Author: kannadanewsnow09

ಶಿವಮೊಗ್ಗ : ಮೆಸ್ಕಾಂನಿಂದ ವಿದ್ಯುತ್ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಜೂನ್.10ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಎಂ.ಆರ್ ಎಸ್ ವ್ಯಾಪ್ತಿಯ ಗ್ರಾಮಾಂತರದ ಗ್ರಾಮಗಳಲ್ಲಿ ಶಿವಮೊಗ್ಗದ 110 ಕೆವಿ ವಿ.ವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಜೂನ್ 10 ರಂದು ಬೆಳಗ್ಗೆ 09.00 ರಿಂದ ಸಂಜೆ 5.00ರವರೆಗೆ ಕರೆಂಟ್ ಇರೋದಿಲ್ಲ. ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಚಿಕ್ಕಲ್ಲು, ಗುರುಪುರ, ಪರುಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್ ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂ.ಆರ್.ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್.ರಸ್ತೆ (ಗಾಯತ್ರಿ ಕಲ್ಯಾಣ ಮಂಟಪದಿಂದ ಅಮೀರ್ ಅಹ್ಮದ್ ಸರ್ಕಲ್‍ವರೆಗೆ), ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ, ಸರ್.ಎಂ.ವಿ.ರಸ್ತೆ, ಬಾಲ್‍ರಾಜ್‍ಅರಸ್ ರಸ್ತೆ, ಗಾಂದಿಪಾರ್ಕ್, ಲೂರ್ದು ನಗರ, ಕಾನ್ವೆಂಟ್ ರಸ್ತೆ, ಬಾಪೂಜಿನಗರ, ಚರ್ಚ್ ಕಾಂಪೌಂಡ್ ನಲ್ಲಿ ಕರೆಂಟ್ ಇರಲ್ಲ. ಟಿ.ಜಿ.ಎನ್.ಬಡಾವಣೆ, ಜೋಸೆಫ್‍ನಗರ, ಟ್ಯಾಂಕ್‍ಬೌಂಡ್ ರಸ್ತೆ, ಕುವೆಂಪು ರಂಗಮಂದಿರ ಮತ್ತು…

Read More

ಬೆಂಗಳೂರು: ಬಿಗ್ ಬಾಸ್ ಕನ್ನಡ ಸ್ಪರ್ಧೆಯಲ್ಲಿ ಪಾಲ್ಗೊಂಡು, ಅಲ್ಲಿಯೇ ಪರಿಚಯವಾಗಿದ್ದಂತ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಜೋಡಿ, ದಾಂಪತ್ಯಕ್ಕೆ ಕಾಲಿಟ್ಟಿತ್ತು. ಇದೀಗ ಕೆಲವೇ ವರ್ಷಗಳಲ್ಲೇ ಚಂದನ್ ಶೆಟ್ಟಿ-ನಿವೇದಿತಾ ದಾಂಪತ್ಯದಲ್ಲಿ ಬಿರುಕು ಬಿಟ್ಟಿದೆ. ಹೀಗಾಗಿ ವಿಚ್ಥೇದನಕ್ಕೆ ಇಬ್ಬರು ಸೆಲೆಬ್ರೆಟಿಗಳು ಅರ್ಜಿ ಸಲ್ಲಿಸಿರೋದಾಗಿ ತಿಳಿದು ಬಂದಿದೆ. Rap ಸಾಂಗ್ ಹಾಡುಗಾರ ಚಂದನ್ ಶೆಟ್ಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ದಾಂಪತ್ಯ ಈಗ ಡಿವೋರ್ಸ್ ಹಂತಕ್ಕೆ ತಲುಪಿದೆ. ದಾಂಪತ್ಯದಲ್ಲಿ ಬಿರುಕು ಕಾಣಿಸಿಕೊಂಡ ಪರಿಣಾಮ ಇದೀಗ ಇಬ್ಬರೂ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಚೇದನ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅಂದಹಾಗೇ ಕನ್ನಡದ ಬಿಗ್ ಬಾಸ್ ಸೀಸನ್-5ರಲ್ಲಿ ಕನ್ನಡ ರ್ಯಾಪ್ ಹಾಡುಗಳ ಮೂಲಕ ಮನೆ ಮಾತಾಗಿದ್ದಂತ ಚಂದನ್ ಶೆಟ್ಟಿ ಸ್ಪರ್ಧಿಯಾಗಿ ಭಾಗಿಯಾಗಿದ್ದರು. ಇದೇ ಬಿಗ್ ಬಾಸ್ ನಲ್ಲಿ ನಿವೇದಿತಾ ಕೂಡ ಪಾಲ್ಗೊಂಡಿದ್ದರು. ಇವರಿಬ್ಬರು ಆ ಸ್ಪರ್ಧೆಯಲ್ಲೇ ಪ್ರೀತಿಸೋದಕ್ಕೆ ಶುರು ಮಾಡಿದ್ದರು. ಬಿಗ್ ಬಾಸ್ ನಂತ್ರ ಮೈಸೂರಿನ ಯುವ ದಸರಾ ಕಾರ್ಯಕ್ರಮದ ವೇದಿಕೆಯಲ್ಲೇ ಚಂದನ್ ಶೆಟ್ಟಿ, ನಿವೇದಿತಾಗೆ ಪ್ರಪೋಸ್…

Read More

ಚಿತ್ರದುರ್ಗ: ರಾಜ್ಯದಲ್ಲಿ ಮಕ್ಕಳ ಪೋಷಕರೇ ಬೆಚ್ಚಿ ಬೀಳಿಸುವಂತ ಘಟನೆಯೊಂದು ನಡೆದಿದೆ. ಅದೇ ಬಾಲಕಿಯೊಬ್ಬಳನ್ನು ಚಾಕೋಲೇಟ್ ಕೊಡಿಸೋದಾಗಿ ಆಮಿಷ ಒಡ್ಡಿ, ಕರೆದೊಯ್ದ ವ್ಯಕ್ತಿಯೊಬ್ಬ, ಕತ್ತುಕೊಯ್ದು ಹತ್ಯೆಗೆ ಯತ್ನಿಸಿದ್ದಾನೆ. ಅದು ಎಲ್ಲಿ ಅಂತ ಮುಂದೆ ಓದಿ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಮಲ್ಲಸಿಂಗನಹಳ್ಳಿಯಲ್ಲಿ ಮನೆಯ ಮುಂದೆ ಆಟವಾಡುತ್ತಿದ್ದಂತ ಬಾಲಕಿಗೆ ಅದೇ ಗ್ರಾಮದ ಹನುಮಂತಪ್ಪ ಎಂಬಾತ ಚಾಕೋಲೇಟ್ ಆಸೆಯನ್ನು ತೋರಿಸಿದ್ದಾರೆ. ಹನುಮಂತಪ್ಪ ತೋರಿಸಿದಂತ ಚಾಕೋಲೇಟ್ ಆಸೆಗಾಗಿ, ಬಾಲಕಿ ಹೇಗೂ ತಮ್ಮೂರಿನವೇ ಅಲ್ವ ಅತಂ ಆತನೊಂದಿಗೆ ತೆರಳಿದ್ದಾಳೆ. ಆತ ಬಾಲಕಿಯನ್ನು ಊರಿನ ಸಮೀಪದ ಜಮೀನಿಗೆ ಕರೆದುಕೊಂಡು ಹೋಗಿ, ಕತ್ತು ಕೊಯ್ದಿದ್ದಾನೆ. ಹನುಮಂತಪ್ಪ ಬಾಲಕಿಯನ್ನು ಕತ್ತುಕೊಯ್ಯುತ್ತಿದ್ದಂತೆ, ಕಿರುಚಾಡಿದ್ದಾಳೆ. ಇದನ್ನು ಕೇಳಿದಂತ ಅಕ್ಕಪಕ್ಕದ ಜಮೀನಿನಲ್ಲಿ ಇದ್ದಂತ ಜನರು ಓಡಿ ಬಂದಿದ್ದಾರೆ. ಇದನ್ನು ಕಂಡು ಹನುಮಂತಪ್ಪ ಸ್ಥಳದಿಂದ ಕಾಲು ಕಿತ್ತಿದ್ದಾನೆ. ಕತ್ತುಕೊಯ್ದಿದ್ದರಿಂದ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಂತ ಬಾಲಕಿಯನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಸೂಕ್ತ ಸಮಯದಲ್ಲಿ ಆಸ್ಪತ್ರೆಗೆ ದಾಖಲಿಸಿದ ಕಾರಣ ಬಾಲಕಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಈ ಸಂಬಂಧ ಹೊಳಲ್ಕೆರೆ ಪೊಲೀಸ್…

Read More

ಕೇರಳ: ಕೇರಳ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಉಳ್ಳಾಲ್ ಲಕ್ಷ್ಮೀನಾರಾಯಣ ಭಟ್ (82) ಅವರು ಗುರುವಾರ ನಿಧನರಾದರು. ಅವರಿಗೆ 91 ವರ್ಷ ವಯಸ್ಸಾಗಿತ್ತು. 1954ರಲ್ಲಿ ಮದ್ರಾಸ್ ಕಾನೂನು ಪದವಿ ಪಡೆದ ಭಟ್, 1955ರಲ್ಲಿ ಮದ್ರಾಸ್ ಹೈಕೋರ್ಟ್ ನಲ್ಲಿ ವಕೀಲಿ ವೃತ್ತಿ ಆರಂಭಿಸಿದರು. ಅವರು 1970ರಲ್ಲಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ ನೇಮಕಗೊಂಡರು ಮತ್ತು 1980ರವರೆಗೆ ಸೇವೆ ಸಲ್ಲಿಸಿದರು. 1980 ರಲ್ಲಿ ಕೇರಳ ಹೈಕೋರ್ಟ್ನ ನ್ಯಾಯಾಧೀಶರಾಗಿ ನೇಮಕಗೊಂಡ ಅವರು ನಂತರ 1991 ರಲ್ಲಿ ಹೈಕೋರ್ಟ್ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದರು. 1995ರ ಅಕ್ಟೋಬರ್ನಲ್ಲಿ ನಿವೃತ್ತರಾಗುವ ಮೊದಲು ಭಟ್ ಅವರು ಗುವಾಹಟಿ ಹೈಕೋರ್ಟ್ ಮತ್ತು ಮಧ್ಯಪ್ರದೇಶ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದರು. ನಿವೃತ್ತರಾದ ನಂತರ, ನ್ಯಾಯಮೂರ್ತಿ ಭಟ್ ಅವರನ್ನು ನವದೆಹಲಿಯ ಕಸ್ಟಮ್ಸ್ ಅಬಕಾರಿ ಮತ್ತು ಚಿನ್ನದ ನಿಯಂತ್ರಣ ಮೇಲ್ಮನವಿ ನ್ಯಾಯಮಂಡಳಿಯ (ಸಿಇಜಿಎಟಿ) ಅಧ್ಯಕ್ಷರಾಗಿ ನೇಮಿಸಲಾಯಿತು, ಅಲ್ಲಿ ಅವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದರು. ಅವರನ್ನು ಸುಪ್ರೀಂ ಕೋರ್ಟ್ ಹಿರಿಯ ವಕೀಲರಾಗಿ…

Read More

ನವದೆಹಲಿ: ಎನ್ಡಿಎ ಸಂಸದೀಯ ಪಕ್ಷದ ನಾಯಕರಾಗಿ ಬಿಜೆಪಿಯ ನರೇಂದ್ರ ಮೋದಿ ಅವರ ಹೆಸರನ್ನು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಪ್ರಸ್ತಾಪಿಸಿದ ನಂತರ, ಮೂರನೇ ಬಾರಿಗೆ ಪ್ರಧಾನಿಯಾಗಲು ಸಜ್ಜಾಗಿರುವ ನರೇಂದ್ರ ಮೋದಿ ಅವರು ಶುಕ್ರವಾರ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ, ಆಶೀರ್ವಾದ ಪಡೆದರು. ಸತತ ಮೂರನೇ ಅವಧಿಗೆ ಕೇಂದ್ರದಲ್ಲಿ ಸರ್ಕಾರ ರಚಿಸಲು ಮೋದಿ ಹಕ್ಕು ಮಂಡಿಸುವ ಮೊದಲು ಈ ಭೇಟಿ ಮಾಡಿದರು. ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾನಿ ಪಾದಗಳಿಗೆ ನಮಸ್ಕರಿಸಿದಂತ ಮೋದಿ, ಅವರ ಆಶೀರ್ವಾದವನ್ನು ಪಡೆದರು. ನಂತರ ಅವರು ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಸರ್ಕಾರ ರಚಿಸಲು ಹಕ್ಕು ಮಂಡಿಸಿದರು. 543 ಸದಸ್ಯರ ಲೋಕಸಭೆಯಲ್ಲಿ ಬಿಜೆಪಿ 240 ಸ್ಥಾನಗಳನ್ನು ಪಡೆದರೆ, ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) 293 ಸ್ಥಾನಗಳನ್ನು ಪಡೆದುಕೊಂಡಿದೆ ಮತ್ತು ಬಹುಮತವನ್ನು ಹೊಂದಿದೆ. https://kannadanewsnow.com/kannada/congress-convenes-cwc-meet-on-8-june-to-discuss-poll-result/ https://kannadanewsnow.com/kannada/nikhil-kumaraswamy-bids-adieu-to-sandalwood/

Read More

ನವದೆಹಲಿ: ವಿಸ್ತೃತ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಶನಿವಾರ ಸಭೆ ಸೇರಲಿದ್ದು, ಲೋಕಸಭಾ ಫಲಿತಾಂಶಗಳು ಮತ್ತು ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲಿದೆ. ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಶನಿವಾರ ಬೆಳಿಗ್ಗೆ 11 ಗಂಟೆಗೆ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಸಭೆ ಪ್ರಾರಂಭವಾಗಲಿದೆ. ಕಳೆದ ಒಂದು ದಶಕದಲ್ಲಿ ಪಕ್ಷವು ತನ್ನ ಅತ್ಯುತ್ತಮ ಪ್ರದರ್ಶನವನ್ನು ನೀಡಿದೆ, ಭಾರತ ಬಣದ ಭಾಗವಾಗಿ ಸ್ಪರ್ಧಿಸಿದ 328 ಸ್ಥಾನಗಳಲ್ಲಿ 99 ಸ್ಥಾನಗಳನ್ನು ಗೆದ್ದಿದೆ. 2019 ರಲ್ಲಿ, ಅದರ ಸಂಖ್ಯೆ 52 ಆಗಿತ್ತು, ಇದು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನ (ಎಲ್ಒಪಿ) ಅಧಿಕೃತ ಸ್ಥಾನವನ್ನು ಗೆಲ್ಲಲು ಸಾಕಾಗಲಿಲ್ಲ. ಎಲ್ಒಪಿ ಕಚೇರಿಯ ಭರವಸೆಯೊಂದಿಗೆ, ಪಕ್ಷದ ಒಂದು ವಿಭಾಗವು ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆ ಸ್ಥಾನವನ್ನು ವಹಿಸಿಕೊಳ್ಳಬೇಕೆಂದು ಬಯಸುತ್ತದೆ. ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಸಿಡಬ್ಲ್ಯೂಸಿ ಸಭೆಯಲ್ಲಿ ಈ ವಿಷಯವನ್ನು ಎತ್ತಬಹುದು. ರಾಜಕೀಯ ಕಾರಣಗಳಿಗಾಗಿ ಶ್ರೀಮಾನ್ ಗಾಂಧಿಯವರು ಎರಡು ಸ್ಥಾನಗಳಲ್ಲಿ ಯಾವುದನ್ನು ಉಳಿಸಿಕೊಳ್ಳಬೇಕು ಎಂಬ…

Read More

ಬೆಂಗಳೂರು : ನೀರಾವರಿಗೆ ಸಾಂಪ್ರದಾಯಿಕ ಇಂಧನದ ಬದಲಿಗೆ ಸೌರಶಕ್ತಿ ಬಳಸುವ ಮೂಲಕ‌ ಇಂಧನ ಸ್ವಾವಲಂಬನೆ ಸಾಧಿಸುವ ಕುಸುಮ್‌ ಯೋಜನೆಯಡಿ ಸೌರ ಪಂಪ್‌ಸೆಟ್‌ ಪಡೆಯಲು ರಾಜ್ಯದ 18 ಸಾವಿರ ರೈತರು ನೋಂದಣಿ ಮಾಡಿದ್ದಾರೆ ಎಂದು ಇಂಧನ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಗೌರವ್‌ ಗುಪ್ತಾ ಹೇಳಿದ್ದಾರೆ. ಪಿಎಂ ಕುಸುಮ್ ಯೋಜನೆಯ ಸಮಪರ್ಕ ಅನುಷ್ಠಾನ ಕುರಿತು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಶುಕ್ರವಾರ ಆಯೋಜಿಸಿದ್ದ ಪ್ರಧಾನಮಂತ್ರಿ ಕಿಸಾನ್ ಊರ್ಜಾ ಸುರಕ್ಷಾ ಏವಂ ಉತ್ಥಾನ ಮಹಾಭಿಯಾನ್ (ಕುಸುಮ್‌) ಕುರಿತ ಒಂದು ದಿನದ ರಾಷ್ಟ್ರೀಯ ಕಾರ್ಯಾಗಾರವನ್ನು ಉದ್ಘಾಟಿಸಿ, ಅವರು ಮಾತನಾಡಿದರು. “ಕುಸುಮ್‌ ಬಿ ಯೋಜನೆಯಡಿ ಜಾಲ ಮುಕ್ತ ಸೌರ ಕೃಷಿ ಪಂಪ್‌ಸೆಟ್‌ ಅಳವಡಿಸಲು ಒತ್ತು ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ರಾಜ್ಯ ಸರ್ಕಾರದ ಸಬ್ಸಿಡಿ ಪಾಲನ್ನು ಶೇ.30ರಿಂದ 50ಕ್ಕೆ ಏರಿಸಿದೆ. ಇಂಧನ ಸಚಿವ ಕೆ.ಜೆ ಜಾರ್ಜ್‌ ಅವರ ಮಾರ್ಗದರ್ಶನದಲ್ಲಿ ಯೋಜನೆ ಅನುಷ್ಠಾನಗೊಳ್ಳುತ್ತಿದ್ದು, ಈವರೆಗೆ ರಾಜ್ಯದ 18 ಲಕ್ಷ ರೈತರು ಸೌರಪಂಪ್‌ ಸೆಟ್‌ ಪಡೆಯಲು ‘ಸೌರಮಿತ್ರ’ ವೆಬ್‌ಸೈಟ್‌/ ಆ್ಯಪ್‌ನಲ್ಲಿ…

Read More

ನವದೆಹಲಿ: ಇಂದು ದೆಹಲಿಯಲ್ಲಿ ನಡೆದಂತ ಎನ್ ಡಿಎ ಮೈತ್ರಿಕೂಟದ ಸಂಸದೀಯ ಪಕ್ಷದ ಸಭೆಯಲ್ಲಿ ಮೋದಿ ಅವರನ್ನು ಬಿಜೆಪಿ ಮತ್ತು ಎನ್ ಡಿಎ ನಾಯಕರಾಗಿ ಆಯ್ಕೆ ಮಾಡಲಾಗಿತ್ತು. ಇದಕ್ಕೆ ಸಂಸದೀಯ ಮಂಡಳಿ ಅನುಮೋದನೆ ಕೂಡ ನೀಡಿತ್ತು. ಈ ಬೆನ್ನಲ್ಲೇ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದಂತ ಮೋದಿಯವರು, 3ನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರದ ಗದ್ದುಗೆಗೇರಲು ಸರ್ಕಾರದ ರಚನೆ ಸಂಬಂಧ ಹಕ್ಕು ಮಂಡನೆ ಮಾಡಿದ್ದಾರೆ. ತೆಲುಗು ದೇಶಂ ಪಕ್ಷದ ಚಂದ್ರಬಾಬು ನಾಯ್ಡು ಮತ್ತು ಜೆಡಿಯುನ ನಿತೀಶ್ ಕುಮಾರ್ ಸೇರಿದಂತೆ ಅದರ ಪಾಲುದಾರರು ನರೇಂದ್ರ ಮೋದಿಯವರನ್ನು ಪ್ರಧಾನಿ ಹುದ್ದೆಗೆ ಅನುಮೋದಿಸಿದ ನಂತರ ನರೇಂದ್ರ ಮೋದಿ ಅವರನ್ನು ಶುಕ್ರವಾರ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಸಂಸದೀಯ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ. ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ನಡೆದ ಎನ್ಡಿಎ ಸಭೆಯಲ್ಲಿ ಟಿಡಿಪಿಯ ಚಂದ್ರಬಾಬು ನಾಯ್ಡು, ಜನತಾದಳ-ಜಾತ್ಯತೀತ ನಾಯಕ ಎಚ್.ಡಿ.ಕುಮಾರಸ್ವಾಮಿ, ಜೆಡಿಯು ಮುಖ್ಯಸ್ಥ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್ಸಿಪಿ-ಅಜಿತ್ ಪವಾರ್) ಮುಖ್ಯಸ್ಥ…

Read More

ವಿಜಯನಗರ: ಬೆಳಿಗ್ಗೆ ಶಾಲೆ ಆರಂಭವಾದ ಕೂಡಲೇ ನಗು ನಗುತ್ತಲೇ ಖುಷಿಯಿಂದ ಶಾಲೆಗೆ ತೆರಳಿದ್ದಂತ ಬಾಲಕಿಯೊಬ್ಬಳಿಗೆ, ವಿದ್ಯುತ್ ಕಂಬ ಮುಟ್ಟಿದ ಪರಿಣಾಮ, ಕರೆಂಟ್ ಶಾಕ್ ಹೊಡೆದು ಧಾರುಣವಾಗಿ ಸಾವನ್ನಪ್ಪಿರುವಂತ ಘಟನೆ ವಿಜಯಪುರದ ಕಾತ್ರಿಕಾಯನಹಟ್ಟಿಯಲ್ಲಿ ನಡೆದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾತ್ರಿಕಾಯನಹಟ್ಟಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ 2ನೇ ತರಗತಿ ಓದುತ್ತಿದ್ದಂತ ಬಾಲಕಿ ತೆರಳಿದ್ದಳು. ಶಾಲೆಗೆ ತೆರಳಿದ್ದಂತ ಬಾಲಕಿ ದಾರಿ ಮಧ್ಯದಲ್ಲಿ ವಿದ್ಯುತ್ ಕಂಬ ಸ್ಪರ್ಷಿಸಿದ್ದಾಳೆ. ಮಳೆ ಬಂದ ಕಾರಣ ಕಂಬದಿಂದ ವಿದ್ಯುತ್ ಶಾಕ್ ನಿಂದ ಕೆಲವೇ ಸಮಯದಲ್ಲಿ ಎಲ್ಲರ ಕಣ್ಣೆದುರೇ ಬಾಲಕಿ ಸಾವನ್ನಪ್ಪಿದ್ದಾಳೆ. ಬಾಲಕಿ ಸಾವಿನಿಂದಾಗಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸರಿಯಾದ ರೀತಿಯಲ್ಲಿ ವಿದ್ಯುತ್ ಕಂಬ ಹಾಕದೇ, ವಿದ್ಯುತ್ ಇಲಾಖೆಯವರು ಎಡವಟ್ಟು ಮಾಡಿರೋದರಿಂದಲೇ ಬಾಲಕಿ ಸಾವನ್ನಪ್ಪಿದ್ದಾಳೆ. ಈ ಕಾರಣದಿಂದ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ವಿದ್ಯುತ್ ಶಾಕ್ ನಿಂದ ಸಾವನ್ನಪ್ಪಿದಂತ ಬಾಲಕಿಗೆ ನ್ಯಾಯ ದೊರಕಿಸಿಕೊಡಬೇಕು ಅಂತ ಆಗ್ರಹಿಸಿದ್ದಾರೆ. ಸೋ ಶಾಲಾ ಮಕ್ಕಳೇ ಮಳೆಗಾಲದಲ್ಲಿ ಯಾವುದೇ ವಿದ್ಯುತ್ ಕಂಬಗಳನ್ನು…

Read More

ಬೆಂಗಳೂರು: ಪತಿಯು ಉದ್ಯೋಗವಿಲ್ಲ, ಕೆಲಸ ಇಲ್ಲ ಎನ್ನುವಂತ ನೆಪ ಹೇಳಿ, ವಿಚ್ಛೇದಿತ ಪತ್ನಿಗೆ ಜೀವನಾಂಶ ನೀಡುವ ಜವಾಬ್ದಾರಿಯಿಂದ ಹಿಂದೆ ಸರಿಯುವಂತಿಲ್ಲ ಎಂಬುದಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ಅಭಿಪ್ರಾಯ ಪಟ್ಟಿದೆ. ವ್ಯಕ್ತಿಯೊಬ್ಬರು ಬೆಳಗಾವಿಯ ಕೌಟುಂಬಿಕ ನ್ಯಾಯಾಲಯದ ಆದೇಶ ರದ್ದುಗೊಳಿಸುವಂತೆ ಹೈಕೋರ್ಟ್ ಗೆ ಅರ್ಚಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರನ್ನೊಳಗೊಂಡ ಏಕಸದಸ್ಯ ನ್ಯಾಯಪೀಠವು ವಿಚಾರಣೆ ನಡೆಸಿತು. ಹೈಕೋರ್ಟ್ ನ್ಯಾಯಪೀಠದ ಮುಂದೆ ಅರ್ಜಿದಾರರ ಪರವಾಗಿ ವಕೀಲರು, ನನ್ನ ಅರ್ಜಿದಾರರು ಕೆಲಸ ಕಳೆದುಕೊಂಡಿದ್ದಾರೆ. ಈಗ ನಿರುದ್ಯೋಗಿಯಾಗಿದ್ದಾರೆ. ಹೀಗಾಗಿ ವಿಚ್ಚೇಧಿತ ಪತ್ನಿಗೆ ಜೀವನಾಂಶ ನೀಡುವಂತ ಸ್ಥಿತಿಯಲ್ಲಿ ಇಲ್ಲ. ಆದ್ದರಿಂದ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸುವಂತೆ ಮನವಿ ಮಾಡಿದರು. ಈ ಪ್ರಕರಣದ ಅರ್ಜಿಯ ವಿಚಾರಣೆ ನಡೆಸಿದಂತ ನ್ಯಾಯಪೀಠವು, ದಂಪತಿಗಳು ಪರಸ್ಪರ ಬೇರೆಯಾಗಿದ್ದಾರೆ. ಈಗ ಪತಿ ತಾನು ಕೆಲಸ ಮಾಡುತ್ತಿಲ್ಲ ಎಂದು ಪತ್ನಿ ಹಾಗೂ ಅಪ್ರಾಪ್ತ ಮಗುವಿಗೆ ಜೀವನಾಂಶ ನೀಡುವ ಜವಾಬ್ದಾರಿಯಿಂದ ಹಿಂದೆ ಸರಿಯೋದನ್ನು ಒಪ್ಪುವಂತದ್ದು ಅಲ್ಲ. ಪ್ರಸ್ತುತ ಪರಿಸ್ಥಿತಿಯಲ್ಲಿ ಜೀವನ ನಿರ್ವಹಣೆ ಸುಲಭದ…

Read More