Subscribe to Updates
Get the latest creative news from FooBar about art, design and business.
Author: kannadanewsnow09
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಇಂದು ಮತ್ತೆ ಎಸ್ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಏಕಕಾಲಕ್ಕೆ ಹಾಸನ ಜಿಲ್ಲೆಯ 3 ಕಡೆ ಎಸ್ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸರ್ಚ್ ವಾರೆಂಟ್ ನೋಂದಿಗೆ ಆಗಮಿಸಿರುವಂತ ಎಸ್ಐಟಿ ಪೊಲೀಸರು, ಹಾಸನ ಜಿಲ್ಲೆಯ 3 ಕಡೆ ದಾಳಿ ನಡೆಸಿದ್ದಾರೆ. ಹತ್ತಾರು ಅಧಿಕಾರಿಗಳ ತಂಡದಿಂದ ಮೂರು ಕಡೆ ಶೋಧಕಾರ್ಯ ನಡೆಸಿದ್ದಾರೆ. ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀ ವೀಡಿಯೋ ಪ್ರಕರಣ ಸಂಬಂಧ ಹೊಳೆನರಸೀಪುರ ರೇವಣ್ಣ ಮನೆ, ಹಾಸನದ ಎಂ.ಪಿ ಮನೆಯ ಮೇಲೆ ದಾಳಿ ನಡೆಸಲಾಗಿದೆ. ಇದಲ್ಲದೇ ಚನ್ನರಾಯಪಟ್ಟಣದ ಗನ್ನಿಕಡ ತೋಟದ ಮನೆಯಲ್ಲೂ ಎಸ್ಐಟಿ ಶೋಧ ನಡೆಸುತ್ತಿದೆ. ಇನ್ಸ್ ಪೆಕ್ಟರ್ ರಾವ್ ಗಣೇಶ್, ಶೋಭಾ ನೇತೃತ್ವದಲ್ಲಿ ದಾಳಿಯನ್ನು ನಡೆಸಲಾಗಿದೆ. ಎಫ್ ಎಸ್ ಎಲ್ ತಂಡದೊಂದಿಗೆ ಎಸ್ಐಟಿ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ. https://kannadanewsnow.com/kannada/breaking-three-arrested-for-smearing-ink-on-veer-savarkar-flyover-signboard/ https://kannadanewsnow.com/kannada/swati-maliwal-assault-case-arvind-kejriwals-aide-bibhav-kumars-police-custody-extended-for-3-days/
ನವದೆಹಲಿ: ದೆಹಲಿ ಮಹಿಳಾ ಆಯೋಗದ ಮಾಜಿ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರನ್ನು ದೆಹಲಿಯ ತಿಸ್ ಹಜಾರಿ ನ್ಯಾಯಾಲಯವು ಮೂರು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ. ಅಭಿನವ್ ಕುಮಾರ್ ಅವರ ನಾಲ್ಕು ದಿನಗಳ ನ್ಯಾಯಾಂಗ ಬಂಧನದ ಅವಧಿ ಮುಗಿದ ನಂತರ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ಸಂಬಂಧದ ಅರ್ಜಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಗೌರವ್ ಗೋಯಲ್ ನಡೆಸಿದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಅಭಿನವ್ ಕುಮಾರ್ ಅವರನ್ನು ದೆಹಲಿ ಪೊಲೀಸರು ಐದು ದಿನಗಳ ಕಾಲ ಹೆಚ್ಚಿನ ವಿಚಾರಣೆಗಾಗಿ ನೀಡುವಂತೆ ಕೋರಿದ್ದರು. ಕುಮಾರ್ ಅವರ ಕಸ್ಟಡಿ ವಿಚಾರಣೆಗಾಗಿ ದೆಹಲಿ ಪೊಲೀಸರ ಮನವಿಯನ್ನು ಅವರ ವಕೀಲರು ವಿರೋಧಿಸಿದರು. ಅವರನ್ನು ವಿಚಾರಣೆಗೆ ಒಳಪಡಿಸೋದು ಏನು ಇಲ್ಲ ಅಂತ ವಾದಿಸಿದರು. ಅಂತಿಮವಾಗಿ ವಾದ, ಪ್ರತಿವಾದ ಆಲಿಸಿದಂತ ದೆಹಲಿ ತಿಸ್ ಹಜಾರಿ ನ್ಯಾಯಾಲಯವು 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ…
ಬಳ್ಳಾರಿ : ಗ್ರಾಮೀಣ ಜೆಸ್ಕಾಂ ವಿಭಾಗದ ವ್ಯಾಪ್ತಿಯಲ್ಲಿ ಮಳೆಗಾಲ ಸಮಯದಲ್ಲಿ ವಿದ್ಯುತ್ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಹೆಚ್ಚಿದ್ದು, ಯಾವುದೇ ವಾಹಕಗಳು ತುಂಡಾಗಿ ಬಿದ್ದಲ್ಲಿ ಮತ್ತು ಕಂಬಗಳು ನೆಲಕ್ಕೆ ಉರುಳಿದ್ದಲ್ಲಿ ವಿದ್ಯುತ್ ಪರಿವರ್ತಕದ ಮೇಲೆ ಬೆಂಕಿ ಕಾಣಿಸಿಕೊಂಡರೆ, ವಿದ್ಯುತ್ ಗ್ರಾಹಕರು ಮುಂಜಾಗ್ರಾತರಾಗಿ ಯಾವುದೇ ವಿದ್ಯುತ್ ಸಂಪರ್ಕಕ್ಕೆ ಹೋಗದೇ ಈ ಕೆಳಕಂಡ ಜೆಸ್ಕಾಂ ಅಧಿಕಾರಿಗಳಿಗೆ ಸಂಪರ್ಕಿಸಬೇಕು ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರ ರಂಗನಾಥಬಾಬು ಅವರು ತಿಳಿಸಿದ್ದಾರೆ. ಬಳ್ಳಾರಿ ಗ್ರಾಮೀಣ ಉಪ ವಿಭಾಗ (ಬಳ್ಳಾರಿ ಗ್ರಾಮೀಣ ಮತ್ತು ಕುರುಗೋಡು ತಾಲ್ಲೂಕಿಗೆ ಸಂಬಂಧಪಟ್ಟ) ಬಳ್ಳಾರಿ ಗ್ರಾಮೀಣ ಜೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮೊ.9448482161, ಘಟಕ-01 (ಕೋಳೂರು, ಕೊರ್ಲಗುಂದಿ, ಹರಗಿನಡೋಣಿ ಭಾಗದ ಗ್ರಾಮಗಳ) ಶಾಖಾಧಿಕಾರಿ ಮೊ.9449597337, ಘಟಕ-02 (ಎಸ್‍ಜೆ ಕೋಟೆ, ಶಂಕರಬಂಡೆ, ಮಿಂಚೇರಿ ಭಾಗದ ಗ್ರಾಮಗಳ) ಶಾಖಾಧಿಕಾರಿ ಮೊ.9449597338, ಘಟಕ-03 (ಗುಗ್ಗರಹಟ್ಟಿ, ಹಲಕುಂದಿ, ಅಂದ್ರಾಳ್ ಭಾಗದ ಗ್ರಾಮಗಳ) ಶಾಖಾಧಿಕಾರಿ ಮೊ.9449597351, ಕುಡತಿನಿ ಶಾಖಾಧಿಕಾರಿ ಮೊ.9449597345, ಮೋಕಾ ಶಾಖಾಧಿಕಾರಿ ಮೊ.9449597346, ಪಿ.ಡಿ ಹಳ್ಳಿ ಶಾಖಾಧಿಕಾರಿ ಮೊ.9449597352, ಕುರುಗೋಡು…
ಬಳ್ಳಾರಿ : ಬಳ್ಳಾರಿ ಹಾಗೂ ಕುರುಗೋಡು ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ರೈತರಿಗೆ ಅವಶ್ಯವಿರುವ ಬಿತ್ತನೆ ಬೀಜಗಳಾದ ತೊಗರಿ, ಸಜ್ಜೆ, ನವಣೆ, ಜೋಳ, ಮೆಕ್ಕೆಜೋಳ, ಶೇಂಗಾ ಮುಂತಾದ ಬಿತ್ತನೆ ಬೀಜಗಳು ದಾಸ್ತಾನೀಕರಿಸಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ರೈತರು ಸಹಾಯಧನದಡಿ ಬಿತ್ತನೆ ಬೀಜ ಪಡೆಯಲು ತಮ್ಮ ಆಧಾರ್ ಪ್ರತಿ, ಬ್ಯಾಂಕ್ ಖಾತೆಯ ಪುಸ್ತಕ ಪ್ರತಿ, ಪಹಣಿ ಹಾಗೂ ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ರೈತರು ಖಾಸಗಿ ಮಳಿಗೆಯಲ್ಲಿ ಬಿತ್ತನೆ ಬೀಜ ಖರೀದಿಸಿದರೆ ಕಡ್ಡಾಯವಾಗಿ ರಶೀದಿಯನ್ನು ಪಡೆಯಬೇಕು. ಬಿತ್ತನೆ ಬೀಜಗಳನ್ನು ಬಿತ್ತುವ ಮುನ್ನ ಬೀಜೋಪಚಾರ ಮಾಡುವುದರಿಂದ ಮುಂದೆ ಸಂಭವಿಸಬಹುದಾದ ರೋಗ ಹಾಗೂ ಕೀಟಭಾದೆ ತಡೆಗಟ್ಟಬಹುದು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/head-constable-suspended-for-throwing-oil-party-at-police-station/ https://kannadanewsnow.com/kannada/breaking-three-arrested-for-smearing-ink-on-veer-savarkar-flyover-signboard/
ಬೆಳಗಾವಿ: ನಿನ್ನೆ ರಾತ್ರಿ ಪೊಲೀಸ್ ಠಾಣೆಯಲ್ಲೇ ಭರ್ಜರಿ ಎಣ್ಣೆ ಪಾರ್ಟಿಯನ್ನು ಪೊಲೀಸ್ ಹೆಡ್ ಕಾನ್ಸ್ ಸ್ಟೇಬಲ್ ಒಬ್ಬರು ಮಾಡಿದ್ದರು. ಈ ಎಲ್ಲಾ ಪೋಟೋಸ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಈ ಬೆನ್ನಲ್ಲೇ ಹೆಡ್ ಕಾನ್ಸ್ ಸ್ಟೇಬಲ್ ಅನ್ನು ಅಮಾನತುಗೊಳಿಸಿ ಎಸ್ ಪಿ ಆದೇಶಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಅಂಕಲಿ ಪೊಲೀಸ್ ಠಾಣೆಯಲ್ಲೇ ಹೆಡ್ ಕಾನ್ಸ್ ಸ್ಟೇಬಲ್ ರಾಮಚಂದ್ರಪ್ಪ ಎಂಬುವರು ಎಣ್ಣೆ ಪಾರ್ಟಿ ಮಾಡಿದ್ದರು. ಪೊಲೀಸ್ ಠಾಣೆಯಲ್ಲಿ ಮದ್ಯ ಸೇವನೆ ಮಾಡಿದ ಖಾಲಿ ಬಾಟಲಿಗಳು ಟೇಬಲ್ ಮೇಲೆ ಇದ್ದಂತ ಪೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಈ ಬೆನ್ನಲ್ಲೇ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಗುಳೇದ್ ಅವರು ತನಿಖೆಗೆ ಸೂಚಿಸಿದ್ದರು. ಈ ತನಿಖೆಯಲ್ಲಿ ನಿನ್ನೆ ರಾತ್ರಿ ಅಂಕಲಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಸ್ಟೇಬಲ್ ರಾಮಚಂದ್ರಪ್ಪ ಎಣ್ಣೆ ಪಾರ್ಟಿ ಮಾಡಿದ್ದು ಖಚಿತಗೊಂಡಿತ್ತು. ಈ ಹಿನ್ನಲೆಯಲ್ಲಿ ಅವರನ್ನು ಅಮಾನತುಗೊಳಿಸಿ ಎಸ್ಪಿ ಆದೇಶಿಸಿದ್ದಾರೆ. https://kannadanewsnow.com/kannada/no-question-of-protecting-anyone-in-valmiki-nigam-case-minister-b-nagendra/ https://kannadanewsnow.com/kannada/breaking-three-arrested-for-smearing-ink-on-veer-savarkar-flyover-signboard/
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ನಿಗಮದ ಕೇಂದ್ರ ಕಛೇರಿಯ ಅಧೀಕ್ಷಕರಾದ ಚಂದ್ರಶೇಖರ್ ರವರ ಆತ್ಮಹತ್ಯೆ ಪ್ರಕರಣ ನನಗೆ ಅತೀವ ನೋವು ತಂದಿದೆ ಈ ಹಣ ದುರುಪಯೋಗ ಪ್ರಕರಣದಲ್ಲಿ ನಮ್ಮ ಇಲಾಖೆ ಅಧಿಕಾರಿಗಳು ಹಾಗೂ ಬ್ಯಾಂಕ್ ಅಧಿಕಾರಿಗಳು ಯಾರೇ ಇರಲಿ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಕಾನೂನಿನ ಅಡಿಯಲ್ಲಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ನಾಗೇಂದ್ರ ತಿಳಿಸಿದರು. ಮಂಗಳವಾರ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಮುಖ್ಯ ಖಾತೆಯಲ್ಲಿ ಹಿಂದಿನ ಸಾಲಿನ ಹಾಗೂ 2024-25 ನೇ ಸಾಲಿನ ಯೋಜನೆಗಳಿಗೆ ಮೀಸಲಿಟ್ಟ 187 ಕೋಟಿ ಮೊತ್ತದಲ್ಲಿ 88 ಕೋಟಿ ಹಣವನ್ನು ನನಗೆ ಹಾಗೂ ನಿಗಮದ ಅಧ್ಯಕ್ಷರ ಗಮನಕ್ಕೂ ಬಾರದೇ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಎಂ.ಜಿ ರಸ್ತೆಯ ಶಾಖೆಯ ಅನಧಿಕೃತ ಖಾತೆಗೆ ವರ್ಗಾವಣೆ…
ಬೆಂಗಳೂರು: ವೀರ ಸಾವರ್ಕರ್, ಭಗತ್ ಸಿಂಗ್ ಅವರನ್ನು ಇಟ್ಟುಕೊಂಡು ಕಾಂಗ್ರೆಸ್ಸಿನ ಪುಡಿ ರೌಡಿಗಳು ಅಖಂಡ ಭಾರತೀಯರಾದ ಕನ್ನಡಿಗರನ್ನು ಒಡೆದು ಆಳುವ ನೀತಿಯ ಭಾಗವಾಗಿ ಟೂಲ್ ಕಿಟ್ ಅಜೆಂಡಾವನ್ನು ಪ್ರದರ್ಶನ ಮಾಡುತ್ತಿದ್ದಾರೆ ಎಂಬುದಾಗಿ ಕರ್ನಾಟಕ ಬಿಜೆಪಿ ಕಿಡಿಕಾರಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಜಾತಿ ಜಾತಿಗಳ ನಡುವೆ, ಧರ್ಮ ಧರ್ಮಗಳ ನಡುವೆ ಬೆಂಕಿ ಇಡುವ ಕೆಲಸ ಮಾಡುವುದರ ಜತೆಗೆ ದಕ್ಷಿಣ ಭಾರತ – ಉತ್ತರ ಭಾರತವೆಂದು ಇಬ್ಭಾಗವನ್ನು ಮಾಡಿತ್ತು ಎಂದು ಗುಡುಗಿದೆ. ಆದರೆ, ಈಗ ಸ್ವಾತಂತ್ರ್ಯ ಹೋರಾಟಗಾರರಾದ ವೀರ ಸಾವರ್ಕರ್, ಭಗತ್ ಸಿಂಗ್ ಅವರನ್ನು ಇಟ್ಟುಕೊಂಡು ಕಾಂಗ್ರೆಸ್ಸಿನ ಪುಡಿ ರೌಡಿಗಳು ಅಖಂಡ ಭಾರತೀಯರಾದ ಕನ್ನಡಿಗರನ್ನು ಒಡೆದು ಆಳುವ ನೀತಿಯ ಭಾಗವಾಗಿ ಟೂಲ್ ಕಿಟ್ ಅಜೆಂಡಾವನ್ನು ಪ್ರದರ್ಶನ ಮಾಡುತ್ತಿದ್ದಾರೆ ಎಂಬುದಾಗಿ ವಾಗ್ಧಾಳಿ ನಡೆಸಿದೆ. ಯಲಹಂಕದ ವೀರ ಸಾರ್ವಕರ್ ಸೇತುವೆಯ ನಾಮಫಲಕವನ್ನು ಛಿದ್ರ ಮಾಡಿ ಹೊಸ ವಿವಾದವನ್ನು ಸೃಷ್ಟಿಸುತ್ತಿರುವ ಸಿದ್ಧರಾಮಯ್ಯ ಸರ್ಕಾರಕ್ಕೆ ಭಾರತೀಯ ಆಸ್ಮಿತೆಯ ಭಾಗವಾಗಿರುವ ಕನ್ನಡಿಗರಾದ…
ಚಿತ್ರದುರ್ಗ: ಮುರುಘಾ ಶ್ರೀ 1 ಫೋಕ್ಸೋ ಕೇಸ್ ಗೆ ಮತ್ತೊಂದು ತಿರುವು ಪಡೆದಿದೆ. ಸಂತ್ರಸ್ತ ಬಾಲಕಿ ಮೇಲೆ ಒತ್ತಡ ಹಾಕ್ತಿದ ಆರೋಪ ಕೇಳಿ ಬಂದಿದೆ. ಈ ಹಿನ್ನಲೆಯಲ್ಲೇ ಒಂದನೇ ಫೋಕ್ಸ್ ಕೇಸ್ ನ ಸಂತ್ರಸ್ತ ಬಾಲಕಿ ಚಿಕ್ಕಪ್ಪ ವಿರುದ್ದವೇ ಪೊಲೀಸರಿಗೆ ದೂರು ನೀಡಿದ್ದಾಳೆ. ಚಿತ್ರದುರ್ಗದ ಮುರುಘಾ ಶ್ರೀಗಳ ವಿರುದ್ಧದ ಒಂದನೇ ಪೋಕ್ಸೋ ಕೇಸ್ ಸಂಬಂಧದ ಸಂತ್ರಸ್ತ ಬಾಲಕಿ ಚಿಕ್ಕಪ್ಪನ ಮನೆಯಿಂದ ನಾಪತ್ತೆಯಾಗಿದ್ದಂತ ಆರೋಪ ಕೇಳಿ ಬಂದಿತ್ತು. ಆದ್ರೇ ಮನೆಯಲ್ಲಿನ ಕಿರುಕುಳ ತಾಳಲಾರದೇ, ಸಂತ್ರಸ್ತ ಬಾಲಕಿ ಮೈಸೂರಿನ ಒಡನಾಡಿ ಸಂಸ್ಥೆಗೆ ತೆರಳಿರೋದಾಗಿ ತಿಳಿದು ಬಂದಿದೆ. ಆದ್ರೇ ಮೇ.22ರಂದು ಚಿತ್ರದುರ್ಗದಲ್ಲಿ ಬಾಲಕಿಯ ಚಿಕ್ಕಪ್ಪ ಮನೆಯಿಂದ ಸಂತ್ರಸ್ತೆ ನಾಪತ್ತೆಯಾಗಿರೋದಾಗಿ ದೂರು ನೀಡಿದ್ದರು. ಹೀಗಾಗಿ ಮುರುಘಾ ಶ್ರೀ ವಿರುದ್ಧದ ಪೋಕ್ಸೋ ಕೇಸ್ ಗೆ ಮತ್ತೊಂದು ತಿರುವು ಎನ್ನಲಾಗಿತ್ತು. ಆದ್ರೇ ಇಂದು ಮೈಸೂರಿನ ಒಡನಾಡಿ ಸಂಸ್ಥೆಗೆ ಸಂತ್ರಸ್ತ ಬಾಲಕಿ ತೆರಳಿದ್ದಾಳೆ ಎಂಬುದಾಗಿ ತಿಳಿದು ಬಂದಿದೆ. ಮನೆಯಲ್ಲಿ ದೈಹಿಕ & ಮಾನಸಿಕ ಹಿಂಸೆ ನೀಡುತ್ತಿದ್ದಾರೆಂದು ಹೇಳಿದ್ದಾಳೆ. ಒಡನಾಡಿ ಸಂಸ್ಥೆಯ ಜೊತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮುಂದೆ…
ಬೆಂಗಳೂರು: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಪೊಲೀಸ್ ಠಾಣೆಗೆ ನುಗ್ಗಿ ಪಿಎಸ್ಐಗೆ ಧಮ್ಕಿ ಹಾಕಿದ ಪ್ರಕರಣ ಸಂಬಂಧ, ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಪೊಲೀಸರು 40 ಮಂದಿ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರು ಬೆಳ್ತಂಗಡಿ ಠಾಣೆಗೆ ಅಕ್ರಮವಾಗಿ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿದ್ದಾರೆ ಎಂಬುದಾಗಿ ಆರೋಪಿಸಿ ಪಿಎಸ್ಐಗೆ ಧಮ್ಕಿ ಹಾಕಿದ್ದರು. ಈ ಸಂಬಂಧ ಶಾಸಕ ಹರೀಶ್ ಪೂಂಜಾ ಸೇರಿದಂತೆ 40 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣ ಸಂಬಂಧ ಬೆಳ್ತಂಗಡಿ ಠಾಣೆಯ ಪೊಲೀಸರು 2 ಪ್ರತ್ಯೇಕ ಪ್ರಕರಣ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಶಾಸಕ ಹರೀಶ್ ಪೂಂಜಾ ಸೇರಿದಂತೆ 40 ಮಂದಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. https://kannadanewsnow.com/kannada/sit-moves-hc-seeking-cancellation-of-bail-for-hd-revanna/ https://kannadanewsnow.com/kannada/delhi-court-denies-bail-to-umar-khalid-in-delhi-riots-conspiracy-case/
ಬೆಂಗಳೂರು: ಮೈಸೂರಿನ ಕೆ ಆರ್ ನಗರದ ಮಹಿಳೆ ಅಪಹರಣ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣಗೆ ಸೆಷನ್ಸ್ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಈಗ ಈ ಜಾಮೀನು ರದ್ದುಗೊಳಿಸುವಂತೆ ಹೈಕೋರ್ಟ್ ಗೆ ಎಸ್ಐಟಿ ಅರ್ಜಿ ಸಲ್ಲಿಸಿದೆ. ಹೀಗಾಗಿ ಶಾಸಕ ಹೆಚ್.ಡಿ ರೇವಣ್ಣಗೆ ಮತ್ತೆ ಸಂಕಷ್ಟ ಎದುರಾದಂತೆ ಆಗಿದೆ. ಮಹಿಳೆ ಅಪಹರಣ ಪ್ರಕರಣದಲ್ಲಿ ಜಾಮೀನು ಸೆಷನ್ಸ್ ಕೋರ್ಟ್ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ಮಾಡಿತ್ತು. ಈ ಜಾಮೀನು ರದ್ದುಗೊಳಿಸುವಂತೆ ಎಸ್ಐಟಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ಎಸ್ಐಟಿ ಶಾಸಕ ಹೆಚ್.ಡಿ ರೇವಣ್ಣ ಜಾಮೀನು ಅರ್ಜಿ ರದ್ದುಕೋರಿ ಸಲ್ಲಿಸಿರುವಂತ ಅರ್ಜಿಯನ್ನು ಹೈಕೋರ್ಟ್ ಮೇ.31ರಂದು ವಿಚಾರಣೆ ನಡೆಸೋ ಸಾಧ್ಯತೆ ಇದೆ. ಅಂದಹಾಗೇ ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಬಂಧನಕ್ಕೆ ಒಳಗಾಗಿ, ಜೈಲು ಪಾಲಾಗಿದ್ದರು. ಈ ಬಳಿಕ ಅವರಿಗೆ ಸೆಷನ್ಸ್ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಇದೀಗ ಜಾಮೀನು ರದ್ದು ಕೋರಿ ಹೈಕೋರ್ಟ್ ಗೆ ಎಸ್ಐಟಿ ಅರ್ಜಿ ಸಲ್ಲಿಸಿದೆ. https://kannadanewsnow.com/kannada/delhi-court-denies-bail-to-umar-khalid-in-delhi-riots-conspiracy-case/ https://kannadanewsnow.com/kannada/breaking-three-arrested-for-smearing-ink-on-veer-savarkar-flyover-signboard/