Subscribe to Updates
Get the latest creative news from FooBar about art, design and business.
Author: kannadanewsnow09
ಬಳ್ಳಾರಿ : ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110/11ಕೆ.ವಿ ಹಲಕುಂದಿ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ ಉಪಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ 11ಕೆ.ವಿ ಮಾರ್ಗಗಳಲ್ಲಿ ಜೂ.09 ರಂದು ಬೆಳಿಗ್ಗೆ 7.30 ಗಂಟೆಯಿಂದ ಮಧ್ಯಾಹ್ನ 3.30 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಮೋಹನಬಾಬು ಅವರು ತಿಳಿಸಿದ್ದಾರೆ. ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳಿವು: ಎಫ್-1 ಯಶಸ್ವಿನಿ ಸ್ಪಾಂಜ್ ಕೈಗಾರಿಕೆ ಪ್ರದೇಶ ಮಾರ್ಗದ ಹಲಕುಂದಿ ಗ್ರಾಮ, ಮುಂಡರಿಗಿ ಕೈಗಾರಿಕಾ ಪ್ರದೇಶ, ಎಫ್-2 ಮಿಂಚೇರಿ ಐ.ಪಿ ಮಾರ್ಗದ ಮುಂಡರಗಿ, ಹಲಕುಂದಿ, ಮಿಂಚೇರಿ ಎಸ್.ಜೆ. ಕೋಟೆ ಕೃಷಿ ಪ್ರದೇಶಗಳು, ಎಫ್-4 ಸುಧಾಕರ ಪೈಪ್ ಮಾರ್ಗದ 2ನೇ ಹಂತ ಮುಂಡರಿಗಿ ಕೈಗಾರಿಕೆ ಪ್ರದೇಶ, ಎಫ್-5 ಅಪೇರಲ್ ಪಾರ್ಕ್ ಮಾರ್ಗದ 3ನೇ ಹಂತ ಮುಂಡರಿಗಿ ಕೈಗಾರಿಕೆ ಪ್ರದೇಶ, ಎಫ್-6 ಗುರುನಾಥ ರೈಸ್‍ಮಿಲ್ ಮಾರ್ಗದ 4ನೇ ಹಂತ ಮುಂಡರಿಗಿ ಕೈಗಾರಿಕೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/jilted-lover-hacks-woman-to-death-with-sword-in-broad-daylight-in-mohali-video-surfaces/ https://kannadanewsnow.com/kannada/prajwal-revanna-sexual-assault-case-sit-site-ends-after-4-hours/
ಮೊಹಾಲಿ: ಆಘಾತಕಾರಿ ಘಟನೆಯೊಂದರಲ್ಲಿ ಪಂಜಾಬ್ನ ಮೊಹಾಲಿಯಲ್ಲಿ ಶನಿವಾರ ಹಾಡಹಗಲೇ 26 ವರ್ಷದ ಮಹಿಳೆಯ ಮೇಲೆ ರಸ್ತೆ ಮಧ್ಯದಲ್ಲಿ ಕತ್ತಿಯಿಂದ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಸಂತ್ರಸ್ತೆಯನ್ನು ಬಲ್ಜಿಂದರ್ ಕೌರ್ ಎಂದು ಗುರುತಿಸಲಾಗಿದ್ದು, ಅವರು ಕೆಲಸಕ್ಕೆ ತೆರಳುತ್ತಿದ್ದಾಗ ಮರದ ಹಿಂದೆ ಅಡಗಿದ್ದ ಮುಸುಕುಧಾರಿ ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ. ವರದಿಗಳ ಪ್ರಕಾರ, ತನ್ನನ್ನು ಮದುವೆಯಾಗುವ ಪ್ರಸ್ತಾಪವನ್ನು ನಿರಾಕರಿಸಿದ ನಂತರ ವ್ಯಕ್ತಿ ಮಹಿಳೆಯನ್ನು ಕತ್ತು ಹಿಸುಕಿದ್ದಾನೆ. ಈ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ವೈರಲ್ ಆಗುತ್ತಿದೆ. ಬಲ್ಜಿಂದರ್ ಕೌರ್ ಇತರ ನಾಲ್ವರು ಬಾಲಕಿಯರೊಂದಿಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಮರದ ಕೆಳಗೆ ಅಡಗಿದ್ದ ಮುಸುಕುಧಾರಿ ವ್ಯಕ್ತಿ ಇದ್ದಕ್ಕಿದ್ದಂತೆ ಹೊರಬಂದು ಕತ್ತಿಯಿಂದ ಹಲ್ಲೆ ನಡೆಸಿದ್ದಾನೆ. https://twitter.com/Gagan4344/status/1799376425088417880 ವರದಿಗಳ ಪ್ರಕಾರ, ಬಲ್ಜಿಂದರ್ ಕೌರ್ ಅವರನ್ನು ಹಂತ -6 ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆಯ ಸಮಯದಲ್ಲಿ ಅವರು ನಿಧನರಾದರು. ಆಘಾತದ ಸ್ಥಿತಿಯಲ್ಲಿರುವ ಆಕೆಯ ಕುಟುಂಬವು, ಅಂತಹ ದಾಳಿಗೆ ಯಾವುದೇ ಬೆದರಿಕೆಗಳು ಅಥವಾ ಕಾರಣಗಳ ಬಗ್ಗೆ ತಮಗೆ ತಿಳಿದಿಲ್ಲ ಎಂದು ಹೇಳಿಕೊಂಡಿದೆ. ಆರೋಪಿ ಯುವಕನ…
ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ-ಪದವಿಪೂರ್ವ ( National Eligibility-cum-Entrance Test-Undergraduate – NEET UG) 2024 ರಲ್ಲಿನ ಅಕ್ರಮಗಳ ಬಗ್ಗೆ ಶಿಕ್ಷಣ ಸಚಿವಾಲಯ ಇಂದು ಪತ್ರಿಕಾಗೋಷ್ಠಿ ನಡೆಸಿತು. ಪರೀಕ್ಷೆಯನ್ನು ಸಂಕ್ಷಿಪ್ತ ಸಮಗ್ರತೆ ಮತ್ತು ನ್ಯಾಯಯುತ ಕಾರ್ಯವಿಧಾನದೊಂದಿಗೆ ನಡೆಸಲಾಯಿತು ಎಂದು ಸಮರ್ಥಿಸಿಕೊಂಡ ಎನ್ಟಿಎ ಮಹಾನಿರ್ದೇಶಕ ಸುಬೋಧ್ ಕುಮಾರ್ ಸಿಂಗ್, ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು ನಿರ್ವಹಿಸುವಲ್ಲಿ ಯಾವುದೇ ರಾಜಿ ಇಲ್ಲ ಎಂದು ಭರವಸೆ ನೀಡಿದರು. 1,500 ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೀಡಲಾದ ಗ್ರೇಸ್ ಅಂಕಗಳನ್ನು ಪರಿಶೀಲಿಸಲು ಶಿಕ್ಷಣ ಸಚಿವಾಲಯವು ನಾಲ್ಕು ಸದಸ್ಯರ ಸಮಿತಿಯನ್ನು ರಚಿಸಿದೆ. ಎನ್ಟಿಎ ಎರಡನೇ ಬಾರಿಗೆ ನೀಟ್ ಯುಜಿ 2024 ಅನ್ನು ನಡೆಸುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅಧಿಕಾರಿ, “ಅಕ್ರಮಗಳ ವಿಷಯವನ್ನು ವಿಶ್ಲೇಷಿಸಲು ಸಮಿತಿಯನ್ನು ರಚಿಸಲಾಗಿದೆ. ಸುಮಾರು 23 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಈ ಪೈಕಿ ಆರು ಕೇಂದ್ರಗಳಲ್ಲಿ ಪರೀಕ್ಷೆ ಬರೆದ 1,600 ಅಭ್ಯರ್ಥಿಗಳು ಮಾತ್ರ ವಿವಾದದಿಂದ ಬಾಧಿತರಾಗಿದ್ದಾರೆ. ಪರೀಕ್ಷೆಯನ್ನು ಮತ್ತೆ ನಡೆಸಬೇಕೇ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನು ಮತ ಪಡೆಯೋದಕ್ಕಾಗಿ ನೀಡಿಲ್ಲ. ಲೋಕಸಭಾ ಚುನಾವಣೆಯವರೆಗೆ ಅಂತ ನಿಗದಿ ಮಾಡಿಲ್ಲ. ಯಾವುದೇ ಕಾರಣಕ್ಕೂ ಶಕ್ತಿ ಯೋಜನೆಯನ್ನು ನಿಲ್ಲಿಸುವುದಿಲ್ಲ ಅಂತ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟ ಪಡಿಸಿದ್ದಾರೆ. ಇಂದು ಕಾಂಗ್ರೆಸ್ ನಾಯಕ ಲಕ್ಷ್ಮಣ್ ಅವರು ಗ್ಯಾರಂಟಿ ಯೋಜನೆ ನಿಲ್ಲಿಸಬೇಕು ಎನ್ನುತ್ತಿದ್ದಾರೆ. ಈ ಬಗ್ಗೆ ನೀವು ಏನು ಹೇಳುತ್ತೀರಿ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಮೋದಿ ಸರ್ಕಾರ ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದರು. ಅವರಿಗೆ ಸಹಾಯ ಮಾಡೋದಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿತ್ತು. ಇದರಿಂದ ಬಡ, ಮಧ್ಯಮ ವರ್ಗದವರಿಗೆ ಸಹಾಯ ಆಗಿದೆ ಎಂದರು. ಗ್ಯಾರಂಟಿ ಯೋಜನೆಗೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿಲ್ಲ ಎನ್ನುವುದಕ್ಕೂ ಸಂಬಂಧವಿಲ್ಲ. ಗ್ಯಾರಂಟಿಗಳನ್ನು ಮತ ಪಡೆಯಲು ನಾವು ನೀಡಿಲ್ಲ. ಯಾವುದೇ ಕಾರಣಕ್ಕೂ ಶಕ್ತಿ ಯೋಜನೆ ನಿಲ್ಲಲ್ಲ ಅಂತ ತಿಳಿಸಿದರು. ಸಿಎಂ ಸಿದ್ಧರಾಮಯ್ಯ ಅವರು ಶಕ್ತಿ ಯೋಜನೆಗಾಗಿ ಬಜೆಟ್ ನಲ್ಲಿ 5,500 ಕೋಟಿ ಮೀಸಲಿಟ್ಟಿದ್ದಾರೆ. ಶಕ್ತಿ ಯೋಜನೆಗೆ ಯಾವುದೇ ಸಮಸ್ಯೆ ಇಲ್ಲ. ನಮ್ಮ…
ಬೆಂಗಳೂರು: ದೇಶದಲ್ಲಿ ಮೋದಿ ಯುಗ ಮುಕ್ತಾಯವಾಗಿದೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಮತ್ತೆ ಮರುಜೀವ ಬಂದಿದೆ, ದೇಶವನ್ನು ಉಳಿಸಲು ನಾವು ಮುಂದಿನ ಚುನಾವಣೆಗಳಲ್ಲಿ ಗೆಲ್ಲಬೇಕು ಎಂದು ಆಮ್ ಆದ್ಮಿ ಪಾರ್ಟಿ ಕರ್ನಾಟಕದ ಉಸ್ತುವಾರಿ ದಿಲೀಪ್ ಪಾಂಡೆ ಹೇಳಿದರು. ನಗರದಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ದಿಲೀಪ್ ಪಾಂಡೆ, ಕಳೆದ ಚುನಾವಣೆಯಲ್ಲಿ ಆದ ಅನುಭವಗಳಿಂದ ಪಾಠ ಕಲಿತು ಮುಂದಿನ ದಿನಗಳಲ್ಲಿ ಸರಿಯಾದ ಹೆಜ್ಜೆ ಇಡಬೇಕು ಎಂದು ಪಕ್ಷದ ನಾಯಕರು, ಕಾರ್ಯಕರ್ತರಿಗೆ ಕರೆ ನೀಡಿದರು. ಆಮ್ ಆದ್ಮಿ ಪಾರ್ಟಿ ಶಕ್ತಿ ಏನೆಂದು ನಮಗಿಂತ ಅಮಿತ್ ಶಾ ಮತ್ತು ಮೋದಿಗೆ ಚೆನ್ನಾಗಿ ಅರ್ಥವಾಗಿದೆ. ಪ್ರಜ್ವಲ್ ರೇವಣ್ಣ, ನವನೀತ್ ರಾಣಾ, ಸ್ಮೃತಿ ಇರಾನಿ, ಮಾಧವಿ ಲತಾ ಇವರ ಸೋಲು ನೋಡಿದಾಗ ಭಗವಂತ ರಾಮನೇ ಇವರಿಗೆಲ್ಲ ಶಾಸ್ತಿ ಮಾಡಿದಂತಿದೆ ಎಂದು ಹೇಳಿದರು. ಆಮ್ ಆದ್ಮಿ ಪಾರ್ಟಿ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ ಮಾತನಾಡಿ, ದೇಶದಲ್ಲಿ 18 ಸಾವಿರ ರಾಜಕೀಯ ಪಕ್ಷಗಳು ಇದ್ದರೂ ಅಮಿತ್ ಶಾ ಮತ್ತು ನರೇಂದ್ರ ಮೋದಿ…
ಪ್ರತಿ ಸೋಮವಾರದಂದು ಕೇಂದ್ರಸ್ಥಾನದ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಣೆ ಕಡ್ಡಾಯ: ಅಧಿಕಾರಿ, ಸಿಬ್ಬಂದಿಗಳಿಗೆ KSRTC ಆದೇಶ
ಬೆಂಗಳೂರು: ಪ್ರತಿ ಸೋಮವಾರದಂದು ಕೇಂದ್ರಸ್ಥಾನದ ಕಚೇರಿಗಳಲ್ಲಿ ಎಲ್ಲಾ ಅಧಿಕಾರಿ, ನೌಕರರು ಕರ್ತವ್ಯ ನಿರ್ವಹಿಸುವುದು ಕಡ್ಡಾಯಗೊಳಿಸಿ ಕೆ ಎಸ್ ಆರ್ ಟಿಸಿ ಆದೇಶಿಸಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಪ್ರತಿ ಸೋಮವಾರಗಳಂದು ಪ್ರತಿಯೊಂದು ಇಲಾಖೆಯ ಅಧಿಕಾರಿ/ನೌಕರರು ತಮ್ಮ ಕೇಂದ್ರ ಸ್ಥಾನದ ಕಚೇರಿಗಳಲ್ಲಿ ಹಾಜರಿದ್ದು, ಕಛೇರಿಗಳಿಗೆ ಭೇಟಿ ನೀಡುವ ಜನರಿಗೆ ಸರ್ಕಾರಿ ಸೇವೆಗಳನ್ನು ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮೇಲಿನ ಉಲ್ಲೇಖ:1ರ ಸರ್ಕಾರಿ ಪತ್ರದಲ್ಲಿ ನಿರ್ದೇಶನಗಳನ್ನು ನೀಡಲಾಗಿರುತ್ತದೆ ಎಂದಿದ್ದಾರೆ. ಅದರಂತೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯಾಪ್ತಿಯ ಎಲ್ಲಾ ಕಛೇರಿಗಳಲ್ಲಿ ತುರ್ತು ಕಾರ್ಯಗಳನ್ನು ಹೊರತುಪಡಿಸಿ, ಪ್ರತಿ ಸೋಮವಾರಗಳಂದು ತಮ್ಮ ಕೇಂದ್ರ ಸ್ಥಾನದ ಕಚೇರಿಗಳಲ್ಲಿ ಹಾಜರಿದ್ದು, ಕಛೇರಿಗಳಿಗೆ ಭೇಟಿ ನೀಡುವ ಸಾರ್ವಜನಿಕರಿಗೆ / ನೌಕರರಿಗೆ ಸರ್ಕಾರಿ ಸೇವೆಗಳನ್ನು ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಸಂಬಂಧಪಟ್ಟವರೆಲ್ಲರೂ ಮೇಲಿನ ಸೂಚನೆಗಳನ್ನು ಮನದಟ್ಟು ಮಾಡಿಕೊಂಡು, ಅದರಂತೆ…
ನವದೆಹಲಿ: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಅವರನ್ನು ನೇಮಕ ಮಾಡಲಾಗಿದೆ. ಇಂದು ನಡೆದಂತ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ಇಂದು ನವದೆಹಲಿಯ ಸಂಸತ್ ಭವನದ ಸೆಂಟ್ರಲ್ ಹಾಲ್ ನಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆ ನಡೆಯಿತು. ಈ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹೆಸರನ್ನು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಪ್ರಸ್ತಾಪಿಸಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪ್ರಸ್ತಾಪಕ್ಕೆ ಗೌರವ್ ಗೋಗಯ್, ತಾರಿಕ್ ಅನ್ವರ್ ಹಾಗೂ ಕೆ.ಸುಧಾಕರ್ ಅನುಮೋದನೆ ನೀಡಿದರು. ಇತರೆ ಎಲ್ಲಾ ಸದಸ್ಯರು ಒಕ್ಕೊರಲ ಒಪ್ಪಿಗೆಯನ್ನು ಸೂಚಿಸಿದರು. ಹೀಗಾಗಿ ಕಾಂಗ್ರೆಸ್ ಸಂಸದೀಯ ಸಭೆಯಲ್ಲಿ ಸೋನಿಯಾ ಗಾಂಧಿ ಅವರು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ. https://kannadanewsnow.com/kannada/prajwal-maharaj-ki-jai-fans-cheer-during-the-venue-maharaj/ https://kannadanewsnow.com/kannada/valmiki-development-corporation-scam-three-ministers-involved/
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅವ್ಯವಹಾರ ಹಗರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಈ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ಸಂಪುಟದ ಮೊದಲ ವಿಕೆಟ್ ಪತನವಾಗಿತ್ತು. ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದರು. ಈ ಬೆನ್ನಲ್ಲೇ ಮೂವರು ಸಚಿವರು ಶಾಮೀಲಾಗಿದ್ದಾರೆ ಎನ್ನಲಾಗುತ್ತಿದೆ. ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಹಣ ಅವ್ಯವಹಾರ ಪ್ರಕರಣದಲ್ಲಿ ರಾಜ್ಯ ಸಚಿವ ಸಂಪುಟದ ಹಲವರ ತಲೆದಂಡದ ಮುನ್ಸೂಚನೆ ದೊರೆತಿದೆ. ಈ ಹಗರಣವು ಸರ್ಕಾರದ ಬುಡವನ್ನೇ ಅಲುಗಾಡಿಸುವಷ್ಟು ಬ್ರಹ್ಮಂಡವಾಗಿ ಬೆಳೆಯುತ್ತಿದೆ ಎಂದು ಹೇಳಲಾಗುತ್ತಿದೆ. ಬರೋಬ್ಬರಿ 187 ಕೋಟಿ ರೂ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯನ್ನು ಎಸ್ಐಟಿ ನಡೆಸುತ್ತಿದೆ. ಈಗಾಗಲೇ ನಿಗಮದ ಎಂಡಿ ಸೇರಿದಂತೆ ಹಲವರನ್ನು ಎಸ್ಐಟಿ ಬಂಧಿಸಿದೆ. ಇದೇ ಪ್ರಕರಣದಲ್ಲಿ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ಕೂಡ ನೀಡಿದ್ದಾರೆ. ಇದರ ನಡುವೆ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದಲ್ಲಿ ಇನ್ನೂ ಕೆಲವು ಸಚಿವರು ಮತ್ತು ಶಾಸಕರು ಭಾಗಿಯಾಗಿರುವ ಸಂಶಯ ವ್ಯಕ್ತವಾಗಿದೆ. ಈ ಹಗರಣವನ್ನು ರಾಜ್ಯ ಸರ್ಕಾರ…
ನವದೆಹಲಿ: ಪ್ರಧಾನಿ ಮೋದಿ ತಮ್ಮ ಮೊದಲ ಸಮ್ಮಿಶ್ರ ಸರ್ಕಾರದ ನೇತೃತ್ವ ವಹಿಸಲು ಸಜ್ಜಾಗಿರುವುದರಿಂದ ‘ಕ್ಯಾಬಿನೆಟ್ ಮಂತ್ರಿ ಸ್ಥಾನಕ್ಕಾಗಿ ಪೈಪೋಟಿ ನಡೆಯುತ್ತಿದೆ. ಅದರಲ್ಲೂ ರೈಲ್ವೆ ಖಾತೆಗಾಗಿ ತೀವ್ರ ಪೈಪೋಟಿ ನಡೆಯುತ್ತಿದೆ ಎನ್ನಲಾಗುತ್ತಿದೆ. ಎನ್ಡಿಎ ಸರ್ಕಾರದ ಪ್ರಮಾಣವಚನ ಸಮಾರಂಭ ಭಾನುವಾರ ನಿಗದಿಯಾಗಿದೆ. ದೊಡ್ಡ ಪ್ರಶ್ನೆಗಳು ಉನ್ನತ ಖಾತೆಗಳ ಸುತ್ತ ಕೇಂದ್ರೀಕೃತವಾಗಿವೆ, ಇವೆಲ್ಲವನ್ನೂ ಬಿಜೆಪಿ ಉಳಿಸಿಕೊಳ್ಳುವ ನಿರೀಕ್ಷೆಯಿದೆ. ಇವುಗಳಲ್ಲಿ ಗೃಹ, ಹಣಕಾಸು, ರಕ್ಷಣೆ, ವಿದೇಶಾಂಗ ವ್ಯವಹಾರಗಳು, ರಸ್ತೆ ಸಾರಿಗೆ, ರೈಲ್ವೆ, ಐಟಿ ಮತ್ತು ಶಿಕ್ಷಣ ಸೇರಿವೆ. ಇದಕ್ಕೆ ವಿರುದ್ಧವಾದ ಊಹಾಪೋಹಗಳ ಹೊರತಾಗಿಯೂ ಉನ್ನತ ಮೈತ್ರಿ ಪಾಲುದಾರರು ತಮ್ಮ ಕೆಲವು ದೊಡ್ಡ ಬೇಡಿಕೆಗಳನ್ನು ಪೂರೈಸದಿರಬಹುದು. ಜೆಡಿಯು ರೈಲ್ವೆಗಾಗಿ ಕೇಳಿದೆ ಮತ್ತು ಅದರ ಮೇಲೆ ನಿರಂತರವಾಗಿ ಒತ್ತಡ ಹೇರುತ್ತಿದೆ. ಟಿಡಿಪಿ ಮಾಹಿತಿ ತಂತ್ರಜ್ಞಾನವನ್ನು ಕೇಳಿದೆ, ಅದು ಸಿಗದಿರುವ ಸಾಧ್ಯತೆಯಿದೆ. ಆದಾಗ್ಯೂ, ಜೆಡಿಯು ಮತ್ತು ಟಿಡಿಪಿ ಒಂದೇ ಸಂಖ್ಯೆಯ ಸಚಿವ ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಜೆಡಿಯು 12 ಸ್ಥಾನಗಳಿಗಿಂತ ಟಿಡಿಪಿ (16) ಹೆಚ್ಚು ಲೋಕಸಭಾ…
ಹಾಸನ: ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಇಂದು ಎಸ್ಐಟಿ ಕಸ್ಟಡಿಯಲ್ಲಿರುವಂತ ಪ್ರಜ್ವಲ್ ರೇವಣ್ಣ ಅವರನ್ನು ಸ್ಥಳ ಮಹಜರಿಗೆ ಹಾಸನಕ್ಕೆ ಕರೆದೊಯ್ಯಲಾಗಿತ್ತು. ಈ ವೇಳೆಯಲ್ಲಿ ಪ್ರಜ್ವಲ್ ಮಹರಾಜ್ ಕೀ ಜೈ ಎಂಬುದಾಗಿ ಘೋಷಣೆ ಕೂಗಿದಂತ ಪ್ರಸಂಗ ನಡೆದಿದೆ. ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಈಗಾಗಲೇ ಎಸ್ಐಟಿ ಕೋಶದಲ್ಲಿದ್ದು ಹಿಂದೂ ಅಧಿಕಾರಿಗಳು ಅವರನ್ನು ಸ್ಥಳ ಮಹಾಜರಿಗಾಗಿ ಹಾಸನ ಜಿಲ್ಲೆಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಹಾಸನದ ಸಂಸದರ ನಿವಾಸದಲ್ಲಿ ಸತತ ನಾಲ್ಕು ಗಂಟೆಗಳ ಕಾಲ SIT ಅಧಿಕಾರಿಗಳು ಸ್ಥಳ ಮಹಜರು ನಡೆಸಿದರು. ಹೌದು ಪ್ರಜ್ವಲ ರೇವಣ್ಣ ಅವರನ್ನು SIT ಅಧಿಕಾರಿಗಳು ಹಾಸನ, ಹೊಳೆನರಸೀಪುರಕ್ಕೆ ಇಂಡಬಕರೆದು ತಂದು ಸತತ ನಾಲ್ಕು ಗಂಟೆಗಳ ಕಾಲ ಸ್ಥಳ ಮಹಜರು ನಡೆಸಿದರು. ಸ್ಥಳ ಮಹಜರು ಪ್ರಕ್ರಿಯೆ ಮುಗಿಸಿ 4 ವಾಹನಗಳಲ್ಲಿ ತೆರಳಿದ ಎಸ್ಐಟಿ. ಈ ವೇಳೆ ಪ್ರಜ್ವಲ್ ರೇವಣ್ಣನನ್ನು ಕರೆದೊಯ್ಯುವಾಗ ಬೆಂಬಲಿಗರು ಘೋಷಣೆ ಕೂಗಿದ ಘಟನೆ ಜರುಗಿತು. ಪ್ರಜ್ವಲ್ ಮತ್ತು ಎಚ್ ಡಿ ರೇವಣ್ಣಗೆ…