Author: kannadanewsnow09

ಬೆಂಗಳೂರು: ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರು ವಿಭಜಿಸುವಂತ ವಿಧೇಯಕಕ್ಕೆ ಅನುಮೋದನೆ ನೀಡಲಾಗಿದೆ. ಈ ಮೂಲಕ ಗ್ರೇಟರ್ ಬೆಂಗಳೂರು ರಚನೆಗೆ ಸಿಎಂ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟ ಸಭೆ ಗ್ರೀನ್ ಸಿಗ್ನಲ್ ನೀಡಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಬೆಂಗಳೂರನ್ನು ವಿಭಜಿಸುವಂತ ವಿಧೇಯಕಕ್ಕೆ ಅನುಮೋದನೆ ನೀಡಲಾಯಿತು. ಗ್ರೇಟರ್ ಬೆಂಗಳೂರು ಅಥಾರಿಟಿ ಸಲಹೆಗೆ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಸಿಎಂ ಸಿದ್ಧರಾಮಯ್ಯ ಅವರು ಗ್ರೇಟರ್ ಬೆಂಗಳೂರು ಅಥಾರಿಟಿಯ ಅಧ್ಯಕ್ಷರಾಗಲಿದ್ದಾರೆ. ಇಂತಹ ವಿಧೇಯಕವನ್ನು ರಾಜ್ಯಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ನಂತ್ರ, ವಿಧಾನಸಭೆಯಲ್ಲಿ ಕೂಡ ರಾಜ್ಯ ಕಾಂಗ್ರೆಸ್ ಸರ್ಕಾರ ಮಂಡಿಸಲಿದೆ. ವಿಧಾನಮಂಡಲದ ಉಭಯ ಸದನಗಳಲ್ಲಿ ಬೆಂಗಳೂರು ವಿಭಜಿಸುವಂತ ವಿಧೇಯಕಕ್ಕೆ ಅಂಗೀಕಾರ ದೊರೆಯುತ್ತಾ ಅಂತ ಕಾದು ನೋಡಬೇಕಿದೆ. https://kannadanewsnow.com/kannada/dress-code-for-entry-into-malls-other-places-soon-dk-shivakumar/ https://kannadanewsnow.com/kannada/state-govt-orders-implementation-of-7th-pay-commission-recommendations-for-government-employees/

Read More

ಬೆಂಗಳೂರು: “ಮಾಲ್ ಸೇರಿದಂತೆ ಯಾವುದೇ ಸ್ಥಳಗಳಿಗೆ ಭೇಟಿ ನೀಡುವವರ ನಿರ್ದಿಷ್ಟ ವಸ್ತ್ರಗಳಿಗೆ ನಿರ್ಬಂಧ ಹೇರದಂತೆ ಮಾರ್ಗಸೂಚಿಯನ್ನು ಹೊರಡಿಸಲಾಗುವುದು. ಪಂಚೆ ನಮ್ಮ ಸಂಸ್ಕೃತಿ. ಇದಕ್ಕೆ ಪೂರಕವಾಗಿ ನಿಯಮ ತರಲಾಗುವುದು. ಇಡೀ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಈ ರೀತಿಯ ಘಟನೆಗಳು ನಡೆಯದಂತೆ ನಿಯಮಾವಳಿ ರೂಪಿಸಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ವಿಧಾನಸಭೆಯಲ್ಲಿ ಸೋಮವಾರ ಮಾತನಾಡಿದ ಅವರು, “ಮಾಲ್ ಗೆ ಪಂಚೆ ಧರಿಸಿ ಬಂದ ರೈತನನ್ನು ತಡೆದ ವಿಚಾರವಾಗಿ ಶುಕ್ರವಾರ (ಜುಲೈ 19) ವಿಧಾನಸಭೆಯಲ್ಲಿ ಪ್ರಸ್ತಾವನೆ ಮೇಲೆ ಚರ್ಚೆ ನಡೆಸಲಾಗಿತ್ತು. ಈ ವಿಚಾರವಾಗಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಹೇಳಿಕೆ ನೀಡಿದ್ದರು. ನಾನು ಶುಕ್ರವಾರ ಗೈರಾಗಿದ್ದ ಕಾರಣ ಈಗ ನನ್ನ ಹೇಳಿಕೆ ನೀಡುತ್ತಿದ್ದೇನೆ” ಎಂದು ಹೇಳಿದರು. “ಜಿ.ಟಿ ಮಾಲ್ ಗೆ ಪಂಚೆ ಉಟ್ಟುಕೊಂಡು ಬಂದ ರೈತನಿಗೆ ಪ್ರವೇಶ ನೀಡದೆ ಇದ್ದ ಕಾರಣ ಮಾಲ್ ಮಾಲೀಕರಿಗೆ ಕಾರಣ ಕೇಳಿ ನೋಟಿಸ್ ನೀಡಲಾಯಿತು ಹಾಗೂ ತೆರಿಗೆ ಬಾಕಿ ಇದ್ದ ಕಾರಣ ಬೀಗ ಹಾಕಲಾಯಿತು. ಅವರು ತಪ್ಪೊಪ್ಪಿಗೆ ಪತ್ರ…

Read More

ಶಿವಮೊಗ್ಗ: ಸಾಗರ ತಾಲ್ಲೂಕು ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಪುತ್ರಿಯನ್ನು ನೋಡೋದಕ್ಕೆ ಬೆಲ್ಜಿಯಂಗೆ ತೆರಳಿದ್ದಾರೆ. ಆದ್ರೇ ಶಾಸಕರ ತನು, ಮನ ಮಾತ್ರ ತಾಲ್ಲೂಕಿನ ಜನತೆಗಾಗಿ ಮಿಡಿಯುತ್ತಿದೆ. ಈ ಕಾರಣಕ್ಕಾಗಿಯೇ ಸಾಗರ ತಾಲ್ಲೂಕಿನಲ್ಲಿ ಮಳೆಹಾನಿಯಿಂದ ಜನತೆಗೆ ಉಂಟಾಗುತ್ತಿರುವಂತ ತೊಂದರೆ ನಿವಾರಿಸುವಂತೆ ವಿದೇಶದಿಂದಲೇ ಅಧಿಕಾರಿಗಳಿಗೆ ಖಡಕ್ ಸೂಚನೆ ಕೊಡ್ಡಿದ್ದಾರೆ. ಇಂದು ಸಾಗರ ತಾಲ್ಲೂಕು ಆಡಳಿತದ ಎಲ್ಲಾ ಅಧಿಕಾರಿಗಳೊಂದಿಗೆ ಬೆಲ್ಜಿಯಂನಿಂದ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ವೀಡಿಯೋ ಕಾನ್ಫೆರೆನ್ಸ್ ಮೂಲಕ ಸಭೆಯನ್ನು ನಡೆಸಿದರು. ಸಾಗರ ತಾಲ್ಲೂಕಿನಲ್ಲಿ ಭಾರೀ ಮಳೆಯ ಕಾರಣ ಮನೆಗಳು ಬಿದ್ದಿದ್ದರೇ, ಕೆಲವೆಡೆ ರಸ್ತೆ ಕಿತ್ತೋಗಿದೆ. ಮತ್ತೆ ಕೆಲವೆಡೆ ನೆರೆ ಆವರಿಸಿದೆ. ಈ ಸಂಬಂಧ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದರು. ಸಾಗರ-ಹೊಸನಗರ ಕ್ಷೇತ್ರದಲ್ಲಿ ಮಳೆಹಾನಿ ಕುರಿತು ಬೆಲ್ಜಿಯಂ ದೇಶದಿಂದ ಸಾಗರ ವಿಧಾನಸಭಾ ಕ್ಷೇತ್ರ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಜೂಮ್ ಮೀಟಿಂಗ್ ನಲ್ಲಿ ಮಾತನಾಡಿ,  ಕ್ಷೇತ್ರದ ಮಳೆಹಾನಿ ಪರಿಹಾರ ನೀಡಲು ವಿದೇಶದಲ್ಲಿದ್ದರೂ 24*7 ಜನಸೇವೆಗೆ ಮುಡಿಪಾಗಿಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇದೀಗ ಶಾಸಕ ಬೇಳೂರು ಗೋಪಾಲಕೃಷ್ಣ ಅವರ…

Read More

ಬೆಂಗಳೂರು: ನೈರುತ್ಯ ರೈಲ್ವೆ ಇಲಾಖೆಯಿಂದ ವಿವಿಧ ಕಾರಣಗಳಿಂದಾಗಿ ಕೆಲ ರೈಲುಗಳ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಿದ್ದರೇ, ಇನ್ನೂ ಕೆಲವು ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ನಿಟ್ಟೂರು ಮತ್ತು ಸಂಪಿಗೆ ರೋಡ್ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್-64ರ ರಸ್ತೆ ಕೆಳಸೇತುವೆಗೆ ತಾತ್ಕಾಲಿಕ ಗರ್ಡರ್ ಗಳನ್ನು ಅಳವಡಿಸುವ ಮತ್ತು ತೆಗೆದುಹಾಕಲು ಅಗತ್ಯ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಸಲುವಾಗಿ, ಈ ಕೆಳಗಿನ ರೈಲುಗಳನ್ನು ರದ್ದು, ಭಾಗಶಃ ರದ್ದು, ಮಾರ್ಗ ಬದಲಾವಣೆ, ನಿಯಂತ್ರಣ ಮತ್ತು ಸಮಯ ಮರುನಿಗದಿ ಮಾಡಲಾಗುತ್ತಿದೆ. ಅವುಗಳ ಮಾಹಿತಿ ಈ ಕೆಳಗಿನಂತಿವೆ: 8 ರೈಲುಗಳ ಸಂಚಾರ ರದ್ದು: ಈ ಕೆಳಗಿನ ರೈಲುಗಳ ಸಂಚಾರ ಆಗಸ್ಟ್ 8 ಮತ್ತು 15 ರಂದು ತಾತ್ಕಾಲಿಕವಾಗಿ 2 ದಿನ ರದ್ದು ಮಾಡಲಾಗುತ್ತಿದೆ: 1. ರೈಲು ಸಂಖ್ಯೆ 07346 ತುಮಕೂರು-ಚಾಮರಾಜನಗರ ಡೈಲಿ ಪ್ಯಾಸೆಂಜರ್ ಸ್ಪೆಷಲ್. 2. ರೈಲು ಸಂಖ್ಯೆ 07328 ಚಾಮರಾಜನಗರ-ಮೈಸೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್. 3. ರೈಲು ಸಂಖ್ಯೆ 16239 ಚಿಕ್ಕಮಗಳೂರು-ಯಶವಂತಪುರ ಡೈಲಿ ಎಕ್ಸ್‌ಪ್ರೆಸ್. 4. ರೈಲು ಸಂಖ್ಯೆ 16240…

Read More

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ಅವ್ಯವಹಾರ ಪ್ರಕರಣದಲ್ಲಿ ಸಿಎಂ ಸಿದ್ಧರಾಮಯ್ಯ, ಮಾಜಿ ಸಚಿವ ಬಿ.ನಾಗೇಂದ್ರ ಭಾಗಿಯಾಗಿದ್ದಾರೆ ಅಂತ ಹೇಳು ಎಂಬುದಾಗಿ ಇಡಿ ಅಧಿಕಾರಿಗಳು ಒತ್ತಡ ಹಾಕಿದ್ದಾರೆ ಅಂತ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಹಿಂದಿನ ನಿರ್ದೇಶಕ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಜಾರಿ ನಿರ್ದೇಶನಾಲಯದ ಇಬ್ಬರು ಅಧಿಕಾರಿಗಳ ವಿರುದ್ಧ ಪೊಲೀಸರಿಂದ FIR ದಾಖಲಿಸಿಕೊಳ್ಳಲಾಗಿದೆ. ಈ ಕುರಿತಂತೆ ಇಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಹಿಂದಿನ ನಿರ್ದೇಶಕ ಕಲ್ಲೇಶ್ ಅವರು ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಅದರಲ್ಲಿ ವಾಲ್ಮೀಕಿ ನಿಗಮದ ಹಗರಣ ಸಂಬಂಧ ಇಡಿ ಅಧಿಕಾರಿಗಳು ಸಿಎಂ ಸಿದ್ಧರಾಮಯ್ಯ, ಮಾಜಿ ಸಚಿವ ಬಿ.ನಾಗೇಂದ್ರ ಹೆಸರೇಳುವಂತೆ ಒತ್ತಡ ಹಾಕುತ್ತಿದ್ದಾರೆ. ಮಾನಸಿಕ ಹಿಂಸೆ ನೀಡಿ, ಕಿರುಕುಳ ನೀಡುತ್ತಿದ್ದಾರೆ ಅಂತ ಹೇಳಿದ್ದಾರೆ. ಬೆಂಗಳೂರಿನ ಶಾಂತಿನಗರದಲ್ಲಿರುವಂತ ಇಡಿ ಕಚೇರಿಯಲ್ಲಿನ ಸಹಾಯ ನಿರ್ದೇಶಕರಾದಂತ ಮುರಳಿ ಕಣ್ಣನ್ ಹಾಗೂ ಐಆರ್ ಎಸ್ ಅಧಿಕಾರಿಯಾದಂತ ಮಿತ್ತಲ್ ಎಂಬುವರು ನಿನಗೆ ಇಡಿ ಸಹಾಯ ಮಾಡಬೇಕೆಂದರೇ ನೀನು…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ರಾಜ್ಯ ಸರ್ಕಾರಿ ನೌಕರರ ವೇತನವನ್ನು ಜಾರಿಗೊಳಿಸಿ ಶಿಫಾರಸ್ಸು ಅನುಷ್ಠಾನಕ್ಕೆ ಅಧಿಕೃತ ಆದೇಶ ಮಾಡಿದೆ. ಹಾಗಾದ್ರೇ 7ನೇ ವೇತನ ಆಯೋಗದ ಜಾರಿಯಂತೆ ಯಾರಿಗೆ ಎಷ್ಟು ಸಂಬಂಳ ಸಿಗಲಿದೆ ಅನ್ನೋ ಮಾಹಿತಿ ಮುಂದೆ ಓದಿ. ಈ ಸಂಬಂಧ ಆರ್ಥಿಕ ಇಲಾಖೆಯಿಂದ ಅಧಿಕೃತ ಆದೇಶವನ್ನು ಇಂದು ಹೊರಡಿಸಲಾಗಿದೆ. ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹೊರಡಿಸಿರುವಂತ ಆದೇಶದಲ್ಲಿ ದಿನಾಂಕ 01-07-2022ರಿಂದಲೇ ವೇತನ ಜಾರಿಗೊಳಿಸಿ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸುವಂತೆ ಆದೇಶ ಹೊರಡಿಸಲಾಗಿದೆ ಎಂದಿದ್ದಾರೆ. ರಾಜ್ಯ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹೊರಡಿಸಿರುವಂತ ಆದೇಶದಲ್ಲಿ, ದಿನಾಂಕ: 19.11.2022ರ ಆದೇಶದಲ್ಲಿ ರಚಿಸಲಾಗಿದ್ದ 7ನೇ ರಾಜ್ಯ ವೇತನ ಆಯೋಗವು ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳು ಹಾಗೂ ಪಿಂಚಣಿ ಪರಿಷ್ಕರಣೆ ಕುರಿತಂತೆ ತನ್ನ ವರದಿಯ ಸಂಪುಟ-1 ನ್ನು ಸಲ್ಲಿಸಿರುತ್ತದೆ. 7ನೇ ರಾಜ್ಯ ವೇತನ ಆಯೋಗದ ಸಂಪುಟ- ರ ವರದಿಯಲ್ಲಿನ ಶಿಫಾರಸ್ಸುಗಳನ್ನು ಸರ್ಕಾರವು ಪರಿಗಣಿಸಿರುತ್ತದೆ. ಅದರಂತೆ, ಈ ಕೆಳಕಂಡ ಆದೇಶಗಳನ್ನು ಹೊರಡಿಸಿದೆ ಅಂತ ತಿಳಿಸಿದ್ದಾರೆ. ಮುಖ್ಯ…

Read More

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ಇಂದು ರಾಜ್ಯ ಸರ್ಕಾರವು 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸುವಂತೆ ಅಧಿಕೃತವಾಗಿ ಆದೇಶ ಹೊರಡಿಸಿದೆ. ಸಿಎಂ ಸಿದ್ಧರಾಮಯ್ಯ ಅವರು ರಾಜ್ಯ ಸಚಿವ ಸಂಪುಟದಲ್ಲಿ ಒಪ್ಪಿಗೆ ಸೂಚಿಸಿದ ನಂತ್ರ, ಸದನದಲ್ಲೂ 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ರಾಜ್ಯ ಸರ್ಕಾರಿ ನೌಕರರಿಗೆ ಜಾರಿಗೊಳಿಸಲಾಗುವುದು ಅಂತ ಸ್ಪಷ್ಟ ಪಡಿಸಿದ್ದ ಬೆನ್ನಲ್ಲೇ, ಈ ಆದೇಶ ಮಾಡಲಾಗಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯಿಂದ ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ದಿನಾಂಕ 01-07-2022ರಿಂದಲೇ ವೇತನ ಜಾರಿಗೊಳಿಸಿ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸುವಂತೆ ಆದೇಶ ಹೊರಡಿಸಲಾಗಿದೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿಯನ್ನು ನೀಡಲಾಗಿದೆ. ರಾಜ್ಯ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹೊರಡಿಸಿರುವಂತ ಆದೇಶದಲ್ಲಿ, ದಿನಾಂಕ: 19.11.2022ರ ಆದೇಶದಲ್ಲಿ ರಚಿಸಲಾಗಿದ್ದ 7ನೇ ರಾಜ್ಯ ವೇತನ ಆಯೋಗವು ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳು ಹಾಗೂ ಪಿಂಚಣಿ ಪರಿಷ್ಕರಣೆ ಕುರಿತಂತೆ ತನ್ನ ವರದಿಯ ಸಂಪುಟ-1 ನ್ನು ಸಲ್ಲಿಸಿರುತ್ತದೆ. 7ನೇ ರಾಜ್ಯ…

Read More

ಬೆಂಗಳೂರು: ನಾಗರಿಕರಾಗಿ ನಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡುವುದು ಎಷ್ಟು ಮುಖ್ಯವೋ ನಿರ್ಲಕ್ಷ ಮಾಡದೆ ನಮ್ಮ ಕರ್ತವ್ಯಗಳನ್ನು ನಿರ್ವಹಿಸುವುದು ಅಷ್ಟೇ ಮುಖ್ಯ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್‌ ನೌಕರರ ಸಂಘದ ಪದಾಧಿಕಾರಿಗಳಿಗೆ ತಿಳಿಸಿದರು. ನೌಕರರ ಸಂಘ ಸಲ್ಲಿಸಿದ 19 ಬೇಡಿಕೆಗಳ ಸಂಬಂಧದಲ್ಲಿ ಸಚಿವರು ಸಂಘದ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿದರು. ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೀರುಗಂಟಿಗಳು ನಿರ್ವಹಿಸುವ ಕೆಲಸಗಳನ್ನು ವಿವಿದೋದ್ದೇಶ ಎಂದು ನಿಗದಿಪಡಿಸಿರುವುದನ್ನು ಕೈಬಿಟ್ಟು ನಿರ್ದಿಷ್ಟ ಕೆಲಸ ನಿಗದಿ ಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು. ನೌಕರರ ಸಂಘದ ಮತ್ತೊಂದು ಬೇಡಿಕೆಯಾದ ಜನಸಂಖ್ಯೆ ಆಧರಿಸಿ ಗ್ರಾಮ ಪಂಚಾಯತಿಗಳನ್ನು ಮೇಲ್ದರ್ಜೆಗೆ ಏರಿಸಲು ಸಚಿವರು ಸಮ್ಮತಿಸಿದರು. ಪಂಚಾಯತಿ ನೌಕರರಿಗೆ ಕನಿಷ್ಠ ವೇತನವನ್ನು ನಿಗದಿ ಪಡಿಸುವ ನೌಕರರ ಬೇಡಿಕೆ ಕಾರ್ಮಿಕ ಇಲಾಖೆ ಹಾಗೂ ಆರ್ಥಿಕ ಇಲಾಖೆಯ ಒಪ್ಪಿಗೆಗಾಗಿ ಕಳುಹಿಸಲಾಗಿದ್ದು ಸಂಬಂಧಿಸಿದವರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಪ್ರಿಯಾಂಕ್‌ ಖರ್ಗೆ ಅವರು ಹೇಳಿದರು. ಗ್ರಾಮ…

Read More

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ಧರಾಮಯ್ಯ ಅವರು ದಿನಾಂಕ 01-07-2022ರಿಂದಲೇ ಜಾರಿಗೆ ಬರುವಂತೆ 7ನೇ ವೇತನ ಆಯೋಗದ ವರದಿಯಂತೆ ವೇತನ ಜಾರಿಗೊಳಿಸುವುದಾಗಿ ಘೋಷಣೆ ಮಾಡಿದ್ದರು. ಈ ಬೆನ್ನಲ್ಲೇ ರಾಜ್ಯ ಸರ್ಕಾರದಿಂದ 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸುವಂತೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಇಂದು ಈ ಸಂಬಂಧ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ ಅತೀಕ್ ಅವರು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ: 19.11.2022ರ ಆದೇಶದಲ್ಲಿ ರಚಿಸಲಾಗಿದ್ದ 7ನೇ ರಾಜ್ಯ ವೇತನ ಆಯೋಗವು ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳು ಹಾಗೂ ಪಿಂಚಣಿ ಪರಿಷ್ಕರಣೆ ಕುರಿತಂತೆ ತನ್ನ ವರದಿಯ ಸಂಪುಟ-1 ನ್ನು ಸಲ್ಲಿಸಿರುತ್ತದೆ. 7ನೇ ರಾಜ್ಯ ವೇತನ ಆಯೋಗದ ಸಂಪುಟ- ರ ವರದಿಯಲ್ಲಿನ ಶಿಫಾರಸ್ಸುಗಳನ್ನು ಸರ್ಕಾರವು ಪರಿಗಣಿಸಿರುತ್ತದೆ. ಅದರಂತೆ, ಈ ಕೆಳಕಂಡ ಆದೇಶಗಳನ್ನು ಹೊರಡಿಸಿದೆ. ಮುಖ್ಯ ವೇತನ ಶ್ರೇಣಿ ಮತ್ತು ಸ್ಥಾಯಿ ವೇತನ ಶ್ರೇಣಿಗಳ ಪರಿಷ್ಕರಣೆ ಬಗ್ಗೆ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳನ್ನು ರಾಜ್ಯ…

Read More

ಶಿವಮೊಗ್ಗ : ಪ್ರಕಾಶ್.ಜಿ.ಎನ್. ಉಪ ನಿರ್ದೇಶಕರು, ತೋಟಗಾರಿಕೆ ಇಲಾಖೆ, ಶಿವಮೊಗ್ಗ ರವರು ತಮ್ಮ ಬಲ್ಲ ಮೂಲಗಳ ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿ ಗಳಿಸಿರುತ್ತಾರೆಂಬ ದೂರಿನ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಕಲಂ 13(1)(ಬಿ) ಸಹಿತ 13(2) ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ-1988 (ತಿದ್ದುಪಡಿ ಕಾಯ್ದೆ-2018) ರೀತ್ಯಾ ಪ್ರಕರಣ ದಾಖಲಾಗಿರುತ್ತದೆ. ಪ್ರಕಾಶ್.ಜಿ.ಎನ್. ಉಪ ನಿರ್ದೇಶಕರು, ತೋಟಗಾರಿಕೆ ಇಲಾಖೆ, ಶಿವಮೊಗ್ಗ ರವರು ಅಕ್ರಮ ಆಸ್ತಿಗಳಿಸಿರುವ ಪ್ರಕರಣದ ತನಿಖೆ ಕೈಗೊಂಡು ಪ್ರಕಾಶ್ ಜಿ.ಎನ್ ರವರಿಗೆ ಸಂಬಂಧಿಸಿದ 3 ಸ್ಥಳಗಳಲ್ಲಿ ದಿ:19/07/2024 ರಂದು ಶಿವಮೊಗ್ಗ ಲೋಕಾಯುಕ್ತ ಅಧಿಕಾರಿಗಳು ಸ್ಥಳ ಶೋಧನೆ ಮಾಡಿದ್ದು, ಪ್ರಕಾಶ್ ಜಿ.ಎನ್ ರವರಿಗೆ ಸಂಬಂದಿಸಿದಂತೆ 1 ಖಾಲಿ ನಿವೇಶನ, 2 ಮನೆಗಳು, 2.8 ಎಕರೆ ಕೃಷಿ ಜಮೀನು ಅಂದಾಜು ಸ್ಥಿರಾಸ್ಥಿ ಮೌಲ್ಯ ರೂ 1,57,00,000/- ಕಂಡು ಬಂದಿರುತ್ತದೆ. ಹಾಗೂ ಅವರ ವಾಸದ ಮನೆಯಲ್ಲಿ ರೂ 38,32,630/- ಮೌಲ್ಯದ ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳು, ಅಂದಾಜು 5,20,000/-ರೂ  ಮೌಲ್ಯದ  ವಾಹನಗಳು, ಅಂದಾಜು 11,30,000/-ರೂ ಮೌಲ್ಯದ ಗೃಹಪಯೋಗಿ…

Read More