Author: kannadanewsnow09

ಬಳ್ಳಾರಿ : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸ್ತಕ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ನೀಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದ್ದು, ಅಸಕ್ತರು ಆನ್‍ಲೈನ್ ವೆಬ್‍ಸೈಟ್ ವಿಳಾಸ www.kacdc.karnataka.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಹತೆ: ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ “ನಮೂನೆ-ಜಿ” ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು). ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆ ಜೋಡಣೆ ಮಾಡಿರಬೇಕು ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಸೀಡ್ ಮಾಡಿಸಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಶೇಷಚೇತನರಿಗೆ ಶೇ.5 ಹಾಗೂ ತೃತೀಯ ಲಿಂಗಿಗಳಿಗೆ ಶೇ.5 ಮೀಸಲಾತಿ ಇರಿಸಿದೆ. ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ (ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಮಾತ್ರ ಇಬ್ಬರಿಗೆ ಅವಕಾಶವಿರುತ್ತದೆ). ಯೋಜನೆಗಳು: ಸ್ವಯಂ-ಉದ್ಯೋಗ ನೇರ…

Read More

ಹಾಸನ: ಇಂದು ಹಾಸನದಲ್ಲಿ ರೈಲ್ವೆ ಸಂಬಂಧಿತ ವಿಷಯಗಳ ಕುರಿತು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಮಹತ್ವ ಸಭೆಯನ್ನು ನಡೆಸಿದರು. ಆ ಸಭೆಯ ಪ್ರಮುಖ ಮುಖ್ಯಾಂಶಗಳನ್ನು ಮುಂದೆ ಓದಿ.  ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಮೈಸೂರು ವಿಭಾಗದ ಹಾಸನ ಮತ್ತು ಚಿಕ್ಕಮಗಳೂರು ರೈಲ್ವೆ ನಿಲ್ದಾಣಗಳಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಯೋಜನೆಗಳ ಪರಿಶೀಲನೆ ನಡೆಸಿದರು. ಈ ನಿಲ್ದಾಣಗಳನ್ನು ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ದೀರ್ಘಕಾಲೀನ ಯೋಜನೆ ಮತ್ತು ಪ್ರಯಾಣಿಕರ ಸೌಲಭ್ಯಗಳ ಹೆಚ್ಚಳದ ಮೇಲೆ ಕೇಂದ್ರೀಕರಿಸಿ ಪುನರಾಭಿವೃದ್ಧಿ ಮಾಡಲಾಗುತ್ತಿದೆ. ಹಾಸನದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸಿದ ಮಾನ್ಯ ಕೇಂದ್ರ ರೈಲ್ವೆ ರಾಜ್ಯ ಸಚಿವರು ರೈಲ್ವೆ ಮೂಲಸೌಕರ್ಯ ಯೋಜನೆಗಳ ಪರಿಶೀಲನೆ ನಡೆಸಿದರು ನಂತರ ಮಾನ್ಯ ಸಚಿವರು ಹಾಸನ ರೈಲ್ವೆ ನಿಲ್ದಾಣದ ಪುನರಾಭಿರುದ್ಧಿ ಕಾಮಗಾರಿಗಳನ್ನು ನಿರೀಕ್ಷಣಾ ಕೊಠಡಿ, ಸಭಾಂಗಣ ಮತ್ತು ಪ್ಲಾಟ್ ಫಾರ್ಮ್ ಶೌಚಾಲಯಗಳ ಸುಧಾರಣೆ, ಮುಖಮಂಟಪ ನಿರ್ಮಾಣ, 2 ಲಿಫ್ಟ್ ಗಳು ಮತ್ತು 2 ಎಸ್ಕಲೇಟರ್ ಗಳನ್ನು ಹೊಂದಿರುವ 12 ಮೀಟರ್…

Read More

ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಮಹತ್ವದ ಮಾಹಿತಿ ಎನ್ನುವಂತೆ ಕೆಲ ರೈಲುಗಳ ಸೇವೆಯಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ. ಅಲ್ಲದೇ ಕೆಲ ರೈಲುಗಳ ಸಂಚಾರವನ್ನು ನಿಯಂತ್ರಣ ಮಾಡಲಾಗಿದೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ನೈರುತ್ಯ ರೈಲ್ವೆ ಇಲಾಖೆಯು ತಿಳಿಸಿದ್ದು, ಬೆಂಗಳೂರು ಯಾರ್ಡ್ ಸೇತುವೆ ಸಂಖ್ಯೆ 867 ಮತ್ತು ಬೆಂಗಳೂರು ಕಂಟೋನ್ಮೆಂಟ್-ಕೆಎಸ್ಆರ್ ಬೆಂಗಳೂರು ಭಾಗದ ಮಧ್ಯದಲ್ಲಿರುವ ಸೇತುವೆ ಸಂಖ್ಯೆ 857 ರಲ್ಲಿ ವಿವಿಧ ಕಾಮಗಾರಿ ಕೈಗೊಳ್ಳುವ ಸಲುವಾಗಿ, ಈ ಕೆಳಗಿನ ರೈಲುಗಳನ್ನು ರದ್ದು, ಭಾಗಶಃ ರದ್ದು, ಮಾರ್ಗ ಬದಲಾವಣೆ ಮತ್ತು ನಿಯಂತ್ರಣ ಮಾಡಲಾಗುತ್ತಿದೆ. ಅವುಗಳ ಮಾಹಿತಿ ಈ ಕೆಳಗಿನಂತಿವೆ: ರೈಲುಗಳ ಸಂಚಾರ ರದ್ದು ಜುಲೈ 30, ಆಗಸ್ಟ್ 6 ಮತ್ತು 13 ರಂದು ರೈಲು ಸಂಖ್ಯೆ 12658 ಕೆಎಸ್ಆರ್ ಬೆಂಗಳೂರು-ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ಡೈಲಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ಮತ್ತು ಜುಲೈ 31, ಆಗಸ್ಟ್ 7 ಮತ್ತು 14 ರಂದು ರೈಲು ಸಂಖ್ಯೆ 12657 ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್-ಕೆಎಸ್ಆರ್ ಬೆಂಗಳೂರು ಡೈಲಿ ಸೂಪರ್ ಫಾಸ್ಟ್ ಎಕ್ಸ್…

Read More

ಬಳ್ಳಾರಿ : ನಗರದ 03 ಪರೀಕ್ಷಾ ಕೇಂದ್ರಗಳಲ್ಲಿ ಜು.20 ರಂದು ಮಧ್ಯಾಹ್ನ 02 ಗಂಟೆಯಿಂದ ಸಂಜೆ 04.30 ಗಂಟೆಯವರೆಗೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಸಂಸ್ಥೆಯಲ್ಲಿನ ನೇಮಕಾತಿಗಳಿಗೆ ಕಡ್ಡಾಯ ಕನ್ನಡ ಭಾಷೆ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯ ಆವರಣವನ್ನು ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರನ್ವಯ ನಿಬರ್ಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ. ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಜೆರಾಕ್ಸ್, ಇಂಟರ್‍ನೆಟ್ ಸೆಂಟರ್‍ಗಳು ಕಾರ್ಯನಿರ್ವಹಿಸದಂತೆ ಮುಚ್ಚಲು ಆದೇಶಿಸಿದ್ದು, ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದೆ. ಈ ಆದೇಶವು ಡಿಪ್ಲೋಮಾ ಪ್ರವೇಶ ಪರೀಕ್ಷಾ ಮೇಲ್ವಿಚಾರಣೆ ಕಾರ್ಯ ನಿರ್ವಹಿಸುವ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ. https://kannadanewsnow.com/kannada/good-news-for-coconut-growers-in-karnataka-from-central-government/ https://kannadanewsnow.com/kannada/bengaluru-hc-attempts-to-attack-asi-after-scuffle-between-police-personnel-at-police-station/ https://kannadanewsnow.com/kannada/sc-directs-nta-to-declare-neet-ug-results-of-all-candidates-by-friday/

Read More

ಬೆಂಗಳೂರು: ಕೇಂದ್ರ ಸರ್ಕಾರದಿಂದ ಕರ್ನಾಟಕದ ಕೊಬ್ಬರಿ ಬೆಳೆಗಾರರಿಗೆ ಸಿಹಿಸುದ್ದಿಯೊಂದು ಹೊರಬಿದ್ದಿದೆ. ಅದೇ ಹೆಚ್ಚುವರಿಯಾಗಿ 7500 ಮೆಟ್ರಿಕ್ ಟನ್ ಕೊಬ್ಬರಿ ಖರೀದಿಸೋದಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಈ ಬಗ್ಗೆ ಮಾಹಿತಿಯನ್ನು ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ವಿ.ಸೋಮಣ್ಣ ಹಂಚಿಕೊಂಡಿದ್ದು, ಕರ್ನಾಟಕದಿಂದ ಹೆಚ್ಚುವರಿ ಕೊಬ್ಬರಿಯನ್ನು ಖರೀದಿಸುವಂತೆ ಕೇಂದ್ರ ಕೃಷಿ ಇಲಾಖೆ ಸಚಿವರನ್ನು ಭೇಟಿಯಾಗಿ ಮನವಿ ಮಾಡಲಾಗಿ್ತತು. ಇದಕ್ಕೆ ಅವರು ಒಪ್ಪಿಗೆ ಸೂಚಿಸಿದ್ದಾರೆ ಅಂತ ತಿಳಿಸಿದ್ದಾರೆ. ಈ ವರ್ಷ 2999 ಮೆಟ್ರಿಕ್ ಟನ್ ಕೊಬ್ಬರಿ ಖರೀದಿ ಮಾಡಲಾಗಿದೆ. ಹೆಚ್ಚುವರಿಯಾಗಿ ಕೊಬ್ಬರಿ ಖರೀದಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. 10,000 ಮೆಟ್ರಿಕ್ ಟನ್ ಖರೀದಿಸುವಂತೆ ಮನವಿ ಮಾಡಲಾಗಿತ್ತು. ಈ ಮನವಿಗೆ ಕೇಂದ್ರ ಕೃಷಿ ಸಚಿವರು ಹೆಚ್ಚುವರಿ ಕೊಬ್ಬರಿ ಖರೀದಿಗೆ ಒಪ್ಪಿಗೆ ಸೂಚಿಸಿದ್ದಾರೆ ಎಂದಿದ್ದಾರೆ. ಕರ್ನಾಟಕದಿಂದ ಹೆಚ್ಚುವರಿಯಾಗಿ 7500 ಮೆಟ್ರಿಕ್ ಟನ್ ಕೊಬ್ಬರಿ ಖರೀದಿಸಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ. ಇದರಿಂದ ಮಂಡ್ಯ, ಹಾಸನ, ತುಮಕೂರು, ದಕ್ಷಿಣ ಕನ್ನಡ ಹಾಗೂ ರಾಮನಗರ ಜಿಲ್ಲೆಯ ಕೊಬ್ಬರಿ ಬೆಳೆಗಾರರಿಗೆ…

Read More

ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡಗಳ ಹಣಕ್ಕೆ ಕನ್ನ ಹಾಕಿದ್ದು ಗೊತ್ತಾದ ತಕ್ಷಣ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ಕೊಡಬೇಕಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿ ಇಂದು ಸ್ವಾತಂತ್ರ್ಯ ಉದ್ಯಾನವನದ ಬಳಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಸಂಬಂಧ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಮತ್ತು ಸಿಬಿಐ ತನಿಖೆಗೆ ಒತ್ತಾಯಿಸಿ ಈ ಪ್ರತಿಭಟನೆ ನಡೆಯಿತು. ದೊಡ್ಡ ದೊಡ್ಡವರು ಹೇಳಿದ್ದಕ್ಕೆ ಹಣ ದುರುಪಯೋಗ ಎಂಬ ಮಾಹಿತಿಯನ್ನು ಇ.ಡಿ. ಕಸ್ಟಡಿಯಲ್ಲಿರುವ ನಾಗೇಂದ್ರ ಹೇಳಿದ್ದಾಗಿ ಮಾಹಿತಿ ಇದೆ. ಯಾವತ್ತು ಸರಕಾರ ಬೀಳುತ್ತೋ ಗೊತ್ತಿಲ್ಲ ಎಂಬ ಆತಂಕ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಸಚಿವರನ್ನು ಕಾಡುತ್ತಿದೆ. ಅವರಿಗೆ ಈಗ ನಿದ್ರೆ ಬರುತ್ತಿಲ್ಲ ಎಂದು ತಿಳಿಸಿದರು. ಇ.ಡಿ. ಕಸ್ಟಡಿಯಲ್ಲಿರುವ ನಾಗೇಂದ್ರ ಎಲ್ಲಿ ತಮ್ಮ ಹೆಸರು ಹೇಳುವರೋ ಎಂಬ ಭಯ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳನ್ನು ಕಾಡುತ್ತಿದೆ. ಒಂದೆಡೆ ಎಸ್‍ಇಪಿ,…

Read More

ಬೆಂಗಳೂರು: 56 ಸಾವಿರ ಕೋಟಿಯನ್ನು ಬಜೆಟ್‍ನಲ್ಲಿ ಗ್ಯಾರಂಟಿಗಾಗಿ ಇಟ್ಟಿದ್ದಾಗಿ ಹೇಳಿದ ಕಾಂಗ್ರೆಸ್ಸಿಗರು ದಲಿತರ ಹಣವನ್ನು ದಲಿತರಿಗೇ ನೀಡಿಲ್ಲ. 25 ಸಾವಿರಕ್ಕೂ ಹೆಚ್ಚು ಕೋಟಿ ದಲಿತರ ಹಣವನ್ನು ಲೂಟಿ ಮಾಡಿದ್ದೀರಲ್ಲಾ? ನಿಮಗೆ ನಾಚಿಕೆ ಆಗುವುದಿಲ್ಲವೇ ಎಂದು ಸಿದ್ದರಾಮಯ್ಯ ಅವರನ್ನು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದ್ದಾರೆ. ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿ ಸ್ವಾತಂತ್ರ್ಯ ಉದ್ಯಾನವನದ ಬಳಿ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದಂತ ಅವರು, ಅನೇಕ ಜನಪರ ಕಾರ್ಯಕ್ರಮಗಳನ್ನು ನಮ್ಮ ಬಿಜೆಪಿ ಸರಕಾರ ಕೊಟ್ಟಿತ್ತು. ಮೋಸದ-ಆಕರ್ಷಣೆಯ ಗ್ಯಾರಂಟಿಗಳನ್ನು ಮುಂದಿಟ್ಟು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷವು ಇವತ್ತು ದಲಿತರ ಹಣವನ್ನು ದುರುಪಯೋಗ ಮಾಡಿಕೊಂಡಿದೆ. 56 ಸಾವಿರ ಕೋಟಿಯನ್ನು ಬಜೆಟ್‍ನಲ್ಲಿ ಗ್ಯಾರಂಟಿಗಾಗಿ ಇಟ್ಟಿದ್ದಾಗಿ ಹೇಳಿದ ಕಾಂಗ್ರೆಸ್ಸಿಗರು ದಲಿತರ ಹಣವನ್ನು ದಲಿತರಿಗೇ ನೀಡಿಲ್ಲ. 25 ಸಾವಿರಕ್ಕೂ ಹೆಚ್ಚು ಕೋಟಿ ದಲಿತರ ಹಣವನ್ನು ಲೂಟಿ ಮಾಡಿದ್ದೀರಲ್ಲಾ? ನಿಮಗೆ ನಾಚಿಕೆ ಆಗುವುದಿಲ್ಲವೇ ಎಂದು ಸಿದ್ದರಾಮಯ್ಯರನ್ನು ಪ್ರಶ್ನಿಸಿದರು. ಇದು ಲೂಟಿಕೋರರ ಸರಕಾರ.…

Read More

ಉತ್ತರ ಪ್ರದೇಶ: ಇಲ್ಲಿನ ಗೊಂಡಾ ಬಳಿ ಚಂಡೀಗಢ-ದಿಬ್ರುಘರ್ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿದ ನಂತರ, ಕೇಂದ್ರ ಸರ್ಕಾರವು ಸಂತ್ರಸ್ತರಿಗೆ ಹೆಚ್ಚಿನ ಪರಿಹಾರ ಪ್ಯಾಕೇಜ್ಗಳನ್ನು ಘೋಷಿಸಿದೆ. ಈ ಸಂಬಂಧ ರೈಲ್ವೆ ಸಚಿವಾಲಯದಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ ತಲಾ 2.5 ಲಕ್ಷ ರೂ. ಸಣ್ಣಪುಟ್ಟ ಗಾಯಗಳಿಗೆ ತಲಾ 50,000 ರೂ ಪರಿಹಾರವನ್ನು ಘೋಷಣೆ ಮಾಡಲಾಗಿದೆ. https://twitter.com/ANI/status/1813916578301538388 ಇನ್ನೂ ಉತ್ತರ ಪ್ರದೇಶದ ಗೊಂಡಾ ಬಳಿ ಚಂಡೀಗಢ-ದಿಬ್ರುಘರ್ ಎಕ್ಸ್ಪ್ರೆಸ್ ಹಳಿ ತಪ್ಪಿದ್ದರ ಸಂಬಂಧ ಉನ್ನತ ಮಟ್ಟದ ತನಿಖೆಗೂ ಕೇಂದ್ರ ರೈಲ್ವೆ ಸಚಿವಾಲಯವು ಆದೇಶಿಸಿದೆ. ಅಂದಹಾಗೇ ಗೊಂಡಾ ಬಳಿ ಚಂಡೀಗಢ-ದಿಬ್ರುಘರ್ ಎಕ್ಸ್ ಪ್ರೆಸ್ ಹಳಿ ತಪ್ಪಿ ನಡೆದಂತ ಅಪಘಾತದಲ್ಲಿ ಈವರೆಗೆ ನಾಲ್ವರು ಸಾವನ್ನಪ್ಪಿದ್ದೂ 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ರೈಲ್ವೆ ಸಚಿವಾಲಯದಿಂದ ಸಹಾಯವಾಣಿ ಸಂಖ್ಯೆಯನ್ನು ಕೂಡ ಆರಂಭಿಸಲಾಗಿದೆ. https://twitter.com/drm_lko/status/1813887405562491017 https://kannadanewsnow.com/kannada/bengaluru-hc-attempts-to-attack-asi-after-scuffle-between-police-personnel-at-police-station/ https://kannadanewsnow.com/kannada/sc-directs-nta-to-declare-neet-ug-results-of-all-candidates-by-friday/

Read More

ಬೆಂಗಳೂರು: ಕಾಂಗ್ರೆಸ್ ಪಕ್ಷದ ಶ್ಯಾಡೋ ನಾಯಕ ಡಿ.ಎಸ್.ವೀರಯ್ಯ ಅವ್ಯವಹಾರ ಆರೋಪದಡಿ ಕಾಂಗ್ರೆಸ್ ಆಶ್ರಯ ಪಡೆಯುತ್ತಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮೂಡಾ ಹಗರಣ, ST ವಿಶೇಷ ನಿಧಿ ದುರ್ಬಳಕೆಯ ಮುಖಭಂಗ ತಪ್ಪಿಸಿಕೊಳ್ಳಲು ಕಾಂಗ್ರೆಸ್ ಕುತಂತ್ರ ನಡೆಸುತ್ತಿದೆ ಅಂತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು, ಅಖಿಲ ಭಾರತ ದಲಿತ ಕ್ರಿಯಾ ಸಮಿತಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ನಿಕಟಪೂರ್ವ), ಬಿಜೆಪಿ ಎಸ್ಸಿ ಮೋರ್ಚಾದ ಡಾ. ಚಿ.ನಾ ರಾಮು ಕಿಡಿಕಾರಿದ್ದಾರೆ. ಈ ಕುರಿತಂತೆ ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಮಾಜಿ ವಿಧಾನಪರಿಷತ್ ಸದಸ್ಯ, ದೇವರಾಜ ಅರಸು ಟ್ರಕ್ ಟರ್ಮಿನಲ್ಸ್ ನಿಗಮದ ಮಾಜಿ ಅಧ್ಯಕ್ಷ ಡಿ.ಎಸ್.ವೀರಯ್ಯ ಅವರನ್ನು ನಿಗಮದ ನಿಧಿ ದುರ್ಬಳಕೆ ಆರೋಪದಲ್ಲಿ ಸಿಐಡಿ ಬಂಧಿಸಿದೆ.‌ ಈ ಬಂಧನವನ್ನು ಬಿಜೆಪಿ ಪಕ್ಷದ ಭ್ರಷ್ಟಾಚಾರ ಪ್ರಕರಣ ಎಂಬಂತೆ ಬಿಂಬಿಸಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಫಲ ಪ್ರಯತ್ನ ಮಾಡಿದೆ ಅಂತ ವಾಗ್ಧಾಳಿ ನಡೆಸಿದ್ದಾರೆ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದಿಂದ ರಾಜ್ಯದ ಜನರ ಮುಂದೆ ತೀವ್ರ ಮುಖಭಂಗಕ್ಕಿಡಾಗಿರುವ ಕಾಂಗ್ರೆಸ್…

Read More

ಬೆಂಗಳೂರು: ಪೊಲೀಸ್ ಠಾಣೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗಳು ಗಲಾಟೆ ಮಾಡಿಕೊಂಡು. ASI ಮೇಲೆ, HC ಹಲ್ಲೆಗೂ ಯತ್ನಿಸಿದ್ದಾರೆ ಎನ್ನಲಾದಂತ ಘಟನೆ  ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದಿದೆ ಎನ್ನಲಾಗುತ್ತಿದೆ. ಬೆಂಗಳೂರಿನ ಪುಟ್ಟೇನಹಳ್ಳಿ ಠಾಣೆಯಲ್ಲಿ ಎಎಸ್ಐ ಮಂಜುನಾಥ್ ಹಾಗೂ ಹೆಚ್ ಕಾನ್ಸ್ ಸ್ಟೇಬಲ್ ಅಂಜನಾಮೂರ್ತಿ ನಡುವೆ ಗಲಾಟೆಯಾಗಿದೆ ಎಂದು ಹೇಳಲಾಗುತ್ತಿದೆ. ಜುಲೈ.16ರಂದು ಪ್ರಕರಣವೊಂದರ ಬಗ್ಗೆ ಎಎಸ್ಐ ಮಂಜುನಾಥ್ ಅವರು ಬೇರೆ ಸಿಬ್ಬಂದಿಗಳೊಂದಿಗೆ ಮಾತನಾಡುತ್ತಿದ್ದಂತ ಸಂದರ್ಭದಲ್ಲಿ ಹೆಚ್ ಸಿ ಅಂಜನಾಮೂರ್ತಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಇದಷ್ಟೇ ಅಲ್ಲದೇ ಎಎಸ್ಐ ಮಂಜುನಾಥ್ ಮೇಲೆ ಹೆಡ್ ಕಾನ್ಸ್ ಸ್ಟೇಬಲ್ ಅಂಜನಾಮೂರ್ತಿ ಅವರು ಹಲ್ಲೆಗೂ ಮುಂದಾಗಿದ್ದಾರೆ. ಈ ವೇಳೆಯಲ್ಲಿ ಠಾಣೆಯಲ್ಲಿದ್ದಂತ ಇತರೆ ಸಿಬ್ಬಂದಿಗಳು ಜಗಳ ಬಿಡಿಸಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಈ ಘಟನೆಯಿಂದ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿರುವಂತ ಎಎಸ್ಐ ಮಂಜುನಾಥ್ ಆಘಾತಕ್ಕೊಳಗಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈಗಾಗಲೇ ಎಎಸ್ಐ ಮಂಜುನಾಥ್ ಎರಡು ಸ್ಟಂಟ್ ಅಳವಡಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಕುರಿತಂತೆ ಕನ್ನಡ ನ್ಯೂಸ್ ನೌ ಸಂಪಾದಕ ವಸಂತ ಬಿ ಈಶ್ವರಗೆರೆ ಅವರು…

Read More