪಡಿಸಿ ಎಲ್ಲಾ ಭಾರತೀಯ ಭಾಷೆಗಳಲ್ಲಿ ಘೋಷಿಸಲಾಗಿದೆ. ಸಾಹಿತ್ಯ ಅಕಾಡೆಮಿ ಯುವ ಪುರಸ್ಕಾರವನ್ನು 24 ಭಾಷೆಗಳ ಸಾಹಿತ್ಯಕ್ಕಾಗಿ ನೀಡಲಾಗುತ್ತದೆ. ಈ ಪ್ರಶಸ್ತಿಯಡಿ, 35 ವರ್ಷದವರೆಗಿನ ಬರಹಗಾರರ ಕೃತಿಗಳನ್ನು ಆಹ್ವಾನಿಸಲಾಗುತ್ತದೆ. ಅರ್ಜಿ ಸಲ್ಲಿಸುವ ಲೇಖಕರಿಗೆ ಪ್ರಶಸ್ತಿಗಳನ್ನು ನೀಡುವ ವರ್ಷದ ಜನವರಿ 1 ಕ್ಕೆ ಅನ್ವಯವಾಗುವಂತೆ 35 ವರ್ಷ ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನವರಾಗಿರಬೇಕು. ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿಯನ್ನು 2011ರಲ್ಲಿ ಸ್ಥಾಪಿಸಲಾಯಿತು. ಪ್ರಶಸ್ತಿ ಪುರಸ್ಕೃತರು 50,000 ರೂ.ಗಳ ನಗದು ಬಹುಮಾನ, ತಾಮ್ರದ ಫಲಕ ಮತ್ತು ಪ್ರಶಸ್ತಿ ಪತ್ರವನ್ನು ಪಡೆಯುತ್ತಾರೆ. ಸಾಹಿತ್ಯ ಅಕಾಡೆಮಿ ಬಾಲ ಸಾಹಿತ್ಯ ಪುರಸ್ಕಾರ 2024 ಬಿಪೊನ್ನಾ ಬಿಸ್ಮೊಯಿ ಖೇಲ್ ಕಾದಂಬರಿಗಾಗಿ ರಂಜು ಹಜಾರಿಕಾ ಅವರಿಗೆ ಈ ವರ್ಷದ ಬಾಲ ಸಾಹಿತ್ಯ ಪುರಸ್ಕಾರ, ದೀಪನ್ವಿತಾ ರಾಯ್ ಅವರ ಬಂಗಾಳಿ ಕಾದಂಬರಿ ಮಹಿದಾದುರ್…

Read More

ಬೆಂಗಳೂರು: ಜೂನ್.17ರಂದು ಪೋಕ್ಸೋ ಪ್ರಕರಣ ಸಂಬಂಧ ಸಿಐಡಿ ನೀಡಿರುವ ನೋಟಿಸ್ ಹಿನ್ನಲೆಯಲ್ಲಿ ವಿಚಾರಣೆಗೆ ಪೊಲೀಸರ ಮುಂದೆ ಹಾಜರಾಗುವುದಾಗಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ಪೋಕ್ಸೋ ಕೇಸ್ ಸಂಬಂಧ ಸೋಮವಾರ ವಿಚಾರಣೆ ಹೋಗುತ್ತೇನೆ. ನಿಗದಿತ ಕಾರ್ಯಕ್ರಮದ ನಿಮಿತ್ತ ದೆಹಲಿಗೆ ಹೋಗಿದ್ದೆ. ಹೀಗಾಗಿ ಈ ಹಿಂದೆ ವಿಚಾರಣೆಗೆ ಹಾಜರಾಗಿರಲಿಲ್ಲ ಎಂದರು. ಜೂನ್.17ರ ಸೋಮವಾರದಂದು ವಿಚಾರಣೆಗೆ ಬರುವುದಾಗಿ ನಾನು ಮೊದಲೇ ತಿಳಿಸಿದ್ದೆ. ಹೈಕೋರ್ಟ್ ಸಹ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಅಲ್ಲದೇ ಬಂಧಿಸದಂತೆ ತಡೆಯಾಜ್ಞೆ ‌ನೀಡಿದೆ. ಈ ಹಿನ್ನಲೆಯಲ್ಲಿ ನಾನು ಜೂನ್.17ರ ಸೋಮವಾರದಂದು ಸೋಮವಾರ ನಾನು ವಿಚಾರಣೆಗೆ ಹೋಗುತ್ತಿದ್ದೇನೆ ಎಂದರು. ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದಂತ ಅವರು, ಅನಾವಶ್ಯಕವಾಗಿ ಗೊಂದಲ ಉಂಟು ಮಾಡುವ ಕೆಲಸ ಮಾಡಿದ್ರು. ನಾನು ಯಾರ ಮೇಲೆ ದೂರುವುದಿಲ್ಲ. ಕಾಲವೇ ಎಲ್ಲ ತೀರ್ಮಾನ ಮಾಡಲಿದೆ, ವಾಸ್ತವ ಏನು ಅಂತ ಜನರಿಗೆ ಗೊತ್ತಿದೆ. ಯಾರು ಕುತಂತ್ರ ಮಾಡ್ತಿದ್ದಾರೋ ಜನ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂಬುದಾಗಿ…

Read More

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ, ಯುಪಿಎಸ್ಸಿ ನಾಗರಿಕ ಸೇವೆಗಳ (ಪ್ರಿಲಿಮಿನರಿ) ಪರೀಕ್ಷೆ 2024 ಅನ್ನು ನಾಳೆ, ಜೂನ್ 16, 2024 ರಂದು ನಡೆಸಲಿದೆ. ಬೆಳಗ್ಗೆ 9.30ರಿಂದ 11.30ರವರೆಗೆ ಸಾಮಾನ್ಯ ಅಧ್ಯಯನ ಪತ್ರಿಕೆ, ಮಧ್ಯಾಹ್ನ 2.30ರಿಂದ 4.30ರವರೆಗೆ ಸಿಎಸ್ಎಟಿ ಪರೀಕ್ಷೆ ನಡೆಯಲಿದೆ. 44,000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ನಾಳೆ ಕಠಿಣ ಪರೀಕ್ಷೆಗೆ ಹಾಜರಾಗುವ ನಿರೀಕ್ಷೆಯಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಈಗಾಗಲೇ ಇಲ್ಲದಿದ್ದರೆ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಬೇಕು ಮತ್ತು ಮಾನ್ಯ ಫೋಟೋ ಗುರುತಿನ ಚೀಟಿಯೊಂದಿಗೆ ತಪ್ಪದೇ ಪರೀಕ್ಷಾ ಕೇಂದ್ರಕ್ಕೆ ಕೊಂಡೊಯ್ಯಬೇಕು. ಯಾವುದೇ ಕೊನೆಯ ಕ್ಷಣದ ನೂಕುನುಗ್ಗಲನ್ನು ತಪ್ಪಿಸಲು ಪರೀಕ್ಷಾ ಕೇಂದ್ರಕ್ಕೆ ಬೇಗ ಹೋಗುವುದನ್ನು ಮರೆಯಬೇಡಿ. ಅಭ್ಯರ್ಥಿಗಳು ಪರೀಕ್ಷೆ ಪ್ರಾರಂಭವಾಗುವ ಕನಿಷ್ಠ 30 ನಿಮಿಷಗಳ ಮೊದಲು ಅಂದರೆ ಬೆಳಿಗ್ಗೆ 9 ಗಂಟೆಗೆ ಮತ್ತು ಮಧ್ಯಾಹ್ನ 12 ಗಂಟೆಗೆ ಪರೀಕ್ಷಾ ಸ್ಥಳವನ್ನು ತಲುಪಬೇಕು. ಯಾವುದೇ ಬೆಲೆಬಾಳುವ ವಸ್ತುಗಳು/ ದುಬಾರಿ ವಸ್ತುಗಳು, ಮೊಬೈಲ್ ಫೋನ್ಗಳು, ಡಿಜಿಟಲ್ ವಾಚ್ಗಳು, ಇತರ ಐಟಿ ಗ್ಯಾಜೆಟ್ಗಳು, ಪುಸ್ತಕಗಳು, ಚೀಲಗಳು ಇತ್ಯಾದಿಗಳೊಂದಿಗೆ ಪರೀಕ್ಷಾ…

Read More

ಬೆಂಗಳೂರು: ಸಂಸದರಾಗಿ ಆಯ್ಕೆಯಾದ ನಂತ್ರ, ಕೋಟಾ ಶ್ರೀನಿವಾಸ ಪೂಜಾರಿಯವರು ವಿಧಾನಪರಿಷತ್ ಸದಸ್ಯಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ವಿಧಾನ ಪರಿಷತ್ ವಿಪಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಿದಂತೆ ಆಗಿದೆ. ಇಂದು ಸಭಾಪತಿ ಬಸವರಾಜ ಹೊರಟ್ಟಿಯವರನ್ನು ಭೇಟಿಯಾದಂತ ನೂತನ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಅವರು, ತಮ್ಮ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದರು. ಅಂದಹಾಗೇ ಕೋಟಾ ಶ್ರೀನಿವಾಸ ಪೂಜಾರಿ ಅವರು ಲೋಕಸಭಾ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದರು. ಬಿಜೆಪಿ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು. ಈ ಹಿನ್ನಲೆಯಲ್ಲಿ ವಿಧಾನಪರಿಷತ್ ಸದಸ್ಯ ಸ್ಥಾನ, ವಿಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. https://kannadanewsnow.com/kannada/ban-on-consumption-of-these-foods-in-india-heres-the-list-of-banned-foods-of-fssai-banned-foods/ https://kannadanewsnow.com/kannada/swati-maliwal-assault-case-court-extends-bibhav-kumars-judicial-custody-till-june-22/

Read More

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರ ನ್ಯಾಯಾಂಗ ಬಂಧನವನ್ನು ಇಲ್ಲಿನ ನ್ಯಾಯಾಲಯ ಜೂನ್ 22 ರವರೆಗೆ ವಿಸ್ತರಿಸಿದೆ. ಮೇ 13 ರಂದು ಮುಖ್ಯಮಂತ್ರಿಯ ಅಧಿಕೃತ ನಿವಾಸದಲ್ಲಿ ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪ ಕುಮಾರ್ ಮೇಲಿದೆ. ಕುಮಾರ್ ಅವರನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಕರ್ತವ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು, ಅವರು ಕಸ್ಟಡಿಯನ್ನು ವಿಸ್ತರಿಸಿದರು ಮತ್ತು ಜೂನ್ 22 ರಂದು ಅವರನ್ನು ಹಾಜರುಪಡಿಸುವಂತೆ ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಿದರು. ಇದಕ್ಕೂ ಮುನ್ನ ಶುಕ್ರವಾರ, ತನಿಖಾಧಿಕಾರಿ (ಐಒ) ಹಾಜರಿಲ್ಲದ ಕಾರಣ ನ್ಯಾಯಾಲಯವು ಕುಮಾರ್ ಅವರ ಕಸ್ಟಡಿಯನ್ನು ಒಂದು ದಿನ ವಿಸ್ತರಿಸಿತ್ತು. ಕುಮಾರ್ ಅವರನ್ನು ಮೇ 18ರಂದು ಬಂಧಿಸಲಾಗಿತ್ತು. ಬಂಧನದಿಂದಾಗಿ ಅವರ ನಿರೀಕ್ಷಣಾ ಜಾಮೀನು ಅರ್ಜಿ ನಿಷ್ಪ್ರಯೋಜಕವಾಗಿದೆ ಎಂದು ಗಮನಿಸಿದ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಅದೇ ದಿನ ಅವರನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಿತು. ಮೇ 24 ರಂದು…

Read More

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕು ಮೊಗವೀರ ಮಹಾಜನ ಸಂಘದಿಂದ ಜೂ.17ರಂದು ವಾರ್ಷಿಕ ಮಹಾಸಭೆಯನ್ನು ನಿಗದಿ ಪಡಿಸಲಾಗಿದೆ. ಈ ಸಭೆಯಲ್ಲೇ ನೋಟ್ ಬುಕ್ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಕೂಡ ನಡೆಯಲಿದೆ. ಈ ಕುರಿತು ಪತ್ರಿಕಾ ಗೋಷ್ಠಿಯಲ್ಲಿ ಮಾಹಿತಿ ನೀಡಿದಂತ ಸಾಗರ ತಾಲ್ಲೂಕು ಮೊಗವೀರ ಮಹಾಜನ ಸಂಘದ ಅಧ್ಯಕ್ಷ ನಾಗರಾಜ್ ಆರ್ ಜಲಗುಂಜಿ ಅವರು, 2024-25ನೇ ಸಾಲಿನ ವಾರ್ಷಿಕ ಮಹಾ ಸಭೆಯನ್ನು ದಿನಾಂಕ 17-06-2024ರಂದು ನಡೆಸಲು ನಿಗದಿ ಪಡಿಸಲಾಗಿದೆ. ಸಾಗರದ ಮಾಧವ ಮಂಗಲ ಸಭಾ ಭವನದಲ್ಲಿ ಸಭೆ ನಡೆಸಲು ನಿಗದಿ ಪಡಿಸಲಾಗಿದೆ ಎಂದರು. ಈ ಮಹಾಸಭೆಯ ಕಾರ್ಯಕ್ರಮವನ್ನು ಉಡುಪಿಯ ಡಾ.ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿಯ ನಾಡೋಜ ಡಾ.ಜಿ ಶಂಕರ್ ಅವರು ಉದ್ಘಾಟಿಸಲಿದ್ದಾರೆ. ಈ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದಂತ ಜಯ ಸಿ ಕೋಟ್ಯಾನ್ ಉಪಸ್ಥಿತರಿರಲಿದ್ದಾರೆ ಎಂದು ಹೇಳಿದರು. ಜೂನ್.17ರ ಸಂಘದ ಸಭೆಯ ವೇಳೆಯಲ್ಲಿ 2024-25ನೇ ಸಾಲಿನಲ್ಲಿ ಮೊಗವೀರ ಸಮುದಾಯದ ವಿದ್ಯಾರ್ಥಿಗಳಿಗೆ ನೋಟ್…

Read More

ಶಿವಮೊಗ್ಗ: ಈ ಹಿಂದೆ 2019ರಲ್ಲಿ ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿದ್ದಂತ ಸಂದರ್ಭದಲ್ಲಿ, ಪರಿಶಿಷ್ಟ ಪಂಗಡದ ಬುಡಕಟ್ಟು ಜನಾಂಗದವರಿಗೆ ಪೌಷ್ಟಿಕ ಆಹಾರ ಯೋಜನೆ ಅನುಷ್ಠಾನಗೊಳಿಸಲಾಗಿತ್ತು. ಈಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ. ಸಿದ್ಧರಾಮಯ್ಯನವರೇ ಮುಖ್ಯಮಂತ್ರಿಯಾಗಿದ್ದಾರೆ. ಇಂತಹ ಸಂದರ್ಭದಲ್ಲಿಯೇ ಅವರ ಮಹತ್ವಾಕಾಂಕ್ಷೆಯ ಯೋಜನೆ ಸ್ಥಗಿತಗೊಂಡಿದೆ. ಈ ಪೌಷ್ಟಿಕ ಆಹಾರ ಯೋಜನೆಯನ್ನು ಪುನರ್ ಪ್ರಾರಂಭಿಸುವಂತೆ ಕರ್ನಾಟಕ ಅರಣ್ಯ ಮೂಲ ಬುಡಕಟ್ಟುಗಳ ಒಕ್ಕೂಟ ಆಗ್ರಹಿಸಿದೆ. ಈ ಕುರಿತಂತೆ ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಸಾಮಾಜಿಕ ಹೋರಾಟಗಾರ ಶಿವಾನಂದ ಕುಗ್ವೆ ಅವರು, ಹೆಚ್. ಆನಂಜನೇಯ ಸಮಾಜ ಕಲ್ಯಾಣ ಸಚಿವರಾಗಿದ್ದಂತ ಸಂದರ್ಭದಲ್ಲಿ, ಸಿಎಂ ಸಿದ್ಧರಾಮಯ್ಯ ಅವರು ಅರಣ್ಯ ಹಾಗೂ ಅರಣ್ಯಗಳ ಅಂಚಿನಲ್ಲಿ ವಾಸ ಮಾಡುತ್ತಾ, ಭೂಹೀನ ಕೃಷಿ ಕಾರ್ಮಿಕರಾಗಿರುವ ಹಸಲರು ಜನಾಂಗಕ್ಕೆ ಪೌಷ್ಟಿಕ ಆಹಾರ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಆದ್ರೇ ಈ ಯೋಜನೆ ಈಗ ಸ್ಥಗಿತಗೊಂಡಿದ್ದು, ಹಸಲರು ಸಮುದಾಯದವರಿಗೆ ಒಂದೊತ್ತಿನ ಊಟಕ್ಕೂ ಸಮಸ್ಯೆ ಉಂಟಾಗಿದೆ ಎಂದರು. 2019ರಲ್ಲಿ ಸಿಎಂ ಸಿದ್ಧರಾಮಯ್ಯ ಜಾರಿಗೊಳಿಸಿದ್ದಂತ ಯೋಜನೆಯನ್ನು ಕಳೆದ ನಾಲ್ಕು…

Read More

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ( PDO) ವೃಂದದ ರಾಜ್ಯ ಮಟ್ಟದ ಕರಡು ಜೇಷ್ಟತಾ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ವೃಂದದ ದಿನಾಂಕ: 31.12.2011ರಲ್ಲಿದ್ದಂತೆ, ಅಂತಿಮ ಜೇಷ್ಟತಾ ಪಟ್ಟಿಯನ್ನು ಉಲ್ಲೇಖಿತ (1)ರ ಸರ್ಕಾರದ ಆದೇಶದಲ್ಲಿ ಪುಕಟಿಸಲಾಗಿರುತ್ತದೆ ಎಂದಿದ್ದಾರೆ. ಜೇಷ್ಕೃತೆ ನಿರ್ಧರಣೆ ಸಂಬಂಧವಾಗಿ ಬಾಧಿತರಾದ ಕೆಲವು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮಾನ್ಯ ಉಚ್ಚ ನ್ಯಾಯಾಲಯದಲ್ಲಿ ಹಲವು ರಿಟ್ ಅರ್ಜಿಗಳನ್ನು ಸಲ್ಲಿಸಿ ಪ್ರಶ್ನಿಸಿದ್ದರು. ಮಾನ್ಯ ಉಚ್ಚ ನ್ಯಾಯಾಲಯವು ರಿಟ್ ಅರ್ಜಿ ಸಂಖ್ಯೆ: 4524/2021 (ORE DEF GEF 26196 of 2019, 33613 of 2019, 201903 of 2019, 224 of 2021, 200780 of 2022, 3036 of 2023) O: 22.06.2023 dow ಹೊರಡಿರುವ…

Read More

ನವದೆಹಲಿ: ಬಹುತೇಕರು ಎರಡು ಇಲ್ಲವೇ ಅದಕ್ಕಿಂತ ಹೆಚ್ಚು ಸಿಮ್ ಕಾರ್ಡ್ ಗಳನ್ನು ಬಳಕೆ ಮಾಡುತ್ತಿರುತ್ತಾರೆ. ಹೀಗೆ ಒಂದಕ್ಕಿಂತ ಹೆಚ್ಚು ಸಿಮ್ ಕಾರ್ಡ್ ಬಳಕೆ ಮಾಡೋರಿಗೆ ಬಳಕೆದಾರರ ಶುಲ್ಕವನ್ನು ಟ್ರಾಯ್ಡ್ ವಿಧಿಸಲಿದೆ ಎಂಬುದಾಗಿ ಸುದ್ದಿಯೊಂದು ಹರಿದಾಡುತ್ತಿತ್ತು. ಅದರ ಅಸಲಿ ಸತ್ಯ ಏನು ಅಂತ ಮುಂದೆ ಓದಿ. ಅನೇಕರು ಎರಡು ಮೊಬೈಲ್ ಗಳನ್ನು ಬಳಕೆ ಮಾಡುತ್ತಿರುತ್ತಾರೆ. ಒಂದೊಂದರಲ್ಲಿ ಎರಡು ಎರಡು ಸಿಮ್ ಕಾರ್ಡ್ ಅಂದ್ರೂ ನಾಲ್ಕು ಸಿಮ್ ಕಾರ್ಡ್ ಬಳಕೆ ಮಾಡೋರು ಇದ್ದಾರೆ. ಇನ್ನೂ ಕೆಲವರು ಇದಕ್ಕಿಂತ ಹೆಚ್ಚು ಮಾಡುತ್ತಲೂ ಇರಬಹುದು. ಆದ್ರೇ ಇವರಿಗೆ ಆತಂಕ ಹುಟ್ಟಿಸಿದ್ದು, ಇನ್ಮೇಲೆ ಒಂದಕ್ಕಿಂತ ಹೆಚ್ಚು ಸಿಮ್ ಕಾರ್ಡ್ ಬಳಕೆ ಮಾಡೋರಿಗೆ ಬಳಕೆದಾರರ ಶುಲ್ಕ ವಿಧಿಸುತ್ತೆ ಟ್ರಾಯ್ಡ್ ಎಂಬುದಾಗಿತ್ತು. ಸೋಷಿಯಲ್ ಮೀಡಿಯಾದಲ್ಲಿ ಸುದ್ದಿ ವೈರಲ್ ಆಗಿ, ಒಂದಕ್ಕಿಂತ ಹೆಚ್ಚು ಸಿಮ್ ಕಾರ್ಡ್ ಬಳಕೆ ಮಾಡುತ್ತಿದ್ದವರು ಆತಂಕ, ಗಾಬರಿಗೂ ಕಾರಣವಾಗಿತ್ತು. ಅಯ್ಯೋ ಇದೇನಪ್ಪ ಈಗಾಗಲೇ ಕರೆನ್ಸಿ ಹಾಕಿಸೋದಕ್ಕೆ ಕಷ್ಟವಾಗಿದೆ. ಇದರ ನಡುವೆ ಈ ಶುಲ್ಕ ವಿಧಿಸುತ್ತಿರುವಂತ ಸುದ್ದಿ ಓದಿ, ಶಾಕ್…

Read More

ಮೈಸೂರು : ರಾಜ್ಯದಲ್ಲಿ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ ಅವು ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮವಾಗಿರುವುದರಿಂದ ಈ ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಗ್ಯಾರಂಟಿಗಳನ್ನು ಮರುಪರಿಶೀಲಿಸಲಾಗುವುದೇ ಎಂಬ ಪ್ರಶ್ನೆಗೆ ಮೇಲಿನಂತೆ ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುವುದಿಲ್ಲ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಬಂಧಿಸಬಾರದು ಎಂದು ನ್ಯಾಯಾಲಯದ ಆದೇಶದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ನ್ಯಾಯಾಲಯದ ಆದೇಶದ ಮೇಲೆ ನಾನು ಪ್ರತಿಕ್ರಿಯೆ ಎಂದರು. ಬಿಜೆಪಿ ಹಾಗೂ ಜೆಡಿಎಸ್ ಈ ಪ್ರಕರಣದಲ್ಲಿ ಕಾಂಗ್ರೆಸ್‍ನದ್ದು ರಾಜಕೀಯ ಷಡ್ಯಂತರ ಎಂದು ಆರೋಪಿಸಿರುವ ಬಗ್ಗೆ ಮಾತನಾಡಿ ದೂರು ನೀಡಿರುವವರು ಯಾರು? ಸರ್ಕಾರವೇ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಪಕ್ಷ ಧ್ವೇಷದ ರಾಜಕಾರಣ ಮಾಡುವುದಿಲ್ಲ. ಕಾನೂನು ರೀತಿ ಕೆಲಸ ಮಾಡುವ ಪೋಲೀಸರ ಕೆಲಸದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ನ್ಯಾಯಾಲಯದ ಆದೇಶವನ್ನು ಎಲ್ಲರೂ ಒಪ್ಪಿ ಅದರಂತೆ ನಡೆದುಕೊಳ್ಳಬೇಕಾಗುತ್ತದೆ ಎಂದರು. ನೆಲದ ಕಾನೂನನ್ನು ನಾವು ಗೌರವಿಸುತ್ತೇವೆ ದೇವೇಗೌಡರ ಕುಟುಂಬವನ್ನು ನಾಶ…

Read More