Author: kannadanewsnow09

ಬೆಂಗಳೂರು: ರಾಜ್ಯ ಪಠ್ಯಕ್ರಮದ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ರಾಜ್ಯ ಪಠ್ಯಕ್ರಮ ಹಾಗೂ ಪಠ್ಯಪುಸ್ತಕಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ಒಂದು ವೇಳೆ ಅನುಸರಿಸದೇ ಹೋದ್ರೆ, ಅಂತಹ ಶಾಲೆಯ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದಾಗಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ರಾಜ್ಯ ಸರ್ಕಾರವು ಶಿಕ್ಷಣ ಸಂಸ್ಥೆಗಳ ಸಂಬಂಧದಲ್ಲಿ ಪಾಠಕ್ರಮ, ಪಠ್ಯವಸ್ತು ಹಾಗೂ ಪಠ್ಯಪುಸ್ತಕಗಳನ್ನು ನಿಗದಿಪಡಿಸಬಹುದಾಗಿರುತ್ತದೆ. O Karnataka Educational Institutions [classification, Regulation and Prescription of Curricula etc] Rules-1995ರ ನಿಯಮ-19. ರ ಉಪನಿಯಮ-3 ರಂತೆ ರಾಜ್ಯವಠ್ಯ ಕ್ರಮವನ್ನು ಅನುಸರಿಸುತ್ತಿರುವ ಎಲಾ ಶಿಕ್ಷಣ ಸಂಸ್ಥೆಗಳು ರಾಜ್ಯ ಸರ್ಕಾರದ ಸಕ್ಷಮ ಪ್ರಾಧಿಕಾರವು ನಿಗದಿಪಡಿಸುವ ಪಠ್ಯಕ್ರಮ ಮತ್ತು ಪಠ್ಯಪುಸ್ತಕಗಳನ್ನೇ ಕಡ್ಡಾಯವಾಗಿ ಅನುಸರಿಸುವುದು ಮತ್ತು ಹೆಚ್ಚುವರಿಯಾಗಿ ಯಾವುದೇ ಇತರ ಪಠ್ಯಕ್ರಮ ಅಥವಾ ಪಠ್ಯಪುಸ್ತಕಗಳನ್ನು ಅನುಸರಿಸುವಂತಿಲ್ಲ ಎಂದು ಸ್ಪಷ್ಟವಾಗಿ ತಿಳಿಸಲಾಗಿರುತ್ತದೆ ಎಂದಿದ್ದಾರೆ. ಅದರಂತೆ ಕರ್ನಾಟಕ ಶಿಕ್ಷಣ ಕಾಯ್ದೆ-1983ರ ಸೆಕ್ಷನ್-36ರಂತೆ ರಾಜ್ಯ ಪಠ್ಯಕ್ರಮದ ಶಾಲೆಗಳಿಗೆ ಮಾನ್ಯತೆ/ಮಾನ್ಯತೆ…

Read More

ಬೆಂಗಳೂರು: 2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಪುರಸ್ಕೃತರನ್ನು ಆಯ್ಕೆ ಮಾಡಲು ಸಲಹಾ ಸಮಿತಿಯನ್ನು ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಅಧಿಸೂಚನೆ ಹೊರಡಿಸಿದ್ದಾರೆ. 2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಪುರಸ್ಕೃತರನ್ನು ಆಯ್ಕೆ ಮಾಡಲು ಈ ಕೆಳಕಂಡ ಆಯ್ಕೆ ಸಲಹಾ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ರಚಿಸಲಾಗಿದೆ ಎಂದಿದ್ದಾರೆ. ಹೀಗಿದೆ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಲಹಾ ಸಮಿತಿಯ ಅಧ್ಯಕ್ಷರು, ಸದಸ್ಯರ ಪಟ್ಟಿ ಕನ್ನಡ ಮತ್ತು ಸಂಸ್ಕೃತಿ ಸಚಿವರು, ಅಧ್ಯಕ್ಷರು ಡಾ.ಸಿಎಸ್ ದ್ವಾರಕನಾಥ್, ಸದಸ್ಯರು ರವಿಕುಮಾರ್, ಮಾಜಿ ಮುಖ್ಯ ಕಾರ್ಯದರ್ಶಿ, ಸದಸ್ಯರು ಸದಾಶಿವ ಮರ್ಜಿ, ಧಾರವಾಡ, ಸದಸ್ಯರು ಬಾಬು ಭಂಡಾರಿಗಲ್, ರಾಯಚೂರು, ಸದಸ್ಯರು ಶೈಲಜಾ ಹಿರೇಮಠ, ಕೊಪ್ಪಳ, ಸದಸ್ಯರು ರಂಜಾನ್ ದರ್ಗಾ, ಗುಲ್ಬರ್ಗಾ, ಸದಸ್ಯರು ವೈಸಿ ಭಾನುಮತಿ, ಮೈಸೂರು, ಸದಸ್ಯರು ಪ್ರೊ ಜಿ ಶರಣಪ್ಪ, ಚಿತ್ರದುರ್ಗ, ಸದಸ್ಯರು ಪ್ರೊ.ದೊಣ್ಣೆಗೌಡರು ವೆಂಕಣ್ಣ, ಯಾದಗಿರಿ, ಸದಸ್ಯರು ಹಿರೇಮಗಳೂರು ಕಣ್ಣನ್,…

Read More

ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (Pradhan Mantri Kisan Samman Nidhi – PM-KISAN) ಯೋಜನೆಯ 18 ನೇ ಕಂತನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 5, 2024 ರಂದು ಮಹಾರಾಷ್ಟ್ರದ ವಾಶಿಮ್ನಲ್ಲಿ ಬಿಡುಗಡೆ ಮಾಡಿದರು. ಈ ಮಹತ್ವದ ಕಾರ್ಯಕ್ರಮವು ರಾಷ್ಟ್ರವ್ಯಾಪಿ 9.4 ಕೋಟಿಗೂ ಹೆಚ್ಚು ರೈತರಿಗೆ ನೇರ ಆರ್ಥಿಕ ಪ್ರಯೋಜನಗಳನ್ನು ಒದಗಿಸಿತು, ಮಧ್ಯವರ್ತಿಗಳ ಯಾವುದೇ ಪಾಲ್ಗೊಳ್ಳುವಿಕೆಯಿಲ್ಲದೆ ನೇರ ಲಾಭ ವರ್ಗಾವಣೆ ( Direct Benefit Transfer – DBT) ಮೂಲಕ ಒಟ್ಟು 20,000 ಕೋಟಿ ರೂ. ಈ ಸಂದರ್ಭದಲ್ಲಿ ಮಹಾರಾಷ್ಟ್ರದ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಸೇರಿದಂತೆ ಪ್ರಮುಖ ಗಣ್ಯರು ಭಾಗವಹಿಸಿದ್ದರು. – ಶಿವರಾಜ್ ಸಿಂಗ್ ಚೌಹಾಣ್, ಕೃಷಿ ಸಚಿವ; ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವ ರಾಜೀವ್ ರಂಜನ್ ಸಿಂಗ್; ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ; ಉಪಮುಖ್ಯಮಂತ್ರಿಗಳಾದ ಅಜಿತ್ ಪವಾರ್ ಮತ್ತು ದೇವೇಂದ್ರ ಫಡ್ನವೀಸ್; ಮತ್ತು ಮಣ್ಣು ಮತ್ತು ಜಲ ಸಂರಕ್ಷಣೆ ಸಚಿವ ಸಂಜಯ್ ರಾಥೋಡ್, ವಾಶಿಮ್…

Read More

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಗೆ ಬೆಂಗಳೂರು ನಗರ ಸಿಟಿ ಸಿವಿಲ್ ನ್ಯಾಯಾಲಯವು ಮಧ್ಯಂತರ ತಡೆ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಅರ್ಜಿ ಸಲ್ಲಿಸಲಾಗಿತ್ತು. ಹೈಕೋರ್ಟ್ ಸಿಟಿ ಸಿವಿಲ್ ನ್ಯಾಯಾಲಯ ನೀಡಿದ್ದ ಮಧ್ಯಂತರ ತಡೆ ಆದೇಶಕ್ಕೆ ತಡೆಯಾಜ್ಞೆ ನೀಡಿದೆ. ಹೀಗಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-29ನೇ ಅವಧಿಯ ಚುನಾವಣೆ ಫಿಕ್ಸ್ ಆದಂತೆ ಆಗಿದೆ. ಈ ಬಗ್ಗೆ ರಾಜ್ಯ ಚುನಾವಣಾಧಿಕಾರಿ ಎ ಹನುಮನರಸಯ್ಯ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸರ್ಕಾರಿ ನೌಕರರ ಸಂಘದ ರಾಜ್ಯ ಚುನಾವಣಾಧಿಕಾರಿಯಾದ ಎ. ಹನುಮನರಸಯ್ಯ ಆದ ನಾನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-2029ನೇ ಅವಧಿಯ ಜಿಲ್ಲೆ, ತಾಲ್ಲೂಕು, ಯೋಜನಾ ಶಾಖೆಗಳು ಹಾಗೂ ಬೆಂಗಳೂರು ನಗರ ಜಿಲ್ಲೆಯ ರಾಜ್ಯ ಪರಿಷತ್ ಸದಸ್ಯ ಸ್ಥಾನದ ಸಾರ್ವತ್ರಿಕ ಚುನಾವಣೆಗಳನ್ನು ನಡೆಸಲು ದಿನಾಂಕ: 12-09-2024 ರಂದು ಸಂಘದ ಚುನಾವಣಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸಿರುತ್ತೇನೆ ಎಂದಿದ್ದಾರೆ. ಅದರಂತೆ ದಿನಾಂಕ: 17-09-2024…

Read More

ನವರಾತ್ರಿಯ ಒಂಬತ್ತು ದಿನಗಳ ಕಾಲ ಈ ಮೂರಕ್ಷರ ಮಂತ್ರವನ್ನು ಪ್ರತಿದಿನ ಮೂರು ಬಾರಿ ಜಪಿಸಿದರೆ, ಕಲಶದಿಂದ ಪೂಜಿಸಿದ ಸಂಪೂರ್ಣ ಲಾಭ ಮತ್ತು ತ್ರಿವಳಿ ದೇವತೆಯ ಕೃಪೆ ನಿಮಗೆ ಸಿಗುತ್ತದೆ. ಶರನ್ನ ನವದುರ್ಗೆಯರ ಶಕ್ತಿಯುತ ನವರಾತ್ರಿ ಮಂತ್ರ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ಅಶ್ವಯುಜ ಮಾಸವು ನವದುರ್ಗೆಯರ ಪೂಜೆಗೆ ಮಂಗಳಕರವೆಂದು ಪರಿಗಣಿಸಲ್ಪಟ್ಟಂತೆ, ಅಂಬಿಗೈ ದುರ್ಗಾಪರಮೇಶ್ವರಿ ಯ ಆರಾಧನೆಗೆ ನವರಾತ್ರಿ ಮಾಸವು ಅತ್ಯಂತ ಮಹತ್ವದ್ದಾಗಿದೆ. ಏಕೆಂದರೆ ನವರಾತ್ರಿ ಹಬ್ಬವು ಅಶ್ವಯುಜ ಕೃಷ್ಣ ಪಕ್ಷ ಮಾಸದಲ್ಲಿ ನಡೆಯುತ್ತದೆ. ನವರಾತ್ರಿಯ ದಿನಗಳು ಮೂರು ದೇವತೆಗಳಾದ ದುರ್ಗಾ, ಲಕ್ಷ್ಮಿ ಮತ್ತು…

Read More

ಬೆಂಗಳೂರು: ಬಿಎಂಟಿಸಿಯಿಂದ ಕರೆಯಲಾಗಿದ್ದಂತ ನಿರ್ವಾಹಕರ ಹುದ್ದೆ ನೇಮಕಾತಿಗೆ ಸಂಬಂಧಿಸಿದಂತೆ ಸಂಭವನೀಯ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಅಕ್ಟೋಬರ್.14ರ ಒಳಗಾಗಿ ಆಕ್ಷೇಪಣೆ ಸಲ್ಲಿಸುವಂತೆ ತಿಳಿಸಿದೆ. ಬಿಎಂಟಿಸಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕಲ್ಯಾಣ-ಕರ್ನಾಟಕ (371-ಜೆ) ಮೀಸಲಾತಿಯಡಿ ನಿರ್ವಾಹಕ ಹುದ್ದೆಗೆ ಅಭ್ಯರ್ಥಿಗಳಿಗೆ ದಿನಾಂಕ:14/07/2024 ರಂದು ನಡೆದ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯಲ್ಲಿ ಅವರುಗಳು ಗಳಿಸಿದ ಒಟ್ಟು ಅಂಕಗಳ ಶೇಕಡ 75ರಷ್ಟು ಮತ್ತು ಹುದ್ದೆಗೆ ನಿಗಧಿಪಡಿಸಲಾದ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿದ ಒಟ್ಟು ಅಂಕಗಳ ಶೇಕಡ 25ರಷ್ಟು ಅಂಕಗಳನ್ನು ಸೇರಿಸಿ ಬಂದ ಒಟ್ಟು ಶೇಕಡ ಅಂಕಗಳ ಆಧಾರದ ಮೇಲೆ ಮತ್ತು ನೇರನೇಮಕಾತಿ ಸಂಬಂಧ ಜಾರಿಯಲ್ಲಿರುವ ಸರ್ಕಾರದ ಮೀಸಲಾತಿ ನಿಯಮಾನುಸಾರ ಮೂಲದಾಖಲಾತಿಗಳ ಮತ್ತು ದೇಹದಾರ್ಢ್ಯತೆ ಪರಿಶೀಲನೆಗಾಗಿ 1:5 ರ ಅನುಪಾತದಲ್ಲಿ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗಿತ್ತು ಎಂದಿದೆ. ಅದರಂತೆ ಮೂಲ ದಾಖಲೆ / ದೇಹದಾರ್ಢ್ಯತೆ ಪರಿಶೀಲನೆಗೆ ಹಾಜರಾಗಿ ಅರ್ಹತೆ ಹೊಂದಿದ ಅಭ್ಯರ್ಥಿಗಳ ಪೈಕಿ ಅಧಿಸೂಚನೆಯಲ್ಲಿ ಪ್ರಕಟಿಸಲಾದ ಹುದ್ದೆಗಳಿಗೆ ಅನುಗುಣವಾಗಿ ನಿರ್ವಾಹಕ, ದರ್ಜೆ-3 (ಮೇಲ್ವಿಚಾರಕೇತರ) ಹುದ್ದೆಯ ಸಂಭವನೀಯ ಆಯ್ಕೆ ಪಟ್ಟಿಯನ್ನು ಸಂಸ್ಥೆಯ ವೆಬ್‌ಸೈಟ್ www.mybmtc.karnataka.gov.in…

Read More

ಬೆಂಗಳೂರು: ರಾಜ್ಯದಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿದೆ. ಆದರೆ, ಇದರಿಂದ ಪರಿಸರಕ್ಕೆ ಹಾನಿ ಆಗಬಾರದು ಎಂಬುದು ಸರ್ಕಾರದ ಕಾಳಜಿಯಾಗಿದ್ದು, ರಾಜ್ಯದ ಎಲ್ಲ ಚಾರಣ ಪಥಗಳಲ್ಲಿ ದಿನವೊಂದಕ್ಕೆ ಗರಿಷ್ಠ 300 ಚಾರಣಿಗರಿಗೆ ಮಾತ್ರ ಅವಕಾಶ ಕಲ್ಪಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದಲ್ಲಿಂದು ಆನ್ ಲೈನ್ ನಲ್ಲಿ ಚಾರಣ ಪಥಗಳ ಟಿಕೆಟ್ ಕಾಯ್ದಿರಿಸಲು ಅವಕಾಶ ಕಲ್ಪಿಸುವ https://aranyavihaara.karnataka.gov.in ವೆಬ್ ಸೈಟ್ ಗೆ ಚಾಲನೆ ನೀಡಿ ಮಾತನಾಡಿದ ಅವರು, ಕಳೆದ ಜನವರಿ 26, 27ರಂದು ಕುಮಾರಪರ್ವತಕ್ಕೆ 5-6 ಸಾವಿರ ಪ್ರವಾಸಿಗರು ಒಂದೇ ದಿನ ಆಗಮಿಸಿದ ಹಿನ್ನೆಲೆಯಲ್ಲಿ ಗೊಂದಲ ಆಗಿತ್ತು. ಇಂತಹ ಗೊಂದಲ ನಿವಾರಿಸಲು ಚಾರಣಿಗರ ಸಂಖ್ಯೆಗೆ ಮಿತಿ ವಿಧಿಸಲಾಗಿದೆ ಎಂದರು. ಈ ಚಾರಣಪಥಗಳಿಗೆ ಆನ್ ಲೈನ್ ಮೂಲಕ ಟಿಕೆಟ್ ಖರೀದಿ ಕಡ್ಡಾಯ ಈ ಅಂತರ್ಜಾಲ ತಾಣದಲ್ಲಿ ರಾಜ್ಯ ಎಲ್ಲ ಚಾರಣ ಪಥಗಳ ಟಿಕೆಟ್ ಅನ್ನೂ ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗಿದೆ. ಇದರಿಂದ ಒಂದು ಚಾರಣ ಪಥಕ್ಕೆ ನಿರ್ದಿಷ್ಟ ದಿನ ಟಿಕೆಟ್…

Read More

ಬೆಳಗಾವಿ : ಜುಲೈ, ಆಗಸ್ಟ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವು ತಾಂತ್ರಿಕ ಕಾರಣದಿಂದ ಯಜಮಾನಿಯರ ಖಾತೆಗೆ ಜಮಾ ಆಗಿರಲಿಲ್ಲ. ಯಜಮಾನಿಯರಿಗೆ ಅಕ್ಟೋಬರ್ 7 ಮತ್ತು 9ರಂದು ಎರಡು ಕಂತಿನಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂಬುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಇಂದು ಮೂಡಲಗಿಯಲ್ಲಿ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ರಾಜ್ಯದ ಯಜಮಾನಿಯರ ಖಾತೆಗೆ ಎರಡೂ ಕಂತಿನ ಹಣವನ್ನು ಹಾಕಲಾಗುವುದು. ಕೆಲವೊಂದು ತಾಂತ್ರಿಕ ಕಾರಣಗಳಿಂದ ಹಣ‌ ಹಾಕುವುದು ವಿಳಂಬವಾಗಿತ್ತು ಎಂದರು. ಈ ಲಕ್ಷ್ಮೀ ಹೆಬ್ಬಾಳಕರ್ ಹಿಡಿದ ಕೆಲಸವನ್ನು ಮಾಡದೇ ಬಿಡುವುದಿಲ್ಲ ಎಂದು ಮೊನ್ನೆ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಸಮಾರಂಭದಲ್ಲಿ ಸ್ವತಃ ಮುಖ್ಯಮಂತ್ರಿಗಳೇ ನನ್ನ ಬಗ್ಗೆ ಹೇಳಿದ್ದಾರೆ. ಈ ಹೆಣ್ ಮಗಳು ತುಂಬಾ ಕಿಲಾಡಿ, ಹಠ ಮಾಡಿ‌ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ‌ ತಂದಿದ್ದೇ ಲಕ್ಷ್ಮೀ ಹೆಬ್ಬಾಳಕರ್ ಅಂತ ಸಿಎಂ ಸಿದ್ದರಾಮಯ್ಯ ನನ್ನ ಬಗ್ಗೆ ಹೇಳಿದ್ದಾರೆ. ಹೀಗಾಗಿ ಗೃಹಲಕ್ಷ್ಮಿ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಮತ್ತೆ 1,755 ಅತಿಥಿ ಶಿಕ್ಷಕರ ನೇಮಕಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿಯನ್ನು ನೀಡಲಾಗಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು,  2024-25 ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಖಾಯಂ ಶಿಕ್ಷಕರ ನೇಮಕವಾಗುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಯಾವುದು ಮೊದಲೂ ಅಲ್ಲಿಯವರೆಗೆ ಶಿಕ್ಷಕರ ಕೊರತೆಯನ್ನು ನೀಗಿಸುವ ದೃಷ್ಟಿಯಿಂದ ಒಟ್ಟು 35000 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಸರ್ಕಾರದ ಆದೇಶ ಸಂಖ್ಯೆ ಇಪಿ 166 ಎಸ್ಇ.ಎಸ್.2023 ದಿನಾಂಕ 01.06.2023 ಆದೇಶದಲ್ಲಿ ಅನುಮತಿ ನೀಡಲಾಗಿದೆ ಎಂದಿದೆ. ಅದರಂತೆ, ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಪ್ರಾಥಮಿಕ ಶಾಲಾ ಶಿಕ್ಷಕರು (1 ರಿಂದ 5 ನೇ ತರಗತಿ) ಹಾಗೂ ಪದವೀಧರ ಪ್ರಾಥಮಿಕ ಶಿಕ್ಷಕರು (6 ರಿಂದ 8 ನೇ ತರಗತಿ) ವೃಂದದ…

Read More

ಬೆಂಗಳೂರು : ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿಯ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ಹಿನ್ನೆಲೆಯಲ್ಲಿ ಆನ್‌ಲೈನ್‌ ಸೇವೆಗಳು ಅಕ್ಟೋಬರ್ 5 ನಾಳೆ, ಅಕ್ಟೋಬರ್.6ರ ನಾಡಿದ್ದು ಲಭ್ಯ ಇರುವುದಿಲ್ಲ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. ಐಟಿ ಅಪ್ಲಿಕೇಶನ್‌ಗಳ ಉನ್ನತೀಕರಣಕ್ಕೆ ಸಮಯ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ ಅಪ್ಲಿಕೇಶನ್‌ ಸೇವೆಗಳು ಅಕ್ಟೋಬರ್ 5, 6 ರಂದು ಲಭ್ಯ ಇರುವುದಿಲ್ಲ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. ಐಪಿಡಿಎಸ್ ಐಟಿ ಹಂತ-2ರ ಯೋಜನೆಯ ಭಾಗವಾಗಿ ಆರ್‌ಎಪಿಡಿಆರ್‌ಪಿ ಅಪ್ಲಿಕೇಷನ್‌ ಸೇವೆ ಲಭ್ಯ ಇರುವುದಿಲ್ಲ. ಸಿಸ್ಟಂ ಡೌನ್‌ಟೈಮ್ ಅಕ್ಟೋಬರ್ 4ರ ರಾತ್ರಿ 9ರಿಂದ ಆರಂಭವಾಗಿ 7ರ ಬೆಳಗ್ಗೆ 6ಕ್ಕೆ ಕೊನೆಗೊಳ್ಳುತ್ತದೆ. ಐಟಿ ಮೂಲಸೌಕರ್ಯ ವರ್ಧನೆ ಮತ್ತು ಕಾರ್ಯಾಚರಣೆ ಪ್ರದೇಶಗಳಲ್ಲಿ ಸೇವೆಯ ಗುಣಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಬೆಸ್ಕಾಂ ಈ ಕಾರ್ಯ ಕೈಗೊಂಡಿದೆ. 2024ರ ಮಾರ್ಚ್ 20 ರಂದು ಬಿಐಪಿ ಮತ್ತು ಡಬ್ಲ್ಯುಎಸ್‌ಎಸ್‌ಗೆ ನವೀಕರಣಗಳೊಂದಿಗೆ ಒರಾಕಲ್ ಸಿಸಿಬಿಯನ್ನು ಆವೃತ್ತಿ 2.3 ರಿಂದ 2.8 ಕ್ಕೆ ಯಶಸ್ವಿಯಾಗಿ ಅಪ್‌ಗ್ರೇಡ್ ಮಾಡುವುದರೊಂದಿಗೆ ಹಂತ-1…

Read More