Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: “ಯಾವುದೇ ಸಮುದಾಯಕ್ಕೆ ಅನ್ಯಾಯವಾಗಬಾರದು ಎಂಬುದು ನಮ್ಮ ಸರ್ಕಾರದ ಉದ್ದೇಶ. ಮೀಸಲಾತಿ ವಿಚಾರ ನ್ಯಾಯಾಲಯದಲ್ಲಿದ್ದು ನಾವು ಹಸ್ತಕ್ಷೇಪ ಮಾಡಲು ಆಗುವುದಿಲ್ಲ. ಮುಂದಿನ ದಿನಗಳಲ್ಲಿ ಪಂಚಮಸಾಲಿ ಸಮುದಾಯದ ಜತೆ ಮತ್ತೆ ಚರ್ಚೆ ಮಾಡುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಪಂಚಮಸಾಲಿ ಲಿಂಗಾಯತರ ಮೀಸಲಾತಿ ವಿಚಾರವಾಗಿ ಸಮುದಾಯದ ನಾಯಕರುಗಳ ಜತೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಸಭೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಶುಕ್ರವಾರ ಮಾಹಿತಿ ನೀಡಿದರು. “ಕಾಲಮಿತಿಯಲ್ಲಿ ಮೀಸಲಾತಿ ನೀಡಬೇಕು ಎಂದರೆ ಅದು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟವಾಗಿ ಹೇಳಿದ್ದಾರೆ. ಹಿಂದೆ ಬಿಜೆಪಿ ಸರ್ಕಾರ ತರಾತುರಿಯಲ್ಲಿ ಬೇರೆ ಸಮಾಜಗಳಿಗೆ ನೋವಾಗುವಂತೆ ತೀರ್ಮಾನ ಮಾಡಿತ್ತು. ನಂತರ ಆ ಸರ್ಕಾರವೇ ನಾವು ಯಾವುದೇ ಮೀಸಲಾತಿ ಜಾರಿ ಮಾಡುವುದಿಲ್ಲ ಎಂದು ನ್ಯಾಯಾಲಯದಲ್ಲಿ ಅಫಿಡವಿಟ್ ಸಲ್ಲಿಸಿದೆ. ಈ ವಿಚಾರ ನ್ಯಾಯಾಲಯದಲ್ಲಿ ಇರುವಾಗ ನಾವು ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ” ಎಂದು ತಿಳಿಸಿದರು. “ಈಗ ಚುನಾವಣಾ ನೀತಿ ಸಂಹಿತೆ ಇದೆ. ಇದಾದ ನಂತರ ಸಭೆ ಕರೆದು ಮಾತನಾಡುತ್ತೇವೆ ಎಂದು ಸಮುದಾಯದ ಮುಖಂಡರುಗಳಿಗೆ…
ಬೆಂಗಳೂರು : ಬೆಂಗಳೂರಿಗೆ ಬಂದಾಗಲೆಲ್ಲಾ ಎಚ್.ಎಂ.ಟಿ., ಕೆ.ಐ.ಓ.ಸಿ.ಎಲ್. ಬಗ್ಗೆ ಮಾತನಾಡುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, 10 ವರ್ಷವಾದರೂ ಆರಂಭವೇ ಆಗದ ಎನ್.ಎಂ.ಡಿ.ಸಿ. ಉಕ್ಕು ಕಾರ್ಖಾನೆ, ಪುನಶ್ಚೇತನ ಆಗದ ವಿಐಎಸ್ಎಲ್ ಬಗ್ಗೆ ಏಕೆ ಮಾತನಾಡುವುದಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿರುಗೇಟು ನೀಡಿದ್ದಾರೆ. ಹಿಂದೂಸ್ತಾನ್ ಮಷೀನ್ ಅಂಡ್ ಟೂಲ್ಸ್ (ಹೆಚ್ಎಂಟಿ) ಹಾಗೂ ಕುದುರೆಮುಖ ಕಬ್ಬಿಣ ಮತ್ತು ಅದಿರು ಸಂಸ್ಥೆ (ಕೆಐಒಸಿಎಲ್) ವಿಷಯದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಹಸಿ ಸುಳ್ಳು ಹೇಳುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಎಚ್.ಎಂ.ಟಿ. ಭೂಮಿ ಡಿನೋಟಿಫಿಕೇಷನ್ ಆಗಿಲ್ಲ ಎಂಬುದು ಸುಳ್ಳೆ? ಅರಣ್ಯೇತರ ಉದ್ದೇಶಕ್ಕೆ ಪರಿವರ್ತನೆ ಆಗದ ಭೂಮಿ ಅರಣ್ಯವಾಗೇ ಉಳಿಯುತ್ತದೆ ಎಂಬುದು ಸುಳ್ಳೇ? ಎಚ್.ಎಂ.ಟಿ. 300 ಕೋಟಿ ರೂ.ಗೆ 165 ಎಕರೆ ಅರಣ್ಯ ಭೂಮಿ ಮಾರಾಟ ಮಾಡಿರುವುದು ಸುಳ್ಳೇ? ಕೆ.ಐ.ಓ.ಸಿ.ಎಲ್. ಗಣಿಗಾರಿಕೆ ಮಾಡುವಾಗ ಲಕ್ಯಾಂಡ್ಯಾಂ, ಅರಣ್ಯ, ಪರಿಸರಕ್ಕೆ ಹಾನಿ ಮಾಡಿರುವುದು ಸುಳ್ಳೇ? ಅರಣ್ಯ ಇಲಾಖೆಗೆ ಕೆಐಓಸಿಎಲ್…
ಬೆಂಗಳೂರು: ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ. 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾದ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಮಾಡಿದೆ. ಸಿಎಂ ಸಿದ್ದರಾಮಯ್ಯ ಅವರದ್ದೂ ಸೇರಿದಂತೆ ಸುಮಾರು 1,200 ಕ್ಕೂ ಅಧಿಕ ನಿವೇಶನಗಳ ಹಗರಣ ನಡೆದಿದೆ ಎಂಬ ದೂರು ಬಂದಿದ್ದು, ಅದಕ್ಕಾಗಿ ದಾಳಿ ಮಾಡಲಾಗಿದೆ. 3-4 ಸಾವಿರ ಕೋಟಿ ರೂ. ಹಗರಣ ನಡೆದಿದೆ ಎಂದು ಮುಡಾ ಅಧ್ಯಕ್ಷರಾಗಿದ್ದ, ಕಾಂಗ್ರೆಸ್ನವರೇ ಆದ ಮರಿಗೌಡ ಪತ್ರದಲ್ಲಿ ತಿಳಿಸಿದ್ದರು. ಅದಾದ ಬಳಿಕ ಸ್ನೇಹಮಯಿ ಕೃಷ್ಣ ಇಡಿಗೆ ದೂರು ನೀಡಿದ್ದಾರೆ. ಇದರಲ್ಲಿ ರಾಜಕೀಯದ ಪ್ರಶ್ನೆ ಉದ್ಭವವೇ ಆಗುವುದಿಲ್ಲ. ಇದರಲ್ಲಿ ಬಿಜೆಪಿ ಅಥವಾ ಕೇಂದ್ರ ಸರ್ಕಾರದ ಪಾತ್ರವೇ ಇಲ್ಲ ಎಂದರು. ಇದನ್ನು ರಾಜಕೀಯವಾಗಿ ನೋಡಬಾರದು. ನಿವೇಶನಗಳು ವಾಪಸ್ ಸಿಕ್ಕರೆ ಹಾಗೂ ಹಣ ಸಿಕ್ಕರೆ ರಾಜ್ಯ ಸರ್ಕಾರಕ್ಕೆ ಲಾಭವಾಗುತ್ತದೆ. ಸರ್ಕಾರದಲ್ಲಿ ಖಜಾನೆ ಖಾಲಿಯಾಗಿ ಸಂಬಳ ಕೊಡಲಾಗದ ಪರಿಸ್ಥಿತಿ ಇದೆ. ಇಂತಹ ಸ್ಥಿತಿಯಲ್ಲಿ…
ಮಂಗಳೂರು; ಬಿಲ್ಲವ ಸಮುದಾಯದ ಒಂದು ಲಕ್ಷ ಹೆಣ್ಮಕ್ಕಳು ವೇಶ್ಯಯರಿದ್ದಾರೆ ಎಂಬುದಾಗಿ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಅವರು ನೀಡಿದ್ದಂತ ಹೇಳಿಕೆ ವೈರಲ್ ಆಗಿತ್ತು. ಅಲ್ಲದೇ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆಯೂ ಒತ್ತಾಯಿಸಲಾಗಿತ್ತು. ಈ ಬೆನ್ನಲ್ಲೇ ಅವರನ್ನು ಸುಳ್ಯದ ಬೆಳ್ಳಾರೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಹಿಂದೂ ಧರ್ಮದ ಬಿಲ್ಲವ ಸಮುದಾಯದಲ್ಲಿ 1 ಲಕ್ಷಕ್ಕೂ ಹೆಚ್ಚು ಜನ ಹೆಣ್ಣು ಮಕ್ಕಳು ವೇಶ್ಯೆಯರಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.ಈ ಹಿನ್ನೆಲೆಯಲ್ಲಿ ಬೆಳ್ಳಾರೆ ಪೊಲೀಸರು ಸಂಜೀವ ಪೂಜಾರಿ ಕಾಣಿಯೂರು ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಹಿಂದೂ ಸಂಘಟನೆಯ ಕಾರ್ಯಕರ್ತ ಸುರೇಶ್ ಎಂಬುವರ ಜೊತೆ ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ದೂರವಾಣಿ ಮುಖಾಂತರ ಮಾತನಾಡುವಾಗ ಈ ಒಂದು ಹೇಳಿಕೆ ನೀಡಿದ್ದು ಅಧಿಕಾರಿಯ ಈ ಹೇಳಿಕೆಗೆ ಹಿಂದೂಪರ ಸಂಘಟನೆಗಳು ತೀವ್ರ ಆಕ್ರೋಶ ಹೊರಹಾಕಿದ್ದರು. ದೂರವಾಣಿಯಲ್ಲಿ ಮಾತನಾಡುವಾಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಸಮಾಜಕ್ಕೆ ಸೇರಿದ ಒಂದು ಲಕ್ಷ…
ಮಂಡ್ಯ: ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ನ್ಯಾಯಾಲಯದಲ್ಲಿದೆ. ಈ ಸಂದರ್ಭದಲ್ಲಿಯೇ ಮಂಡ್ಯದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು, ಸಿಎಂ ಸಿದ್ಧರಾಮಯ್ಯ ವಿರುದ್ಧ ಮತ್ತೊಂದು ಮುಡಾ ಹಗರಣದ ಬಾಂಬ್ ಸಿಡಿಸಿದ್ದಾರೆ. ಇಂದು ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು 434 ಎಕರೆ ಜಮೀನನ್ನು ಹೊಸ ಬಡವಾಣೆ ಮಾಡಲು ಡಿನೋಟಫಿಕೇಷ್ ಮಾಡಲಾಗುತ್ತದೆ. ಸರ್ವೆ ನಂಬರ್.17/4ರ ಜಮೀನು ಇದಾಗಿದೆ. ಈ ಜಮೀನು ಅರ್ಜಿ ಹಾಕಿದ 20 ದಿನಗಳಲ್ಲೇ ಡಿನೋಟಿಫಿಕೇಷನ್ ಆಗುತ್ತದೆ. ಸಾಕಮ್ಮ ಎಂಬುವರು ಅರ್ಜಿ ಸಲ್ಲಿಸುತ್ತಾರೆ. ಅವರಿಗೆ ಮಂಜೂರಾದಂತ ಜಮೀನನ್ನು ಸಿಎಂ ಸಿದ್ಧರಾಮಯ್ಯ ಖರೀದಿಸಿದ್ದಾರೆ ಎಂಬುದಾಗಿ ಮತ್ತೊಂದು ಮುಡಾ ಹಗರಣವನ್ನು ಬಯಲಿಗಿಟ್ಟಿದ್ದಾರೆ. ಸಿಎಂ ಸಿದ್ಧರಾಮಯ್ಯ ಸತ್ಯ ಮೇವ ಜಯತೆ ಅಂತಾರೆ. ಹಾಗಾದ್ರೇ ಸಾಕಮ್ಮ ಎಂಬುವರ ಜಮೀನನ್ನು ಸಿಎಂ ಸಿದ್ಧರಾಮಯ್ಯ ಅವರು ಖರೀದಿ ಮಾಡಿದ್ದು ಏಕೆ ಎಂಬುದಾಗಿ ಪ್ರಶ್ನಿಸಿದ್ದಾರೆ. https://kannadanewsnow.com/kannada/if-you-deposit-rs-333-in-this-post-office-scheme-you-will-get-rs-17-lakh/ https://kannadanewsnow.com/kannada/panchamasali-reservation-issue-here-are-the-highlights-of-the-meeting-chaired-by-cm-siddaramaiah/
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪಂಚಮಸಾಲಿ ಸಮುದಾಯದ ಮೀಸಲಾತಿ ಕುರಿತಾಗಿ ಜಯಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದ ನಿಯೋಗದೊಂದಿಗೆ ನಡೆಸಿದ ಸಭೆಯ ಮುಖ್ಯಾಂಶಗಳನ್ನು ಮುಂದೆ ಓದಿ. •ಪ್ರವರ್ಗ-2ಎ ಅಡಿ ಮೀಸಲಾತಿ ಒದಗಿಸುವಂತೆ ಪಂಚಮಸಾಲಿ ಲಿಂಗಾಯತ ಸಮುದಾಯದ ಬೇಡಿಕೆ ಕುರಿತು ಕಾನೂನು ಪ್ರಕಾರ, ಸಂವಿಧಾನದ ಆಶಯಕ್ಕೆ ಅನುಗುಣವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಅವರು ಹೇಳಿದರು. • ಸರ್ಕಾರ ಮೀಸಲಾತಿ ವಿಷಯದಲ್ಲಿ ಮುಕ್ತ ಮನಸ್ಸು ಹೊಂದಿದೆ. ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿದೆ. ಎಲ್ಲಾ ದುರ್ಬಲ ವರ್ಗದವರಿಗೂ ನ್ಯಾಯ ದೊರೆಯಬೇಕು ಎಂಬುವುದು ನಮ್ಮ ಸರ್ಕಾರದ ನಿಲುವು. • ಶಾಶ್ವತವಾದ ಹಿಂದುಳಿದ ವರ್ಗಗಳ ಆಯೋಗವಿದೆ. ಅದರ ಅಂತಿಮ ಶಿಫಾರಸ್ಸು ಇನ್ನೂ ನಮ್ಮ ಕೈಗೆ ತಲುಪಿಲ್ಲ. ಚುನಾವಣೆ ನೀತಿ ಸಂಹಿತೆ ಇರುವುದರಿಂದ ಮೀಸಲಾತಿ ಕುರಿತಾಗಿ ಅಡ್ವೊಕೇಟ್ ಜನರಲ್, ಕಾನೂನು ಇಲಾಖೆ, ತಜ್ಞರೊಂದಿಗೆ, ಸಂಪುಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಈಗಲೇ ಯಾವುದೇ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ. • ಸಂವಿಧಾನದ ಆಶಯದಂತೆ ಕ್ರಮ. ಯಾವುದೇ ತೀರ್ಮಾನ ಕೈಗೊಳ್ಳುವುದಿದ್ದರೂ, ಕಾನೂನು…
ಕೆಎನ್ಎನ್ಡಿಜಿಟಲ್ ಡೆಸ್ಕ್ : ಪ್ರತಿಯೊಬ್ಬರೂ ತಮ್ಮ ಗಳಿಕೆಯ ಒಂದು ಭಾಗವನ್ನ ಉಳಿಸುತ್ತಾರೆ. ತಮ್ಮ ಹಣವನ್ನ ಸುರಕ್ಷಿತವಾಗಿರಿಸಿಕೊಳ್ಳುವುದರ ಜೊತೆಗೆ, ಅವರು ಬಲವಾದ ಆದಾಯವನ್ನ ಪಡೆಯುವಲ್ಲಿ ಹೂಡಿಕೆ ಮಾಡಲು ಬಯಸುತ್ತಾರೆ. ಉಳಿಸಲು ವಿವಿಧ ಮಾರ್ಗಗಳಿವೆ. ಸಾಮಾನ್ಯವಾಗಿ ದೈನಂದಿನ ಉಳಿತಾಯವನ್ನ ಸಂಗ್ರಹಿಸಲು ಹಲವು ಮಾರ್ಗಗಳಿವೆ. ಇದರಲ್ಲಿ ಪ್ರತಿದಿನ 333 ರೂಪಾಯಿ ಠೇವಣಿ ಮಾಡುವ ಮೂಲಕ ನೀವು 17 ಲಕ್ಷಗಳ ಮೊತ್ತವನ್ನ ಪಡೆಯಬಹುದು. ಅದೇ ಪೋಸ್ಟ್ ಆಫೀಸ್ ರಿಕರಿಂಗ್ ಡೆಪಾಸಿಟ್ ಸ್ಕೀಮ್. ಇದು ಹೂಡಿಕೆದಾರರಿಗೆ ದೊಡ್ಡ ಆದಾಯವನ್ನ ನೀಡುವ ಯೋಜನೆಯಾಗಿದೆ. 10 ವರ್ಷಗಳಲ್ಲಿ 17 ಲಕ್ಷ ರೂಪಾಯಿ.! ದೇಶದಲ್ಲಿ ವಿಶೇಷವಾಗಿ ಮಧ್ಯಮ ವರ್ಗದ ಕುಟುಂಬಗಳಲ್ಲಿ ಉಳಿತಾಯಕ್ಕಾಗಿ (ಮಧ್ಯಮ ವರ್ಗದವರಿಗೆ ಉಳಿತಾಯದ ಆಯ್ಕೆ) ವಿವಿಧ ಆಯ್ಕೆಗಳಿವೆ. ಪೋಸ್ಟ್ ಆಫೀಸ್ ಯೋಜನೆಯಲ್ಲಿ ದಿನ ಉಳಿತಾಯ ಉತ್ತಮ ಆದಾಯವನ್ನ ಪಡೆಯಬಹುದು. ಕೇವಲ 10 ವರ್ಷಗಳಲ್ಲಿ ನೀವು 17 ಲಕ್ಷ ಪಡೆಯಬಹುದು. ಅಂಚೆ ಕಛೇರಿಯಲ್ಲಿ ವಿವಿಧ ಸಣ್ಣ ಉಳಿತಾಯ ಯೋಜನೆಗಳನ್ನ ನಿರ್ವಹಿಸಲಾಗುತ್ತದೆ. ಮರುಕಳಿಸುವ ಠೇವಣಿ ಯೋಜನೆಗಳಲ್ಲಿ RD ವಿಶಿಷ್ಟವಾಗಿದೆ. ಸರಕಾರ ನೀಡುವ ಬಡ್ಡಿ…
ಬೆಂಗಳೂರು: ಮಂಗಳೂರು ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ದೀಪಾವಳಿ ಹಬ್ಬಕ್ಕೆ ಊರಿಗೆ ತೆರಳುವ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕೆಲ ವಿಶೇಷ ರೈಲುಗಳ ಸಂಚಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಬಗ್ಗೆ ನೈರುತ್ಯ ರೈಲ್ವೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್-ಕಾರವಾರ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ (06597/98) ರೈಲು ಸಂಚಾರ ಮಾಡಲಿದೆ ಎಂದಿದೆ. ರೈಲು ಸಂಖ್ಯೆ 06597 ಅಕ್ಟೋಬರ್ 30, 2024 ರಂದು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಿಂದ ಮಧ್ಯಾಹ್ನ 1 ಗಂಟೆಗೆ ಹೊರಡಲಿರುವ ಈ ರೈಲು ಚಿಕ್ಕಬಾಣಾವರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಬಂಟವಾಳ, ಸುರತ್ಕಲ್, ಮೂಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್ ಮತ್ತು ಅಂಕೋಲಾ ನಿಲ್ದಾಣಗಳ ಮೂಲಕ ಮರುದಿನ ಬೆಳಗಿನ ಜಾವ 4 ಗಂಟೆಗೆ ಕಾರವಾರ ನಿಲ್ದಾಣವನ್ನು ತಲುಪಲಿದೆ. ಹಿಂದಿರುಗುವ ದಿಕ್ಕಿನಲ್ಲಿ, ಪುನಃ ಇದೇ…
ಬೆಂಗಳೂರು: ತನ್ನ ಮಾತಿನ ಶೈಲಿಯಿಂದಲೇ ಬಿಗ್ ಬಾಸ್ ಕನ್ನಡ 11ಕ್ಕೆ ಆಯ್ಕೆಯಾಗಿದ್ದಂತ ಸ್ಪರ್ಧೀ ಜಗದೀಶ್, ಕೆಲ ದಿನಗಳಲ್ಲೇ ಮನೆಯಿಂದ ಹೊರ ಬಿದ್ದಾರೆ. ಬಿಗ್ ಬಾಸ್ ಕನ್ನಡ 11 ಸೀಸನ್ ಗೆ ಗುಡ್ ಬೈ ಹೇಳಿದ್ದಾರೆ. ಹೌದು.. ಬಿಗ್ ಬಾಸ್ ಕನ್ನಡ ಸೀಸನ್ ನಲ್ಲಿ ಮಹತ್ವದ ಬೆಳವಣಿಗೆ ಎನ್ನುವಂತೆ ಸ್ಪರ್ಧಿ ಜಗದೀಶ್ ಕೊನೆಗೂ ಮನೆಯಿಂದ ಹೊರ ಬಂದಿದ್ದಾರೆ. ರಿಯಾಲಿಟಿ ಶೋ ನಲ್ಲಿ ಗಲಾಟೆ, ಕೂಗಾಡ, ಜಗಳದ ಮೂಲಕ ಹವಾ ಕ್ರಿಯೇಟ್ ಮಾಡಿದ್ದಂತ ಜಗದೀಶ್, ಸ್ಪರ್ಧಿಯ ಮೇಲೆ ಹಲ್ಲೆ ಕೂಡ ಮಾಡಿದ್ದರು. ಇದೀಗ ಅವರು ಬಿಗ್ ಬಾಸ್ ಗೆ ಗುಡ್ ಬೈ ಹೇಳಿದ್ದಾರೆ. ಈ ಕುರಿತಂತೆ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಬಿಗ್ ಬಾಸ್ ಮನೆಯಿಂದ ಹೊರ ಬಂದ ಜಗದೀಶ್ ಅವರು ವೀಕ್ಷಕರಿಗೆ ಧನ್ಯವಾದ ತಿಳಿಸಿದ್ದಾರೆ. ನಿಮ್ಮ ಪ್ರತಿ ಒಂದು ಚಪ್ಪಾಳೆ, ಮೆಸೇಜ್, ನಿಮ್ಮ ಆಶೀರ್ವಾದ ನನ್ನ ಈ big boss ಪಯಣ ಸಕ್ಸಸ್, ಅದು ನೀವು ಇಟ್ಟ ಈ ನಂಬಿಕೆ. ಮತ್ತೊಮ್ಮೆ ಕೋಟಿ ಕೋಟಿ…
ಬೆಂಗಳೂರು; ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಯುಜಿ ನೀಟ್-2024ರ ವೈದ್ಯಕೀಯ ಎಂಓಪಿ-ಅಪ್ ಸುತ್ತಿನ ಸೀಟು ಹಂಚಿಕೆಯ ಪರಿಷ್ಕೃತ ತಾತ್ಕಾಲಿಕ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಕೆಇಎ, UGNEET- 2024 ವೈದ್ಯಕೀಯ MOP-UP ಸುತ್ತಿನ ಸೀಟು ಹಂಚಿಕೆಯ ಪರಿಷ್ಕೃತ Provisional Results ಅನ್ನು KEA ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ ಎಂದು ತಿಳಿಸಿದೆ. https://cetonline.karnataka.gov.in/kea/ ಜಾಲತಾಣಕ್ಕೆ ಹೋಗಿ ಫಲಿತಾಂಶ ಪಡೆಯಬಹುದು. ಈ ಸಂಬಂಧ ಏನೇ ಆಕ್ಷೇಪಣೆಗಳು ಇದ್ದರೂ ಸಂಜೆ 6 ಗಂಟೆ ಒಳಗೆ ಇ- ಮೇಲ್ ( keauthority-ka@nic.in ) ಮಾಡಬೇಕು ಎಂದು ಹೇಳಿದೆ. https://twitter.com/KEA_karnataka/status/1847195946469265493 https://kannadanewsnow.com/kannada/good-news-for-state-government-school-children-shiksha-copilot-scheme-to-improve-learning/ https://kannadanewsnow.com/kannada/live-streaming-of-all-supreme-court-hearings-to-begin-soon-report/












