Author: kannadanewsnow09

ನವದೆಹಲಿ: “ಮೊದಲು ದುಡ್ಡು ಕೊಡಿಸಲಿ, ಕೇವಲ ಖಾಲಿ ಮಾತನಾಡುವುದು ಬೇಡ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಛೇಡಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಶಿವಕುಮಾರ್ ಅವರು ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ಟನಲ್ ರಸ್ತೆ ವಿಚಾರವಾಗಿ ನಿತಿನ್ ಗಡ್ಕರಿ ಅವರನ್ನು ಕುಮಾರಸ್ವಾಮಿ ಅವರು ಭೇಟಿಯಾಗಿ ಚರ್ಚೆ ನಡೆಸಿರೋದು ಕ್ರೆಡಿಟ್ ವಾರ್ ಆಗುತ್ತಿದೆಯೇ ಎಂದು ಮಾಧ್ಯಮದವರು ಕೇಳಿದಾಗ ಅವರು ಹೀಗೆ ಪ್ರತಿಕ್ರಿಯಿಸಿದರು. “ಕುಮಾರಸ್ವಾಮಿ ಅವರ ಸಲಹೆ ಮತ್ತು ನಿಮ್ಮ ಸಲಹೆಯನ್ನೂ ನಾನು ಸ್ವೀಕಾರ ಮಾಡುತ್ತೇನೆ” ಎಂದರು. ಸಂಪುಟ ಬದಲಾವಣೆಗಾಗಿ ಮುಖ್ಯಮಂತ್ರಿ ದೆಹಲಿ ಭೇಟಿ ನೀಡಿದ್ದಾರೆಯೇ ಎಂದು ಕೇಳಿದಾಗ, “ಸದ್ಯಕ್ಕೆ ಸಂಚಿವ ಸಂಪುಟ ಬದಲಾವಣೆ ಕುರಿತು ಯಾವುದೇ ಚರ್ಚೆಯಿಲ್ಲ. ನಾವು ಬಂದಿರುವುದು ಅಭಿವೃದ್ದಿ ವಿಚಾರಗಳನ್ನು ಚರ್ಚೆ ನಡೆಸಲು. ಬೆಂಗಳೂರಿನಲ್ಲಿ ಒಂದಷ್ಟು ರಸ್ತೆಗಳನ್ನು ಅಗಲೀಕರಣ ಮಾಡಬೇಕಿದೆ. ಇದಕ್ಕೆ ರಕ್ಷಣಾ ಇಲಾಖೆ ಭೂಮಿಗಳ ಅವಶ್ಯಕತೆಯಿದೆ. ಈ ಕಾರಣಕ್ಕೆ ಹಾಗೂ ದಸರಾ ವೇಳೆ ಚುಟುಕು ಏರ್ ಶೋ ನಡೆಸಲು ರಕ್ಷಣಾ ಸಚಿವರನ್ನು ಭೇಟಿ ಮಾಡುವುದಕ್ಕಾಗಿ ಬಂದಿದ್ದೇವೆ”…

Read More

ನವದೆಹಲಿ: “ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ಒಟ್ಟು ₹11,122.76 ಕೋಟಿ ಅನುದಾನಕ್ಕಾಗಿ ಮನವಿ ಸಲ್ಲಿಸಿದ್ದೇವೆ. ಕುಡಿಯುವ ನೀರಿನ ಉದ್ದೇಶದ ಎತ್ತಿನಹೊಳೆ ಯೋಜನೆಗೆ ಶೇ.25 ರಷ್ಟು ಆರ್ಥಿಕ ಸಹಾಯ, ಕಳಸಾ ಬಂಡೂರಿ ಯೋಜನೆ, ಕೃಷ್ಣಾ ನದಿ ನೀರಿನ ವಿಚಾರವಾಗಿ ಕೇಂದ್ರ ಜಲಶಕ್ತಿ ಹಾಗೂ ಪರಿಸರ ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ನವದೆಹಲಿಯ ಕರ್ನಾಟಕ ಭನವದಲ್ಲಿ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬುಧವಾರ ಮಾಧ್ಯಮಗೋಷ್ಠಿ ನಡೆಸಿ ದೆಹಲಿ ಪ್ರವಾಸ ಹಾಗೂ ಕೇಂದ್ರ ಸಚಿವರ ಭೇಟಿ ವಿಚಾರವಾಗಿ ಮಾಹಿತಿ ನೀಡಿದರು. “ಆರು ನೀರಾವರಿ ಯೋಜನೆಗಳಾದ ಸೊನ್ನತಿ ಏತ ನೀರಾವರಿ ಯೋಜನೆಗೆ ₹ 804.66 ಕೋಟಿ, ಯುಕೆಪಿಯ ಇಂಡಿ ಶಾಖಾ ಕಾಲುವೆಗೆ ₹2,666.70 ಕೋಟಿ, ಮಲಪ್ರಭಾ ಕಾಲುವೆ ಮೂರನೇ ಹಂತಕ್ಕೆ ₹3000 ಕೋಟಿ, ಘಟಪ್ರಭಾ ಬಲದಂಡೆ ಕಾಲುವೆ ಮತ್ತು ಚಿಕ್ಕೋಡಿ ಶಾಖಾ ನಾಲೆಗೆ ₹1,444.42 ಕೋಟಿ, ಬೆಣ್ಣೆಹಳ್ಳದ ಪ್ರವಾಹ ನಿಯಂತ್ರಣ ಹಾಗೂ ನಿರ್ವಹಣೆಗಾಗಿ ₹1,610 ಕೋಟಿ…

Read More

ಬೆಂಗಳೂರು: ಪರಿಶಿಷ್ಟ ಜಾತಿಯ ಸಮೀಕ್ಷಾ ಕರ್ತವ್ಯದ ವೇಳೆಯಲ್ಲಿ ಸ್ಟಿಕ್ಕರ್ ಅಂಟಿಸಿ ಸಮೀಕ್ಷೆ ನಡೆಸದೇ ಕಳ್ಳಾಟ ಮೆರೆದಿದ್ದಂತವರಿಗೆ ಅಮಾನತು ಶಿಕ್ಷೆ ವಿಧಿಸಲಾಗಿತ್ತು. ಹೀಗೆ ಬಿಬಿಎಂಪಿಯಿಂದ ವಿಧಿಸಿದ್ದಂತ ಐವರು ನೌಕರರ ಅಮಾನತು ಆದೇಶವನ್ನು ವಾಪಾಸ್ ಪಡೆಯಲಾಗಿದೆ. ಹೌದು ಬಿಬಿಎಂಪಿಯ ಐವರು ನೌಕರರ ಅಮಾನತು ಆದೇಶವನ್ನು ಮುಖ್ಯ ಆಯುಕ್ತರು ಹಿಂಪಡೆದಿದ್ದಾರೆ. ಬಿಬಿಎಂಪಿಯ ಆರೋಗ್ಯಾಧಿಕಾರಿ ಶ್ರೀಜೇಶ್, ಕಿರಿಯ ಆರೋಗ್ಯ ಪರಿವೀಕ್ಷಕ ವಿಜಯ್ ಕುಮಾರ್, ಕಂದಾಯ ವಸೂಲಿದಾರರಾದ ಶಿವರಾಜ್ ಹಾಗೂ ಮಹಾದೇವ್ ಅವರ ಅಮಾನತು ಆದೇಶ ಹಿಂಪಡೆಯಲಾಗಿದೆ. ಅಂದಹಾಗೇ ಈ ಐವರು ಅಧಿಕಾರಿಗಳನ್ನು ಸಮೀಕ್ಷಾ ಕಾರ್ಯ ನಡೆಸದೇ ಸ್ಟಿಕ್ಕರ್ ಮಾತ್ರವೇ ಅಂಟಿಸಿ ಕಳ್ಳಾಟ ಮಾಡಿದ್ದ ಆರೋಪದಡಿ ಅಮಾತುಗೊಳಿಸಲಾಗಿತ್ತು. ಇದೀಗ ಆ ಆಮಾನತು ಆದೇಶವನ್ನು ಬಿಬಿಎಂಪಿಯ ಮುಖ್ಯ ಆಯುಕ್ತರು ಹಿಂಪಡೆದು ಆದೇಶಿಸಿದ್ದಾರೆ. https://kannadanewsnow.com/kannada/an-american-court-has-declared-baiju-ravindran-guilty-under-allegations-of-judicial-contempt/ https://kannadanewsnow.com/kannada/the-court-ordered-to-provide-nia-custody-for-6-days-for-three-suspected-terrorists-arrested-in-the-state/

Read More

ಎಡ್-ಟೆಕ್ ದೈತ್ಯ BYJU’s ನ ಸಹ-ಸಂಸ್ಥಾಪಕ ಬೈಜು ರವೀಂದ್ರನ್ ಅವರನ್ನು ಜುಲೈ 7, ಸೋಮವಾರದಂದು ಅಮೆರಿಕದ ಡೆಲವೇರ್ ದಿವಾಳಿತನ ನ್ಯಾಯಾಲಯವು ನ್ಯಾಯಾಂಗ ನಿಂದನೆಯ ಆರೋಪದಲ್ಲಿ ತಪ್ಪಿತಸ್ಥರೆಂದು ಘೋಷಿಸಿತು. ಜುಲೈ 1 ರಿಂದ ನ್ಯಾಯಾಲಯವು ಅವರ ಮೇಲೆ ದಿನಕ್ಕೆ USD 10,000 ಮೌಲ್ಯದ ನಾಗರಿಕ ನಿರ್ಬಂಧಗಳನ್ನು ವಿಧಿಸಿತು. ಡೆಲವೇರ್ ನ್ಯಾಯಾಲಯವು “ಅವರ ಮೇಲೆ ವೈಯಕ್ತಿಕ ನ್ಯಾಯವ್ಯಾಪ್ತಿಯನ್ನು” ಹೊಂದಿಲ್ಲ ಎಂದು ಬೈಜು ಸಮರ್ಥಿಸಿಕೊಂಡಿತ್ತು. ಆದಾಗ್ಯೂ, ಪ್ರಕರಣದಲ್ಲಿ ಸಾಲದಾತರು ಸಲ್ಲಿಸಿದ ಹೊಸ ಪುರಾವೆಗಳೊಂದಿಗೆ ನ್ಯಾಯಾಲಯವು ಬೇರೆ ರೀತಿಯಲ್ಲಿ ತೀರ್ಪು ನೀಡಿತು. ಈ ವರ್ಷದ ಏಪ್ರಿಲ್‌ನಲ್ಲಿ ಸಲ್ಲಿಸಲಾದ ಈ ನಿರ್ದಿಷ್ಟ ಪ್ರಕರಣವು, ಸಾಲ ವಂಚನೆ ಆರೋಪದ ವಿಷಯದಲ್ಲಿ ಬೈಜು ವಿರುದ್ಧ ಯುಎಸ್‌ನಲ್ಲಿ ಮೊದಲನೆಯದು. ಇದು ಅವರ ಪತ್ನಿ ದಿವ್ಯಾ ಗೋಕುಲ್‌ನಾಥ್ ಮತ್ತು ನಿಕಟ ಸಹಚರ ಅನಿತಾ ಕಿಶೋರ್ ಅವರ ಹೆಸರನ್ನು ಸಹ ಹೆಸರಿಸಿದೆ. ಪ್ರಾಥಮಿಕ ಪ್ರಕರಣದಲ್ಲಿ ಬೈಜು ಅವರ ಸಹೋದರ ರಿಜು ರವೀಂದ್ರನ್ ಅವರಿಗೆ ಜುಲೈ 1 ರಿಂದ ಪ್ರಾರಂಭವಾಗುವ ದಿನಕ್ಕೆ USD 10,000 ದಂಡದೊಂದಿಗೆ ಈಗಾಗಲೇ…

Read More

ಬೆಂಗಳೂರು: ನಗರದಲ್ಲಿ ದಿನೇ ದಿನೇ ಕ್ರೈಂಗಳ ಸಂಖ್ಯೆ ಹೆಚ್ಚಾಗುತ್ತಿವೆ. ಇದೀಗ ನಗರದಲ್ಲಿ ಸ್ನೇಹಿತನ ಮನೆಗೆ ಬಂದಿದ್ದಂತ ಮಹಿಳೆಯ ಮೇಲೆಯೇ ಗ್ಯಾಂಗ್ ರೇಪ್ ನಡೆಸಿದಂತ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನ ದೊಡ್ಡ ನಾಗಮಂಗಲದ ಸಾಯಿ ಲೇಔಟ್ ನಲ್ಲಿ ಸ್ನೇಹಿತನ ಮನೆಗೆ ಬಂದಿದ್ದಂತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವಂತ ಘಟನೆ ನಡೆದಿದೆ. ಈ ಘಟನೆಯೂ ಮೂರು ದಿನಗಳ ಹಿಂದೆ ನಡೆದಿದ್ದು, ಈಗ ಸಂತ್ರಸ್ತ ಮಹಿಳೆ ನೀಡಿದಂತ ದೂರಿನ ಹಿನ್ನಲೆಯಲ್ಲಿ ಬೆಳಕಿಗೆ ಬಂದಿದೆ. ಸ್ನೇಹಿತನ ಮನೆಗೆ ತೆರಳಿದ್ದಂತ ಸಂತ್ರಸ್ತ ಮಹಿಳೆಯನ್ನು ಇಬ್ಬರು ಕಾಮುಕರು ತಾವು ಪೊಲೀಸರೆಂದು ಬೆದರಿಸಿ ಅತ್ಯಾಚಾರ ಎಸಗಿದ್ದಾರೆ. ಇದಷ್ಟೇ ಅಲ್ಲದೇ ಅತ್ಯಾಚಾರದ ಬಳಿಕ ಮಹಿಳೆಯ ಬಳಿ ಹಣಕ್ಕೂ ಡಿಮ್ಯಾಂಡ್ ಮಾಡಿದ್ದಾರೆ. ಮಹಿಳೆಯಿಂದ ಹಣ ಪಡೆದು, ಆಕೆಯ ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದಾರೆ. ಈ ಘಟನೆಯ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರು ಶಂಕಿತ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. https://kannadanewsnow.com/kannada/the-government-is-preparing-to-implement-the-bilingual-formula-in-the-state-instructions-to-prepare-the-draft/ https://kannadanewsnow.com/kannada/the-court-ordered-to-provide-nia-custody-for-6-days-for-three-suspected-terrorists-arrested-in-the-state/

Read More

ಬೆಂಗಳೂರು: ರಾಜ್ಯದಲ್ಲಿ ದ್ವಿಭಾಷಾ ಸೂತ್ರವನ್ನು ಜಾರಿಗೊಳಿಸುವ ನಿರ್ಧಾರವನ್ನು ಸರ್ಕಾರ ಕೈಗೊಳ್ಳುತ್ತಿದೆ. ಈ ಕಾರಣದಿಂದಾಗಿ ಮುಂದಿನ ಹಂತದಲ್ಲಿ ಕರಡು ಸಿದ್ಧಪಡಿಸಲು ರಾಜ್ಯ ಸರ್ಕಾರ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಹೇಳಲಾಗುತ್ತಿದೆ. ಈ ಸಂಬಂಧ ಕಾನೂನು ಇಲಾಖೆಯ ಜೊತೆಗೆ ಸಮಾಲೋಚನೆಯನ್ನು ನಡೆಸು ಸಾಧ್ಯತೆ ಇದೆ. ಕರಡು ಪ್ರತಿ ಸಿದ್ಧಪಡಿಸಿ, ಸಿಎಂ ಸಿದ್ಧರಾಮಯ್ಯ ಜೊತೆಗೆ ಚರ್ಚೆ ನಡೆಸಲು ತಯಾರಿ ನಡೆಸುತ್ತಿದೆ ಎನ್ನಲಾಗುತ್ತಿದೆ. ತಮಿಳುನಾಡು ಹಾಗೂ ಮಹಾರಾಷ್ಟ್ರ ಮಾದರಿಯಲ್ಲೇ ದ್ವಿಭಾಷಾ ಸೂತ್ರ ಜಾರಿಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಕುರಿತು ಶೀಘ್ರವೇ ಅಧಿಕಾರಿಗಳ ತಂಡ ಕೂಡ ರಚನೆಯಾಗುವಂತ ಸಾಧ್ಯತೆ ಇದೆ. https://kannadanewsnow.com/kannada/the-husband-and-daughter-of-mla-c-p-yogeshwar-have-filed-a-complaint-against-him-with-the-congress-high-command/ https://kannadanewsnow.com/kannada/the-court-ordered-to-provide-nia-custody-for-6-days-for-three-suspected-terrorists-arrested-in-the-state/

Read More

ಬೆಂಗಳೂರು: ಚನ್ನಪಟ್ಟಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಸಿ.ಪಿ ಯೋಗೇಶ್ವರ್ ವಿರುದ್ಧವೇ ಪತ್ನಿ ಹಾಗೂ ಪುತ್ರಿ ಸಿಡಿದೆದ್ದಿದ್ದಾರೆ. ಸಿ.ಪಿ ಯೋಗೇಶ್ವರ್ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಗೆ ಪುತ್ರಿ, ಪತ್ನಿ ದೂರು ನೀಡಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿಯಾಗಿರುವಂತ ರಣದೀಪ್ ಸುರ್ಜೇವಾಲಾ ಅವರನ್ನು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಿ.ಪಿ ಯೋಗೇಶ್ವರ್ ಅವರ ಪತ್ನಿ ಮಾಳವಿಕಾ ಸೋಲಂಕಿ ಹಾಗೂ ಪುತ್ರಿ ನಿಶಾ ಭೇಟಿಯಾಗಿ ಈ ದೂರು ಸಲ್ಲಿಸಿದ್ದಾರೆ. ಸುರ್ಜೇವಾಲಾ ಅವರಿಗೆ ಸಲ್ಲಿಸಿರುವಂತ ದೂರಿನಲ್ಲಿ ಸಿ.ಪಿ ಯೋಗೇಶ್ವರ್ ತಮ್ಮ ಕುಟುಂಬಕ್ಕೆ ತೊಂದರೆ ನೀಡುತ್ತಿದ್ದಾರೆ. ಪದೇ ಪದೇ ಅವರು ಕೇಸ್ ಹಾಕಿ ಕೋರ್ಟ್, ಕಚೇರಿ ಅಲೆಸುತ್ತಿದ್ದಾರೆ. ನಾವು ಕಾನೂನಾತ್ಮಕವಾಗಿ ದೂರವಾಗಿಲ್ಲದ ಕಾರಣ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ. ಹೀಗಾಗಿ ಸಿ.ಪಿ ಯೋಗೇಶ್ವರ್ ನೀಡುತ್ತಿರುವಂತ ಕಿರುಕುಳ ಸರಿಪಡಿಸುವಂತೆ ಮನವಿ ಮಾಡಿದ್ದಾರೆ. https://kannadanewsnow.com/kannada/a-4th-grade-student-dies-of-a-heart-attack-while-listening-to-a-lesson/ https://kannadanewsnow.com/kannada/the-court-ordered-to-provide-nia-custody-for-6-days-for-three-suspected-terrorists-arrested-in-the-state/

Read More

ಚಾಮರಾಜನಗರ: ಜಿಲ್ಲೆಯಲ್ಲಿ ವಿದ್ಯಾರ್ಥಿಯೊಬ್ಬ ಪಾಠ ಕೇಳುತ್ತಿದ್ದಾಗಲೇ ಕುಸಿದು ಬಿದ್ದು ಕುಳಿತಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಕುರಬರಗೇರಿಯಲ್ಲಿ 4ನೇ ತರಗತಿ ವಿದ್ಯಾರ್ಥಿ ಮನೋಜ್ ಕುಮಾರ್(10) ಪಾಠ ಕೇಳುತ್ತಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಮೃತ ಮನೋಜ್ ಕುಮಾರ್ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರಂತೆ. ಮನೋಜ್ ಗೆ ಹೃದಯದಲ್ಲಿ ಹೋಲ್ ಇತ್ತು ಎಂಬುದಾಗಿ ಮಾಹಿತಿ ಲಭ್ಯವಾಗಿದೆ. ಈ ಕಾರಣದಿಂದ ಜಯದೇವ, ಅಪಲೋ ಆಸ್ಪತ್ರೆಯಲ್ಲಿ ಮನೋಜ್ ಕುಮಾರ್ ಚಿಕಿತ್ಸೆ ಪಡೆಯುತ್ತಿದ್ದುದಾಗಿ ತಿಳಿದು ಬಂದಿದೆ. https://kannadanewsnow.com/kannada/the-court-ordered-to-provide-nia-custody-for-6-days-for-three-suspected-terrorists-arrested-in-the-state/

Read More

ಬೆಂಗಳೂರು: ನಿನ್ನೆ ಬೆಂಗಳೂರು ಹಾಗೂ ಕೋಲಾರದಲ್ಲಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ದಾಳಿ ನಡೆಸಿ, ಮೂವರು ಶಂಕಿತ ಉಗ್ರರನ್ನು ಬಂಧಿಸಿದ್ದರು. ಇಂತಹ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಇದೀಗ ಕೋರ್ಟ್ 6 ದಿನಗಳ ಕಾಲ ಹೆಚ್ಚಿನ ವಿಚಾರಣೆಗಾಗಿ ಎನ್ಐಎ ವಶಕ್ಕೆ ನೀಡಿ ಆದೇಶಿಸಿದೆ. ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ನಿನ್ನೆ ಕೋಲಾರ ಹಾಗೂ ಬೆಂಗಳೂರಿನ ವಿವಿಧೆಡೆ ದಾಳಿ ನಡೆಸಿ, ಮೂವರು ಶಂಕಿತ ಉಗ್ರರನ್ನು ಬಂಧಿಸಿದ್ದರು. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮನೋ ವೈದ್ಯ ಡಾ.ನಾಗರಾಜ್ ಶಂಕಿತ ಉಗ್ರರಿಗೆ ಸಹಾಯ ಮಾಡುತ್ತಿದ್ದ ಕಾರಣ ಬಂಧಿಸಲಾಗಿತ್ತು. ಇನ್ನೂ ಉತ್ತರ ವಿಭಾಗದ ನಗರ ಶಸ್ತ್ರ ಮೀಸಲು ಪಡೆಯ ಎಎಸ್ಐ ಚಾಂದ್ ಪಾಷಾ ಹಾಗೂ ಶಂಕಿತ ಉಗ್ರ ಜುನೈದ್ ಅಹಮದ್ ತಾಯಿ ಅನೀಸ್ ಫಾತಿಮಾಳನ್ನು ಎನ್ಐಎ ಬಂಧಿಸಲಾಗಿತ್ತು. ಇಂದು ಸಿಟಿ ಸಿವಿಲ್ ಕೋರ್ಟ್ ಗೆ ಶಂಕಿತ ಮೂವರು ಉಗ್ರರನ್ನು ಹಾಜರುಪಡಿಸಲಾಗಿತ್ತು. ಈ ಮೂವರನ್ನು 6 ದಿನಗಳ ಕಾಲ ಎನ್ಐಎ ವಶಕ್ಕೆ ಹೆಚ್ಚಿನ ವಿಚಾರಣೆಗಾಗಿ ನೀಡಿ ಕೋರ್ಟ್ ಆದೇಶಿಸಿದೆ.

Read More

ಶಿವಮೊಗ್ಗ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 2025-26ನೇ ಸಾಲಿನ ಮೆಟ್ರಿಕ್ ಪೂರ್ವ ಮತ್ತು ನಂತರದ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಆಸಕ್ತ ವಿದ್ಯಾರ್ಥಿಗಳು ಪೋರ್ಟಲ್‌ನಲ್ಲಿ https://ssp.postmatric.karnataka.gov.in/homepage.aspx , ಪ್ರಿ-ಮೆಟ್ರಿಕ್ ವಿದ್ಯಾರ್ಥಿಗಳು https://ssp.postmatric.karnataka.gov.in/ssppre, ಪೋಸ್ಟ್-ಮೆಟ್ರಿಕ್ ವಿದ್ಯಾರ್ಥಿಗಳು https://ssp.postmatric.karnataka.gov.in/post sa/signing.aspx ಮೂಲಕ ಅರ್ಜಿ ಸಲ್ಲಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಆಲ್ಕೋಳ ಸರ್ಕಲ್, ಬಿ.ಎಸ್.ಎನ್.ಎಲ್. ಕಚೇರಿ ಪಕ್ಕ, ಸಾಗರ ರಸ್ತೆ, ಶಿವಮೊಗ್ಗ, ದೂ.ಸಂ.: 08182- 251676 ಹಾಗೂ ಶಿವಮೊಗ್ಗ -9980150110, ಭದ್ರಾವತಿ-7899137243, ಶಿಕಾರಿಪುರ-9741161346, ಸಾಗರ-9535247757, ಸೊರಬ-9110493122, ತೀರ್ಥಹಳ್ಳಿ-9480767638 ಹಾಗೂ ಹೊಸನಗರ-9731922693 ತಾಲೂಕು ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರುಗಳನ್ನು ಸಂಪರ್ಕಿಸುವುದು.

Read More