Author: kannadanewsnow09

ಬೆಂಗಳೂರು: ಇಂದೇ ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಸಚಿವ ಸ್ಥಾನಕ್ಕೆ ಸ್ವಇಚ್ಛೆಯಿಂದ ರಾಜೀನಾಮೆ ನೀಡುವುದಾಗಿ ಬಿ.ನಾಗೇಂದ್ರ ಪತ್ರಿಕಾಗೋಷ್ಠಿಯಲ್ಲಿ ಘೋಷಣೆ ಮಾಡಿದ್ದರು. ಅದರಂತೆ ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾದಂತ ಬಿ.ನಾಗೇಂದ್ರ ಅವರು, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅವ್ಯವಹಾರ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಈಗಾಗಲೇ ಕೆಲವನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ವಿಪಕ್ಷಗಳ ನಾಯಕರು ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಬೇಕು ಎಂಬುದಾಗಿ ಆಗ್ರಹಿಸಿದ್ದರು. ಇದೀಗ ಖಾಸಗೀ ಕಾರಿನಲ್ಲಿ ಸಿಎಂ ಸಿದ್ಧರಾಮಯ್ಯ ಅವರ ಗೃಹ ಕಚೇರಿ ಕೃಷ್ಣಾಗೆ ಆಗಮಿಸಿದಂತ ಬಿ.ನಾಗೇಂದ್ರ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮದ ಬಗ್ಗೆ ಕೆಲ ಕಾಲ ಚರ್ಚಿಸಿದರು. ಆ ಬಳಿಕ ಸಿಎಂ ಸಿದ್ಧರಾಮಯ್ಯ ಅವರಿಗೆ ಯಾವುದೇ ಒತ್ತಡವಿಲ್ಲದೇ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದಿದ್ದಾರೆ. ಅವರು ಸಿಎಂ ಸಿದ್ಧರಾಮಯ್ಯಗೆ ಸಲ್ಲಿಸಿರುವಂತ ರಾಜೀನಾಮೆ ಪತ್ರದಲ್ಲಿ ನನ್ನ ಸ್ವಇಚ್ಛೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂಬುದಾಗಿ ತಿಳಿಸಿದ್ದಾರೆ. ವರದಿ:…

Read More

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಕರ್ಮಕಾಂಡವು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಅವರಿಗೆ ಗೊತ್ತಿದ್ದೇ ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ‌.ಕುಮಾರಸ್ವಾಮಿ ಅವರು ದೂರಿದರು. ಬೆಂಗಳೂರಿನಲ್ಲಿ ಮಾಧ್ಯಮಗಳು ಸಚಿವ ನಾಗೇಂದ್ರ ಅವರ ರಾಜೀನಾಮೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು; ಈಗಾಗಲೇ ಪ್ರಕರಣದಲ್ಲಿ ಸುಮಾರು ₹80 ರಿಂದ‌ ₹85 ಕೋಟಿ‌ ರವಾನೆ ಆಗಿರುವ ಮಾಹಿತಿ ಇದೆ. ರಾಜೀನಾಮೆ ನಿರ್ಧಾರ ಮೊದಲೇ ಆಗಬೇಕಿತ್ತು. ಇಷ್ಟೆಲ್ಲಾ ಕೇವಲ ಒಬ್ಬ ಮಂತ್ರಿಯಿಂದ ಆಗಿರುವುದಲ್ಲ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಇಬ್ಬರೂ ಸೇರಿಯೇ ಮಾಡಿರುವುದು ಎಂದರು ಕುಮಾರಸ್ವಾಮಿ ಅವರು. ರಾಜೀನಾಮೆ ಸಂಬಂಧ ಸಿಎಂ, ಡಿಸಿಎಂ ಹೇಳಿಕೆಗಳನ್ನು ನಾನು ಗಮನಿಸಿದೆ. ರಾಜೀನಾಮೆ ನೀಡುವುದಕ್ಕೆ ಸಚಿವರಿಗೆ ನಾನು ಹೇಳಿಲ್ಲ, ನಾನು ಹೇಳಿಲ್ಲ ಎನ್ನುತ್ತಿದ್ದರು. ಇದು ಬರೀ ಡ್ರಾಮಾ ಅಷ್ಟೇ. ಆ ಮಂತ್ರಿಗೆ ರಾಜೀನಾಮೆ ನೀಡಿ ಅನ್ನುವ ಧೈರ್ಯ ಇವರಿಗೆ ಇರಲಿಲ್ಲ. ಅದಕ್ಕೆ ಕಾರಣ, ಹಗರಣದಲ್ಲಿ ದೊಡ್ಡ ಮಟ್ಟದ ಕೈಗಳಿವೆ. ಕಳೆದ ಮಾರ್ಚ್ ತಿಂಗಳಿನಲ್ಲಿಯೇ ಈ ಹಗರಣ ನಡೆದಿದೆ. ಅದನ್ನು ಇವರೆಲ್ಲರೂ ಸೇರಿ…

Read More

ಶಿವಮೊಗ್ಗ: ವ್ಯಕ್ತಿಯೊಬ್ಬರಿಂದ 2000 ಲಂಚ ಸ್ವೀಕರಿಸುತ್ತಿದ್ದಾಗಲೇ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಲೋಕಾಯುಕ್ತದಿಂದ ಮಾಹಿತಿ ಹಂಚಿಕೊಂಡಿದ್ದು,  ಪತ್ರಿಕಾ ಪ್ರಕಟಣೆ ಪಿರಾದುದಾರರಾದ ಅಸೀಬ್ ಚಿನ್ ಬಸೀರ್, 32 ವರ್ಷ ವಾಸ ಎಸ್.ಎನ್ ನಗರ, ಸಾಗರ ಟೌನ್‌ ರವರ ಸ್ನೇಹಿತರಾದ ತೋಹಿದ್ ಅಬ್ದುಲ್ ರವರಿಗೆ ಸೇರಿದ ಸಾಗರ ತಾಲ್ಲೂಕ್ ಕಸಬಾ ಹೋಬಳ ಬಳಸಗೋಡು ಗ್ರಾಮದ ಜಮೀನಿನ ಆರ್.ಟಿ.ಸಿ ಪ್ರತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸಾಗರ ತಾಲ್ಲೂಕ್ ಕಛೇರಿಯ ಭೂಮಿ ಕೇಂದ್ರಕ್ಕೆ ಹೋಗಿ 1999 ರಿಂದ 2001 ರ ವರೆಗೆ ಕೈ ಬರಹದ ಪಹಣಿಯನ್ನು ತೆಗೆಸಿಕೊಂಡು ಬರಲು ಪಿಕ್ಯಾದಿಗೆ ತಿಳಿಸಿದ್ದರಿಂದ ವಿದ್ಯಾದಿ ಅವರ ಸ್ನೇಹಿತರಾದ ನವೀನ.ಜೆ ರವರೊಂದಿಗೆ ದಿನಾಂಕ: 05/06/2024 ರಂದು ಸಾಗರ ತಾಲ್ಲೂಕ್ ಕಛೇರಿಯ ದಾಖಲಾತಿ ವಿಭಾಗಕ್ಕೆ ಹೋಗಿ ದಾಖಲಾತಿಗಳನ್ನು ನೀಡಲು ಅರ್ಜಿಯನ್ನು ಸಲ್ಲಿಸಿರುತ್ತಾರೆ ಎಂದು ತಿಳಿಸಿದೆ. ಅಟೆಂಡರ್ ಬಸವರಾಜ್ ಎಲ್ಲಾ ದಾಖಲಾತಿಗಳನ್ನು ಜೆರಾಕ್ಸ್ ಮಾಡಿಸಬೇಕು. ಚಲನ್ ಕಟ್ಟಬೇಕು…

Read More

ನವದೆಹಲಿ: ನಟಿ ಮತ್ತು ರಾಜಕಾರಣಿ ಕಂಗನಾ ರಣಾವತ್ ಅವರನ್ನು ಸಿಐಎಸ್ಎಫ್ನ ಮಹಿಳಾ ಕಾನ್ಸ್ಟೇಬಲ್ ಗುರುವಾರ ಮೊಹಾಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತಾ ಹೋಲ್ಡ್ ಪ್ರದೇಶದಲ್ಲಿ ಕಪಾಳಮೋಕ್ಷ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯ ನಂತರ ಮಹಿಳಾ ಕಾವಲುಗಾರನನ್ನು ತಕ್ಷಣ ಅಮಾನತುಗೊಳಿಸಲಾಗಿದೆ. ರೈತರ ಪ್ರತಿಭಟನೆಯ ಸಮಯದಲ್ಲಿ ಕಂಗನಾ ರಣಾವತ್ ಪಂಜಾಬ್ನ ಮಹಿಳೆಯರ ವಿರುದ್ಧ ತಪ್ಪು ಕಾಮೆಂಟ್ಗಳನ್ನು ನೀಡಿದ್ದಾರೆ ಎಂದು ಕಾನ್ಸ್ಟೇಬಲ್ ಹೇಳಿದ್ದಾರೆ. ನಟಿ ಮತ್ತು ರಾಜಕಾರಣಿ ಈ ವಿಷಯವನ್ನು ಪರಿಹರಿಸಿದ್ದಾರೆ ಮತ್ತು ವೀಡಿಯೊ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಅದನ್ನು ಅವರು ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಪೋಸ್ಟ್ ಮಾಡಿದ್ದಾರೆ. ಸಿಐಎಸ್ಎಫ್ ಕಾನ್ಸ್ಟೇಬಲ್ ಕಂಗನಾಗೆ ಕಪಾಳಮೋಕ್ಷ ಮಾಡಿದ್ದು ಯಾಕೆ? 2020-21ರಲ್ಲಿ ರೈತರ ಪ್ರತಿಭಟನೆ ಪ್ರಾಮುಖ್ಯತೆ ಪಡೆದಾಗ, ಕಂಗನಾ ರಣಾವತ್ ಪಂಜಾಬ್ನ ಮಹಿಳಾ ರೈತನನ್ನು ತಪ್ಪಾಗಿ ಗುರುತಿಸಿದರು. ಶಾಹೀನ್ ಬಾಗ್ ದೆಹಲಿಯಲ್ಲಿ ನಡೆಯುತ್ತಿರುವ ಸಿಎಎ ವಿರೋಧಿ ಪ್ರತಿಭಟನೆಯ ಸಮಯದಲ್ಲಿ ಗಮನ ಸೆಳೆದ ಬಿಲ್ಕಿಸ್ ಬಾನೊ ಎಂದು ಕರೆದರು. ಇಬ್ಬರು ಪ್ರತ್ಯೇಕ ವೃದ್ಧ ಮಹಿಳೆಯರ ಚಿತ್ರಗಳೊಂದಿಗೆ ಪೋಸ್ಟ್ ಅನ್ನು ರೀಟ್ವೀಟ್…

Read More

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿ ನಿಗಮದ ಅಧ್ಯಕ್ಷ ಬಸವರಾಜ ದದ್ದಲ್ ವಜಾ ಮಾಡಬೇಕು; ಮುಖ್ಯಮಂತ್ರಿ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ಮಾಜಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಫ್‍ಐಆರ್‍ನಲ್ಲಿ ಯಾಕೆ ಇನ್ನೂ ನಾಗೇಂದ್ರರ ಹೆಸರನ್ನು ಉಲ್ಲೇಖಿಸಿಲ್ಲ ಎಂದು ಪ್ರಶ್ನಿಸಿದರು. ಕ್ರಿಮಿನಲ್ ಕೇಸ್ ದಾಖಲಿಸಲು ಆಗ್ರಹಿಸಿದರು. ಈಶ್ವರಪ್ಪನವರ ಪ್ರಕರಣದಲ್ಲಿ ಈಶ್ವರಪ್ಪ ಮೇಲೆ 302 ಪ್ರಕರಣ ದಾಖಲಿಸಬೇಕೆಂದು ಅವತ್ತು ಹೇಳಿದ್ದೀರಿ. ಹಾಗಿದ್ದರೆ ನಾಗೇಂದ್ರರನ್ನು ಯಾಕೆ ಭ್ರಷ್ಟಾಚಾರ ಪ್ರಕರಣದಡಿ ಸೇರಿಸಿಲ್ಲ ಎಂದು ಆಕ್ಷೇಪಿಸಿದರು. ನಮ್ಮ ಹೋರಾಟ ಮತ್ತು ಮೇಲೆ (ಕೇಂದ್ರದಲ್ಲಿ) ಮ್ಯಾನೇಜ್ ಮಾಡಲು ಸಾಧ್ಯವೇ ಎಂಬ ಅವಕಾಶಕ್ಕೆ ಕಾಯ್ದು ರಾಜೀನಾಮೆಗೆ ವಿಳಂಬ ಮಾಡಿದಂತಿದೆ. ಮೂರನೇ ಬಾರಿಗೆ ನರೇಂದ್ರ ಮೋದಿಯವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವುದು ಖಾತ್ರಿ ಆದ ಬಳಿಕ ವಿಧಿ ಇಲ್ಲದೆ ರಾಜೀನಾಮೆ ಪಡೆದಿದ್ದಾರೆ. ಮುಖ್ಯಮಂತ್ರಿಗಳಿಗೆ ಪಾರದರ್ಶಕತೆ ಇದ್ದರೆ, ಪ್ರಾಮಾಣಿಕವಾಗಿ ನಡೆದುಕೊಂಡಿದ್ದರೆ ಅಧೀಕ್ಷಕ ಚಂದ್ರಶೇಖರ್…

Read More

ಬೆಂಗಳೂರು: ಬಿಜೆಪಿ ವಿರುದ್ಧದ ಅಪಪ್ರಚಾರದ ಜಾಹೀರಾತು ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನಾಳೆ ಬೆಂಗಳೂರಿನ ನ್ಯಾಯಾಲಯಕ್ಕೆ ಖುದ್ದು ವಿಚಾರಣೆಗೆ ಹಾಜರಾಗಲಿದ್ದಾರೆ. ಜೂನ್.1ರಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ  ಬಿಜೆಪಿ ಸರ್ಕಾರದ ವಿರುದ್ಧ ಜಾಹೀರಾತು ಪ್ರಕಟಿಸಿ ಮಾನಹಾನಿ ಮಾಡಿದ ಆರೋಪ ಪ್ರಕರಣದಲ್ಲಿ ಖುದ್ದು ಹಾಜರಾತಿಯಿಂದ ವಿನಾಯ್ತಿ ನೀಡಿತ್ತು. ಆದ್ರೇ ಜೂನ್.7ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿತ್ತು. ಈ ಹಿನ್ನಲೆಯಲ್ಲಿ ಎಐಸಿಸಿ ವರಿಷ್ಠ ರಾಹುಲ್ ಗಾಂಧಿ ಅವರು ನಾಳೆ ಬೆಳಗ್ಗೆ 10.30 ಕ್ಕೆ ಕಾವೇರಿ ಭವನ ಹಿಂಭಾಗದ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ನಂತರ 11.30 ಕ್ಕೆ ಕ್ವೀನ್ಸ್ ರಸ್ತೆಯ ಭಾರತ್ ಜೋಡೋ ಭವನದಲ್ಲಿ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ ವಿಜೇತ ಹಾಗೂ ಪರಾಜಿತ ಅಭ್ಯರ್ಥಿಗಳ ಜತೆ ಸಭೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಉಪಸ್ಥಿತರಿರುವರು. https://kannadanewsnow.com/kannada/readers-should-note-this-is-the-last-day-to-update-your-aadhaar-card-for-free/ https://kannadanewsnow.com/kannada/11-candidates-elected-unopposed-to-legislative-council-from-assembly-m-k-visalakshi/

Read More

ಬೆಂಗಳೂರು: ರಾಜ್ಯದ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಕೋಟ್ಯಂತರ ರೂಪಾಯಿ ಅವ್ಯವಹಾರ ಪ್ರಕರಣದ ಸಂಬಂಧ, ಕೇಂದ್ರೀಯ ತನಿಖಾ ದಳ( Central Bureau of Investigation-CBI) ಎಫ್ಐಆರ್ ದಾಖಲಿಸಿಕೊಂಡಿರುವುದಾಗಿ ತಿಳಿದು ಬಂದಿದೆ. ಈ ಹಗರಣ ಸಂಬಂಧ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಪೂರ್ವ ವಲಯ ಡೆಪ್ಯೂಟಿ ಜನರಲ್ ಮ್ಯಾನೇಜರ್ ಜೆ ಮಹೇಶ್ ಎಂಬುವರು ಸಿಬಿಐಗೆ ದೂರು ನೀಡಿದ್ದರು. ಈ ದೂರಿನ ಸಂಬಂಧ ಇಬ್ಬರು ಖಾಸಗಿ ವ್ಯಕ್ತಿಗಳು, ಎಂ.ಜಿ ರಸ್ತೆಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಶಾಖಾ ಮುಖ್ಯ ವ್ಯವಸ್ಥಾಪಕಿ ಸುಚಿಸ್ಮಿತಾ ರಾವಲ್, ಉಪ ವ್ಯವಸ್ಥಾಪಕಿ ಡಿ ದೀಪಾ, ಅಧಿಕಾರಿಗಳಾದಂತ ವಿ ಕೃಷ್ಣಮೂರ್ತಿ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿದೆ. ಈಗಾಗಲೇ ಎಸ್ಐಟಿ ಅಧಿಕಾರಿಗಳಿಗೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅವ್ಯವಹಾರ ಪ್ರಕರಣದ ತನಿಖೆ ನಡೆಸಲಾಗುತ್ತಿದೆ. ಈಗ ಸಿಬಿಐ ಎಫ್ಐಆರ್ ದಾಖಲಿಸಿಕೊಂಡಿದ್ದು, ಸಿಬಿಐ ಕೂಡ ತನಿಖೆಗೆ ಎಂಟ್ರಿಯಾಗೋ ಸಾಧ್ಯತೆಯಿದೆ. https://kannadanewsnow.com/kannada/readers-should-note-this-is-the-last-day-to-update-your-aadhaar-card-for-free/ https://kannadanewsnow.com/kannada/11-candidates-elected-unopposed-to-legislative-council-from-assembly-m-k-visalakshi/

Read More

ನವದೆಹಲಿ: ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳು ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದರು. ಈ ವೇಳೆ 18ನೇ ಲೋಕಸಭಾ ಚುನಾವಣೆಗೆ ಆಯ್ಕೆಯಾದಂತ ಸದಸ್ಯರ ಪಟ್ಟಿಯನ್ನು ಅವರಿಗೆ ಸಲ್ಲಿಸಿದ್ದಾರೆ. ಭಾರತದ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್, ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಮತ್ತು ಡಾ. ಸುಖ್ಬೀರ್ ಸಿಂಗ್ ಸಂಧು ಅವರೊಂದಿಗೆ ಇಂದು ಸಂಜೆ 04.30 ಕ್ಕೆ ರಾಷ್ಟ್ರಪತಿಗಳನ್ನು ಭೇಟಿ ಮಾಡಿದರು. 1951ರ ಜನ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 73ರ ಪ್ರಕಾರ, 18ನೇ ಲೋಕಸಭೆಗೆ ನಡೆದ ಸಾರ್ವತ್ರಿಕ ಚುನಾವಣೆಗಳ ನಂತರ ಸದನಕ್ಕೆ ಆಯ್ಕೆಯಾದ ಸದಸ್ಯರ ಹೆಸರುಗಳನ್ನು ಒಳಗೊಂಡ ಅಧಿಸೂಚನೆಯ ಪ್ರತಿಯನ್ನು ಅವರು ರಾಷ್ಟ್ರಪತಿಗಳಿಗೆ ಸಲ್ಲಿಸಿದರು. ಮಾನವ ಇತಿಹಾಸದ ಅತಿದೊಡ್ಡ ಪ್ರಜಾಪ್ರಭುತ್ವ ಪ್ರಕ್ರಿಯೆಯಾದ ಚುನಾವಣಾ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಕ್ಕಾಗಿ ರಾಷ್ಟ್ರಪತಿಗಳು ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರನ್ನು ಅಭಿನಂದಿಸಿದರು. ಇಡೀ ದೇಶದ ಪರವಾಗಿ, ಚುನಾವಣಾ ಆಯೋಗ, ಅದರ ಅಧಿಕಾರಿಗಳು ಮತ್ತು ಸಿಬ್ಬಂದಿ, ಪ್ರಚಾರ ಮತ್ತು ಮತದಾನದ ನಿರ್ವಹಣೆ ಮತ್ತು ಮೇಲ್ವಿಚಾರಣೆಯಲ್ಲಿ ತೊಡಗಿರುವ…

Read More

ಶಿವಮೊಗ್ಗ: ಮಾನವರಿಗೆ ಹೇಗೆ ಜೀವಿಸುವ ಹಕ್ಕಿದಿಯೋ ಹಾಗೆಯೇ ಮರ-ಗಿಡಗಳಿಗೂ ಜೀವಿಸುವ ಹಕ್ಕಿದ್ದು, ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕರಾದ ಬಿ ಹೆಚ್ ಕೃಷ್ಣಪ್ಪ ನುಡಿದರು. ಜೂ.5 ರಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಆವರಣದಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಪರಿಸರ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಾನವ ಹಕ್ಕುಗಳ ಉಲ್ಲಂಘನೆಯಾದಲ್ಲಿ ನ್ಯಾಯಾಲಯದಲ್ಲಿ ದಾವೆ ಹಾಕುತ್ತೇವೆ. ಹಾಗೆಯೇ ಪರಿಸರ ಸಂರಕ್ಷಣೆ ಕಾರ್ಯವನ್ನು ನಮ್ಮಗಳ ಕರ್ತವ್ಯಗಳಲ್ಲಿ ಒಂದೆಂದು ಮಾಡಬೇಕು. ಪರಿಸರ ರಕ್ಷಿಸುವುದು ಸಮಾಜದ ಪ್ರತಿ ನಾಗರೀಕನ ಜವಾಬ್ದಾರಿಯಾಗಿದೆ. ಪ್ರಾಕೃತಿಕ ಸಂಪನ್ಮೂಲಗಳಾದ ನೆಲ, ಜಲ, ವಾಯುವನ್ನು ಶುದ್ಧವಾಗಿ ಸೇವಿಸುವ, ಸಂಸ್ಕರಿಸುವ ಹಾಗೂ ಮುಂದಿನ ಪೀಳಿಗೆಗೆ ವರ್ಗಾಯಿಸುವ ಮಹತ್ತರ ಜವಾಬ್ದಾರಿ ನಮ್ಮಗಳ ಮೇಲಿದೆ. ಪರಿಸರ ಸಂರಕ್ಷಣೆ ಕೇವಲ ಅರಣ್ಯ ಇಲಾಖೆಯ ಜವಾಬ್ದಾರಿ ಮಾತ್ರ ಆಗಿರದೇ ಭೂಮಿಯ ಮೇಲೆ ಜೀವಿಸುವ ಪ್ರತಿಯೊಬ್ಬ ಮಾನವನ ಕರ್ತವ್ಯ ಕೂಡ ಆಗಿದೆ. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಜಿಲ್ಲಾ ನಿರೂಪಣಾಧಿಕಾರಿ ಡಾ.ಸಂತೋಷ್ ಕುಮಾರ್ ಮಾತನಾಡಿ ಇತ್ತೀಚಿನ…

Read More

ಬೆಂಗಳೂರು: 2024ನೇ ಜೂನ್ ತಿಂಗಳಲ್ಲಿ ನಡೆಯಲಿರುವಂತ ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಅಂತಿಮ ಪ್ರವೇಶ ಪತ್ರವನ್ನು ವಿತರಣೆ ಮಾಡೋದಕ್ಕೆ ಪ್ರಾರಂಭಿಸಲಾಗಿದೆ ಅಂತ ಶಾಲಾ ಶಿಕ್ಷಣ ಇಲಾಖೆ ತಿಳಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಪರೀಕ್ಷೆಗಳ ನಿರ್ದೇಶಕರಾದಂತ ಹೆಚ್.ಎನ್ ಗೋಪಾಲಕೃಷ್ಣ ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ2024ನೇ ಜೂನ್ ಮಾಹೆಯಲ್ಲಿ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆ-2ಕ್ಕೆ ಹಾಜರಾಗುತ್ತಿರುವ ಗೈರು ಹಾಜರಾದ | ಪೂರ್ಣಗೊಳಿಸಲಾಗಿಲ್ಲದ [Not Completed] / ಹಿಂದಿನ ಸಾಲಿನಲ್ಲಿ ಅನುತ್ತೀರ್ಣರಾದ ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳುವ ಅಭ್ಯರ್ಥಿಗಳ ಅಂತಿಮ ಪ್ರವೇಶ ಪತ್ರಗಳನ್ನು ದಿನಾಂಕ:06.06.2024 ರಂದು ಮಂಡಳಿಯ ಜಾಲತಾಣದ ಶಾಲಾ ಲಾಗಿನ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಶಾಲಾ ಮುಖ್ಯೋಪಾಧ್ಯಾಯರು ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು ಮಂಡಳಿಯ ಜಾಲತಾಣದ ಶಾಲಾ ಲಾಗಿನ್ ಮೂಲಕ ಡೌನ್‌ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ವಿತರಿಸುವುದು ಅಂತ ತಿಳಿಸಿದ್ದಾರೆ. ಒಂದು ವೇಳೆ ಏನಾದರೂ ವ್ಯತ್ಯಯಗಳು ಕಂಡು ಬಂದಲ್ಲಿ ಕೂಡಲೇ ಮಂಡಳಿಯ ಸಂಬಂಧಿಸಿದ ಪರಿಶೀಲನಾ ಶಾಖೆಯ ಶಾಖಾಧಿಕಾರಿಗಳ ಗಮನಕ್ಕೆ ತಂದು ಸರಿಪಡಿಸಿಕೊಂಡು ವಿದ್ಯಾರ್ಥಿಗಳಿಗೆ ಸಕಾಲದಲ್ಲಿ…

Read More