Subscribe to Updates
Get the latest creative news from FooBar about art, design and business.
Author: kannadanewsnow09
ಬಿಹಾರ: ಪ್ರವಾಹ ಪರಿಹಾರ ವಿತರಣೆಯ ಸಮಯದಲ್ಲಿ ಬ್ಲೇಡ್ ಮುರಿದ ನಂತರ ಭಾರತೀಯ ವಾಯುಪಡೆಯ ಸುಧಾರಿತ ಲಘು ಹೆಲಿಕಾಪ್ಟರ್ (ಎಎಲ್ಎಚ್) ಬಿಹಾರದ ಮುಜಾಫರ್ಪುರದಲ್ಲಿ ಮುನ್ನೆಚ್ಚರಿಕೆಯಾಗಿ ನೀರಿನಲ್ಲೇ ತುರ್ತು ಭೂಸ್ಪರ್ಷ ಮಾಡಲಾಗಿದೆ. ಹೆಲಿಕಾಪ್ಟರ್ ಆಹಾರ ಪ್ಯಾಕೆಟ್ ಗಳನ್ನು ವಿತರಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ವೀಡಿಯೊದಲ್ಲಿ ಹೆಲಿಕಾಪ್ಟರ್ ಭಾಗಶಃ ಮುಳುಗಿರುವುದನ್ನು ತೋರಿಸಿದೆ. ಸ್ಥಳೀಯರು ಆಹಾರ ಪ್ಯಾಕೆಟ್ಗಳನ್ನು ಸುರಕ್ಷಿತವಾಗಿ ಕ್ಯಾರಿಯರ್ನಿಂದ ಹೊರತೆಗೆಯಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು. https://twitter.com/ANI/status/1841426399200149636 ಪರಿಹಾರ ಸಾಮಗ್ರಿಗಳನ್ನು ಗಾಳಿಯಲ್ಲಿ ಇಳಿಸಿದ ನಂತರ ಹೆಲಿಕಾಪ್ಟರ್ ಪಕ್ಕದ ದರ್ಭಾಂಗದಿಂದ ಬರುತ್ತಿತ್ತು ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರಾಕೇಶ್ ಕುಮಾರ್ ತಿಳಿಸಿದ್ದಾರೆ. “ಔರೈ ಬ್ಲಾಕ್ನ ಜಲಾವೃತ ಪ್ರದೇಶದಲ್ಲಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದೆ. ಎಲ್ಲಾ ಪ್ರಯಾಣಿಕರು ಐಎಎಫ್ ಸಿಬ್ಬಂದಿಯಾಗಿದ್ದು, ಅಧಿಕಾರಿಗಳು ಸ್ಥಳಕ್ಕೆ ತಲುಪುವ ಹೊತ್ತಿಗೆ ಸ್ಥಳೀಯರು ಅವರನ್ನು ಹೊರತೆಗೆದರು” ಎಂದು ಎಸ್ಎಸ್ಪಿ ಹೇಳಿದರು. ಜಿಲ್ಲಾ ಮ್ಯಾಜಿಸ್ಟ್ರೇಟ್ ಸುಬ್ರತ್ ಕುಮಾರ್ ಸೇನ್ ಮಾತನಾಡಿ, “ಎಲ್ಲಾ ನಾಲ್ವರು ಸುರಕ್ಷಿತವಾಗಿ ಮತ್ತು ಹಾನಿಗೊಳಗಾಗಿಲ್ಲ. ಆದಾಗ್ಯೂ, ಮುನ್ನೆಚ್ಚರಿಕೆಯಾಗಿ, ಅಗತ್ಯವಿದ್ದರೆ ಅವರನ್ನು ತಪಾಸಣೆ ಮತ್ತು ಚಿಕಿತ್ಸೆಗಾಗಿ ಸ್ಥಳೀಯ…
ಬೆಂಗಳೂರು: ʼಭಾರತದ ಹೃದಯ ಹಳ್ಳಿಗಳಲ್ಲಿದೆʼ ಎಂದು ಬಣ್ಣಿಸಿದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಕರ್ನಾಟಕದಲ್ಲಿ ಸಾಕಾರಗೊಂಡಿರುವ ʼಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ʼ ಜಾರಿಗೊಂಡು 30 ವರ್ಷಗಳುಸಂದಿವೆ. ಸಾರ್ಥಕ ಮೂರು ದಶಕಗಳ ಪ್ರಯಾಣವನ್ನು ಸಂಭ್ರಮಿಸುವ ದಿಸೆಯಲ್ಲಿ ನವೆಂಬರ್ 13 ಹಾಗೂ 14ರಂದು ರಾಷ್ಟ್ರೀಯ ಸ್ವರಾಜ್ ಸಮ್ಮೇಳನʼ ಆಯೋಜಿಸಲು ಉದ್ದೇಶಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಈ ಸಂಬಂಧದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ರಾಷ್ಟ್ರ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ, ಕರ್ನಾಟಕದಲ್ಲಿ 30 ವರ್ಷಗಳ ಕಾಲ ಪಂಚಾಯತ್ ವ್ಯವಸ್ಥೆ ನಡೆದು ಬಂದ ಹಾದಿ ಕುರಿತು ಅವಲೋಕನ ಮಾಡುವ ಹಾಗೂ ಮುಂದಿನ 30 ವರ್ಷಗಳಿಗೆ ಅನ್ವಯವಾಗುವ ಕರ್ನಾಟಕ ಸ್ವರಾಜ್ಯ ಚಾರ್ಟರ್ ರೂಪಿಸುವ ಕುರಿತು ವಿಚಾರ ಸಂಕಿರಣ, ದುಂಡುಮೇಜಿನ ಪರಿಷತ್ತು, ಕಾರ್ಯಾಗಾರ, ಸಂವಾದ, ಚರ್ಚಾಗೋಷ್ಠಿಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು. ಈ ಕಾರ್ಯಕ್ರಮಗಳಿಗೆ ರಾಜ್ಯ ಹಾಗೂ…
ಬೆಂಗಳೂರು: ಸಾಕ್ಷ್ಯ ನಾಶ ಮಾಡಿ ಮುಡಾ ಹಗರಣವನ್ನು ಮುಚ್ಚಿ ಹಾಕಲು ಮಾಡಲು ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ ಎಂದು ನೇರ ಆರೋಪ ಮಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ನ್ಯಾಯಾಲಯಗಳ ಆದೇಶ ಉಲ್ಲಘಿಸಿ ಸಿಎಂ ಪತ್ನಿ ಅವರಿಂದ ನಿವೇಶನಗಳನ್ನು ವಾಪಸ್ ಪಡೆದಿರುವ ಮೂಡಾ ಆಯುಕ್ತರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಜೆಡಿಎಸ್ ಪಕ್ಷದ ಕಚೇರಿ ಬಳಿ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಮೂಡಾ ಹಗರಣವನ್ನು ಮುಚ್ಚಿ ಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಲೋಕಾಯುಕ್ತ ಅಧಿಕಾರಿಗಳು ಹಾಗೂ ಮೂಡಾ ಅಧಿಕಾರಿಗಳು ವ್ಯವಸ್ಥಿತವಾಗಿ ಶಾಮೀಲಾಗಿದ್ದಾರೆ ಎಂದು ಅವರು ಗಂಭೀರ ಆರೋಪ ಮಾಡಿದರು. ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರ ಪತ್ನಿ 14 ನಿವೇಶನಗಳನ್ನು ವಾಪಸ್ ನೀಡಿರುವ ಕ್ರಮದ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಅವರು; ನಿವೇಶನಗಳನ್ನು ಹಿಂದಕ್ಕೆ ಪಡೆದಿರುವುದು ನ್ಯಾಯಾಲಯದ ಆದೇಶದ ಸ್ಪಷ್ಟ ಉಲ್ಲಂಘನೆ ಮತ್ತು ನ್ಯಾಯಾಂಗ ನಿಂದನೆ. ಹೀಗಾಗಿ ಮುಡಾ ಆಯುಕ್ತರನ್ನು ಬಂಧಿಸಬೇಕು ಎಂದು…
ಬೆಂಗಳೂರು: ನೀವು ಇರುವಂತ ಸ್ಥಳಕ್ಕೆ ತೆರಳೋದಕ್ಕೆ, ನಿಮಗೆ ಪರಿಚಿತ ಸ್ಥಳಕ್ಕೆ ತೆರಳೋದಕ್ಕೆ ಎಷ್ಟು ಮೀಟರ್ ಆಗಲಿದೆ, ಅದಕ್ಕೆ ಎಷ್ಟು ದುಡ್ಡು ಕೊಡಬೇಕು ಎಂಬುದು ಗೊತ್ತಿರುತ್ತದೆ. ಹೀಗೆ ತಿಳಿಸಿದ್ದಂತ ಹೊರ ರಾಜ್ಯದ ಯುವತಿಯೊಬ್ಬಳು ಕ್ಯಾಬ್ ಸಿಗದೇ ಇದ್ದಾಗ ಆಟೋದಲ್ಲಿ ಅದೇ ದರ ಕೊಡುವುದಾಗಿ ಹೊರಟಿದ್ದಾಳೆ. ಆದರೇ ಸ್ಥಳಕ್ಕೆ ತಲುಪಿದಾಗ ಆಟೋ ಚಾಲಕ ತೋರಿದ ನಡೆ, ಯುವತಿಯೊಂದಿಗೆ ವರ್ತಿಸಿದಂತ ವರ್ತನೆ ಆಘಾತಕಾರಿಯಾಗಿತ್ತು. ಅದೇನು ಅಂತ ಮುಂದೆ ಓದಿ. ಬೆಂಗಳೂರಿನ ಸಿಲ್ಕ್ ಬೋರ್ಡ್ ನಿಂದ ಲುಲು ಮಾಲ್ ಗೆ ತೆರಳೋದಕ್ಕೆ ಕ್ಯಾಬ್ ಮೂಲಕ ತೆರಳೋದಕ್ಕೆ ಚೆನ್ನೈ ಮೂಲದ ಯುವತಿಯೊಬ್ಬಳು ಹುಡುಕಾಡಿದ್ದಾರೆ. ಅದು ಲಭ್ಯವಿಲ್ಲದೇ ಅಲ್ಲೇ ಕಾಯುತ್ತಿದ್ದಾಗ ಸಮೀಪದಲ್ಲಿದ್ದಂತ ಆಟೋ ನಿಲ್ದಾಣದ ಆಟೋ ಚಾಲಕ ಕ್ಯಾಬ್ ದರದಲ್ಲೇ ಹಣ ಕೊಡಿ ಎಂಬುದಾಗಿ ಹೇಳಿ ಆಟೋವೊಂದರಲ್ಲಿ ಕೂರಿಸಿ ಯುವತಿಯನ್ನು ಕಳುಹಿಸಿದ್ದಾರೆ. ಯುವತಿ ಬನ್ನೇರುಘಟ್ಟ ರಸ್ತೆಗೆ ಬರುತ್ತಿದ್ದ ವೇಳೆಗಾಗಲೇ ಕೆಎ 05, ಎಎಲ್ 9980 ಎಂಬಂತ ಆಟೋದ ಮೀಟರ್ 26 ಕಿಲೋಮೀಟರ್ ತೋರಿಸಿ, ರೂ.340 ದರ ತೋರಿಸಿದೆ. ಯುವತಿ ಲುಲೂ…
ಬೆಂಗಳೂರು : ಗಾಂಧಿ ಭಾರತದ ಪ್ರಜ್ಞೆ. ಗಾಂಧಿಯ ದೇಹ ಕೊಂದರೂ ವಿಚಾರಗಳನ್ನು ಕೊಲ್ಲಲು ಅಸಾಧ್ಯ. ಬಿಜೆಪಿಯವರಿಗೆ ಗೋಡ್ಸೆ ನಾಯಕ. ಗೋಡ್ಸೆ ಭಾರತ ಮಾಡುವ ಬಿಜೆಪಿ ಷಡ್ಯಂತ್ರವನ್ನು ಸೋಲಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಕೆಪಿಸಿಸಿ ಕಛೇರಿಯ ಭಾರತ್ ಜೋಡೋ ಭವನದಲ್ಲಿ ಆಯೋಜಿಸಿದ್ದ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧಿವೇಶನಕ್ಕೆ ನೂರು ವರ್ಷಗಳ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ “ಗಾಂಧಿ ಭಾರತ” ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಮಹಾತ್ಮಗಾಂಧಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನ ಐತಿಹಾಸಿಕವಾದದ್ದು. ಗಾಂಧಿ ಜಗತ್ತು ಕಂಡ ಅಪರೂಪದ ಸಂತ. ಇವರು ಭಾರತೀಯರ ಹೆಮ್ಮೆ ಎಂದರು. ಗಾಂಧಿ ವಿಚಾರದಲ್ಲಿ ಬಿಜೆಪಿ ಬಹಳ ಕೆಳಮಟ್ಟದ ರಾಜಕಾರಣ ಮಾಡುತ್ತಿದೆ. ಬಿಜೆಪಿ ಗೋಡ್ಸೆ ಭಾರತ ಮಾಡಲು ಹೊರಟಿದೆ. ಈ ಷಡ್ಯಂತ್ರವನ್ನು ನಾವು ಸೋಲಿಸಬೇಕಿದೆ. ಗಾಂಧಿ ಭಾರತದ ಆತ್ಮ. ಭಾರತದ ಪ್ರಜ್ಞೆ. ಇಲ್ಲಿ ಗೋಡ್ಸೆಗಳು ಬೆಳೆಯಲು ಬಿಡಬಾರದು. ಧರ್ಮದ ಹೆಸರಲ್ಲಿ, ಜಾತಿ ಹೆಸರಲ್ಲಿ…
ಶಿವಮೊಗ್ಗ: ಶಿವಮೊಗ್ಗ ಹಾಲು ಉತ್ಪಾದಕರ ಸಂಘದಿಂದ, ಶಿಮುಲ್ ಹಾಲು ಉತ್ಪಾದಕ ರೈತರಿಗೆ ಬಿಗ್ ಶಾಕ್ ನೀಡಲಾಗಿದೆ. ಅದೇ ಪ್ರತಿ ಲೀಟರ್ ಹಾಲು ಖರೀದಿ ದರದಲ್ಲಿ 90 ಪೈಸೆ ಇಳಿಕೆ ಮಾಡಲಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ರೈತರು ತತ್ತರಿಸಿ ಹೋಗಿದ್ದಾರೆ. ಸಂಕಷ್ಟಕ್ಕೆ ಸಿಲುಕಿ ಒದ್ದಾಡುತ್ತಿದ್ದಾರೆ. ಇಂತಹ ಸಂಕಷ್ಟದಲ್ಲಿರುವಂತ ಹಾಲು ಉತ್ಪಾದಕರಿಗೆ ಶಿಮುಲ್ ಮತ್ತೊಂದು ಶಾಕ್ ನೀಡಿದೆ. ಅದೇ ಹಾಲು ಉತ್ಪಾದಕ ರೈತರಿಂದ ಖರೀದಿ ಮಾಡುವಂತ ಪ್ರತಿ ಲೀಟರ್ ಹಾಲಿನ ಖರೀದಿ ಬೆಲೆಯಲ್ಲಿ 90 ಪೈಸೆ ಇಳಿಕೆ ಮಾಡಿದೆ. ಈ ಸಂಬಂಧ ಶಿಮುಲ್ ಆಡಳಿತ ಮಂಡಳಿಯಿಂದ ಮಹತ್ವದ ಸಭೆ ನಡೆಸಲಾಗಿತ್ತು. ಈ ಸಭೆಯಲ್ಲಿ ರೈತರಿಂದ ಹಾಲು ಖರೀದಿ ಮಾಡುವಂತ ಬೆಲೆಯನ್ನು ಇಳಿಕೆ ಮಾಡುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಅದರಂತೆ ಪ್ರತಿ ಲೀಟರ್ ಹಾಲು ಖರೀದಿ ಮೇಲಿನ ದರವನ್ನು 90 ಪೈಸೆ ಇಳಿಕೆ ಮಾಡಲಾಗಿದೆ. ಹೀಗಾಗಿ ಹಾಲು ಉತ್ಪಾದಕರಿಂದ ಇನ್ಮುಂದೆ ಪ್ರತಿ ಲೀಟರ್ ಗೆ ರೂ.33.03 ದರದಲ್ಲಿ ಹಾಲನ್ನು ಖರೀದಿ ಮಾಡಲಾಗುತ್ತದೆ. https://kannadanewsnow.com/kannada/hmt-land-belongs-to-centre-property-of-7-crore-kannadigas-minister-ishwar-khandre-to-bjp/ https://kannadanewsnow.com/kannada/note-how-many-times-can-the-address-be-changed-in-the-aadhaar-card-heres-the-information/
ಬೆಂಗಳೂರು : ಸರ್ವೋನ್ನತ ನ್ಯಾಯಾಲಯ “Once A Forest, Always A Forest Unless De-Notified’ ಅಂದರೆ ಅರಣ್ಯೇತರ ಉದ್ದೇಶಕ್ಕೆ ಡಿನೋಟಿಫೈ ಆಗದ ಹೊರತು ಒಂದು ಬಾರಿ ಅರಣ್ಯ ಎಂದು ಅಧಿಸೂಚನೆ ಆದ ಭೂಮಿ ಸದಾ ಅರಣ್ಯವಾಗೇ ಇರುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಹೀಗಾಗಿ ಡಿನೋಟಿಫೈ ಆಗದ ಎಚ್.ಎಂ.ಟಿ. ಭೂಮಿ ಇಂದಿಗೂ ಅರಣ್ಯ ಇಲಾಖೆಯ ಸ್ವತ್ತು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ವಕ್ತಾರ ಎನ್.ಆರ್. ರಮೇಶ್, ‘ಎಚ್.ಎಂ.ಟಿ. ಜಾಗ ಕೇಂದ್ರದ್ದು, ಅರಣ್ಯ ಸಚಿವರು ಸಂಪೂರ್ಣ ದಾಖಲೆ ಅಧ್ಯಯನ ಮಾಡಿದ ಬಳಿಕವಷ್ಟೇ ಅಭಿಪ್ರಾಯ ವ್ಯಕ್ತಪಡಿಸಬೇಕು’ ಎಂದು ನೀಡಿರುವ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿರುವ ಖಂಡ್ರೆ, ಬಿಜೆಪಿ ಹೇಳಿಕೆ ಖಂಡನೀಯ. ಉತ್ತರ ಬೆಂಗಳೂರಿನಲ್ಲಿ ಶ್ವಾಸ ಪ್ರದೇಶವೇ ಇಲ್ಲ. ಈ ಜಾಗ ಆ ಭಾಗದ ಜನರ ಉಸಿರಾಟದ ತಾಣ ಎಂದು ಹೇಳಿದ್ದಾರೆ. ಡಿನೋಟಿಫೈ ಆಗಿಲ್ಲ ಎಂಬ ಕಾರಣಕ್ಕೆ ಶರಾವತಿ ಮುಳುಗಡೆ ಸಂತ್ರಸ್ತರಿಗೆ ನೀಡಿದ ಭೂಮಿಗೇ…
ಬೆಂಗಳೂರು: ದೇಶದಲ್ಲಿ ಗಾಂಧೀವಾದ ಗೆಲ್ಲಬೇಕೇ ಹೊರೆತು ಸಾವರ್ಕರ್ ಅವರ ವಾದ ಅಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಗಾಂಧೀ ಜಯಂತಿಯ ಪ್ರಯುಕ್ತ ಜಾಗೃತ ಕರ್ನಾಟಕ ಮತ್ತು ಅಹರ್ನಿಶಿ ಪ್ರಕಾಶನ ಅವರು ಆಯೋಜಿಸಿದ್ದ ‘ಗಾಂಧೀಜಿಯ ಹಂತಕ’ ಪುಸ್ತಕ ಬಿಡುಗಡೆ, ಚರ್ಚಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಚಿವರು ಮಾತನಾಡುತ್ತಿದ್ದರು. ಗೋಡ್ಸೆಗೆ ಉತ್ತರ ಗಾಂಧೀಜಿಯವರೇ.. ಗಾಂಧೀಜಿಯವರ ಹತ್ಯೆ ಮಾಡಿದ ಗೋಡ್ಸೆ, ಸಾವರ್ಕರ್ ವಾದದಿಂದ ಪ್ರಭಾವಿತರಾಗಿದ್ದರು. ದೇಶದಲ್ಲಿ ಇಂದು ಗಾಂಧೀವಾದ ಎದುರು ಸಾವರ್ಕರ್ ಅವರ ವಾದ ಗೆಲ್ಲುತ್ತಿದೆಯೇ ಎಂಬ ಅನುಮಾನ ನಮ್ಮನ್ನ ಕಾಡುತ್ತಿರುವುದು ನಿಜಕ್ಕೂ ಆತಂಕಕಾರಿ ಬೆಳವಣಿಗೆ. ಸಾವರ್ಕರ್ ಅವರಲ್ಲಿ ವೈಚಾರಿಕ ಚಿಂತನೆಗಳು, ರಾಷ್ಟ್ರೀಯವಾದ ಕಾಣಲು ಸಾಧ್ಯವಾದರೂ, ಪ್ರಜಾಪ್ರಭುತ್ವದ ಪರವಾದ ವ್ಯಕ್ತಿತ್ವ ಇರಲಿಲ್ಲ. ಆದರೆ ಗಾಂಧಿಜೀ ಅವರದ್ದು ಡೆಮಾಕ್ರೆಟಿಕ್ ವ್ಯಕ್ತಿತ್ವ ಎಂದು ಹೇಳಿದರು. ಬ್ರಾಹ್ಮಣ ಸಮಾಜದ ಸಾವರ್ಕರ್ ಅವರು ಮಾಂಸ ಸೇವಿಸುತ್ತಿದ್ದರು. ಮಾಂಸಹಾರ ಸೇವನೆಯನ್ನ ಅವರು ಬಹಿರಂಗವಾಗಿ ಸಮರ್ಥಿಸುತ್ತಿದ್ದರು. ಹಾಗೆ ನೋಡಿದರೆ ಸಾವರ್ಕರ್ ಒಂದು ರೀತಿಯಲ್ಲಿ ಮಾಡರ್ನಿಷ್ಟ್ ಆಗಿಯೂ ಕಾಣುತ್ತಾರೆ. ಆದರೆ ಮೂಲಭೂತ ವಾದಿಯಾಗಿದ್ದರು…
ಭುವನೇಶ್ವರ: ಒಡಿಶಾದ ಭುವನೇಶ್ವರದ ಅಪಾರ್ಟ್ಮೆಂಟ್ನಲ್ಲಿ ಸೋಮವಾರ ಇಬ್ಬರು ಕಳ್ಳರು ಚಾಕು ತೋರಿಸಿ ಆಭರಣಗಳನ್ನು ದೋಚಿ ನಂತರ 27 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಭುವನೇಶ್ವರದ ಮೈತ್ರಿ ವಿಹಾರ್ನಲ್ಲಿ ಸೆಪ್ಟೆಂಬರ್ 30 ರಂದು ಮುಂಜಾನೆ 2 ಗಂಟೆ ಸುಮಾರಿಗೆ ಈ ಅಪರಾಧ ನಡೆದಿದೆ. ಪೊಲೀಸರಿಗೆ ನೀಡಿದ ದೂರಿನ ಪ್ರಕಾರ, ಕಳ್ಳರು ಮೊದಲು ಚಾಕು ತೋರಿಸಿ ಆಕೆಯ ಆಭರಣಗಳು ಮತ್ತು ಮೊಬೈಲ್ ಫೋನ್ ಅನ್ನು ಲೂಟಿ ಮಾಡಿದರು ಮತ್ತು ನಂತರ ಸಹಾಯಕ್ಕಾಗಿ ಕಿರುಚಿದರೆ ಅವಳ 2 ವರ್ಷದ ಮಗಳನ್ನು ಕೊಲ್ಲುವುದಾಗಿ ಬೆದರಿಸುವ ಮೂಲಕ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಮಹಿಳೆ ಭುವನೇಶ್ವರದ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದು, ಕೇವಲ 10 ದಿನಗಳ ಹಿಂದೆ ಫ್ಲ್ಯಾಟ್ಗೆ ತೆರಳಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಕಳ್ಳರು ಮನೆಯನ್ನು ತಲುಪಲು ಬಿದಿರಿನ ಕಂಬಗಳನ್ನು ಬಳಸಿ ಕಟ್ಟಡವನ್ನು ಪ್ರವೇಶಿಸಿರಬಹುದು ಎಂದು ಅವರು ಶಂಕಿಸಿದ್ದಾರೆ. ಅಪರಾಧಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ…
ಬೆಂಗಳೂರು: ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯಾಭಿವೃದ್ಧಿ ನಿಗಮ (ಕೆಆರ್‌ಐಡಿಎಲ್) ನಿರ್ವಹಿಸುವ ಕಾಮಗಾರಿಗಳ ಪ್ರಗತಿಯ ಸಂಪೂರ್ಣ ಮಾಹಿತಿಗಳು, ಕಾಮಗಾರಿಗಳನ್ನು ವಹಿಸುವ ಇಲಾಖೆಗಳಿಂದ ಬಿಡುಗಡೆಯಾಗುವ ಅನುದಾನದ ಸ್ವೀಕೃತಿ ಹಾಗೂ ಬಳಕೆ, ಸೂಕ್ತ ರೀತಿಯಲ್ಲಿ ಲೆಕ್ಕಪತ್ರಗಳ ನಿರ್ವಹಣೆ ಮುಂತಾದ ವಿವಿಧ ಅಂಶಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಅನುಕೂಲವಾಗುವಂತೆ ಗಾಂಧಿ ಸಾಕ್ಷಿ ಕಾಯಕ 2.0 (ವರ್ಕ್ ಮಾನಿಟರಿಂಗ್ ಸಿಸ್ಟಂ) ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದ್ದು ಗಾಂಧಿ ಜಯಂತಿ ದಿನದಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಲೋಕಾರ್ಪಣೆಗೊಳಿಸಿದರು. ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯಾಭಿವೃದ್ಧಿ ನಿಗಮ (ಕೆಆರ್‌ಐಡಿಎಲ್) ಕರ್ನಾಟಕ ಸರ್ಕಾರದ ಅಂಗಸAಸ್ಥೆಯಾಗಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ನಿರ್ಮಾಣ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಈ ಸಂಸ್ಥೆಯು ರಾಜ್ಯಾದ್ಯಂತ ತನ್ನ ಜಾಲವನ್ನು ಹೊಂದಿದ್ದು, ಸರ್ಕಾರದ ವತಿಯಿಂದ ಕೈಗೊಳ್ಳಲಾಗುವ ನಿರ್ಮಾಣ ಯೋಜನೆಗಳು ಹಾಗೂ ವಿವಿಧ ಇಲಾಖೆಗಳು ವಹಿಸುವ ಕಟ್ಟಡಗಳು, ರಸ್ತೆ ಅಭಿವೃದ್ಧಿ ಮೊದಲಾದ ಕಾಮಗಾರಿಗಳನ್ನು ಕಳೆದ 51 ವರ್ಷಗಳಿಂದ ನಿಗದಿತ ಕಾಲಾವಧಿಯಲ್ಲಿ ಉತ್ತಮ ಗುಣಮಟ್ಟದಿಂದ ಅನುಷ್ಠಾನಗೊಳಿಸುತ್ತಿದೆ.…













