Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜೈಲಿಗೆ ಹೋಗುವ ಕಾಲ ದೂರವಿಲ್ಲ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರ ಸಂಸದೀಯ ಸಮಿತಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಸಂಡೂರು ಕ್ಷೇತ್ರದಲ್ಲಿ ಇಂದು ರೋಡ್ ಷೋದಲ್ಲಿ ಭಾಗವಹಿಸಿದ್ದ ಅವರು, ಸಿದ್ದರಾಮಯ್ಯನವರು ಮತ್ತು ಅವರ ಪತ್ನಿ ಮುಡಾ ಹಗರಣದಲ್ಲಿ ಸಿಲುಕಿಕೊಂಡಿದ್ದಾರೆ. ಲೋಕಾಯುಕ್ತ ತನಿಖೆ ಎದುರಿಸಿದ್ದಾರೆ ಎಂದು ವಿವರಿಸಿದರು. ಮೈಸೂರು ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಲು ನಾವು ಒತ್ತಾಯಿಸಿದ್ದೇವೆ. ಸಿಬಿಐ ತನಿಖೆಗೆ ವಹಿಸಿದ 24 ಗಂಟೆಗಳಲ್ಲಿ ಮುಖ್ಯಮಂತ್ರಿಯನ್ನು ಬಂಧನ ಮಾಡಿ ಜೈಲಿಗೆ ಕಳುಹಿಸುವುದು ನಿಶ್ಚಿತ ಎಂದು ಹೇಳಿದರು. ಹಣ, ಹೆಂಡ, ಅಧಿಕಾರದ ಬಲದಿಂದ ಹಾಗೂ ಜಾತಿ ವಿಷಬೀಜ ಬಿತ್ತಿ ರಾಜಕಾರಣ ಮಾಡುವ ಕಾಲ ಹೋಗಿದೆ. ಸಿದ್ದರಾಮಯ್ಯನವರೇ, ಇವತ್ತು ಜನ ಜಾಗೃತರಾಗಿದ್ದಾರೆ. ನಿಮ್ಮ ಮೋಸಕ್ಕೆ ಬಲಿ ಆಗುವುದಿಲ್ಲ. ರಾಜ್ಯದಲ್ಲಿ ಉಪ ಚುನಾವಣೆ ನಡೆಯುವ 3ಕ್ಕೆ 3 ಕ್ಷೇತ್ರಗಳನ್ನು ಗೆದ್ದೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಂಗಾರು ಹನುಮಂತು ಅವರ ಚಿಹ್ನೆ ಕಮಲದ ಹೂವಿನ ಗುರುತಿಗೆ ಮತ…
ಬೆಂಗಳೂರು: ಮಹಾರಾಷ್ಟ್ರದ ಅತ್ಯಂತ ಜನಪ್ರಿಯ ಆಚರಣೆಗಳಲ್ಲಿ ಒಂದಾದ ಕಾರ್ತಿಕ ಏಕಾದಶಿ ಉತ್ಸವದಲ್ಲಿ ಪಾಲ್ಗೊಳ್ಳುವ ಪ್ರಯಾಣಿಕರಿಗೆ ಅವಕಾಶ ಕಲ್ಪಿಸಲು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ಪಂಢರಪುರ ನಿಲ್ದಾಣಗಳ ನಡುವೆ ಆರು ಟ್ರಿಪ್ಗಳಿಗೆ ಕಾಯ್ದಿರಿಸದ ವಿಶೇಷ ರೈಲುಗಳನ್ನು ನೈಋತ್ಯ ರೈಲ್ವೆ ಓಡಿಸಲಿದೆ. ವಿವರಗಳು ಈ ಕೆಳಗಿನಂತಿವೆ: ರೈಲು ಸಂಖ್ಯೆ 07313/07314 ಎಸ್ಎಸ್ಎಸ್ ಹುಬ್ಬಳ್ಳಿ-ಪಂಢರಪುರ-ಎಸ್ಎಸ್ಎಸ್ ಹುಬ್ಬಳ್ಳಿ ಕಾಯ್ದಿರಿಸದ ವಿಶೇಷ ರೈಲು (6 ಟ್ರಿಪ್ಗಳು) ರೈಲು ಸಂಖ್ಯೆ 07313 ಎಸ್ಎಸ್ಎಸ್ ಹುಬ್ಬಳ್ಳಿ-ಪಂಢರಪುರ ಕಾಯ್ದಿರಿಸದ ವಿಶೇಷ ರೈಲು ನವೆಂಬರ್ 9 ರಿಂದ 15, 2024 ರವರೆಗೆ (ನವೆಂಬರ್ 13 ಹೊರತುಪಡಿಸಿ) ಪ್ರತಿದಿನ ಸಂಜೆ 7:45 ಕ್ಕೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು ಮರುದಿನ ಬೆಳಿಗ್ಗೆ 4:30 ಕ್ಕೆ ಪಂಢರಪುರವನ್ನು ತಲುಪಲಿದೆ. ವಾಪಸು ರೈಲು ಸಂಖ್ಯೆ 07314 ಪಂಢರಪುರ-ಎಸ್ಎಸ್ಎಸ್ ಹುಬ್ಬಳ್ಳಿ ಕಾಯ್ದಿರಿಸದ ವಿಶೇಷ ರೈಲು ನವೆಂಬರ್ 10 ರಿಂದ 16, 2024 ರವರೆಗೆ (ನವೆಂಬರ್ 14 ಹೊರತುಪಡಿಸಿ) ಪ್ರತಿದಿನ ಬೆಳಿಗ್ಗೆ 6:00 ಗಂಟೆಗೆ ಪಂಢರಪುರದಿಂದ ಹೊರಟು ಅದೇ ದಿನ ಸಂಜೆ 4:30…
ಶಿವಮೊಗ್ಗ: ಸಾಗರ ಟೌನ್ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆಸಿ, ನಗರದಲ್ಲಿ ದನ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೇ ಈ ಕೃತ್ಯಕ್ಕೆ ಉಪಯೋಗಿಸಿದ 10,00,000/ರೂ ಮೌಲ್ಯದ ಟೊಯೋಟಾ ಫಾರ್ಚುನರ್ ಕಾರ್ ಜಪ್ತಿ ಮಾಡಿದ್ದಾರೆ. ಈ ಕುರಿತಂತೆ ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸಾಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಎಸ್.ಎನ್ ನಗರದ ಆಶ್ರಮ ಶಾಲೆ ಹಿಂಭಾಗದಲ್ಲಿ ದಿನಾಂಕಃ-27/05/2024 ರಂದು ದನ ಕಳ್ಳತನ ಮಾಡಿದ ಬಗ್ಗೆ ಪ್ರಕರಣ ವರದಿಯಾಗಿರುತ್ತದೆ ಎಂದಿದ್ದಾರೆ. ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷರಾದಂತ ಅನಿಲ್ ಕುಮಾರ್ ಭೂಮ್ ರೆಡ್ಡಿ, ಕಾರಿಯಪ್ಪ ಸೂಚನೆಯ ಮೇರೆಗೆ ದನ ಕಳ್ಳತನ ಪ್ರಕರಣದ ಪತ್ತೆಗೆ ಇಳಿಯಲಾಗಿತ್ತು ಎಂದು ಹೇಳಿದ್ದಾರೆ. ಸಾಗರ ಡಿವೈಎಸ್ಪಿ ಗೋಪಾಲ ಕೃಷ್ಣ ಟಿ ನಾಯಕ್ ಮಾರ್ಗದರ್ಶನದಲ್ಲಿ, ಕಾರ್ಗಲ್ ವೃತ್ತ ಪೊಲೀಸ್ ಇಸ್ ಪೆಕ್ಟರ್ ಸಂತೋಷ್ ಶೆಟ್ಟಿ, ಪಿಎಸ್ಐ ಯಲ್ಲಪ್ಪ ಟಿ ಹಿರೇಗಣ್ಣನ್ನನವರ್, ನಾಗರಾಜ ಟಿ ಎಂ…
ಬೆಂಗಳೂರು: ಮೋದಿ ಅವರು ಮುಖ್ಯಮಂತ್ರಿಯಿಂದ ಪ್ರಧಾನಮಂತ್ರಿಯಾಗಬೇಕು ಎಂದು ತೀರ್ಮಾನ ಮಾಡಿದ ನಂತರ ಕಳೆದ 15 ವರ್ಷಗಳ ಹಿಂದೆ ಬಹಳ ವಿಶಿಷ್ಟವಾದ ಸುಳ್ಳಿನ ಕಾರ್ಖಾನೆ ಆರಂಭಿಸಿದರು. ತಪ್ಪು ಮಾಹಿತಿ, ನಕಲಿ ಮಾಹಿತಿ, ಸುಳ್ಳು ಮಾಹಿತಿ, ಸುಳ್ಳು ಸುದ್ದಿಯ ಕಾರ್ಖಾನೆ ಆರಂಭಿಸಿದರು. ಇದರಲ್ಲಿ ಮೋದಿ ಹಾಗೂ ಅಮಿತ್ ಶಾ ಅವರು ಪಾಲುದಾರರು ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಅವರು ವಾಗ್ಧಾಳಿ ನಡೆಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಈ ಕಾರ್ಖಾನೆಗೆ ಕೆಲಸಕ್ಕೆ ಬಾರದ ಅಮಿತ್ ಮಾಳವಿಯಾ ಎಂಬಾತನನ್ನು ಮ್ಯಾನೇಜರ್ ಆಗಿದ್ದಾರೆ. ಈ ಕಾರ್ಖಾನೆ ನಡೆಸಲು ಕೆಲವು ಜೀತದಾಳುಗಳನ್ನು ಇಟ್ಟಿದ್ದಾರೆ. ಹಲವು ರಾಜ್ಯಗಳಲ್ಲಿ ವಕ್ತಾರರು, ಶಾಸಕರು, ಸಂಸದರು ಈ ಕೆಲಸ ಮಾಡುತ್ತಿದ್ದಾರೆ. ನಮ್ಮ ರಾಜ್ಯದಲ್ಲಿ ಸಂಸದರು ಹಾಗೂ ಬಾಡಿಗೆ ಭಾಷಣಕಾರರನ್ನು ಇಟ್ಟುಕೊಂಡಿದ್ದಾರೆ ಎಂದರು. ಸುಳ್ಳು ಸುದ್ದಿ ವಿಚಾರವಾಗಿ ಸುಪ್ರೀಂ ಕೋರ್ಟ್ ನಲ್ಲಿ ಚರ್ಚೆಯಾಗಿದೆ. ಇದು ಪ್ರಜಾಪ್ರಭುತ್ವಕ್ಕೆ ಬಹಳ ಅಪಾಯಕಾರಿ ಎಂದು ನಿವೃತ್ತ ನ್ಯಾಯಮೂರ್ತಿ ಹೇಳಿದ್ದರು. ಮುಖ್ಯ ಚುನಾವಣಾ ಆಯುಕ್ತರು ಕೂಡ ದೇಶದಲ್ಲಿ ಪ್ರಜಾಪ್ರಭುತ್ವಕ್ಕೆ…
ಬೆಂಗಳೂರು : ತುರ್ತು ವಿದ್ಯುತ್ ನಿರ್ವಹಣೆ ಕಾಮಗಾರಿಯನ್ನು ನವೆಂಬರ್ 10ರಂದು ಕೈಗೊಳ್ಳುತ್ತಿರುವುದರಿಂದ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಬೆಂಗಳೂರು 23: 220/66/11 kV ಎಸ್ಆರ್ಎಸ್ ಪೀಣ್ಯ ಸಬ್ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯ ವಿಭಾಗದ ಎನ್-4/ ಎನ್-5/ ಎನ್-7 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 10.11.2024 ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 03:30 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಪ್ರದೇಶಗಳಲ್ಲಿ ಪವರ್ ಕಟ್ ಗೃಹಲಕ್ಷ್ಮಿ-ಅಪಾರ್ಟ್ಮೆಂಟ್, ಎಸ್ಎಂ ರಸ್ತೆ, ಜಾಲಹಳ್ಳಿ ಕ್ರಾಸ್, ಚೊಕ್ಕಸಂದ್ರ, ಮಾರುತಿ ಲೇಔಟ್, ಕೆಂಪಯ್ಯ ಲೇಔಟ್, ಜಿ.ಜಿ ಪಾಳ್ಯ, ಇಸ್ರೋ, ನಾರಾಯಣಪುರ, ಎನ್.ಟಿ.ಟಿ.ಎಫ್ ಸರ್ಕಲ್, ಗಣಪತಿನಗರ ಮುಖ್ಯ ರಸ್ತೆ, ಪೊಲೀಸ್ ಠಾಣೆ ರಸ್ತೆ, ಚಾಮುಂಡಿಪುರ, ರಾಜೇಶ್ವರಿನಗರ, ಆಕಾಶ್ ಥಿಯೇಟರ್ ರಸ್ತೆ, ವಿ ಇಗ್ನಾನ ಪಬ್ಲಿಕ್ ಸರ್ಕಲ್ ರಸ್ತೆ. ಭೈರವೇಶ್ವರ ನಗರ, ಬ್ಯಾಂಕ್ ಕಾಲೋನಿ, ಮುನೇಶ್ವರ ಲೇಔಟ್, ಎಫ್ಎಫ್ ಲೇಔಟ್, ಎನ್ಎಸ್ ಬಡವಣೆ, ಕೆಜಿ ಲೇಔಟ್,…
ಬಾಗಲಕೋಟೆ : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ತಂದಿರುವ ಗೃಹಲಕ್ಷ್ಮಿ ಯೋಜನೆಯು ಬಡವರ ಬದುಕಿಗೆ ಬಹಳಷ್ಟು ಅನುಕೂಲವಾಗಿದೆ. ಗೃಹಲಕ್ಷ್ಮಿ ಯೋಜನೆ ತಂದವರಿಗೆ ಪುಣ್ಯ ಬರಲಿ ಎಂದು ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಕೊರ್ತಿ ಗ್ರಾಮದ ಗಂಗವ್ವ ಬಿರಾದಾರ ಆಶಿಸಿದ್ದಾರೆ. ಮಾಧ್ಯಮಗಳೊಂದಿಗೆ ತಮ್ಮ ಸಂತಸ ಹಂಚಿಕೊಂಡಿರುವ ಗಂಗವ್ವ ಬಿರಾದಾರ ಅವರು, ಗೃಹಲಕ್ಷ್ಮಿ ಯೋಜನೆ ಜಾರಿಗೆ ತಂದಿರುವ ಸಚಿವೆ ತಾಯಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೂ ಒಳ್ಳೆಯದಾಗಲಿ ಎಂದು ಹಾರೈಸಿದ್ದಾರೆ. ಕೊರ್ತಿ ಗ್ರಾಮದ ಗಂಗವ್ವ ಬಿರಾದಾರ ಅವರು ಗೃಹಲಕ್ಷ್ಮಿ ಯೋಜನೆಯ ಒಟ್ಟು 12 ತಿಂಗಳ 24 ಸಾವಿರ ರೂಪಾಯಿ ಹಣವನ್ನು ಕೂಡಿಟ್ಟು, ಅದರಲ್ಲಿ 8 ಸಾವಿರ ರೂಪಾಯಿ ಹಣದಲ್ಲಿ ಮೊಮ್ಮಕ್ಕಳಿಗಾಗಿ ಹೊಲಿಗೆ ಯಂತ್ರ ಖರೀದಿಸಿದ್ದಾರೆ. ಗಂಗವ್ವ ಬಿರಾದಾರ ಅವರು ಓದು ಬರಹ ಕಲಿತಿಲ್ಲ. ಆದರೆ, ಹೊಲಿಗೆ ತರಬೇತಿ ಪಡೆದಿದ್ದಾರೆ. ತನ್ನ ಮೊಮ್ಮಕ್ಕಳಿಗೆ, ನೆರೆಹೊರೆಯವರಿಗೆ ಹೊಲಿಗೆಯ ತರಬೇತಿ ನೀಡಿ ಅವರ ಭವಿಷ್ಯಕ್ಕೆ ಬೆಳಕಾಗಾಗಲಿ ಎಂದು ಹೊಲಿಗೆ ಯಂತ್ರ ಖರೀದಿಸಿದ್ದಾರೆ. ಅಲ್ಲದೇ, 12 ಸಾವಿರ ರೂಪಾಯಿ ಹಣವನ್ನು ತನ್ನ ಮೊಮ್ಮಗನ ವಿದ್ಯಾಬ್ಯಾಸದ…
ಮಂಡ್ಯ: ಚನ್ನಪಟ್ಟಣ ಚುನಾವಣೆ ಪ್ರಚಾರದಲ್ಲಿ ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಕಣ್ಣೀರಿನ ಬಗ್ಗೆ ಲಘುವಾಗಿ ಮಾತನಾಡಿರುವ ಕಾಂಗ್ರೆಸ್ ನಾಯಕರಿಗೆ ತಿರುಗೇಟು ಕೊಟ್ಟಿರುವ ಮಾಜಿ ಪ್ರಧಾನಿ ದೇವೇಗೌಡರು; ನಮ್ಮ ವಂಶ ಬಡತನದಿಂದ ಕಷ್ಟಸುಖ ಅರಿತು ಮೇಲೆ ಬಂದಿದೆ. ನಮ್ಮ ವಂಶಕ್ಕೆ ಈ ಕಣ್ಣೀರು ಬಳುವಳಿಯಾಗಿ ಬಂದಿದೆ ಎಂದರು. ಪಾಂಡವಪುರದ ಚಿನಕುರುಳಿ ಗ್ರಾಮದಲ್ಲಿ ಮಾಜಿ ಪ್ರಧಾನಿಗಳು ಮಾಧ್ಯಮಗಳ ಜತೆ ಮಾತನಾಡಿದರು. ಕಣ್ಣೀರ ಬಗ್ಗೆ ವ್ಯಂಗ್ಯವಾಡ್ತಿರೋ ಕೈ ನಾಯಕರ ವಿರುದ್ದ ಹರಿಹಾಯ್ದ ದೇವೇಗೌಡರು; ತಮ್ಮ ಬದುಕಿನ ಹಸಿವು, ಕಣ್ಣೀರನ್ನು ಅವರು ನೆನಪು ಮಾಡಿಕೊಂಡರು. ನಮಗೆ ರೈತರ, ಬಡ ಜನರ ಕಷ್ಟ ಸುಖಗಳ ಅರಿವಿದೆ. ಅವರ ಕಷ್ಟಕ್ಕೆ ಸ್ಪಂದಿಸುವ ಹೃದಯ ಯಾರಿಗಿರುತ್ತೋ ಅವರಿಗೆ ಮಾತೃ ಹೃದಯ ಇರುತ್ತೆ. ಕಣ್ಣೀರಿನ ಬಗ್ಗೆ ವ್ಯಂಗ್ಯ ಮಾಡುವ ಜನರಿಗೆ ನಾನು ಇನ್ನೇನು ಹೇಳಲು ಬಯಸುವುದಿಲ್ಲ ಎಂದು ಅವರು ಹೇಳಿದರು. ನಾನು ನನ್ನ ಕಡೆಯ ಉಸಿರು ಇರುವವರೆಗೂ ರಾಜಕೀಯದಲ್ಲಿ ಇರ್ತಿನಿ. ಮೊಮ್ಮಗನಿಗಾಗಿ ಈಗ ನಾನು ರಾಜಕೀಯಕ್ಕೆ ಬಂದಿಲ್ಲ. ಒಂದು ಪ್ರಾದೇಶಿಕ ಪಕ್ಷ ಉಳಿಸಲು…
ಮಂಡ್ಯ : ಕ್ರೀಡೆ, ಸಂಸ್ಕೃತಿ ಉಳಿಸುವ ಜತೆಗೆ ಸಮಾಜ ಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಉದ್ದೇಶದಿಂದ ನವಂಬರ್ 9 ರಂದು ಮದ್ದೂರು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಅರ್ಜುನಪುರಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘವನ್ನು ಉದ್ಘಾಟಿಸಲಾಗುತ್ತಿದೆ ಎಂದು ಸಂಘದ ಅಧ್ಯಕ್ಷ ಎನ್.ಆರ್.ಪ್ರಸನ್ನ ತಿಳಿಸಿದರು. ಮದ್ದೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಿಕ್ಷಣದ ಜತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ವಿಚಾರಗಳು ಎಲ್ಲರಿಗೂ ಮುಖ್ಯವಾಗಿರುವುದರಿಂದ ಕ್ರೀಡಾಪಟುಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಸಂಘವನ್ನು ಉದ್ಘಾಟನೆ ಮಾಡಲಾಗುತ್ತಿದೆ ಎಂದರು. ಸಂಘದ ವತಿಯಿಂದ ತಾಲೂಕಿನ ಎಲ್ಲಾ ಕ್ರೀಡಾಪಟುಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಉಚಿತವಾಗಿ ತರಬೇತಿ ನೀಡಲು ಚಿಂತನೆ ನಡೆಸಲಾಗಿದೆ ಹಾಗೂ ಮುಂದಿನ ದಿನಗಳಲ್ಲಿ ತಾಲೂಕಿನ ಆಸಕ್ತಿಯುಳ್ಳ ವಿದ್ಯಾರ್ಥಿಗಳಿಗೆ ನೀಟ್, ಕೆಎಎಸ್, ಐಪಿಎಸ್ ಸೇರಿದಂತೆ ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಉಚಿತವಾಗಿ ತರಬೇತಿ ಕೊಡಿಸುವುದು ಸಂಘದ ಮುಖ್ಯ ಉದ್ದೇಶವಾಗಿದೆ ಎಂದರು. ಮದ್ದೂರು ತಾಲೂಕಿನಿಂದ ಆಯ್ಕೆಯಾದ ಜಿಲ್ಲಾ, ರಾಜ್ಯ ಮಟ್ಟದ ಕ್ರೀಡಾಪಟುಗಳಿಗೆ ಯಾವುದೇ ಕ್ರೀಡೆ ಆದರೂ ಸಹ ಅವರಿಗೆ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗೃಹ ಲಕ್ಷ್ಮಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ದೊರೆತಿದೆ. ಆಗಸ್ಟ್ 2023ರಿಂದ ಈವರೆಗೆ ಬರೋಬ್ಬರಿ 1.22 ಕೋಟಿ ಮಹಿಳೆಯರಿಗೆ 30,285 ಕೋಟಿ ಧನಸಹಾಯ ನೀಡಲಾಗಿದೆ. ಈ ಬಗ್ಗೆ ರಾಜ್ಯ ವಾರ್ತಾ ಇಲಾಖೆಯಿಂದ ಮಾಹಿತಿ ಹಂಚಿಕೊಳ್ಳಲಾಗಿದ್ದು, ರಾಜ್ಯ ಸರ್ಕಾರ ಸ್ತ್ರೀ ಸ್ವಾಲಂಬನೆಯತ್ತ ದಿಟ್ಟ ಹೆಜ್ಜೆ ಇರಿಸಲಾಗಿದೆ ಎಂದಿದೆ. ಅಲ್ಲದೇ ಗೃಹ ಲಕ್ಷ್ಮಿ ಯೋಜನೆಯಡಿ ಆಗಸ್ಟ್ 2023ರಿಂದ ಈವರೆಗೆ ಪ್ರತಿ ಮನೆಯ ಯಜಮಾನಿಯ ಖಾತೆಗೆ ಮಾಸಿಕ 2000 ರೂ.ನಂತೆ 1.22 ಕೋಟಿ ಮಹಿಳೆಯರಿಗೆ ಒಟ್ಟು 30,285 ಕೋಟಿ ಧನಸಹಾಯ ನೀಡಲಾಗಿದೆ ಎಂದಿದೆ. ಇದಲ್ಲದೇ ಆರೋಗ್ಯ ಪುಷ್ಟಿ ಯೋಜನೆಯನ್ನು ಪ್ರಾಯೋಗಿಕವಾಗಿ ರಾಜ್ಯದ 102 ತಾಲ್ಲೂಕುಗಳಲ್ಲಿ ಜಾರಿಗೊಳಿಸಿದ್ದು, ಅರ್ಹ ವಿವಾಹಿತ ಮಹಿಳೆಯರಿಗೆ ಪೌಷ್ಟಿಕ ಕಿಟ್ ವಿತರಣೆ ಮಾಡಲಾಗುತ್ತಿದೆ ಎಂದು ಹೇಳಿದೆ. ಮಾಜಿ ದೇವದಾಸಿಯರಿಗೆ ಉತ್ಪನ್ನಗಳ ಮಾರಾಟಕ್ಕಾಗಿ ಸವದತ್ತಿಯಲ್ಲಿ 48 ಮಾರಾಟ ಮಳಿಗೆಗಳನ್ನು ನಿರ್ಮಾಣ ಮಾಡಲಾಗಿ ಎಂದು ತಿಳಿಸಲಾಗಿದೆ. https://twitter.com/KarnatakaVarthe/status/1854846263692505366 https://kannadanewsnow.com/kannada/suriyas-kangua-to-release-on-november-14-censor-board-gives-u-a-certificate/ https://kannadanewsnow.com/kannada/conspiracy-to-make-vijayapura-a-laboratory-of-hindutva-in-the-name-of-waqf-minister-m-b-patil-on-bjp/
ನವದೆಹಲಿ: ನಟ ಸೂರ್ಯ ( Actor Suriya ) ಅವರ ಇತ್ತೀಚಿನ ಪ್ಯಾನ್-ಇಂಡಿಯಾ ಚಿತ್ರ ಕಂಗುವಾವನ್ನು ( Pan-India film Kanguva ) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (Central Board of Film Certification – CBFC) ಯು / ಎ ರೇಟಿಂಗ್ನೊಂದಿಗೆ ತೆರವುಗೊಳಿಸಿದೆ. ಚಿತ್ರದ ತಯಾರಕರು ನವೆಂಬರ್ 8 ರ ಶುಕ್ರವಾರ ಸಂಜೆ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಈ ಸುದ್ದಿಯನ್ನು ಘೋಷಿಸಿದರು. ಸಂಭ್ರಮಾಚರಣೆಯ ಪೋಸ್ಟ್ ಸೃಜನಶೀಲ ಪ್ರಕಟಣೆಯನ್ನು ಮಾಡಿತು, ತಯಾರಕರು ಬರೆದಿದ್ದಾರೆ, “ನಮ್ಮೆಲ್ಲರಿಗೂ ‘ಯು’ಎನ್ ಪ್ಯಾರಲೆಲ್ಡ್ ‘ಆ’ ಸಾಹಸ ಕಾಯುತ್ತಿದೆ. ನಮ್ಮ ಮ್ಯಾಗ್ನಮ್ ಓಪಸ್ #Kanguva ಯುಎ ಸೆನ್ಸಾರ್ ಆಗಿದೆ! ಅದನ್ನು 3D ಯಲ್ಲಿ ಅನುಭವಿಸಲು ಸಿದ್ಧರಾಗಿ ಎಂದಿದ್ದಾರೆ. https://twitter.com/StudioGreen2/status/1854841290728653109 ಶಿವ ನಿರ್ದೇಶನದ ಇದು ವರ್ಷದ ಬಹು ನಿರೀಕ್ಷಿತ ತಮಿಳು ಬಿಡುಗಡೆಗಳಲ್ಲಿ ಒಂದಾಗಿದೆ. ಈ ಚಿತ್ರವು ಮಧ್ಯಕಾಲೀನ ಅವಧಿಯ ಫ್ಯಾಂಟಸಿ ಆಕ್ಷನ್ ಸಾಹಸವಾಗಿದ್ದು, ಸೂರ್ಯ ಬುಡಕಟ್ಟು ಯೋಧನಾಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರವು ನಟ ಬಾಬಿ ಡಿಯೋಲ್ ಅವರ…












