Subscribe to Updates
Get the latest creative news from FooBar about art, design and business.
Author: kannadanewsnow09
ಮಂಗಳೂರು: ಜಿಲ್ಲೆಯ ಶಾಲೆಯೊಂದರಲ್ಲಿ ಶಿಕ್ಷಕಿಯೊಬ್ಬರು ಅಯೋಧ್ಯೆ, ರಾಮನ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಕೇಳಿ ಬಂದಿದೆ. ಈ ಹಿನ್ನಲೆಯಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರು, ಹಿಂದೂಪರ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಮಂಗಳೂರಿನ ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವಂತ ಪ್ರಭಾ ಎಂಬುವರು, ಶ್ರೀರಾಮನ ಬಗ್ಗೆ, ಅಯೋಧ್ಯೆಯ ಬಗ್ಗೆ ಅವಹೇಳನಕಾರಿ ಹೇಳಿಕೆಯನ್ನು ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ವಿಷಯವನ್ನು ಶಾಲಾ ಮಕ್ಕಳು ಪೋಷಕರಿಗೆ ತಿಳಿಸಿದಾಗ, ಶಾಲೆಯ ಬಳಿ ಆಗಮಿಸಿದಂತ ಪೋಷಕರು, ಹಿಂದೂ ಪರ ಕಾರ್ಯಕರ್ತರು ಶಿಕ್ಷಕಿಯ ವಿರುದ್ಧ ಆಕ್ರೋಶವನ್ನು ಹೊರ ಹಾಕಿದ್ದಾರೆ. ಇನ್ನೂ ಜೆರೋಸಾ ಶಾಲೆಯ ಆಡಳಿತ ಮಂಡಳಿಯ ವಿರುದ್ಧ ಆಕ್ರೋಶ ಹೊರ ಹಾಕಿರುವಂತ ಹಿಂದೂ ಕಾರ್ಯಕರ್ತರು, ಶಿಕ್ಷಕಿ ಪ್ರಭಾ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಇದೀಗ ಸ್ಥಳದಲ್ಲಿ ಬಿಗುವಿನ ವಾತಾವರಣವಿದ್ದು ಪರಿಸ್ಥಿತಿ ನಿಯಂತ್ರಿಸೋದಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. https://kannadanewsnow.com/kannada/blood-d-k-afraid-of-the-threat-of-bullets-suresh-is-not-flowing-in-his-body-deputy-cm-dk-shivakumar-shivakumar/ https://kannadanewsnow.com/kannada/%e0%b2%b8%e0%b2%b0%e0%b3%8d%e0%b2%95%e0%b2%be%e0%b2%b0%e0%b2%a6-%e0%b2%b5%e0%b2%bf%e0%b2%b0%e0%b3%81%e0%b2%a6%e0%b3%8d%e0%b2%a7-%e0%b2%95%e0%b2%ae%e0%b2%bf%e0%b2%b7%e0%b2%a8%e0%b3%8d-%e0%b2%86/
ನವದೆಹಲಿ: ಹಿರಿಯ ನಟ ಮತ್ತು ಬಿಜೆಪಿ ಪಕ್ಷದ ಸದಸ್ಯ ಮಿಥುನ್ ಚಕ್ರವರ್ತಿ ಅವರನ್ನು ಶನಿವಾರ ಬೆಳಿಗ್ಗೆ ಕೋಲ್ಕತಾ ಮೂಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವರದಿಗಳ ಪ್ರಕಾರ, ಅವರು ಅಸ್ವಸ್ಥತೆಯನ್ನು ಅನುಭವಿಸಿದರು ಮತ್ತು ಅವರನ್ನು ಅಪೊಲೊ ಆಸ್ಪತ್ರೆಯ ತುರ್ತು ಘಟಕಕ್ಕೆ ಕರೆದೊಯ್ಯಲಾಯಿತು. ಪ್ರಸ್ತುತ, ಅವರು ವೈದ್ಯಕೀಯ ಆರೈಕೆಯನ್ನು ಪಡೆಯುತ್ತಿದ್ದಾರೆ. ಇದೇ ಜನವರಿ 2024ರಲ್ಲಿ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರಿಗೆ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿಯನ್ನು ಘೋಷಿಸಲಾಗಿತ್ತು. ಇದಕ್ಕೆ ಅವರು ಹರ್ಷ ಕೂಡ ವ್ಯಕ್ತ ಪಡಿಸಿದ್ದರು. ಈ ಬೆನ್ನಲ್ಲೇ ಇಂದು ಅವರ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತಂತೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. https://kannadanewsnow.com/kannada/blood-d-k-afraid-of-the-threat-of-bullets-suresh-is-not-flowing-in-his-body-deputy-cm-dk-shivakumar-shivakumar/ https://kannadanewsnow.com/kannada/basavaraj-bommai-is-still-the-cm-of-karnataka-the-state-governments-website/
ಬೆಂಗಳೂರು : “ಈಶ್ವರಪ್ಪನವರ ಗುಂಡಿನ ಬೆದರಿಕೆಗೆ ಹೆದರುವ ರಕ್ತ ಡಿ.ಕೆ. ಸುರೇಶ್ ಅವರ ಮೈಯಲ್ಲಿ ಹರಿಯುತ್ತಿಲ್ಲ. ನಮ್ಮ ಸುದ್ದಿಗೆ ಬಂದವರಿಗೆ ಒಂದೊಂದೇ ಹಂತದಲ್ಲಿ ಸೆಟ್ಲಮೆಂಟ್ ಆಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ನಗರದ ಖಾಸಗಿ ಹೋಟೇಲ್ ನಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸಮಿತಿ ಸಭೆ ಸಂದರ್ಭದಲ್ಲಿ ಮಾಧ್ಯಮಗಳು, ಸಂಸದ ಡಿ ಕೆ ಸುರೇಶ್ ಅವರಿಗೆ ಗುಂಡಿಕ್ಕುವ ಸಂಬಂಧ ತಾವು ನೀಡಿದ್ದ ಹೇಳಿಕೆಗೆ ಕ್ಷಮೆ ಕೇಳುವುದಿಲ್ಲ ಎಂಬ ಈಶ್ವರಪ್ಪ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದಂತ ಅವರು, “ಅವರಿಗೆ ಕ್ಷಮೆ ಕೇಳಿ ಎಂದು ಯಾರೂ ಹೇಳಿಲ್ಲ. ಸದನದಲ್ಲಿ ನಮ್ಮ ತಂದೆ ಬಗ್ಗೆ ಮಾತನಾಡಿದ್ದರು. ಅದಕ್ಕೆ ಒಂದು ಸುತ್ತಿನ ಸೆಟ್ಲಮೆಂಟ್ ಮಾಡಿದ್ದೇವೆ. ಈಶ್ವರಪ್ಪ ಈಗ ಎಲ್ಲಿದ್ದಾರೆ? ನಮ್ಮ ವಿಚಾರಕ್ಕೆ ಬಂದವರಿಗೆ ಒಂದೊಂದೇ ಹಂತದಲ್ಲಿ ಸೆಟ್ಲಮೆಂಟ್ ಆಗಿದೆ. ಈಶ್ವರಪ್ಪ ಗುಂಡಿಟ್ಟು ಕೊಲ್ಲುವುದಾದರೆ ಕೊಲ್ಲಲಿ. ಅವರ ಹೇಳಿಕೆಗೆ ನಡುಗುವ ರಕ್ತ ಡಿ ಕೆ ಸುರೇಶ್ ಮೈಯಲ್ಲಿ ಹರಿಯುತ್ತಿಲ್ಲ. ನಮ್ಮ ಪೂರ್ವಜರಾದ ಕೆಂಪೇಗೌಡರ ಇತಿಹಾಸ ಗೊತ್ತಿದೆಯೇ? ನಮಗೆ ನಮ್ಮದೇ ಆದ…
ಬೆಂಗಳೂರು: ರಾಜ್ಯದಾದ್ಯಂತ ಕೈಗಾರಿಕಾ ಬೆಳವಣಿಗೆ ಉತ್ತೇಜಿಸಲು ಮತ್ತು ಉದ್ಯೋಗ ಸೃಷ್ಟಿಸಲು ಶಿಕ್ಷಣ – ಸಂಶೋಧನಾ ಸಂಸ್ಥೆಗಳ ಸ್ಥಾಪನೆ, ಉಗ್ರಾಣ, ಶೈತ್ಯಾಗಾರಗಳ ನಿರ್ಮಾಣ, ವಾಹನ ಬಿಡಿಭಾಗ, ಪಿವಿಸಿ ಪೈಪ್ ತಯಾರಿಕೆ ಸೇರಿದಂತೆ ಒಟ್ಟು ₹6,407.82 ಕೋಟಿ ಬಂಡವಾಳ ಮೊತ್ತದ ಹೂಡಿಕೆಯ ಪ್ರಸ್ತಾವಗಳಿಗೆ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯು ಅನುಮೋದನೆ ನೀಡಿದೆ. ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ 143 ನೇ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ ಒಟ್ಟು ₹ 6407.82 ಕೋಟಿ ಬಂಡವಾಳ ಮೊತ್ತದ ಹೂಡಿಕೆಯ 128 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇವುಗಳಿಂದ 33,771 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ. ಬೆಂಗಳೂರು ಗ್ರಾಮಾಂತರ, ಬೆಳಗಾವಿ, ರಾಮನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಬಂಡವಾಳ ಹೂಡಿಕೆಯ ವಿವಿಧ ಯೋಜನೆಗಳಿಗೆ ಒಪ್ಪಿಗೆ ನೀಡಲಾಗಿದೆ. ಈ ಯೋಜನೆಗಳಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ₹ 485 ಕೋಟಿ ಬಂಡವಾಳದ ಯಾಂತ್ರಿಕೃತ ಎರಕಹೊಯ್ಯುವ ಘಟಕ ಸ್ಥಾಪನೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ₹484.33…
ಬೆಂಗಳೂರು: ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೇರಪಾವತಿ, ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಮಾನ ಕೆಲಸಕ್ಕೆ ಸಮಾನ ವೇತನೆ, ದಿನಗೂಲಿ, ಕ್ಷೇಮಾಭಿವೃದ್ಧಿಯಡಿ ಡಿ-ವೃಂದದ ನೌಕರರ ವೇತನ ಪಾವತಿಸಲು ಸರ್ಕಾರ ಆದೇಶ ಹೊರಡಿಸಿದೆ. ಈ ಸಂಬಂಧ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು ಸುತ್ತೋಲೆಯನ್ನು ಹೊರಡಿಸಿದ್ದು, ರಾಜ್ಯದ ಎಲ್ಲಾ ಮಹಾನಗರಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ತೆಗಳಲ್ಲಿ ನೇರಪಾವತಿ, ಗುತ್ತಿಗೆ/ಹೊರಗುತ್ತಿಗೆ, ಸಮಾನ ಕೆಲಸಕ್ಕೆ ಸಮಾನ ವೇತನ, ದಿನಗೂಲಿ, ಕ್ಷೇಮಾಭಿವೃದ್ಧಿಯಡಿ ಡಿ ವೃಂದದ ಪೌರಕಾರ್ಮಿಕರು, ಲೋಡರ್ಸ್, ಕ್ಲೀನರ್ಸ್, ಹಲ್ಬರ್ (ವಾಲ್‌ಮನ್ ಮುಂತಾದ ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದು, ಈ ನೌಕರರುಗಳು ಸಾರ್ವಜನಿಕರಿಗೆ ಅತಿ ಅಗತ್ಯ ಸೇವೆಗಳನ್ನು ಪೂರೈಸುವ ಕಾರ್ಯವನ್ನು ನಿರ್ವಹಿಸುತ್ತಿರುತ್ತಾರೆ ಎಂದಿದ್ದಾರೆ. ಈ ನೌಕರರುಗಳ ವೇತನವನ್ನು ಸ್ಥಳೀಯ ಸಂಸ್ಥೆಯ ನಿಧಿಯಿಂದ ಪ್ರಥಮ ಆದ್ಯತೆಯ ಮೇಲೆ ಪ್ರತಿ ತಿಂಗಳು ಪಾವತಿಸಬೇಕಿರುತ್ತದೆ, ಆದರೆ, ಬಹುತೇಕ ಮಹಾನಗರಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸದರಿ ಸಿಬ್ಬಂದಿಗಳಿಗೆ ಸಕಾಲದಲ್ಲಿ ವೇತನವನ್ನು ಪಾವತಿಸದ ಅಭಿವೃದ್ಧಿ ಕಾಮಗಾರಿಗಳಿಗೆ ಮತ್ತು ಗುತ್ತಿಗೆದಾರರ ಬಿಲ್ಲುಗಳನ್ನು…
ಶಿವಮೊಗ್ಗ : ಮಂಗನ ಕಾಯಿಲೆ ಬಾಧಿತ ಪ್ರದೇಶದ ಜನರು ಜ್ವರದಂತಹ ಪ್ರಕರಣಗಳನ್ನು ನಿರ್ಲಕ್ಷ್ಯ ಮಾಡದೇ, ಶೀಘ್ರವಾಗಿ ಚಿಕಿತ್ಸೆ ಪಡೆಯಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು. ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಮಂಗನ ಕಾಯಿಲೆ (ಕೆಎಫ್‍ಡಿ) ಕುರಿತಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಂಗನ ಕಾಯಿಲೆ ಬಗ್ಗೆ ಗಾಬರಿಯಾಗುವುದು ಬೇಡ. ಆದರೆ ಜ್ವರ, ತಲೆನೋವು, ಸ್ನಾಯುಗಳ ನೋವು ಇತ್ಯಾದಿ ಲಕ್ಷಣ ಕಾಣಿಸಿಕೊಂಡಾಗ ತಕ್ಷಣ ಸಮೀಪದ ಸರ್ಕಾರಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಬೇಕು. ಆರಂಭದಲ್ಲೇ ರೋಗ ಲಕ್ಷಣಗಳಿಗೆ ಚಿಕಿತ್ಸೆ ಪಡೆದಲ್ಲಿ ಸಂಪೂರ್ಣ ಗುಣಮುಖರಾಗಲು ಸಾಧ್ಯ ಎಂದರು. ಡಿಹೆಚ್‍ಓ ಡಾ.ರಾಜೇಶ್ ಸುರಗಿಹಳ್ಳಿ ಮಾತನಾಡಿ, ಮಂಗನ ಕಾಯಿಲೆ ವೈರಾಣು ಸೋಂಕಿನ ನಿಂಫ್ ಹಂತದಲ್ಲಿರುವ ಉಣ್ಣಿಗಳು ಕಚ್ಚುವುದರಿಂದ ಹರಡುತ್ತದೆ. ಮಂಗನ ಅಸ್ವಾಭಾವಿಕ ಸಾವು ಮಂಗನ ಕಾಯಿಲೆಯ ಕುರಿತಾದ ಎಚ್ಚರಿಕೆ ಗಂಟೆ. ನಂತರ ಮನುಷ್ಯರಿಗೆ ಬರುತ್ತದೆ. ಜ್ವರ, ತಲೆನೋವು ಇತರೆ ಲಕ್ಷಣಗಳು ಕಂಡು ಬಂದ…
ಇಸ್ಲಮಾಬಾದ್: ಇಂದು ನಡೆದಂತ ಪಾಕಿಸ್ತಾನ ಚುನಾವಣೆಯಲ್ಲಿ ನವಾಜ್ ಷರೀಫ್ ಅವರ ಪಿಎಂಎಲ್-ಎನ್ ಪಕ್ಷವು ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಪಾಕ್ ಚುನಾವಣೆಯಲ್ಲಿ ಗೆಲುವಿನ ನಗೆಯನ್ನು ಬೀರಿರೋದಾಗಿ ವರದಿಗಳಿಂದ ತಿಳಿದು ಬಂದಿದೆ. ಪಾಕಿಸ್ತಾನದ ಮಾಜಿ ಪ್ರಧಾನಿ ಮತ್ತು ಪಾಕಿಸ್ತಾನ್ ಮುಸ್ಲಿಂ ಲೀಗ್ (ಎನ್) ನಾಯಕ ನವಾಜ್ ಷರೀಫ್, “ನಾವು ನಿಮ್ಮೆಲ್ಲರನ್ನೂ ಅಭಿನಂದಿಸುತ್ತೇವೆ ಏಕೆಂದರೆ, ದೇವರ ಆಶೀರ್ವಾದದಿಂದ, ಪಾಕಿಸ್ತಾನ್ ಮುಸ್ಲಿಂ ಲೀಗ್ (ಎನ್) ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಪ್ರತಿಯೊಂದು ಪಕ್ಷಕ್ಕೂ ನೀಡಿದ ಜನಾದೇಶವನ್ನು ನಾವು ಗೌರವಿಸುತ್ತೇವೆ. ಗಾಯಗೊಂಡ ಪಾಕಿಸ್ತಾನವನ್ನು ಬಿಕ್ಕಟ್ಟಿನಿಂದ ಹೊರತರಲು ನಮ್ಮೊಂದಿಗೆ ಕುಳಿತುಕೊಳ್ಳಲು ನಾವು ಅವರನ್ನು ಆಹ್ವಾನಿಸುತ್ತೇವೆ” ಎಂದು ಅವರು ಹೇಳಿದರು. ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಪಕ್ಷ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಚುನಾವಣೆಯಲ್ಲಿ ಗೆಲುವು ಸಾಧಿಸಿದೆ ಎಂದು ವರದಿಯಾಗಿದೆ. ಲಾಹೋರ್ನ ಪಕ್ಷದ ಕಚೇರಿಯಲ್ಲಿ ಅವರ ಬೆಂಬಲಿಗರು ಸಂಭ್ರಮಾಚರಣೆ ಮಾಡುತ್ತಿರುವುದನ್ನು ಕಾಣಬಹುದು. ನವಾಜ್ ಷರೀಫ್ 1,71,024 ಮತಗಳನ್ನು ಪಡೆದು ಜಯಗಳಿಸಿದ್ದಾರೆ.
ನಮ್ಮ ನಿಮ್ಮೆಲ್ಲರ ಮನೆಗಳಲ್ಲಿ ಈಗಲೂ ಆರೋಗ್ಯವಂತ ವ್ಯಕ್ತಿ ಅನಾರೋಗ್ಯಕ್ಕೆ ಒಳಗಾದರೆ, ಹಣವಂತ ವ್ಯಕ್ತಿ ಹಣ ಕಳೆದುಕೊಂಡರೆ ಅಥವಾ ಇನ್ನೇನಾದರೂ ಸಂಭವಿಸಿದರೆ ಆತನಿಗೆ ದೃಷ್ಟಿಯಾಗಿರಬಹುದು ಎಂದು ಹೇಳುವ ಪರಿಪಾಠವಿದೆ. ಹೌದು, ಈಗಲೂ ಕೆಲವೊಂದು ನಂಬಿಕೆಗಳು ಬಲವಾಗಿ ಬೇರೂರಿವೆ. ಹಿಂದೂ ಪುರಾಣಗಳಲ್ಲೂ ಕಣ್ಣದೃಷ್ಟಿಯ ಬಗ್ಗೆ ಉಲ್ಲೇಖವಿದೆ. ಮಾನಸಿಕ ಶಕ್ತಿಯು ಆಲೋಚನೆ, ಏಕಾಗ್ರತೆ, ದೃಷ್ಟಿ, ಹೊಟ್ಟೆಯುರಿ ಮತ್ತು ಮಾತಿನ ಮೂಲಕ ಹೊರಬರುವುದು. ಇದು ಇನ್ನೊಬ್ಬನ ಅಭಿವೃದ್ಧಿ, ಏಳಿಗೆ ಮತ್ತು ಸೌಂದರ್ಯದ ಮೇಲೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಪರಿಣಾಮ ಬೀರುವುದೇ ಕಣ್ಣ ದೃಷ್ಟಿ ಎನ್ನುವುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 8 ಎಎಫ್ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಮಾಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಐಎಫ್ಎಸ್ ಅಧಿಕಾರಿ ವಿಜಯ್ ಶರ್ಮಾ ಅವರನ್ನು ಬೆಂಗಳೂರಿನ ಲೀಗಲ್ ಸೆಲ್ ನ ಪ್ರಿನ್ಸಿಪಲ್ ಚೀಪ್ ಕಂಸರ್ವೇಟಿವ್ ಆಫ್ ಫಾರ್ಸೆಟ್ ಗೆ ವರ್ಗಾವಣೆ ಮಾಡಲಾಗಿದೆ. ಬ್ರಿಜೇಶ್ ಕುಮಾರ್ ಅವರನ್ನು ವಿಜಯ್ ಶರ್ಮಾ ಅವರ ಜಾಗಕ್ಕೆ ಹೆಚ್ಚುವರಿ ಪ್ರಿನ್ಸಿಪಲ್ ಕನ್ಸರ್ವೇಟಿವ್ ಆಫ್ ಫಾರೆಸ್ಟ್ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. ಪ್ರಹ್ಲಾದ್ ಚಂದ್ರ ರಾಜ್ಯ ಅವರನ್ನು ಬೆಂಗಳೂರಿನ ಅಡಿಯನಲ್ ಚೀಪ್ ಕನ್ಸರ್ವೇಟಿವ್ ಆಫ್ ಫಾರ್ಸೆಟ್ ಅಂಡ್ ಪ್ರಿನ್ಸಿಪಲ್ ಸೆಕ್ರೇಟರಿಗೆ ವರ್ಗಾವಣೆ ಮಾಡಿದ್ದರೇ, ಡಾ.ಸಂಜಯ್ ಎಸ್ ಬಿಜ್ಜರ್ ಅವರನ್ನು ಅಡಿಷನಲ್ ಪ್ರಿನ್ಸಿಪರ್ ಚೀಪ್ ಕನ್ಸರ್ವೇಟಿವ್ ಆಫ್ ಫಾರೆಸ್ಟ್ ಬೆಂಗಳೂರು ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಹೀಗಿದೆ 8 IFS ಅಧಿಕಾರಿಗಳ ವರ್ಗಾವಣೆ ಪಟ್ಟಿ https://kannadanewsnow.com/kannada/i-will-give-you-a-punishment-pm-modi-dines-with-8-mps-of-different-parties-at-canteen/
ಬನ್ನೇರುಘಟ್ಟ : ಬೆಂಗಳೂರು ನಗರದ ಬೊಮ್ಮನಹಳ್ಳಿ ಕೂಡ್ಲು ಗೇಟ್ ಬಳಿ ಚಿರತೆ ಕಾಣಿಸಿಕೊಂಡ ಬಳಿಕ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಆದೇಶದ ಮೇಲೆ ರಚಿಸಲಾದ ಬೆಂಗಳೂರು ನಗರಕ್ಕೆ ಸಮರ್ಪಿತವಾದ ಕ್ಷಿಪ್ರ ಚಿರತೆ ಕಾರ್ಯಪಡೆಗೆ ಕೌಶಲ್ಯ ತರಬೇತಿ ನೀಡಲಾಗುತ್ತಿದೆ. ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ಬೆಂಗಳೂರು ನಗರದ ಚಿರತೆ ಕಾರ್ಯಪಡೆಯ 100ಕ್ಕೂ ಹೆಚ್ಚು ಸಿಬ್ಬಂದಿಗೆ ಕಾರ್ಯಾಚರಣೆಯ ಕಾರ್ಯ ವಿಧಾನಗಳ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ತರಬೇತಿ ನೀಡಲಾಯಿತು. ಹೊಳೆಮತ್ತಿ ಪ್ರತಿಷ್ಠಾನದ ವನ್ಯಜೀವಿ ಸಂರಕ್ಷಕ ಹಾಗೂ ಸಂಪನ್ಮೂಲ ವ್ಯಕ್ತಿ ಸಂಜಯ್ ಗುಬ್ಬಿ ಮತ್ತು ಡೆಹರಾಡೂನ್ ನಲ್ಲಿ ವನ್ಯಜೀವಿ ಕಾರ್ಯಾಚರಣೆಯ ತರಬೇತಿ ಪಡೆದಿರುವ ಹಿರಿಯ ಅಧಿಕಾರಿಗಳು ಕಾರ್ಯಪಡೆ ಸಿಬ್ಬಂದಿಗೆ ಕೌಶಲ್ಯಗಳ ಬಗ್ಗೆ ತಿಳಿಸಿಕೊಟ್ಟರು. ಕಾಡಿನಂಚಿನ ಹೊಲಗದ್ದೆ, ತೋಟಗಳಲ್ಲಿ ಉರುಳಿಗೆ ಸಿಲುಕುವ ಚಿರತೆ ಮತ್ತು ವನ್ಯ ಜೀವಿಗಳ ಪ್ರಾಣ ರಕ್ಷಣೆ ಮಾಡುವ ವಿಧಾನ, ಚಿರತೆಗಳು ನಾಡಿಗೆ ಬಂದಾಗ ಅವುಗಳ ಚಲನವಲನದ ಬಗ್ಗೆ ನಿಗಾ ಹೇಗೆ ಇಡಬೇಕು, ಚಿರತೆ ಹೆಜ್ಜೆ ಗುರುತಿಸುವುದು ಹೇಗೆ, ಚಿರತೆ ಸೆರೆ ಹಿಡಿಯಲು ಬೋನುಗಳನ್ನು ಹೇಗೆ…