Author: kannadanewsnow09

ಮೈಸೂರು: ಮುಡಾದಿಂದ 50:50 ಅನುಪಾತದಲ್ಲಿ ಸೈಟ್ ಪಡೆದವರಿಗೆ ಬಿಗ್ ಶಾಕ್ ಎನ್ನುವಂತೆ ಇಂದಿನ ಸಭೆಯಲ್ಲಿ ಸರ್ವ ಸದಸ್ಯರು ಜಪ್ತಿಗೆ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಒಪ್ಪಿಗೆಯನ್ನು ಸೂಚಿಸಲಾಗಿದೆ. ಇಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಮಹತ್ವದ ಮುಡಾ ಸದಸ್ಯರ ಸಭೆ ನಡೆಯಿತು. ಈ ಸಭೆಯಲ್ಲಿ ನ್ಯಾಯಮೂರ್ತಿ ಪಿಎನ್ ದೇಸಾಯಿ ವರದಿಯ ನಂತ್ರ 50:50 ಅನುಪಾತದಲ್ಲಿ ಸೈಟ್ ಪಡೆದವರಿಂದ ಜಪ್ತಿ ಮಾಡುವಂತ ನಿರ್ಧಾರಕ್ಕೆ ಸದಸ್ಯರು ಒಮ್ಮತದ ಒಪ್ಪಿಗೆಯನ್ನು ಸೂಚಿಸಿದರು. ಈ ಹಿನ್ನಲೆಯಲ್ಲಿ ಮುಡಾದಿಂದ 50:50ರ ಅನುಪಾತದಲ್ಲಿ ಸೈಟ್ ಪಡೆವರಿಗೆ ಬಿಗ್ ಶಾಕ್ ಎನ್ನುವಂತೆ ಜಪ್ತಿಯ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈ ಮೂಲಕ ಇಂದಿನ ಮುಡಾ ಸಭೆಯಲ್ಲಿ ಮಹತ್ವದ ನಿರ್ಧಾರವನ್ನು ಸದಸ್ಯರು ಒಮ್ಮತದ ಅಭಿಪ್ರಾಯದೊಂದಿಗೆ ವ್ಯಕ್ತ ಪಡಿಸಿ, ಕೈಗೊಂಡಿದ್ದಾರೆ. https://kannadanewsnow.com/kannada/govind-karjol-submits-report-to-jpc-chairman-jagdambika-pal-on-waqf-injustice/ https://kannadanewsnow.com/kannada/save-your-life-from-heart-attack-keep-this-7-rupees-ram-kit/

Read More

ಹುಬ್ಬಳ್ಳಿ : “ವಕ್ಫ್ ವಿವಾದ ಬಿಜೆಪಿ ಸೃಷ್ಟಿ. ನಮ್ಮ ಸರ್ಕಾರ ರೈತರನ್ನು ರಕ್ಷಿಸಲು ಬದ್ಧವಾಗಿದ್ದು, ಯಾರನ್ನೂ ಒಕ್ಕಲೆಬ್ಬಿಸುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ವಕ್ಫ್ ತಿದ್ದುಪಡಿ ಮಸೂದೆ ಸಂಬಂಧ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಅಧ್ಯಕ್ಷರ ಭೇಟಿ ಬಗ್ಗೆ ಕೇಳಿದಾಗ, “ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಈ ವಿವಾದ ಸೃಷ್ಟಿಸಿದೆ. ರಾಜ್ಯದ ಆಸ್ತಿ ರಾಜ್ಯಕ್ಕೆ ಸಂಬಂಧಿಸಿದ ವಿಚಾರ. ವಕ್ಫ್ ಆಸ್ತಿ ವಿಚಾರವಾಗಿ ಧಾರವಾಡ ಸೇರಿದಂತೆ ಬೇರೆ ಜಿಲ್ಲೆಗಳಲ್ಲಿ 2019ರಿಂದ ಮೊದಲು ನೋಟೀಸ್ ಕೊಟ್ಟಿದ್ದು ಬಿಜೆಪಿ. ಬೊಮ್ಮಾಯಿ ಅವರ ಸರ್ಕಾರವೇ ನೋಟೀಸ್ ನೀಡಿದೆ. ಈಗ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ಅವರಿಗೆ ಜನ ಶಾಂತಿಯುತವಾಗಿರುವುದು ಬೇಕಾಗಿಲ್ಲ. “ಮಹಾರಾಷ್ಟ್ರ ಹಾಗೂ ರಾಜ್ಯದ ಉಪಚುನಾವಣೆ ಸಮಯದಲ್ಲಿ ಅನಗತ್ಯ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಜನ ಬಹಳ ಬುದ್ಧಿವಂತರು ಅವರಿಗೆ ಜನ ತಕ್ಕ ರೀತಿ ಪಾಠ ಕಲಿಸಲಿದ್ದಾರೆ. ನಾವು ದಾಖಲೆಗಳಲ್ಲಿ ಆಗಿರುವ ತಪ್ಪುಗಳನ್ನು ಸರಿಪಡಿಸಿ ರೈತರನ್ನು ರಕ್ಷಣೆ ಮಾಡುತ್ತೇವೆ.…

Read More

ಬೆಂಗಳೂರು: ವಕ್ಫ್ (ತಿದ್ದುಪಡಿ) ವಿಧೇಯಕದ ಕುರಿತ ಕೇಂದ್ರ ಸರಕಾರದ ಜಂಟಿ ಸಂಸದೀಯ ಸಮಿತಿಯ (ಜೆಪಿಸಿ) ಅಧ್ಯಕ್ಷ ಜಗದಾಂಬಿಕಾ ಪಾಲ್ ಮತ್ತು ಸದಸ್ಯ- ಸಂಸದ ತೇಜಸ್ವಿ ಸೂರ್ಯ ಅವರನ್ನು ಕರ್ನಾಟಕ ವಕ್ಫ್ ಸತ್ಯಶೋಧನಾ ಸಮಿತಿ ಇಂದು ಭೇಟಿ ಮಾಡಿತು. ಸಮಿತಿಯ ನೇತೃತ್ವ ವಹಿಸಿದ ಮಾಜಿ-ಉಪಮುಖ್ಯಮಂತ್ರಿ, ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ಅವರ ನೇತೃತ್ವದಲ್ಲಿ ಜಗದಾಂಬಿಕಾ ಪಾಲ್ ಅವರನ್ನು ಭೇಟಿ ಮಾಡಿ ವಕ್ಫ್ ಅನ್ಯಾಯದ ಕುರಿತು ವರದಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರು ಮತ್ತು ಶಾಸಕರಾದ ಹರೀಶ್ ಪೂಂಜ, ಮಹೇಶ್ ಟೆಂಗಿನಕಾಯಿ, ಮಾಜಿ ಶಾಸಕ ಅರುಣ ಶಹಾಪುರ, ನ್ಯಾಯವಾದಿ ಎಂ.ಬಿ.ಜಿರಲಿ, ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕಲ್ಮುರುಡಪ್ಪ ಅವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಅವರು ಇದ್ದರು. https://kannadanewsnow.com/kannada/breaking-liquor-sale-to-be-closed-across-the-state-on-november-20-president-guruswamy/ https://kannadanewsnow.com/kannada/save-your-life-from-heart-attack-keep-this-7-rupees-ram-kit/

Read More

ಬೆಂಗಳೂರು: ಪಬ್ಲಿಕ್ ರಿಲೇಶನ್ಸ್ ಕೌನ್ಸಿಲ್ ಆಫ್ ಇಂಡಿಯಾ (PRCI) 18ನೇ ಜಾಗತಿಕ ಸಂವಹನ ಸಮಾವೇಶವನ್ನು 2024ರ ನವೆಂಬರ್ 8 ಮತ್ತು 9ರಂದು ಮಂಗಳೂರಿನಲ್ಲಿ ಆಯೋಜಿಸಲಾಗುತ್ತಿದೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವ PRCI, ನಾಳೆ ಮತ್ತು ನಾಡಿದ್ದು ಜಾಗತಿಕ ಸಮಾವೇಶವನ್ನು ಮಂಗಳೂರಲ್ಲಿ ಆಯೋಜಿಸಲಾಗಿದೆ. ಭಾರತೀಯರು ಪಬ್ಲಿಕ್ ರಿಲೇಶನ್ಸ್ ಮತ್ತು ಸಂವಹನ ವೃತ್ತಿಪರತೆಯ ಪ್ರಮಾಣಿತ ಮಾನದಂಡಗಳನ್ನು ಉತ್ತೇಜಿಸುವ ಪ್ರಮುಖ ಸಂಸ್ಥೆಯಾಗಿದೆ ಎಂದಿದೆ. 2004ರ ಮಾರ್ಚ್ 3 ರಂದು PRCIಯು ಸ್ಥಾಪನೆಯಾಗಿದ್ದು, ಅದಕ್ಕೂ ಮೊದಲು 17 ಜಾಗತಿಕ ಸಂವಹನ ಸಮಾವೇಶಗಳನ್ನು ಜಯಪುರ, ಪುಣೆ, ಕೊಲ್ಕತ್ತಾ, ನವದೆಹಲಿ, ಮುಂಬೈ, ಹೈದರಾಬಾದ್, ಚಂಡೀಗಢ್, ಬೆಂಗಳೂರು ಮತ್ತು ಗೋವಾ ನಗರಗಳಲ್ಲಿ ಯಶಸ್ವಿಯಾಗಿ ಆಯೋಜಿಸಿತ್ತು. ದೇಶದಾದ್ಯಂತ ಮತ್ತು ವಿಶ್ವದ ಪ್ರಮುಖ ಉದ್ಯಮಗಳಿಂದ 500ಕ್ಕೂ ಹೆಚ್ಚು ಸಂವಹನ ವೃತ್ತಿಪರರು ಮತ್ತು ನಿರ್ಧಾರಮೇಕರ್‌ಗಳು ಪಬ್ಲಿಕ್ ರಿಲೇಶನ್ಸ್ ಮತ್ತು ಸಂವಹನ ಕ್ಷೇತ್ರದ ಇತ್ತೀಚಿನ ಬೆಳವಣಿಗೆಗಳು, ಹೊಸ ವಿಚಾರಗಳು, ಮತ್ತು ಉತ್ತಮ ಅಭ್ಯಾಸಗಳ ಬಗ್ಗೆ ಚರ್ಚಿಸಲು ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಈ ವರ್ಷದ ಸಮಾವೇಶದ…

Read More

ಬೆಂಗಳೂರು: 2025ರ ಮಾರ್ಚ್, ಏಪ್ರಿಲ್ ನಲ್ಲಿ ನಡೆಯಲಿರುವಂತ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯಲ್ಲಿ ರಾಷ್ಟ್ರೀಯ ವೃತ್ತಿ ಶಿಕ್ಷಣ ಕೌಶಲ್ಯ ಚೌಕಟ್ಟು ಅಂದರೆ ಎನ್ ಎಸ್ ಕ್ಯೂ ಎಫ್ ಪರೀಕ್ಷಾ ಪ್ರಕ್ರಿಯೆ ಹೇಗೆ ನಡೆಸಬೇಕು ಎನ್ನುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಅಧಿಸೂಚನೆ ಹೊರಡಿಸಲಾಗಿದ್ದು, 2023-24ನೇ ಜಾರಿಗೆ ಬರುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ವತಿಯಿಂದ ಎಸ್‌.ಎಸ್.ಎಲ್.ಸಿ ಪರೀಕ್ಷೆಯನ್ನು ಪರೀಕ್ಷೆ-1, ಪರೀಕ್ಷೆ-2 ಮತ್ತು ಪರೀಕ್ಷೆ-3 ಎಂದು ಹೆಸರಿಸಿ ಪರೀಕ್ಷೆಯನ್ನು ನಡೆಸಲಾಗುವುದು ಎಂದಿದೆ. 2025ರ ಮಾರ್ಚ್/ಏಪ್ರಿಲ್ ಮಾಹೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ಎನ್.ಎಸ್.ಕ್ಯೂ.ಎಫ್ ವಿಷಯ ಅಳವಡಿತ ಒಟ್ಟು 295 ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಶಾಲೆಗಳಿಂದ ಹಾಜರಾಗುವ ಅರ್ಹ ವಿದ್ಯಾರ್ಥಿಗಳನ್ನು ನೋಂದಾಯಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸದರಿ ಶಾಲೆಗಳಿಂದ 2025ರ ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ಹಾಜರಾಗುವ ಎನ್.ಎಸ್.ಕ್ಯೂ.ಎಫ್‌ನ ಅರ್ಹ ಶಾಲಾ…

Read More

ಬೆಂಗಳೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ 2024ರ ನವೆಂಬರ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಖಡಾ 50%ರ ರಿಯಾಯಿತಿ ದರಗಳಲ್ಲಿ  ಮಾರಾಟ ಮಾಡಲಾಗುವುದು.  ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಕೋರಿದೆ. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ (ಸಂಪರ್ಕ ಸಂಖ್ಯೆ:080-22107705) ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ  ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್ ಲೈನ್ https://kpp.karnataka.gov.in (ಆನ್ಲೈನ್ ಪುಸ್ತಕ ಖರೀದಿಗೆ ವಿಭಾಗ ಇಲ್ಲಿ ವೀಕ್ಷಿಸಿ) ನಲ್ಲಿ ಕೂಡ ಈ ಶೇ.50% ರಿಯಾಯಿತಿ ಲಭ್ಯವಿದೆ. ನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ,…

Read More

ಬೆಂಗಳೂರು: ಕರ್ನಾಟಕ ಸರ್ಕಾರದ ಅಧಿಸೂಚನೆಯನ್ವಯ ಮೆಕ್ಕೆಜೋಳ ಬೆಳೆದ ರೈತರಿಗೆ ನೆರವಾಗಲು, ಕರ್ನಾಟಕ ಹಾಲು ಮಹಾಮಂಡಳಿಯು ರೈತರಿಂದ ಮೆಕ್ಕೆಜೋಳವನ್ನು ನೇರವಾಗಿ ಪ್ರತಿ ಕ್ವಿಂಟಾಲ್‌ಗೆ ರೂ.2400/- ರ ಬೆಲೆಯಲ್ಲಿ ಖರೀದಿಸಲಿದೆ. ಮೆಕ್ಕೆಜೋಳ ಬೆಳೆದಿರುವ ಆಸಕ್ತ ರೈತರು ಸಮೀಪದ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಒಂದು ಕೆ.ಜಿ. ಪ್ರಮಾಣದಷ್ಟು ಮೆಕ್ಕೆಜೋಳದ ಮಾದರಿಯನ್ನು ನೀಡಿ, FRUITS ತಂತ್ರಾಂಶದಲ್ಲಿ ನೋಂದಾವಣೆಯಾಗಿರುವ ಸಂಖ್ಯೆಯೊಂದಿಗೆ ನೋಂದಾಯಿಸಿಕೊಳ್ಳಬಹುದಾಗಿದೆ. ನೋಂದಣಿ ಪ್ರಕ್ರಿಯೆಯು ನ.11 ರಿಂದ ಪ್ರಾರಂಭವಾಗುತ್ತಿದ್ದು ದಾವಣೆಗೆರೆ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ತೆರೆದಿರುತ್ತದೆ. ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಪ್ರಸ್ತುತ ಬಳಕೆ ಮಾಡುತ್ತಿರುವ ಕ್ಷೀರಸಿರಿ ಮತ್ತು ಸರಕಾರದ ಕೃಷಿ ಇಲಾಖೆ ಸಿದ್ದಪಡಿಸಿರುವ FRUITS ತಂತ್ರಾಂಶದ ಮೂಲಕ ಮೆಕ್ಕೆಜೋಳ ಖರೀದಿ ಪ್ರಕ್ರಿಯೆಯನ್ನು ಅನುಷ್ಟಾನಕ್ಕೆ ತರುತ್ತಿದ್ದು, ದಾವಣಗೆರೆ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೆಕ್ಕೆಜೋಳ ಬೆಳೆದ ಆಸಕ್ತ ರೈತರು, ತಮ್ಮ ಮೆಕ್ಕೆಜೋಳದ ಮಾದರಿಗಳನ್ನು ತಮ್ಮ ವ್ಯಾಪ್ತಿಯ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ನೀಡಬಹುದು. ಪ್ರತಿ ಒಬ್ಬ ರೈತರಿಂದ ಗರಿಷ್ಟ 500 ಕ್ವಿಂಟಾಲ್ ಮೆಕ್ಕೆಜೋಳ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಐಐಟಿ ಸೇರಿ ಇತರೆ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವಂತವರಿಗೆ ನೀಡುವಂತ ಪ್ರೋತ್ಸಾಹಧನವನ್ನು ರೂ.1 ಲಕ್ಷದಿಂದ 2 ಲಕ್ಷಕ್ಕೆ ಹೆಚ್ಚಿಸಿ ಆದೇಶಿಸಿದೆ. ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಾದ ಐ.ಐ.ಟಿ /ಐ.ಐ.ಎಂ/ಐ.ಐ.ಎಸ್.ಸಿ/ಎನ್.ಐ.ಟಿ ಮುಂತಾದ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಒಂದು ಬಾರಿ ನೀಡುವ ಪ್ರೋತ್ಸಾಹಧನವನ್ನು ರೂ.1.00 ಲಕ್ಷಗಳಿಂದ ರೂ. 2.00 ಲಕ್ಷಗಳಿಗೆ ಹೆಚ್ಚಿಸಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಪಿ.ಯು.ಸಿಯಲ್ಲಿ ಶೇಕಡ 95 ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದು NEET ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ಪಡೆಯದೆ, ಆಡಳಿತ ಮಂಡಳಿಯ ಕೋಟಾದಡಿ MBBSಗೆ ಪ್ರವೇಶ ಪಡೆದಿರುವ ಪ್ರತಿಭಾನ್ವಿತ ಪರಿಶಿಷ್ಟ ಜಾತಿ ವಿದ್ಯಾಥಿಗಳಿಗೆ ಮೊದಲನೇ ವರ್ಷದಲ್ಲಿ ರೂ. 25.00 ಲಕ್ಷಗಳನ್ನು ಕಾಲೇಜು ಶುಲ್ಕವಾಗಿ ಪಾವತಿಸಲಿದೆ. ಸದರಿ ವಿದ್ಯಾರ್ಥಿಯು MBBS ಮೊದಲನೇ ವರ್ಷದ ಪರೀಕ್ಷೆಯಲ್ಲಿ ಕನಿಷ್ಟ ಶೇಕಡ 60 ಅಂಕಗಳನ್ನು ಪಡೆದು ತೇರ್ಗಡೆಯಾದಲ್ಲಿ, ಪುನಃ ರೂ.25.00 ಲಕ್ಷಗಳ ಪ್ರೋತ್ಸಾಹಧನವನ್ನು ಮಂಜೂರು…

Read More

ಬೆಂಗಳೂರು: ನಗರದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಇಂದಿನಿಂದ ಹೊಸದಾಗಿ ಮಾದಾವರ ಮತ್ತು ನಾಗಸಂದ್ರ ಮಾರ್ಗದಲ್ಲಿ ಮೊದಲ ವಾಣಿಜ್ಯ ನಮ್ಮ ಮೆಟ್ರೋ ಸಂಚಾರ ಸೇವೆ ಆರಂಭಗೊಳ್ಳಲಿದೆ. ಹಾಗಾದ್ರೆ ವೇಳಾಪಟ್ಟಿ ಏನು.? ಟಿಕೆಟ್ ದರ ಎಷ್ಟು ಎನ್ನುವ ಬಗ್ಗೆ ಮುಂದೆ ಓದಿ. ಈ ಕುರಿತಂತೆ ಬಿಎಂಆರ್ ಸಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬುಧವಾರದಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸಂಸದರಾದಂತ ತೇಜಸ್ವಿ ಸೂರ್ಯ, ಶಾಸಕರು ಹಾಗೂ ಇತರ ಗಣ್ಯರು ಯಶವಂತಪುರದಿಂದ ಮಾದಾವರದವರೆಗೆ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದರು ಮತ್ತು ನಾಗವಾರದಿಂದ ಮಾದಾವರ (BIEC) ವರೆಗಿನ ಮೂರು ನಿಲ್ದಾಣಗಳ 3.14 ಕಿ.ಮೀ ರೀಚ್-3 ವಿಸ್ತರಣೆ ಮಾರ್ಗವನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್ ಅವರು, ಸಾರ್ವಜನಿಕರ ಅನುಕೂಲಕ್ಕಾಗಿ ನಾಳೆಯಿಂದ ಈ ವಿಸ್ತರಣಾ ಮಾರ್ಗವನ್ನು ತೆರೆಯಲಾಗುವುದು ಮತ್ತು ಮುಂದಿನ ದಿನಗಳಲ್ಲಿ ಔಪಚಾರಿಕ ಉದ್ಘಾಟನೆ ಮಾಡಲಾಗುವುದು ಎಂದು ಹೇಳಿದರು. ಹೀಗಿದೆ ನಮ್ಮ ಮೆಟ್ರೋ ರೈಲು ಸಂಚಾರದ ವೇಳಾಪಟ್ಟಿ ಇಂದು ಬೆಳಿಗ್ಗೆ 05.00 ಗಂಟೆಗೆ ಮಾದಾವರದಿಂದ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ ಕಚೇರಿಗಳಲ್ಲಿ, ಕಚೇರಿಯ ಆವರಣಗಳಲ್ಲಿ ಧೂಮಪಾನ, ಇತರೆ ತಂಬಾಕು ಉತ್ಪನ್ನಗಳ ಸೇವನೆಯನ್ನು ನಿಷೇಧಿಸಿ ಖಡಕ್ ಆದೇಶ ಹೊರಡಿಸಲಾಗಿದೆ. ಈ ಕುರಿತು ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಗೆಜೆಟ್ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಧೂಮಪಾನ ಹಾಗೂ ತಂಬಾಕಿನ ಇತರ ಉತ್ಪನ್ನಗಳ ಸೇವನೆಯು ಆರೋಗ್ಯಕ್ಕೆ ಮಾರಕವಾಗಿದ್ದು ಸಾರ್ವಜನಿಕ ಪುದೇಶಗಳಲ್ಲಿ ಇಂತಹ ಉತ್ಪನ್ನಗಳ ಸೇವನೆಯನ್ನು THE CIGARETTES AND OTHER TOBACCO PRODUCTS (PROHIBITION OF ADVERTISEMENT AND REGULATION OF TRADE AND COMMERCE, PRODUCTION, SUPPLY AND DISTRIBUTION) ACT, 2003 (ಕೇಂದ್ರ ಅಧಿನಿಯಮ 34/2003)ರಲ್ಲಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು, 2021ರ ನಿಯಮ-31ರಲ್ಲಿ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಮಾದಕ ಪಾನೀಯ ಅಥವಾ ಮಾದಕ ವಸ್ತುವನ್ನು ಸೇವಿಸುವುದನ್ನು ಕೂಡ ನಿಷೇಧಿಸಲಾಗಿದೆ. ಶಾಸನತ್ಮಾಕ ಎಚ್ಚರಿಕೆಗಳ ಹೊರತಾಗಿಯೂ ಸರ್ಕಾರಿ ಕಛೇರಿಗಳಲ್ಲಿ ಹಾಗೂ ಕಛೇರಿಯ ಆವರಣದಲ್ಲಿ ತಂಬಾಕು ಉತ್ಪನ್ನಗಳ ಸೇವನೆ…

Read More