Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ : 2024-25ನೇ ಶೈಕ್ಷಣಿಕ ಸಾಲಿಗೆ ಶಿವಮೊಗ್ಗ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕವಶಿಸಸಂ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ ಅಟಲ್ ಬಿಹಾರಿ ಪಾಜಪೇಯಿ/ ಕಿತ್ತೂರು ರಾಣಿ ಚೆನ್ನಮ್ಮ / ಡಾ|| ಬಿ.ಆರ್. ಅಂಬೇಡ್ಕರ್/ ಶ್ರೀಮತಿ ಇಂದಿರಾ ಗಾಂಧಿ/ ನಾರಾಯಣ ಗುರು ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಕೆಲವು ವಿಶೇಷ ವರ್ಗದಡಿ ಪ್ರವೇಶಾವಕಾಶವನ್ನು ಕಲ್ಪಿಸಿ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಸಫಾಯಿ ಕರ್ಮಚಾರಿ/ ಗುರುತಿಸಿದ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್/ ಚಿಂದಿ ಆಯುವವರು / ಸ್ಮಶಾನ ಕಾರ್ಮಿಕರ ಮಕ್ಕಳು. ಬಾಲ ಕಾರ್ಮಿಕರು/ ಜೀತ ವಿಮುಕ್ತ ಕಾರ್ಮಿಕರ ಮಕ್ಕಳು/ ಗುರುತಿಸಿರುವ ಮಾಜಿ ದೇವದಾಸಿಯರ ಮಕ್ಕಳು. 25% ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ಮಕ್ಕಳು/ ಹೆಚ್.ಐ.ವಿ.ಗೆ ತುತ್ತಾದ ಪೋಷಕರ ಮಕ್ಕಳು/ ಒಬ್ಬ ಪೋಷಕರನ್ನು ಮಾತ್ರ ಹೊಂದಿರುವ ಮಕ್ಕಳು/ ಅನಾಥ ಮಕ್ಕಳು. ಗುರುತಿಸಿರುವ ಅಲೆಮಾರಿ/ ಅರೆ ಅಲೆಮಾರಿ/ ಸೂಕ್ಷ್ಮ- ಅತೀ ಸೂಕ್ಷ್ಮ ಸಮುದಾಯದ/ಸೈನಿಕರ…
ವಿಜಯವಾಡ: ಮಾಜಿ ಮುಖ್ಯಮಂತ್ರಿ ಮತ್ತು ವೈಎಸ್ಆರ್ಸಿ ಅಧ್ಯಕ್ಷ ವೈಎಸ್ ಜಗನ್ ಮೋಹನ್ ರೆಡ್ಡಿ ( former chief minister and YSRC president YS Jagan Mohan Reddy ) ಮತ್ತು ಇತರ ನಾಲ್ವರ ವಿರುದ್ಧ ಗುಂಟೂರು ಜಿಲ್ಲೆಯ ನಾಗರಂಪಲೆಂ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ. ಟಿಡಿಪಿಯ ಉಂಡಿ ಶಾಸಕ ಕೆ.ರಘುರಾಮ ಕೃಷ್ಣಂ ರಾಜು (ಆರ್ಆರ್ಆರ್) ನೀಡಿದ ದೂರಿನ ಮೇರೆಗೆ ಮಾಜಿ ಪೊಲೀಸ್ ಮಹಾನಿರ್ದೇಶಕ (ಗುಪ್ತಚರ) ಪಿಎಸ್ಆರ್ ಆಂಜನೇಯಲು, ಮಾಜಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಸಿಐಡಿ) ಮತ್ತು ಗುಂಟೂರಿನ ಸರ್ಕಾರಿ ಜನರಲ್ ಆಸ್ಪತ್ರೆಯ ಮಾಜಿ ಅಧೀಕ್ಷಕಿ ಡಾ.ಜಿ.ಪ್ರಭಾವತಿ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ಪೊಲೀಸ್ ಅಧಿಕಾರಿಗಳು ಮತ್ತು ಜಗನ್ ಮೋಹನ್ ರೆಡ್ಡಿ ವಿರುದ್ಧ ಕೊಲೆ ಯತ್ನ, ಕಸ್ಟಡಿ ಚಿತ್ರಹಿಂಸೆ ಮತ್ತು ಕ್ರಿಮಿನಲ್ ಪಿತೂರಿಯಂತಹ ಆರೋಪಗಳನ್ನು ಶಾಸಕರು ಪ್ರಸ್ತಾಪಿಸಿದರು. ಬಂಧನದ ಸಮಯದಲ್ಲಿ, ಅವರನ್ನು ಥಳಿಸುವುದು ಮತ್ತು ಎದೆಯ ಮೇಲೆ ಕುಳಿತು ಹೃದಯವನ್ನು ಉಸಿರುಗಟ್ಟಿಸುವ ಪ್ರಯತ್ನ ಸೇರಿದಂತೆ ದೈಹಿಕ ದೌರ್ಜನ್ಯಕ್ಕೆ ಒಳಗಾಗಿದ್ದರು ಎಂದು ಅವರು ಹೇಳಿದರು.…
ಬೆಂಗಳೂರು: ಕ್ಯಾನ್ಸರ್ ನಿಂದ ಬಳಲುತ್ತಿದ್ದಂತ ಅಚ್ಚ ಕನ್ನಡದ ನಿರೂಪಕಿ ಅಪರ್ಣಾ ಅವರು ನಿನ್ನೆ ನಿಧನರಾಗಿದ್ದರು. ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ಇನ್ನೂ ಅಚ್ಚಕನ್ನಡದ ನಿರೂಪಕಿ ಅಪರ್ಣಾ ನೆನಪು ಮಾತ್ರವೇ ಆಗಿದ್ದಾರೆ. ಕನ್ನಡ ಭಾಷೆಗೆ ಸ್ವರವಾಗಿದ್ದಂತ ಅಪರ್ಣಾ ಅವರು ನಿನ್ನೆ ನಿಧನರಾಗಿದ್ದರು. ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಬನಶಂಕರಿಯ ವಿದ್ಯುತ್ ಚಿತಾಗಾರದಲ್ಲಿ ಸ್ಮಾರ್ಥ ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿತು. ಇಂದು ಬೆಳಗ್ಗೆ 7:30 ಗಂಟೆ ಆಸ್ಪತ್ರೆಯಿಂದ ಅಪರ್ಣಾ ಅವರ ಪಾರ್ಥೀವ ಶರೀರ ತಲುಪಿತ್ತು. ಬನಶಂಕರಿಯ 2ನೇ ಹಂತದಲ್ಲಿರುವಂತ ಮನೆ ಬಳಿ 11:30 ರವರೆಗೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಆ ಬಳಿಕ 1 ಗಂಟೆಗೆ ಬನಶಂಕರಿಯ ವಿದ್ಯುತ್ ಚಿತಾಗಾರಕ್ಕೆ ಅಪರ್ಣಾ ಪಾರ್ಥೀವ ಶರೀರವನ್ನು ಕೊಂಡೊಯ್ಯಲಾಯಿತು. ಅಲ್ಲಿ ಸ್ಮಾರ್ತ ಬ್ಯಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನೆರವೇರಿಸಿದ ಬಳಿಕ, ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು. ಈಗ ಅಪರ್ಣಾ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಹೀಗಿದೆ ಅಪರ್ಣಾ ಬದುಕಿನ ಜರ್ನಿಯ ಹಿನ್ನೋಟ ಕ್ಯಾನ್ಸರ್ ನಿಂದ ನಿಧನರಾಗಿರುವಂತ ಕನ್ನಡದ ಖ್ಯಾತ ನಿರೂಪಕಿ…
ವಿಜಯನಗರ: ಜಿಲ್ಲೆಯ ಹೊಸಪೇಟೆಯಲ್ಲಿನ ಡಿ. ದೇವರಾಜ ಅರಸ್ ಟ್ರಕ್ ಟರ್ಮಿನಲ್ ನ ಕಾಮಗಾರಿ ಪರಿವೀಕ್ಷಣೆ ಮಾಡಿದರು. ಅಲ್ಲದೇ ಸಸಿ ನೆಡುವ ಕಾರ್ಯಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು. ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಸಮಗ್ರ ಸಾರಿಗೆ ಇಲಾಖೆಯ ವ್ಯಾಪ್ತಿಯಲ್ಲಿನ ಪ್ರತಿಯೊಂದು ಸಂಸ್ಥೆಗಳ ಸರ್ವಾಂಗೀಣ ಅಭಿವೃದ್ಧಿಯೊಂದಿಗೆ ಪರಿಸರ ಸಂರಕ್ಷಣೆಯ ಕಾರ್ಯವೂ ಅತ್ಯಗತ್ಯ ಎಂಬುದನ್ನು ಅರಿತು ಬೃಹತ್ ಪ್ತಮಾಣದಲ್ಲಿ ಹಸರೀಕರಣ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ದೇವರಾಜು ಅರಸು ಟ್ರಕ್ ಟರ್ಮಿನಲ್ ಗಳಲ್ಲಿ ಬಹಳ ದಶಕಗಳಿಂದಲೂ ಬಾಕಿ ಉಳಿದಿದ್ದ ಕಾಮಗಾರಿ ಹಾಗೂ ಇತರೆ ಪ್ರಮುಖ ಕಾರ್ಯಗಳಿಗೆ ಮಾನ್ಯ ಸಾರಿಗೆ ಸಚಿವರು ವೇಗ ನೀಡಿದ್ದು, ಟ್ರಕ್ ಟರ್ಮಿನಲ್ ಗಳಲ್ಲಿ ಸ್ಥಳಾವಕಾಶವಿದ್ದಾಗ್ಯೂ ಸಹ ಹಸಿರು ಬೆಳೆಸುವ ಕಾರ್ಯ ಮಾಡದಿರುವುದನ್ನು ಸಹ ಗಮನಿಸಿ ಸಸಿ ನೆಡುವ ಬೃಹತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಇಂದು ಮಾನ್ಯ ಸಾರಿಗೆ ಹಾಗೂ ಮುಜರಾಯಿ ಸಚಿವರು ಹೊಸಪೇಟೆ ಟ್ರಕ್ ಟರ್ಮಿನಲ್, ವಿಜಯನಗರ ಜಿಲ್ಲೆಯಲ್ಲಿ ಸುಮಾರು 37.28 ಎಕರೆಯಲ್ಲಿ ಟ್ರಕ್ ಟರ್ಮಿನಲ್ ಹಂತ 1…
ಮದುವೆ ವಿಳಂಬವಾಗಿರುವವರಿಗೆ ಕಾತ್ಯಾಯನಿ ಮಂತ್ರ, ಇದು ಅತ್ಯಂತ ಪರಿಣಾಮಕಾರಿ ಮಂತ್ರವಾಗಿದೆ. ಇದಕ್ಕೆ ಕಾರಣವು ಭಗವತ್ ಗೀತಾ ಕಾಲದಲ್ಲಿ ಶ್ರೀಕೃಷ್ಣನನ್ನು ಪತಿಯಾಗಿ ಪಡೆಯಲು ಗೋಪಿಯರು ಮಾ ಕಾತ್ಯಾಯಿನಿಯನ್ನು ಪೂಜಿಸಿದಾಗ ಹಿಂದಿನದು. ಹುಡುಗಿಯ ಜಾತಕದಲ್ಲಿ ಮಾಂಗ್ಲಿಕ್ ದೋಷ ಅಥವಾ ಗ್ರಹಗಳ ನಕಾರಾತ್ಮಕ ಪ್ರಭಾವಗಳಂತಹ ಎಲ್ಲಾ ಅಡೆತಡೆಗಳನ್ನು ತೆಗೆದುಹಾಕುವಲ್ಲಿ ಕಾತ್ಯಾಯನಿ ಮಂತ್ರವು ತುಂಬಾ ಪರಿಣಾಮಕಾರಿಯಾಗಿದೆ. ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಎಷ್ಟೇ ಪ್ರಯತ್ನ ಜೀವನದಲ್ಲಿ ಏಳಿಗೆ ಅಭಿವೃದ್ಧಿ ಆಗದೆ ನೋಂದಿದ್ದರೆ ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ ಪರಿಹಾರ ಶತಃಸಿದ್ದ ವಿದ್ವಾನ್…
ಬೆಂಗಳೂರು: ಇಂದು ಕ್ಯಾನ್ಸರ್ ನಿಂದ ಬಳಲುತ್ತಿದ್ದಂತೆ ಅಚ್ಚಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು. ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆಮಾತಾಗಿದ್ದ ಬಹುಮುಖ ಪ್ರತಿಭೆಯೊಂದು ಬಹುಬೇಗ ನಮ್ಮನ್ನು ಅಗಲಿರುವುದು ದುಃಖದ ಸಂಗತಿ. ಮೃತ ಅಪರ್ಣಾಳ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ. https://twitter.com/CMofKarnataka/status/1811453540218327194
ಬೆಂಗಳೂರು: ಕನ್ನಡದ ಕಿರುತೆರೆಯಲ್ಲಿ ನಿರೂಪಕಿಯಾಗಿ ಜನಪ್ರಿಯವಾಗಿದ್ದಂತ ಅಪರ್ಣಾ ಅವರು ಇನ್ನಿಲ್ಲವಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದಂತ ಖ್ಯಾತ ನಿರೂಪಕಿ ಅಪರ್ಣಾ ಅವರು ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಅವರು ಬೆಂಗಳೂರಿನ ಬನಶಂಕರಿಯಲ್ಲಿನ ನಿವಾಸದಲ್ಲಿ ಕೊನೆಯುಸಿರು ಎಳೆದಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಮಸಣದ ಹೂ, ಇನ್ಸ್ ಪೆಕ್ಟರ್ ವಿಕ್ರಂ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಂತ ಅಪರ್ಣಾ, ಆ ಬಳಿಕ ಕಿರುತೆರೆಯ ಧಾರವಾಹಿಗಳು, ರಿಯಾಲಿಟಿ ಶೋ ಗಳಲ್ಲಿ ನಿರೂಪಕಿಯಾಗಿ ತೊಡಗಿಸಿಕೊಂಡು, ಖ್ಯಾತಿಯನ್ನು ಪಡೆದಿದ್ದರು. ಹೀಗಿದೆ ಅಪರ್ಣಾ ಬದುಕಿನ ಜರ್ನಿಯ ಹಿನ್ನೋಟ ಇಂದು ಕ್ಯಾನ್ಸರ್ ನಿಂದ ನಿಧನರಾಗಿರುವಂತ ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಅವರು, 1989ರಲ್ಲಿ ನಿರೂಪಕಿಯಾಗಿ ಟಿವಿ ಮಾಧ್ಯಮಕ್ಕೆ ಸೇರಿದರು. ಅದಕ್ಕೂ ಮುನ್ನಾ 1984ರಲ್ಲಿ ತೆರೆಕಂಡಂತ ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ನಿರ್ದೇಶನದ ಮಸಣದ ಹೂ ಚಿತ್ರದಲ್ಲಿಯೂ ಕಾಣಿಸಿಕೊಂಡು, ಸಿನಿ ರಂಗದ ಜರ್ನಿ ಆರಂಭಗೊಂಡಿತ್ತು. ಮಸಣದ ಹೂ ಬಳಿಕ ಇನ್ಸ್ ಪೆಕ್ಟರ್ ವಿಕ್ರಮ್ ಸೇರಿದಂತೆ ಹಲವು ಚಿತ್ರಗಳಲ್ಲಿ ಅಪರ್ಣಾ ನಟಿಸಿ, ಸ್ಯಾಂಡಲ್ ವುಡ್ ನಟಿಯ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಡೆಂಗ್ಯೂ ಪತ್ತೆ ಪರೀಕ್ಷೆಗೆ ದರವನ್ನು ನಿಗದಿ ಪಡಿಸಲಾಗಿದೆ. ಹೀಗಿದ್ದರೂ ಕೆಲ ಲ್ಯಾಬ್ ಗಳು ಹೆಚ್ಚುವರಿ ಹಣವನ್ನು ವಸೂಲಿ ಮಾಡುತ್ತಿದ್ದವು. ಇಂತಹ ಲ್ಯಾಬ್ ಗಳ ಮೇಲೆ ಆರೋಗ್ಯ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದು, 22 ಲ್ಯಾಬ್ ಗಳಿಗೆ ನೋಟಿಸ್ ನೀಡಿ, ಶಾಕ್ ನೀಡಿದ್ದಾರೆ. ಈ ಕುರಿತಂತೆ ಆರೋಗ್ಯ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಡೆಂಗ್ಯೂ ಚಿಕಿತ್ಸೆಗಾಗಿ ಸರ್ಕಾರ ನಿಗಧಿಪಡಿಸಿರುವ ದರಕ್ಕಿಂತ ಹೆಚ್ಚುವರಿಯಾಗಿ ದರವನ್ನು ಪಡೆಯುತ್ತಿದ್ದಾರೆಂದು ಮಾಧ್ಯಮದಲ್ಲಿ ವರದಿ ಪ್ರಕಟವಾದ ಹಿನ್ನಲೆಯಲ್ಲಿ ಇಂದು ದಿನಾಂಕ: 11/7/2024 ಕೆ.ಪಿ.ಎಂ.ಇ ನೋಡಲ್ ಅಧಿಕಾರಿಗಳ ತಂಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿ ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ ಹಾಗೂ ಆನೇಕಲ್ ತಾಲ್ಲೂಕು ರವರು ತಮ್ಮ ವ್ಯಾಪ್ತಿಯಲ್ಲಿನ 31 ಖಾಸಗಿ ಸಂಸ್ಥೆಗಳಿಗೆ ಅನಿರೀಕ್ಷಿತ ಭೇಟಿ ನೀಡಿದರು. ವಿವಿಧ ಆಸ್ಪತ್ರೆ ಹಾಗೂ ಪರೀಕ್ಷೆ ಕೇಂದ್ರಗಳಿಗೆ ಭೇಟಿ ನೀಡಲಾಗಿ ಇದರಲ್ಲಿ 22 ಲ್ಯಾಬ್‌ನಲ್ಲಿ…
ಬೆಂಗಳೂರು: ರಾಜ್ಯಾಧ್ಯಂತ ಇಂದು ಲೋಕಾಯುಕ್ತ ಪೊಲೀಸರು ಭ್ರಷ್ಟ ಸರ್ಕಾರಿ ಅಧಿಕಾರಿಗಳನ್ನು ಬೇಟೆಯಾಡಿದ್ದಾರೆ. ಅಲ್ಲದೇ 11 ಭ್ರಷ್ಟರ ಬಳಿಯಲ್ಲಿ ಅಸಮತೋಲನ ಆಸ್ತಿಯನ್ನು ಪತ್ತೆ ಹಚ್ಚಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಲೋಕಾಯುಕ್ತದಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಬೆಳಗಾವಿ, ದಾವಣಗೆರೆ, ಧಾರವಾಡ, ಚಿತ್ರದುರ್ಗ, ಮಂಡ್ಯ, ಕೋಲಾರ, ಮೈಸೂರು, ಹಾಸನ ಮತ್ತು ಕಲಬುರಗಿ ಜಿಲ್ಲಾ ಲೋಕಾಯುಕ್ತ ಪೊಲೀಸ್ ಠಾಣೆಗಳಲ್ಲಿ ಒಟ್ಟು 11 ಸರ್ಕಾರಿ ಅಧಿಕಾರಿಗಳು ತಮ್ಮ ಬಲ್ಲ ಆದಾಯದ ಮೂಲಗಳಿಗಿಂತ ಹೆಚ್ಚು ಅಸಮತೋಲನ ಆಸ್ತಿಯನ್ನು ಹೊಂದಿದ್ದ ಬಗ್ಗೆ 11 ಪ್ರಕರಣಗಳು ದಾಖಲಾಗಿರುತ್ತವೆ ಎಂದಿದೆ. ಈ ದಿನ ದಿನಾಂಕ: 11.07.2024 ರಂದು ಆರೋಪಿತ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಮನೆ, ಕಛೇರಿ ಹಾಗೂ ಸಂಬಂಧಿಕರ ಮನೆಗಳು ಸೇರಿದಂತೆ ಒಟ್ಟು 56 ಸ್ಥಳಗಳಲ್ಲಿ ಏಕ ಕಾಲಕ್ಕೆ ಶೋಧನಾ ಕಾರ್ಯ ಕೈಗೊಂಡಿದ್ದು, ಶೋಧನಾ ಸಮಯದಲ್ಲಿ ಅಸಮತೋಲನ ಆಸ್ತಿ ಹೊಂದಿದ್ದ ಬಗ್ಗೆ ಮಾಹಿತಿ ತಿಳಿದುಬಂದಿರುತ್ತದೆ ಅಂತ ತಿಳಿಸಿದೆ. ಹೀಗಿದೆ 11 ಭ್ರಷ್ಟ ಸರ್ಕಾರಿ ಅಧಿಕಾರಿಗಳ ಬಳಿ ದೊರೆತ ಅಸಮತೋಲನ…
ಬಳ್ಳಾರಿ: ರಾಜ್ಯದಲ್ಲಿ ಲೈನ್ ಮೆನ್ ಗಳನ್ನು ಏಕಕಾಲಕ್ಕೆ ವರ್ಗಾವಣೆಗಾಗಿ 15 ದಿನಗಳಲ್ಲೇ ಅಧಿಸೂಚನೆ ಹೊರಡಿಸಲಾಗುತ್ತದೆ ಅಂತ ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದ್ದಾರೆ. ಈ ಮೂಲಕ ವರ್ಗಾವಣೆ ನಿರೀಕ್ಷೆಯಲ್ಲಿದ್ದಂತ ಲೈನ್ ಮೆನ್ ಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಬಳ್ಳಾರಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಇಲಾಖೆ ಅಧಿಕಾರಿಗಳೊಂದಿಗಿನ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ವರ್ಗಾವಣೆ ತಡೆಗಟ್ಟಲು ಏಕಕಾಲದಲ್ಲಿ ಲೈನ್ ಮೆನ್ ಗಳ ನೇಮಕ “ರಾಜ್ಯದಲ್ಲಿ 2000 ಲೈನ್ ಮೆನ್ ಗಳ ನೇಮಕಕ್ಕೆ ಇನ್ನು 15 ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುತ್ತದೆ. ಸಾಮಾನ್ಯವಾಗಿ ಲೈನ್ ಮೆನ್ ಗಳ ನೇಮಕ ವೇಳೆ ಒಂದು ಜಿಲ್ಲೆಯವರು ಇನ್ನೊಂದು ಜಿಲ್ಲೆಯಲ್ಲಿ ಅರ್ಜಿ ಸಲ್ಲಿಸಿ ನೇಮಕಗೊಳ್ಳುತ್ತಾರೆ. ಬಳಿಕ ತಮ್ಮ ಜಿಲ್ಲೆಗೆ ವರ್ಗಾವಣೆ ಮಾಡಿಸಿಕೊಳ್ಳುತ್ತಾರೆ. ಇದರಿಂದ ಕೆಲವು ಜಿಲ್ಲೆಗಳಲ್ಲಿ ಅದರಲ್ಲೂ ಮುಖ್ಯವಾಗಿ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಲೈನ್ ಮೆನ್ ಗಳ ಕೊರತೆಯಾಗುತ್ತದೆ. ಈ ಹಿನ್ನೆಲೆಯಲ್ಲಿ 2000 ಲೈನ್ ಮೆನ್ ಗಳನ್ನು…