Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಅಂತಾರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತರಾದ ಬಾನುಮುಷ್ತಾಕ್ ಅವರ ಎದೆಯ ಹಣತೆ ಕಥೆಯನ್ನು ಆಧರಿಸಿದ ನಾಟಕ ಮತ್ತು ಸಾಹಿತಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಮಾಯಾಮೃಗ ನಾಟಕ ಪ್ರದರ್ಶನವನ್ನು ಜುಲೈ 11ರಂದು ಶುಕ್ರವಾರ ಹಾಸನಾಂಬ ಕಲಾ ಕ್ಷೇತ್ರದಲ್ಲಿ ಹಾಸನದ ರಂಗಸಿರಿ ಕಲಾ ತಂಡ ಆಯೋಜಿಸಿದೆ. ನೀನಾಸಮ್ ರಂಗಶಿಕ್ಷಣ ಕೇಂದ್ರದ ಪ್ರಾಂಶುಪಾಲ ಡಾ.ಎಂ.ಗಣೇಶ್ ಹೆಗ್ಗೋಡು ನಿರ್ದೇಶನ ಮಾಡಿರುವ ಈ ನಾಟಕವನ್ನು ಹೆಗ್ಗೋಡಿನ ಸತ್ಯಶೋಧನ ರಂಗಸಮುದಾಯದ ನೇತೃತ್ವದಲ್ಲಿ ಜನಮನದಾಟ ರಂಗ ತಂಡ ಅಭಿನಯಿಸಲಿದೆ. ಇದೇ ಸಂದರ್ಭದಲ್ಲಿ ಬುಕರ್ ಪ್ರಶಸ್ತಿ ಪುರಸ್ಕೃತರಾದ ಬಾನುಮುಷ್ತಾಕ್ ಅವರನ್ನು ಜಿಲ್ಲಾಧಿಕಾರಿ ಲತಾಕುಮಾರಿ ಅವರು ಅಭಿನಂದಿಸಲಿದ್ದಾರೆ. ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮತ್ತು ರಂಗಸಿರಿ ಗೌರವಾಧ್ಯಕ್ಷ ಶಿವಾನಂದ ತಗಡೂರು ಅವರು ಅಧ್ಯಕ್ಷತೆ ವಹಿಸುವ ಈ ಕಾರ್ಯಕ್ರಮವನ್ನು ಶಾಸಕ ಎಚ್.ಪಿ.ಸ್ವರೂಪ್ ಉದ್ಘಾಟಿಸಲಿದ್ದಾರೆ. ಜಿಪಂ ಸಿಇಒ ಡಾ.ಬಿ.ಆರ್.ಪೂರ್ಣಿಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮದ್ ಸುಜೀತ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ರವಿ ನಾಕಲಗೂಡು, ರಂಗಸಿರಿ ಅಧ್ಯಕ್ಷ…
ಬಳ್ಳಾರಿ: ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ, ಬಳ್ಳಾರಿ ಇದರ ಕಾರ್ಯವ್ಯಾಪ್ತಿಯ ಆಡಳಿತ ಮಂಡಳಿ ನಿರ್ದೇಶಕರ ಸಾಮಾನ್ಯ ಚುನಾವಣೆ ಹಿನ್ನೆಲೆಯಲ್ಲಿ ಬಳ್ಳಾರಿಯ ಒಕ್ಕೂಟದ ಆಡಳಿತ ಕಚೇರಿಯ 02 ಕಿ.ಮೀ ವ್ಯಾಪ್ತಿಯಲ್ಲಿ ಜುಲೈ 09 ರಂದು ಸಂಜೆ 06 ಗಂಟೆಯಿAದ ಜುಲೈ 11 ರ ಬೆಳಿಗ್ಗೆ 06 ಗಂಟೆಯವರೆಗೆ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಕರ್ನಾಟಕ ಅಬಕಾರಿ ಕಾಯ್ದೆ 1965 ರ ಕಲಂ 21 ರನ್ವಯ ಮದ್ಯ ಮಾರಾಟ, ಸಾಗಣಿಕೆ ಮಾಡದಂತೆ ಹಾಗೂ ಮದ್ಯ ಅಂಗಡಿ, ಬಾರ್-ರೆಸ್ಟೋರೆಂಟ್ಗಳನ್ನು ತೆರೆಯದಂತೆ ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ. ಈ ಆದೇಶವು ಡಿಸ್ಟಲರೀಸ್ ರಾಜ್ಯದ ವಿವಿಧ ಕೆ.ಎಸ್.ಪಿ.ಬಿ.ಸಿ.ಎಲ್ ಡಿಪೊಗಳಿಗೆ ದಾಸ್ತಾನು ವಿಲೇವಾರಿ ಮಾಡಲು ಅನ್ವಯಿಸುವುದಿಲ್ಲ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ. https://kannadanewsnow.com/kannada/three-people-including-the-wife-who-killed-her-husband-along-with-her-lover-have-been-arrested/ https://kannadanewsnow.com/kannada/the-following-documents-are-mandatory-for-the-aadhaar-card-renewal-these-are-uidais-new-rules/
ಟ್ವಿಟರ್ ಎಂದು ಕರೆಯಲಾಗುತ್ತಿದ್ದ ಸಾಮಾಜಿಕ ಮಾಧ್ಯಮ ವೇದಿಕೆಯಾದ ಎಕ್ಸ್ನ ಸಿಇಒ ಲಿಂಡಾ ಯಾಕರಿನೊ ಬುಧವಾರ ತಮ್ಮ ದೀರ್ಘ ಎಕ್ಸ್ ಪೋಸ್ಟ್ನಲ್ಲಿ ತಮ್ಮ ರಾಜೀನಾಮೆಯ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಮಸ್ಕ್ ತನ್ನ ವೇದಿಕೆಯನ್ನು ಪರಿವರ್ತಿಸುವ ದೃಷ್ಟಿಕೋನವನ್ನು ಕಾರ್ಯಗತಗೊಳಿಸಲು ಸಹಾಯ ಮಾಡಲು 2023 ರಲ್ಲಿ ಯಾಕರಿನೊ X ನಲ್ಲಿ ಉನ್ನತ ಹುದ್ದೆಯನ್ನು ವಹಿಸಿಕೊಂಡರು. ತಮ್ಮ ಪೋಸ್ಟ್ನಲ್ಲಿ, ಯಾಕರಿನೊ ಹೀಗೆ ಹೇಳಿದರು, “ಎರಡು ಅದ್ಭುತ ವರ್ಷಗಳ ನಂತರ, ನಾನು ನ CEO ಹುದ್ದೆಯಿಂದ ಕೆಳಗಿಳಿಯಲು ನಿರ್ಧರಿಸಿದ್ದೇನೆ. @elonmusk ಮತ್ತು ನಾನು ಮೊದಲು ಅವರ X ಗಾಗಿ ದೃಷ್ಟಿಕೋನದ ಬಗ್ಗೆ ಮಾತನಾಡಿದಾಗ, ಈ ಕಂಪನಿಯ ಅಸಾಧಾರಣ ಧ್ಯೇಯವನ್ನು ನಿರ್ವಹಿಸಲು ಇದು ಜೀವಮಾನದ ಅವಕಾಶ ಎಂದು ನನಗೆ ತಿಳಿದಿತ್ತು. ವಾಕ್ ಸ್ವಾತಂತ್ರ್ಯವನ್ನು ರಕ್ಷಿಸುವ, ಕಂಪನಿಯನ್ನು ತಿರುಗಿಸುವ ಮತ್ತು X ಅನ್ನು ಎವೆರಿಥಿಂಗ್ ಅಪ್ಲಿಕೇಶನ್ ಆಗಿ ಪರಿವರ್ತಿಸುವ ಜವಾಬ್ದಾರಿಯನ್ನು ನನಗೆ ವಹಿಸಿದ್ದಕ್ಕಾಗಿ ನಾನು ಅವರಿಗೆ ಅಪಾರವಾಗಿ ಕೃತಜ್ಞನಾಗಿದ್ದೇನೆ.” “X ತಂಡದ ಬಗ್ಗೆ ನನಗೆ ನಂಬಲಾಗದಷ್ಟು ಹೆಮ್ಮೆಯಿದೆ – ನಾವು ಒಟ್ಟಾಗಿ ಸಾಧಿಸಿದ…
ಹಾಸನ: ಜಿಲ್ಲೆಯಲ್ಲಿ ಪ್ರಿಯಕರನ ಜೊತೆಗೆ ಸೇರಿ ಪತಿಯನ್ನು ಕೊಂದಿದ್ದಂತ ಪತ್ನಿ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹಾಸನ ಗ್ರಾಮಾಂತರ ಠಾಣೆಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜುಲೈ.5ರಂದು ಮಧು(36) ಎಂಬಾತನನ್ನು ಕೊಲೆಗೈದು ಶವ ಬಿಸಾಡಿ ಹೋಗಲಾಗಿತ್ತು. ಹತ್ಯೆಗೀಡಾಗಿದ್ದ ಮಧು ಪತ್ನಿ ಭವ್ಯ, ಅವರ ತಾಯಿ ಜಯಂತಿ, ಪ್ರಿಯಕರ ಮೋಹನ್ ಕುಮಾರ್ ನನ್ನು ಈ ಪ್ರಕರಣದಲ್ಲಿ ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಆಲೂರು ಮೂಲದ ಮೋಹನ್ ಜೊತೆಗೆ ಭವ್ಯ ಅಕ್ರಮ ಸಂಬಂಧ ಹೊಂದಿದ್ದರು ಎನ್ನಲಾಗುತ್ತಿದೆ. ಕಳೆದ ಎರಡು ವರ್ಷದಿಂದ ಮೋಹನ್ ಕುಮಾರ್ ಜೊತೆಗೆ ಭವ್ಯ ಸಂಬಂಧ ಹೊಂದಿದ್ದರು ಎಂಬುದಾಗಿ ಹೇಳಲಾಗುತ್ತಿದೆ. ತಮ್ಮ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಂತ ಪತಿ ಮಧುವನ್ನು ಕಂಠಪೂರ್ತಿ ಕುಡಿಸಿ ಉಸಿರುಗಟ್ಟಿಸಿ ಕೊಲೆಗೈದಿದ್ದು. ಆ ಬಳಿಕ ಹೂವಿನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 376ರ ಬಳಿ ಶವ ಎಸೆದಿದ್ದರು. ಇದಲ್ಲದೇ ಮಧು ಅಪಘಾತದಲ್ಲಿ ಮೃತಪಟ್ಟಿದ್ದಾಗಿ ಬಿಂಬಿಸೋದಕ್ಕೆ ಪತ್ನಿ ಭವ್ಯ ಯತ್ನಿಸಿದ್ದರು. ಆದರೇ ಮಧು ತಾಯಿ ರುಕ್ಮಿಣಿ ತನ್ನ ಮಗನನ್ನು ಹತ್ಯೆ ಮಾಡಿರುವುದಾಗಿ ಹಾಸನ ಗ್ರಾಮಾಂತರ…
ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧದ ಅವಹೇಳನಕಾರಿ ಹೇಳಿಕೆ ಪ್ರಕರಣದಲ್ಲಿ ಬಿಜೆಪಿಯ ಎಂಎಲ್ಸಿ ಎನ್ ರವಿಕುಮಾರ್ ಗೆ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಈ ಪ್ರಕರಣ ರದ್ದುಕೋರಿ ಬಿಜೆಪಿ ಎಂಎಲ್ಸಿ ಎನ್ ರವಿಕುಮಾರ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ್ದಂತ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಅವರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚಿಸಿ ಆದೇಶಿಸಿತ್ತು. ಇಂದು ಜಾಮೀನು ಕುರಿತಂತೆ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ಜನಪ್ರತಿನಿಧಿಗಳ ನ್ಯಾಯಾಲಯವು, ಬಿಜೆಪಿ ಎಂಎಲ್ಸಿ ಎನ್ ರವಿಕುಮಾರ್ ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. 1 ಲಕ್ಷ ರೂಪಾಯಿ ಮೊತ್ತದ ಬಾಂಡ್, ಒಬ್ಬರ ಶ್ಯೂರಿಟಿ ಒದಗಿಸಲು ಸೂಚಿಸಿದೆ. ಅಲ್ಲದೇ ತನಿಖೆಗೆ ಸಹಕರಿಸಬೇಕು, ಸಾಕ್ಷ್ಯಾಧಾರ ನಾಶಪಡಿಸದಂತೆ ಕೋರ್ಟ್ ಷರತ್ತು ವಿಧಿಸಿದೆ. https://kannadanewsnow.com/kannada/kee-has-released-the-schedule-for-the-first-round-seat-allocation-for-admission-to-various-courses-including-engineering/ https://kannadanewsnow.com/kannada/the-following-documents-are-mandatory-for-the-aadhaar-card-renewal-these-are-uidais-new-rules/
ನವದೆಹಲಿ: ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರ ಮತ್ತು ಹುಬ್ಬಳ್ಳಿ ಧಾರವಾಡ-ಬೆಳಗಾವಿ-ವಿಜಯಪುರ ಜಿಲ್ಲೆಗಳಿಗೆ ಕೇಂದ್ರ ಸರಕಾರವು ಎರಡು ಪ್ರತ್ಯೇಕ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡಬೇಕೆಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರದ ನಿಯೋಗವು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಬುಧವಾರ ಇಲ್ಲಿ ಮನವಿ ಸಲ್ಲಿಸಿದೆ. ನಿಯೋಗದಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ, ಇಂಧನ ಸಚಿವ ಕೆ ಜೆ ಜಾರ್ಜ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಇದ್ದರು. ಕೇಂದ್ರ ಸರಕಾರವು 2018ರಲ್ಲಿ ಉತ್ತರಪ್ರದೇಶ ಮತ್ತು ತಮಿಳುನಾಡಿಗೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡಿದೆ. ಆದರೆ, ದೇಶದ ರಕ್ಷಣಾ ಮತ್ತು ವೈಮಾಂತರಿಕ್ಷ ವಲಯದಲ್ಲಿ ಕರ್ನಾಟಕವು ಶೇ.75ರಷ್ಟು ಪಾಲು ಹೊಂದಿದ್ದು, ಜಾಗತಿಕವಾಗಿ ಮೂರನೇ ಅತ್ಯುತ್ತಮ ಕಾರ್ಯಪರಿಸರ ಹೊಂದಿರುವ ಹೆಗ್ಗಳಿಕೆ ಸಂಪಾದಿಸಿದೆ. ಹೀಗಾಗಿ, ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕಗಳಿಗೆ ಒಂದೊಂದು ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡಿದರೆ, ಇದು ಮೇಕ್ ಇನ್…
ನವದೆಹಲಿ: ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ ಪ್ರದರ್ಶನ ಹಾಗೂ ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಸರ್ಕಾರದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಉತ್ತರಪ್ರದೇಶ ಹಾಗೂ ತಮಿಳುನಾಡುಯ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ರಕ್ಷಣಾ ಕಾರಿಡಾರ್ ಸ್ಥಾಪನೆ ಹಾಗೂ ಟನಲ್ ಯೋಜನೆ , ಬಳ್ಳಾರಿ ರಸ್ತೆಯಲ್ಲಿ ಲಿಂಕ್ ರೋಡ್ ಯೋಜನೆ, ಡಬಲ್ ಡೆಕ್ಕರ್ ಫ್ಲೈಓವರ್ ಯೋಜನೆಯ ನಿರ್ಮಾಣಕ್ಕೆ ಅವಶ್ಯವಿರುವ ಕೇಂದ್ರ ರಕ್ಷಣಾ ಇಲಾಖೆಗೆ ಸೇರಿದ ಜಾಗವನ್ನು ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ನೀಡುವಂತೆ ಕೋರಿ ಮನವಿ ಸಲ್ಲಿಸಿರುವ ಬಗ್ಗೆ ವಿವರಿಸಿದರು. ರಾಹುಲ್ ಗಾಂಧಿಯನ್ನು ಭೇಟಿಯಾಗುವ ಕಾರ್ಯಕ್ರಮವಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ರಾಹುಲ್ ಗಾಂಧಿಯವರ ಸಮಯವನ್ನು ಸಾಧ್ಯವಾದರೆ ಭೇಟಿಯಾಗುವುದಾಗಿ ತಿಳಿಸಿದರು. ಕಾಂಗ್ರೆಸ್ ನ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ನಾಳೆ ನವದೆಹಲಿಗೆ ಆಗಮಿಸಲಿದ್ದು, ಅವರೊಂದಿಗೆ…
ನಮೀಬಿಯಾ: ಬುಧವಾರ ಪ್ರಧಾನಿ ಮೋದಿ ಅವರಿಗೆ ನಮೀಬಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಆರ್ಡರ್ ಆಫ್ ದಿ ಮೋಸ್ಟ್ ಏನ್ಷಿಯೆಂಟ್ ವೆಲ್ವಿಟ್ಚಿಯಾ ಮಿರಾಬಿಲಿಸ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಜುಲೈ ಆರಂಭದಲ್ಲಿ ಅವರು ಆರಂಭಿಸಿದ ಐದು ರಾಷ್ಟ್ರಗಳ ಪ್ರವಾಸದ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ದೇಶಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಪ್ರಶಸ್ತಿ ಬಂದಿತು. ಇದು ಪ್ರಧಾನಿ ಮೋದಿ ಅವರ ಮೊದಲ ನಮೀಬಿಯಾ ಭೇಟಿಯಾಗಿದ್ದು, ಭಾರತದಿಂದ ದೇಶಕ್ಕೆ ಭೇಟಿ ನೀಡುತ್ತಿರುವ ಮೂರನೇ ಪ್ರಧಾನಿಯಾಗಿದ್ದಾರೆ. ಪ್ರಧಾನಿ ಅವರನ್ನು ನಮೀಬಿಯಾದ ಅಂತರರಾಷ್ಟ್ರೀಯ ಸಂಬಂಧಗಳು ಮತ್ತು ವ್ಯಾಪಾರ ಸಚಿವೆ ಸೆಲ್ಮಾ ಅಶಿಪಲಾ-ಮುಸಾವಿ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ದೇಶಕ್ಕೆ ಆಗಮಿಸಿದಾಗ ಅವರಿಗೆ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು. “ಸ್ವಲ್ಪ ಸಮಯದ ಹಿಂದೆ ವಿಂಡ್ಹೋಕ್ನಲ್ಲಿ ಬಂದಿಳಿದಿದ್ದೇವೆ. ನಮೀಬಿಯಾ ಮೌಲ್ಯಯುತ ಮತ್ತು ವಿಶ್ವಾಸಾರ್ಹ ಆಫ್ರಿಕನ್ ಪಾಲುದಾರರಾಗಿದ್ದು, ಅವರೊಂದಿಗೆ ನಾವು ದ್ವಿಪಕ್ಷೀಯ ಸಹಕಾರವನ್ನು ಹೆಚ್ಚಿಸಲು ಬಯಸುತ್ತೇವೆ. ಅಧ್ಯಕ್ಷ ಡಾ. ನೆಟುಂಬೊ ನಂದಿ-ನದೈತ್ವಾ ಅವರನ್ನು ಭೇಟಿ ಮಾಡಲು ಮತ್ತು ಇಂದು ನಮೀಬಿಯಾ ಸಂಸತ್ತನ್ನು ಉದ್ದೇಶಿಸಿ ಮಾತನಾಡಲು ಎದುರು…
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಶಾಲೆಗೆ ಚಕ್ಕರ್ ಹಾಕೋದಕ್ಕೆ ಬ್ರೇಕ್ ಬೀಳಲಿದೆ. ಅಲ್ಲದೇ ಪಾಠ ಮಾಡದೇ ಕಳ್ಳಾಟ ಮಾಡೋದಕ್ಕೆ ಬ್ರೇಕ್ ಹಾಕಲಾಗುತ್ತಿದೆ. ಶಿಕ್ಷಕರಿಗೆ ಮುಖ ಚಹರೆ ಹಾಜರಾತಿ ವ್ಯವಸ್ಥೆಯನ್ನು ಶಾಲಾ ಶಿಕ್ಷಣ ಇಲಾಖೆ ಜಾರಿಗೊಳಿಸಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ರಾಜ್ಯದಲ್ಲಿ ಶಿಕ್ಷಕರು, ಶಿಕ್ಷಣ ಇಲಾಖೆಯ ಸಿಬ್ಬಂದಿಯ ಆನ್ಲೈನ್ ಹಾಜರಾತಿಗೆ ಚಾಲನೆ ನೀಡಲಾಗಿದೆ. ಇನ್ನು ಮುಂದೆ ಖೊಟ್ಟಿ ಹಾಜರಾತಿಗೆ ತಡೆ ಬೀಳಲಿದೆ. ಶಾಲೆ ತಲುಪಿದ ಬಳಿಕ ಶಿಕ್ಷಕರು ಆನ್ಲೈನ್ ಹಾಜರಾತಿ ಹಾಕಬೇಕು. ಇದರಿಂದ ಸಮಯಕ್ಕೆ ಸರಿಯಾಗಿ ಶಿಕ್ಷಕರು ಶಾಲೆಗೆ ಬರುತ್ತಾರೆ. ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ನೆರವಾಗಲಿದೆ. ಶೀಘ್ರವೇ ರಾಜ್ಯದಲ್ಲಿನ 57 ಲಕ್ಷ ವಿದ್ಯಾರ್ಥಿಗಳ ಮುಖ ಚಹರೆ ಆಧರಿಸಿ ಆನ್ಲೈನ್ ಹಾಜರಾತಿ ವ್ಯವಸ್ಥೆ ಜಾರಿ ಮಾಡಲಾಗುವುದು ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1942571114510835892 https://kannadanewsnow.com/kannada/tomorrow-is-guru-purnima-if-you-do-this-one-task-it-will-never-hinder-the-progress-of-your-life/ https://kannadanewsnow.com/kannada/the-court-ordered-to-provide-nia-custody-for-6-days-for-three-suspected-terrorists-arrested-in-the-state/
ಬೆಂಗಳೂರು: ವೈದ್ಯಕೀಯ ಕೋರ್ಸ್ ಹೊರತುಪಡಿಸಿ, ಎಂಜಿನಿಯರಿಂಗ್, ಪಶು ವೈದ್ಯಕೀಯ, ಕೃಷಿ, ಬಿಪಿಟಿ, ಎಎಚ್ಎಸ್ ಕೋರ್ಸ್ ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ಸ್ ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಲಿಂಕ್ ಬಿಟ್ಟಿದ್ದು, ಜುಲೈ 15ರವರೆಗೆ ಅವಕಾಶ ನೀಡಿದೆ. ವೈದ್ಯಕೀಯ, ದಂತ ವೈದ್ಯಕೀಯ, ಆಯುರ್ವೇದ, ಹೋಮಿಯೋಪತಿ ಮತ್ತು ಯುನಾನಿ, ಬಿಎಸ್ ಸಿ ನರ್ಸಿಂಗ್, ಆರ್ಕಿಟೆಕ್ಚರ್, ಯೋಗ ಮತ್ತು ನ್ಯಾಚುರೋಪತಿ ಕೋರ್ಸ್ ಗಳಿಗೆ ಸಂಬಂಧಿಸಿದ ಸೀಟ್ ಮ್ಯಾಟ್ರಿಕ್ಸ್ ಸಂಬಂಧಪಟ್ಟ ಇಲಾಖೆಗಳಿಂದ ಇನ್ನೂ ಬಂದಿಲ್ಲ. ಹೀಗಾಗಿ ಮ್ಯಾಟ್ರಿಕ್ಸ್ ಬಂದ ನಂತರ ಈ ಕೋರ್ಸ್ ಗಳ ಪ್ರವೇಶಕ್ಕೂ ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅಣಕು ಫಲಿತಾಂಶವನ್ನು ಜುಲೈ 19ರಂದು ಪ್ರಕಟಿಸಲಾಗುವುದು. ಅದರ ಬಳಿಕ ಆದ್ಯತೆಗಳನ್ನು ಅದಲು- ಬದಲು ಮಾಡಿಕೊಳ್ಳಲು ಜು.22ರವರೆಗೆ ಅವಕಾಶ ಇರುತ್ತದೆ. ಜುಲೈ 25ರಂದು ಅಂತಿಮ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಅವರು ವಿವರಿಸಿದ್ದಾರೆ. ಅಭ್ಯರ್ಥಿಗಳು ಸೀಟ್ ಮ್ಯಾಟ್ರಿಕ್ಸ್ ನೋಡಿಕೊಂಡು ಇಚ್ಛೆ/…