Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ದೇಶದ ಅತೀ ಉದ್ದದ 2ನೇ ಕೇಬಲ್ ಸೇತುವೆಯನ್ನು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಲೋಕಾರ್ಪಣೆಗೊಳಿಸಿದ್ದಾರೆ. ಈ ಮೂಲಕ ಶರಾವತಿ ಹಿನ್ನೀರಿನ ಜನರ ದಶಕಗಳ ಕನಸು ನನಸಾಗಿದೆ. ಹೌದು ಇಂದು ಶರಾವತಿ ಹಿನ್ನೀರಿನ ಜನರ ಕನಸು ನನಸಾಗಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಪ್ರಹ್ಲಾದ್ ಜೋಶಿ ಅವರು ಶರಾವತಿ ಹಿನ್ನೀರಿಗೆ ಬಾಗಿನ ಅರ್ಪಿಸುವ ಮೂಲಕ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆಯನ್ನು ಉದ್ಘಾಟಿಸಿದರು. ಉದ್ಘಾಟನೆಯ ಬಳಿಕ ಗಣಪತಿ ಹೋಮ ಹಾಗೂ ಸಿಗಂದೂರು ಚೌಡೇಶ್ವರಿ ದೇವಿಯ ಪೂಜಾ ಕೈಂಕರ್ಯದಲ್ಲಿ ತೊಡಗಿದಂತೆ ಕೇಂದ್ರ ಸಚಿವರು, ದೇವಿಗೆ ಆರತಿ ಬೆಳಗಿ, ಭಕ್ತಿ ಭಾವದಲ್ಲಿ ಪುನೀತರಾದರು. ಇಂದಿನ ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಪರಿಷತ್ ಸದಸ್ಯ ಧನಂಜಯ ಸರ್ಜಿ, ಮಾಜಿ ಸಚಿವ ಹರತಾಳು ಹಾಲಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು. ಸಚಿವ ಸತೀಶ್ ಜಾರಕಿಹೊಳಿ, ಶಾಸಕ…
ಬೆಂಗಳೂರು: ಶಕ್ತಿ ಯೋಜನೆಯಲ್ಲಿ 500ನೇ ಕೋಟಿ ಮಹಿಳಾ ಪ್ರಯಾಣಿಕರ ಪ್ರಯಾಣದ ಸಂಭ್ರಮ ಮನೆ ಮಾಡಿದೆ. ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ದೊರೆತಿರೋದೇ ಈ ಇದಕ್ಕೆ ಕಾರಣವಾಗಿದ್ದು, ಇದು ದೇಶದಲ್ಲೇ ಕರ್ನಾಟಕ ಹೊಸ ಮೈಲಿಗಲ್ಲು ಸಾಧಿಸಿದಂತೆ ಆಗಿದೆ. ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಶಕ್ತಿ ಯೋಜನೆಯು ದಿನಾಂಕ 11-06-2023 ರಿಂದ ಜಾರಿಗೆ ಬಂದಿದ್ದು, ಜುಲೈ 14 ನೇ 2025 ಕ್ಕೆ 500 ಕೋಟಿ ಮಹಿಳಾ ಪ್ರಯಾಣಿಕರ ಟ್ರಿಪ್ ಅನ್ನು ತಲುಪುವ ಮುಖಾಂತರ ದೇಶದಲ್ಲೇ ಹೊಸ ಮೈಲಿಗಲ್ಲನ್ನು ತಲುಪಲಿದೆ. ಮುಂದುವರೆದು, ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ನೀಡಲಾಗುತ್ತಿರುವುದಿಂದ ಮಹಿಳೆಯರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ಔದ್ಯೋಗಿಕ, ಆರೋಗ್ಯ ಅಭಿವೃದ್ಧಿ ಹೊಂದಲು ಸಹಕಾರಿಯಾಗಿದೆ. ಶಕ್ತಿ ಯೋಜನೆಯು ಅಭೂತಪೂರ್ವ ಯಶಸ್ಸನ್ನು ಕಂಡು ಮಹಿಳಾ ಸಬಲೀಕರಣದೆಡೆಗಿನ ದಿಟ್ಟ ಯೋಜನೆಯಾಗಿ ಮುಂದುವರೆಯುತ್ತಿರುವುದಕ್ಕೆ ಸಾಕ್ಷಿಯಾಗಿದೆ. ಬಸ್ಸಿನಲ್ಲಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರಿಗೆ 500 ನೇ ಕೋಟಿ ಟಿಕೇಟ್ ಅನ್ನು ಸಾಂಕೇತಿಕವಾಗಿ ಇಂದು ವಿತರಿಸಿದ್ದು, ಶಕ್ತಿ ಯೋಜನೆಯಲ್ಲಿ ಇಲ್ಲಿಯವರೆಗೂ ರೂ.12669 ಕೋಟಿ ಮಹಿಳಾ ಟಿಕೇಟ್ ಮೌಲ್ಯ. ನಗರ,…
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯಕ್ಕೆ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ(NAAC) ‘ಎ’ ಗ್ರೇಡ್ ಮಾನ್ಯತೆ ನೀಡಿದ್ದು, ವಿಶ್ವವಿದ್ಯಾಲಯದಲ್ಲಿ ಸಂತಸದ ವಾತಾವರಣ ಮೂಡಿದೆ. 2018ರ ಅಕ್ಟೋಬರ್ ತಿಂಗಳಿನಿಂದ 2024ರ ಸೆಪ್ಟೆಂಬರ್ ವರೆಗಿನ ಮೌಲ್ಯಮಾಪನ ಅವಧಿಯಲ್ಲಿ ವಿಶ್ವವಿದ್ಯಾಲಯದಲ್ಲಿ ನಡೆದ ಶೈಕ್ಷಣಿಕ ಕಾರ್ಯಕ್ರಮಗಳು, ವಿದ್ಯಾರ್ಥಿ ಕೇಂದ್ರಿತ ಸುಧಾರಣೆಗಳು, ಮತ್ತು ಮೂಲಭೂತ ಸೌಕರ್ಯಗಳಲ್ಲಿನ ಸುಧಾರಣೆಗಳನ್ನು ನ್ಯಾಕ್ ತಂಡ ಕಳೆದ ತಿಂಗಳು ಪರಿಶೀಲನೆ ನಡೆಸಿತ್ತು. ಇದೀಗ ನ್ಯಾಕ್ ಸಂಸ್ಥೆ ಫಲಿತಾಂಶವನ್ನು ವಿಶ್ವವಿದ್ಯಾಲಯದೊಂದಿಗೆ ಹಂಚಿಕೊಂಡಿದ್ದು, 3.11 ಸಿಜಿಪಿಎ ಅಂಕಗಳೊಂದಿಗೆ ಕುವೆಂಪು ವಿವಿ ‘ಎ’ ಶ್ರೇಣಿಯ ಮಾನ್ಯತೆಯನ್ನು ಉಳಿಸಿಕೊಂಡಿದೆ. ಕಳೆದ ಮೌಲ್ಯಮಾಪನ ಅವಧಿಯಲ್ಲಿ 3.05 ಸಿಜಿಪಿಎನೊಂದಿಗೆ ‘ಎ’ ಶ್ರೇಣಿ ಪಡೆದಿದ್ದ ವಿವಿ, ಈ ಬಾರಿ ಅಂಕ ಹೆಚ್ಚಿಸಿಕೊಂಡಿದ್ದು, 3.11 ಸಿಜಿಪಿಎ ಪಡೆಯುವುದರ ಮೂಲಕ ಮತ್ತೊಮ್ಮೆ ‘ಎ’ ಶ್ರೇಣಿಯ ಗರಿ ಮುಡಿಗೇರಿಸಿಕೊಂಡಿದೆ. ವಿವಿಯ ಈ ಸಾಧನೆಯ ಬಗ್ಗೆ ಪ್ರತಿಕ್ರಿಯಿಸಿದ ಕುಲಪತಿ ಪ್ರೊ. ಶರತ್ ಅನಂತಮೂರ್ತಿ, ಮೌಲ್ಯಮಾಪಮನದ ಅವಧಿಯಲ್ಲಿ ಕೋವಿಡ್-19ನಂತಹಾ ಮಹಾಮಾರಿ ಇದ್ದರೂ, ಅಧ್ಯಾಪಕರ ಸಂಶೋಧನಾ ಚಟುವಟಿಕೆಗಳು, ನಿರಂತರವಾಗಿ ಮುಂದುವರೆದ ಪಾಠ ಪ್ರವಚನ, ಅಧ್ಯಾಪಕೇತರ…
ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟನ್ನು ಇಂದು ವಿತರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾಗಿತ್ತು. 2023ರ ಮೇ 20 ರಂದು ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಜಾರಿಗೊಳಿಸಲು ಸಚಿವಸಂಪುಟದಲ್ಲಿ ಕೈಗೊಂಡ ತೀರ್ಮಾನದಂತೆ ಜೂನ್ 11 ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಅಂದಿನಿಂದ ರಾಜ್ಯದ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಲಾಗಿರುವ ಬಗ್ಗೆ ಮುಖ್ಯಮಂತ್ರಿ ವಿವರಿಸಿದರು. ಸಿಗಂದೂರು ಕಾರ್ಯಕ್ರಮ-ಶಿಷ್ಠಾಚಾರ ಪಾಲನೆಯಾಗಿಲ್ಲ ಸಿಗಂದೂರು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವ ಕಾರ್ಯಕ್ರಮದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಸಾಗರ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಪತ್ರವನ್ನೂ ಬರೆಯಲಾಗಿತ್ತು. ಕೇಂದ್ರ ಸಚಿವರೂ ಕಾರ್ಯಕ್ರಮ ಮುಂದೂಡಲು ಸಮ್ಮತಿಸಿದ್ದರೂ, ಕೂಡ…
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಅಂಬಾರಗೊಡ್ಲು-ಕಳಸವಳ್ಳಿ ಸೇತುವೆ ಲೋಕಾರ್ಪಣೆ ಕಾರ್ಯ ಇಂದು ನಡೆಯುತ್ತಿದೆ. ಈ ಸೇತುವೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬಂದಂತ ಲೋಕೋಪಯೋಗಿ ಸಚಿವ ಸತೀಶ್ ಜಾರಕಹೊಳಿ ಅವರು ಸಾಗರಕ್ಕೆ ಬಂದು, ಭಾಗವಹಿಸದೇ ವಾಪಾಸು ಆಗಿದ್ದಾರೆ. ಈ ಕುರಿತಂತೆ ಸಾಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಅಂಬಾರಗೊಡ್ಲು-ಕಳಸವಳ್ಳಿ ಸೇತುವೆ ಲೋಕಾರ್ಪಣೆ ಆಗುತ್ತಿರುವುದು ಸಂತಸದ ಸಂಗತಿಯಾಗಿದೆ. ಶರಾವತಿ ಹಿನ್ನೀರಿನ ಜನರ ದಶಕಗಳ ಕನಸು ನನಸಾಗುತ್ತಿದೆ. ಆ ಭಾಗದ ಜನರಲ್ಲಿ ಸಂತಸ ಮನೆ ಮಾಡಿದೆ ಎಂದರು. ಇದೇ ಸಂದರ್ಭದಲ್ಲಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸದೇ ಸಚಿವ ಸತೀಶ್ ಜಾರಕಿಹೊಳಿ ಅವರು ಬೆಂಗಳೂರಿಗೆ ವಾಪಾಸು ಆದರು. ಒಟ್ಟಾರೆಯಾಗಿ ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಭಾಗವಹಿಸದೇ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಿಂದಿರುಗಿದರೇ, ಸ್ಥಳೀಯ ಶಾಸಕ, ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಕೂಡ ಗೈರಾಗುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದೆ. ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು
ಬೆಂಗಳೂರು: ಸಿಗಂದೂರು ಸೇತುವೆ ಲೋಕಾರ್ಪಣೆಗೊಳ್ಳಲು ದಿನಾಂಕ ನಿಗದಿ ಮಾಡಲಾಗಿತ್ತು. ಇದಕ್ಕಾಗಿ ಎಲ್ಲಾ ಸಿದ್ಧತೆ ನಡೆದು, ಅಂತ್ಯಗೊಂಡಿದೆ. ಇನ್ನೇನಿದ್ದರೂ ಇಂದು ಉದ್ಘಾಟನೆಯನ್ನು ಮಾಡುವುದು ಮಾತ್ರವೇ ಬಾಕಿ ಇದೆ. ಇದೇ ಸಂದರ್ಭದಲ್ಲಿ ಇಂದು ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಸಿಎಂ ಸಿದ್ಧರಾಮಯ್ಯ ಪತ್ರವನ್ನು ಬರೆದು ಮನವಿ ಮಾಡಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದು, ಅದರಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದೊಂದಿಗೆ ಜುಲೈ 14, 2025 ರಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ನೆಹರು ಕ್ಷೇತ್ರದಲ್ಲಿ “ರಾಷ್ಟ್ರ ಸಮರ್ಪಣೆ ಮತ್ತು ಶಿಲಾನ್ಯಾಸ ಸಮಾರಂಭ” ಕಾರ್ಯಕ್ರಮವನ್ನು ಆಯೋಜಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ ಮತ್ತು ಕರಡು ಆಹ್ವಾನ ಪತ್ರಿಕೆಯಲ್ಲಿ ನನ್ನ ಹೆಸರನ್ನು ಸಹ ಮುದ್ರಿಸಲಾಗಿದೆ. ಆದಾಗ್ಯೂ, ಈ ಕಾರ್ಯಕ್ರಮದ ಬಗ್ಗೆ ನನಗೆ ಮುಂಚಿತವಾಗಿ ತಿಳಿಸಲಾಗಿಲ್ಲ ಮತ್ತು ಅದೇ ದಿನ ವಿಜಯಪುರ…
ನವದೆಹಲಿ: ಕೇಂದ್ರ ಸರ್ಕಾರವು ನಡೆಸುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಫಲಾನುಭವಿ ರೈತರಿಗೆ ಮುಖ್ಯ ಮಾಹಿತಿ, ಶೀಘ್ರವೇ 20ನೇ ಕಂತಿನ ಹಣ ಬಿಡುಗಡೆಯಾಗಲಿದ್ದು, ರೈತರು ತಪ್ಪದೇ ಈ 3 ಕೆಲಸಗಳನ್ನು ಮಾಡುವುದು ಕಡ್ಡಾಯವಾಗಿದೆ. ಈ ಯೋಜನೆಯಡಿ ಹಣವನ್ನು ತಲಾ 2 ಸಾವಿರ ರೂಪಾಯಿಗಳ ಮೂರು ಕಂತುಗಳಲ್ಲಿ ನೀಡಲಾಗುತ್ತದೆ. ಉದಾಹರಣೆಗೆ, ಈ ಬಾರಿ ಯೋಜನೆಯ 20 ನೇ ಕಂತು ಬಿಡುಗಡೆಯಾಗಲಿದೆ. ನೀವು ಈ ಯೋಜನೆಗೆ ಅರ್ಹರಾಗಿದ್ದರೆ, ನೀವು ಈ ಕಂತಿನ ಪ್ರಯೋಜನವನ್ನು ಪಡೆಯಬಹುದು. ಯೋಜನೆಯಡಿಯಲ್ಲಿ ಅಗತ್ಯ ಕೆಲಸವನ್ನು ಎಚ್ಚರಿಕೆಯಿಂದ ಮಾಡಿ, ಅದರ ಬಗ್ಗೆ ನೀವು ಮತ್ತಷ್ಟು ತಿಳಿದುಕೊಳ್ಳಬಹುದು. ಆದ್ದರಿಂದ ರೈತರು ಮಾಡಬೇಕಾದ ಈ ಕೆಲಸಗಳು ಯಾವುವು ಎಂದು ತಿಳಿಯೋಣ. 20 ನೇ ಕಂತು ಯಾವಾಗ ಬಿಡುಗಡೆ ಮಾಡಬಹುದು? ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ ಬಿಡುಗಡೆಯಾಗಲಿರುವ 20 ನೇ ಕಂತು ಜುಲೈ 9 ರ ನಂತರವೇ ಬಿಡುಗಡೆಯಾಗಲಿದೆ ಎಂದು ನಂಬಲಾಗಿದೆ. ಏಕೆಂದರೆ ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸದಲ್ಲಿದ್ದಾರೆ ಮತ್ತು ಅವರು…
ಮಾಗಡಿ: “ಬಮುಲ್ ರೈತರ ಸಂಸ್ಥೆ ಇದನ್ನು ಬೆಳೆಸುವುದು ನಮ್ಮ ಕರ್ತವ್ಯ. ಈ ಕೆಲಸವನ್ನು ನಾನು ಮಾಡುತ್ತೇನೆ. ಇದಕ್ಕೆ ಎಲ್ಲಾ ನಾಯಕರ ಬೆಂಬಲ ಬೇಕು. ಎಲ್ಲರ ಜೊತೆಯೂ ನಾನು ಚರ್ಚೆ ನಡೆಸುತ್ತೇನೆ” ಎಂದು ಬಮುಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್ ತಿಳಿಸಿದರು. ಮಾಗಡಿಯಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಸುರೇಶ್ ಅವರು ಭಾನುವಾರ ಮಾತನಾಡಿದರು. “ನನಗೆ ಡೈರಿಯ ಸಂಬಳ, ಡೈರಿಯ ಅನುಕೂಲಗಳು ಬೇಡ. ನಾನು ಇರುವ ತನಕ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ನನ್ನ ಮೇಲೆ ಇಟ್ಟಿರುವ ನಂಬಿಕೆಗೆ ತಕ್ಕಂತೆ ಕೆಲಸ ಮಾಡುತ್ತೇನೆ. ನನ್ನ ಮನವಿ ಎಂದರೆ ನಂದಿನಿ ಉಳಿಸಿ, ಬೆಳೆಸಿ,ಉತ್ಪನ್ನಗಳನ್ನು ಬಳಸಿ” ಎಂದರು. “ನಂದಿನಿ ಉತ್ಪನ್ನಗಳ ಬೇಡಿಕೆಗೆ ತಕ್ಕಂತೆ ಪೂರೈಕೆ ಸಾಧ್ಯವಾಗುತ್ತಿಲ್ಲ. ಉದಾಹರಣೆಗೆ ಪನ್ನೀರಿನ ಬೇಡಿಕೆಗೆ ಶೇ 5 ರಷ್ಟು ಮಾತ್ರ ನಾವು ಪೂರೈಕೆ ಮಾಡುತ್ತಿದ್ದೇವೆ. ಇದನ್ನು ಹೆಚ್ಚು ಮಾಡಬೇಕು ಎನ್ನುವುದು ನಮ್ಮ ಉದ್ದೇಶ. ಜನರೇ ನಂದಿನಿ ಉತ್ಪನ್ನಗಳನ್ನು ಹೆಚ್ಚು ಬಳಸುವ ಮೂಲಕ ಮಾರುಕಟ್ಟೆ ಹೆಚ್ಚು ಮಾಡಿಕೊಡಬೇಕು” ಎಂದು ಹೇಳಿದರು. “ಹೊಸಕೋಟೆಯಲ್ಲಿ 22 ಎಕರೆ ಜಮೀನು,…
ಹಾಸನ: ಜಿಲ್ಲೆಯ ಕತ್ತರಿಘಟ್ಟ ರೈಲ್ವೆ ಟ್ರ್ಯಾಕ್ ಬಳಿಯಲ್ಲಿ ಎರಡು ಚಿರತೆಗಳ ಕಳೇಬರ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕತ್ತರಿಘಟ್ಟ ಗ್ರಾಮದ ಬಳಿಯ ರೈಲ್ವೆ ಹಳಿಯ ಮೇಲೆ ಎರಡು ಚಿರತೆಗಳ ಕಳೇಬರ ಪತ್ತೆಯಾಗಿದೆ. ಒಂದೂವರೆ ವರ್ಷದ ಗಂಡು, 3-4 ವರ್ಷದ ಹೆಣ್ಣು ಚಿರತೆ ಕಳೇಬರ ಇದಾಗಿದೆ. ರೈಲು ಡಿಕ್ಕಿಯಾಗಿ ಗಂಡು ಹಾಗೂ ಹೆಣ್ಣು ಚಿರತೆ ಮೃತಪಟ್ಟಿರೋ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಡಿಸಿಎಫ್ ಸೌರಭ್ ಕುಮಾರ್ ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಚಿರತೆ ಸಾವಿಗೆ ಕಾರಣ ತಿಳಿಯಲು ಎಲ್ಲಾ ಪರೀಕ್ಷೆಯನ್ನು ವನ್ಯಜೀವಿ ವೈದ್ಯರು ನಡೆಸುತ್ತಿದ್ದಾರೆ. https://kannadanewsnow.com/kannada/business-jet-crash-at-london-airport/ https://kannadanewsnow.com/kannada/mla-gopalakrishna-belurs-letter-to-yediyurappa-for-sigandur-bridge-goes-viral/
ಲಂಡನ್: ಎಸೆಕ್ಸ್‌ನ ಸೌತೆಂಡ್ ವಿಮಾನ ನಿಲ್ದಾಣದಲ್ಲಿ ಬಿಸಿನೆಸ್ ಚೆಟ್ ವಿಮಾನವೊಂದು ಪತನಗೊಂಡಿದೆ. ಈ ವಿಮಾನ ಅಪಘಾತದ ನಂತ್ರ ಎಷ್ಟು ಜನರು ಸಾವನ್ನಪ್ಪಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಇಂದು ಮಧ್ಯಾಹ್ನ 4 ಗಂಟೆ ಸುಮಾರಿಗೆ ವಿಮಾನ ನಿಲ್ದಾಣದಲ್ಲಿ ನಡೆದ ಘಟನೆಯಿಂದ “ದೊಡ್ಡ ಬೆಂಕಿಯ ಉಂಡೆ” ಮತ್ತು ಕಪ್ಪು ಹೊಗೆ ಕಾಣಿಸಿಕೊಂಡಿದೆ ಎಂದು ಪ್ರತ್ಯಕ್ಷದರ್ಶಿಗಳು ವಿವರಿಸಿದ್ದಾರೆ. ವಿಮಾನದಲ್ಲಿ ಎಷ್ಟು ಜನರಿದ್ದರು ಎಂಬುದು ಸ್ಪಷ್ಟವಾಗಿಲ್ಲ. ವರದಿಗಳ ಪ್ರಕಾರ, ವಿಮಾನವು ಟೇಕ್ ಆಫ್ ಆಗುವಾಗ ಅಪಘಾತಕ್ಕೀಡಾಗಿದ್ದು, ಸಣ್ಣ ಜೆಟ್ ವಿಮಾನವು ನೆದರ್‌ಲ್ಯಾಂಡ್ಸ್‌ಗೆ ಪ್ರಯಾಣಿಸುತ್ತಿತ್ತು ಎಂದು ನಂಬಲಾಗಿದೆ. https://kannadanewsnow.com/kannada/good-news-for-milk-producers-in-the-state-d-k-suresh-announces-loan-facility-up-to-2-lakhs-for-purchasing-2-cows/ https://kannadanewsnow.com/kannada/mla-gopalakrishna-belurs-letter-to-yediyurappa-for-sigandur-bridge-goes-viral/