Subscribe to Updates
Get the latest creative news from FooBar about art, design and business.
Author: kannadanewsnow09
ಹಾವೇರಿ : ರಾಜ್ಯದಲ್ಲಿ ವಕ್ಪ್ ಕಾನೂನು ದುರುಪಯೋಗ ಆಗುತ್ತಿದ್ದು, ಕಂದಾಯ ಕಾನೂನು ಕಡೆಗಣಿಸಿ ವಿನಾಕಾರಣ ಇಡೀ ರಾಜ್ಯದ ರೈತರ ಸಾಗುವಳಿ ಜಮೀನುಗಳಿಗೆ ವಕ್ಪ್ ಪ್ರಾಪರ್ಟಿ ಅಂತ ಮಾಡಲು ಹೊರಟಿದ್ದಾರೆ. ಸರ್ಕಾರ ರೈತರಿಗೆ ನೀಡಿರುವ ನೋಟಿಸ್ ವಾಪಸ್ ಪಡೆದು, ರಾಜ್ಯದ ಸಮಗ್ರ ದಾಖಲೆಗಳನ್ನು ಪರಿಶೀಲನೆ ಮಾಡಿ ರೈತರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಶಿಗ್ಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ವಕ್ಪ್ ಕಾನೂನು ದುರುಪಯೋಗ ಆಗುತ್ತಿದೆ. ಕಂದಾಯ ಕಾನೂನು ಕಡೆಗಣಿಸಿದ್ದಾರೆ. ಭೂಮಿ ವಿಚಾರದಲ್ಲಿ ಕಂದಾಯ ಕಾನೂನು ದಾಖಲೆಗಳೇ ಅಂತಿಮ. ಆದರೆ, ಆ ಕಾನೂನು ಕಡೆಗಣಿಸಿ ಅದಾಲತ್ ಪ್ರಕಾರ ಆಗಿದ್ದೇ ಅಂತಿಮ ಅಂತ ಮಾಡುತ್ತಿದ್ದಾರೆ. ಹಿಂದೆ ಇಂತ ಪ್ರಕರಣ ಆದಾಗ ಯಾರ್್ಯಾರು ನ್ಯಾಯಾಲಯಕ್ಕೆ ಹೋಗಿದ್ದಾರೆ ಅವರಿಗೆಲ್ಲ ನ್ಯಾಯ ಸಿಕ್ಕಿದೆ. ಯಾರೋ ಒಬ್ಬರು ಅರ್ಜಿ ಹಾಕಿದರೆ ಇಡೀ ರಾಜ್ಯದ ರೈತರ ಆಸ್ತಿಗೆ ವಕ್ಪ್ ಆಸ್ತಿಯೆಂದು ರೈತರಿಗೆ ನೊಟೀಸ್ ನೀಡುವ ಮೂಲಕ ಸರ್ಕಾರದಿಂದ ಅರಾಜಕತೆ, ಗಾಬರಿ ಉಂಟು ಮಾಡುವ…
ಬೆಂಗಳೂರು: “ಶಕ್ತಿ ಯೋಜನೆ ಸೇರಿದಂತೆ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ, ತಿರುಚಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ. ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ಶಕ್ತಿ ಯೋಜನೆ ಮರುಪರಿಶೀಲನೆ ಸಂಬಂಧಿಸಿದಂತೆ ಕೇಳಿದಾಗ, “ಈ ವಿಚಾರದಲ್ಲಿ ನನ್ನ ಹೇಳಿಕೆಯನ್ನು ತಿರುಚಲಾಗಿದೆ. ಆರ್ಥಿಕವಾಗಿ ಸದೃಢವಾಗಿರುವವರು, ಐಟಿಬಿಟಿ ಸಂಸ್ಥೆಗಳವರು , ಎಂಎನ್ ಸಿ ಕಂಪನಿಗಳ ಸಿಬ್ಬಂದಿ ಸೇರಿದಂತೆ ಅನೇಕ ಮಹಿಳೆಯರು ತಮಗೆ ಬಸ್ ಗಳಲ್ಲಿ ಉಚಿತ ಪ್ರಯಾಣದ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ. ತಾವು ಕೆಲಸ ಮಾಡುವ ಕಂಪನಿಗಳಲ್ಲಿ ಸಂಚಾರಕ್ಕಾಗಿ ಪ್ರತ್ಯೇಕ ಭತ್ಯೆ ನೀಡಲಾಗುತ್ತಿದೆ. ಹೀಗಾಗಿ ನಮಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಈ ವಿಚಾರದ ಬಗ್ಗೆ ನಾನು ಸಚಿವರ ಜತೆ ಚರ್ಚೆ ಮಾಡುತ್ತೇನೆ ಎಂದು ಹೇಳಿದ್ದೇನೆ ಅಷ್ಟೇ. ಯೋಜನೆ ನಿಲ್ಲಿಸುತ್ತೇವೆ ಎಂದು ಎಲ್ಲಿಯೂ ಹೇಳಿಲ್ಲ” ಎಂದು ತಿಳಿಸಿದರು. “ನಮ್ಮ…
ಉಡುಪಿ: ಇಡೀ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಗುರುವಾರ ತಮ್ಮ ಗೃಹ ಕಚೇರಿಯಲ್ಲಿ ಮಾತನಾಡಿದ ಅವರು, ಶಕ್ತಿ ಯೋಜನೆಯಿಂದ ಲಕ್ಷಾಂತರ ಮಹಿಳೆಯರಿಗೆ ಅನುಕೂಲ ಆಗಿದೆ. ಯಾರೋ ಒಂದಿಬ್ಬರು ಯೋಜನೆ ನಿಲ್ಲಿಸಿ ಎಂದು ಸರ್ಕಾರಕ್ಕೆ ಹೇಳಿದಾಕ್ಷಣ ಯೋಜನೆಯನ್ನು ನಿಲ್ಲಿಸಲು ಸಾಧ್ಯವೇ ಎಂದರು. ಶಕ್ತಿ ಯೋಜನೆ ಜಾರಿಗೆ ಬಂದ ಬಳಿಕ ಸಾರಿಗೆ ಸಂಸ್ಥೆಯ ನಿಗಮಗಳು ಒಳ್ಳೆಯ ಹೆಸರು ಪಡೆದಿದ್ದು, ಉತ್ತಮ ಲಾಭದಲ್ಲಿವೆ. ಮಹಿಳೆಯರ ಪಾಲಿಗೆ ಶಕ್ತಿ ಯೋಜನೆ ಸಂಜೀವಿನಿಯಾಗಿದೆ ಎಂದು ಹೇಳಿದರು. ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾದ ಬಳಿಕ ರಾಜ್ಯದ ಮಹಿಳೆಯರು ಬೆಲೆ ಏರಿಕೆ ಬಗ್ಗೆ ತಮ್ಮ ಅಳಲು ತೋಡಿಕೊಂಡಿದ್ದರು. ಮಹಿಳೆಯರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಡಿ.ಕೆ.ಶಿವಕುಮಾರ್ ಅವರು ನಾ ನಾಯಕಿ ಎಂಬ ಕಾರ್ಯಕ್ರಮ ರೂಪಿಸಿದರು. ಬೆಲೆ ಏರಿಕೆ ಬರೆಯನ್ನ…
ಹಾಸನ: ಹಾಸನಾಂಬೆ ತಾಯಿಯ ದರ್ಶನದ ವೇಳೆ ನೂಕುನುಗ್ಗಲು ಉಂಟಾಗಿದೆ. ಆಡಳಿತ ಮಂಡಳಿಯಿಂದ ಬೇಕಾಬಿಟ್ಟಿ ಪಾಸ್ ಕೊಟ್ಟಿರೋದಕ್ಕೆ ಪ್ಲೆಕ್ಸ್ ಹರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೀಗ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಹಾಸನಾಂಬೆ ತಾಯಿಯ ದರ್ಶನಕ್ಕೆ ಜನ ಸಾಗರವೇ ಹರಿದು ಬಂದಿದೆ. ಅಲ್ಲದೇ ಆಡಳಿತ ಮಂಡಳಿಯಿಂದ ಪಾಸ್ ನೀಡಿದ್ದಕ್ಕೆ ಭಕ್ತರು ಆಕ್ರೋಶ ಹೊರ ಹಾಕಿದ್ದಾರೆ. ಮಳೆ ಕೂಡ ದರ್ಶನಕ್ಕೆ ಅಡ್ಡಿಯಾದ ಕಾರಣ ಭಕ್ತರ ಆಕ್ರೋಶದ ಕಟ್ಟೆ ಹೊಡೆದಿದೆ. ಹೀಗಾಗಿ ದೇವಸ್ಥಾನದ ಬಳಿ ಹಾಕಿರುವಂತ ಪ್ಲೆಕ್ಸ್ ಹರಿದು ಆಕ್ರೋಶ ಹೊರ ಹಾಕಿದ್ದಾರೆ. ಪೊಲೀಸರು ಭಕ್ತರನ್ನು ನಿಯಂತ್ರಿಸಲು ಹರಸಾಹಸ ಪಡುವಂತೆ ಆಗಿದೆ.
ಹಾಸನ: ಜಿಲ್ಲೆಯ ಶಕ್ತಿ ದೇವತೆ ಹಾಸನಾಂಬ ತಾಯಿಯ ದರ್ಶನಕ್ಕೆ ಜನರು ಸಾಲುಗಟ್ಟಿ ನಿಂತಿದ್ದಾರೆ. ಭಕ್ತರ ಸಂಖ್ಯೆ ಹೆಚ್ಚಾಗಿ ಜನಜಂಗುಳಿ ಏರ್ಪಟ್ಟ ಹಿನ್ನೆಲೆಯಲ್ಲಿ ಹಾಸನಾಂಬ ಆಡಳಿತ ಮಂಡಳಿಯಿಂದ ಎಲ್ಲಾ ಪಾಸ್ ರದ್ದುಮಾಡಿ ಆದೇಶಿಸಿದೆ. ಸದ್ಯ ಸರದಿ ಸಾಲಿನಲ್ಲಿ ನಿಂತಿರುವ ಭಕ್ತರ ಪಾಸ್ ಹೊರತಾಗಿ ಬೇರೆ ಎಲ್ಲಾ ಪಾಸ್ ರದ್ದು ಮಾಡಿರುವುದಾಗಿ ತಿಳಿಸಿದೆ. ಇನ್ನೂ ಹಾಸನಾಂಬೆ ದರ್ಶನಕ್ಕೆ ಈಗ ಮಳೆ ಅಡ್ಡಿಯಾಗಿದೆ. ಭಾರೀ ಮಳೆಯ ಕಾರಣದಿಂದ ಮಕ್ಕಳು, ಜನರು ಪರದಾಡುವಂತೆ ಆಗಿದೆ. ಅಲ್ಲದೇ ಭಕ್ತರನ್ನು ನಿಯಂತ್ರಣ ಮಾಡಲು ಪೊಲೀಸರು ಹರಸಾಹಸ ಪಡುವಂತೆ ಆಗಿದೆ.
ಬೆಂಗಳೂರು: ‘ಶಕ್ತಿ ಯೋಜನೆ ಪರಿಷ್ಕರಣೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ . ಆ ರೀತಿಯ ಉದ್ದೇಶವೂ ಸರ್ಕಾರಕ್ಕೆ ಇಲ್ಲ’ ಎಂದು ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ಮಾಧ್ಯಮಗಳ ಮುಂದೆ ಸ್ಪಷ್ಟಪಡಿಸಿದರು. ವಕ್ಫ್ ಆಸ್ತಿ ನೋಟೀಸುಗಳಿಗೆ ಸಂಬಂಧಿಸಿದಂತೆ ನವೆಂಬರ್ 4ರಂದು ಬಿಜೆಪಿ ಪ್ರತಿಭಟನೆ ಮಾಡುವುದರ ಕುರಿತು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸುಮಾರು 200ಕ್ಕೂ ಹೆಚ್ಚು ನೋಟೀಸ್ ಗಳನ್ನು ನೀಡಿದ್ದಾರೆ. ಅವರದು ಇಬ್ಬದಿ ರಾಜಕೀಯ ನಡೆ. ಯಾವ ರೈತರನ್ನೂ ಒಕ್ಕಲೆಬ್ಬಿಸಿಸುವುದಿಲ್ಲ ಎಂದು ಈಗಾಗಲೇ ಹೇಳಿದ್ದೇವೆ. ಕೊಟ್ಟಿರುವ ನೋಟೀಸ್ ಗಳನ್ನು ಹಿಂಪಡೆಯಲು ಈಗಾಗಲೇ ಸೂಚಿಸಲಾಗಿದೆ ಎಂದು ಸ್ಪಷ್ಟಪಡಿಸಿದರು. ನವೆಂಬರ್ 4ರ ಅವರ ಪ್ರತಿಭಟನೆ ಉಪ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪ್ರೇರಿತವಾದದ್ದು, ಸಮಸ್ಯೆಗಳು ಇರದೆಡೆ ಸಮಸ್ಯೆಗಳನ್ನು ಸೃಷ್ಟಿಸುತ್ತಾರೆ. ಈಗ ಮುಡಾ ಪ್ರಕರಣದಲ್ಲಿ ಮಾಡಿಲ್ಲವೇ? ಎಂದು ಪ್ರಶ್ನಿಸಿದರು. ಶಿಗ್ಗಾಂವಿಯಲ್ಲಿ ಅಜ್ಜಂಪೀರ್ ಖಾದ್ರಿ ಅವರು ನಾಮಪತ್ರ ವಾಪಸ್ ಪಡೆದಿದ್ದು, ಉಪಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರಮಿಸುತ್ತಾರೆ. ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣ ಮೂರೂ ಕ್ಷೇತ್ರಗಳಲ್ಲಿಯೂ ಗೆಲುವು ನಮ್ಮದೇ…
ರಾಮನಗರ : ಎರಡು ಭಾರಿ ನಾನು ಚುನಾವಣೆಯಲ್ಲಿ ಸೊತ್ತಿದ್ದೇನೆ. ನಾನು ಏನು ತಪ್ಪು ಮಾಡಿದ್ದೇನೆ ಗೊತ್ತಿಲ್ಲ. ಮಾಜಿ ಪ್ರಧಾನಿ ಮತ್ತು ಮಾಜಿ ಮುಖ್ಯ ಮಂತ್ರಿ ಮಗನಾಗಿ ಹುಟ್ಟಿರುವುದೇ ನನ್ನ ದುರದೃಷ್ಟನೋ ಗೊತ್ತಿಲ್ಲ ಎಂದು ಕಣ್ಣೀರು ಹಾಕಿದರು. ಕನ್ನಮಂಗಲ ಗ್ರಾಮದ ಪ್ರಚಾರ ಸಭೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಭಾವುಕರಾದರು. ಈ ಚುನಾವಣೆಯಲ್ಲಿ ನಾನು ಕಣ್ಣೀರು ಹಾಕಬಾರದು ಅಂನ್ಕೊಂಡಿದ್ದೇ. ಆದರೆ ಸಾಕಷ್ಟು ನೋವುಗಳಿವೆ ಎಂದು ಭಾಷಣದ ವೇಳೆ ಕಣ್ಣೀರು ಹಾಕಿದರು. ಕಾಂಗ್ರೆಸ್ ಷಡ್ಯಂತ್ರ ನಾನು ಎರಡು ಚುನಾವಣೆಯಲ್ಲೂ ಪೆಟ್ಟು ತಿಂದಿದ್ದೇನೆ.ಜನ ನನ್ನ ಪರವಾಗಿ ಮತ ಹಾಕಿದ್ದಾರೆ.ಆದರೆ ರಾಜಕೀಯ ಷಡ್ಯಂತ್ರಕ್ಕೆ ನಾನು ಬಲಿಯಾಗಿದ್ದೇನೆ. ಬಹಳ ನೋವಿನಲ್ಲಿ ಇದ್ದೇನೆ.ಇವತ್ತು ಪಕ್ಷದ ಕಾರ್ಯಕರ್ತರಿಗೆ ಬೆಲೆ ಕೊಡಬೇಕೆಂದು ಈ ಚುನಾವಣೆಯಲ್ಲಿ ನಿಂತಿದ್ದೇನೆ. ದಯವಿಟ್ಟು ಈ ಭಾರಿ ಈ ಯುವಕನನ್ನ ಗೆಲ್ಲಿಸಿ ಎಂದು ಎಂದು ಮನವಿ ಮಾಡಿದರು. ಕಳೆದ ಭಾರಿ ಲೋಕ ಸಭೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಕಹಿ ಘಟನೆಯನ್ನು ನೆನೆಸಿಕೊಂಡು ನನ್ನ ಮೂಲಕ ಉತ್ತರ ಕೊಡ್ಬೇಕು ಅಂತ ಕಾರ್ಯಕರ್ತರಭಾವನೆಯಾಗಿತ್ತು ಅಂಬೇಡ್ಕರ್ ಭವನದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಒಳ ಮೀಸಲಾತಿ ಕುರಿತು 3 ದಶಕಗಳ ನಿರಂತರ ಬೇಡಿಕೆ, ಒತ್ತಾಯಗಳ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟವು ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿಯನ್ನು ಕಲ್ಪಿಸಲು ತಾತ್ವಿಕವಾಗಿ ಒಪ್ಪಿಗೆ ನೀಡಿದೆ. ಪರಿಶಿಷ್ಟ ಜಾತಿಗಳಲ್ಲಿ 101 ಒಳ ಪಂಗಡಗಳಿದ್ದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ವೈಜ್ಞಾನಿಕವಾಗಿ ಒಳ ಮೀಸಲಾತಿಯನ್ನು ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂಬುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ರಾಜ್ಯ ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಕಮಿಷನ್ ಆಫ್ ಇನ್‌ಕ್ವೈರಿ ಅಕ್ಟ್ 1952 ಅನ್ವಯ ಆಯೋಗವನ್ನು ರಚಿಸಲು ನಿರ್ಧರಿಸಲಾಗಿದೆ. ಸದರಿ ಆಯೋಗವು ಎರಡು ತಿಂಗಳ ಒಳಗಾಗಿ ವರದಿ ಸಲ್ಲಿಸುವ ಷರತ್ತು ವಿಧಿಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಮುಂದಿನ ತೀರ್ಮಾನದವರೆಗೆ ರಾಜ್ಯ ಸರ್ಕಾರದ ಅಧೀನದ ಸಿವಿಲ್ ಸೇವೆಗಳಲ್ಲಿನ ಹಾಗೂ ಮೀಸಲಾತಿ ಅನ್ವಯವಾಗುವ ವೃಂದಗಳ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಹೊರಡಿಸದಿರುವ ನಿರ್ಧಾರವನ್ನು ಸಹ ಕೈಗೊಳ್ಳಲಾಗಿದೆ ಎಂದಿದ್ದಾರೆ. ತೆಲಂಗಾಣ ಸರ್ಕಾರ ಸಹ…
ಬೆಂಗಳೂರು: ನಗರದಲ್ಲಿ ದೀಪಾವಳಿ ಹಬ್ಬಕ್ಕೂ ಮುನ್ನಾ ಪಟಾಕಿ ಅವಘಡಗಳಿಂದ ಉಂಟಾಗುವ ಹಾನಿಕೆ ಸೂಕ್ತ ಕಾಲದಲ್ಲಿ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರ ಸಜ್ಜಾಗಿದೆ. ಈ ಕಾರಣದಿಂದಲೇ ಪಟಾಕಿ ಅವಘಡಗಳು ಸಂಭವಿಸಿದ್ದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ದಿನದ 24 ಗಂಟೆಯೂ ವೈದ್ಯಕೀಯ ಸೇವೆಯ ಸೌಲಭ್ಯದ ವ್ಯವಸ್ಥೆ ಕಲ್ಪಿಸಿದೆ. ರಾಜ್ಯ ವಾರ್ತಾ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಅವಘಡಗಳು ಸಂಭವಿಸಿದಲ್ಲಿ ಕಣ್ಣಿಗೆ ಹಾನಿಯಾಗುವುದನ್ನು ತಪ್ಪಿಸಲು ಬೆಂಗಳೂರು ನಗರದ ಕಣ್ಣಿನ ಆಸ್ಪತ್ರೆಗಳು ಅಗತ್ಯ ಸಿದ್ಧತೆ ಮಾಡಿಕೊಂಡಿದ್ದು, ಹಬ್ಬದ ಸಂದರ್ಭದಲ್ಲಿ ದಿನದ 24 ಗಂಟೆಯೂ ಸೇವೆ ನೀಡಲು ಸಜ್ಜಾಗಿವೆ ಎಂದಿದೆ. ಆಸ್ಪತ್ರೆ ಹಾಗೂ ಸಹಾಯವಾಣಿ ಸಂಖ್ಯೆಗಳ ವಿವರ: – ಮಿಂಟೊ ಕಣ್ಣಿನ ಆಸ್ಪತ್ರೆ: 9481740137, 08026707176 – ನಾರಾಯಣ ನೇತ್ರಾಲಯ: ರಾಜಾಜಿನಗರ ಶಾಖೆ- 080 66121641/1643, 9902546046 – ನಾರಾಯಣ ನೇತ್ರಾಲಯ ಎನ್‌ಎಚ್ ಹೆಲ್ತ್ ಸಿಟಿ ಬೊಮ್ಮಸಂದ್ರ: 080 66660655, 9902821128 – ನಾರಾಯಣ ನೇತ್ರಾಲಯ ಇಂದಿರಾನಗರ ಶಾಖೆ: 080 66974000, 9916024455 -…
ಬೆಂಗಳೂರು: ಇಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಬೆಂಗಳೂರಿನ ಪೂರ್ವ ತಾಲ್ಲೂಕಿನ ತಾಲ್ಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ, ಪರಿಶೀಲಿಸಿದರು. ಈ ವೇಳೆಯಲ್ಲಿ ಕರ್ತವ್ಯಕ್ಕೆ ಗೈರು ಹಾಜರಾಗಿದ್ದಂತ 11 ಅಧಿಕಾರಿ, ಸಿಬ್ಬಂದಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಿ ಬಿಗ್ ಶಾಕ್ ನೀಡಿದ್ದಾರೆ. ಈ ಸಂಬಂಧ ಬೆಂಗಳೂರು ನಗರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಅವರು ಕಾರಣ ಕೇಳಿ ನೋಟಿಸ್ ಜಾರಿಗೊಳಿಸಿದ್ದಾರೆ. ಬೆಂಗಳೂರು ಪೂರ್ವ ತಾಲ್ಲೂಕು ಕಚೇರಿಯ ಗ್ರೂಪ್ ಡಿ ಎನ್ ಆರ್ ಮಂಜುನಾಥ, ಗ್ರಾಮ ಆಡಳಿತಾಧಿಕಾರಿ ಲಕ್ಷ್ಮೀದೇವಿ, ಎಸ್ ಡಿಎ ಬಾಲಕೃಷ್ಣ,ಡಿ, ರಕ್ಷಿತ್.ಎನ್, ಎಫ್ ಡಿಎ ಜ್ಞಾನ ಶೇಖರ್.ಎ, ಕೆ.ಪ್ರವೀಣ, ಆಹಾರ ವಿಭಾಗದ ಶಿರಸ್ತೇದಾರರಾದ ಚಂದ್ರಮ್ಮ ಸಿ, ಇಡಬ್ಲ್ಯೂ ವಿಭಾಗದ ಶಿರಸ್ತೆದಾರರಾದ ಅತಿಕ್ ಜಮೀಲ್ ಖಾನ್ ಅವರಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಿದ್ದಾರೆ. ಇದಲ್ಲದೇ ಬೆಂಗಳೂರು ಪೂರ್ವ ತಾಲ್ಲೂಕಿನ ತಹಶೀಲ್ದಾರರಾದಂತ ಬಿಎಸ್ ರಾಜೀವ್ ಕೂಡ ಕಂದಾಯ ಸಚಿವರು ತಾಲ್ಲೂಕು ಕಚೇರಿಗೆ ಭೇಟಿ ನೀಡಿದಂತ ಸಂದರ್ಭದಲ್ಲಿ ಕರ್ತವ್ಯಕ್ಕೆ ಗೈರಾಗಿದ್ದಕ್ಕೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ.…














