Author: kannadanewsnow09

ಶಿವಮೊಗ್ಗ: ಜಿಲ್ಲೆಯ ಭದ್ರ ಜಲಾಶಯದಿಂದ ಮಂಗಳವಾರ ಬೆಳಗ್ಗೆ ನಾಲ್ಕು ಕ್ರಾಸ್ಟರ್ ಗೇಟ್ ಗಳ ಮೂಲಕ ನೀರು ಭದ್ರಾ ನದಿಗೆ ಬಿಡುಗಡೆ ಮಾಡಲಾಗಿದೆ. ಭದ್ರಾ ಜಲಾಶಯದಲ್ಲಿ 30 ಸಾವಿರ ಕ್ಯೂಸೆಕ್ ನೀರು ಒಳಹರಿವಿದ್ದು ಸೋಮವಾರ ರಾತ್ರಿ 181.3 ಅಡಿ ನೀರು ಸಂಗ್ರಹವಾಗಿತ್ತು. ಇಂದು 183.3 ಕ್ಯೂಸೆಕ್ ನೀರು ಸಂಗ್ರಹವಾಗಿದ್ದರಿಂದ ಜಲಾಶಯ ಭರ್ತಿಯಾಗುವ ಹಂತಕ್ಕೆ ತಲುಪಿದೆ. 186ಅಡಿ ಸಾಮರ್ಥ್ಯದ ಜಲಾಶಯದಲ್ಲಿ ಒಳಹರಿವು ಹೆಚ್ಚಾದ ಪರಿಣಾಮ ಜಲಾಶಯದಿಂದ ಭದ್ರಾ ನದಿಗೆ ನೀರು ಹರಿಸಲಾಗುತ್ತಿದೆ. ಸುಮಾರು 2 ಸಾವಿರ ಕ್ಯೂಸೆಸ್ ನೀರು ನದಿ ಬಿಡಲಾಗಿದೆ ನದಿ ಪಾತ್ರದ ಜನರಿಗೆ ಮುನ್ನೆಚ್ಚರಿಕೆ ನೀಡಲಾಗಿದ್ದು ಸುರಕ್ಷತಾ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ನೀರಾವರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. https://kannadanewsnow.com/kannada/wayanad-landslide-union-minister-hd-kumaraswamy-expresses-shock/ https://kannadanewsnow.com/kannada/hd-kumaraswamy-got-muda-site-40-years-ago-siddaramaiah/

Read More

ಬೆಂಗಳೂರು: ಕೇರಳದ ವಯನಾಡು ಬಳಿ ಉಂಟಾಗಿರುವ ಭೀಕರ ಭೂಕುಸಿತದಿಂದ ಅನೇಕರು ಧಾರುಣ ಸಾವನ್ನಪ್ಪಿರುವ ಘಟನೆಯ ಬಗ್ಗೆ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಕೇರಳದ ವಯನಾಡು ಬಳಿ ಉಂಟಾಗಿರುವ ಭೀಕರ ಭೂಕುಸಿತದಿಂದ ಅನೇಕರು ಧಾರುಣ ಸಾವನ್ನಪ್ಪಿರುವ ಘಟನೆ ನನಗೆ ತೀವ್ರ ಆಘಾತ ಉಂಟು ಮಾಡಿದೆ. ಇನ್ನು ಅನೇಕರು ಮಣ್ಣಿನಡಿಯಲ್ಲಿ ಸಿಲುಕಿದ್ದು, ಅವರನ್ನು ರಕ್ಷಿಸುವ ಕಾರ್ಯ ಸಮರೋಪಾದಿಯಲ್ಲಿ ಸಾಗಿದೆ. ಗೌರವಾನ್ವಿತ ಪ್ರಧಾನಿಗಳಾದ ನರೇಂದ್ರ ಮೋದಿ ಅವರು ತುರ್ತಾಗಿ ಸ್ಪಂದಿಸಿದ್ದು, ಕೇರಳದ ಮುಖ್ಯಮಂತ್ರಿಗಳ ಜತೆ ಮಾತನಾಡಿ, ರಕ್ಷಣಾ ಕಾರ್ಯಗಳಿಗೆ ಸಕಲ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಹೀಗಾಗಿ ಪ್ರಧಾನಿಗಳನ್ನು ನಾನು ಅಭಿನಂದಿಸುತ್ತೇನೆ ಎಂದು ಹೇಳಿದ್ದಾರೆ. ಈ ದುರಂತದಲ್ಲಿ ಸಾವನ್ನಪ್ಪಿದವರಿಗೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಎಲ್ಲಾ ಕುಟುಂಬಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿರುವ ಸಚಿವರು; ಕೇರಳ ಸೇರಿ…

Read More

ಶಿವಮೊಗ್ಗ: ನಾಳೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿನ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಅಲ್ಲದೇ ಹಿರಿಯ ಪತ್ರಕರ್ತರಿಗೆ ಸನ್ಮಾನಿಸಿ, ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಈ ಕುರಿತಂತೆ ಸಾಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದಂತ ನಾಗೇಶ್.ಜಿ ಅವರು ಮಾಹಿತಿ ನೀಡಿದ್ದು, ದಿನಾಂಕ 31-07-2024ರ ಬುಧವಾರದ ನಾಳೆ ಬೆಳಿಗ್ಗೆ 10 ಗಂಟೆಗೆ ಸಾಗರ ನಗರದ ಸ್ತ್ರೀಶಕ್ತಿ ಸಭಾಭವನ, ಅಣಲೆಕೊಪ್ಪದ ಇಲ್ಲಿ ಪತ್ರಿಕಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ಇದೇ ಸಂದರ್ಭದಲ್ಲಿ ಹಿರಿಯ ಪತ್ರಕರ್ತರಿಗೆ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರವನ್ನು ಕಾರ್ಯಕ್ರಮ ನಡೆಯಲಿದೆ ಎಂದಿದ್ದಾರೆ. ನಾಳೆ ನಡೆಯಲಿರುವಂತ ಪತ್ರಿಕಾ ದಿನಾಚರಣೆಯ ಕಾರ್ಯಕ್ರಮವನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಉದ್ಘಾಟನೆ ಮಾಡಲಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮದ ಪಾತ್ರದ ಕುರಿತಂತೆ ಹಿರಿಯ ನ್ಯಾಯವಾದಿಗಳು ಹಾಗೂ ಪತ್ರಕರ್ತರಾದಂತ ಎಂ ರಾಘವೇಂದ್ರ ಉಪನ್ಯಾಸ ನೀಡಲಿದ್ದಾರೆ ಅಂತ ತಿಳಿಸಿದ್ದಾರೆ. ಈ ಕಾರ್ಯಕ್ರಮದ ವೇದಿಕೆಯಲ್ಲಿ ಸಾಗರ ಉಫ ವಿಭಾಗಾಧಿಕಾರಿ ಯತೀಶ್.ಆರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್…

Read More

ಹಾಸನ: ಜಿಲ್ಲೆಯ ಶಿರಾಡಿ ಘಾಟ್ ನಲ್ಲಿ ಭಾರೀ ಭೂ ಕುಸಿತ ಉಂಟಾಗಿದೆ. ಇದರ ಪರಿಣಾಮ ಕಾರು, ಟ್ಯಾಂಕರ್ ಗಳು ಮಣ್ಣಿನಡಿ ಸಿಲುಕಿರುವುದಾಗಿ ತಿಳಿದು ಬಂದಿದೆ. ಬೆಂಗಳೂರು ಟು ಮಂಗಳೂರಿಗೆ ಸಂಪರ್ಕ ಕಲ್ಪಿಸುವಂತ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ನ ಸಕಲೇಶಪುರ ತಾಲ್ಲೂಕಿನ ದೊಡ್ಡತೆಪ್ಲೆ ಬಳಿಯಲ್ಲಿ ಭೂ ಕುಸಿತ ಉಂಟಾಗಿದೆ. ದಿಢೀರ್ ಭೂ ಕುಸಿತ ಉಂಟಾದ ಪರಿಣಾಮ, ಎರಡು ಕಾರು, ಒಂದು ಟ್ಯಾಂಕರ್ ಸೇರಿ ಆರು ವಾಹನಗಳು ಮಣ್ಣಿನಡಿ ಸಿಲುಕಿರುವುದಾಗಿ ಹೇಳಲಾಗುತ್ತಿದೆ. ಸತತ ಮಳೆಯ ಕಾರಣದಿಂದ ಭೂ ಕುಸಿತ ಉಂಟಾದ ಪರಿಣಾಮ ಶಿರಾಡಿ ಘಾಟ್ ರಸ್ತೆ ಸಂಚಾರ ಬಂದ್ ಆಗಿದೆ. ಇದೀ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಯಾವುದೇ ಸಾವು ನೋವು ಆದ ಬಗ್ಗೆ ವರದಿಯಾಗಿಲ್ಲ. ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗಿದೆ. https://kannadanewsnow.com/kannada/pm-modi-congratulates-indias-10m-air-pistol-mixed-team-for-winning-bronze/ https://kannadanewsnow.com/kannada/hd-kumaraswamy-got-muda-site-40-years-ago-siddaramaiah/

Read More

ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ 2024 ರಲ್ಲಿ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ಸ್ಪರ್ಧೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಒಲಿಂಪಿಯನ್ಗಳಾದ ಮನು ಭಾಕರ್ ಮತ್ತು ಸರಬ್ಜೋತ್ ಸಿಂಗ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಅಭಿನಂದಿಸಿದ್ದಾರೆ. ಕಂಚಿನ ಪದಕ ಗೆದ್ದ ಇವರಿಬ್ಬರನ್ನು ಅವರ ಉತ್ತಮ ಕೌಶಲ್ಯ ಮತ್ತು ತಂಡದ ಕೆಲಸಕ್ಕಾಗಿ ಪಿಎಂ ಮೋದಿ ಶ್ಲಾಘಿಸಿದರು. ಇಬ್ಬರು ಅಥ್ಲೀಟ್ಗಳನ್ನು ಅಭಿನಂದಿಸಿದ ಮೋದಿ, “ಭಾರತವು ನಂಬಲಾಗದಷ್ಟು ಸಂತೋಷವಾಗಿದೆ” ಎಂದು ಹೇಳಿದರು. ನಮ್ಮ ಶೂಟರ್ ಗಳು ನಮಗೆ ಹೆಮ್ಮೆ ತರುತ್ತಲೇ ಇದ್ದಾರೆ ಎಂಬುದಾಗಿ ಪ್ರಧಾನಿ ಮೋದಿ ಹೇಳಿದ್ದಾರೆ. ಈ ಮೂಲಕ ಭಾರತಕ್ಕೆ ಪ್ಯಾರಿಸ್ ಒಲಂಪಿಕ್ಸ್ ನಲ್ಲಿ 2ನೇ ಪದಕವನ್ನು ತಂದುಕೊಟ್ಟಂತ ಮನು ಭಾಕರ್, ಸರಬ್ ಜಿತ್ ಸಿಂಗ್ ಗೆ ಮೋದಿ ಅಭಿನಂದನೆ ತಿಳಿಸಿದ್ದಾರೆ. https://twitter.com/narendramodi/status/1818194398762422534 https://kannadanewsnow.com/kannada/charmadi-ghat-highway-closed-for-vehicular-traffic/ https://kannadanewsnow.com/kannada/hd-kumaraswamy-got-muda-site-40-years-ago-siddaramaiah/

Read More

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಸಹಿತ ಗಾಳಿಯಿಂದಾಗಿ ಚಾರ್ಮಡಿ ಘಾಟ್ ರಸ್ತೆಯಲ್ಲಿ ಬೃಹತ್ ಮರವೊಂದು ರಸ್ತೆಗೆ ಉರುಳಿ ಬಿದ್ದಿದೆ. ಈ ಪರಿಣಾಮ, ರಾಷ್ಟ್ರೀಯ ಹೆದ್ದಾರಿ 173ರಲ್ಲಿ ಸಂಚಾರ ಬಂದ್ ಆಗಿದೆ. ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕಿಸುವಂತ ಹೆದ್ದಾರಿಯಲ್ಲಿ 173 ರಾಷ್ಟ್ರೀಯ ಹೆದ್ದಾರಿ ಕೂಡ ಒಂದು. ಈ ಮಾರ್ಗದ ಚಾರ್ಮಾಡಿ ಘಾಟ್ ನಲ್ಲಿ ಭಾರೀ ಮಳೆ ಗಾಳಿಯಿಂದಾಗಿ ಬೃಹತ್ ಗಾತ್ರದ ಮರ ಮುರಿದು ಬಿದ್ದ ಪರಿಣಾಮ ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದೆ. ಇದೀಗ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದಾವೆ. ಈ ಹಿನ್ನಲೆಯಲ್ಲಿ ಕೊಟ್ಟಿಗೆಹಾರ, ಬೆಳ್ತಂಗಡಿ ಬಳಿಯಲ್ಲಿ ವಾಹನ ಸಂಚಾರವನ್ನು ಬಂದ್ ಮಾಡಲಾಗಿದೆ. ಅಲ್ಲದೇ ಚಾರ್ಮಾಡಿ ಘಾಟ್ ರಸ್ತೆ ಮೂಲಕ ತೆರಳದಂತೆ ಬ್ಯಾರಿಕೇಡ್ ಹಾಕಿ ಜಿಲ್ಲಾಡಳಿತದಿಂದ ಕ್ರಮ ಕೈಗೊಳ್ಳಲಾಗಿದೆ. https://kannadanewsnow.com/kannada/cms-family-has-swallowed-muda-land-siddology-i-know-all-the-qualities-very-well-hdk/ https://kannadanewsnow.com/kannada/hd-kumaraswamy-got-muda-site-40-years-ago-siddaramaiah/

Read More

ಬೆಂಗಳೂರು: ಮೂಡಾ ಭೂಮಿಯನ್ನು ಸಿಎಂ ಸಿದ್ಧರಾಮಯ್ಯ ಕುಟುಂಬ ಮುಕ್ತಿ ತಿಂದಿದೆ. ಸಿದ್ದಾಲಜಿ ಸಕಲ ಗುಣ ನನಗೆ ಚೆನ್ನಾಗಿ ಗೊತ್ತು ಎಂಬುದಾಗಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಾಗ್ಧಾಳಿ ನಡೆಸಿದ್ದಾರೆ. ಈ ಕುರಿತಂತೆ ಇಂದು ಎಕ್ಸ್ ನಲ್ಲಿ ಸುದೀರ್ಘ ಪೋಸ್ಟ್ ಮಾಡಿರುವಂತ ಅವರು, ಸುಳ್ಳು ಹೇಳುವುದು ನಿಮಗೆ ಅಭ್ಯಾಸವೋ, ಆಚಾರವೋ, ಚಾಳಿಯೋ ಗೊತ್ತಿಲ್ಲ. ಹಸಿಹಸಿ ಸುಳ್ಳು ಹೇಳುತ್ತಿರುವ ನಿಮ್ಮಲ್ಲಿ ನೈತಿಕತೆ ಸತ್ತಿದೆ. ಆರೋಪಿ ಸ್ಥಾನದಲ್ಲಿರುವ ನೀವು ನನ್ನ ಬಗ್ಗೆ, ನನ್ನ ತಂದೆಯವರ ಬಗ್ಗೆ ಆಡುತ್ತಿರುವ ಸುಳ್ಳುಗಳು ನಿಮ್ಮ ಯೋಗ್ಯತೆಗೆ ತಕ್ಕುದಲ್ಲ ಸಿದ್ಧರಾಮಯ್ಯನವರೇ.. ನಮ್ಮ ಬಗ್ಗೆ ಮಾತನಾಡುವ ಯೋಗ್ಯತೆಯೂ ನಿಮಗಿದೆ ಎಂದು ನನಗೆ ಅನಿಸುವುದಿಲ್ಲ ಎಂದಿದ್ದಾರೆ. ಮೂಡಾದವರು ನನಗೆ ನಿವೇಶನ ಹಂಚಿದ್ದಾರೆ, ನಿಜ. ಸ್ವಾಧೀನ ಪತ್ರವವನ್ನೂ ನೀಡಿದ್ದಾರೆ. ಆ ಪತ್ರವನ್ನು ನಾನು ಮಾಧ್ಯಮಗಳ ಮುಂದೆಯೂ ತೋರಿಸಿದ್ದೇನೆ. ಹಂಚಿದ ನಿವೇಶನದ ಜಾಗವನ್ನು ನನ್ನ ಸುಪರ್ದಿಗೆ ಕೊಡಬೇಕಲ್ಲವೇ? ಕೊಟ್ಟಿಲ್ಲ. ಹಾಗಾದರೆ, ಇದರಲ್ಲಿ ‘ಸಿದ್ದರಾಮಯ್ಯ ಮಾಡಿದ ಸಂಶೋಧನೆ ಏನಿದೆ?’ ‘ಸುಳ್ಳು ಸಂಶೋಧಕ ಸಿದ್ದರಾಮಯ್ಯ’ನವರೇ, ನಿಮ್ಮ ಮುಖಕ್ಕೆ ಮೆತ್ತಿಕೊಂಡಿರುವ ಕೊಳಕನ್ನು…

Read More

ವಯನಾಡು: ಕೇರಳದ ವಯಾನಾಡಿನಲ್ಲಿ ಭೀಕರ ಭೂ ಕುಸಿತ ಉಂಟಾಗಿತ್ತು. ಐವರು ಮಕ್ಕಳು ಸೇರಿದಂತೆ ಈವರೆಗೆ 54 ಮಂದಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಇದೀಗ ಭೂ ಕುಸಿತದಲ್ಲಿ ಸಿಲುಕಿರುವಂತರ ರಕ್ಷಣಾ ಕಾರ್ಯಾಚರಣೆಗೆ ಭಾರತೀಯ ವಾಯುಪಡೆ ಇಳಿಯುತ್ತಿದೆ. ಈ ಬಗ್ಗೆ ಐಎಎಫ್ ಅಧಿಕಾರಿಗಳು ಮಾಹಿತಿ ನೀಡಿದ್ದು, ಕೇರಳ ಸರ್ಕಾರ ಮತ್ತು ಎನ್ಡಿಆರ್ಎಫ್ ಅಧಿಕಾರಿಗಳ ಸಮನ್ವಯದೊಂದಿಗೆ ವಯನಾಡ್ನಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಾಗಿ ಭಾರತೀಯ ವಾಯುಪಡೆ (ಐಎಎಫ್) ತಲಾ ಒಂದು ಎಂಐ -17 ಮತ್ತು ಎಎಲ್ಎಚ್ ಧ್ರುವ್ ಹೆಲಿಕಾಪ್ಟರ್ಗಳನ್ನು ನಿಯೋಜಿಸಿದೆ ಎಂದು ತಿಳಿಸಿದ್ದಾರೆ. https://twitter.com/ANI/status/1818190490770300987 https://kannadanewsnow.com/kannada/paris-olympics-2024-manu-bhaker-sarabjit-singh-win-another-medal-for-india-in-shooting/ https://kannadanewsnow.com/kannada/hd-kumaraswamy-got-muda-site-40-years-ago-siddaramaiah/

Read More

ಪ್ಯಾರಿಸ್: ಇಲ್ಲಿ ನಡೆಯುತ್ತಿರುವಂತ ಪ್ಯಾರಿಸ್ ಒಲಂಪಿಕ್ಸ್ 2024ರ ಪಂದ್ಯಾವಳಿಯಲ್ಲಿ ಭಾರತಕ್ಕೆ ಮತ್ತೊಂದು ಪದಕ ಸಂದಿದೆ. 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತದ ಮನು ಭಾಕರ್ ಹಾಗೂ ಸರಬ್ ಜಿತ್ ಸಿಂಗ್ ಅವರು ಐತಿಹಾಸಿಕ ಕಂಚಿನ ಪದಕವನ್ನು ಗೆದ್ದಿದ್ದಾರೆ. ಈಗಾಗಲೇ ಕಂಚಿನ ಪದಕ ಗೆದ್ದಿರುವ ಮನು ಭಾಕರ್ ಈ ಬಾರಿ ಮೂರನೇ ಸ್ಥಾನಕ್ಕಾಗಿ ಸರಬ್ಜೋತ್ ಸಿಂಗ್ ಅವರೊಂದಿಗೆ ಕಂಚಿನ ಪದಕಕ್ಕಾಗಿ ಸೆಣಸಿ, ಅಂತಿಮವಾಗಿ 10 ಮೀಟರ್ ಏರ್ ಪಿಸ್ತೂಲ್ ಜೋಡಿ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾರೆ. https://twitter.com/sportwalkmedia/status/1818192065123307641 ಪುರುಷರ ಸಿಂಗಲ್ಸ್ ಸ್ಕಲ್ಸ್ನಲ್ಲಿ ಬಲರಾಜ್ ಪನ್ವಾರ್ ಮತ್ತೆ ಕಣಕ್ಕಿಳಿಯಲಿದ್ದು, ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಭಾರತದ ರೋವರ್ ಅತ್ಯುತ್ತಮ ಪ್ರದರ್ಶನವನ್ನು ನೀಡಿದರು. ಅಶ್ವಾರೋಹಿ ಸ್ಪರ್ಧೆಯು ಇಂದು ನಡೆಯಲಿದ್ದು, ಡ್ರೆಸೇಜ್ ವೈಯಕ್ತಿಕ ಗ್ರ್ಯಾಂಡ್ ಪ್ರಿಕ್ಸ್ ಸ್ಪರ್ಧೆಯ ಮೊದಲ ದಿನದಂದು ಅನುಷ್ ಅಗರ್ವಾಲ್ಲಾ ಭಾಗವಹಿಸಲಿದ್ದಾರೆ. ಪುರುಷರ ಬ್ಯಾಡ್ಮಿಂಟನ್ ಡಬಲ್ಸ್ ಗ್ರೂಪ್ ಹಂತದ ಪಂದ್ಯದಲ್ಲಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಇಂಡೋನೇಷ್ಯಾದ ಫಜರ್ ಮತ್ತು ಅಲ್ಫಿಯಾನ್-ಮೊಹಮ್ಮದ್…

Read More

ಪ್ಯಾರೀಸ್: ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಭಾರತದ ಮನು ಭಾಕರ್, ಸರಬ್ ಜಿತ್ ಸಿಂಗ್ ಕಂಚಿನ ಪದಕ ಗೆಲ್ಲುವ ಗುರಿ ಖಚಿತಗೊಂಡಿದೆ. 10 ಮೀಟರ್ ಏರ್ ಪಿಸ್ತೂಲ್ ಫೈನಲ್ ಪ್ರವೇಶಿಸಿರುವಂತ ಈ ಜೋಡಿಗೆ ಕಂಚಿನ ಪದಕವನ್ನು ಗೆದ್ದುಕೊಂಡಿದೆ. ಹೌದು ಪ್ಯಾರಿಸ್ ಒಲಂಪಿಕ್ಸ್ 2024ರ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಮನು ಭಾಕರ್-ಸರಬ್ಜೋತ್ ಸಿಂಗ್ ಕಂಚಿನ ಪದಕ ಗೆಲುವು ಸಾಧಿಸಿದ್ದಾರೆ. ಶೂಟಿಂಗ್ ನ ಮಿಶ್ರ ತಂಡ 10 ಮೀ ಏರ್ ಪಿಸ್ತೂಲ್ ಫೈನಲ್ ಪ್ರವೇಶಿಸಿದ್ದರು. ಭಾರತ ಇಲ್ಲಿ ರೋಲ್ ನಲ್ಲಿದೆ. ಗೆಲುವು ಸಾಧಿಸಲು 8 ಅಂಕಗಳು ಉಳಿದಿತ್ತು. ಇವುಗಳನ್ನು ಗಳಿಸುವ ಮೂಲಕ ಭಾರತ ತಂಡವು ಗೆಲುವ ಸಾಧಿಸಿ, ಕಂಚಿನ ಪದಕವನ್ನು ಗೆದ್ದುಕೊಂಡಿದೆ. https://twitter.com/divakar_ks/status/1818192702493573183 https://kannadanewsnow.com/kannada/hd-kumaraswamy-got-muda-site-40-years-ago-siddaramaiah/

Read More