Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಯಾದಗಿರಿ ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ಹೆಚ್ಚುವರಿ ನಿಲುಗಡೆಗೆ ಅವಕಾಶ ನೀಡಲಾಗಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಲಬುರಗಿ ನಿಲ್ದಾಣಗಳ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳನ್ನು ಯಾದಗಿರಿ ರೈಲ್ವೆ ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಗೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ದಕ್ಷಿಣ ಮಧ್ಯ ರೈಲ್ವೆಯು ಸೂಚಿಸಿದೆ. ಯಾದಗಿರಿ ರೈಲ್ವೆ ನಿಲ್ದಾಣದಲ್ಲಿ ಈ ರೈಲುಗಳ (22232/22231) ಆಗಮನ/ನಿರ್ಗಮನದ ವೇಳಾಪಟ್ಟಿ ಈ ಕೆಳಗಿನಂತಿವೆ: 1. ಆಗಸ್ಟ್ 3 ರಿಂದ ಜಾರಿಗೆ ಬರುವಂತೆ, ರೈಲು ಸಂಖ್ಯೆ 22232 ಎಸ್ಎಂವಿಟಿ ಬೆಂಗಳೂರು-ಕಲಬುರಗಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಯಾದಗಿರಿ ನಿಲ್ದಾಣಕ್ಕೆ ರಾತ್ರಿ 9:44 ಗಂಟೆಗೆ ಆಗಮಿಸಿ, 9:45 ಕ್ಕೆ ಹೊರಡಲಿದೆ. 2. ಆಗಸ್ಟ್ 4 ರಿಂದ ಜಾರಿಗೆ ಬರುವಂತೆ, ರೈಲು ಸಂಖ್ಯೆ 22231 ಕಲಬುರಗಿ-ಎಸ್ಎಂವಿಟಿ ಬೆಂಗಳೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಯಾದಗಿರಿ ನಿಲ್ದಾಣಕ್ಕೆ ಬೆಳಿಗ್ಗೆ 5:54…
ಯಾವುದೇ ಶುಭ ಕಾರ್ಯ ಮಾಡಲು ಶುಭಗಳಿಗೆ, ಶುಭ ನಕ್ಷತ್ರವನ್ನು ನೋಡುವುದು ಹಿಂದೂ ಸಂಪ್ರದಾಯ. ಉತ್ತಮ ನಕ್ಷತ್ರದಲ್ಲಿ ಕೆಲಸ ಆರಂಭಿಸಿದರೆ ಯಶಸ್ವಿಯಾಗುತ್ತದೆ ಎಂದು ಜ್ಯೋತಿಶಾಸ್ತ್ರ ಹೇಳುತ್ತದೆ. ಇನ್ನು ನಿಮ್ಮ ಜನನ ದಿನಾಂಕ, ಗ್ರಹಗಳು, ಹುಟ್ಟಿದ ಸಮಯ, ಗಳಿಗೆ, ದಿನ ವಾರ, ತಿಂಗಳು ಇದೆಲ್ಲವನ್ನೂ ಆಧರಿಸಿ ಜನ್ಮ ಪತ್ರಿಕೆಯನ್ನು ಸಿದ್ಧಪಡಿಸಲಾಗುತ್ತದೆ. ಈ ಜನ್ಮ ಪತ್ರಿಕೆಯಲ್ಲಿ ಅತಿ ಮುಖ್ಯ ಪಾತ್ರವನ್ನು ವಹಿಸುವಂತಹವು ನಕ್ಷತ್ರಗಳಾಗಿವೆ. ಆದರೆ ನಕ್ಷತ್ರ ಎಂದರೇನು, ಒಟ್ಟು ಎಷ್ಟು ನಕ್ಷತ್ರಗಳಿವೆ, ಯಾವ ನಕ್ಷತ್ರದ ಏನನ್ನು ಸೂಚಿಸುತ್ತದೆ, ಪ್ರತಿ ನಕ್ಷತ್ರಗಳ ವಿಶೇಷತೆ ಏನು ಎಂಬುದರ ಬಗ್ಗೆ ಮುಂದೆ ಲೇಖನದಲ್ಲಿ ತಿಳಿಯೋಣ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ…
ಶಿವಮೊಗ್ಗ: ಜಿಲ್ಲೆಯಲ್ಲಿ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದೆ. ನಾಳೆ ಕೂಡ ಭಾರೀ ಮಳೆಯಾಗುವ ಮುನ್ಸೂಚನೆಯಿರುವ ಕಾರಣ ಹೊಸನಗರ, ಸಾಗರ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ನಾಳೆ ಸಾಗರ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಈ ಕುರಿತಂತೆ ಸಾಗರ ತಹಶೀಲ್ದಾರ್ ಆದೇಶ ಹೊರಡಿಸಿದ್ದು, ಸಾಗರ ತಾಲ್ಲೂಕಿನಲ್ಲಿ ತೀವ್ರ ಮಳೆಯಾಗುತ್ತಿದ್ದು ನಾಳೆಯೂ ಸಹ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಸಾಗರ ತಾಲ್ಲೂಕಿನಾದ್ಯಂತ ಎಲ್ಲಾ ಅಂಗನವಾಡಿಗಳು, ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ದಿನಾಂಕ: 31/07/2024 ರಂದು ರಜೆಯನ್ನು ಘೋಷಿಸಿದೆ. ಸದರಿ ದಿನದಂದು ನೀಡಿದ ರಜೆಯನ್ನು ಮುಂದಿನ ದಿನದಲ್ಲಿ ಹೊಂದಾಣಿಕೆ ಮಾಡಿ ಮಕ್ಕಳಿಗೆ ಪಾಠ ಪ್ರವಚನ ಮಾಡಲು ಸೂಚಿಸಿದ್ದಾರೆ. ನಾಳೆ ಹೊಸನಗರ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಹೊಸನಗರ ತಾಲ್ಲೂಕಿನಲ್ಲಿ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯಿರುವುದರಿಂದ ಮುಂಜಾಗ್ರಣ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹೊಸನಗರ ತಾಲೂಕಿನಾದ್ಯಂತ ದಿನಾಂಕ: 31-07-2024ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆಗಳು ಹಾಗೂ ಪದವಿ ಪೂರ್ವ…
ನವದೆಹಲಿ: ಭೂ ಕುಸಿತದಿಂದ ತತ್ತರಿಸಿರುವ ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಎಲ್ಲ ರೀತಿಯ ಸಹಕಾರ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದು ಇದಕ್ಕಾಗಿ ಇಬ್ಬರು IAS ಅಧಿಕಾರಿಗಳನ್ನು ನಿಯೋಜಿಸಿದ್ದಾರೆ. ನವದೆಹಲಿಯಲ್ಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಅವರು ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ್ದು ವಯನಾಡಿನಲ್ಲಿ ರಕ್ಷಣೆ ಹಾಗೂ ಪರಿಹಾರ ಕಾರ್ಯಾಚರಣೆಗೆ ನೆರವಾಗಲು ಬೆಂಗಳೂರಿನಲ್ಲಿರುವ ಎನ್ ಡಿ ಆರ್ ಎಫ್ ತಂಡ ಹಾಗೂ ಮದ್ರಾಸ್ ಎಂಜಿನಿಯರ್ ಗ್ರೂಪ್ ಸೇನಾ ಪಡೆಯ ತಂಡಗಳು ತ್ವರಿತವಾಗಿ ತೆರಳಲು ಹಾಗೂ ಅಗತ್ಯ ಉಪಕರಣಗಳು ಮತ್ತು ಇತರ ಅಗತ್ಯ ಪರಿಹಾರ ಸಾಮಗ್ರಿಗಳನ್ನು ರವಾನೆ ಮಾಡಲು ನೆರವು ನೀಡಲಾಗಿದೆ. ಎಂಇಜಿ ಯ ಒಬ್ಬರು ಅಧಿಕಾರಿ, ಇಬ್ಬರು ಜೆ.ಸಿ.ಓ. ಗಳು ಹಾಗೂ 70 ಮಂದಿ ವಿವಿಧ ರ್ಯಾಂಕಿನ ಸಿಬ್ಬಂದಿ ಈಗಾಗಲೇ ರಕ್ಷಣೆ ಹಾಗೂ ಪರಿಹಾರ ಸಾಮಗ್ರಿಗಳೊಂದಿಗೆ 15 ವಾಹನಗಳಲ್ಲಿ ವಯನಾಡಿಗೆ ತೆರಳಿದ್ದಾರೆ. ಇನ್ನೂ ಇಬ್ಬರು ಅಧಿಕಾರಿಗಳು, ನಾಲ್ಕು ಮಂದಿ ಜೆ.ಸಿ.ಓ.ಗಳು, ಹಾಗೂ 100 ಮಂದಿ ಸೇನಾ ಸಿಬ್ಬಂದಿ ರಕ್ಷಣಾ ಉಪಕರಣಗಳೊಂದಿಗೆ 40…
ಬೆಂಗಳೂರು: ಹಸಿರು ಮಾರ್ಗದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಕಾರಣ, ನಮ್ಮ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಅಂತ ತಿಳಿದು ಬಂದಿದೆ. ಈ ಬಗ್ಗೆ ಬಿಎಂಆರ್ ಸಿಎಲ್ ಮಾಹಿತಿ ಹಂಚಿಕೊಂಡಿದ್ದು, ಹಸಿರು ಮಾರ್ಗದ ಮೆಟ್ರೋ ರೈಲು ಸಂಚಾರದ ಹಳಿಗಳಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಹೀಗಾಗಿ ಕೆಲ ಕಾಲ ರೈಲು ಸಂಚಾರವನ್ನು ಸ್ಥಗಿತಗೊಳಇಸಲಾಗಿದೆ ಅಂತ ತಿಳಿಸಿದೆ. 05.33 ರಿಂದ ವಿದ್ಯುತ್ ಸರಬರಾಜು ವ್ಯವಸ್ಥೆಯಲ್ಲಿನ ದೋಷದಿಂದಾಗಿ ಹಸಿರು ಮಾರ್ಗದಲ್ಲಿ ಮೆಟ್ರೋ ರೈಲುಗಳು ನಾಗಸಂದ್ರ ಮತ್ತು ಆರ್.ವಿ.ರಸ್ತೆ ಮೆಟ್ರೋ ನಿಲ್ದಾಣದ ನಡುವೆ ಮಾತ್ರ ಸಂಚರಿಸುತ್ತಿವೆ. ಆದ ಅನಾನುಕೂಲತೆಗೆ ವಿಷಾದಿಸುತ್ತೇವೆ ಎಂದಿದೆ. https://twitter.com/OfficialBMRCL/status/1818262455451373824 https://kannadanewsnow.com/kannada/bengaluru-flex-banners-banned-cases-registered-fines-imposed-against-those-who-put-up-them/ https://kannadanewsnow.com/kannada/wayanad-landslide-kerala-declares-2-day-mourning/
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಳವಡಿಕೆಗೆ ಬಿಬಿಎಂಪಿ ನಿಷೇಧ ಏರಿದೆ. ಒಂದು ವೇಳೆ ನಿಯಮ ಮೀರಿ ಹಾಕಿದ್ರೇ ಅಂತವರ ವಿರುದ್ಧ ಕೇಸ್, ದಂಡ ವಿಧಿಸಲಿದೆ. ಬಿಬಿಎಂಪಿ ಹಾಗೂ ಪೊಲೀಸ್ ಇಲಾಖೆಯ ಜಂಟಿ ಕಾರ್ಯಾಚರಣೆಯ ಮೂಲಕ ನಗರದಲ್ಲಿ ಅನಧಿಕೃತವಾಗಿ ಅಳವಡಿಸುವ ಫ್ಲೆಕ್ಸ್/ಬ್ಯಾನರ್ ಗಳ ನಿಯಂತ್ರಣಕ್ಕಾಗಿ ಎಸ್.ಒ.ಪಿ ಹೊರಡಿಸಲಾಗುವುದೆಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಳವಡಿಸುತ್ತಿರುವ ಫ್ಲೆಕ್ಸ್, ಬ್ಯಾನರ್ಗಳ ನಿಯಂತ್ರಣಕ್ಕಾಗಿ ಪಾಲಿಕೆ ಹಾಗೂ ಪೊಲೀಸ್ ಇಲಾಖೆಯ ಜೊತೆ ಇಂದು ಪೊಲೀಸ್ ಅಧಿಕಾರಿ ಕಛೇರಿಯಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ನಗರದಲ್ಲಿ ಅನಧಿಕೃವಾಗಿ ಅಳವಡಿಸುವ ಫ್ಲೆಕ್ಸ್, ಬ್ಯಾನರ್ ಗಳ ನಿಯಂತ್ರಣಕ್ಕಾಗಿ ಪಾಲಿಕೆ ಹಾಗೂ ಪೊಲೀಸ್ ಇಲಾಖೆಯು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲು ಸೂಕ್ತವಾದ ಪ್ರಮಾಣಿತ ಕಾರ್ಯಾಚರಣೆಯ ವಿಧಾನ(SOP)ವನ್ನು ಹೊರಡಿಸಲಾಗುವುದು. ಅದರಂತೆ ನಗರದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು ಅನಧಿಕೃತ ಜಾಹೀರಾತುಗಳು ಅಳವಡಿಸುವುದನ್ನು ಪರಣಾವಕಾರಿಯಾಗಿ ನಿಯಂತ್ರಿಸಲು ನಿರ್ದೇಶನ ನೀಡಿದರು. ಫ್ಲೆಕ್ಸ್/ಬ್ಯಾನರ್ ಫ್ರಿಂಟಿಂಗ್ ಯುನಿಟ್ಸ್…
ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ 400 ಪಶು ವೈದ್ಯಾಧಿಕಾರಿಗಳ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 400 ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗೆ ಕೆಪಿಎಸ್ಸಿ ಅಧಿಸೂಚನೆ ಹೊರಡಿಸಿದೆ. ಆಗಸ್ಟ್ 12 ರಿಂದ ಸೆಪ್ಟೆಂಬರ್ 12ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಸಾಮಾನ್ಯ ಅಭ್ಯರ್ಥಿಗಳು ₹600, ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು ₹300, ಮಾಜಿ ಸೈನಿಕ ಅಭ್ಯರ್ಥಿಗಳು ₹50 ಶುಲ್ಕ ಪಾವತಿಸಬೇಕು. ಅಭ್ಯರ್ಥಿಗಳು ಕನ್ನಡ ಭಾಷಾ ಪರೀಕ್ಷೆಯಲ್ಲಿ ಅರ್ಹತೆ ಪಡೆಯುವುದು ಕಡ್ಡಾಯವಾಗಿದೆ. ತಲಾ 300 ಅಂಕಗಳಿಗೆ ನಡೆಯಲಿರುವ ಸ್ಪರ್ಧಾತ್ಮಕ ಮತ್ತು ನಿರ್ದಿಷ್ಟ ಪತ್ರಿಕೆಯಲ್ಲಿ ಗಳಿಸುವ ಅಂಕಗಳ ಶೇಕಡಾವಾರು ಆಧಾರದಲ್ಲಿ ಮತ್ತು ಮೀಸಲಾತಿ ನಿಯಮದ ಪ್ರಕಾರ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಕೆಪಿಎಸ್ಸಿ ತಿಳಿಸಿದೆ. https://twitter.com/KarnatakaVarthe/status/1818254282488987764 https://kannadanewsnow.com/kannada/power-worth-rs-1403-crore-sold-from-state-minister-k-j-george/ https://kannadanewsnow.com/kannada/shimoga-the-working-journalists-association-of-sagara-will-celebrate-press-day-tomorrow/
ಬೆಂಗಳೂರು: ವಿದ್ಯುತ್ ವಲಯದಲ್ಲಿ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ಹೆಜ್ಜೆ ಹಾಕಿರುವ ಇಂಧನ ಇಲಾಖೆ, ಕಳೆದ ಬೇಸಿಗೆ (ಎಪ್ರಿಲ್ 1) ನಂತರ ರಾಜ್ಯದಲ್ಲಿ 1,403 ಕೋಟಿ ರೂ. ಮೌಲ್ಯದ ವಿದ್ಯುತ್ ಮಾರಾಟ ಮಾಡಿದೆ. ಬೆಸ್ಕಾಂ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಇಂಧನ ಸಚಿವ ಕೆ.ಜೆ.ಜಾರ್ಜ್, “2024ರ ಏಪ್ರಿಲ್ 1ರಿಂದ ಜುಲೈ ಅಂತ್ಯದವರೆಗೆ 1,403 ಕೋಟಿ ರೂ. ಮೊತ್ತದ ವಿದ್ಯುತ್ ಮಾರಾಟ ಮಾಡಲಾಗಿದೆ. ಮೇ 18ರವರೆಗೆ ವಿದ್ಯುತ್ ಖರೀದಿ ಹೆಚ್ಚಾಗಿದ್ದರೆ, ನಂತರದಲ್ಲಿ ಮಾರಾಟ ಹೆಚ್ಚಾಗಿದೆ. ಪ್ರತಿನಿತ್ಯ 30ರಿಂದ 40 ಕೋಟಿ ರೂ. ಮೊತ್ತದ ವಿದ್ಯುತ್ ಮಾರಾಟ ಮಾಡಲಾಗುತ್ತಿದೆ” ಎಂದು ಮಾಹಿತಿ ನೀಡಿದರು. “ಪ್ರಸ್ತುತ ರಾಜ್ಯದಲ್ಲಿ ನಿತ್ಯ ಸರಾಸರಿ 250 ಮಿಲಿಯನ್ ಯೂನಿಟ್ ವಿದ್ಯುತ್ ಉತ್ಪಾದಿಸಲಾಗುತ್ತಿದೆ. ಈ ಪೈಕಿ 20 ಮಿಲಿಯನ್ ಯೂನಿಟ್ಅನ್ನು ಬೇಸಿಗೆಯಲ್ಲಿ ವಿನಿಮಯ ಆಧಾರದ ಮೇಲೆ ವಿದ್ಯುತ್ ಪಡೆದುಕೊಂಡಿರುವ ಪಂಜಾಬ್ ಮತ್ತು ಉತ್ತರ ಪ್ರದೇಶ ರಾಜ್ಯಗಳಿಗೆ ಪೂರೈಸಲಾಗುತ್ತಿದೆ. 40ರಿಂದ 50 ಮಿಲಿಯನ್ ಯೂನಿಟ್ ಮಾರಾಟ ಮಾಡಲಾಗುತ್ತಿದೆ. 180…
ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಎಸ್ಕಾಂಗಳಿಗೆ ಒಟ್ಟಾರೆ 96.66 ಕೋಟಿ ರು. ನಷ್ಟವಾಗಿದ್ದು, ಹಾನಿಗೊಳಗಾಗಿರುವ ಸಾವಿರಾರು ವಿದ್ಯುತ್ ಕಂಬಗಳು, ಟ್ರಾನ್ಸ್ ಫಾರ್ಮರ್ ಗಳು ಹಾಗೂ ಲೈನ್ಗಳನ್ನು ದುರಸ್ತಿಗೊಳಿಸುವ ಕಾರ್ಯ ಬಹುತೇಕ ಪೂರ್ಣಗೊಂಡಿದೆ ಎಂದು ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಠಿಯಿಂದಾಗಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಉದ್ಭವಿಸಿರುವ ಪರಿಸ್ಥಿತಿಗಳ ಕುರಿತು ಎಲ್ಲಾ ಎಸ್ಕಾಂ ಹಿರಿಯ ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಮಾಲೋಚನೆ ನಡೆಸಿದ ಬಳಿಕ ಅವರು ಮಾತನಾಡಿದರು. ಮಳೆ ಮತ್ತು ಗಾಳಿಯಿಂದ 53,816 ಕಂಬಗಳು, 3,924 ಟ್ರಾನ್ಸ್ ಫಾರ್ಮರ್ ಗಳು, 1,120 ಕಿ.ಮೀ. ವಿದ್ಯುತ್ ತಂತಿಗಳು ಹಾನಿಯಾಗಿದ್ದಾವೆ ಅಂತ ತಿಳಿಸಿದರು. ವಿದ್ಯುತ್ ಕಂಬ, ತಂತಿ, ಟ್ರಾನ್ಸ್ ಫಾರ್ಮರ್ಗಳ ದುರಸ್ತಿಗೆ ಮೆಸ್ಕಾಂ ಸಿಬ್ಬಂದಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಭಾರಿ ಮಳೆ ಬೀಳುತ್ತಿರುವ ಮಲೆನಾಡು, ಕರಾವಳಿ ಮತ್ತು ಬೆಳಗಾವಿ ಭಾಗಗಳಲ್ಲಿ ನೀರಿನ ಮಧ್ಯೆಯೂ ಕೆಲಸ ಮಾಡುತ್ತಿದ್ದಾರೆ. ಹೆಚ್ಚು ಹಾನಿ ಸಂಭವಿಸಿರುವ ಪ್ರದೇಶಗಳಿಗೆ ಹೆಚ್ಚುವರಿ ಗ್ಯಾಂಗ್ ಮೆನ್ ಮತ್ತು ಲೈನ್ ಮೆನ್ ಗಳನ್ನು…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಆರಂಭಗೊಂಡ ನಂತ್ರ, ಕೆಲ ದಿನಗಳಿಂದ ಸುರಿಯುತ್ತಿರುವಂತ ಭಾರೀ ಮಳೆಯಿಂದಾಗಿ 53,816 ವಿದ್ಯುತ್ ಕಂಬ, 3,924 ಟ್ರಾನ್ಸ್ ಫಾರ್ಮರ್, 1,120 ಕಿ.ಮೀ ವಿದ್ಯುತ್ ತಂತಿ ಹಾನಿಗೊಂಡಿದೆ. ಈ ಮೂಲಕ ಎಸ್ಕಾಂಗಳಿಗೆ 96.66 ಕೋಟಿ ರೂ ನಷ್ಟವಾಗಿದೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಂತ ಇಂಧನ ಸಚಿವ ಕೆಜೆ ಜಾರ್ಜ್ ಅವರು, “ಮಳೆ ಮತ್ತು ಗಾಳಿಯಿಂದ 53,816 ಕಂಬಗಳು, 3,924 ಟ್ರಾನ್ಸ್ ಫಾರ್ಮರ್ ಗಳು, 1,120 ಕಿ.ಮೀ. ವಿದ್ಯುತ್ ತಂತಿಗಳು ಹಾನಿಗದೊಳಗಾಗಿದ್ದು. ಈ ಪೈಕಿ 51,119 ಕಂಬಗಳು, 3,918 ಟ್ರಾನ್ಸ್ ಫಾರ್ಮರ್ ಗಳು, 1,063 ಕಿ.ಮೀ. ವಿದ್ಯುತ್ ತಂತಿಗಳನ್ನು ದುರಸ್ತಿಗೊಳಿಸುವ ಕಾರ್ಯ ಪೂರ್ಣಗೊಂಡಿದೆ. ಬಾಕಿ ಉಳಿದ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಸಮರ್ಪಕ ವಿದ್ಯುತ್ ಪೂರೈಕೆಗೆ ಎಸ್ಕಾಂ ಸಿಬ್ಬಂದಿ ಸತತವಾಗಿ ಶ್ರಮಿಸುತ್ತಿದ್ದಾರೆ,” ಎಂದರು. “ವಿದ್ಯುತ್ ಕಂಬ, ತಂತಿ, ಟ್ರಾನ್ಸ್ ಫಾರ್ಮರ್ಗಳ ದುರಸ್ತಿಗೆ ಮೆಸ್ಕಾಂ ಸಿಬ್ಬಂದಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಭಾರಿ ಮಳೆ ಬೀಳುತ್ತಿರುವ ಮಲೆನಾಡು, ಕರಾವಳಿ ಮತ್ತು ಬೆಳಗಾವಿ ಭಾಗಗಳಲ್ಲಿ ನೀರಿನ ಮಧ್ಯೆಯೂ ಕೆಲಸ…