Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಹೊಳಲೂರು ಶಾಖಾ ವ್ಯಾಪ್ತಿಯಲ್ಲಿ 66/11 ಕೆವಿ ವಿ.ವಿ ಕೇಂದ್ರದಲ್ಲಿ ಎಫ್-7,8 ಮತ್ತು 10 ಮಾರ್ಗಗಳಲ್ಲಿ ಲಿಂಕ್‍ಲೈನ್ ಮಾರ್ಗ ರಚಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂನ್ 07 ಮತ್ತು 08 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಹಾಡೋನಹಳ್ಳಿ, ಹಳೆ/ಹೊಸ ಮಡಿಕೆಚೀಲೂರು ಮತ್ತು ಬಿ.ಕೆ.ತಾವರೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಬಿಐಇಆರ್ಟಿ ಹುದ್ದೆಗೆ ವಿಶೇಷ ಶಿಕ್ಷಕರ ನೇಮಕಾತಿಗಾಗಿ ಅರ್ಜಿ ಆಹ್ವಾನ ಶಿವಮೊಗ್ಗ: ಶಾಲಾ ಶಿಕ್ಷಣ ಇಲಾಖೆಯು ಸಮಗ್ರ ಶಿಕ್ಷಣ ಕರ್ನಾಟಕ ಶಿವಮೊಗ್ಗ ಜಿಲ್ಲೆಯ 7 ತಾಲೂಕುಗಳಲಿ ಸಮನ್ವಯ ಶಿಕ್ಷಣ ಮಧ್ಯವರ್ತನೆಯಡಿಯಲ್ಲಿ ಖಾಲಿ ಇರುವ ಬಿಐಇಆರ್ಟಿ (ಪ್ರಾಥಮಿಕ ಮತ್ತು ಪ್ರೌಢ) ಹುದ್ದೆಗಳಿಗೆ ನೇರ ಗುತ್ತಿಗೆಯಡಿ ನೇಮಕ ಮಾಡಿಕೊಳ್ಳುತ್ತಿದ್ದು, ಬಿ.ಇಡಿ ಅಥವಾ ಡಿ.ಇಐ.ಇಡಿ ವಿದ್ಯಾರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಉಪನಿರ್ದೇಶಕರು ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಶಿಕ್ಷಣ ಕರ್ನಾಟಕ, ಶಿವಮೊಗ್ಗ ಇವರಿಂದ ಪಡೆದು, ಭರ್ತಿ…
ಬೆಂಗಳೂರು ಗ್ರಾಮಾಂತರ: ಐ20 ಕಾರಿನಲ್ಲಿ ತೆರಳುತ್ತಿದ್ದಂತ ಕಾರು ಚಾಲಕನೊಬ್ಬ ಕುಡಿದ ಮತ್ತಿನಲ್ಲಿ ಕಾರನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿದ್ದಾನೆ. ಇದರ ಪರಿಣಾಮ ಅಪಘಾತ ಉಂಟಾಗಿದೆ. ಆ ಅಪಘಾತದಿಂದ ತಪ್ಪಿಸಿಕೊಳ್ಳೋದಕ್ಕೆ ಹೋಗಿ ಬೈಕ್ ಸವಾರರಿಗೆ ಡಿಕ್ಕಿ ಹೊಡೆದ ಪರಿಣಾಮ, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಹೊಸಕೋಟೆ ಹೊರವಲಯದಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ-ಚಿಂತಾಮಣಿ ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಐ20 ಕಾರನ್ನು ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿಯಾಗಿ ಚಾಲಕ ಪ್ರಗತೀಶ್ ರಾವ್ ಚಲಾಯಿಸಿದ್ದಾರೆ. ಈ ಪರಿಣಾಮ ಬೈಕ್ ಸವಾರರಿಗೆ ಢಿಕ್ಕಿಯಾಗಿ ಬೆಂಗಳೂರಿನ ಶಿವಾಜಿನಗರದ ನಿವಾಸಿ ಮೊಹಮ್ಮಧ್ ಫೈಜ್(18) ಹಾಗೂ ಜಗದೀಶ್ (30) ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಈ ಅಪಘಾತದಲ್ಲಿ ಅಬ್ಬಾರ್, ಪಾಷಾ, ಅಬುಜರ್ ಎಂಬುವರು ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಕುಡಿದ ಅಮಲಿನಲ್ಲಿ ಪ್ರಗತೀಶ್ ರಾವ್ ಕಾರು ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ. ಮೃತ ಕುಟುಂಬಗಳಿಗೆ ನ್ಯಾಯ ಕೊಡಿಸುವಂತ ಜಗದೀಶ್ ಕುಟುಂಬಸ್ಥರು ಹೊಸಕೋಟೆಯ ಶವಾಗಾರದ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂಬಂಧ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಜೂನ್ 9 ರ ಸಂಜೆ ನಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಈ ಮೊದಲು, ಸಮಾರಂಭವು ಜೂನ್ 8 ರಂದು ನಡೆಯಬೇಕಿತ್ತು, ಆದರೆ ಈಗ ಅದು ಭಾನುವಾರ ಸಂಜೆ 6 ಗಂಟೆಗೆ ನಡೆಯುವ ಸಾಧ್ಯತೆ ಇದೆ. ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಮತ್ತು ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಲ್ ಸೇರಿದಂತೆ ವಿಶ್ವ ನಾಯಕರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಇತರ ದೇಶಗಳ ರಾಷ್ಟ್ರಗಳ ಮುಖ್ಯಸ್ಥರ ವೇಳಾಪಟ್ಟಿಯನ್ನು ಗಮನದಲ್ಲಿಟ್ಟುಕೊಂಡು ಅಂತಿಮ ದಿನಾಂಕ ಮತ್ತು ಸಮಯವನ್ನು ಇನ್ನೂ ರೂಪಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಇಂದು ದಿನದ ಅಂತ್ಯದ ವೇಳೆಗೆ ಅವರ ವೇಳಾಪಟ್ಟಿಗಳು ಮುಗಿದ ನಂತರ, ಅಂತಿಮ ದಿನಾಂಕ ಮತ್ತು ಸಮಯವನ್ನು ಅಂತಿಮಗೊಳಿಸಬಹುದು. ಭಾನುವಾರ ಸಂಜೆಯೊಳಗೆ ಹಲವಾರು ಗಣ್ಯರು ಹೊರಡಬೇಕಾಗಿ ಬಂದರೆ, ಭಾನುವಾರ ಬೆಳಿಗ್ಗೆ ರಾಷ್ಟ್ರಪತಿ ಭವನದಲ್ಲಿ ಸಮಾರಂಭವನ್ನು ನಡೆಸುವ ಸಾಧ್ಯತೆಯೂ ಇದೆ ಎಂದು ಮೂಲಗಳು ತಿಳಿಸಿವೆ. ಏತನ್ಮಧ್ಯೆ,…
ಬೆಂಗಳೂರು: ಹಾವೇರಿ ಜಿಲ್ಲೆಗೆ ಅವಶ್ಯವಿರುವ ಗೊಬ್ಬರವನ್ನು ಪೂರೈಸಲು ಅಗತ್ಯ ಕ್ರಮ ವಹಿಸುವಂತೆ ಕೃಷಿ ಇಲಾಖೆಯ ಆಯುಕ್ತರಿಗೆ ಸೂಚನೆಗಳನ್ನು ನೀಡಿರುವುದಾಗಿ ಕೃಷಿ ಸಚಿವ ಎನ್. ಚಲುವರಾಯ ಸ್ವಾಮಿ ಅವರು ಮಾಜಿ ಸಿಎಂ ಹಾಗೂ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಅವರಿಗೆ ತಿಳಿಸಿದ್ದಾರೆ. ಇತ್ತೀಚೆಗೆ ಬೀಳುತ್ತಿರುವ ಮುಂಗಾರು ಮಳೆಯಿಂದ ರೈತರು ಉತ್ಸುಕರಾಗಿ ಬಿತ್ತನೆ ಮಾಡಲು ಸಿದ್ದರಾಗಿದ್ದು, ಅದಕ್ಕಾಗಿ ಗೊಬ್ಬರ ಪಡೆದುಕೊಳ್ಳಲು ಮುಂದೆ ಬಂದ ಸಂದರ್ಭದಲ್ಲಿ ಹಾವೇರಿ ಜಿಲ್ಲೆಯಲ್ಲಿ ಗೊಬ್ಬರ ಕಡಿಮೆ ಇದ್ದು, ನೂಕು-ನುಗ್ಗಲು ಪರಿಸ್ಥಿತಿ ಉಂಟಾಗಿರುವುದಾಗಿ, ಹಾವೇರಿ ಜಿಲ್ಲೆಗೆ ಸುಮಾರು 35,000 ಮೆಟ್ರಿಕ್ ಟನ್ ಮುಂಗಾರು ಹಂಗಾಮಿನಲ್ಲಿ ಡಿ.ಎ.ಪಿ.ಗೊಬ್ಬರ ಅವಶ್ಯಕತೆ ಇದ್ದು, ಕೇವಲ 6.500 ಮೆಟ್ರಿಕ್ ಟನ್ ಮಾತ್ರ ಸರಬರಾಜಾಗಿರುವುದರಿಂದ ಬಾಕಿ ಇರುವ 29,000 ಮೆಟ್ರಿಕ್ ಟನ್ ಗೊಬ್ಬರವನ್ನು ಹಾವೇರಿ ಜಿಲ್ಲೆಗೆ ಸರಬರಾಜು ಮಾಡುವಂತೆ ಹಾಗೂ ಇದೇ ರೀತಿ ಯೂರಿಯಾ 65000 ಮೆಟ್ರಿಕ್ ಟನ್ ಮತ್ತು ಕಾಂಪ್ಲೆಕ್ಸ್ 38000 ಮೆಟ್ರಿಕ್ ಟನ್ ಸಹ ಸರಬರಾಜು ಮಾಡಲು ಕ್ರಮ ಜರುಗಿಸುವಂತೆ ಜುಲೈ 22 ರಂದು ಮಾಜಿ…
ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಎಸ್ಐಟಿ ವಶದಲ್ಲಿ ತನಿಖೆಗೆ ಒಳಗಾಗುತ್ತಿರುವಂತ ಪ್ರಜ್ವಲ್ ರೇವಣ್ಣ ಅವರನ್ನು, ಜೂನ್.10ರವರೆಗೆ ಮತ್ತಷ್ಟು ತನಿಖೆಗಾಗಿ ಎಸ್ಐಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ಮಾಜಿ ಸಂಸದ ಪ್ರಜಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣ ಬೆಳಕಿಗೆ ಬಂದ ನಂತ್ರ, ವಿದೇಶಕ್ಕೆ ಹಾರಿ ತಲೆ ಮರೆಸಿಕೊಂಡಿದ್ದರು. ಕೆಲ ದಿನಗಳ ಹಿಂದೆ ಜರ್ಮನಿಯ ಮ್ಯೂನಿಚ್ ನಿಂದ ಬೆಂಗಳೂರಿಗೆ ಆಗಮಿಸಿದ್ದಂತ ಅವರನ್ನು ಪ್ರಕರಣದ ತನಿಖೆ ನಡೆಸುತ್ತಿದ್ದಂತ ಎಸ್ಐಟಿ ಏರ್ ಪೋರ್ಟ್ ನಲ್ಲೇ ತಡರಾತ್ರಿ ಬಂಧಿಸಿತ್ತು. ಬಂಧನಕ್ಕೆ ಒಳಗಾಗಿದ್ದಂತ ಪ್ರಜ್ವಲ್ ರೇವಣ್ಣ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಹೆಚ್ಚಿನ ವಿಚಾರಣೆಗಾಗಿ ಎಸ್ಐಟಿ ವಶಕ್ಕೆ ನೀಡಿತ್ತು. ಇಂದಿಗೆ ಅವರ ಎಸ್ಐಟಿ ಕಸ್ಟಡಿ ಅವಧಿ ಮುಕ್ತಾಯಗೊಂಡಿತ್ತು. ಈ ಹಿನ್ನಲೆಯಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡುವಂತೆ ಕೋರಿದ್ದರು. ಈ ಹಿನ್ನಲೆಯಲ್ಲಿ ಜೂನ್.10ರವರೆಗೆ ಪ್ರಜ್ವಲ್ ರೇವಣ್ಣ ಅವರನ್ನು ಎಸ್ಐಟಿ ಕಸ್ಟಡಿಗೆ…
ಬೆಂಗಳೂರು: ನಾನು ಸಚಿವ ಸ್ಥಾನಕ್ಕೆ ಇನ್ನೂ ರಾಜೀನಾಮೆ ನೀಡಿಲ್ಲ ಎಂಬುದಾಗಿ ಸಚಿವ ಬಿ.ನಾಗೇಂದ್ರ ಅವರೇ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ನಾನು ರಾಜೀನಾಮೆ ನೀಡಿಲ್ಲ ಎಂಬುದಾಗಿ ಯುವತನ ಸೇವೆ, ಕ್ರೀಡೆ ಮತ್ತು ಪರಿಶಿಷ್ಟ ಕಲ್ಯಾಣಗಳ ಸಚಿವ ಬಿ.ನಾಗೇಂದ್ರ ಅವರು ಸ್ಪಷ್ಟ ಪಡಿಸಿದ್ದಾರೆ. ಇದೇ ಸಂದರ್ಭದಲ್ಲಿ ನಾನು ಸಂಜೆ 4.30ಕ್ಕೆ ಪತ್ರಿಕಾ ಘೋಷ್ಠಿಯನ್ನು ನಡೆಸಲಿದ್ದೇನೆ. ಅಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣ ಸಂಬಂಧ ಮಾಹಿತಿ ಬಿಚ್ಚಿಡಲಿದ್ದೇನೆ ಎಂಬುದಾಗಿ ತಿಳಿಸಿರೋದಾಗಿ ತಿಳಿದು ಬಂದಿದೆ. ಅಂದಹಾಗೇ ಇಂದು ಸಿಎಂ ಸಿದ್ಧರಾಮಯ್ಯ ಅವರ ಗೃಹ ಕಚೇರಿಗೆ ಕೃಷ್ಣಾಗೆ ತೆರಳಿದ್ದರು. ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ರಾಜೀನಾಮೆ ನೀಡಿದ್ದಾರೆ ಎನ್ನಲಾಗುತ್ತಿತ್ತು. ಇದನ್ನು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಸಚಿವ ನಾಗೇಂದ್ರ ರಾಜೀನಾಮೆ ನೀಡಿದ್ದಾರೆ ಎಂಬುದಾಗಿ ತಿಳಿಸಿದ್ದರು. ಈ ಬೆನ್ನಲ್ಲೇ ಇನ್ನೂ ನಾನು ರಾಜೀನಾಮೆ ನೀಡಿಲ್ಲ ಅಂತ ಬಿ.ನಾಗೇಂದ್ರ ಸ್ಪಷ್ಟ ಪಡಿಸಿದ್ದಾರೆ. https://kannadanewsnow.com/kannada/good-news-for-mobile-users-the-phone-will-be-charged-in-just-60-seconds/ https://kannadanewsnow.com/kannada/readers-should-note-this-is-the-last-day-to-update-your-aadhaar-card-for-free/
ನವದೆಹಲಿ: ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಎನ್ ಚಂದ್ರಬಾಬು ನಾಯ್ಡು ಅವರ ಪ್ರಮಾಣವಚನವನ್ನು ಜೂನ್ 12 ಕ್ಕೆ ಮುಂದೂಡಲಾಗಿದೆ ಎಂದು ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ಮೂಲಗಳು ತಿಳಿಸಿವೆ. ಜೂನ್ 8 ರಂದು ನಿಗದಿಯಾಗಿರುವ ಪ್ರಧಾನಿ ಮೋದಿ ಮತ್ತು ಎನ್ಡಿಎ ಕ್ಯಾಬಿನೆಟ್ ಪ್ರಮಾಣವಚನ ಸಮಾರಂಭದಿಂದಾಗಿ ನಾಯ್ಡು ಅವರ ಸಮಾರಂಭವನ್ನು ಮುಂದೂಡಲಾಗಿದೆ ಎಂದು ವರದಿಗಳು ತಿಳಿಸಿವೆ. ಪ್ರಧಾನಿ ಮತ್ತು ಇತರ ಹಿರಿಯ ಎನ್ಡಿಎ ನಾಯಕರು ಮೆಗಾ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆಯಿದೆ. ಜೂನ್ 6 ರ ಗುರುವಾರ, ನಾಯ್ಡು ವಿಜಯವಾಡದಲ್ಲಿ ಎಲ್ಲಾ ಸಂಸದರನ್ನು ಭೇಟಿ ಮಾಡುವ ಸಾಧ್ಯತೆಯಿದೆ ಮತ್ತು ಪ್ರಮುಖ ಖಾತೆಗಳ ಬಗ್ಗೆ ಚರ್ಚಿಸಲಿದ್ದಾರೆ. ನಾಯ್ಡು ಅವರು ಬುಧವಾರ ಎನ್ಡಿಎ ಮತ್ತು ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲವನ್ನು ತೋರಿಸಿದ ಒಂದು ದಿನದ ನಂತರ ಮತ್ತು ಬುಧವಾರ ದೆಹಲಿಯಲ್ಲಿ ಅವರನ್ನು ಭೇಟಿಯಾದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ. “ನಮ್ಮ ದೇಶದ ಜನರು ನೀಡಿದ ಆದೇಶವನ್ನು ಗೌರವಿಸಿ, ಇಂದು ದೆಹಲಿಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಎನ್ಡಿಎ ಪಾಲುದಾರರು ನರೇಂದ್ರ…
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಪ್ರಕರಣದಲ್ಲಿ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ಅವರು ರಾಜೀನಾಮೆ ಸಲ್ಲಿಸಿದ್ದಾರೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಪಕ್ಷಕ್ಕೆ ಮುಜುಗರವಾಗಬಾರದೆಂದು ಸ್ವಯಂ ಪ್ರೇರಿತವಾಗಿ ರಾಜೀನಾಮೆ ನೀಡಿದ್ದಾರೆ ಎಂಬುದಾಗಿ ತಿಳಿಸಿದರು. ಸಿಎಂ ಸಿದ್ಧರಾಮಯ್ಯ ಭೇಟಿಯಾಗಿ ರಾಜೀನಾಮೆ ನೀಡಿದ್ದಾರೆ. ಅವರು ಈಗಾಗಲೇ ನಾನು ಅಕ್ರಮದಲ್ಲಿ ಭಾಗಿಯಾಗಿಲ್ಲ ಅಂತ ಸ್ಪಷ್ಟ ಪಡಿಸಿದ್ದರು. ಇದರ ನಡುವೆ ಪಕ್ಷಕ್ಕೆ ಮುಜುಗರ ಆಗಬಾರದು, ಧಕ್ಕೆಯಾಗಬಾರದು ಎನ್ನುವ ಕಾರಣಕ್ಕೆ ಇಂದು ರಾಜೀನಾಮೆ ಸಲ್ಲಿಸಿದ್ದಾರೆ ಎಂದರು. https://kannadanewsnow.com/kannada/b-nagendra-resigns-as-minister/ https://kannadanewsnow.com/kannada/good-news-for-mobile-users-the-phone-will-be-charged-in-just-60-seconds/
ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಒಂದು ಒಂದು ವರ್ಷ ಕಳೆದಿದೆ. ಇದೇ ಹೊತ್ತಿನಲ್ಲೇ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮೊದಲ ವಿಕೆಟ್ ಪತನಗೊಂಡಿದೆ. ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಬೆಂಗಳೂರಿನ ಗೃಹ ಕಚೇರಿ ಕೃಷ್ಣಗೆ ಆಗಮಿಸಿದಂತ ಸಚಿವ ಬಿ.ನಾಗೇಂದ್ರ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ನೀಡಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಹಗರಣದ ಬಗ್ಗೆ ಕೆಲಕಾಲ ಸಿಎಂ ಜೊತೆಗೆ ಚರ್ಚೆ ನಡೆಸಿದರು. ಆ ಬಳಿಕ ಈ ಪ್ರಕರಣದ ಹೊಣೆ ಹೊತ್ತಂತ ಬಿ.ನಾಗೇಂದ್ರ ಅವರು ಯುವ ಸಬಲೀಕರಣ, ಕ್ರೀಡೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅಂದಹಾಗೇ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿತ್ತು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ವಹಿಸಿದೆ. ತನಿಖೆ ನಡೆಸುತ್ತಿರುವಂತ ಎಸ್ಐಟಿ ಅಧಿಕಾರಿಗಳು ಎಂಡಿ ಸೇರಿದಂತೆ ಹಲವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಏನಿದು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ? ಬೆಂಗಳೂರಿನ ವಸಂತ ನಗರದಲ್ಲಿರುವ ಮಹರ್ಷಿ…
ಬೆಂಗಳೂರು: ಆಮ್ ಆದ್ಮಿ ಪಾರ್ಟಿ ಕರ್ನಾಟಕದ ಉಸ್ತುವಾರಿ ದಿಲೀಪ್ ಪಾಂಡೆ, ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ ಹಾಗೂ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಅವರೊಂದಿಗೆ ಜೂನ್ 8 ರಂದು ಶನಿವಾರ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಆಯೋಜಿಸಲಾಗಿದೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಚಿತ್ ಸಹಾನಿ ತಿಳಿಸಿದ್ದಾರೆ. ನಗರದ ಅಲುಮ್ನಿ ಅಸೋಸಿಯೇಷನ್ ಯುವಿಸಿಇ ಇಲ್ಲಿ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಪ್ರಸ್ತುತ ರಾಜಕೀಯ ಬೆಳವಣಿಗೆ ಹಾಗೂ ಕರ್ನಾಟಕದಲ್ಲಿ ಪಕ್ಷದ ಮುಂದಿನ ರೂಪು ರೇಷೆ ಕುರಿತಾಗಿ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು. ಸಭೆಯಲ್ಲಿ ಆಮ್ ಆದ್ಮಿ ಪಾರ್ಟಿ ರಾಜ್ಯ ಕಾರ್ಯಕಾರಿಣಿ ಸದಸ್ಯರು, ರಾಜ್ಯ ಸಮಿತಿಯ ಎಲ್ಲ ಪದಾಧಿಕಾರಿಗಳು, ಎಲ್ಲ ಘಟಕದ ರಾಜ್ಯಾಧ್ಯಕ್ಷರು, ಎಲ್ಲಾ ಜಿಲ್ಲೆಯ ಜಿಲ್ಲಾಧ್ಯಕ್ಷರು ಭಾಗವಹಿಸಲಿದ್ದು, ಪಕ್ಷದ ಬಲವರ್ಧನೆ ಬಗ್ಗೆ ಚರ್ಚೆ ನಡೆಯಲಿದೆ ಎಂದು ಹೇಳಿದರು. https://kannadanewsnow.com/kannada/7-year-old-boy-dies-in-bengaluru-after-doctors-fail-to-do-so/ https://kannadanewsnow.com/kannada/good-news-for-mobile-users-the-phone-will-be-charged-in-just-60-seconds/