Author: kannadanewsnow09

ಬನ್ನೇರುಘಟ್ಟ : ಬೆಂಗಳೂರು ನಗರದ ಬೊಮ್ಮನಹಳ್ಳಿ ಕೂಡ್ಲು ಗೇಟ್ ಬಳಿ ಚಿರತೆ ಕಾಣಿಸಿಕೊಂಡ ಬಳಿಕ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಆದೇಶದ ಮೇಲೆ ರಚಿಸಲಾದ ಬೆಂಗಳೂರು ನಗರಕ್ಕೆ ಸಮರ್ಪಿತವಾದ ಕ್ಷಿಪ್ರ ಚಿರತೆ ಕಾರ್ಯಪಡೆಗೆ ಕೌಶಲ್ಯ ತರಬೇತಿ ನೀಡಲಾಗುತ್ತಿದೆ. ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ಬೆಂಗಳೂರು ನಗರದ ಚಿರತೆ ಕಾರ್ಯಪಡೆಯ 100ಕ್ಕೂ ಹೆಚ್ಚು ಸಿಬ್ಬಂದಿಗೆ ಕಾರ್ಯಾಚರಣೆಯ ಕಾರ್ಯ ವಿಧಾನಗಳ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ತರಬೇತಿ ನೀಡಲಾಯಿತು. ಹೊಳೆಮತ್ತಿ ಪ್ರತಿಷ್ಠಾನದ ವನ್ಯಜೀವಿ ಸಂರಕ್ಷಕ ಹಾಗೂ ಸಂಪನ್ಮೂಲ ವ್ಯಕ್ತಿ ಸಂಜಯ್ ಗುಬ್ಬಿ ಮತ್ತು ಡೆಹರಾಡೂನ್ ನಲ್ಲಿ ವನ್ಯಜೀವಿ ಕಾರ್ಯಾಚರಣೆಯ ತರಬೇತಿ ಪಡೆದಿರುವ ಹಿರಿಯ ಅಧಿಕಾರಿಗಳು ಕಾರ್ಯಪಡೆ ಸಿಬ್ಬಂದಿಗೆ ಕೌಶಲ್ಯಗಳ ಬಗ್ಗೆ ತಿಳಿಸಿಕೊಟ್ಟರು. ಕಾಡಿನಂಚಿನ ಹೊಲಗದ್ದೆ, ತೋಟಗಳಲ್ಲಿ ಉರುಳಿಗೆ ಸಿಲುಕುವ ಚಿರತೆ ಮತ್ತು ವನ್ಯ ಜೀವಿಗಳ ಪ್ರಾಣ ರಕ್ಷಣೆ ಮಾಡುವ ವಿಧಾನ, ಚಿರತೆಗಳು ನಾಡಿಗೆ ಬಂದಾಗ ಅವುಗಳ ಚಲನವಲನದ ಬಗ್ಗೆ ನಿಗಾ ಹೇಗೆ ಇಡಬೇಕು, ಚಿರತೆ ಹೆಜ್ಜೆ ಗುರುತಿಸುವುದು ಹೇಗೆ, ಚಿರತೆ ಸೆರೆ ಹಿಡಿಯಲು ಬೋನುಗಳನ್ನು ಹೇಗೆ…

Read More

ಹರಿಹರ : ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಮಂಡ್ಯ, ಜಿಲ್ಲೆಗಳಲ್ಲಿರುವ ಪರಿವಾರ/ ತಳವಾರ ಜನಾಂಗದವರನ್ನು ಕೂಡಲೇ ಪರಿಶಿಷ್ಟ ಪಂಗಡಕ್ಕೆ ಸೇರಿಸಲು ತೀರ್ಮಾನ ಮಾಡಲಾಗಿದೆ. ಕೂಡಲೇ ಈ ಬಗ್ಗೆ ಸಭೆ ಕರೆದು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಅವರು ಇಂದು ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರಪೀಠದ ವತಿಯಿಂದ ಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಾತ್ರೆ- 2024 ಹಾಗೂ ಜನಜಾಗೃತಿ ಜಾಥಾ ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಸರ್ಕಾರ ಈಗಾಗಲೇ ಈ ಸಮುದಾಯವನ್ನು ಎಸ್.ಟಿ ಗೆ ಸೇರ್ಪಡೆ ಮಾಡಿದೆ. ಇಲ್ಲಿ ಇನ್ನೂ ಪ್ರವರ್ಗದಲ್ಲಿರುವ ನಿಮ್ಮ ಮೇಲಿದ್ದ ಎಲ್ಲಾ ಪ್ರಕರಣಗಳನ್ನು ವಾಪಸ್ಸು ಪಡೆಯಲೂ ಸೂಚನೆ ನೀಡಲಾಗಿದೆ ಎಂದರು ಬುದ್ಧಿವಂತಿಕೆ ಯಾರ ಸ್ವತ್ತಲ್ಲ ಅಕ್ಷರ ಸಂಸ್ಕೃತಿಯಿಂದ ವಂಚಿತರಾದಾಗ ಸಾಮಾಜಿಕ ಆರ್ಥಿಕ ಅಸಮಾನತೆ ನಿರ್ಮಾಣವಾಗಿರುವುದು. ವಿದ್ಯೆ, ಬುದ್ಧಿವಂತಿಕೆ ಯಾರ ಸ್ವತ್ತಲ್ಲ. ಬುದ್ಧಿ, ಜ್ಞಾನ ಪಡೆದಾಗ ಸ್ವಾಭಿಮಾನಿಗಳಾಗಿ ಬದುಕಲು ಸಾಧ್ಯ. ಎಲ್ಲರಿಗೂ ಸಮಾನ ಎಂಬ ಭಾವ ಬರಲು ಸ್ವಾಭಿಮಾನ ಅಗತ್ಯ ಎಂದರು. ಸಮಸಮಾಜ ನಿರ್ಮಾಣವಾದಾಗಲೇ ರಾಮರಾಜ್ಯದ ಸ್ಥಾಪನೆ ಬೇಡ…

Read More

ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇದ್ದಂತ 1137 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿತ್ತು. ಈ ಹುದ್ದೆಗಳಿಗೆ ಫೆಬ್ರವರಿ.25ರಂದು ಲಿಖಿತ ಪರೀಕ್ಷೆ ನಿಗದಿ ಪಡಿಸಲಾಗಿದೆ. ಅಲ್ಲದೇ ಪರೀಕ್ಷಾರ್ಥಿಗಳಿಗೆ ವಸ್ತ್ರ ಸಂಹಿತೆಯನ್ನು ಕೂಡ ಜಾರಿಗೊಳಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕರ್ನಾಟಕ ಪೊಲೀಸ್ ಇಲಾಖೆಯು, ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) (ಪುರುಷ ಮತ್ತು ಮಹಿಳಾ) & (ತೃತೀಯ ಲಿಂಗ ಪುರುಷ ಮತ್ತು ಮಹಿಳಾ) ಹಾಗೂ ಸೇವಾನಿರತ & ಬ್ಯಾಕ್‌ ಲಾಗ್-1137 ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ದಿನಾಂಕ: 25.02.2024 ರಂದು ಬೆಳಗ್ಗೆ 11:00 ರಿಂದ 12:30 ಗಂಟೆಯವರೆಗೆ ರಾಜ್ಯಾದ್ಯಂತ ನಡೆಸಲಾಗುವುದು ಎಂದಿದೆ. ಸದರಿ ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರೆಪತ್ರದ ಬಗ್ಗೆ ಮುಂಬರುವ ದಿನಗಳಲ್ಲಿ ಎಸ್.ಎಂ.ಎಸ್. ಮೂಲಕ ಮಾಹಿತಿಯನ್ನು ನೀಡಲಾಗುವುದು ಹಾಗೂ ಕರೆಪತ್ರದ ಲಿಂಕ್ ಅನ್ನು ಸಹ ಕಳುಹಿಸಲಾಗುವುದು. ಅಭ್ಯರ್ಥಿಗಳು ಕರೆಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ನಿಗದಿಪಡಿಸಿದ ದಿನಾಂಕದಂದು ಲಿಖಿತ ಪರೀಕ್ಷೆಗೆ…

Read More

ದಾವಣಗೆರೆ: ‘ದೇಶ ವಿಭಜನೆ’ಯ ಹೇಳಿಕೆ ಕೊಡುವವರನ್ನು ‘ಗುಂಡಿಕ್ಕಿ ಕೊಲ್ಲಬೇಕು’ ಎಂಬುದಾಗಿ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಅವರು ಹೇಳಿಕೆ ನೀಡಿದ್ದರು. ಈ ಮೂಲಕ ಪರೋಕ್ಷವಾಗಿ ಸಂಸದ ಡಿ.ಕೆ ಸುರೇಶ್ ವಿರುದ್ಧ ಹರಿಹಾಯ್ದಿದ್ದರು. ಇಂತಹ ಅವರ ವಿರುದ್ಧ ಈಗ ಎಫ್ಐಅರ್ ದಾಖಲಾಗಿದೆ. ಈ ಕುರಿತಂತೆ ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿದಂತ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು, ದೇಶವಿಭಜನೆಯ ಹೇಳಿಕೆ ಕೊಡುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂಬುದಾಗಿ ಹೇಳಿಕೆ ನೀಡಿದಂತ ಕೆ.ಎಸ್ ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. ‘ದೇಶ ವಿಭಜನೆ’ಯ ಹೇಳಿಕೆ ಕೊಡುವವರನ್ನು ‘ಗುಂಡಿಕ್ಕಿ ಕೊಲ್ಲಬೇಕು’ – ಮಾಜಿ ಸಚಿವ ‘ಕೆಎಸ್ ಈಶ್ವರಪ್ಪ’ ದಾವಣಗೆರೆ: ದೇಶದ್ರೋಹಿ ಹೇಳಿಕೆ ಕೊಡುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂಬುದಾಗಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಮೂಲಕ ಪರೋಕ್ಷವಾಗಿ ಸಂಸದ ಡಿ.ಕೆ ಸುರೇಶ್ ಗುಂಡಿಕ್ಕಿ ಕೊಲ್ಲಬೇಕು ಎಂಬುದಾಗಿ ಹೇಳಿಕೆ ನೀಡಿದ್ದಾರೆ. ದಾವಣಗೆರೆಯಲ್ಲಿ ನಡೆದಂತ ಬಿಜೆಪಿ…

Read More

ಚಿತ್ರದುರ್ಗ: ಆಸ್ಪತ್ರೆಯಲ್ಲೇ ಆಪರೇಷನ್ ಮಾಡೋ ತರ ಪ್ರೀ ವೆಡ್ಡಿಂಗ್ ಶೂಟಿಂಗ್ ಮಾಡಿ, ಕರ್ತವ್ಯ ಲೋಪ ಎಸಗಿದ್ದಂತ ವೈದ್ಯ ಡಾ.ಅಭಿಷೇಕ್ ಅವರನ್ನು ಕೆಲಸದಿಂದ ವಜಾಗೊಳಿಸಿ, ಜಿಲ್ಲಾಧಿಕಾರಿ ವೆಂಕಟೇಶ್ ಆದೇಶಿಸಿದ್ದಾರೆ. ಚಿತ್ರದುರ್ಗದ (Chitradurga) ಜಿಲ್ಲಾಸ್ಪತ್ರೆಯಲ್ಲಿ ವೈದ್ಯರೊಬ್ಬರು ಪ್ರಿ-ವೆಡ್ಡಿಂಗ್ ವೀಡಿಯೋ ಶೂಟ್ ಮಾಡಿ ಎಡವಟ್ಟು ಮಾಡಿಕೊಂಡ ಘಟನೆ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ. ಈ ಘಟನೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ಕೇಳಿ ಬಂದಿತ್ತು. ಭರಮಸಾಗರ ಮೂಲದ ಜಿಲ್ಲಾಸ್ಪತ್ರೆಯ ಗುತ್ತಿಗೆ ಅಧಾರಿತ ವೈದ್ಯ ಡಾ.ಅಭಿಷೇಕ್ ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ , ರೋಗಿಯೊಬ್ಬರನ್ನು ಬೆಡ್‌ ಮೇಲೆ ಮಲಗಿಸಿ, ಆಪರೇಷನ್‌ ಮಾಡುವಂತೆ, ಇನ್ನೊಂದೆಡೆ ಭಾವಿ ಪತ್ನಿ ಅಭಿಷೇಕ್‌ಗೆ ಸಹಾಯ ಮಾಡುವಂತೆ ಚಿತ್ರೀಕರಿಸಿದ್ದರು. ಅಂತಿಮವಾಗಿ ಆಪರೇಷನ್‌ ಮುಗಿಯಿತು ಅಂದ ಬಳಿಕ ರೋಗಿ ಎದ್ದು ಕುಳಿತುಕೊಳ್ಳುವ ವಿಡಿಯೋ ವೈರಲ್ ಆಗಿತ್ತು. ಈ ವೀಡಿಯೋ ವೈರಲ್ ಆಗುತ್ತಿದ್ದಂತೇ, ಗುತ್ತಿಗೆ ವೈದ್ಯರ ಪ್ರೀ ವೆಡ್ಡಿಂಗ್ ಶೂಟಿಂಗ್ ಬಗ್ಗೆ ವೈದ್ಯರೇ ಹೀಗೆ ಮಾಡಿದ್ದು ಸರಿಯಲ್ಲ ಎಂಬುದಾಗಿ ಆಕ್ಷೇಪ, ಆಕ್ರೋಶ ಹೊರಬಿದ್ದಿತ್ತು. ಈ…

Read More

ಬೆಂಗಳೂರು: ಬಿಬಿಎಂಪಿ ವತೊಯಿಂದ ಪೌರಕಾರ್ಮಿಕರಿಗೆ ನಿವೇಶನ ನೀಡಲಾಗುವುದೆಂದು ಸುದ್ದಿ ಹರಿದಾಡುತ್ತಿತ್ತು. ಅದು ಎಷ್ಟು ನಿಜ.? ಎಷ್ಟು ಸುಳ್ಳು ಎನ್ನುವ ಬಗ್ಗೆ ಬಿಬಿಎಂಪಿಯ ಸ್ಪಷ್ಟೀಕರಣ ಮುಂದೆ ಓದಿ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಪಾಲಿಕೆ ವತಿಯಿಂದ ನಿವೇಶನ ದೊರಕಿಸಿಕೊಡುವುದಾಗಿ ಅನಾಮಧೇಯ ವ್ಯಕ್ತಿಗಳು ಅಪಪ್ರಚಾರ ಮಾಡಿ ಮುಗ್ಧ ವ್ಯಕ್ತಿಗಳಿಂದ ಹಣವನ್ನು ವಸೂಲಿ ಮಾಡುತ್ತಿರುವುದು ಹಾಗೂ ಪಾಲಿಕೆಯ ಹೆಸರನ್ನು ಬಳಸಿ ದುರ್ಬಳಕೆ ಮಾಡಿರುವ ಬಗ್ಗೆ ಪಾಲಿಕೆಗೆ ದೂರುಗಳು ಬರುತ್ತಿರುತ್ತವೆ. ಈ ವಿಷಯದ ಕುರಿತು ಬಿಬಿಎಂಪಿಯು ಸ್ಪಷ್ಟ ಪಡಿಸುವುದೇನೆಂದರೆ, ಪೌರಕಾರ್ಮಿಕರಿಗೆ ಪಾಲಿಕೆ ವತಿಯಿಂದ ಯಾವುದೇ ನಿವೇಶನಗಳನ್ನು ನೀಡುವ ಯೋಜನೆಯನ್ನು ಪ್ರಸ್ತುತ ಕೈಗೆತ್ತಿಕೊಂಡಿರುವುದಿಲ್ಲ ಹಾಗೂ ನಿವೇಶನ ಹಂಚಿಕೆ ಕುರಿತು ಯಾವುದೇ ಅಧಿಕೃತವಾಗಿ ಪಾಲಿಕೆಯಿಂದ ಅಧಿಸೂಚನೆ ಹೊರಡಿಸಲಾಗಿರುವುದಿಲ್ಲ ಅಥವಾ ಕ್ರಮವಹಿಸಿರುವುದಿಲ್ಲ. ಆದ್ದರಿಂದ ಇಂತಹ ಯಾವುದೇ ಆಮಿಷಗಳಿಗೆ/ಸುಳ್ಳು ವದಂತಿಗಳಿಗೆ ಮೋಸ ಹೋಗಬಾರದೆಂದು ಪೌರಕಾರ್ಮಿಕರು/ಸಾರ್ವಜನಿಕರಲ್ಲಿ ವಿನಂತಿಸಿದೆ. ಮುಂದುವರಿದು, ಒಂದು ವೇಳೆ ಅನಾಮಧೇಯ ವ್ಯಕ್ತಿಗಳ ಮಾತುಗಳು ಕೇಳಿ ಮೋಸ ಹೋದರೆ ಪಾಲಿಕೆಯು ಜವಾಬ್ದಾರಿಯಾಗಿರುವುದಿಲ್ಲವೆಂದು ಜಂಟಿ ಆಯುಕ್ತರು(ಘತ್ಯಾನಿ) ರವರು…

Read More

ದಾವಣಗೆರೆ : ಮುಂದಿನ ಬಾರಿಯೂ ನರೇಂದ್ರ‌ಮೋದಿಯವರೇ ಪ್ರಧಾನಿಯಾಗಲಿದ್ದು, ಅವರ ಅವಧಿಯಲ್ಲಿಯೇ ಎಸ್ಸಿ ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳ ಮಾಡಿರುವುದನ್ನು ಸಂವಿಧಾನದ ಶೆಡ್ಯುಲ್ 9ಕ್ಕೆ ಸೇರಿಸಲು ಒತ್ತಾಯ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.‌ ಅವರು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ನಡೆದ ವಾಲ್ಮೀಕಿ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ನಾಯಕ ಸಮುದಾಯವನ್ನು ಎಸ್ಟಿಗೆ ಸೇರಿಸಲು ದೊಡ್ಡ ಮಟ್ಟದ ಹೋರಾಟ ನಡೆದಿದೆ. ರಾಮಕೃಷ್ಣ ಹೆಗಡೆಯವರು ಮುಖ್ಯಮಂತ್ರಿ ಯಾಗಿದ್ದಾಗಿದ್ದಾಗ ಶಿಫಾರಸ್ಸು ಮಾಡಿದ್ದರು, ಕೇಂದ್ರದಲ್ಲಿ ಚಂದ್ರಶೇಖರ ನೇತೃತ್ವದ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಮಾಜಿ ಪ್ರಧಾನಿ ದೇವೇಗೌಡರು ಎಸ್ಟಿಗೆ ಸೇರಿಸಲು ಶ್ರಮ ವಹಿಸಿದ್ದರು ಎಂದು ಹೇಳಿದರು. ನಾಯಕ ಸಮುದಾಯಕ್ಕೆ ಎಸ್ಟಿಗೆ ಸೇರ್ಪಡೆ ಮಾಡಿದ ನಂತರ ಮೂವತ್ತೈದು ವರ್ಷಗಳ ನಂತರ ಈ ಸಮುದಾಯದ ಜನಸಂಖ್ಯೆ ಹೆಚ್ಚಾಗಿದೆ. ಆಶೋತ್ತರಗಳು ಹೆಚ್ಚಾಗಿವೆ. ನಮ್ಮ ಸಂವಿಧಾನ ಜೀವಂತಿಕೆ ಇರುವ ಸಂವಿಧಾನ, ಕಾಲಕ್ಕೆ ತಕ್ಕಂತೆ ತಿದ್ದುಪಡಿ ಮಾಡಲು ಅವಕಾಶ ಇದೆ. ಕೆಲವು ದೇಶದ ಸಂವಿಧಾನಗಳನ್ನು ಬರೆದು ಇಟ್ಟಿದ್ದಾರೆ. ಅವು…

Read More

ಚಿತ್ರದುರ್ಗ : ಕಡಿ, ಬಡಿ, ಕತ್ತರಿಸು, ಕೊಲ್ಲು ಎಂಬ ಭಾಷೆ ಬಳಸುವ ಒಂದು ರಾಜಕೀಯ ಪಕ್ಷದ ಮುಖಂಡರು ಆರ್.ಎಸ್.ಎಸ್. ನಲ್ಲಿ ತರಬೇತಿಯಾಗಿದೆ ಎಂದು ಹೇಳಿಕೊಳ್ಳುವವರನ್ನು ರಾಜಕೀಯ ಧುರೀಣರು ಎಂದು ಕರೆಯಬೇಕೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರು ನೀಡಿರುವ ದೇಶ ವಿಭಜನೆಗೆ ಕರೆ ನೀಡಿದವರನ್ನು ಮಾಡುವವರನ್ನು ಗುಂಡಿಟ್ಟು ಕೊಲ್ಲಬೇಕು ಹೇಳಿಕೆಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡುತ್ತಾ ಮುಖ್ಯಮಂತ್ರಿಗಳು ಮಾತನಾಡಿದರು. ಈಶ್ವರಪ್ಪನವರಿಗೆ ಕಡಿ, ಬಡಿ, ಕತ್ತರಿಸು, ಕೊಲ್ಲು ಇದು ಬಿಟ್ಟರೆ ಬೇರೆ ಭಾಷೆ ಗೊತ್ತಿಲ್ಲ. ನನಗೆ ಆರ್.ಎಸ್.ಎಸ್ ನಲ್ಲಿ ತರಬೇತಿಯಾಗಿದೆ ಎನ್ನುತ್ತಾರೆ. ಅವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದರು. ಡಿ.ಕೆ.ಸುರೇಶ್ ಅವರನ್ನು ಗುಂಡಿಟ್ಟು ಕೊಲ್ಲಿ ಎಂದು ಹೇಳುವುದು ಒಂದು ರಾಜಕೀಯ ಪಕ್ಷದ ಮುಖಂಡರಾಗಿ ಹೇಳುವ ಮಾತೇ ಎಂದು ಪ್ರಶ್ನಿಸಿದರು. ಇವರನ್ನು ರಾಜಕೀಯ ಧುರೀಣರು ಎಂದು ಕರೆಯಬೇಕೇ ಎಂದರು. ಪ್ರತಿಭಟನೆಯಲ್ಲ , ತೆರಿಗೆಯಲ್ಲಿ ರಾಜ್ಯದ ಪಾಲು ಪಡೆಯುವ ಬೇಡಿಕೆ ರಾಜ್ಯಕ್ಕೆ ಅನುದಾನ ಹಂಚಿಕೆಯಲ್ಲಿ ಆಗಿರುವ ವಿಚಾರಕ್ಕೆ ಸರ್ವೋಚ್ಛ ನ್ಯಾಯಾಲಯದ ಮೊರೆ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಈಗಾಗಲೇ ಮಹಿಳೆಯರಿಗಾಗಿ ಗೃಹಲಕ್ಷ್ಮಿ, ಶಕ್ತಿ ಯೋಜನೆ ಜಾರಿಗೊಳಿಸಿದ ನಂತ್ರ, ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. ಅದೇ ರಾಮನಗರ ಬಿಡದಿಯ ಬಳಿಯಲ್ಲಿ ಮಹಿಳೆಯರಿಗಾಗಿಯೇ ವಾಹನ ಚಾಲನೆ ತರಬೇತಿ ನೀಡೋದಕ್ಕಾಗಿ ಪ್ರಾದೇಶಿಕ ವಾಹನ ಚಾಲನಾ ತರಬೇತಿ ಕೇಂದ್ರವನ್ನು ಸ್ಥಾಪಿಸೋದಾಗಿದೆ. ಈ ಕುರಿತಂತೆ ನಿನ್ನೆ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಿ, ಅನುದಾವನಕ್ಕೂ ಒಪ್ಪಿಗೆ ಸೂಚಿಸಲಾಗಿದೆ. ಹೀಗಾಗಿ ರಾಮನಗರ ತಾಲ್ಲೂಕು ಬಿಡದಿಯಲ್ಲಿ ಮಹಿಳೆಯರಿಗಾಗಿ ಪ್ರಾದೇಶಿಕ ವಾಹನ ಚಾಲನಾ ತರಬೇತಿ ಕೇಂದ್ರವನ್ನು ಸ್ಥಾಪಿಸಲಾಗುತ್ತಿದೆ. ಅಂದಹಾಗೇ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರ ಮಾರ್ಗದರ್ಶನದಲ್ಲಿ ಸಾರಿಗೆ ಇಲಾಖೆ ಈ ಮಹತ್ವಾಕಾಂಕ್ಷಿ ಯೋಜನೆಯ ಪ್ರಸ್ತಾಪವನ್ನು ಮುಂದಿಟ್ಟಿದೆ. ಈ ಯೋಜನೆಗೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಲಾಗಿದೆ. AWAKE ಸಂಸ್ಥೆ, ರಾಜಾಜಿನಗರ, ಬೆಂಗಳೂರು ಮತ್ತು ಸಾರಿಗೆ ಇಲಾಖೆಯ ಜಂಟಿ ಸಹಭಾಗಿತ್ವದಲ್ಲಿ ರೂ.10.50 ಕೋಟಿಗಳ ಅಂದಾಜು ಮೊತ್ತದಲ್ಲಿ ಬಿಡದಿಯಲ್ಲಿ ಪ್ರಾದೇಶಿಕ ವಾಹನ ಚಾಲನಾ ತರಬೇತಿ ಕೇಂದ್ರ ಸ್ಥಾಪನೆಗೆ ಯೋಜಿಸಲಾಗಿದೆ.…

Read More

ಬೆಂಗಳೂರು: ಇವತ್ತು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾಜೀ ಅವರನ್ನು ಭೇಟಿ ಮಾಡಿ ಮುಂದೆ ಬರುವ ವಿಧಾನಪರಿಷತ್ ಚುನಾವಣಾ ಅಭ್ಯರ್ಥಿಗಳ ವಿಚಾರ ಹಾಗೂ ರಾಜ್ಯಸಭಾ ಚುನಾವಣೆ ಮತ್ತು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೇರೆ ಬೇರೆ ವಿಷಯಗಳ ಚರ್ಚೆ ಮಾಡಿದ್ದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ದೆಹಲಿಯÀಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಾನು ರಾಜ್ಯಾಧ್ಯಕ್ಷನಾಗಿ ಎಲ್ಲರನ್ನು ಜೊತೆ ಸೇರಿಸಿಕೊಂಡು ಪಕ್ಷವನ್ನು ಮುನ್ನಡೆಸುತ್ತಿರುವ ಕುರಿತು ನಡ್ಡಾಜೀ ಅವರು ಸಂತಸ ಸೂಚಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಒಂದು ಹೊಸ ದಾಖಲೆ ಬರೆಯಲಿದೆ; ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ನಾನು ಭರವಸೆ ನೀಡಿದ್ದೇನೆ ಎಂದು ಪ್ರಶ್ನೆಗೆ ಉತ್ತರಿಸಿದರು. ರಾಧಾಮೋಹನ್‍ದಾಸ್ ಜೀ ಅವರು ನಮ್ಮ ರಾಜ್ಯದ ಉಸ್ತುವಾರಿಗಳು. ನಿನ್ನೆ ಅವರನ್ನು ಭೇಟಿ ಮಾಡಿ ರಾಜ್ಯದ ಪ್ರಚಲಿತ ವಿದ್ಯಮಾನಗಳ ಬಗ್ಗೆ ಚರ್ಚಿಸಿದ್ದೇನೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪೂರ್ವತಯಾರಿ ಕುರಿತು ಚರ್ಚೆ ಮಾಡಿದ್ದೇನೆ ಎಂದು ಪ್ರಶ್ನೆಗೆ ಉತ್ತರ…

Read More