Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿ ಕೂಟವು ಕನಿಷ್ಠ 295 ಸ್ಥಾನಗಳನ್ನು ಗೆಲುವು ಸಾಧಿಸಲಿದೆ ಅಂತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. ಇಂದು ಎನ್ಡಿಎ ನಾಯಕರ ಸಭೆಯ ನಂತರ ಮಾತನಾಡಿದ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “… ಎನ್ಡಿಎ ಕನಿಷ್ಠ 295 ಸ್ಥಾನಗಳನ್ನು ಗೆಲ್ಲಲಿದೆ ಎಂಬುದಾಗಿ ತಿಳಿಸಿದರು. ಇಂದಿನ ಸಭೆಯಲ್ಲಿ ಲೋಕಸಭಾ ಚುನಾವಣೆಯ ಫಲಿತಾಂಶದ ಬಗ್ಗೆ ಚರ್ಚಿಸಲಾಯಿತು. ವಿವಿಧ ವಿಚಾರಗಳನ್ನು ಎನ್ ಡಿಎ ಮೈತ್ರಿಕೂಟದ ನಾಯಕರು ಚರ್ಚಿಸಿದರು. ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟಕ್ಕೆ ಉತ್ತಮ ಫಲಿತಾಂಶ ಬರುವ ನಿರೀಕ್ಷೆಯಿದೆ ಎಂದರು. ಜೂನ್ 1ರ ಇಂದು ಪ್ರಾರಂಭವಾಗುವ ಎಕ್ಸಿಟ್ ಪೋಲ್ ಚರ್ಚೆಗಳಲ್ಲಿ ಕಾಂಗ್ರೆಸ್ ಭಾಗವಹಿಸಲಿದೆ ಎಂದು ಕಾಂಗ್ರೆಸ್ ವಕ್ತಾರ ಪವನ್ ಖೇರಾ ಶನಿವಾರ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷವು ಯಾವುದೇ ಎಕ್ಸಿಟ್ ಪೋಲ್ ಚರ್ಚೆಯಲ್ಲಿ ಭಾಗವಹಿಸುವುದಿಲ್ಲ ಎಂದು ಘೋಷಿಸಿದ ಒಂದು ದಿನದ ನಂತರ ಇತ್ತೀಚಿನ ಬೆಳವಣಿಗೆ ಬಂದಿದೆ. ಕಾಂಗ್ರೆಸ್ “ಊಹಾಪೋಹಗಳು ಮತ್ತು ಟಿಆರ್ಪಿ ಚಾಲಿತ ಸ್ಲಗ್ಫೆಸ್ಟ್ಗಳಲ್ಲಿ ತೊಡಗಲು…
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಭಾರಿ ಹಗರಣ ಸಂಬಂಧ ನಾಗೇಂದ್ರ ಅವರ ರಾಜೀನಾಮೆ ಪಡೆದರೆ ಸಾಲದು; ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕು ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸರಕಾರದ ಬೊಕ್ಕಸದ ಹಣವನ್ನು ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳು ಚುನಾವಣೆಗೆ ಬಳಸಿಕೊಂಡಿರುವುದು ಸ್ಪಷ್ಟಗೊಂಡಿದೆ. ಆದ್ದರಿಂದ ಅವರು ರಾಜೀನಾಮೆ ಕೊಡಬೇಕು; ಅಲ್ಲದೆ, ಇನ್ನೆಷ್ಟು ಇಲಾಖೆಗಳಲ್ಲಿ ಇಂಥ ಹಗರಣ ನಡೆದಿದೆ ಎಂದು ತನಿಖೆ ಮಾಡಬೇಕು ಎಂದು ಒತ್ತಾಯಿಸಿದರು. ಕಾಂಗ್ರೆಸ್ ಸರಕಾರ ಬಂದರೆ ಎಐಸಿಸಿಗೆ ಹಣ ಹೋಗಲಿದೆ ಎಂದು ಮೊದಲಿನಿಂದಲೂ ಹೇಳಿದ್ದೆವು. ಇಲ್ಲಿಂದ ಎಟಿಎಂ ಮಾಡಿಕೊಳ್ತಾರೆ ಎಂದಿದ್ದೆವು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧಿತ 11 ಖಾತೆಗಳನ್ನು ನಿಷ್ಕ್ರಿಯಗೊಳಿಸಲು ಸರಕಾರಿ ಉನ್ನತಾಧಿಕಾರಿ ಮಂಜುನಾಥ ಪ್ರಸಾದ್ ಪತ್ರ ಬರೆದಿದ್ದಾರೆ. ಈ ಮೂಲಕ ಇದು ಹಗಲುದರೋಡೆ ಸರಕಾರ ಎಂದು ಸಾಬೀತಾಗಿರುವುದಾಗಿ ವಿವರಿಸಿದರು. ಡಿಸಿಎಂ ಮತ್ತು…
ಬೆಂಗಳೂರು: ಕೆಇಎ ಸಿಇಟಿ ಪರೀಕ್ಷೆಯನ್ನು ಏಪ್ರಿಲ್.18 ಮತ್ತು 18, 2024ರಂದು ನಡೆಸಲಾಗಿತ್ತು. ಈ ಪರೀಕ್ಷೆಯ ಫಲಿತಾಂಶವನ್ನು ಇಂದು ಕೆಇಎ ಪ್ರಕಟಿಸಿದೆ. ರಿಸಲ್ಟ್ ಹೇಗೆ ಚೆಕ್ ಮಾಡಬೇಕು ಅಂತ ಮುಂದೆ ಓದಿ. ಈ ಸಂಬಂಧ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ಏಪ್ರಿಲ್ ನಲ್ಲಿ ನಡೆದಿದ್ದಂತ ಕೆ-ಸಿಇಟಿ ಪರೀಕ್ಷೆಯ ಫಲಿತಾಂಶವನ್ನು ಇದು ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ https://kea.kar.nic.in ನಲ್ಲಿ ಪ್ರಕಟಿಸಲಾಗಿದೆ ಅಂತ ತಿಳಿಸಿದೆ. ಕೆ-ಸಿಇಟಿ ಪರೀಕ್ಷೆ ಬರೆದಿದ್ದಂತ ವಿದ್ಯಾರ್ಥಿಗಳು ಫಲಿತಾಂಶವನ್ನು https://kea.kar.nic.in ಜಾಲತಾಣಕ್ಕೆ ಭೇಟಿ ನೀಡಿ ವೀಕ್ಷಿಸಬಹುದಾಗಿದೆ ಎಂದಿದೆ. ಅಂದಹಾಗೇ 2024ರ ಕೆ-ಸಿಇಟಿ ಪರೀಕ್ಷೆಗೆ 3.27 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಈಗ ದ್ವಿತೀಯ ಪಿಯುಸಿ ಹಾಗೂ ಕೃಷಿ ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶದ ನಂತ್ರ, ಕೆಇಎಯಿಂದ ಇಂದು ಕೆ-ಸಿಇಟಿ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಕೆಇಎ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2024ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (CET-2024)ಯ ಫಲಿತಾಂಶವನ್ನು ಪ್ರಕಟಿಸಿದೆ. ಫಲಿತಾಂಶವು ಪ್ರಾಧಿಕಾರದ ವೆಬ್ಸೈಟ್ http://karresults.nic.in…
ಬೆಂಗಳೂರು: ಮತ ಎಣಿಕೆ ಕೇಂದ್ರಗಳ ಬಳಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಲೋಕಸಭಾ ಚುನಾವಣೆಯ ಮತ ಎಣಿಕೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಛೇರಿ ಮುಖ್ಯ ಆಯುಕ್ತರ ಕಛೇರಿಯಲ್ಲಿ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯ ಮತ ಎಣಿಕೆಯು 4ನೇ ಜೂನ್ 2024 ರಂದು ನಡೆಯಲಿದ್ದು, ಈ ಸಂಬಂಧ ಮತ ಎಣಿಕೆ ದಿನದಂದು ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲು ಸೂಚಿಸಲಾಯಿತು. ನಗರದಲ್ಲಿ ಮೂರು ಮತ ಎಣಿಕೆ ಕೇಂದ್ರಗಳು ಬರಲಿದ್ದು, ಚುನಾವಣಾ ಆಯೋಗದ ಮಾರ್ಗಸೂಚಿ ಅನ್ವಯ ಮತ ಎಣಿಕೆ ಕೇಂದ್ರಗಳ ಬಳಿ ಸಿಸಿ ಟಿವಿ ಹಾಗೂ ವೀಡಿಯೋಗ್ರಾಫಿ ವ್ಯವ್ಯಸ್ಥೆ ಮಾಡಿಕೊಳ್ಳಲು ಚುನಾವಣಾಧಿಕಾರಿಗಳಿಗೆ ಸೂಚನೆ ನೀಡಿದರು. ಮತ ಎಣಿಕೆ ಕೇಂದ್ರಗಳ ಬಳಿ ಸ್ಥಾಪಿಸುವ ಮಾಧ್ಯಮ ಕೇಂದ್ರಗಳಲ್ಲಿ ಎಲ್ಲಾ ರೀತಿಯ ವ್ಯವಸ್ಥೆಯನ್ನು ಸರಿಯಾಗಿ ಮಾಡಿರಬೇಕು. ಮಾಧ್ಯಮ ಪ್ರತಿನಿಧಿಗಳಿಗೆ ಕುಡಿಯುವ ನೀರು, ಶೌಚಾಲಯದ…
ಶಿವಮೊಗ್ಗ : ಬಾಲ ಕಾರ್ಮಿಕರ ನೇಮಕ ನಿರ್ಮೂಲನೆ ಕಾರ್ಯಾಚರಣೆ ಮಾಡಬೇಕು. ಈ ಕಾರ್ಯಾಚರಣೆ ನಗರ ಪ್ರದೇಶಗಳಿಗೆ ಮಾತ್ರ ಸಿಮೀತವಾಗದೆ, ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಪ್ರಕರಣ ದಾಖಲಿಸಿ, ಮಕ್ಕಳ ಸಂರಕ್ಷಣಾ ಕಾರ್ಯ ನಡೆಯಬೇಕೆಂದು ಜಿಲ್ಲಾಧಿಕಾರಿ ಗುತುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜೂ 1 ರಂದು ಏರ್ಪಡಿಸಲಾಗಿದ್ದ ಜಿಲ್ಲಾ ಕಾರ್ಯನಿರ್ವಾಹಕ ಸಮಿತಿ, ಜಿಲ್ಲಾ ಮಟ್ಟದ ಸಲಹಾ ಸಮಿತಿ ಹಾಗೂ ಜಿಲ್ಲಾ ಮಟ್ಟದ ಟಾಸ್ಕ್ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಾಲ ಕಾರ್ಮಿಕರು ಯಾವ ಯಾವ ಕೇತ್ರದಲ್ಲಿ ಹೆಚ್ಚು ಕಂಡು ಬರುತ್ತಿದ್ದಾರೆ ಎಂದು ಪತ್ತೆ ಹಚ್ಚಬೇಕು. ಸಂಬಂಧಿಸಿದ ಅಧಿಕಾರಿಗಳು ಮಕ್ಕಳನ್ನು ರಕ್ಷಿಸುವ ಕೆಲಸ ಜವಾಬ್ಧಾರಿಯುತವಾಗಿ ನಿರ್ವಹಿಸಬೇಕು ಹಾಗೂ ಬಾಲ ಕಾರ್ಮಿಕರನ್ನು ಹೊಂದಿದ ಮಾಲಿಕರ ವಿರುಧ್ದ ಸೂಕ್ತ ಕ್ರಮ ಕೈಗೊಳಬೇಕು. ಶಾಲೆ ಬಿಟ್ಟ ಮಕ್ಕಳ ಮೇಲೆ ನಿಗಾ ವಹಿಸಬೇಕು. ಪ್ರತಿ ತಿಂಗಳು ಕಡ್ಡಾಯವಾಗಿ ಮಕ್ಕಳ ಹಾಜರಾತಿಯನ್ನು ಪರಿಶೀಲನೆ ಮಾಡಬೇಕು ಹಾಗೂ ಬಾಲ ಕಾರ್ಮಿಕ ಮಕ್ಕಳ ದಾಖಲಾತಿಗೆ ಮೊದಲ ಆದ್ಯತೆ ನೀಡಬೇಕು.…
ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ತನ್ನದೇ ಆದ ಇತಿಹಾಸವನ್ನು ಹೊಂದಿದೆ. 75 ಸದಸ್ಯರನ್ನು ವಿವಿಧ ಕ್ಷೇತ್ರಗಳಿಂದ ಆಯ್ಕೆ ಮಾಡಿ ಅಲ್ಲಿಂದ ಕಳುಹಿಸಿ ಕೊಡಲಾಗುತ್ತದೆ. ಈಗ ವಿಧಾನ ಪರಿಷತ್ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮರಿತಿಬ್ಬೇಗೌಡರು ಸ್ಪರ್ಧಿಸಿದ್ದಾರೆ. ಇವರನ್ನು ಕಳೆದ 24 ವರ್ಷಗಳಿಂದ ನಾನು ಸದನದ ಒಳಗೆ ಹಾಗೂ ಹೊರಗೆ ನಿಕಟವರ್ತಿಯಾಗಿ ನೋಡಿದ್ದೇನೆ. ಈ ಎಲ್ಲ ಕ್ಷೇತ್ರಗಳ ಶಿಕ್ಷಕರ, ರೈತರ ಹಾಗೂ ಧ್ವನಿ ಇಲ್ಲದವರ ಪರವಾಗಿ ನಿರಂತರವಾಗಿ ಹೋರಾಟವನ್ನು ಮಾಡಿಕೊಂಡು ಬಂದಿದ್ದಾರೆ ಎಂದು ಶಾಸಕರಾದ ದಿನೇಶ್ ಗೂಳಿಗೌಡ ಹೇಳಿದ್ದಾರೆ. ಅವರು ಇಂದು ಮಂಡ್ಯದ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ರೈತರ ಪರವಾಗಿ ಇವರು ನಿರಂತರವಾಗಿ ಧ್ವನಿ ಎತ್ತಿದ್ದಾರೆ. ಅಲ್ಲದೆ ಮಂಡ್ಯದಲ್ಲಿ ಮೈಶುಗರ್ ಫ್ಯಾಕ್ಟರಿ ಮರು ಪ್ರಾರಂಭ ಆಗುವುದರ ಹಿಂದೆ ಇವರ ಪಾತ್ರ ಸಿಂಹಪಾಲು ಇದೆ. ರೈತರಿಗೆ ಕಾಲ ಕಾಲಕ್ಕೆ ಹಣ ಪಾವತಿಯಾಗಬೇಕು. ಜೊತೆಗೆ ಹೊಸ ಕಾರ್ಖಾನೆ ಸ್ಥಾಪನೆಯಾಗಬೇಕು ಎಂದು ಸದನದಲ್ಲಿ ಹೋರಾಟ ಮಾಡುತ್ತಲೇ ಬಂದಿದ್ದಾರೆ ಎಂದು ಹೇಳಿದರು. ಯಾರ ಸಮಸ್ಯೆ ಇದ್ದರೂ ಧ್ವನಿ…
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಮಾಡಿಕೊಳ್ಳುವ ವೇಳೆ ತನ್ನ ಡೆತ್ ನೋಟಿನಲ್ಲಿ ಸಚಿವರ ಮೌಖಿಕ ಸೂಚನೆ ಎಂದಿರುವುದಕ್ಕಿಂತ ಹೆಚ್ಚಿನ ಸಾಕ್ಷಿ ಬೇಕಾ ಎಂದು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಪ್ರಶ್ನಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಇಷ್ಟು ದೊಡ್ಡ ಹಗರಣವಾದರೂ ಯಾಕಿನ್ನೂ ಸಿಬಿಐಗೆ ಕೊಟ್ಟಿಲ್ಲ? ಇಷ್ಟು ದೊಡ್ಡ ಹಗರಣ ನಡೆದಿದ್ದರೂ ಸಚಿವ ನಾಗೇಂದ್ರರನ್ನು ಯಾಕೆ ಇನ್ನೂ ವಜಾ ಮಾಡಿಲ್ಲ? ಈ ಪ್ರಶ್ನೆಗಳಿಗೆ ಮಾನ್ಯ ಮುಖ್ಯಮಂತ್ರಿಗಳೇ ಉತ್ತರಿಸಬೇಕು ಎಂದು ಆಗ್ರಹಿಸಿದರು. ಇಷ್ಟೆಲ್ಲ ಆದರೂ ಸರಕಾರಕ್ಕೆ ಇದೊಂದು ಗಂಭೀರ ಪ್ರಕರಣ ಅನಿಸುತ್ತಿಲ್ಲ. ಕಾಂಗ್ರೆಸ್ ಪಕ್ಷದ ಬುಡಕ್ಕೆ ಬರುವ ಕಾರಣಕ್ಕೆ ಇದು ಗಂಭೀರವಲ್ಲ ಎಂದು ತೇಲಿಸುವ ರೀತಿಯಲ್ಲಿ ಸರಕಾರ ವ್ಯವಹರಿಸುತ್ತಿದೆ ಎಂದು ಆರೋಪಿಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಮಾಡಿಕೊಳ್ಳುವ ವೇಳೆ ತನ್ನ ಡೆತ್ ನೋಟಿನಲ್ಲಿ ಸಚಿವರ ಮೌಖಿಕ ಸೂಚನೆ ಎಂದಿದ್ದಾರೆ. ಜೊತೆಗೇ 3…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಣಕಾಸು ಸಚಿವರೂ ಆಗಿದ್ದಾರೆ. ಅವರ ಕಣ್ಣಿನ ಕೆಳಗೆಯೇ ಕೋಟ್ಯಂತರ ರೂಪಾಯಿ ಹಗರಣ ನಡೆದರೂ ಅವರಿಗೆ ತಿಳಿದಿಲ್ಲ. ಕೂಡಲೇ ಸಿಎಂ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧಿಕಾರಿ, ಮೃತ ಪಿ.ಚಂದ್ರಶೇಖರನ್ ಅವರ ಕುಟುಂಬ ಕಷ್ಟದಲ್ಲಿದೆ. ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದ್ದರೂ, ತಮ್ಮ ಬಳಿಯೇ ಇರುವ ಹಣಕಾಸು ಇಲಾಖೆಯಿಂದ ಎಲ್ಲ ಮಾಹಿತಿ ಪಡೆದಿದ್ದರೂ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆ ಮಾತ್ರ ಪಡೆಯುತ್ತಿಲ್ಲ. ಸರ್ಕಾರದ ಹಣವನ್ನು ಯಾರು ಹೇಗೆ ಬೇಕಾದರೂ ವರ್ಗಾವಣೆ ಮಾಡಬಹುದು ಎಂಬುದು ಇದರ ಅರ್ಥ. ಈ ಹಣದಲ್ಲಿ ಸೋನಿಯಾ ಗಾಂಧಿ ಅವರಿಗೂ ಪಾಲು ಸಿಕ್ಕಿದೆ ಎನ್ನುವುದು ನನ್ನ ಅನುಮಾನ ಎಂದರು. ಆಂಧ್ರಪ್ರದೇಶದ ಜ್ಯುಬಿಲಿ ಹಿಲ್ಸ್ ಬ್ಯಾಂಕ್ಗೆ ಹಣವನ್ನು ವರ್ಗಾವಣೆ ಮಾಡಲಾಗಿದೆ. ಜೊತೆಗೆ 9 ಐಟಿ ಕಂಪನಿಗಳಿಗೆ ವರ್ಗಾಯಿಸಲಾಗಿದೆ. ಈ ಹಣವನ್ನು ದಲಿತರ ಶ್ರೇಯಸ್ಸಿಗಾಗಿ ಇಡಲಾಗಿತ್ತು. ಇಂತಹ ಹಣವನ್ನೇ ಕಾಂಗ್ರೆಸ್ನವರು ಲೂಟಿ ಮಾಡುತ್ತಿದ್ದಾರೆ. ಇಲ್ಲಿ…
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವಂತ ಕೋಟ್ಯಂತರ ವಂಚನೆ ಪ್ರಕರಣ ಸಂಬಂಧ, ಎಸ್ಐಟಿ ಅಧಿಕಾರಿಗಳು ಇಬ್ಬರು ನಿಗಮದ ಅಧಿಕಾರಿಗಳನ್ನು ಬಂಧಿಸಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದ್ದಂತ ವಂಚನೆ, ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ನಿಗಮದ ಈ ಹಿಂದಿನ ಎಂ.ಡಿ ಜೆ.ಜೆ ಪದ್ಮನಾಭ್ ಹಾಗೂ ಲೆಕ್ಕಾಧಿಕಾರಿ ಪರುಶುರಾಮ್ ಅವರನ್ನು ಬಂಧಿಸಿದೆ. ಎಸ್ಐಟಿ ಅಧಿಕಾರಿಗಳು ಬಂಧಿಸಿರುವಂತ ಪದ್ಮನಾಭ್ ಹಾಗೂ ಪರುಶುರಾಮ್ ಅವರನ್ನು ಬೆಂಗಳೂರಿನ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸೋ ಸಾಧ್ಯತೆ ಇದೆ. ಅಂದಹಾಗೇ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಬೆಳಕಿಗೆ ಬರುತ್ತಿದ್ದಂತೆ ಎಂ.ಡಿಯಾಗಿದ್ದಂತ ಪದ್ಮನಾಭ್ ಹಾಗೂ ಲೆಕ್ಕಾಧಿಕಾರಿಯಾಗಿದ್ದಂತ ಪರುಶುರಾಮ್ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿ ಆದೇಶಿಸಿತ್ತು. ಅಲ್ಲದೇ ಈ ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿ ಆದೇಶಿಸಿತ್ತು. https://kannadanewsnow.com/kannada/valmiki-development-corporation-superintendent-chandrasekarans-wife-hospitalised-after-health-deteriorates/ https://kannadanewsnow.com/kannada/alert-mobile-user-note-government-warns-against-accepting-these-calls/
ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದ ಮೃತ ಅಧೀಕ್ಷಕ ಚಂದ್ರಶೇಖರನ್ ಅವರ ಪತ್ನಿ ಕವಿತಾ ಅಸ್ವಸ್ಥಗೊಂಡಿದ್ದಾರೆ. ಹೀಗಾಗಿ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡ ನಂತ್ರ, ಪತ್ನಿ ಕವಿತಾ ಆಘಾತಕ್ಕೆ ಒಳಗಾಗಿದ್ದರು. ಇದೇ ಆಘಾತದಲ್ಲಿ ಅವರು ಊಟ ಸೇವಿಸಿರಲಿಲ್ಲ. ಈ ಹಿನ್ನಲೆಯಲ್ಲಿ ಇಂದು ಅಸ್ವಸ್ಥಗೊಂಡಿದ್ದಾರೆ. ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗೋ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ್ದಂತ ಅವರು, ನನ್ನ ಗಂಡ ಚಂದ್ರಶೇಖರನ್ ಸಾವಿಗೆ ನ್ಯಾಯ ಸಿಗಬೇಕು. ಗಂಡನ ಆತ್ಮಕ್ಕೆ ಶಾಂತಿ ಸಿಗಬೇಕು ಅಂದ್ರೆ ಕಚೇರಿಯಲ್ಲಿ ನಡೆದಿರುವಂತ ಸತ್ಯ ಹೊರಬರಲೇಬೇಕು. ನಮಗೆ ನ್ಯಾಯ ಬೇಕು, ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಅಂತ ಆಗ್ರಹಿಸಿದ್ದರು. https://kannadanewsnow.com/kannada/court-to-pronounce-order-on-kejriwals-bail-plea-on-june-5/ https://kannadanewsnow.com/kannada/big-news-free-electricity-for-all-government-schools-in-the-state-state-government/