Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ಉಬರ್ ಹಾಗೂ ರ್ಯಾಪಿಡೋ ಬೈಕ್ ಟ್ಯಾಕ್ಸಿಗಳು ಕಾರ್ಯಾಚರಣೆ ನಡೆಸುತ್ತಿವೆ. ಇಂತಹ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಯನ್ನು ಆರು ವಾರಗಳಲ್ಲಿ ಸ್ಥಗಿತಗೊಳಿಸುವಂತೆ ಹೈಕೋರ್ಟ್ ಆದೇಶಿಸಿದೆ. ಇಂದು ಉಬರ್, ರ್ಯಾಪಿಡೋ ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಸಂಬಂಧ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಶ್ಯಾಮ್ ಪ್ರಸಾದ್ ಅವರನ್ನು ಒಳಗೊಂಡಂತ ನ್ಯಾಯಪೀಠವು ವಿಚಾರಣೆ ನಡೆಸಿತು. ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ನಿಯಮ ರೂಪಿಸಿಲ್ಲ. ರಾಜ್ಯ ಸರ್ಕಾರ ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ನಿಯಮ ರೂಪಿಸಿಲ್ಲದ ಕಾರಣ ನಿಯಮಗಳಲ್ಲಿದೇ ಬೈಕ್ ಟ್ಯಾಕ್ಸ್ ಕಾರ್ಯಾಚರಣೆ ಮಾಡುವಂತಿಲ್ಲ ಎಂಬುದಾಗಿ ತಿಳಿಸಿತು. ಮೂರು ತಿಂಗಳಲ್ಲಿ ನಿಯಮ ರೂಪಿಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿತು. ಅಲ್ಲದೇ ಆರು ವಾರಗಳಲ್ಲಿ ಉಬರ್, ರ್ಯಾಪಿಡೋ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವಂತೆ ಹೈಕೋರ್ಟ್ ನ್ಯಾಯಪೀಠವು ಆದೇಶಿಸಿದೆ. ಈ ಮೂಲಕ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಯಲ್ಲಿ ತೊಡಗಿದ್ದಂತ ಉಬರ್, ರ್ಯಾಪಿಡೋ ಗಳಿಗೆ ಬಿಗ್ ಶಾಕ್ ಅನ್ನು ಹೈಕೋರ್ಟ್ ನೀಡಿದೆ. https://kannadanewsnow.com/kannada/opposition-leader-r-ashoka-demands-withdrawal-of-suspension-order-of-mlas-or-else-there-will-be-a-strong-agitation/ https://kannadanewsnow.com/kannada/state-government-orders-change-working-hours-of-government-offices-in-the-wake-of-scorching-heat/

Read More

ಬೆಂಗಳೂರು: 18 ಶಾಸಕರ ಅಮಾನತು ಆದೇಶ ವಾಪಸ್ ಪಡೆಯದೇ ಹೋದಲ್ಲಿ ತೀವ್ರ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಮರಿಗೆ ನೀಡಿದ ಮೀಸಲಾತಿಯನ್ನು ವಿರೋಧಿಸಿ ಹಾಗೂ ಹನಿಟ್ರ್ಯಾಪ್ ಪ್ರಕರಣ ಖಂಡಿಸಿ 18 ಶಾಸಕರು ಪ್ರತಿಭಟನೆ ಮಾಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕುರಿತು ಸಿಬಿಐ, ಎಸ್ಐಟಿ ಅಥವಾ ಯಾವುದೇ ತನಿಖೆ ಮಾಡುವುದಾಗಿ ಹೇಳಿದ್ದರೆ ಅಥವಾ ಸ್ಪಷ್ಟತೆ ನೀಡಿದ್ದರೆ ಪ್ರತಿಭಟನೆ ಕೈ ಬಿಡಬಹುದಿತ್ತು. ಅಮಾನತು ಸಮಯದಲ್ಲಿ ಸ್ಪೀಕರ್ ಯು.ಟಿ.ಖಾದರ್ ಸೌಜನ್ಯಕ್ಕೂ ಶಾಸಕರನ್ನು ಕರೆದು ಮಾತಾಡಿಲ್ಲ ಎಂದು ದೂರಿದರು. ಸ್ಪೀಕರ್ ಕಾಂಗ್ರೆಸ್ ಸರ್ಕಾರದ ಪರವಾಗಿ ನಿಂತಿದ್ದಾರೆ. ಈಗ ಸಚಿವ ಸಂಪುಟ ಪುನರ್ ರಚನೆಯಾಗಲು ಸಿದ್ಧತೆ ನಡೆದಿದೆ. ಇಂತಹ ಸಮಯದಲ್ಲಿ ವಿರೋಧ ಪಕ್ಷದ ಸದಸ್ಯರ ವಿರುದ್ಧ ಕ್ರಮ ಕೈಗೊಂಡರೆ ಸಚಿವ ಸ್ಥಾನ ಸಿಗಬಹುದು ಎಂಬ ನಿರೀಕ್ಷೆ ಸ್ಪೀಕರ್ ಯು.ಟಿ.ಖಾದರ್ ಅವರಿಗಿದೆ. ಸಭಾಧ್ಯಕ್ಷರ ಪೀಠ ಬಹಳ ಪವಿತ್ರವಾದುದು. ಸ್ಪೀಕರ್ ಯಾರು ಯಾರನ್ನೋ ಕರೆದುಕೊಂಡು ಬಂದು ಫೋಟೋ ತೆಗೆಸಿಕೊಳ್ಳುತ್ತಾರೆ. ಆದರೆ ಶಾಸಕರು…

Read More

ಬೆಂಗಳೂರು: ಮಾದಕ ವಸ್ತು ಮುಕ್ತ ರಾಜ್ಯ ಮಾಡುವುದು ನನ್ನ ಗುರಿ. ಇದಕ್ಕಾಗಿ ಬಹಳಷ್ಟು ಶ್ರಮಿಸಬೇಕು. ಪೊಲೀಸರು ಮಾದಕ ವಸ್ತು ಜಾಲವನ್ನು ಬೇರು ಸಮೇತ ಕಿತ್ತಾಕಲು ಪಣ ತೊಡಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಕರೆ ನೀಡಿದರು. https://twitter.com/siddaramaiah/status/1907373145008328929 ಕೋರಮಂಗಲ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯಮಂತ್ರಿಗಳ ಪದಕ ಪುರಸ್ಕೃತರಿಗೆ ಪದಕಗಳನ್ನು ಪ್ರದಾನ ಮಾಡಿ ಮಾತನಾಡಿದರು. ಮೂರು ವರ್ಷಗಳಿಂದ ಬಾಕಿ ಉಳಿದಿದ್ದ ಮುಖ್ಯಮಂತ್ರಿಗಳ ಪದಕವನ್ನು ಈ ಬಾರಿ ಒಟ್ಟಾಗಿ ವಿತರಿಸಿದ್ದೇವೆ. ಎಲ್ಲಾ ಪದಕ ಪುರಸ್ಕೃತರಿಗೂ ಅಭಿನಂದನೆಗಳು ಎಂದು ಅಭಿನಂದಿಸಿದರು. ತಂತ್ರಜ್ಞಾನದ ಬೆಳವಣಿಗೆಯಿಂದ ಸೈಬರ್ ಅಪರಾಧಗಳು ವ್ಯಾಪಕವಾಗಿ ಹೆಚ್ವುತ್ತಿವೆ. ಅದೇ ತಂತ್ರಜ್ಞಾನದ ಸಾಧ್ಯತೆಗಳನ್ನು ಬಳಸಿಕೊಂಡು ಸೈಬರ್ ಅಪರಾಧಗಳನ್ನು ನಿಗ್ರಹಿಸಬೇಕು ಎಂದು ಕರೆ ನೀಡಿದರು. ಮಾದಕ ವಸ್ತು ಮುಕ್ತ ರಾಜ್ಯ ಮಾಡುವುದು ನನ್ನ ಗುರಿ. ಇದಕ್ಕಾಗಿ ಬಹಳಷ್ಟು ಶ್ರಮಿಸಬೇಕು. ಪೊಲೀಸರು ಮಾದಕ ವಸ್ತು ಜಾಲವನ್ನು ಬೇರು ಸಮೇತ ಕಿತ್ತಾಕಲು ಪಣ ತೊಡಬೇಕು ಎಂದು ಕರೆ ನೀಡಿದರು. ಪದಕಗಳನ್ನು ಪಡೆದವರು ಬೇರೆಯವರಿಗೆ ಪ್ರೇರಣೆ ಆಗಬೇಕು. ಸಿಎಂ…

Read More

ಬೆಂಗಳೂರು: ಕರ್ನಾಟಕ ರಾಜ್ಯ ಅಭಿವೃದ್ಧಿ ಪಥದತ್ತ ಸಾಗಬೇಕಾದರೆ ಪೊಲೀಸ್‌ ಇಲಾಖೆ ಮಹತ್ತರವಾದ ಪಾತ್ರ ವಹಿಸುತ್ತದೆ. ಪೊಲೀಸ್‌ ಇಲಾಖೆಯ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು ಪ್ರಾಮಾಣಿಕತೆ, ದಕ್ಷತೆಯಿಂದ ಕೆಲಸ ಮಾಡಿದರೆ ಅಪರಾಧಗಳು ಕಡಿಮೆಯಾಗುತ್ತದೆ. ಸಮಾಜದಲ್ಲಿ ಶಾಂತಿ ನೆಲೆಸುತ್ತದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಕೋರಮಂಗಲ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯಮಂತ್ರಿಗಳ ಪದಕ ಪುರಸ್ಕೃತರಿಗೆ ಪದಕಗಳನ್ನು ಪ್ರದಾನ ಮಾಡಿ ಮಾತನಾಡಿದರು. https://twitter.com/siddaramaiah/status/1907359146967703722 ಕಾನೂನು ಸುವ್ಯವಸ್ಥೆ ಮತ್ತು ಬಂಡವಾಳ ಹೂಡಿಕೆ ಹಾಗೂ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ಒಂದಕ್ಕೊಂದು ನೇರ ಸಂಬಂಧವಿದೆ. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗ್ತಿದೆ. ಇದನ್ನು ನಿರ್ವಹಿಸಬೇಕಾದರೆ ಕಾನೂನು ಸುವ್ಯವಸ್ಥೆ , ಶಾಂತಿ ಪಾಲನೆ ಉತ್ತಮವಾಗಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಮೂರು ವರ್ಷಗಳಿಂದ ಬಾಕಿ ಉಳಿದಿದ್ದ ಮುಖ್ಯಮಂತ್ರಿಗಳ ಪದಕವನ್ನು ಈ ಬಾರಿ ಒಟ್ಟಾಗಿ ವಿತರಿಸಿದ್ದೇವೆ. ಎಲ್ಲಾ ಪದಕ ಪುರಸ್ಕೃತರಿಗೂ ಅಭಿನಂದನೆಗಳು ಎಂದು ಅಭಿನಂದಿಸಿದರು. ತಂತ್ರಜ್ಞಾನದ ಬೆಳವಣಿಗೆಯಿಂದ ಸೈಬರ್ ಅಪರಾಧಗಳು ವ್ಯಾಪಕವಾಗಿ ಹೆಚ್ವುತ್ತಿವೆ. ಅದೇ ತಂತ್ರಜ್ಞಾನದ…

Read More

ಬೆಂಗಳೂರು: ಮುಡಾ ಹಗರಣ ಸಂಬಂಧ ಇಡಿ ಕೂಡ ಎಂಟ್ರಿಯಾಗಿತ್ತು. ಇದೀಗ ಇಡಿಯಿಂದ ಮುಡಾ ಪ್ರಕರಣದ ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಮುಡಾ ಹಗರಣದ ಇತರೆ ಆರೋಪಿಗಳಿಗೂ ನಡುಕ ಶುರುವಾದಂತೆ ಆಗಿದೆ. ಈ ಸಂಬಂಧ ಹೈಕೋರ್ಟ್ ನ್ಯಾಯಪೀಠದಲ್ಲಿ ಇಂದು ಅರ್ಜಿಯ ವಿಚಾರಣೆ ನಡೆಸಲಾಯಿತು. ಡಿ.ಬಿ ನಟೇಶ್ ಅವರ ಹೇಳಿಕೆಯನ್ನು ಆಧರಿಸಿ ಹೈಕೋರ್ಟ್ ನ್ಯಾಯಪೀಠವು ಮುಡಾ ಹಗರಣ ಸಂಬಂಧ ಇಡಿ ತನಿಖೆಗೆ ಅನುಮತಿ ನೀಡಿದೆ. ಮುಡಾ ಪ್ರಕರಣದಲ್ಲಿ ಇಡಿ ತನಿಖೆಗೆ ಹೈಕೋರ್ಟ್ ಇತರೆ ಆರೋಪಿಗಳ ವಿರುದ್ಧದ ತನಿಖೆಗೆ ವಿಭಾಗೀಯ ಪೀಠವು ಅನುಮತಿ ನೀಡಿದೆ. ಹೀಗಾಗಿ ಮುಡಾ ಪ್ರಕರಣ ಈಗ ಮತ್ತೊಂದು ತಿರುವು ಪಡೆದಂತೆ ಆಗಿದೆ. ಇನ್ನೂ ಡಾ.ಡಿಬಿ ನಟೇಶ್ ವಿರುದ್ಧದ ಸಮನ್ಸ್ ರದ್ದು ಆದೇಶಕ್ಕೆ ತಡೆ ನೀಡಿಲ್ಲ. ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡಲು ನಕಾರ ವ್ಯಕ್ತಪಡಿಸಿದೆ. ಆದರೇ ಡಿ.ಬಿ ನಟೇಶ್ ಹೇಳಿಕೆ ಆಧರಿಸಿ ಇಡಿ ತನಿಖೆ ಮುದುವರೆಸಬಹುದು ಎಂಬುದಾಗಿ ಸಿಜೆ ಅಂಜಾರಿಯಾ, ನ್ಯಾಯಮೂರ್ತಿ ಅರವಿಂದ್ ಅವರಿದ್ದಂತ…

Read More

ರಾಯಚೂರು: ಜೆಡಿಎಸ್ ಶಾಸಕಿ ಕರೆಮ್ಮ ಪುತ್ರಿ ಗೌರಿಯವರ ಕಾರು ಬೈಕ್ ಸವಾರನಿಗೆ ಡಿಕ್ಕಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಮಿಯ್ಯಾಪುರ ಕ್ರಾಸ್ ಬಳಿಯಲ್ಲಿ ಜೆಡಿಎಸ್ ಶಾಸಕ ಕರೆಮ್ಮ ಜಿ ನಾಯಕ್ ಅವರ ಪುತ್ರಿ ಗೌರಿ ಬೈಕ್ ಒಂದಕ್ಕೆ ಕಾರನ್ನು ಡಿಕ್ಕಿ ಹೊಡೆದಿದ್ದಾರೆ. ಶಾಸಕಿ ಪುತ್ರಿ ಕಾರು ಡಿಕ್ಕಿಯಾಗಿ ಆಂಧ್ರಪ್ರದೇಶ ಮೂಲದ ಬೈಕ್ ಸವಾರ ಕೋಮಿಶೆಟ್ಟಿ ಕೃಷ್ಣ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇಂದು ಬೆಳಗ್ಗೆಯಿಂದ ನೀರಿಗಾಗಿ ಪಾದಯಾತ್ರೆಯನ್ನು ಶಾಸಕಿ ಕರೆಮ್ಮ ನಡೆಸುತ್ತಿದ್ದರು. ಅತ್ತ ಪಾದಯಾತ್ರೆ ಶುರುವಾದ ಬಳಿಕ ಶಾಸಕಿ ಕರೆಮ್ಮ ಅವರ ಪುತ್ರಿ ಹೊರಟಿದ್ದರು. ಈ ವೇಳೆಯಲ್ಲಿ ಶಾಸಕಿ ಕರೆಮ್ಮ ಜಿ ನಾಯಕರ ಪುತ್ರಿ ಗೌರಿ ಕಾರು ಅಪಘಾತವಾಗಿದೆ. ಶಾಸಕಿ ಪುತ್ರಿ ಗೌರಿ ಕಾರು ಡಿಕ್ಕಿಯಾದಂತ ಘಟನೆಯ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವೀಡಿಯೋ ಕಂಡಂತ ನೆಟ್ಟಿಗರು ಜೆಡಿಎಸ್ ಶಾಸಕಿ ವಿರುದ್ಧ ಆಕ್ರೋಶವನ್ನು…

Read More

ಬೆಂಗಳೂರು: ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) 2024-25ನೇ ಸಾಲಿನಲ್ಲಿ 1,787 ಕೋಟಿ ರೂಪಾಯಿ ದಾಖಲೆ ವಹಿವಾಟು ನಡೆಸಿ, ₹416 ಕೋಟಿ ನಿವ್ವಳ ಲಾಭ ಗಳಿಸಿದೆ. ಇದು ಸಾಲಿಗಿಂತ ₹54 ಕೋಟಿ ಹೆಚ್ವು. ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಮತ್ತು ಕೆಎಸ್ ಡಿಎಲ್ ಅಧ್ಯಕ್ಷರೂ ಆದ ಶಾಸಕ ಅಪ್ಪಾಜಿ ಸಿ.ಎಸ್.ನಾಡಗೌಡ ಅವರು ಜಂಟಿ ಹೇಳಿಕೆಯಲ್ಲಿ ವಿವರಿಸಿದ್ದಾರೆ. ಈ ಬಗ್ಗೆ ಬುಧವಾರ ಮಾಹಿತಿ ನೀಡಿರುವ ಸಚಿವರು, ಕಳೆದ ಹಣಕಾಸು ವರ್ಷದಲ್ಲಿ ಸಂಸ್ಥೆಯು 43,144 ಮೆಟ್ರಿಕ್ ಟನ್ ಸಾಬೂನು ಮತ್ತು ಮಾರ್ಜಕಗಳನ್ನು ಮಾರಾಟ ಮಾಡಿ, ದಾಖಲೆಯ ಲಾಭ ಗಳಿಸಿದೆ. ಲಾಭದಲ್ಲಿ ನಿಯಮಾನುಸಾರ ಶೇ.30ರಷ್ಟನ್ನು, ಅಂದರೆ ₹123 ಕೋಟಿಯನ್ನು ಸರಕಾರಕ್ಕೆ ಹಸ್ತಾಂತರಿಸಲಾಗುವುದು ಎಂದಿದ್ದಾರೆ. ಸಂಸ್ಥೆಯು 2023-24ರಲ್ಲಿ 37,916 ಟನ್ ಉತ್ಪನ್ನ ಮಾರಾಟ ಮಾಡಿ, 1,570 ಕೋಟಿ ರೂಪಾಯಿ ವಹಿವಾಟು ನಡೆಸುವ ಮೂಲಕ 362 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿತ್ತು. ಆ ಪೈಕಿ 108 ಕೋಟಿ…

Read More

ಶಿವಮೊಗ್ಗ: ಜಿಲ್ಲೆಯಲ್ಲಿ ವೈಯಕ್ತಿಕ ವಿಚಾರಕ್ಕೆ ಉಂಟಾದಂತ ಜಗಳ ತಾರಕಕ್ಕೇರಿದಂತ ವೇಳೆಯಲ್ಲಿ ಗುದ್ದಲಿಯಿಂದಲೇ ಹೊಡೆದು ಸ್ನೇಹಿತನನ್ನು ಕೊಂದಿರುವಂತ ಬೆಚ್ಚಿ ಬೀಳಿಸೋ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ ತಾವರೆಕೊಪ್ಪದಲ್ಲಿ ವೈಯಕ್ತಿಕ ವಿಚಾರಕ್ಕೆ ದೇವರಾಜ್ ಹಾಗೂ ವೆಂಕಟೇಶ್ ಎಂಬುವರ ನಡುವೆ ಜಗಳ ಉಂಟಾಗಿದೆ. ಜಗಳ ತಾರಕ್ಕೇರಿದಂತ ಸಂದರ್ಭದಲ್ಲಿ ಆರೋಪಿ ವೆಂಕಟೇಶ್ ಸ್ನೇಹಿತ ದೇವರಾಜನನ್ನು ಗುದ್ದಲಿಯಿಂದ ಹೊಡೆದಿದ್ದಾನೆ. ಗುದ್ದಲಿಯಿಂದ ಸ್ನೇಹಿತ ದೇವರಾಜ್(31) ಹೊಡೆದ ಪರಿಣಾಮ ಸ್ಥಳದಲ್ಲೇ ತೀವ್ರ ರಕ್ತಸ್ತ್ರಾವದಿಂದ ಸಾವನ್ನಪ್ಪಿದ್ದಾನೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಶಿವಮೊಗ್ಗ ಗ್ರಾಮಾಂತರ ಠಾಣೆಯ ಪೊಲೀಸರು ಆರೋಪಿ ವೆಂಕಟೇಶ್ ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. https://kannadanewsnow.com/kannada/breaking-muda-case-in-trouble-for-cm-again-ed-files-petition-seeking-rejection-of-lokayukta-report/ https://kannadanewsnow.com/kannada/state-government-orders-change-working-hours-of-government-offices-in-the-wake-of-scorching-heat/

Read More

ಬೆಂಗಳೂರು: ದೆಹಲಿಗೆ ಸಿಎಂ ಸಿದ್ಧರಾಮಯ್ಯ ತೆರಳಿದ್ದಾರೆ. ಇಂದು ಮಧ್ಯಾಹ್ನ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯನ್ನು ಭೇಟಿಯಾಗಿರುವಂತ ಅವರು, ನಾಳೆ ಮತ್ತಿಬ್ಬರು ಕೇಂದ್ರ ಸಚಿವರನ್ನು ಭೇಟಿಯಾಗಲಿದ್ದಾರೆ. ಮುಖ್ಯಮಂತ್ರಿ ಕಾರ್ಯಾಲಯದಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು ನಾಳೆ ಮಧ್ಯಾಹ್ನ 12.30ಕ್ಕೆ ಕೇಂದ್ರ ಜಲಶಕ್ತಿ ಸಚಿವ ಸಿಆರ್ ಪಾಟೀಲ್ ಅವರನ್ನು ಸಿಎಂ ಸಿದ್ಧರಾಮಯ್ಯ ಅವರು ಭೇಟಿಯಾಗುತ್ತಿರುವುದಾಗಿ ತಿಳಿಸಿದೆ. ಇನ್ನೂ ಮಧ್ಯಾಹ್ನ 2.30ಕ್ಕೆ ಕೇಂದ್ರ ವಿಮಾನಯಾನ ಸಚಿವ ಕೆ.ರಾಂಮೋಹನ್ ನಾಯ್ಡು ಅವರನ್ನು ದೆಹಲಿಯ ರಾಜೀವ್ ಗಾಂಧಿ ಭವನದಲ್ಲಿ ಸಿಎಂ ಸಿದ್ಧರಾಮಯ್ಯ ಭೇಟಿಯಾಗಲಿದ್ದಾರೆ. ಕೇಂದ್ರ ಜಲಶಕ್ತಿ ಸಚಿವರೊಂದಿಗೆ ರಾಜ್ಯದ ಜಲ ವಿವಾದಗಳು, ನೀರಿನ ಸಮಸ್ಯೆ ಸಂಬಂಧ ಸಿಎಂ ಸಿದ್ಧರಾಮಯ್ಯ ಚರ್ಚೆ ನಡೆಸಿದರೇ, ವಿಮಾನಯಾನ ಸಚಿವರೊಂದಿಗೆ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಚರ್ಚಿಸೋ ಸಾಧ್ಯತೆ ಇದೆ. https://kannadanewsnow.com/kannada/bjp-begins-sit-in-protest-against-price-rise-at-freedom-park-in-bengaluru/ https://kannadanewsnow.com/kannada/breaking-muda-case-in-trouble-for-cm-again-ed-files-petition-seeking-rejection-of-lokayukta-report/

Read More

ಬೆಂಗಳೂರು: ರಾಜ್ಯದಲ್ಲಿ ಬೆಲೆ ಏರಿಕೆ ಗ್ಯಾರಂಟಿ ಕೊಡುವ ಕಾಂಗ್ರೆಸ್ ಪಕ್ಷದ ಸರಕಾರ ಅಧಿಕಾರದಲ್ಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ  ಅವರು ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಇಂದು ಬಿಜೆಪಿಯ ಅಹೋರಾತ್ರಿ ಧರಣಿಯ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ನುಡಿದಂತೆ ನಡೆದ ಸರಕಾರ ಎಂದು ಜಾಹೀರಾತು ನೀಡುತ್ತಿದ್ದಾರೆ. ಇದು ಮನುಷ್ಯತ್ವ ಇರುವ ಸರಕಾರ ಅಲ್ಲ; ಅಧಿಕಾರಕ್ಕೆ ಬಂದ ಕೇವಲ 24 ಗಂಟೆಗಳಲ್ಲಿ ಗ್ಯಾರಂಟಿ ಅನುಷ್ಠಾನ ಮಾಡುವುದಾಗಿ ಹೇಳಿದ್ದರು. ಆದರೆ, ತಿಂಗಳುಗಳೇ ಕಳೆದರೂ ಗ್ಯಾರಂಟಿಗಳು ಸರಿಯಾಗಿ ಅನುಷ್ಠಾನ ಆಗಿಲ್ಲ ಎಂದು ಆಕ್ಷೇಪಿಸಿದರು. ಕುರ್ಚಿಯ ಅಭದ್ರತೆ ಕಾಡುತ್ತಿದ್ದರೆ.. ಮುಖ್ಯಮಂತ್ರಿಗಳೇ ದಯವಿಟ್ಟು ನಿಮ್ಮ ಎ.ಸಿ. ರೂಮಿನಿಂದ ಹೊರಕ್ಕೆ ಬನ್ನಿ. ನೀವು ಬೆಂಗಳೂರಿನ ಸಿಎಂ ಅಲ್ಲ; ರಾಯಚೂರು, ಕೊಪ್ಪಳ, ಬೆಳಗಾವಿ ಸೇರಿ ರಾಜ್ಯದ ಎಲ್ಲ ಜಿಲ್ಲೆಗಳಿಗೆ ಸಚಿವರ ಜೊತೆ ಪ್ರವಾಸ ಮಾಡಿ ಎಂದು ವಿಜಯೇಂದ್ರ ಅವರು ಆಗ್ರಹಿಸಿದರು. ಸಿದ್ದರಾಮಯ್ಯನವರೇ, ಹಿಂದೆ ರಾಜ ಮಹಾರಾಜರು…

Read More