Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟಪಡಿಸಿದ್ದಾರೆ. ನವದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ, ಬೆಂಗಳೂರಿನಲ್ಲಿ ದಾಖಲಾಗಿರುವ ಬಿಜೆಪಿ ಟಿಕೆಟ್ ವಂಚನೆ ಪ್ರಕರಣದ ಬಗ್ಗೆ ಅವರು ಸ್ಪಷ್ಟನೆ ನೀಡಿದರು. ಮೊದಲನೆಯದಾಗಿ ನನಗೆ ಯಾರೂ ಸಹೋದರಿ ಇಲ್ಲ. ಇನ್ನು, ನನ್ನ ತಾಯಿಗೆ ಗೋಪಾಲ್ ಜೋಶಿ ಸೇರಿ ನಾಲ್ವರು ಮಕ್ಕಳು. ಆದರೆ, ಗೋಪಾಲ್ ಜೋಶಿ ಅವರೊಂದಿಗೆ ಕಳೆದ 32 ವರ್ಷಗಳಿಂದ ತಮ್ಮ ಸಂಪರ್ಕ, ಸಂಬಂಧವಿಲ್ಲ ಎಂದು ಆರೋಪವನ್ನು ತಳ್ಳಿ ಹಾಕಿದರು. ಗೋಪಾಲ್ ಜೋಶಿ ಮಾತ್ರವಲ್ಲ ಯಾರೇ ತಮ್ಮ ಕೆಲಸ ಕಾರ್ಯಗಳಿಗೆ ನನ್ನ ಹೆಸರು ದುರುಪಯೋಗ ಪಡಿಸಿಕೊಳ್ಳುತ್ತಿದ್ದರೆ ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಪ್ರಲ್ಹಾದ ಜೋಶಿ ಪುನರುಚ್ಚರಿಸಿದರು. ಯಾರೊಂದಿಗೂ ನನ್ನ ಹೆಸರು ಉಲ್ಲೇಖಿಸದಂತೆ 2013ರಲ್ಲೇ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ತಡೆಯಾಜ್ಞೆ ನೀಡಿದೆ. ನ್ಯಾಯಾಲದ ಅಫಿಡವಿಟ್ ನಲ್ಲಿ ಅದರ ವಿವರವಿದೆ ಎಂದು ದಾಖಲೆ ಸಮೇತ ಸ್ಪಷ್ಟನೆ ನೀಡಿದರು ಪ್ರಲ್ಹಾದ…
ಕರ್ಪೂರವನ್ನು ಉರಿಸುವುದರಿಂದ ಬೂದಿ ಉಳಿಯುವುದಿಲ್ಲ. ಹೇಗೆ ಕರ್ಪೂರ ಉರಿದು ಗಾಳಿಯಲ್ಲಿ ಕರಗುತ್ತದೆಯೋ ಹಾಗೆಯೇ ನಿಮ್ಮ ಜೀವನದಲ್ಲಿ ಒಂದು ರೂಪಾಯಿ ಸಾಲವೂ ಉಳಿಯುವುದಿಲ್ಲ. ನಿಮ್ಮ ಎಲ್ಲಾ ಸಾಲಗಳು ಶೀಘ್ರದಲ್ಲೇ ಗಾಳಿಯಲ್ಲಿ ಮಾಯವಾಗುತ್ತವೆ. ಶುಕ್ರವಾರ ರಾತ್ರಿ ನಿಮ್ಮ ಮನೆಯಲ್ಲಿ ಭೈರವನ ಸ್ಮರಿಸಿ ಈ ಪೂಜೆ ಮಾಡಿದರೆ. ಎಂತಹ ಅದ್ಭುತ ಪರಿಹಾರ. ಇದು ತುಂಬಾ ಖರ್ಚಾಗುತ್ತದೆಯೇ, ಯಾವುದೇ ಪ್ರಮುಖ ಕೆಲಸ ಇರುತ್ತದೆಯೇ, ಏನೂ ಇಲ್ಲ. ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಎಷ್ಟೇ ಪ್ರಯತ್ನ ಜೀವನದಲ್ಲಿ ಏಳಿಗೆ ಅಭಿವೃದ್ಧಿ ಆಗದೆ ನೋಂದಿದ್ದರೆ ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ…
ಬೆಂಗಳೂರು: ಮಾರ್ಚ್-2025ರಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ-1 ನಡೆಯಲಿದೆ. ಅಲ್ಲದೇ ಅದೇ ತಿಂಗಳಲ್ಲೇ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೂ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗೆ ವಿದ್ಯಾರ್ಥಿಗಳು ನೋಂದಾಯಿಸಿಕೊಳ್ಳುವ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯಿಂದ ಮಹತ್ವದ ಮಾಹಿತಿ ನೀಡಲಾಗಿದೆ. ಈ ಸಂಬಂಧ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಶಾಲಾ ಶಿಕ್ಷಣ ಇಲಾಖೆಯು, 2025ರ ಮಾರ್ಚ್/ಏಪ್ರಿಲ್ ಮಾಹೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ, ಅನುದಾನರಹಿತ ಪ್ರೌಢ ಶಾಲಾ/ ಕಾಲೇಜುಗಳಿಂದ (ಪ್ರೌಢ ಶಾಲಾ ವಿಭಾಗ) ಹಾಜರಾಗುವ ಅರ್ಹ ಶಾಲಾ ವಿದ್ಯಾರ್ಥಿಗಳ (CCERF), ಖಾಸಗಿ ಅಭ್ಯರ್ಥಿಗಳ (CCEPF) ಮತ್ತು ಪುನರಾವರ್ತಿತ ಅಭ್ಯರ್ಥಿಗಳ (CCERR, CCEPR) ನೋಂದಣಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಶಾಲಾ ಮುಖ್ಯ ಶಿಕ್ಷಕರು ತಮ್ಮ ಶಾಲೆಯಿಂದ ವಿದ್ಯಾರ್ಥಿಗಳ ವಿವರಗಳನ್ನು ಮಂಡಳಿಯ https://kseab.karnataka.gov.in ಜಾಲತಾಣದ ಶಾಲಾ ಲಾಗಿನ್ ಮೂಲಕ ಅಪ್‌ಲೋಡ್ ಮಾಡುವುದು ಎಂದಿದೆ. ಹಾಗೆಯೇ ಮಾರ್ಚ್ 2025ರ ಮಾಹೆಯಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಖಾಸಗಿ…
ಬೆಂಗಳೂರು: ಇಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಬೆಂಗಳೂರಲ್ಲಿ ಮತ್ತೊಂದು ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ಮಹತ್ವದ ಸಭೆಯನ್ನು ಉನ್ನತ ಮಟ್ಟದ ಅಧಿಕಾರಿಗಳ ಜೊತೆಗೆ ನಡೆಸಲಾಯಿತು. ಬೆಂಗಳೂರು ಹೊರವಲಯದಲ್ಲಿ 2ನೇ ವಿಮಾನ ನಿಲ್ದಾಣ ಪ್ರಕ್ರಿಯೆ ಚುರುಕು ಗೊಳಿಸುವ ಸಂಬಂಧ ಇಂದು ಡಿಸಿಎಂ ಡಿಸಿಎಂ ಡಿಕೆ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ KIADB, BMRCL, BMRDA, BDA ಸಂಬಂಧಿಸಿದ ಇನ್ನಿತರೆ ಇಲಾಖೆಗಳ ಉನ್ನತ ಅಧಿಕಾರಿಗಳೊಂದಿಗೆ ಮತ್ತೊಂದು ಸುತ್ತಿನ ಚರ್ಚೆ ನಡೆಸಲಾಯಿತು. ಈ ಯೋಜನೆಗೆ ಸಂಬಂಧಿಸಿದಂತೆ ವೈಜ್ಞಾನಿಕ ಅಧ್ಯಯನವನ್ನು ಈಗಾಗಲೇ ಕೈಗೊಳ್ಳಲಾಗಿದ್ದು, ಅದರಂತೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ (ಎಎಐ) ಪ್ರಸ್ತಾವನೆ ಸಲ್ಲಿಸಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿ ಫಾರ್ಚೂನ್ 500 ಕಂಪೆನಿಗಳು ಸೇರಿದಂತೆ ಹಲವು ಕಂಪೆನಿಗಳು ಸ್ಥಾಪನೆಗೊಂಡಿವೆ. ಜಾಗತಿಕ ಮಟ್ಟದ ಜ್ಞಾನ, ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳು, ಶಿಕ್ಷಣ, ಆರೋಗ್ಯ ಮತ್ತು ವಿಜ್ಞಾನ ವಲಯದ ಶ್ರೇಷ್ಠ ಸಂಸ್ಥೆಗಳುಳ್ಳ ಕ್ವಿನ್ ಸಿಟಿ ಅಸ್ತಿತ್ವಕ್ಕೆ ಬರುತ್ತಿದೆ. ಈ ಕಾರಣದಿಂದ ಈಗಿನ ವಿಮಾನ ನಿಲ್ದಾಣದ ಮೇಲಿನ ಒತ್ತಡ…
ಬೆಂಗಳೂರು: ಪ್ರಲ್ಹಾದ್ ಜೋಶಿಯವರ ಸಹೋದರ ಗೋಪಾಲ್ ಜೋಶಿಯರ ಮೇಲೆ ಟಿಕೆಟ್ ವಂಚನೆ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಸಚಿವ ಪ್ರಲ್ಹಾದ್ ಜೋಶಿಯವರ ರಾಜೀನಾಮೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳಿಗೆ ಈ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಗೋಪಾಲ್ ಜೋಶಿಯವರು ಪ್ರಲ್ಹಾದ್ ಜೋಶಿಯವರ ಜೊತೆಗೆ ಇದ್ದಾರೆ ಎಂಬುದು ಹುಬ್ಬಳ್ಳಿ ಭಾಗದ ಜನರಿಗೆ ಗೊತ್ತಿರುವ ಸಂಗತಿ. ಸಹೋದರ ಗೋಪಾಲ್ ಜೋಶಿಯವರ ಮೇಲೆ ಬಂದಿರುವ ಆರೋಪ, ನನಗೆ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನುಣಿಚಿಕೊಳ್ಳುವುದು ಸರಿಯಲ್ಲ. ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದರು. ಮಾಜಿ ಶಾಸಕ ದೇವಾನಂದ ಚೌಹಾಣ್ ಗೌರವಯುತವಾದ ವ್ಯಕ್ತಿ. ಚೌಹಾಣ್ ಅವರಿಗೆ ಲೋಕಸಭೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಜೋಶಿಯವರ ಸಹೋದರ ಗೋಪಾಲ್ ಜೋಶಿ 2 ಕೋಟಿ ಹಣ ಪಡೆದು ವಂಚಿಸಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೇನಾನಂದ ಚೌಹಾಣ್ ಅವರು ದಾಖಲೆ ಕೊಟ್ಟಿದ್ದಾರೆ. ಅಮಿತ್ ಶಾ ಅವರ ಹೆಸರನ್ನ ಬಳಸಿಕೊಳ್ಳಾಗಿದೆ.…
ಬೆಂಗಳೂರು: ಅಕ್ಟೋಬರ್.18ರ ಇಂದಿನಿಂದ ಅಕ್ಟೋಬರ್.24ರವರೆಗೆ ಒಂದು ವಾರಗಳ ಕಾಲ ಕೆಲ ಜಿಲ್ಲೆಗಳಲ್ಲಿ ಭಾರೀ, ಹಗುರ, ಸಾಧಾರಣ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತು ರಾಜ್ಯ ಹವಾಮಾನ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಚಂಡಮಾರುತದ ಪರಿಚಲನೆಯಿಂದ ಪೂರ್ವ ಮಧ್ಯ ಅರೇಬಿಯನ್ ಸಮುದ್ರದ ಮೇಲೆ ದಕ್ಷಿಣ ಆಂಧ್ರಪ್ರದೇಶದ ಕರಾವಳಿಯವರೆಗೆ ಕರ್ನಾಟಕ ಮತ್ತು ರಾಯಲಸೀಮಾದಾದ್ಯಂತ ಒಂದು ತೊಟ್ಟಿಯು ಸಾಗುತ್ತದೆ ಮತ್ತು ಸರಾಸರಿ ಸಮುದ್ರ ಮಟ್ಟದಿಂದ 3.1 ಕಿಮೀ ವರೆಗೆ ವಿಸ್ತರಿಸುತ್ತದೆ ಎಂದು ಹೇಳಿದೆ. ರಾಜ್ಯದ ಮಳೆ ಮುನ್ಸೂಚನೆ / ಎಚ್ಚರಿಕೆ: ದಿನ 1 (18 ನೇ ಸೆಪ್ಟೆಂಬರ್ 2024): ತುಮಕೂರು, ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ರಾಯಚೂರು, ಬಾಗಲಕೋಟೆ, ಗದಗ, ಕೊಪ್ಪಳ, ಧಾರವಾಡ, ಬೆಳಗಾವಿ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಹಲವೆಡೆ ಸಾಧಾರಣ ಮಳೆಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಗುಡುಗು ಸಹಿತ…
ಬೆಂಗಳೂರು: ನಾನು ಮುಡಾದ ಯಾವುದೇ ಫೈಲ್ ಗಳನ್ನು ತಂದಿಲ್ಲ. ಈ ಬಗ್ಗೆ ದೇವರ ಮುಂದೆ ಆಣೆ ಮಾಡೋದಕ್ಕೂ ನಾನು ಸಿದ್ಧ ಎಂಬುದಾಗಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಸ್ಪಷ್ಟ ಪಡಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಮುಡಾ ಹಗರಣದಲ್ಲಿ ಸಿಎಂ ತಪ್ಪು ಇಲ್ಲವೇ ಇಲ್ಲ. ಇದು ರಾಜಕೀಯ ಪ್ರೇರಿತ ದಾಳಿಯಾಗಿದೆ. ನಾನಂತೂ ಮುಡಾದಿಂದ ಯಾವುದೇ ಫೈಲ್ ತಗೊಂಡು ಬಂದಿಲ್ಲ ಎಂಬುದಾಗಿ ತಿಳಿಸಿದರು. ಮೋಸ್ಟ್ಲೀ ಛಲವಾದಿ ನಾರಾಯಣಸ್ವಾಮಿ ಮನೆಯಲ್ಲಿ ಇರಬೇಕು. ಇಲ್ಲದೇ ಕುಮಾರಸ್ವಾಮಿ ತಂದಿರಬೇಕು. ನಾನು ಮುಡಾದಿಂದ ಒಂದೇ ಒಂದು ಸಣ್ಣ ಪೇಪರ್ ತಂದಿಲ್ಲ. ನಾನು ಚಾಮುಂಡೇಶ್ವರಿ, ಮಂಜುನಾಥನ ಮೇಲೆ ಬೇಕಾದ್ರೂ ಆಣೆ ಪ್ರಮಾಣಕ್ಕೆ ಸಿದ್ಧ ಎಂಬುದಾಗಿ ಹೇಳಿದರು. ಅಂದಹಾಗೇ ಬಿಜೆಪಿ ಸೇರಿದಂತೆ ವಿಪಕ್ಷಗಳ ನಾಯಕರು ಮುಡಾದಿಂದ ಫೈಲ್ ತಂದಿದ್ದಾರೆ. ರಾತ್ರೋ ರಾತ್ರಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಫೈಲ್ ಹೆಲಿಕಾಪ್ಟರ್ ಮೂಲಕ ತಂದಿದ್ದಾರೆ. ಇವುಗಳನ್ನೇ ಸಿಎಂ ಸಿದ್ಧರಾಮಯ್ಯ ಸುದ್ದಿಗೋಷ್ಠಿಯಲ್ಲಿ ತೋರಿಸಿ ಮಾತನಾಡಿದ್ದು ಎಂಬುದಾಗಿ ಆರೋಪ ಮಾಡಿದ್ದರು. ಇದಕ್ಕೆ ಇಂದು ನಾನು…
ಶಿವಮೊಗ್ಗ : ನವೆಂಬರ್ 1 ರಂದು ನಗರದ ಡಿಎಆರ್ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಏರ್ಪಡಿಸಲಾಗಿದ್ದು, ಸಮಾರಂಭಕ್ಕೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆಗಳನ್ನು ನೀಡಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕನ್ನಡ ರಾಜ್ಯೋತ್ಸವ ಸಿದ್ದತೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಸಲಹೆ-ಸೂಚನೆಗಳನ್ನು ನೀಡಿದರು. ಅಪರ ಜಿಲ್ಲಾಧಿಕಾರಿಗಳು, ಜಿ.ಪಂ. ಉಪ ಕಾರ್ಯದರ್ಶಿ, ಪಾಲಿಕೆ ಆಯುಕ್ತರು ಹಾಗೂ ಶಿವಮೊಗ್ಗ ತಹಶೀಲ್ದಾರರು ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ, ಮುದ್ರಣಗೊಂಡ ಆಹ್ವಾನ ಪತ್ರಿಕೆಗಳನ್ನು ಸಮಾರಂಭದ ಅತಿಥಿಗಳು, ಜನಪ್ರತಿನಿಧಿಗಳು, ಸರ್ಕಾರಿ ಕಚೇರಿಗಳು, ಸಂಘಸAಸ್ಥೆಗಳು, ಕನ್ನಡ ಸಂಘಟನೆಗಳು ಹಾಗೂ ನಾಗರೀಕರಿಗೆ ಜಾರಿ ಮಾಡಲು ಸೂಚಿಸಿದರು. ನ.1 ರ ಬೆಳಿಗ್ಗೆ 8 ಗಂಟೆಯಿAದ ನಗರದ ಸೈನ್ಸ್ ಮೈದಾನದಿಂದ ಮೆರವಣಿಗೆ ಹೊರಡುವುದು. ಮೆರವಣಿಗೆಯಲ್ಲಿ ಪೊಲೀಸ್, ಗೃಹರಕ್ಷಕ ದಳ, ಸೇವಾದಳ, ಎನ್‌ಸಿಸಿ ಬ್ಯಾಂಡ್, ಡೊಳ್ಳುಕುಣಿತ, ವೀರಗಾಸೆ, ಕೋಲಾಟ, ಭಜನೆ ಸೇರಿದಂತೆ ವಿವಿಧ ತಂಡಗಳು ಭಾಗವಹಿಸಲು ಸೂಕ್ತ ವ್ಯವಸ್ಥೆ ಹಾಗೂ ಕನ್ನಡ…
ಮೈಸೂರು: ಮುಡಾ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಸಂಬಂಧ ಮುಡಾ ಕಚೇರಿಯ ಮೇಲೆ ದಾಳಿ ನಡೆಸಿರುವಂತ ಇಡಿ ಅಧಿಕಾರಿಗಳು, ದಾಖಲೆಗಳನ್ನು ಜಾಲಾಡುತ್ತಿದ್ದಾರೆ. ಈ ಬೆನ್ನಲ್ಲೇ ಮುಡಾ ಕಮೀಷನರ್ ಅವರಿಗೆ 41 ಪ್ರಶ್ನೆಗಳನ್ನು ಇಡಿ ಕೇಳಿದ್ದು, ಅದರ ಮಾಹಿತಿ ನೀಡುವಂತೆ ಸೂಚಿಸಿದೆ ಎನ್ನಲಾಗಿದೆ. ಈ ಸಂಬಂಧ ಮುಡಾ ಕಮೀಷನರ್ ಗೆ 41 ಪ್ರಶ್ನೆಗಳಿರುವಂತ ನೋಟಿಸ್ ನೀಡಿರುವಂತ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಅದರಲ್ಲಿ ಸರ್ವೆ ನಂಬರ್ 464ಕ್ಕೆ ಸಂಬಂಧಿಸಿದಂತೆ ನೋಟಿಫಿಕೇಷನ್ ನಕಲು ಪ್ರತಿ ನೀಡುವಂತೆ ಕೋರಿದೆ. ಇನ್ನೂ ಡಿನೋಟಿಫಿಕೇಷನ್ ಮಾಡುವಾಗ ಯಾವೆಲ್ಲ ನೀತಿ ನಿಯಮವನ್ನು ಪಾಲಿಸಲಾಗಿದೆ.? ದೇವರಾಜು ಅವರ ಮನವಿಯ ಮೇರೆಗೆ ಏನಾದ್ರೂ ಪ್ರಕ್ರಿಯೆ ಆಗಿದ್ಯಾ ಎಂಬ ಮಾಹಿತಿ ಒದಗಿಸುವಂತೆಯೂ ಕೋರಿದೆ. ಭೂಸ್ವಾದೀನಕ್ಕೆ ಸಂಬಂಧಿಸಿದಂತ ಮಾಹಿತಿ ನೀಡುವಂತೆ ನೋಟಿಫಿಕೇಷನ್ ದಾಖಲೆಗಳ ನಕಲು ಪ್ರತಿ ನೀಡುವಂತೆ, ನೋಟಿಫಿಕೇಷನ್ ಭೂಮಿ ಮಾರಾಟಕ್ಕೆ, ವರ್ಗಾವಣೆಗೆ ಅವಕಾಶವಿದ್ಯಾ ಎನ್ನುವಂತೆ ಮಾಹಿತಿಯನ್ನು ಕೇಳಿದೆ. ಈ ಪ್ರಶ್ನೆಗಳಲ್ಲದೇ ಬರೋಬ್ಬರಿ 41 ಪ್ರಶ್ನೆಗಳನ್ನು ಮುಡಾ ಕಮೀಷನರ್ ಮುಂದೆ ಇಡಿ ಅಧಿಕಾರಿಗಳು ಇಟ್ಟಿದ್ದಾರೆ. ಆ ಎಲ್ಲಾ…
ಬೆಂಗಳೂರು: ಅಸ್ಥಿಮಜ್ಜೆಯು ರಕ್ತಕಣಗಳನ್ನು ಉತ್ಪಾದಿಸುವಲ್ಲಿ ವಿಫಲವಾಗಿದ್ದ ಕಾರಣ ಅತಿ ವಿರಳ ಕಾಯಿಲೆಯಾದ “ಅಪ್ಲ್ಯಾಸ್ಟಿಕ್ ರಕ್ತ ಹೀನತೆಯಿಂದ ಬಳಲುತ್ತಿದ್ದ 16 ವರ್ಷದ ಬಾಲಕನಿಗೆ ಫೋರ್ಟಿಸ್ ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ ನೀಡಲಾಗಿದೆ. ಫೋರ್ಟಿಸ್ ಆಸ್ಪತ್ರೆಯ ಮೆಡಿಕಲ್ ಮತ್ತು ಹೆಮಟೋ ಆಂಕೊಲಾಜಿಯ ಹಿರಿಯ ನಿರ್ದೇಶಕಿ ಡಾ. ನೀತಿ ರೈಜಾದಾ, ಹೆಮಟೋ ಆಂಕೊಲಾಜಿ ಸಮಾಲೋಚಕ ಡಾ ನಿಶಿತ್ ಓಜ್ಹಾ, ಪೀಡಿಯಾಟ್ರಿಕ್ ಹೆಮಟೋ ಆಂಕೊಲಾಜಿಯ ಸಲಹೆಗಾರರಾದ ಡಾ ತನುಶ್ರೀ ಪಾಲ್ ಅವರ ವೈದ್ಯ ತಂಡ ಈ ಬಾಲಕನಿಗೆ ಸಮಯೋಚಿತವಾಗಿ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಬಾಲಕನ ಜೀವ ಉಳಿಸಲಾಗಿದೆ. ಈ ಕುರಿತು ಮಾತನಾಡಿದ ಡಾ. ನೀತಿ ರೈಜಾದಾ, ಆಫ್ರೀಕಾ ಮೂಲಕ 16 ವರ್ಷದ ಮೈಕೆಲ್ ಎಂಬ ಬಾಲಕನು ಕಳೆದ ಎರಡು ತಿಂಗಳಿನಿಂದ ತೀವ್ರವಾದ ಜ್ವರ, ಆಯಾಸ, ದೌರ್ಬಲ್ಯಗಳಿಂದ ಬಳಲುತ್ತಿದ್ದರು, ಅಷ್ಟೇ ಅಲ್ಲದೆ, ಆತನ ಬಲ ಕಿವಿಯಿಂದ ರಕ್ತಸ್ತ್ರಾವವಾಗಲು ಪ್ರಾರಂಭಗೊಂಡಿತ್ತು. ಇದರಿಂದ ಭಯಭೀತಗೊಂಡ ಅವರ ಕುಟುಂಬ ಆಫ್ರಿಕಾದಲ್ಲಿರುವ ಎಲ್ಲಾ ಆಸ್ಪತ್ರೆಗಳಿಗೆ ತೋರಿಸಿದರೂ ಬಾಲಕನ ಆರೋಗ್ಯ ಸಮಸ್ಯೆ ಏನೆಂದು ತಿಳಿಯಲಿಲ್ಲ. ಹೀಗಾಗಿ ಅವರು…














