Author: kannadanewsnow09

ಬೆಂಗಳೂರು: ಸ್ವಯಂ ಉದ್ಯೋಗಿ ಬ್ರಾಹ್ಮಣರಿಗೆ ರೂ. 5 ಲಕ್ಷದವರೆಗೆ ಸರ್ಕಾರಿ ಸಹಾಯಧನ ನೀಡುವ ಸ್ವಾವಲಂಬಿ ಯೋಜನೆ ಫೆ.25ರ ವರೆಗೆ ವಿಸ್ತರಣೆ ಮಾಡಿ, ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಮಾಡಿದ್ದು, ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಕುಟುಂಬಗಳ ಶ್ರೇಯೋಭಿವೃದ್ದಿಗಾಗಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ 5 ಲಕ್ಷದ ವರೆಗಿನ ಸಾಲಕ್ಕೆ ಶೇ.20 ರಷ್ಟು ಸಹಾಯಧನ ನೀಡುವ ಸ್ವಾವಲಂಭಿ ಯೋಜನೆಯನ್ನು ಫೆ.25ರ ವರೆಗೆ ವಿಸ್ತರಿಸಲಾಗಿದೆ ಎಂದಿದೆ. ಘಟಕ ವೆಚ್ಚ/ಗರಿಷ್ಠ ಸಾಲದ ಮೊತ್ತ ರೂ. 5 ಲಕ್ಷದವರೆಗೆ ಇದ್ದಲ್ಲಿ ಈ ಸಾಲದ ಮೊತ್ತದ ಶೇ.20ರಷ್ಟು ಹಣವನ್ನು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸಹಾಯಧನವನ್ನಾಗಿ ನೀಡಲಿದೆ. ವ್ಯಾಪಾರ, ಅಂಗಡಿ, ಹೈನುಗಾರಿಕೆ, ಹೊಲಿಗೆ ವೃತ್ತಿ, ಆಟಿಕೆ ತಯಾರಿಕೆ, ಮೊಬೈಲ್ ಅಂಗಡಿ, ಗುಡಿ ಕೈಗಾರಿಕೆ ಸೇರಿದಂತೆ ಹೆಚ್ಚಿನ ಘಟಕ ವೆಚ್ಚವಿರುವ ಆದಾಯ ಬರುವಂತಹ ಲಾಭದಾಯಕ ಉದ್ಯಮಗಳನ್ನು ಸ್ಥಾಪಿಸಲು ರಾಷ್ತ್ರೀಕೃತ ಬ್ಯಾಂಕ್ ಗಳಿ‌ಂದ ಸಾಲ ಪಡೆದವರು ಈ ಯೋಜನೆ ಅರ್ಹರಾಗಿರುತ್ತಾರೆ ಎಂದು ತಿಳಿಸಿದೆ. ಅರ್ಹರು ಅರ್ಜಿ…

Read More

ಬೆಂಗಳೂರು: ರಾಜ್ಯದಲ್ಲಿನ ಪಿಡಿಓ ವರ್ಗಾವಣೆಗೆ ಸರ್ಕಾರದ ಮಹತ್ವದ ಕ್ರಮ ಕೈಗೊಂಡಿದೆ. ಇನ್ಮುಂದೆ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡುವಂತ ನಿರ್ಧಾರವನ್ನು ಕೈಗೊಂಡಿದೆ. ಈ ಮೂಲಕ ವರ್ಗಾವಣೆ ನಿರೀಕ್ಷೆಯಲ್ಲಿದ್ದ ಪಿಡಿಓಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಮಾಹಿತಿಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಹಂಚಿಕೊಂಡಿದ್ದು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ವರ್ಗಾವಮೆಯನ್ನು ಮುಂದಿನ ವರ್ಷದಿಂದ ಕೌನ್ಸೆಲಿಂಗ್ ಮೂಲಕ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಪಿಡಿಒಗಳು ಸಚಿವರು, ಶಾಸಕರಿಗೆ ಆಪ್ತ ಸಹಾಯಕರಾಗಲು ಒಪ್ಪಿಗೆ ಕೊಡುತ್ತಿಲ್ಲ. ಇದರಿಂದ ಗ್ರಾಮಗಳಲ್ಲಿನ ಕೆಲಸ ಕಾರ್ಯಗಳಿಗೆ ತೊಂದರೆ ಆಗುತ್ತಿದೆ. 60 ರಿಂದ 70 ಜನ ಪಿಡಿಒಗಳು ಆಪ್ತ ಸಹಾಯಕರಾಗಿ ಹೋದರೆ, ದೊಡ್ಡ ಮಟ್ಟದಲ್ಲಿ ಕೊರತೆ ಆಗುತ್ತದೆ. ಆದ್ದರಿಂದ ಆಪ್ತ ಸಹಾಯಕರನ್ನಾಗಿ ತೆಗೆದುಕೊಳ್ಳುವುದನ್ನು ನಿಲ್ಲಿಸುವುದು ಒಳ್ಳೆಯದು. ಪಿಡಿಒಗಳ ವರ್ಗಾವಣೆಯಲ್ಲಿ ಸಮಸ್ಯೆ ಆಗುತ್ತಿದೆ. ಇದನ್ನು ತಪ್ಪಿಸಲು ಕೌನ್ಸೆಲಿಂಗ್‌ ಮೂಲಕವೇ ವರ್ಗಾವಣೆ ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ. https://kannadanewsnow.com/kannada/list-of-candidates-for-rajya-sabha-elections-from-karnataka-announced/ https://kannadanewsnow.com/kannada/upsc-recruitment-2019-heres-the-direct-link-to-apply-for-1056-vacancies/

Read More

ಬೆಂಗಳೂರು: ರಾಜ್ಯದಲ್ಲಿ ಸ್ಥಾಪಿಸಿರುವಂತ ಅನೇಕ ಕಾರ್ಖಾನೆಗಳು ಸರ್ಕಾರದಿಂದ ರಿಯಾಯಿತಿ ಪಡೆಯುತ್ತಿವೆ. ಹೀಗೆ ರಿಯಾಯಿತಿ ಪಡೆದರೂ ಉದ್ಯೋಗವನ್ನು ಸ್ಥಳೀಯರಿಗೆ ನೀಡದೆ ಇರುವಂತ ಆರೋಪ ಕೇಳಿ ಬಂದಿದೆ. ಹೀಗಾಗಿ ಸ್ಥಳೀಯರಿಗೆ ಉದ್ಯೋಗ ನೀಡದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಸಚಿವ ಎಂ.ಬಿ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತಂತೆ ಮಾತನಾಡಿರುವಂತ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಅವರು, ರಾಜ್ಯ ಸರ್ಕಾರದಿಂದ ರಿಯಾಯಿತಿ ಪಡೆದುಕೊಂಡು ಸ್ಥಳೀಯರಿಗೆ ಉದ್ಯೋಗ ನೀಡದೇ ಇದ್ದರೇ ಅಂತಹ ಉದ್ಯಮಗಳು ಅಥವಾ ಕಂಪನಿಗಳಿಂದ ರಿಯಾಯಿತಿಗಳನ್ನು ಹಿಂದಕ್ಕೆ ಪಡೆದುಕೊಳ್ಳಲಾಗುವುದು ಎಂಬುದಾಗಿ ಎಚ್ಚರಿಸಿದ್ದಾರೆ. ನಿಯಮಾವಳಿಗಳ ಪ್ರಕಾರ, ಕೈಗಾರಿಕಾ ಉದ್ದೇಶಗಳಿಗಾಗಿ ಜಮೀನು ಕಳೆದುಕೊಂಡ ಕುಟುಂಬಗಳ ಅರ್ಹರಿಗೆ ಉದ್ಯೋಗ ನೀಡುವುದು ಕಡ್ಡಾಯವಾಗಿದೆ. ಈಗ ಸಂಕಷ್ಟಕ್ಕೆ ಸಿಲುಕಿರುವವರ ಬದುಕನ್ನು ಪರಿಗಣಿಸಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಮತ್ತು ಮಂಗಳೂರು ಎಸ್ಇಜೆಡ್ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಹಲವು ಸಭೆಗಳನ್ನು ನಡೆಸಲಾಗಿದೆ. ಅಲ್ಲದೆ, 2023ರ ನ.7ರಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೂಡ, ಇವರನ್ನೆಲ್ಲ ಉದ್ಯೋಗದಲ್ಲಿ ಮುಂದುವರಿಸಲು…

Read More

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಮ್ಮೇಳನವನ್ನು ಇದೇ ಫೆಬ್ರವರಿ 27, 28ರಂದು ನಡೆಸಲು ನಿಗದಿ ಪಡಿಸಲಾಗಿದೆ. ಈ ಸಮ್ಮೇಳನದಲ್ಲಿ ಭಾಗಿಯಾಗೋದಕ್ಕೆ ಸರ್ಕಾರಿ ನೌಕರರಿದೆ ಎರಡು ದಿನ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲಾಗಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ದಿನಾಂಕ 27-02-2024ರಂದು ಬೆಂಗಳೂರು ನಗರದಲ್ಲಿ ಅರಮನೆ ಆವರಣದಲ್ಲಿ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಮತ್ತು ಆಡಳಿತದಲ್ಲಿ ಕಾರ್ಯಕ್ಷಮತೆ ಕಾರ್ಯಾಗಾರವನ್ನು ಆಯೋಜಿಸಿರೋದಾಗಿ ತಿಳಿಸಿದ್ದಾರೆ. ಈ ಸಮ್ಮೇಳನ, ಕಾರ್ಯಾಗಾರದಲ್ಲಿ ಭಾಗವಹಿಸುವ ರಾಜ್ಯ ಸರ್ಕಾರಿ ನೌಕರರಿಗೆ ಮಾತ್ರ ಸೀಮಿತಗೊಳಿಸಿ, ಬೆಂಗಳೂರು ನಗರ ಜಿಲ್ಲೆಯ ಅಧಿಕಾರಿ, ನೌಕರರಿಗೆ ದಿನಾಂಕ 27-02-2024ರಂದು ಒಂದು ದಿನ ಹಾಗೂ ಇತರೆ ಜಿಲ್ಲೆಗಳ ಅಧಿಕಾರಿ, ನೌಕರರಿಗೆ ಪ್ರಯಾಣ ದಿನಗಳು ಸೇರಿದಂತೆ ದಿನಾಂಕ 27-02-2024 ಮತ್ತು 28-02-2024ರಂದು 2 ದಿನ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿರೋದಾಗಿ ತಿಳಿಸಿದ್ದಾರೆ. ಇನ್ನೂ ಈ ಸಮ್ಮೇಳನ, ಕಾರ್ಯಕ್ಷಮತೆ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ, 256 ಪಿಡಿಓ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು, ರಾಜ್ಯದಲ್ಲಿ ಸದ್ಯ 256 ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳನ್ನು ಭರ್ತಿ ಮಾಡಲು ಕೆಪಿಎಸ್ಸಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ. ಗ್ರಾಮ ಪಂಚಾಯತಿ ಕಚೇರಿಯ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಆದಾಯ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ನಿವಾಸಿ ದೃಢೀಕರಣ ಪತ್ರ ಸೇರಿದಂತೆ ಒಂದೇ ಸೂರಿನಡಿ ಬರೋಬ್ಬರಿ 72 ಸೇವೆಗಳು ದೊರೆಯುವಂತೆ ಅವಕಾಶ ನೀಡಲಾಗಿದೆ. ವಿಶ್ವಗುರು ಬಸವಣ್ಣ ನವರನ್ನು ‘ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಘೋಷಿಸುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮನವಿ. ಸಚಿವ ಸಂಪುಟದಲ್ಲಿ ಘೋಷಣೆ ಮಾಡಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು ಪಿಡಿಒ ಹಾಗೂ ಇತರ ನೌಕರರ ಕೌನ್ಸೆಲಿಂಗ್‌ ಮಾದರಿ ವರ್ಗಾವಣೆಗೆ ಸಿದ್ಧತೆ ನಡೆಸಲಾಗಿದೆ ಎಂದು ಹೇಳಿದ್ದಾರೆ. ರಾಜ್ಯದ ಒಟ್ಟು…

Read More

ಬೆಂಗಳೂರು: ರಾಜ್ಯದಲ್ಲಿ 1 ವರ್ಷದಲ್ಲಿ 12 ಬಂಡವಾಳ ಹೂಡಿಕೆಗೆ ಒಡಂಬಡಿಕೆಯನ್ನು ಸರ್ಕಾರದಿಂದ ಮಾಡಲಾಗಿದೆ. ಈ ಮೂಲಕ 70,950 ಉದ್ಯೋಗ ಸೃಷ್ಟಿ ನಿರೀಕ್ಷೆ ಮಾಡಲಾಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಅವರು, ಕಳೆದ ಒಂದು ವರ್ಷದಲ್ಲಿ ರಾಜ್ಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಒಟ್ಟಾರೆ 12 ಬಂಡವಾಳ ಹೂಡಿಕೆಗೆ ಸಂಬಂಧಿಸಿದಂತೆ ಒಡಂಬಡಿಕೆಗಳು ಏರ್ಪಟ್ಟಿದ್ದು, ಇದರಿಂದ ಭವಿಷ್ಯದಲ್ಲಿ 70,950 ಉದ್ಯೋಗವಕಾಶಗಳು ಸೃಷ್ಟಿಯಾಗುವ ನಿರೀಕ್ಷೆಯಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ. ‘ರಾಜ್ಯ ಸರ್ಕಾರ’ದಿಂದ ರಿಯಾಯಿತಿ ಪಡೆದು ‘ಸ್ಥಳೀಯರಿಗೆ ಉದ್ಯೋಗ’ ನೀಡದವರ ವಿರುದ್ಧ ಕ್ರಮ ಬೆಂಗಳೂರು: ರಾಜ್ಯದಲ್ಲಿ ಸ್ಥಾಪಿಸಿರುವಂತ ಅನೇಕ ಕಾರ್ಖಾನೆಗಳು ಸರ್ಕಾರದಿಂದ ರಿಯಾಯಿತಿ ಪಡೆಯುತ್ತಿವೆ. ಹೀಗೆ ರಿಯಾಯಿತಿ ಪಡೆದರೂ ಉದ್ಯೋಗವನ್ನು ಸ್ಥಳೀಯರಿಗೆ ನೀಡದೆ ಇರುವಂತ ಆರೋಪ ಕೇಳಿ ಬಂದಿದೆ. ಹೀಗಾಗಿ ಸ್ಥಳೀಯರಿಗೆ ಉದ್ಯೋಗ ನೀಡದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಸಚಿವ ಎಂ.ಬಿ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತಂತೆ ಮಾತನಾಡಿರುವಂತ ಕೈಗಾರಿಕಾ…

Read More

ಬೆಂಗಳೂರು: ಉತ್ಪಾದನಾ ವೆಚ್ಚಕ್ಕೆ ಶೇಕಡಾ ಐವತ್ತು ರಷ್ಟು ಸೇರಿಸಿ ಕನಿಷ್ಟ ಬೆಂಬಲ ಬೆಲೆ ನಿಗದಿಗೆ ಕಾನೂನು ರಕ್ಷಣೆ ಸೇರಿದಂತೆ ಐತಿಹಾಸಿಕ ದೆಹಲಿ ರೈತ ಹೋರಾಟದ ಸಂದರ್ಭದಲ್ಲಿ ನೀಡಿದ್ದ ಲಿಖಿತ ಭರವಸೆಗಳನ್ನು ಈಡೇರಿಸಲು ಒತ್ತಾಯಿಸಿ ದೆಹಲಿ ಚಲೋ ಹಮ್ಮಿಕೊಂಡಿದ್ದ ರೈತರ ಮೇಲೆ ಮೋದಿ ಸರ್ಕಾರ ಎಸಗಿರುವ ಪೈಶಾಚಿಕ ದೌರ್ಜನ್ಯ ಖಂಡಿಸಿ ಪೆಬ್ರವರಿ 16,2024 ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಸಂಯುಕ್ತ ಹೋರಾಟ ಕರ್ನಾಟಕ ತನ್ನ ಎಲ್ಲಾ ಸಹಭಾಗಿ ಸಂಘಟನೆಗಳಿಗೆ ಕರೆ ನೀಡಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಂತಿಯುತವಾಗಿ ಪ್ರತಿಭಟಿಸುವುದು ದೇಶದ ಪ್ರತಿಯೊಬ್ಬ ಪ್ರಜೆಯ ಮೂಲಭೂತ ಹಕ್ಕಾಗಿದೆ. ರೈತರ ಶಾಂತಿಯುತ ಹೋರಾಟದ ಮೇಲೆ ಪೊಲೀಸ್ ಹಾಗೂ ಸಶಸ್ತ್ರ ಭದ್ರತಾ ಪಡೆಗಳನ್ನು ಛೂ ಬಿಟ್ಟಿರುವುದಲ್ಲದೇ,ಲಾಠಿ ಪ್ರಹಾರ,ರಬ್ಬರ್ ಬುಲೆಟ್ , ಆಶ್ರುವಾಯು ಸಿಡಿತದಂತಹ ಪೈಶಾಚಿಕ ದೌರ್ಜನ್ಯವನ್ನು ರೈತರ ಮೇಲೆ ಎಸಗಿರುವುದನ್ನು ಸಂಯುಕ್ತ ಹೋರಾಟ ಕರ್ನಾಟಕ ತೀವ್ರವಾಗಿ ಖಂಡಿಸುತ್ತದೆ. ತಡೆಯಲ್ಪಟ್ಟ ಸ್ಥಳದಲ್ಲೇ ಠಿಕಾಣಿ ಹೂಡಿ ನಿದ್ರಿಸುತ್ತಿದ್ದ ಮಧ್ಯ ರಾತ್ರಿ ಸಮಯದಲ್ಲಿ ರೈತರ ಮೇಲೆ…

Read More

ಬೆಂಗಳೂರು ಫೆ 14: ನಾವು ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡ ಮೇಲೆ ಚೀನಾ ಮಾದರಿ ಏಕಸ್ವಾಮ್ಯವನ್ನು ಸಹಿಸಲು , ಅಮೆರಿಕದ ಅಧ್ಯಕ್ಷೀಯ ಮಾದರಿ ಆಡಳಿತವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಎಕ್ಸ್ (ಟ್ವಿಟರ್) ಸ್ಪೇಸ್ ನಲ್ಲಿ ಇಂದು ನಡೆದ ನಮ್ಮ ಹಕ್ಕು ನಮ್ಮ ತೆರಿಗೆ ಕನ್ನಡಿಗರ ಅಭಿಯಾನದ ಕುರಿತ ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸುತ್ತಾ ಮಾತನಾಡಿದರು. ಸಂವಿಧಾನ ಬದ್ದವಾದ ಒಕ್ಕೂಟ ವ್ಯವಸ್ಥೆಯನ್ನು ಇಡಿ ದೇಶ ಒಪ್ಪಿಕೊಂಡಿದೆ. ರಾಜ್ಯ ಮತ್ತು ಕೇಂದ್ರಗಳಿಗೆ ಜನರ ತೆರಿಗೆ ಹಣ ಹಂಚಿಕೆ ಆಗುತ್ತದೆ. ಇದಕ್ಕಾಗಿ 5 ವರ್ಷಕ್ಕೊಮ್ಮೆ ಹಣಕಾಸು ಆಯೋಗ ರಚನೆಯಾಗಿ ಇದರ ಶಿಫಾರಸ್ಸುಗಳನ್ನು ಕೇಂದ್ರ ಸರ್ಕಾರ ಜಾರಿ ಮಾಡುತ್ತದೆ. 15 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಬಹಳ ದೊಡ್ಡ ಪ್ರಮಾಣದಲ್ಲಿ ಅನ್ಯಾಯ ಆಗಿದೆ. 14 ನೇ ಆಯೋಗದಲ್ಲಿ ರಾಜ್ಯದ ತೆರಿಗೆ ಪಾಲು ಹಂಚಿಕೆ 4.71% ಇದ್ದದ್ದು 15ನೇ ಹಣಕಾಸು ಆಯೋಗದಲ್ಲಿ 3.64 % ಕ್ಕೆ ಕಡಿತ ಮಾಡಿಬಿಟ್ಟರು. ಅಂದರೆ 1.07% ನಮಗೆ ಕಡಿತ…

Read More

ಅಬುದಾಬಿ: ಫೆಬ್ರವರಿ 13 ರಿಂದ 14 ರವರೆಗೆ ಯುನೈಟೆಡ್ ಅರಬ್ ಎಮಿರೇಟ್ಸ್ ಗೆ ಅಧಿಕೃತ ಭೇಟಿಗಾಗಿ ಪ್ರಧಾನಿ ಅಬುಧಾಬಿಗೆ ಆಗಮಿಸಿದರು. ಇದು 2015 ರಿಂದ ಯುಎಇಗೆ ಅವರ ಏಳನೇ ಭೇಟಿಯಾಗಿದೆ ಮತ್ತು ಕಳೆದ ಎಂಟು ತಿಂಗಳಲ್ಲಿ ಮೂರನೇ ಭೇಟಿಯಾಗಿದೆ. ಅಬುಧಾಬಿಯ ಮೊದಲ ಹಿಂದೂ ಕಲ್ಲಿನ ದೇವಾಲಯವಾದ ಬೋಚಸನ್ವಾಸಿ ಶ್ರೀ ಅಕ್ಷರ್ ಪುರುಷೋತ್ತಮ್ ಸ್ವಾಮಿನಾರಾಯಣ್ ಸಂಸ್ಥಾ (ಬಿಎಪಿಎಸ್) ಮಂದಿರವನ್ನು ಮೋದಿ ಉದ್ಘಾಟಿಸಿದರು. https://twitter.com/ANI/status/1757758363998310908 ‘ಅಹ್ಲಾನ್ ಮೋದಿ’ ವಲಸಿಗರ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಬಿಎಪಿಎಸ್ ಹಿಂದೂ ಮಂದಿರವನ್ನು ಅನುಮೋದಿಸಿದ್ದಕ್ಕಾಗಿ ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರಿಗೆ ಧನ್ಯವಾದ ಅರ್ಪಿಸಿದರು. ದೇವಾಲಯಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ರಾಷ್ಟ್ರಪತಿಗಳ ಬೆಂಬಲವಿಲ್ಲದೆ ಇದು ಸಾಧ್ಯವಾಗುತ್ತಿರಲಿಲ್ಲ ಎಂದು ಹೇಳಿದರು. ಬಿಎಪಿಎಸ್ ಹಿಂದೂ ಮಂದಿರವು ದುಬೈ-ಅಬುಧಾಬಿ ಶೇಖ್ ಜಾಯೆದ್ ಹೆದ್ದಾರಿಯ ಅಲ್ ರಹ್ಬಾ ಬಳಿಯ ಅಬು ಮುರೇಖಾದಲ್ಲಿದೆ, ಇದು ಸುಮಾರು 27 ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣ ಮಾಡಲಾಗಿದೆ. ಈ ಕಟ್ಟಡದ ನಿರ್ಮಾಣವು 2019 ರಿಂದ ನಡೆಯುತ್ತಿದೆ,…

Read More

ಅದ್ಭುತ ದಿನ ಎಂದು ಹೇಳಬಹುದು. ಪಂಚಮಿ ತಿಥಿ ವರಗಿಯು ತಾಯಿಯ ಪರಿಪೂರ್ಣ ಅನುಗ್ರಹವನ್ನು ತರಬಲ್ಲದು. ಒಟ್ಟಿನಲ್ಲಿ ತಿಥಿಯನ್ನು ವಸಂತ ಪಂಚಮಿ ಎಂದೂ ಕರೆಯುತ್ತಾರೆ. ಈ ತಿಥಿ ಮಾತೆ ಸರಸ್ವತಿಗೆ ಅತ್ಯಂತ ಮಂಗಳಕರವಾಗಿದೆ. ಸರಸ್ವತಿ ದೇವಿಯು ಕಲಿಕೆಯ ಅಧಿದೇವತೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ…

Read More