Author: kannadanewsnow09

ಇಂದು ಅಶ್ವಯುಜ ಮಾಸದ ಹುಣ್ಣಿಮೆಯ ತಿಥಿ. ಈ ದಿನ ಅಶ್ವಯುಜ ಅವಿತಂ ಕೂಡ ಸೇರುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಇಲ್ಲಿ ಪರಿಹಾರ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್…

Read More

ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ರಾಮಗಿರಿ ಮತ್ತು ಬೀರೂರು ನಿಲ್ದಾಣಗಳಲ್ಲಿ ರೈಲುಗಳ ತಾತ್ಕಾಲಿಕ ನಿಲುಗಡೆ ಮುಂದುವರಿಕೆ ಮಾಡಲಾಗಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ನೈರುತ್ಯ ರೈಲ್ವೆಯಿಂದ ಮಾಹಿತಿ ನೀಡಲಾಗಿದ್ದು, ರಾಮಗಿರಿ ಮತ್ತು ಬೀರೂರು ನಿಲ್ದಾಣಗಳಲ್ಲಿ ಈ ಕೆಳಗಿನ ರೈಲುಗಳಿಗೆ ಇದ್ದ ತಾತ್ಕಾಲಿಕ ನಿಲುಗಡೆಯನ್ನು ಮುಂದುವರಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ ಎಂದಿದೆ. ರೈಲು ಸಂಖ್ಯೆ 16545/16546 ಯಶವಂತಪುರ-ಸಿಂಧನೂರು-ಯಶವಂತಪುರ ಡೈಲಿ ಎಕ್ಸ್ ಪ್ರೆಸ್ ರೈಲುಗಳಿಗೆ ರಾಮಗಿರಿ ನಿಲ್ದಾಣದಲ್ಲಿ ಇರುವ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆಯನ್ನು ಅಕ್ಟೋಬರ್ 17 ರಿಂದ ನವೆಂಬರ್ 15, 2024 ರವರೆಗೆ ಒಂದು ತಿಂಗಳ ಕಾಲ ಮುಂದುವರಿಸಲಾಗುತ್ತಿದೆ. ರೈಲು ಸಂಖ್ಯೆ 07377/07378 ವಿಜಯಪುರ-ಮಂಗಳೂರು-ವಿಜಯಪುರ ಡೈಲಿ ಸ್ಪೆಷಲ್ ಎಕ್ಸ್ ಪ್ರೆಸ್ ರೈಲುಗಳಿಗೆ ಬೀರೂರು ನಿಲ್ದಾಣದಲ್ಲಿ ಇರುವ ಎರಡು ನಿಮಿಷದ ತಾತ್ಕಾಲಿಕ ನಿಲುಗಡೆ ಅಕ್ಟೋಬರ್ 17 ರಿಂದ ಏಪ್ರಿಲ್ 16, 2025 ರವರೆಗೆ ಆರು ತಿಂಗಳು ಮುಂದುವರಿಸಲಾಗುತ್ತಿದೆ. https://kannadanewsnow.com/kannada/notification-for-admission-to-2-year-bed-course-for-the-year-2024-25-released/ https://kannadanewsnow.com/kannada/renukaswamy-murder-case-pavithra-gowda-moves-hc-seeking-bail/

Read More

ಬೆಂಗಳೂರು: 2024-25ನೇ ಸಾಲಿನ ಎರಡು ವರ್ಷದ ಬಿಇಡಿ ಕೋರ್ಸಿನ ದಾಖಲಾತಿಗೆ ಅಧಿಸೂಚನೆಯನ್ನು ಶಾಲಾ ಶಿಕ್ಷಣ ಇಲಾಖೆ ಹೊರಡಿಸಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಕೇಂದ್ರೀಕೃತ ದಾಖಲಾತಿ ಘಟಕದ ಜಂಟಿ ನಿರ್ದೇಶಕರು ಮಾಹಿತಿ ಹಂಚಿಕೊಂಡಿದ್ದು, 2024-25ನೇ ಸಾಲಿಗೆ ಎರಡು ವರ್ಷದ ಬಿ.ಇಡಿ ಕೋರ್ಸಿನ ವ್ಯಾಸಂಗಕ್ಕಾಗಿ ರಾಜ್ಯದ ಸರ್ಕಾರಿ, ಮಾನ್ಯತೆ ಪಡೆದ ಅನುದಾನಿತ ಹಾಗೂ ಅನುದಾನ ರಹಿತ ಬಿಇಡಿ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದಿದೆ. ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ https://schooleducation.karnataka.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು. ಅಲ್ಲದೇ ದಾಖಲಾತಿ ವೇಳಾಪಟ್ಟಿ, ಅರ್ಹತೆ, ಮೀಸಲಾತಿ, ಶುಲ್ಕ ಇತ್ಯಾದಿ ವಿವರ ಮತ್ತು ಜಿಲ್ಲಾವಾರ ಬಿಇಡಿ ಶಿಕ್ಷಣ ಸಂಸ್ಥೆಗಳ ಪಟ್ಟಿಯನ್ನು ನೀಡಲಾಗಿದೆ ಎಂದು ಹೇಳಿದೆ. ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ ಅರ್ಥೈಸಿಕೊಂಡು ಆನ್ ಲೈನ್ ಮೂಲಕ ಅರ್ಜಿಯನ್ನು ಕ್ರಮಬದ್ಧವಾಗಿ ಭರ್ತಿ ಮಾಡಿ ಸಲ್ಲಿಸುವಂತೆ ತಿಳಿಸಿದೆ. https://kannadanewsnow.com/kannada/ksrtc-celebrates-63rd-foundation-day-minister-ramalinga-reddy-launches-airavata-club-class-buses/ https://kannadanewsnow.com/kannada/renukaswamy-murder-case-pavithra-gowda-moves-hc-seeking-bail/

Read More

ಬೆಂಗಳೂರು: ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಕೇಂದ್ರೀಯ ವಿಭಾಗದ ಘಟಕ – 2ರ ಆವರಣದಲ್ಲಿ ನಿಗಮದ 63ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ, ಕಾರ್ಯಕ್ರಮದಲ್ಲಿ ಐರಾವತ ಕ್ಲಬ್ ಕ್ಲಾಸ್ ಬಸ್ಸು ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಸಾರಿಗೆ‌ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಮತ್ತು ಕೆ ಎಸ್ ಆರ್ ಟಿಸಿ ಅಧ್ಯಕ್ಷರಾದಂತ ಎಸ್.ಆರ್ ಶ್ರೀನಿವಾಸ್ ಅವರು ಚಾಲನೆ ನೀಡಿದರು. ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ನಿಗಮದಲ್ಲಿ ಪ್ರಪ್ರಥಮವಾಗಿ ಪುನಶ್ಚೇತನಗೊಳಿಸಿದ ಐರಾವತ ಕ್ಲಬ್ ಕ್ಲಾಸ್ ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದರು. ನಿಗಮವು ಕಾರ್ಮಿಕರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದು ಇದರಿಂದ ಕಾರ್ಮಿಕರು ಸಂತೃಪ್ತಿಯಿಂದ ಕಾರ್ಯನಿರ್ವಹಿಸಲು ಸಹಕಾರಿಯಾಗಿರುವುದಾಗಿ ತಿಳಿಸಿದರು. ನಾಲ್ಕು ವರ್ಷಗಳಿಂದ ಯಾವುದೇ ಅನುಕಂಪದ ಆಧಾರದಲ್ಲಿ ನೇಮಕಾತಿ ನಡೆದಿರುವುದಿಲ್ಲ. ತಮ್ಮ ಸರ್ಕಾರ ಜಾರಿಗೆ ಬಂದ 18 ತಿಂಗಳು ಅವಧಿಯಲ್ಲಿ 1000 ಮೃತರ ಅವಲಂಬಿತರಿಗೆ ಅನುಕಂಪದ ಆಧಾರದ ಮೇಲೆ ನೌಕರಿಯನ್ನು ನೀಡಲಾಗಿದೆ. ಸರ್ಕಾರವು 5800 ನೂತನ ವಾಹನಗಳನ್ನು ಸೇರ್ಪಡೆ ಮಾಡಲು ಅನುಮತಿಸಿದ್ದು, ಇದುವರೆವಿಗೆ…

Read More

ಬೆಂಗಳೂರು: ಸಾಮಾಜಿಕ ಜಾಲತಾಗಳಲ್ಲಿ ಹಂಚಿಗೊಂಡ ವೀಡಿಯೋದಲ್ಲಿ, ಕೆಲ ಇಲಾಖಾ ಅಧಿಕಾರಿಗಳು ದೇವಾಲಯಗಳಿಂದ ಅಕ್ರಮವಾಗಿ ಹಣ ವಸೂಲಿ ಮಾಡಿರುವ ಸಂಬಂದ ಬಂದ ದೂರಿಗೆ ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ ತ್ವರಿತಗತಿಯಲ್ಲಿ‌ ಕಠಿಣ ಕ್ರಮ ವಹಿಸಿದ್ದಾರೆ. ಬೆಂಗಳೂರಿನ ಜಯನಗರದ ವಿನಾಯಕ ದೇವಾಲಯದ ಹೆಸರಿನಲ್ಲಿ ಹಣ ದುರುಪಯೋಗ ಮಾಡಿಕೊಂಡ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾದ ಆಡಿಯೋ ಸಂಭಾಷಣೆಯಲ್ಲಿ, ಬೆಂಗಳೂರು ಜಯನಗರದ ಶ್ರೀ ವಿನಾಯಕ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಟಿ.ಎನ್. ಮಂಜುಳ ಅವರ ಹೆಸರು ಪ್ರಸ್ತಾಪವಾಗಿದೆ. ಅವರು ಸೋಮಶೇಖರ್ ಅವರ ಸೂಚನೆ ಮೇರೆಗೆ, ದೇವಾಲಯದಿಂದ ₹25,000 ಗಳನ್ನು ದೇವಾಲಯದ ಸ್ವಚ್ಛತೆ ಕಾರ್ಯ, ಬೀಗದ ಕೀಲಿ ರಿಪೇರಿ ಮತ್ತು ಹಬ್ಬದ ಖರೀದಿಗಳ ಹೆಸರಲ್ಲಿ ದುರುಪಯೋಗಪಡಿಸಿಕೊಂಡಿದ್ದಾರೆಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಇಲಾಖಾ ವರ್ತನೆ ಮತ್ತು ಹಣಕಾಸು ವಹಿವಾಟನ್ನು ಕ್ರಮಬದ್ಧವಾಗಿ ನಿರ್ವಹಿಸದ ಕಾರಣ ಟಿ.ಎನ್. ಮಂಜುಳ ಮತ್ತು ಗಿರೀಶ್ ಅವರನ್ನು ಆಯುಕ್ತರು ಮುಜರಾಯಿ ಇಲಾಖೆರವರಾದ ಡಾ.ವೆಂಕಟೇಶ್ ಭಾಆಸೇ, ಅವರು ಸಾರಿಗೆ ಹಾಗೂ ಮುಜರಾಯಿ ಸಚಿವರ ಆದೇಶದಂತೆ…

Read More

ಬೆಂಗಳೂರು: ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಎ.1 ಆರೋಪಿಯಾಗಿರುವಂತ ಪವಿತ್ರಾ ಗೌಡ ಜಾಮೀನು ಅರ್ಜಿಯನ್ನು 57ನೇ ಸಿಸಿಹೆಚ್ ನ್ಯಾಯಾಲಯ ವಜಾಗೊಳಿಸಿತ್ತು. ಈ ಬೆನ್ನಲ್ಲೇ ಜಾಮೀನು ಕೋರಿ ಪವಿತ್ರಾ ಗೌಡ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅಕ್ಟೋಬರ್.14ರಂದು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯವು ಜಾಮೀನು ಕೋರಿ ಸಲ್ಲಿಸಿದ್ದಂತ ಎ.1 ಆರೋಪಿ ಪವಿತ್ರಾ ಗೌಡ ಅರ್ಜಿಯನ್ನು ವಜಾಗೊಳಿಸಿತ್ತು. ಜಾಮೀನು ಅರ್ಜಿ ವಜಾಗೊಂಡ ನಂತ್ರ, ಆರೋಪಿ ಪವಿತ್ರಾ ಗೌಡ ಕಣ್ಣೀರಿಟ್ಟಿದ್ದರು. ಈ ಪ್ರಕರಣದಲ್ಲಿ ನಟ ದರ್ಶನ್ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿತ್ತು. ಹೀಗಾಗಿ ಅವರು ಹೈಕೋರ್ಟ್ ಗೆ ಜಾಮೀನು ಕೋರಿ ವಕೀಲರ ಮೂಲಕ ಅರ್ಜಿ ಸಲ್ಲಿಸಿದ್ದರು. ಈ ಬಳಿಕ ಎ1 ಆರೋಪಿಯಾಗಿರುವಂತ ಪವಿತ್ರಾ ಗೌಡ ಕೂಡ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. https://kannadanewsnow.com/kannada/over-90-killed-50-injured-after-fuel-tanker-explodes-in-nigeria/ https://kannadanewsnow.com/kannada/bengaluru-auto-rickshaw-damaged-driver-escapes-unhurt-as-tree-falls-on-him-due-to-heavy-rains/

Read More

ಬೆಂಗಳೂರು: ನಗರದಲ್ಲಿ ಭಾರೀ ಮಳೆಯಿಂದಾಗಿ ಅವಾಂತರವೇ ಸೃಷ್ಠಿಯಾಗಿದೆ. ಇಂದು ಭಾರೀ ಮಳೆಯಿಂದಾಗಿ ಮರವೊಂದು ಧರೆಗೆ ಉರುಳಿ ಬಿದ್ದಿದೆ. ಮರದ ಕೊಂಬೆ ಬಿದ್ದು ಆಟೋವೊಂದು ಜಖಂ ಆಗಿದೆ. ಈ ಘಟನೆಯಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಬೆಂಗಳೂರಿನ ವಿಲ್ಸನ್ ಗಾರ್ಡನ್ ನ ಅಶೋಕ ಪಿಲ್ಲರ್ ರಸ್ತೆಯಲ್ಲಿ ಬೃಹತ್ ಮರವೊಂದು ಮುರಿದು ಬಿದ್ದಿದೆ. ಮರದ ಕೊಂಬೆ ಮುರಿದು ಬಿದ್ದ ಪರಿಣಾಮ, ಆಟೋವೊಂದು ಜಖಂ ಆಗಿದೆ. ಆದರೇ ಆಟೋ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಸ್ತೆಗೆ ಉರುಳಿ ಬಿದ್ದಿರುವಂತ ಮರವನ್ನು ವಿಲ್ಸನ್ ಗಾರ್ಡನ್ ಸಂಚಾರಿ ಪೊಲೀಸರು ತೆರವುಗೊಳಿಸೋ ಕಾರ್ಯದಲ್ಲಿ ನಿರತರಾಗಿದ್ದಾರೆ. ಮರ ರಸ್ತೆಗೆ ಉರುಳಿ ಬಿದ್ದ ಪರಿಣಾಮ ವಿಲ್ಸನ್ ಗಾರ್ಡನ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. https://kannadanewsnow.com/kannada/over-90-killed-50-injured-after-fuel-tanker-explodes-in-nigeria/ https://kannadanewsnow.com/kannada/breaking-diwali-gift-to-farmers-of-the-country-minimum-support-price-msp-of-rabi-crops-hiked-msp-hike/

Read More

ನೈಜೀರಿಯಾ: ಉತ್ತರ ನೈಜೀರಿಯಾದಲ್ಲಿ ಇಂಧನ ಟ್ಯಾಂಕರ್ ಸ್ಫೋಟಗೊಂಡು ಕನಿಷ್ಠ 94 ಜನರು ಸಾವನ್ನಪ್ಪಿದ್ದಾರೆ ಮತ್ತು 50 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಮಂಗಳವಾರ ತಡರಾತ್ರಿ ಉತ್ತರ ಜಿಗಾವಾ ರಾಜ್ಯದಲ್ಲಿ ಟ್ಯಾಂಕರ್ ಅಪಘಾತಕ್ಕೀಡಾದ ನಂತರ ಅನೇಕ ಸಂತ್ರಸ್ತರು ರಸ್ತೆಯಲ್ಲಿ ಚೆಲ್ಲಿದ ಇಂಧನವನ್ನು ಸಂಗ್ರಹಿಸಲು ಪ್ರಯತ್ನಿಸುತ್ತಿದ್ದರು ಎಂದು ಪೊಲೀಸ್ ವಕ್ತಾರ ಲಾವನ್ ಶಿಸು ಆಡಮ್ ಎಎಫ್ಪಿಗೆ ತಿಳಿಸಿದ್ದಾರೆ. ಮಾಜಿಯಾ ಪಟ್ಟಣದಲ್ಲಿ ಟ್ರಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಟ್ಯಾಂಕರ್ ಪಲ್ಟಿಯಾಗಿದೆ ಎಂದು ಅವರು ಹೇಳಿದರು. “ನಾವು ಇಲ್ಲಿಯವರೆಗೆ 94 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 50 ಜನರು ಗಾಯಗೊಂಡಿದ್ದಾರೆ ಎಂದು ದೃಢಪಡಿಸಿದ್ದೇವೆ” ಎಂದು ಅವರು ಹೇಳಿದರು. ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಎಚ್ಚರಿಸಿದ್ದಾರೆ. ಅಪಘಾತದ ನಂತರ, ನಿವಾಸಿಗಳು ವಾಹನದ ಸುತ್ತಲೂ ಜಮಾಯಿಸಿ, ರಸ್ತೆ ಮತ್ತು ಚರಂಡಿಗಳಲ್ಲಿ ಚೆಲ್ಲಿದ ಇಂಧನವನ್ನು ಸಂಗ್ರಹಿಸಿದರು ಎಂದು ಆಡಮ್ ಹೇಳಿದರು. ಅವರನ್ನು ತಡೆಯಲು ಪ್ರಯತ್ನಿಸುತ್ತಿರುವ ಅಧಿಕಾರಿಗಳನ್ನು ನಿವಾಸಿಗಳು ಮುಳುಗಿಸಿದ್ದಾರೆ ಎಂದು ಅವರು ಹೇಳಿದರು. ಆಫ್ರಿಕಾದ ಅತಿ ಹೆಚ್ಚು…

Read More

ಬೆಂಗಳೂರು: ನಗರದಲ್ಲಿ ಮಳೆಯಿಂದಾಗಿ ಭಾರೀ ಅವಾಂತರವೇ ಸೃಷ್ಠಿಯಾಗಿದೆ. ಎಲ್ಲೆಲ್ಲೂ ರಸ್ತೆಗಳು ಹೊಂಡಗಳಂತಾಗಿ ಜಲಾವೃತಗೊಂಡಿದ್ದಾವೆ. ಈ ಮಳೆ ಸಮಸ್ಯೆಗಾಗಿ ನಗರದ ಜನರು ಬಿಬಿಎಂಪಿಯ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ, ದೂರು ನೀಡುವಂತೆ ಮನವಿ ಮಾಡಿದೆ. ನಗರದಲ್ಲಿ ನಿನ್ನೆಯಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು ಇಂದು ಯಲಹಂಕ ವಲಯದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್ ಪರಿಶೀಲನೆ: ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್ ಗೆ ಭೇಟಿ ನೀಡಿ ಪ್ರಸ್ತುತ ಸುಮಾರು 3 ಅಡಿ ನೀರು ನಿಂತಿದ್ದು, ಕೂಡಲೆ ಅಗತ್ಯ ಕ್ರಮಗಳನ್ನು ಕೈಗೊಂಡು ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. * ಸದ್ಯ ಇರುವ ನೀರುಗಾಲುವೆಯ ಪಕ್ಕ ಖಾಸಗಿ ಜಾಗದಲ್ಲಿ ಇಟಾಚಿ ಮೂಲಕ ಕಚ್ಚಾ ಡ್ರೈನ್ ಮಾಡಲಾಗುತ್ತಿದ್ದು, ಕೂಡಲೆ ಕೆಲಸ ಮುಗಿಸಿ ಕಚ್ಚಾ ಡ್ರೈನ್ ಮೂಲಕ ನೀರು ಹರಿದು ಹೊಗುವಂತೆ ಮಾಡಲಾಗುತ್ತಿದೆ. * 02 ಅಗ್ನಿ ಶಾಮಕ ವಾಹನಗಳಿಂದ ಪಂಪ್ ಮೂಲಕ ನೀರನ್ನು…

Read More

ಬೆಂಗಳೂರು: ಪೂಜೆ ಮುಗಿದ ನಂತರ ಕೊನೆಯಲ್ಲಿ ಬಂದು ಮಂಗಳಾರತಿ ಪಡೆಯುವಂತೆ ಕಾವೇರಿ-5ನೇ ಕಾಮಗಾರಿ ಮುಗಿದ ಬಳಿಕ ಕಾಂಗ್ರೆಸ್‌ ಮುಂದೆ ಬಂದು ಹೆಸರು ಪಡೆದುಕೊಳ್ಳುತ್ತಿದೆ. ಈ ಯೋಜನೆ ಮಾಡಿದ್ದು ಬಿಜೆಪಿ ಎಂದು ಗೊತ್ತಿದ್ದರೂ, ನಾವೇ ಮಾಡಿದ್ದೆಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಜಂಭ ಕೊಚ್ಚಿಕೊಳ್ಳುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಕಾವೇರಿ 5 ನೇ ಹಂತದ ಯೋಜನೆಯನ್ನು ತಾವೇ ಮಾಡಿದ್ದು ಎಂದು ಜಂಭ ಕೊಚ್ಚಿಕೊಂಡಿದ್ದಾರೆ. 2018 ರ ಜನವರಿ 24 ರಂದು ಈ ಯೋಜನೆಗೆ 5,500 ಕೋಟಿ ರೂ. ಸಾಲ ಪಡೆಯಲು ಅಂದಿನ ಬಿಜೆಪಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಒಪ್ಪಂದಕ್ಕೆ ಸಹಿ ಹಾಕಿದ್ದರು. ಆಗ ಕಾಮಗಾರಿಗೆ 90 ತಿಂಗಳ ಗಡುವು ವಿಧಿಸಲಾಗಿತ್ತು. ಜೊತೆಗೆ ಕಾಮಗಾರಿ ನಡೆಸುವ ಸಂಸ್ಥೆಗಳನ್ನೂ ನಿಗದಿಪಡಿಸಲಾಗಿತ್ತು. 2019 ರ ಜನವರಿ 1 ರಂದು ಯೋಜನೆಯ ಕಾಮಗಾರಿ ಆರಂಭವಾಗಿತ್ತು. ಆಗಲೂ ಬಿಜೆಪಿ ಸರ್ಕಾರವೇ ಇತ್ತು. ಪ್ಯಾಕೇಜ್‌ 2 ನಲ್ಲಿ ನಿತ್ಯ 77.5 ಕೋಟಿ ಲೀಟರ್‌ ನೀರು ಶುದ್ಧೀಕರಣ…

Read More