Author: kannadanewsnow09

 ನವದೆಹಲಿ: ಕೇಂದ್ರೀಯ ನೇರ ತೆರಿಗೆ ಮಂಡಳಿ (Central Board of Direct Taxes – CBDT) 2024-25ರ ಮೌಲ್ಯಮಾಪನ ವರ್ಷಕ್ಕೆ ತೆರಿಗೆ ಲೆಕ್ಕಪರಿಶೋಧನಾ ವರದಿಗಳನ್ನು ಸಲ್ಲಿಸುವ ಗಡುವನ್ನು ವಿಸ್ತರಿಸಿದೆ. ಅಕ್ಟೋಬರ್.7ರ ಒಳಗಾಗಿ ಆದಾಯ ತೆರಿಗೆಗೆ ಸಂಬಂಧಿಸಿದಂತೆ ಈ ಕೆಲಸ ಮಾಡದೇ ಇದ್ದರೇ 1.5 ಲಕ್ಷ ದಂಡವನ್ನು ಕಟ್ಟೋದಕ್ಕೆ ರೆಡಿಯಾಗಿ. ಹೌದು. ಮೂಲತಃ ಸೆಪ್ಟೆಂಬರ್ 30, 2024 ಕ್ಕೆ ನಿಗದಿಪಡಿಸಲಾಗಿತ್ತು, ಹೊಸ ಗಡುವು ಈಗ ಅಕ್ಟೋಬರ್ 7, 2024 ಆಗಿದೆ. ಆದಾಯ ತೆರಿಗೆ ಕಾಯ್ದೆಯಡಿ (  Income Tax Act ) ಎಲೆಕ್ಟ್ರಾನಿಕ್ ಸಲ್ಲಿಕೆಗಳೊಂದಿಗೆ ತೆರಿಗೆದಾರರು ಎದುರಿಸುತ್ತಿರುವ ಸವಾಲುಗಳಿಗೆ ಪ್ರತಿಕ್ರಿಯೆಯಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ, ವಿಶೇಷವಾಗಿ ಇ-ಫೈಲಿಂಗ್ ಪೋರ್ಟಲ್ನಲ್ಲಿನ ಸಮಸ್ಯೆಗಳಿಂದಾಗಿ ವಿಸ್ತರಿಸಿತ್ತು. ಈ ವಿಸ್ತರಣೆಯು ಅಕ್ಟೋಬರ್ 31, 2024 ರೊಳಗೆ ತಮ್ಮ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಬೇಕಾದ ವ್ಯಕ್ತಿಗಳು, ಕಂಪನಿಗಳು ಮತ್ತು ಇತರ ಮೌಲ್ಯಮಾಪಕರು ಸೇರಿದಂತೆ ವ್ಯಾಪಕ ಶ್ರೇಣಿಯ ತೆರಿಗೆದಾರರಿಗೆ ಪ್ರಯೋಜನವನ್ನು ನೀಡುತ್ತದೆ. ಆರಂಭದಲ್ಲಿ ಮೂಲ ಸೆಪ್ಟೆಂಬರ್ ಗಡುವಿನೊಳಗೆ ತಮ್ಮ ತೆರಿಗೆ ಲೆಕ್ಕಪರಿಶೋಧನಾ ವರದಿಗಳನ್ನು ಸಲ್ಲಿಸಲು…

Read More

ಬೀದರ್ : ದಿನೇ ದಿನೇ ಹೃದಯಾಘಾತದಂತ ಪ್ರಕರಣಗಳು ಹೆಚ್ಚಾಗುತ್ತಿವೆ. ಬೀದರ್ ನಲ್ಲಿ ಕರ್ತವ್ಯ ನಿರತಂತ ಸಂದರ್ಭದಲ್ಲೇ ಪೊಲೀಸ್ ಪೇದೆಯೊಬ್ಬ ಹೃದಯಾಘಾತಕ್ಕೆ ಒಳಗಾಗಿ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಬೀದರ್ ನ್ಯೂ ಟೌನ್ ಪೊಲೀಸ್ ಠಾಮೆಯಲ್ಲಿ ಪೊಲೀಸ್ ಪೇದೆಯಾಗಿ ಐದು ವರ್ಷದಿಂದ ಚಂದ್ರಶೇಖರ್(28) ಕರ್ತವ್ಯ ನಿರ್ವಹಿಸುತ್ತಿದ್ದರು. ಇಂದು ಗಾಂಧಿ ಜಯಂತಿಯ ಅಂಗವಾಗಿ ಕರ್ತವ್ಯ ನಿರತಂತ ವೇಳೆಯಲ್ಲಿ ದಿಢೀರ್ ಹೃದಯಾಘಾತ ಸಂಭವಿಸಿದೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಆದರೇ ಚಿಕಿತ್ಸೆ ಫಲಿಸದೇ 28 ವರ್ಷದ ಪೊಲೀಸ್ ಪೇದೆ ಚಂದ್ರಶೇಖರ್ ಸಾವನ್ನಪ್ಪಿದ್ದಾರೆ. ಅಂದಹಾಗೇ ಮೃತ ಪೊಲೀಸ್ ಪೇದೆ ಚಂದ್ರಶೇಖರ್ ರಾಯಚೂರು ಮೂಲದವರು. ಕಳೆದ 5 ವರ್ಷದ ಹಿಂದೆ ಪೊಲೀಸ್ ಪೇದೆಯಾಗಿ ಬೀದರ್ ಗೆ ನೇಮಕಗೊಂಡು, ಸೇವೆ ಸಲ್ಲಿಸುತ್ತಿದ್ದರು. ತಂದೆ-ತಾಯಿ ಕುಟುಂಬದವರೆಲ್ಲಾ ರಾಯಚೂರಲ್ಲಿ ಬಿಡ್ಡು, ಒಬ್ಬರೇ ಬೀದರ್ ನಲ್ಲಿ ಪೊಲೀಸ್ ಪೇದೆಯಾಗಿ ಕೆಲಸ ಮಾಡುತ್ತಿದ್ದರು. ಇಂತಹ ಅವರು ಇಂದು ದಿಢೀರ್ ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿದ್ದಾರೆ. https://kannadanewsnow.com/kannada/in-yet-another-controversy-siddaramaiah-said-india-flag-in-hand-of-congress-worker-who-tied-cms-shoelaces/ https://kannadanewsnow.com/kannada/note-how-many-times-can-the-address-be-changed-in-the-aadhaar-card-heres-the-information/

Read More

ಬೆಂಗಳೂರು: ಮುಡಾ ಹಗರಣದ ಸಂಕಷ್ಟದಲ್ಲಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಈಗ ಮತ್ತೊಂದು ವಿವಾದದಲ್ಲಿ ಸಿಲುಕಿದ್ದಾರೆ. ಅದೇ ರಾಷ್ಟ್ರಧ್ವಜ ಹಿಡಿದಿದ್ದಂತ ಕಾಂಗ್ರೆಸ್ ಕಾರ್ಯಕರ್ತನೊಬ್ಬನಿಂದ ತಮ್ಮ ಶೂ ಲೇಸ್ ಕಟ್ಟಿಸಿಕೊಂಡು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಗುಲಾಮಗಿರಿಯ ದವಡೆಯಿಂದ ಮುಕ್ತವಾದ ಭಾರತ, ಇಂದು ವಿಶ್ವದ ಮುಂಚೂಣಿ ರಾಷ್ಟ್ರವಾಗಿದೆ. ರಾಷ್ಟ್ರಭಕ್ತಿ, ರಾಷ್ಟ್ರಧ್ವಜ, ರಾಷ್ಟ್ರ ಭಕ್ತರು ಎಂದರೆ ಕಾಂಗ್ರೆಸ್’ಗೆ ಯಾವಾಗಲೂ ಕಾಲ ಕಸ ಎಂಬುದಾಗಿ ಕಿಡಿಕಾರಿದ್ದಾರೆ. ಗುಲಾಮಗಿರಿಯನ್ನು ಆರಾಧಿಸಿಕೊಂಡು ಬಂದ ಕಾಂಗ್ರೆಸ್ಸಿಗರು ರಾಷ್ಟ್ರಧ್ವಜವನ್ನು ಗಾಂಧಿ ಜಯಂತಿಯಂದೇ ಗುಲಾಮಗಿರಿಯ ಸಂಕೇತದಂತೆ ಕಾಲಕಸವಾಗಿ ಕಂಡಿರುವುದು, ಸ್ವತಃ ಮುಖ್ಯಮಂತ್ರಿಗಳು ಅದನ್ನು ಆಕ್ಷೇಪಿಸದೆ ಉತ್ತೇಜಿಸುವ ಮಾದರಿಯಲ್ಲಿ ಉಡಾಫೆ ಪ್ರದರ್ಶಿಸಿರುವುದು ರಾಷ್ಟ್ರ ಹಾಗೂ ರಾಷ್ಟ್ರಧ್ವಜಕ್ಕೆ ಮಾಡಿದ ಅಪಮಾನವಾಗಿದೆ ಎಂಬುದಾಗಿ ವಾಗ್ಧಾಳಿ ನಡೆಸಿದ್ದಾರೆ. ಈ ಕೂಡಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಕಾಂಗ್ರೆಸ್ ಭಾರತೀಯರ ಕ್ಷಮೆ ಕೇಳುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ. https://twitter.com/BYVijayendra/status/1841396912039383104 https://kannadanewsnow.com/kannada/note-how-many-times-can-the-address-be-changed-in-the-aadhaar-card-heres-the-information/ https://kannadanewsnow.com/kannada/gandhiji-is-the-leader-of-the-garden-of-peace-for-all-races-dk-shivakumar/

Read More

ಬೆಂಗಳೂರು : “ಮಹಾತ್ಮ ಗಾಂಧೀಜಿ ಅವರು ಸರ್ವ ಜನಾಂಗದ ಶಾಂತಿಯ ತೋಟದ ನಾಯಕ. ಇವರು ಕೇವಲ ವ್ಯಕ್ತಿಯಲ್ಲ, ಶಕ್ತಿ ಮತ್ತು ಸ್ಪೂರ್ತಿ. ರಾಷ್ಟ್ರಪಿತ ದೇಶದ ಧೀಮಂತ, ಇಡೀ ವಿಶ್ವಕ್ಕೆ ಶಾಂತಿ ಮಂತ್ರ ಹೇಳಿಕೊಟ್ಟ ಮಹಾನ್ ನಾಯಕ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಮಹಾತ್ಮ ಗಾಂಧಿ ಅವರ 155 ನೇ ಜನ್ಮದಿನದ ಅಂಗವಾಗಿ ಸ್ವಚ್ಛತಾ ಆಂದೋಲನದ ಪ್ರತಿಜ್ಞಾವಿಧಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಉಪವಾಸ, ಸತ್ಯಾಗ್ರಹವೇ ಇವರ ಆಯುಧ. ಬಾಂಬು, ಬಂದೂಕುಗಳಿಲ್ಲದೆ ಅಹಿಂಸೆಯ ಮೂಲಕ ಹೋರಾಟದ ಹಾದಿಯನ್ನು ಹೇಳಿಕೊಟ್ಟವರು. ಮುಂದಿನ ಒಂದು ವರ್ಷಗಳ ಕಾಲ ಮಹಾತ್ಮನನ್ನು ಸ್ಮರಿಸಲು ‘ಗಾಂಧಿ ಭಾರತ’ ಎನ್ನುವ ಕಾರ್ಯಕ್ರಮ ರೂಪಿಸಲಾಗಿದೆ” ಎಂದರು. “ಶಿವನ ಧ್ಯಾನ, ರಾಮನ ತ್ಯಾಗ, ಬುದ್ಧನ ಪ್ರೀತಿ, ಏಸುವಿನ ಸಹನೆ, ಮಹಮದ್ ಪೈಗಂಬರ್ ಅವರ ಮಾನವೀಯತೆಯನ್ನು ಒಳಗೊಂಡ ಸ್ವರೂಪವೇ ಮಹಾತ್ಮಾ ಗಾಂಧಿ” ಎಂದರು. “ನನ್ನ ಜೀವನವೇ ನನ್ನ ಸಂದೇಶ ಎಂದು ನುಡಿದಂತೆ ನಡೆದವರು ಗಾಂಧಿ. ಇವರ ಆಚಾರ, ವಿಚಾರ, ತತ್ವ,…

Read More

ಬೆಂಗಳೂರು: ಮೈಸೂರು ದಸರಾ ಉದ್ಘಾಟನಾ ಸಂದರ್ಭದಲ್ಲಿ ಪ್ರತಿ ವರ್ಷವೂ ಅರಮನೆ ಆವರಣದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಮಾಡುವುದು ಸಂಪ್ರದಾಯ. ಅದರಂತೆ ಈ ವರ್ಷ ಈ ಪ್ರತಿಷ್ಠಿತ ಪ್ರಶಸ್ತಿಗೆ ಹಾವೇರಿ ಜಿಲ್ಲೆಯ ಖ್ಯಾತ ಶಹನಾಯಿ ವಾದಕ ಪಂಡಿತ್ ಬಸವರಾಜ ಭಜಂತ್ರಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್ ತಂಗಡಗಿ ಹೇಳಿದ್ದಾರೆ. ಪಂಡಿತ್ ಎಂ . ವೆಂಕಟೇಶ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ಆಯ್ಕೆ ಸಮಿತಿ ಇವರನ್ನು ಆಯ್ಕೆ ಮಾಡಿದೆ. ನಾಳೆ ಸಂಜೆ ಮೈಸೂರು ಅರಮನೆ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಪ್ರತಿಷ್ಠಿತ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ಪಂಡಿತ್ ಬಸವರಾಜ ಭಜಂತ್ರಿ ಅವರಿಗೆ ಪ್ರದಾನ ಮಾಡಲಿದ್ದಾರೆ ಎಂದು ಅವರು ತಿಳಿಸಿದರು. ಈ ಪ್ರಶಸ್ತಿಯು 5 ಲಕ್ಷ ರೂಪಾಯಿ ನಗದು, ಪ್ರಶಸ್ತಿಫಲಕ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ…

Read More

ಬೆಂಗಳೂರು : ಎಲ್ಲಾ ನ್ಯಾಯಾಲಯಗಳಿಗಿಂತ ಮೇಲೆ ಅತ್ಯುನ್ನತವಾದ ಆತ್ಮಸಾಕ್ಷಿಯ ನ್ಯಾಯಾಲಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾತ್ಮ ಗಾಂಧಿಯವರ ಮಾತನ್ನು ಪುನರುಚ್ಚರಿಸಿದರು. ಕರ್ನಾಟಕ ಗಾಂಧೀ ಸ್ಮಾರಕ ನಿಧಿ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಈಗಿನ ನ್ಯಾಯಲಯಗಳಲ್ಲಿ ನ್ಯಾಯ ಸಿಗದೇ ಹೋಗಬಹುದು. ಈಗಿನ ನ್ಯಾಯಾಲಯಗಳಿಂದ ಎಲ್ಲರಿಗೂ ನ್ಯಾಯ ಸಿಗದೇ ಹೋಗಬಹುದು. ಆದರೆ ನಾವು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು ಎಂದು ಕರೆ ನೀಡಿದರು. ಯಾರಾದರೂ ಹೊಗಳಲಿ, ತೆಗಳಲಿ. ಟೀಕೆ ಮಾಡಲಿ, ಬಿಡಲಿ. ಉಳಿದವರು ಗುರುತಿಸಲಿ ಬಿಡಲಿ ನಾವು ಪ್ರತಿಯೊಬ್ಬರೂ ಆತ್ಮಸಾಕ್ಷಿಯ ನ್ಯಾಯಾಲಯದಲ್ಲಿ ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು ಎಂದರು. ಕೇವಲ ಭಾಷಣದಿಂದ ಮಹಾತ್ಮಗಾಂಧಿ ಮತ್ತು ಅಂಬೇಡ್ಕರ್ ಅವರ ಆಶಯಗಳು ಈಡೇರುವುದಿಲ. ಇವರಿಬ್ಬರ ಬದುಕಿನ ಮೌಲ್ಯ ಮತ್ತು ಸಂದೇಶಗಳನ್ನು ಜನ ಮಾನಸದಲ್ಲಿ ವಿಸ್ತರಿಸುತ್ತಲೇ ಸರ್ಕಾರ ಸಮ ಸಮಾಜ ನಿರ್ಮಿಸಲು ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸಬೇಕಾಗುತ್ತದೆ. ನಾನು ಮತ್ತು ನಮ್ಮ ಸರ್ಕಾರ ಈ ದಿಕ್ಕಿನಲ್ಲಿ ಸಾಗುತ್ತಿದ್ದೇವೆ ಎಂದರು. ಲಾಲ್ ಬಹದ್ದೂರ್…

Read More

ಬೆಂಗಳೂರು : ಗಾಂಧಿಯವರ ಸರ್ವೋದಯ, ಅಂಬೇಡ್ಕರ್ ಅವರ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ BBMP ಆಯೋಜಿಸಿದ್ದ ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ ಜನ್ಮ ದಿನಾಚರಣೆ ಮತ್ತು ಸ್ವಚ್ಚತಾ ಆಂದೋಲನಾ ಪ್ರತಿಜ್ಞಾ ವಿಧಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಹಾತ್ಮಗಾಂಧಿ ಮೊದಲು ಇಡೀ ಗ್ರಾಮೀಣ ಭಾರತವನ್ನು ಸುತ್ತಾಡಿ ನಮ್ಮ ಜನರ ಬದುಕು ಮತ್ತು ಬವಣೆಯನ್ನು ಅರ್ಥ ಮಾಡಿಕೊಂಡು ಬಳಿಕ‌ ಅದಕ್ಕೆ ತಕ್ಕಂತೆ ಸ್ವಾತಂತ್ರ್ಯ ಹೋರಾಟ ಸಂಘಟಿಸಿ ಸ್ವತಃ ಜೈಲು ಸೇರಿ ಹೋರಾಟ ಮುಂದುವರೆಸಿ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟರು ಎಂದು ವಿವರಿಸಿದರು. ಬ್ರಿಟೀಷರೇ ಭಾರತ ಬಿಟ್ಟು ತೊಲಗಿ ಎಂದು ಕರೆ ನೀಡಿ 1947 ರಲ್ಲಿ ಬ್ರಿಟೀಷರು ಭಾರತದಿಂದ ತೊಲಗುವಂತೆ ಮಾಡಿದರು. ಸ್ವಾತಂತ್ರ್ಯ ಭಾರತದಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಆಶಯಗಳನ್ನು ಈಡೇರಿಸುವ ಸಾಮಾಜಿಕ, ಆರ್ಥಿಕ ಕಾರ್ಯಕ್ರಮಗಳನ್ನು ನಾವು ರೂಪಿಸಿ ಜಾರಿ ಮಾಡಿದ್ದೇವೆ. ನಮ್ಮ ಗ್ಯಾರಂಟಿ ಕಾರ್ಯಕ್ರಮಗಳೂ ಕೂಡ ಬಡವರಿಗೆ ಆರ್ಥಿಕ‌ ಸ್ವಾತಂತ್ರ್ಯ ಒದಗಿಸಿಕೊಡುವುದಾಗಿದೆ ಎಂದರು.…

Read More

ಶಿವಮೊಗ್ಗ: ಜಿಲ್ಲೆಯ ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಈ ವೈದ್ಯನ ಎಡವಟ್ಟು ಒಂದಾ ಎರಡಾ? ಸರಿಯಾಗಿ ಹೆರಿಗೆ ಮಾಡದೇ ಇರೋದು, ಹೆರಿಗೆ ಮಾಡಿದ ಮೇಲೆ ಹೊಲಿಗೆ ಸರಿಯಾಗಿ ಹಾಕದೇ ನಿರ್ಲಕ್ಷ್ಯ ತೋರಿಸೋದು ಸೇರಿದಂತೆ ಹಲವಾರು. ಡಾಕ್ಟರ್ ಮಾಡೋ ಎಡವಟ್ಟಿನಿಂದಾಗಿ ಶಿಕ್ಷೆ ಅನುಭವಿಸಿದವರು ನೂರಾರು ಗರ್ಭಿಣಿಯರು, ಬಾಣಂತಿಯರು, ಮಹಿಳೆಯರು. ಈಗ ಮುಂದುವರೆದು ಈ ಸರ್ಕಾರಿ ವೈದ್ಯ ಬಾಣಂತಿಗೆ ಕಪಾಳಮೋಕ್ಷ ಮಾಡಿದ್ದಾರೆ. ಈ ಮೂಲಕ ಗೂಂಡಾ ವರ್ತನೆ ತೋರಿದ್ದಾರೆ. ಕಳೆದ ಕೆಲ ತಿಂಗಳ ಹಿಂದಷ್ಟೇ ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ತೆರಳಿದ್ದಂತ ಗರ್ಭಿಣಿಯೊಬ್ಬರಿಗೆ ಪ್ರಸೂತಿ ಮತ್ತು ಸ್ರೀರೋಗ ತಜ್ಞ ಡಾ.ನಾಗೇಂದ್ರಪ್ಪ ಸಿಜೇರಿಯನ್ ಹೆರಿಗೆ ಮಾಡಿಸಿದ್ದರು. ಹೆರಿಗೆಯ ನಂತ್ರ ರಕ್ತ ಸ್ತ್ರಾವ ನಿಯಂತ್ರಣಕ್ಕೆ ಕ್ರಮವಹಿಸಿ ಹೊಲಿಗೆ ಹಾಕಬೇಕಿದ್ದಂತ ಡಾ.ನಾಗೇಂದ್ರಪ್ಪ, ಅದ್ಯಾವುದನ್ನು ಮಾಡದೇ ಹಾಗೆಯೇ ಹೊಲಿಗೆ ಹಾಕಿದ್ದರು. ಡಾ.ನಾಗೇಂದ್ರಪ್ಪ ಎಡವಟ್ಟಿನ ಕಾರಣ ಬಾಣಂತಿಯೊಬ್ಬರು ಹೆರಿಗೆಯ ನಂತ್ರ ಹೊಟ್ಟೆ ಊತ ಬಂದು, ಹೊಟ್ಟೆಯೊಳಗಡೆ ರಕ್ತ್ರಸ್ತ್ರಾವ ಉಂಟಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.…

Read More

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇಂದು ಸ್ವಚ್ಥತಾ ಅಭಿಯಾನವನ್ನು ನಡೆಸಲಾಯಿತು. ಆರೋಗ್ಯ ಇಲಾಖೆ ಹಾಗೂ ದೂಗೂರು ಗ್ರಾಮ ಪಂಚಾಯ್ತಿ ಅಧಿಕಾರಿ, ಸಿಬ್ಬಂದಿಗಳು ಜೊತೆಗೂಡಿ ಆಸ್ಪತ್ರೆ ಆವರಣವನ್ನು ಸ್ವಚ್ಚಗೊಳಿಸಿದರು. ಇಂದು ಅಕ್ರೋಬರ್.2ರ ಗಾಂಧಿ ಜಯಂತಿಯ ಹಿನ್ನಲೆಯಲ್ಲಿ ದೇಶ, ರಾಜ್ಯದ ವಿವಿಧೆಡೆ ಸ್ವಚ್ಛತಾ ಅಭಿಯಾನವನ್ನು ಕೈಗೊಳ್ಳಲಾಗಿದೆ. ಇದೇ ವೇಳೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದೂಗೂರು ಗ್ರಾಮ ಪಂಚಾಯ್ತಿ ಚುನಾಯಿತ ಪ್ರತಿನಿಧಿಗಳು, ಅಧಿಕಾರಿ, ಸಿಬ್ಬಂದಿಗಳು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಜೊತೆಗೂಡಿ ಸ್ವಚ್ಛತಾ ಅಭಿಯಾನ ನಡೆಸಿದರು. ಈ ಸ್ವಚ್ಛತಾ ಅಭಿಯಾನದಲ್ಲಿ ಉಳವಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ವೈದ್ಯಾಧಿಕಾರಿ ಡಾ.ಜಯರಾಂ ಮಹದೇವ್ ಪವಾರ್, ಹಿರಿಯ ಲ್ಯಾಬ್ ಟೆಕ್ನೀಷಿಯನ್ ಚಂದ್ರ ನಾಯ್ಕ್, ಆರೋಗ್ಯ ನಿರೀಕ್ಷಣಾಧಿಕಾರಿ ಶಶಿಧರ್, ಪಿ ಹೆಚ್ ಸಿ ಓ ನಿರ್ಮಲಾ, ಸಿಹೆಚ್ಓ ಉಮಾ ಶರಾವತ್, ಗುರುಕಿರಣ್ ಭಾಗಿಯಾಗಿದ್ದರು. ದೂಗೂರು ಗ್ರಾಮ ಪಂಚಾಯತಿ ಪಿಡಿಓ ಸಿ.ಕೆ ನಾಗರಾಜ್, ಕಾರ್ಯದರ್ಶಿ ನಂದಿನಿ, ಉಪಾಧ್ಯಕ್ಷರಾದ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 11 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಮೂಲಕ ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಚುರುಕು ಮುಟ್ಟಿಸಿದೆ. ಇಂದು ರಾಜ್ಯ ಸರ್ಕಾರದಿಂದ ವರ್ಗಾವಣೆ ಅಧಿಸೂಚನೆ ಹೊರಡಿಸಲಾಗಿದ್ದು, ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿಯಾಗಿದ್ದಂತ ಮಂಜುನಾಥಸ್ವಾಮಿ ಜಿಎನ್ ಅವರನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಉಪ ಕಾರ್ಯದರ್ಶಿಯನ್ನಾಗಿ ನೇಮಿಸಿದೆ. ಉತ್ತರ ಕನ್ನಡ ಜಿಲ್ಲೆಯ ಅಪರ ಜಿಲ್ಲಾ ದಂಡಾಧಿಕಾರಿಯಾಗಿದ್ದಂತ ಪ್ರಕಾಶ್ ಗೋಪು ರಜಪೂತ್ ಅವರನ್ನು ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಕೃಷ್ಣಾ ಮೇಲ್ದಂಡೆ ಯೋಜನೆಯ ವಿಶೇಷ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಹಾವೇರಿ ಜಿಲ್ಲೆಯ ಅಪರ ಜಿಲ್ಲಾ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪೂಜಾರ ವೀರಮಲ್ಲಪ್ಪ ಅವರನ್ನು ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದಂತ ಡಾ.ಬಸಂತಿ ಬಿಎಸ್ ಅವರನ್ನು ಬೆಂಗಳೂರಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಮುಖ್ಯ ಆಡಳಿತಾಧಿಕಾರಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಶ್ರೀನಿವಾಸ್…

Read More