Author: kannadanewsnow09

ಮಡಿಕೇರಿ : ಮಾನವ ಸಂಪನ್ಮೂಲ ಇಲಾಖೆಯ ಅಡಿಯಲ್ಲಿ ನಡೆಯುವ ಜವಾಹರ ನವೋದಯ ವಿದ್ಯಾಲಯದಲ್ಲಿ 2025-26 ನೇ ಸಾಲಿಗೆ 9 ಮತ್ತು 11 ನೇ ತರಗತಿಗೆ ಖಾಲಿ ಇರುವ ಸ್ಥಾನಗಳ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳಿಂದ ಆನ್‍ಲೈನ್‍ನಲ್ಲಿ ಅರ್ಜಿಯನ್ನು ಈಗಾಗಲೇ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ಅಕ್ಟೋಬರ್, 30 ರವರೆಗೆ ವಿಸ್ತರಿಸಿದ್ದು, ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದು. 9ನೇ ತರಗತಿಗೆ ಅರ್ಜಿ ಸಲ್ಲಿಸುವವರು ಕೊಡಗು ಜಿಲ್ಲೆಯ ಸರ್ಕಾರಿ, ಅರೆ ಸರ್ಕಾರಿ, ಅನುದಾನಿತ, ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಪ್ರೌಢಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರು ಈ ಪರೀಕ್ಷೆ ಬರೆಯಲು ಅರ್ಹರಾಗಿರುತ್ತಾರೆ. ವಿದ್ಯಾರ್ಥಿಯ ಪಾಲಕರು ಕೊಡಗು ಜಿಲ್ಲೆಯ ನಿವಾಸಿಯಾಗಿದ್ದು, ವಿದ್ಯಾರ್ಥಿಯೂ ಕೂಡ ಕೊಡಗು ಜಿಲ್ಲೆಯಲ್ಲೇ ಓದುತ್ತಿರಬೇಕು. ಅಭ್ಯರ್ಥಿ ದಿನಾಂಕ 01/05/2010 ರಿಂದ 31/07/2012 ರೊಳಗೆ ಜನಿಸಿದವರಾಗಿರಬೇಕು. ಅರ್ಜಿ ಸಲ್ಲಿಸಲು ಅಕ್ಟೋಬರ್, 30 ಕೊನೆಯ ದಿನವಾಗಿದೆ. ಪರೀಕ್ಷೆಯು 2025 ರ ಫೆಬ್ರವರಿ, 08 ರಂದು ನಡೆಯಲಿದೆ. 11 ನೇ ತರಗತಿಗೆ…

Read More

ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ರಿಯೋ ಒಲಿಂಪಿಕ್ಸ್ 2016 ರಲ್ಲಿ ನಾಲ್ಕನೇ ಸ್ಥಾನ ಪಡೆದ ಭಾರತದ ಸ್ಟಾರ್ ಜಿಮ್ನಾಸ್ಟ್ ದೀಪಾ ಕರ್ಮಾಕರ್ ಜಿಮ್ನಾಸ್ಟಿಕ್ಸ್ಗೆ ನಿವೃತ್ತಿ ಘೋಷಿಸಿದ್ದಾರೆ. ಕಷ್ಟಕರವಾದ ಪ್ರೊಡುನೋವಾ ವಾಲ್ಟ್ ಮಾಡಲು ಹೆಸರುವಾಸಿಯಾದ ದೀಪಾ ಗಾಯದ ಸಮಸ್ಯೆಗಳಿಂದ ಬಳಲುತ್ತಿದ್ದರು ಮತ್ತು ಅವರ ದೇಹದ ಪರಿಸ್ಥಿತಿಯನ್ನು ಪರಿಗಣಿಸಿ, ಅವರು ನಿವೃತ್ತಿಯ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ದೀಪಾ ಸೋಷಿಯಲ್ ಮೀಡಿಯಾ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಅಲ್ಲಿ ಅವರು ಅಭಿಮಾನಿಗಳಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ ಮತ್ತು ಅವರ ನಿರ್ಧಾರದ ನಿಜವಾದ ಕಾರಣವನ್ನು ಬಹಿರಂಗಪಡಿಸಿದ್ದಾರೆ. ದೀಪಾ ಇತ್ತೀಚೆಗೆ ಏಷ್ಯನ್ ಚಾಂಪಿಯನ್ಶಿಪ್ ಗೆದ್ದ ಮೊದಲ ಭಾರತೀಯ ಜಿಮ್ನಾಸ್ಟ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಏಷ್ಯನ್ ಜಿಮ್ನಾಸ್ಟಿಕ್ಸ್ ಚಾಂಪಿಯನ್ಶಿಪ್ 2024ರಲ್ಲಿ ದೀಪಾ ಕರ್ಮಾಕರ್ ಏಷ್ಯನ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದರು. https://kannadanewsnow.com/kannada/breaking-former-minister-b-sriramulus-facebook-instagram-accounts-hacked/ https://kannadanewsnow.com/kannada/dissolve-assembly-and-go-for-elections-based-on-caste-census-report-hdk/

Read More

ಬಳ್ಳಾರಿ : ರೈಲ್ವೆ ಇಲಾಖೆಯಲ್ಲಿ ಒಟ್ಟು 12 ಲಕ್ಷ ಹುದ್ದೆಗಳಿದ್ದು, ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಈ ಪರೀಕ್ಷೆಯನ್ನು ಕನ್ನಡದಲ್ಲಿಯೇ ಬರೆಯಲು ಆದೇಶ ನೀಡಲಾಗಿದ್ದು, ನಮ್ಮ ರಾಜ್ಯದ ಯುವಕರು ಇದರ ಉಪಯೋಗ ಪಡೆದುಕೊಳ್ಳಬೇಕು, ಮುಂದಿನ ದಿನಗಳಲ್ಲಿಯೂ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಲಾಗುತ್ತದೆ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಎಂದು ತಿಳಿಸಿದ್ದಾರೆ. ಬಳ್ಳಾರಿ ಜಿಲ್ಲೆಯ ವಿವಿಧ ರೈಲ್ವೆ ಯೋಜನೆಗಳಿಗೆ ಸಂಬಂಧಿಸಿದಂತೆ ನೂತನ ಜಿಲ್ಲಾಡಳಿತ ಭವನದ ಕಚೇರಿ ಸಭಾಂಗಣದಲ್ಲಿ ರೈಲ್ವೆ ಇಲಾಖೆ ಅಧಿಕಾರಿಗಳು ಮತ್ತು ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆ ನಂತರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಬಳ್ಳಾರಿ-ಹೊಸಪೇಟೆ ಭಾಗದಲ್ಲಿ ವಿವಿಧ ರೈಲ್ವೆ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಇದಕ್ಕಾಗಿ 6,200 ಕೋಟಿ ರೂ. ವ್ಯಯಿಸಲಾಗುತ್ತಿದೆ. ಈಗಾಗಲೇ ವಿವಿಧ ಯೋಜನೆಗಳ ಸರ್ವೇ ಕಾರ್ಯ ಪೂರ್ಣಗೊಳಿಸಲಾಗಿದ್ದು, ಅವುಗಳ ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಿದರು. ಬಳ್ಳಾರಿ-ಚಿಕ್ಕಜಾಜೂರು ಮಾರ್ಗದ 185…

Read More

ಬೆಂಗಳೂರು: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ-2 ತಂತ್ರಾಂಶದೊಂದಿಗೆ ಇ-ಆಸ್ತಿ ತಂತ್ರಾಂಶವನ್ನು ಸಂಯೋಜಿಸಲಾಗಿದ್ದು ಅಕ್ಟೋಬರ್ 07ರ ಇಂದಿನಿಂದ ಅನ್ವಯವಾಗುವಂತೆ ಅನುಷ್ಟಾನಗೊಳಿಸಲಾಗಿದೆ. ಸರ್ಕಾರದ ಸುತ್ತೋಲೆಯ ಸೂಚನೆ ಮೇರೆಗೆ ರಾಜ್ಯಾಧ್ಯಂತ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಗೆ ಇ-ಆಸ್ತಿ ತಂತ್ರಾಂಶದಲ್ಲಿ ಮಾತ್ರ ಸ್ವತ್ತಿನ ನಮೂನೆ 2/3ನ್ನು ನೀಡಲು ಹಾಗೂ ಹಕ್ಕು ವರ್ಗಾವಣೆಗೆ ಕ್ರಮವಹಿಸಲು ಮತ್ತು ಇ-ಆಸ್ತಿ ತಂತ್ರಾಂಶವನ್ನು ಹೊರತುಪಡಿಸಿ ಭೌತಿಕವಾಗಿ ಹಾಗೂ ಖಾಸಗಿ ತಂತ್ರಾಂಶವನ್ನು ಬಳಕೆ ಮಾಡಿ ನಮೂನೆ 2/3ನ್ನು ನೀಡಬಾರದಾಗಿ ಆದೇಶವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಅ.07ರ ಇಂದಿನಿಂದ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸ್ವತ್ತಿ ನಮೂನೆ 2/3ನ್ನು ಇ-ಆಸ್ತಿ ತಂತ್ರಾಂಶದಲ್ಲಿ ವಿತರಿಸಲಾಗುತ್ತದೆ. ಸಾರ್ವಜನಿಕರು ಸಹಕರಿಸುವಂತೆ ಇಲಾಖೆ ಮನವಿ ಮಾಡಿದೆ. https://kannadanewsnow.com/kannada/bengaluru-5-year-old-boy-dies-after-eating-cake-parents-condition-critical/ https://kannadanewsnow.com/kannada/breaking-former-minister-b-sriramulus-facebook-instagram-accounts-hacked/ https://kannadanewsnow.com/kannada/dissolve-assembly-and-go-for-elections-based-on-caste-census-report-hdk/

Read More

ಬೆಂಗಳೂರು: ಈಗಾಗಲೇ ಬೆಂಗಳೂರಿನ ಕೆಲ ಬೇಕರಿಗಳಲ್ಲಿ ಕೇಕ್ ನಲ್ಲಿ ವಿಷಕಾರಿ ಬಣ್ಣ ಬಳಕೆ ಮಾಡಲಾಗುತ್ತಿದೆ. ಇದು ಕ್ಯಾನ್ಸರ್ ಗೆ ಕಾರಣವಾಗಬಹುದು ಎಂಬುದಾಗಿ ತಿಳಿದು ಬಂದಿತ್ತು. ಈಗ ಬೆಂಗಳೂರಲ್ಲಿ ಕೇಕ್ ತಿಂದಂತ ಐದು ವರ್ಷದ ಮಗುವೊಂದು ಸಾವನ್ನಪ್ಪಿ, ತಂದಿ-ತಾಯಿಗಳು ಅಸ್ವಸ್ಥಗೊಂಡು ಗಂಭೀರ ಸ್ಥಿತಿಯನ್ನು ತಲುಪಿರುವಂತ ಘಟನೆ ನಡೆದಿದೆ. ಬೆಂಗಳೂರಿನ ಕೆಪಿ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ ಮನೆಗೆ ಕೇಕ್ ಖರೀದಿಸಿ ಸ್ವಿಗ್ಗಿ ಡಿಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದಂತ ಬಾಲರಾಜ್ ಕೊಂಡೊಯ್ದಿದ್ದಾರೆ. ಇಂತಹ ಕೇಕ್ ತಿಂದಂತ ಅವರ ಮಗ ಧೀರಜ್ (5) ವರ್ಷ ಸಾವನ್ನಪ್ಪಿದ್ದಾನೆ. ಆ ಬಳಿಕ ಅದೇ ಕೇಕ್ ತಿಂದಂತ ಬಾಲರಾಜ್ ಹಾಗೂ ಅವರ ಪತ್ನಿ ಕೂಡ ಅಸ್ವಸ್ಥಗೊಂಡಿದ್ದಾರೆ. ಅವರ ಸ್ಥಿತಿ ಗಂಭೀರವಾಗಿರೋದಾಗಿ ತಿಳಿದು ಬಂದಿದೆ. ಈ ಬಗ್ಗೆ ಕಿಮ್ಸ್ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದು ಧೀರಜ್ ಆಸ್ಪತ್ರೆಗೆ ಕರೆದುಕೊಂಡು ಬರುವ ವೇಳೆಗೆ ಸಾವನ್ನಪ್ಪಿದ್ದರು ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. ಇನ್ನೂ ಬಾಲರಾಜ್ ಮತ್ತೆ ಅವರ ಪತ್ನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಘೋರ ದುರಂತ ಒಂದು ಸಂಭವಿಸಿದ್ದು, ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು ಮಹಿಳೆ ಒಬ್ಬರು ಸಾವನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ನಡೆದಿತ್ತು. ಈ ಘಟನೆಗೆ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂಬುದಾಗಿ ಬಾಮೈದ ಶಿವರಾಮ್ ನೀಡಿದಂತ ದೂರಿನ ಹಿನ್ನಲೆಯಲ್ಲಿ ಬೆಸ್ಕಾಂ ಅಧಿಕಾರಿಗಳ ವಿರುದ್ಧ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಹೌದು ವಿದ್ಯುತ್ ತಂತಿ ತುಂಡಾಗಿ ಬಿದ್ದು ಮಹಿಳೆ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಮನೆಯ ಬಳಿ ನಿಂತಿದ್ದಾಗ ಏಕಾಏಕಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿದೆ. ಚಿಕ್ಕನಹಳ್ಳಿ ಗ್ರಾಮದ ನಿವಾಸಿ ಮಂಜಮ್ಮ (50) ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಮಂಜಮ್ಮ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆ ಕುರಿತಂತೆ ಬೆಂಗಳೂರಿನ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ವ್ಯಾಪ್ತಿಯಲ್ಲಿ ನಡೆದಿತ್ತು. ಬೆಸ್ಕಾಂ ನಿರ್ಲಕ್ಷ್ಯದಿಂದ ಮಂಜಮ್ಮ ಸಾವನ್ನಪ್ಪಿದ್ದಾರೆ ಎಂಬುದಾಗಿ ಭಾಮೈದ…

Read More

ಬೆಂಗಳೂರು: ಗ್ರಾಮ ಪಂಚಾಯತಿಗಳು ಜನವಸತಿ ಸಭೆ, ವಾರ್ಡ್ ಸಭೆ ಹಾಗೂ ಗ್ರಾಮಸಭೆಗಳನ್ನು ನಡೆಸುವುದು ಕಡ್ಡಾಯವಾಗಿದ್ದು ಈ ಸಂಬಂಧದಲ್ಲಿ ಕಾರ್ಯಾಚರಣೆ ವಿಧಾನದ ಮಾರ್ಗಸೂಚಿಗಳನ್ನು ರೂಪಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ-1993ರ ಅನುಷ್ಠಾನ ಹಾಗೂ ಪಂಚಾಯತ್ ರಾಜ್ ವ್ಯವಸ್ಥೆಯ ಬಲವರ್ಧನೆಗಾಗಿ ಗ್ರಾಮ ಪಂಚಾಯತಿಗಳು ಸಭೆಗಳನ್ನು ನಡೆಸುವುದು ಕಡ್ಡಾಯವಾಗಿದ್ದು, ಗ್ರಾಮಸಭೆ ಸೇರುವ ಒಂದು ತಿಂಗಳು ಮೊದಲೇ ಜನವಸತಿ ಸಭೆ ಹಾಗೂ ವಾರ್ಡ್ ಸಭೆಗಳನ್ನು ಗ್ರಾಮ ಪಂಚಾಯತಿ ಅಧ್ಯಕ್ಷರು ನಡೆಸಬೇಕು, ಒಂದು ವರ್ಷದಲ್ಲಿ ಎರಡು ಗ್ರಾಮ ಸಭೆಗಳನ್ನು ಕಡ್ಡಾಯವಾಗಿ ನಡೆಸಬೇಕು ಎಂಬ ಮಾಹಿತಿ ಮಾರ್ಗಸೂಚಿಗಳಲ್ಲಿದೆ ಎಂದು ಸಚಿವರು ಹೇಳಿದರು. ಪ್ರತಿ ಆರ್ಥಿಕ ವರ್ಷದಲ್ಲಿ ಜನವರಿ ಮಾಹೆಯ 26, ಏಪ್ರಿಲ್ ಮಾಹೆಯ 24, ಆಗಸ್ಟ್ ಮಾಹೆಯ 15 ಮತ್ತು ಅಕ್ಟೋಬರ್ ಮಾಹೆಯ 2ರಂದು ಕಡ್ಡಾಯವಾಗಿ ಗ್ರಾಮ ಸಭೆಗಳನ್ನು ಆಯೋಜಿಸಲು ಸೂಚಿಸಲಾಗಿದೆ, ಒಂದು ವರ್ಷದಲ್ಲಿ ಒಂದು ವಿಶೇಷ ಮಹಿಳಾ…

Read More

ಬೆಂಗಳೂರು : “ನಮ್ಮ ಪಕ್ಷದ ನಾಯಕರನ್ನು ನಾವು ಭೇಟಿ ಮಾಡುವುದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ” ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದರು. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸಕ್ಕೆ ಭೇಟಿ ನೀಡಿ ಸಮಾಲೋಚನೆ ನಡೆಸಿದ ಬಳಿಕ ಸುರೇಶ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಪಕ್ಷದ ನಾಯಕರು ಗೌಪ್ಯ ವಾಗಿ ಸಭೆ ಮಾಡುತ್ತಿರುವ ಬಗ್ಗೆ ಕೇಳಿದಾಗ, “ನಮ್ಮ ಪಕ್ಷದ ನಾಯಕರು, ನಮ್ಮದೇ ಪಕ್ಷದ ನಾಯಕರನ್ನು ಭೇಟಿ ಮಾಡುತ್ತಿದ್ದೇವೆ. ಒಂದು ವೇಳೆ ನಾವು ಯಡಿಯೂರಪ್ಪ ಅಥವಾ ಕುಮಾರಸ್ವಾಮಿ ಅವರನ್ನು ಗೌಪ್ಯವಾಗಿ ಭೇಟಿ ಮಾಡಿ ಸಭೆ ನಡೆಸಿದರೆ ಆಗ ವಿಶೇಷ ಅರ್ಥ ಕಲ್ಪಿಸಬಹುದು. ನಾವು ಪಕ್ಷ, ಸಂಘಟನೆ, ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ಈ ಭೇಟಿಯನ್ನು ಅನುಮಾನದಿಂದ ನೋಡುವುದು ಸರಿಯಲ್ಲ” ಎಂದು ತಿಳಿಸಿದರು. ಕನಕಪುರ- ರಾಮನಗರ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ ಈ ಭೇಟಿಯಲ್ಲಿ ರಾಜಕೀಯ ಚರ್ಚೆ ಆಗಿಲ್ಲವೇ ಎಂದು ಕೇಳಿದಾಗ, “ಈ ಭೇಟಿಯಲ್ಲಿ ರಾಜಕೀಯ ಇಲ್ಲ. ಸತೀಶ್ ಜಾರಕಿಹೊಳಿ…

Read More

ತುಮಕೂರು: ಜಾತಿ ಜನ ಗಣತಿ ಸರ್ಕಾರ ಮರು ಪರಿಶೀಲನೆ ಮಾಡುವ ಅಗತ್ಯವಿದೆ ಎಂಬುದಾಗಿ ಶ್ರೀ ನಂಜಾವಧೂತ ಸ್ವಾಮೀಜಿ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಗ್ರಾಮದ ಐತಿಹಾಸಿಕ ಪ್ರಸಿದ್ಧ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠದಲ್ಲಿ ಶರನ್ನವರಾತ್ರಿ ಅಂಗವಾಗಿ ಸೋಮವಾರ ನಡೆದ ಧರ್ಮ ಧ್ವಜ ಪ್ರತಿಷ್ಠಾಪನ ಮಹೋತ್ಸವದಲ್ಲಿ ಪಾಲ್ಗೊಂಡು ರಾಜ್ಯ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಜಾತಿ ಜನ ಗಣತಿ ವರದಿ ಮರು ಪರಿಶೀಲಿಸಬೇಕೆಂದು ಅಗ್ರಹಿಸಿದರು. ರಾಜ್ಯದಲ್ಲಿರುವ ಒಕ್ಕಲಿಗ ಮತ್ತು ಲಿಂಗಾಯಿತ ಸೇರಿದಂತೆ ಹಲವಾರು ಸಮುದಾಯಗಳ ಜಾತಿ ಜನಗಣತಿ ಸರಿಯಾದ ಕ್ರಮದಲ್ಲಿ ನಡೆದಿಲ್ಲ, ಇದು ಹಲವಾರು ಸಮುದಾಯಗಳ ಶೈಕ್ಷಣಿಕ, ಸಾಮಾಜಿಕ, ಉದ್ಯೋಗ ಗಳ ಮೇಲೆ ಪರಿಣಾಮ ಬೀರಲಿದೆ ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಆತುರ ಪಡದೆ ಜಾತಿ ಜನಗಣತಿ ಅನುಷ್ಠಾನಕ್ಕಿಂತ ಮುಂಚೆ ಮರು ಪರಿಶೀಲಿಸುವ ಅಗತ್ಯವಿದೆ ಎಂದರು. ಮತ್ತೊಮ್ಮೆ ಜಾತಿ ಗಣತಿ ರಾಜ್ಯದಲ್ಲಿ ನಡೆದರೆ ಎಲ್ಲಾ ಸಮಾಜಗಳಿಗೂ ಸಾಮಾಜಿಕ ನ್ಯಾಯ ಸಿಗಲಿದೆ ಈ ಬಗ್ಗೆ ಆತುರದ ನಿರ್ಧಾರ ಬೇಡ…

Read More

ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ 2015ರಲ್ಲಿ ನಡೆಸಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಜನಗಣತಿ) ವರದಿಯನ್ನು ಮಂಡಿಸಲಾಗಿತ್ತು. ಇದನ್ನು ಇದೇ ಅಕ್ಟೋಬರ್.18ರಂದು ನಡೆಯುವ ಸಂಪುಟ ಸಭೆಯ ಮುಂದೆ ತರುತ್ತೇನೆ. ಅಕ್ಟೋಬರ್.18ರಂದು ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆಯಾಗಲಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಜಾತಿಗಣತಿ ವರದಿ ಜಾರಿಯ ಬಗ್ಗೆ ಸಂಸದರು, ಶಾಸಕರನ್ನು ಒಳಗೊಂಡ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಜಾತಿಗಣತಿ ವರದಿ ಜಾರಿಗೆ ಶಾಸಕರು, ಸಂಸದರು ಮನವಿ ಮಾಡಿರುವುದಾಗಿ ತಿಳಿದು ಬಂದಿದೆ. ಈ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಸಿಎಂ ಸಿದ್ಧರಾಮಯ್ಯ ಅವರು, ಜಾತಿಗಣತಿ ವರದಿ ಜಾರಿ ವಿಚಾರವಾಗಿ ಸಂಸದರು, ಶಾಸಕರ ಜೊತೆಗೆ ಸಭೆ ನಡೆಸಿದ್ದೇನೆ. ಜಾತಿಗಣತಿ ವರದಿ ಜಾರಿ ಮಡಾುವಂತೆ ಮನವಿ ಪತ್ರ ನೀಡಿದ್ದಾರೆ ಎಂದರು. ದೇಶದಲ್ಲೇ ಮೊದಲ ಬಾರಿಗೆ ಜಾತಿ ಗಣತಿ ನಡೆಸಲಾಗಿದೆ. 2014ರಲ್ಲಿ ಕಾಂತರಾಜು ನೇತೃತ್ವದಲ್ಲಿ ಜಾತಿಗಣತಿ ನಡೆಸಲಾಗಿದೆ. ಆದರೇ ಜಾತಿಗಣತಿ…

Read More