Author: kannadanewsnow09

ಮಂಡ್ಯ : ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದರೇ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡು ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದಾರೆ. ಮದ್ದೂರು ತಾಲೂಕಿನ ರುದ್ರಾಕ್ಷಿಪುರ ಗ್ರಾಮದ ಬೈಪಾಸ್ ರಸ್ತೆಯಲ್ಲಿ ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಾಯಿ ಮತ್ತು ಮಗ ಮೃತ ಪಟ್ಟು ಮತ್ತಿಬ್ಬರಿಗೆ ತೀವ್ರವಾಗಿ ಗಾಯವಾಗಿರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ಮೂಲತಃ ಕುಣಿಗಲ್ (ಹಾಲಿ ಬೆಂಗಳೂರಿನ ಬಗಲಗುಂಟೆಯಲ್ಲಿ ವಾಸ) ಮೂಲದ ದರ್ಶನ್ (21), ತಾಯಿ ಕಲಾ (40) ಸ್ಥಳದಲ್ಲೇ ಮೃತಪಟ್ಟಿದ್ದು ಕಲಾ ಅವರ ಮಗಳು ಮೇಘ (23) ಹಾಗೂ ಅಳಿಯ ಮಂಜುನಾಥ್ ಅವರಿಗೆ ತೀವ್ರವಾಗಿ ಗಾಯಗಳಾಗಿ ಮದ್ದೂರು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಆಷಾಡ ಶುಕ್ರವಾರದ ಹಿನ್ನೆಲೆಯಲ್ಲಿ ಕುಟುಂಬ ಸಮೇತ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹೋಗಿ ದೇವರ ದರ್ಶನ ಪಡೆದು ವಾಪಾಸ್ ಬೆಂಗಳೂರಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ…

Read More

ಬೆಂಗಳೂರು: ಮೈಸೂರು ‘ಮುಡಾ’ ಹಗರಣವನ್ನು ಖಂಡಿಸಿ ಪ್ರತಿಭಟಿಸುವ ಹಕ್ಕೂ ನಮಗಿಲ್ಲವೇ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಪ್ರಶ್ನಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನಕ್ಕೆ ಇಂದು ಭೇಟಿ ನೀಡಿದ್ದ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. 1975ರಲ್ಲಿ ಕಾಂಗ್ರೆಸ್ ಪಕ್ಷದ ಆಗಿನ ಪ್ರಧಾನಿ ಇಂದಿರಾ ಗಾಂಧಿ ಸರ್ವಾಧಿಕಾರಿಯಾಗಿದ್ದರು. ಇದೀಗ 2024-25ರಲ್ಲಿ ಸಿದ್ದರಾಮಯ್ಯ ಒಬ್ಬ ಭಯಂಕರವಾದ ಸರ್ವಾಧಿಕಾರಿ, ಅಹಂಕಾರಿ ಮತ್ತು ಭ್ರಷ್ಟನಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಹೈಕಮಾಂಡ್‍ಗೆ ಏನಾದರೂ ಕಮಾಂಡ್ ಇದ್ದರೆ ಸಿದ್ದರಾಮಯ್ಯರನ್ನು ತಕ್ಷಣ ಹುದ್ದೆಯಿಂದ ಕೆಳಕ್ಕೆ ಇಳಿಸಬೇಕು ಎಂದು ಒತ್ತಾಯಿಸಿದರು. ಮುಡಾ ಹಗರಣದಲ್ಲಿ ಸಿದ್ದರಾಮಯ್ಯರ ನೇರ ತನಿಖೆ ಆಗಬೇಕಿದೆ. ಅವರ ಪಾಲ್ಗೊಳ್ಳುವಿಕೆ ಇಲ್ಲದೇ ಇಂಥ ದೊಡ್ಡ ಭ್ರಷ್ಟಾಚಾರ ಆಗಲು ಸಾಧ್ಯವಿಲ್ಲ ಎಂದು ನುಡಿದ ಅವರು, ಮೈಸೂರು ಅವರ ತವರೂರು. ಈ ಹಗರಣಕ್ಕೆ ಅವರೇ ನೇರ ಹೊಣೆ ಎಂದು ತಿಳಿಸಿದರು. ಅವರಿಗೆ ಗೊತ್ತಿದ್ದೇ ಭ್ರಷ್ಟಾಚಾರಗಳು ನಡೆಯುತ್ತಿವೆ ಎಂದು ಆಕ್ಷೇಪಿಸಿದರು. ವಾಲ್ಮೀಕಿ ಹಗರಣದ ಕುರಿತು ಮಾತನಾಡಿದ ಅವರು, ಒಂದೆಡೆ ಇ.ಡಿ, ಸಿಬಿಐ ಮಾಜಿ…

Read More

ಬೆಂಗಳೂರು: ರಾಜ್ಯಾಧ್ಯಂತ ಇಂದು ಡೆಂಗ್ಯೂ ಆರ್ಭಟಿಸಿದೆ. ಕಳೆದ 24 ಗಂಟೆಯಲ್ಲಿ 437 ಜನರಿಗೆ ಡೆಂಗ್ಯೂ ಪಾಸಿಟಿವ್ ಅಂತ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ 2704 ಜನರನ್ನು ಡೆಂಗ್ಯೂ ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 437 ಮಂದಿಗೆ ಡೆಂಗ್ಯೂ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ 8,658ಕ್ಕೆ ಏರಿಕೆಯಾಗಿದೆ ಅಂತ ತಿಳಿಸಿದೆ. ಇಂದು 1 ವರ್ಷದೊಳಗಿನ 7 ಮಕ್ಕಳಿಗೆ, 18 ವರ್ಷದೊಳಗಿನ 154 ಮಕ್ಕಳಿಗೆ, 18 ವರ್ಷ ಮೇಲ್ಪಟ್ಟ 276 ಸೇರಿದಂತೆ 437 ಜನರಿಗೆ ಡೆಂಗ್ಯೂ ಪತ್ತೆಯಾಗಿದೆ ಎಂದು ಮಾಹಿತಿ ನೀಡಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 165, ಬೆಂಗಳೂರು ನಗರದಲ್ಲಿ 10, ಬೆಂಗಳೂರು ಗ್ರಾಮಾಂತರ 5, ರಾಮನಗರ 14, ಕೋಲಾರ 19, ಚಿಕ್ಕಬಳ್ಳಾಪುರ 7, ತಮಕೂರು 5, ಚಿತ್ರದುರ್ಗ 3, ದಾವಣಗೆರೆ 24, ಬೆಳಗಾವಿ 32, ಗದಗ 15, ಉತ್ತರ ಕನ್ನಡ 01, ಕಲಬುರ್ಗಿ 20 ಜನರಿಗೆ…

Read More

ಬೆಂಗಳೂರು : “ಕಾವೇರಿ ಜಲಾನಯನದ ಪ್ರಮುಖ ಅಣೆಕಟ್ಟುಗಳಲ್ಲಿ ಸರಾಸರಿ ಶೇ. 62 ರಷ್ಟು ಮಾತ್ರ ನೀರಿನ ಲಭ್ಯತೆಯಿದೆ. ಸುಮಾರು 19 ಟಿಎಂಸಿಯಷ್ಟು ನೀರಿನ ಕೊರತೆ ಅಂದರೆ ಶೇ. 28 ರಷ್ಟು ನೀರಿನ ಕೊರತೆ ಕಂಡುಬಂದಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾವೇರಿ ನೀರಿನ ವಿಚಾರವಾಗಿ ನಡೆದ ಸಭೆಯ ನಂತರ ನಡೆದ ಮಾಧ್ಯಮಗೋಷ್ಠಿ ಹಾಗೂ ಇಂದಿರಾಗಾಂಧಿ ಭವನದಲ್ಲಿ ಮಾತನಾಡಿದ ಅವರು “ಹಾರಂಗಿ ಶೇ.73, ಹೇಮಾವತಿ ಶೇ.55, ಕೆ.ಆರ್.ಎಸ್ ಶೇ.54, ಕಬಿನಿಯಲ್ಲಿ ಶೇ. 96 ರಷ್ಟು ನೀರಿನ ಪ್ರಮಾಣವಿದೆ. ಕಳೆದ ವರ್ಷ ಸಾಕಷ್ಟು ಕೊರತೆ ಉಂಟಾಗಿತ್ತು. ನಾಲ್ಕು ವರ್ಷಗಳ ಹಿಂದೆ ಸಮೃದ್ಧವಾಗಿ ಮಳೆಯಾದ ಕಾರಣ ಕೊರತೆ ಕಂಡು ಬಂದಿರಲಿಲ್ಲ” ಎಂದರು. ಕಬಿನಿಯಿಂದ ತಮಿಳುನಾಡಿಗೆ ನೀರು ಬಿಡಲಾಗುತ್ತಿದೆಯೇ ಎಂದಾಗ “ಕಬಿನಿಯು ಶೇ96 ರಷ್ಟು ತುಂಬಿದ್ದು ಅಣೆಕಟ್ಟಿನ ಸುರಕ್ಷತೆ ದೃಷ್ಟಿಯಿಂದ ಒಳಹರಿವಿನ ಪ್ರಮಾಣದಷ್ಟೇ ನೀರನ್ನು ಹೊರಗೆ ಬಿಡಲಾಗುತ್ತಿದೆ” ಎಂದು ಹೇಳಿದರು. ಮಂಡ್ಯದಲ್ಲಿ ರೈತರ ಬೆಳೆಗಳಿಗೆ ನೀರು…

Read More

ಶಿವಮೊಗ್ಗ: ಮೆಸ್ಕಾಂ ( MESCOM ) ವಿದ್ಯುತ್ ಗ್ರಾಹಕರ ಅನುಕೂಲಕ್ಕಾಗಿ ಸಾರ್ವಜನಿಕ ರಜಾ ದಿನಗಳಲ್ಲಿಯೂ ಬಿಲ್ ಪಾವತಿ ಕೌಂಟರ್ ತೆರೆದಿರಲು ಕ್ರಮವಹಿಸಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಸೊರಬ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸತ್ಯಪ್ರಕಾಶ್ ಮಾಹಿತಿ ನೀಡಿದ್ದು, ಗ್ರಾಹಕರಿಗೆ ಮೆಸ್ಕಾಂ ಬಿಲ್ಲುಗಳನ್ನು ಪಾವತಿಸಲು ಅನುಕೂಲವಾಗುವಂತೆ ಸಾರ್ವತ್ರಿಕ ರಜಾ ದಿನಗಳಲ್ಲಿಯೂ ವಿದ್ಯುತ್ ಬಿಲ್ ಪಾವತಿ ಕೇಂದ್ರಗಳನ್ನು ತೆರೆದಿರಲು ನಿರ್ಧರಿಸಲಾಗಿದೆ ಅಂತ ತಿಳಿಸಿದ್ದಾರೆ. ಸಾರ್ವತ್ರಿಕ ರಜಾ ದಿನಗಳಾದಂತ ದಿನಾಂಕ 13-07-2024ರ ಎರಡನೇ ಶನಿವಾರ, ದಿನಾಂಕ 17-07-2024ರ ಮೋಹರಂ ಕೊನೆಯ ದಿನ, ದಿನಾಂಕ 27-07-2024ರ ನಾಲ್ಕನೇ ಶನಿವಾರ ಹಾಗೂ ದಿನಾಂಕ 28-07-2024ರ ಭಾನುವಾರದಂದು ಸೊರಬ ಉಪ ವಿಭಾಗ ವ್ಯಾಪ್ತಿಯಲ್ಲಿನ ಎಲ್ಲಾ ನಗದು ಕೌಂಟರ್ ಗಳು ತೆರೆದಿರಲಾಗಿರುತ್ತದೆ ಅಂತ ಹೇಳಿದ್ದಾರೆ. ವಿದ್ಯುತ್ ಗ್ರಾಹಕರು ಸದರಿ ರಜಾ ದಿನಗಳಂದು ತೆರೆದಿರುವ ನಗದು ಕೌಂಟರ್ ಗಳಿಗೆ ತೆರಳಿ, ವಿದ್ಯುತ್ ಬಿಲ್ ಬಾಕಿ ಇದ್ದರೇ ಪಾವತಿಸಿ, ಸದುಪಯೋಗ ಪಡೆದುಕೊಳ್ಳಿ. ವಿದ್ಯುತ್ ಸಂಪರ್ಕ ನಿಲುಗಡೆಗೆ ಅವಕಾಶ ನೀಡದಂತೆ, ನಿಗದಿತ ಅವಧಿಯೊಳಗೆ ಬಿಲ್…

Read More

ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಲಂಡನ್ನ ಲಾರ್ಡ್ಸ್ನಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸುವ ಯುವ ವೇಗದ ರೂಪದಲ್ಲಿ ಉದಯೋನ್ಮುಖ ತಾರೆಗೆ ಸಾಕ್ಷಿಯಾದ ಜೇಮ್ಸ್ ಆಂಡರ್ಸನ್ ತಮ್ಮ ಪ್ರಸಿದ್ಧ ಟೆಸ್ಟ್ ವೃತ್ತಿಜೀವನವನ್ನು ಅದ್ಭುತ ರೀತಿಯಲ್ಲಿ ಕೊನೆಗೊಳಿಸಿದರು. ಇಂಗ್ಲೆಂಡ್ ಕ್ರಿಕೆಟ್ನ ದಿಗ್ಗಜ ಆಟಗಾರ ಆಂಡರ್ಸನ್ 40,031 ಲೀಗಲ್ ಬಾಲ್ಗಳನ್ನು ಎಸೆದು 704 ವಿಕೆಟ್ಗಳನ್ನು ಪಡೆದಿದ್ದಾರೆ. ಆಂಡರ್ಸನ್ ತಮ್ಮ ಟೆಸ್ಟ್ ವೃತ್ತಿಜೀವನದ ಕೊನೆಯ ದಿನದಂದು ಸಂವೇದನಾಶೀಲ ಎಸೆತದೊಂದಿಗೆ ಒಂದು ವಿಕೆಟ್ ಪಡೆದರು. ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ ಇನ್ನಿಂಗ್ಸ್ ಹಾಗೂ 114 ರನ್ ಗಳ ಭರ್ಜರಿ ಜಯ ದಾಖಲಿಸಿದೆ. ಟೆಸ್ಟ್ ಪಂದ್ಯವು ಕೇವಲ ಎರಡು ದಿನಗಳು ಮತ್ತು ಒಂದು ಸೆಷನ್ ನಲ್ಲಿ ಕೊನೆಗೊಂಡಿತು. ಆಂಡರ್ಸನ್ ತಮ್ಮ ಅಂತಿಮ ಟೆಸ್ಟ್ನಲ್ಲಿ ನಾಲ್ಕು ವಿಕೆಟ್ಗಳೊಂದಿಗೆ ಕೊಡುಗೆ ನೀಡಿದರೆ, ಚೊಚ್ಚಲ ಆಟಗಾರ ಗುಸ್ ಅಟ್ಕಿನ್ಸನ್ 12 ವಿಕೆಟ್ಗಳೊಂದಿಗೆ ಮಿಂಚಿದರು – ಮೊದಲ ಇನ್ನಿಂಗ್ಸ್ನಲ್ಲಿ ಏಳು ಮತ್ತು ಎರಡನೇ ಇನ್ನಿಂಗ್ಸ್ನಲ್ಲಿ ಐದು ವಿಕೆಟ್ಗಳು, ಆಂಡರ್ಸನ್ಗೆ ಸೂಕ್ತ ವಿದಾಯವನ್ನು ನೀಡಿದರು.…

Read More

ನವದೆಹಲಿ: ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ. ನಟ ಕಳೆದ ಕೆಲವು ವಾರಗಳಿಂದ ತಮ್ಮ ಇತ್ತೀಚಿನ ಚಿತ್ರ ಸರ್ಫಿರಾ ಪ್ರಚಾರದಲ್ಲಿ ನಿರತರಾಗಿದ್ದಾರೆ. ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, ಚಿತ್ರದ ಪ್ರಚಾರ ಪ್ರವಾಸದ ಸಮಯದಲ್ಲಿ ಅಕ್ಷಯ್ ಅನಾರೋಗ್ಯಕ್ಕೆ ಒಳಗಾಗಿದ್ದರು. ಅವರ ಪ್ರಚಾರ ತಂಡದ ಕೆಲವು ಸದಸ್ಯರು ಕೋವಿಡ್ಗೆ ಧನಾತ್ಮಕ ಪರೀಕ್ಷೆ ಮಾಡಿದ್ದಾರೆ ಎಂದು ಅವರಿಗೆ ತಿಳಿಯಿತು. ಅವರು ಪರೀಕ್ಷೆಗೆ ಒಳಗಾಗಲು ನಿರ್ಧರಿಸಿದರು ಮತ್ತು ಫಲಿತಾಂಶಗಳು ಶುಕ್ರವಾರ (ಜುಲೈ 12) ಮುಂಜಾನೆ ಧನಾತ್ಮಕವಾಗಿ ಬಂದವು. ಅವನು ತನ್ನನ್ನು ತಾನು ಪ್ರತ್ಯೇಕಿಸಿಕೊಂಡಿದ್ದಾನೆ. ಅವರ ಇತ್ತೀಚಿನ ಚಿತ್ರ ಸರ್ಫಿರಾ ಬಗ್ಗೆ ಮಾತನಾಡುವುದಾದರೆ, ಇದು ತಮಿಳು ಚಿತ್ರ ಸೂರರೈ ಪೊಟ್ರುವಿನ ಡಬ್ಬಿಂಗ್ ಚಿತ್ರವಾಗಿದೆ. ಇದು ಅಕ್ಷಯ್ ಕುಮಾರ್ ಅವರ ವೃತ್ತಿಜೀವನದ 150 ನೇ ಚಿತ್ರವಾಗಿದೆ. ಸುಧಾ ಕೊಂಗರ ನಿರ್ದೇಶನದ ಈ ಚಿತ್ರದಲ್ಲಿ ಪರೇಶ್ ರಾವಲ್, ರಾಧಿಕಾ ಮದನ್ ಮತ್ತು ತಮಿಳು ಸೂಪರ್ ಸ್ಟಾರ್ ಸೂರ್ಯ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ. https://kannadanewsnow.com/kannada/important-information-for-railway-passengers-change-in-movement-of-these-trains-in-view-of-work/ https://kannadanewsnow.com/kannada/aparnas-departed-aparna-immersed-in-panchabhutas-still-only-a-memory-of-acha-kannada-narrator/

Read More

ಬೆಂಗಳೂರು: ವಿವಿಧ ರೈಲ್ವೆ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಕೆಲ ರೈಲುಗಳ ಸಂಚಾರದಲ್ಲಿ ಬದಲಾವಣೆಯನ್ನು ಮಾಡಲಾಗಿದೆ ಅಂತ ನೈರುತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ. ಕಾಮಗಾರಿ ಹಿನ್ನೆಲೆ: ಈ ರೈಲುಗಳ ಸೇವೆಯಲ್ಲಿ ಬದಲಾವಣೆ ನಿಟ್ಟೂರು ಮತ್ತು ಸಂಪಿಗೆ ರೋಡ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ 62ರಲ್ಲಿ ಕಾಮಗಾರಿ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗುತ್ತಿದೆ. ಅವುಗಳ ಮಾಹಿತಿ ಈ ಕೆಳಗಿನಂತಿವೆ: ರೈಲುಗಳ ಸಂಚಾರ ರದ್ದು: ತುಮಕೂರು-ಚಾಮರಾಜನಗರ (07346), ಚಾಮರಾಜನಗರ-ಮೈಸೂರು (07328), ಚಾಮರಾಜನಗರ-ಯಶವಂತಪುರ (16239), ಯಶವಂತಪುರ-ಚಾಮರಾಜನಗರ (16240), ತುಮಕೂರು-ಕೆಎಸ್ಆರ್ ಬೆಂಗಳೂರು (06576), ಕೆಎಸ್ಆರ್ ಬೆಂಗಳೂರು-ತುಮಕೂರು (06575), ಯಶವಂತಪುರ-ಶಿವಮೊಗ್ಗ ಟೌನ್ (16579) ಮತ್ತು ಶಿವಮೊಗ್ಗ ಟೌನ್-ಯಶವಂತಪುರ (16580) ರೈಲುಗಳನ್ನು ಜುಲೈ 18 & 25 ರಂದು ರದ್ದು ಪಡಿಸಲಾಗುತ್ತಿದೆ. ಭಾಗಶಃ ರದ್ದು: ಜುಲೈ 18 & 25 ರಂದು ಕೆಎಸ್ಆರ್ ಬೆಂಗಳೂರು-ತುಮಕೂರು ನಿಲ್ದಾಣಗಳ ನಡುವೆ ಸಂಚರಿಸುವ (06571/06572) ರೈಲುಗಳನ್ನು ಹಿರೇಹಳ್ಳಿ-ತುಮಕೂರು ನಡುವೆ ಭಾಗಶಃ ರದ್ದುಗೊಳಿಸಲಾಗುತ್ತಿದೆ. ತಾಳಗುಪ್ಪ-ಕೆಎಸ್ಆರ್ ಬೆಂಗಳೂರು (20652) ರೈಲು, ಕೆಎಸ್ಆರ್ ಬೆಂಗಳೂರು-ಧಾರವಾಡ-ಕೆಎಸ್ಆರ್ ಬೆಂಗಳೂರು (12725/12726)…

Read More

ಶಿವಮೊಗ್ಗ: ನಾಳೆ ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿನ ಲಯನ್ಸ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. 2024-25ನೇ ಸಾಲಿಗೆ ಲಯನ್ಸ್ ಕ್ಲಬ್ ಗೆ ಆಯ್ಕೆಯಾದಂತ ಅಧ್ಯಕ್ಷರು, ಸದಸ್ಯರು ನಾಳೆ ಪದಗ್ರಹಣ ಮಾಡಲಿದ್ದಾರೆ. ಈ ಕುರಿತಂತೆ ಶುಕ್ರವಾರದಂದು ಸಾಗರದ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದಂತ ನೂತನ ಅಧ್ಯಕ್ಷರಾದ ಜಿ.ಕೆ ಕೃಷ್ಣಮೂರ್ತಿ ಅವರು, ಸೇವೆಯೇ ತನ್ನ ಮೂಲ ಉದ್ದೇಶದೊಂದಿಗೆ 1917ರಲ್ಲಿ ಮಲ್ಟಿನ್ ಜೋನ್ಸ್ ಅವರು ಅಮೇರಿಕಾದಲ್ಲಿ ಲಯನ್ಸ್ ಕ್ಲಬ್ ಸಂಸ್ಥೆಯನ್ನು ಆರಂಭಿಸಿದರು. ಈ ಸಂಸ್ಥೆ ಈಗ ಜಗತ್ತಿನಾಧ್ಯಂತ ವಿಸ್ತರಣೆಗೊಂಡಿದೆ. ಸುಮಾರು 210 ದೇಶಗಳಲ್ಲಿ ಕೆಲಸ ಮಾಡುತ್ತಿರುವ ಲಯನ್ಸ್ ಕ್ಲಪ್, 1973ರಲ್ಲಿ 68ನೇಯ ರಾಷ್ಟ್ರವಾಗಿ ಭಾರತಕ್ಕೆ ಕಾಲಿಟ್ಟಿತು ಅಂತ ಮಾಹಿತಿ ನೀಡಿದರು. 1973ರಲ್ಲಿ ಪ್ರಪ್ರಥಮವಾಗಿ ಸಾಗರದಲ್ಲಿ ಲಯನ್ಸ್ ಸಂಸ್ಥೆ ಪ್ರಾರಂಭಗೊಂಡಿತು. ಲಯನ್ಸ್ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾಗಿ ಖ್ಯಾತ ದಾನಿಗಳಾದ ದಿ.ಚಿಪ್ಪಳ್ಳಿ ಗೋಪಾಲಕೃಷ್ಣ ಅವರು ಸೇವೆ ಸಲ್ಲಿಸಿದರು. ಕಾರ್ಯದರ್ಶಿಯಾಗಿ ದಿ.ರಮೇಶ್ ಭಟ್ ಕಾರ್ಯ ನಿರ್ವಹಿಸಿದರು ಎಂದರು. ಕಳೆದ ವರ್ಷ 50 ವಸಂತಗಳನ್ನು…

Read More

ಬೆಂಗಳೂರು : ಯಾವ ಹೊಂದಾಣಿಕೆ ರಾಜಕಾರಣವೂ ನಡೆದಿಲ್ಲ. ಎಲ್ಲವೂ ಸುಳ್ಳು. ರಾಜ್ಯದಲ್ಲಿ ಎಲ್ಲಾ ಕಾರ್ಯಕರ್ತರು ಒಟ್ಟಾಗಿ ದುಡಿದಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಲೋಕಸಭಾ ಚುನಾವಣೆಯಲ್ಲಿ ಹೊಂದಾಣಿಕೆ ರಾಜಕಾರಣ ನಡೆದಿದೆ ಎನ್ನುವ ಮಾಧ್ಯಮಗಳ ಪ್ರಶ್ನೆಗೆ ಕೆಪಿಸಿಸಿ ಕಚೇರಿಯ ಇಂದಿರಾ ಗಾಂಧಿ ಭವನದಲ್ಲಿ ಉತ್ತರಿಸಿದ ಅವರು “ಚುನಾವಣೆ ಹೊತ್ತಿನಲ್ಲಿ ತಳಮಟ್ಟದ ಪರಿಸ್ಥಿತಿಯನ್ನು ಸರಿಯಾಗಿ ಅರಿಯಲು ಆಗಲಿಲ್ಲ. ಎಲ್ಲಾ ಕಾರ್ಯಕರ್ತರು ಒಟ್ಟಾಗಿ ದುಡಿದಿದ್ದಾರೆ. ಪಕ್ಷ ಒಗ್ಗಟ್ಟಾಗಿ ಕೆಲಸ ಮಾಡಲಿ ಎಂದು ನಾವೇ ಒಂದಷ್ಟು ಜನ ಮಂತ್ರಿಗಳಿಗೆ ತಮ್ಮ ಕುಟುಂಬದ ಸದಸ್ಯರನ್ನು ಚುನಾವಣೆಗೆ ನಿಲ್ಲಿಸಿ ಎಂದು ಹೇಳಿದ್ದೆವು. ಇದರಲ್ಲಿ ಒಂದಷ್ಟು ಜನ ಗೆದ್ದಿದ್ದಾರೆ. ಒಂದಷ್ಟು ಜನ ಸೋತಿದ್ದಾರೆ. ಮುಂದಕ್ಕೆ ಇವರುಗಳು ಪಕ್ಷಕ್ಕೆ ದೊಡ್ಡ ಆಸ್ತಿಯಾಗಲಿದ್ದಾರೆ, ಬೆಳೆಯುತ್ತಾರೆ” ಎಂದರು. “ಎಲ್ಲಾ ಕಾರ್ಯಕರ್ತರು, ಮುಖಂಡರು, ಗೆದ್ದವರು, ಸೋತವರು ಎಲ್ಲರು ಸೇರಿ ಎಐಸಿಸಿ ಸತ್ಯಶೋದನಾ ಸಮಿತಿಗೆ ಪರಿಸ್ಥಿತಿ ಅರಿಯಲು ಅಹವಾಲು ಸಲ್ಲಿಸಿದ್ದೆವು. ಅದರಂತೆ ಎಲ್ಲರು ಸಮಿತಿಯ ಮುಂದೆ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ಮುಂದಕ್ಕೆ ಯಾವ ರೀತಿ ಕಾರ್ಯನಿರ್ವಹಿಸಬೇಕು ಎನ್ನುವ…

Read More