Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಸೆಂಟ್ರಲ್ ಟೀಚರ್ ಎಲಿಜಿಬಿಲಿಟಿ ಟೆಸ್ಟ್ (Central Teacher Examination Test – CTET) 2024 ಜುಲೈ ಸೆಷನ್ ಪರೀಕ್ಷೆಯನ್ನು ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (Central Board of Secondary Education -CBSE) ಜುಲೈ 7 ರಂದು ನಡೆಸಲಿದೆ. ಪ್ರವೇಶ ಪತ್ರಗಳನ್ನು ಈಗ ಅಧಿಕೃತ ವೆಬ್ಸೈಟ್ನಲ್ಲಿ ಲಭ್ಯವಾಗುವಂತೆ ಮಾಡಲಾಗಿದೆ. ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಪಾಸ್ವರ್ಡ್ ನೀಡುವ ಮೂಲಕ ಹಾಲ್ ಟಿಕೆಟ್ಗಳನ್ನು ಡೌನ್ಲೋಡ್ ಮಾಡಲು ಸಾಧ್ಯವಾಗುತ್ತದೆ. ಅಭ್ಯರ್ಥಿಗಳು ctet.nic.in ಅಧಿಕೃತ ವೆಬ್ಸೈಟ್ಗೆ ಹೋಗುವ ಮೂಲಕ ಸಿಟಿಇಟಿ 2024 ಪ್ರವೇಶ ಪತ್ರವನ್ನು ಪಡೆಯಬಹುದು. ಸಿಟಿಇಟಿ ಜುಲೈ 2024 ಅಧಿವೇಶನವು ಎರಡು ಪಾಳಿಗಳಲ್ಲಿ ನಡೆಯಲಿದೆ. ಬೆಳಗ್ಗೆ 9ರಿಂದ ಮಧ್ಯಾಹ್ನ 12ರವರೆಗೆ ಪೇಪರ್-1, ಮಧ್ಯಾಹ್ನ 2ರಿಂದ 4.30ರವರೆಗೆ ಪೇಪರ್-2 ಪರೀಕ್ಷೆ ನಡೆಯಲಿದೆ. ಕೇಂದ್ರ ಸರ್ಕಾರಿ ಶಾಲೆಗಳಲ್ಲಿ 1 ರಿಂದ 8 ನೇ ತರಗತಿಗಳಿಗೆ ಬೋಧನೆ ಮಾಡಲು ಕೇಂದ್ರ ಶಿಕ್ಷಕರ ಪರೀಕ್ಷಾ ಪರೀಕ್ಷೆ (ಸಿಟಿಇಟಿ) ಪೂರ್ವಾಪೇಕ್ಷಿತವಾಗಿದೆ. ಸಿಟಿಇಟಿ ಅಡ್ಮಿಟ್ ಕಾರ್ಡ್ 2024 ಡೌನ್ಲೋಡ್…
ಶಿವಮೊಗ್ಗ: ನಿಮ್ಮ ಕನ್ನಡ ನ್ಯೂಸ್ ನೌ ಕಳೆದ ಎರಡು ದಿನಗಳ ಹಿಂದೆ ಶಿವಮೊಗ್ಗ: ಸಾಗರ ನಗರಸಭೆ ‘ಮೇಸ್ತ್ರಿ ನಾಗರಾಜ’ನಿಂದ ‘ಮಹಿಳಾ ಪೌರ ಕಾರ್ಮಿಕ’ರ ಮೇಲೆ ಹಲ್ಲೆ ಎಂಬುದಾಗಿ ಸುದ್ದಿಯನ್ನು ಪ್ರಕಟಿಸಿತ್ತು. ಈ ವಿಷಯವನ್ನು ಇಂದಿನ ನಗರಸಭೆಯ ವಿಶೇಷ ಸಭೆಯಲ್ಲಿ ವಿಪಕ್ಷಗಳ ಮುಖಂಡರು ಪ್ರಸ್ತಾಪಿಸಿ, ಕ್ರಮಕ್ಕೂ ಆಗ್ರಹಿಸಿದರು. ಕೊನೆಗೆ ಮೇಸ್ತ್ರಿ ನಾಗರಾಜ ವಿರುದ್ಧ ಕಾನೂನು ಕ್ರಮದ ನಿರ್ಣಯವನ್ನು ಸಭೆಯಲ್ಲಿ ಅಂಗೀಕರಿಸಲಾಯಿತು. ಶಿವಮೊಗ್ಗ ಜಿಲ್ಲೆಯ ಸಾಗರದ ನಗರಸಭೆಯ ಮೇಸ್ತ್ರಿ ನಾಗರಾಜ ಎಂಬುವರು ಮಹಿಳಾ ಪೌರ ಕಾರ್ಮಿಕರೊಬ್ಬರ ಮೇಲೆ ಹಲ್ಲೆ ನಡೆಸಿ, ಗೂಂಡಾಗಿರಿ ಪ್ರದರ್ಶನ ಮಾಡಿದ್ದರು. ಇಂದು ಸಾಗರ ನಗರಸಭೆಯ ವಿಶೇಷ ಸಭೆ ಆರಂಭಗೊಂಡ ನಂತ್ರ, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ ಭಾನುಪ್ರಕಾಶ್ ಅವರ ನಿಧನಕ್ಕೆ ಸಂತಾಪ ಸೂಚಿಸಲಾಯಿತು. ಈ ಬಳಿಕ ನಡೆದಂತ ನಗರಸಭೆಯ ವಿಶೇಷ ಸಭೆಯಲ್ಲಿ ನಿಲುವಳಿಗಳನ್ನು ಮಂಡಿಸೋ ಮುನ್ನವೇ, ಮಾಜಿ ಅಧ್ಯಕ್ಷರಾದ ಲಲಿತಮ್ಮ ಅವರು ಎದ್ದು ನಿಂತು, ಮಹಿಳಾ ಪೌರ ಕಾರ್ಮಿಕರ ಮೇಲೆ ಮೇಸ್ತ್ರಿಯೊಬ್ಬರು ಹಲ್ಲೆ ನಡೆಸಿರುವಂತ ವಿಷಯ ತಿಳಿದು ಬಂದಿದೆ.…
ಕೋಲಾರ: ಜಿಲ್ಲೆಯ ಕೋಚಿಮುಲ್ ಹಾಲು ಉತ್ಪಾದಕರಿಗೆ ಬಿಗ್ ಶಾಕ್ ಎನ್ನುವಂತೆ ಪ್ರತಿ ಲೀಟರ್ ಹಾಲಿನ ಮೇಲಿನ ದರವನ್ನು ರೂ.2 ಕಡಿತಗೊಳಿಸಿ ಆದೇಶಿಸಿದೆ. ಈ ಆದೇಶ ನಾಳೆಯಿಂದಲೇ ಜಾರಿಗೆ ಬರಲಿದೆ. ಈ ಕುರಿತಂತೆ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಆದೇಶ ಹೊರಡಿಸಿದ್ದು, ಹಾಲು ಉತ್ಪಾದಕರಿಗೆ ನೀಡುವಂತ ಪ್ರತಿ ಲೀಟರ್ ಹಾಲಿನ ಮೇಲಿನದ ದರವನ್ನು 2 ರೂಪಾಯಿ ಕಡಿತಗೊಳಿಸಿರುವುದಾಗಿ ತಿಳಿಸಿದೆ. ನಾಳೆಯಿಂದಲೇ ಈ ನೂತನ ದರದಂತೆ ಹಾಲು ಉತ್ಪಾದಕರಿಂದ ಹಾಲನ್ನು ಖರೀದಿ ಮಾಡಲಾಗುತ್ತದೆ. ನಾಳೆಯಿಂದ ಪ್ರತಿ ಲೀಟರ್ ಹಾಲಿಗೆ ಹಾಲು ಉತ್ಪಾದಕರಿಗೆ ರೂ.31.40 ನೀಡಲಾಗುತ್ತದೆ ಅಂತ ತಿಳಿಸಿದೆ. ಅಂದಹಾಗೇ ಈ ಮೊದಲು ಕೋಚಿಮುಲ್ ನಿಂದ ಹಾಲು ಉತ್ಪಾದಕರಿಂದ ಪ್ರತಿ ಲೀಟರ್ ಹಾಲನ್ನು ರೂ.33.40ರಂತೆ ಖರೀದಿ ಮಾಡಲಾಗುತ್ತಿತ್ತು. ಈಗ ದಿಢೀರ್ ರೂ.2 ಕಡಿತ ಮಾಡಿದ್ದು, ನಾಳೆಯಿಂದ 31.40 ರೂ ಪ್ರತಿ ಲೀಟರ್ ಹಾಲಿನ ದರವಾಗಿದೆ. ಜನವರಿಯಲ್ಲಿ ನಿತ್ಯ 9.65 ಲಕ್ಷ ಹಾಲು ಸಂಗ್ರಹವನ್ನು ಕೋಚಿಮುಲ್ ಮಾಡುತ್ತಿದೆ. ಆದ್ರೇ ಜೂನ್ ನಿಂದ ನಿತ್ಯ 12.37…
ಮಂಡ್ಯ: ನಾಳೆ, ನಾಡಿದ್ದು ಮಂಡ್ಯ ಜಿಲ್ಲೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಯವರು ಜನತಾ ದರ್ಶನ ಕಾರ್ಯಕ್ರಮವನ್ನು ನಡೆಸಲಿದ್ದಾರೆ. ಇಲ್ಲಿ ಸಾರ್ವಜನಿಕರ ಅಹವಾಲು, ದೂರುಗಳನ್ನು, ಕುಂದುಕೊರತೆಗಳನ್ನು ಆಲಿಸಿ, ಸಮಸ್ಯೆ ನಿವಾರಿಸೋ ನಿಟ್ಟಿನಲ್ಲಿ ಕ್ರಮವಹಿಸಲಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ನಮ್ಮ ಪೂಜ್ಯ ತಂದೆಯವರಾದ ಹೆಚ್.ಡಿ ದೇವೇಗೌಡ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದಾಗ ಜನತಾ ದರ್ಶನ ಆರಂಭಿಸಿ ಜಿಲ್ಲೆಗಳಿಗೇ ಸರಕಾರವನ್ನು ಕೊಂಡೊಯ್ದಿದ್ದು ಇತಿಹಾಸ. ಜನರ ಆಶೀರ್ವಾದ, ದೈವದ ಕೃಪೆಯಿಂದ 2006ರಲ್ಲಿ ನಾನು ಮೊದಲ ಬಾರಿಗೆ ಮುಖ್ಯಮಂತ್ರಿಯಾದಾಗ ಜನತಾ ದರ್ಶನ, ಗ್ರಾಮ ವಾಸ್ತವ್ಯದ ಮೂಲಕ ಸರಕಾರವನ್ನು ಗ್ರಾಮ ಗ್ರಾಮಕ್ಕೂ ತೆಗೆದುಕೊಂಡು ಹೋದೆ ಎಂದಿದ್ದಾರೆ. ಆ ನಂತರ ಅಧಿಕಾರ ಇರಲಿ, ಇಲ್ಲದಿರಲಿ.. ಎಲ್ಲಾ ಸಂದರ್ಭದಲ್ಲಿಯೂ ಜನತಾ ಪ್ರಭುಗಳ ದರ್ಶನವನ್ನು ನಾನು ತಪ್ಪಿಸಿಲ್ಲ. ಅದು ನನ್ನ ಪಾಲಿಗೆ ನಿತ್ಯ ಕಾಯಕ. ಈಗ ನಾಡಿನ ಜನರ ಹಾರೈಕೆ, ಮಂಡ್ಯ ಮಹಾಜನತೆಯ ಆಶೀರ್ವಾದ ಹಾಗೂ ಗೌರವಾನ್ವಿತ ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಪ್ರೀತಿ, ವಿಶ್ವಾಸದಿಂದ ಕೇಂದ್ರದಲ್ಲಿ ಭಾರೀ ಕೈಗಾರಿಕೆ…
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ 840 ಬಿ.ಎಸ್-6 ಡೀಸೆಲ್ ಬಸ್ಸುಗಳನ್ನು ಒಟ್ಟು ರೂ 363.82 ಕೋಟಿಗಳ ವೆಚ್ಚದಲ್ಲಿ ಖರೀದಿಸಲು ಇಂದು ನಡೆದ ರಾಜ್ಯ ಸಚಿವ ಸಂಪುಟದಲ್ಲಿ ಅನುಮೋದನೆ ದೊರಕಿದೆ. ಈ ಮೂಲಕ ಬೆಂಗಳೂರಿನ ಬಿಎಂಟಿಸಿ ಪ್ರಯಾಣಿಕರಿಗೆ ಹೊಸ ಬಸ್ಸುಗಳಲ್ಲಿ, ಹೆಚ್ಚು ಹೆಚ್ಚು ಬಸ್ ಸೇವೆ ದೊರೆಯುವಂತೆ ಆಗಲಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರವಹಿಸುತ್ತಿದೆ. ಒಟ್ಟು 6045 ಬಸ್ಸುಗಳನ್ನು ಆಚರಣೆ ಮಾಡುತ್ತಿದ್ದು ಪ್ರತಿದಿನ 40 ಲಕ್ಷ ಪ್ರಯಾಣೀಕರಿಗೆ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ. ನಗರ ಸಂಚಾರವು ಬಹಳ ದಟ್ಟಣೆಯಿಂದ ಕೂಡಿರುವುದರಿಂದ ಸಾರ್ವಜನಿಕರಿಗೆ ಸಾರಿಗೆಯು ವಿಶೇಷವಾಗಿ ಮಹಿಳಾ ಪ್ರಯಾಣಿಕರಿಗೆ ಸುರಕ್ಷಿತ ಸಾರಿಗೆ ವಿಧಾನವಾಗಿದ್ದು, ವಾಹನ ಬಲವನ್ನು ಹೆಚ್ಚುಸುವುದು ಅಗತ್ಯವಿರುತ್ತದೆ. ವಾಯು ಮಾಲಿನ್ಯವನ್ನು ತಡೆಗಟ್ಟಲು ಸಹಾಯವಾಗುತ್ತದೆ. ಹಳೆ ವಾಹನಗಳ ಬದಲಾವಣೆ ಕೂಡ ಅಗತ್ಯವಾಗಿದೆ. ಮೆ:ಅಶೋಕ್ ಲೆಲ್ಯಾಂಡ್ ನ ಒಟ್ಟು 840 ಬಸ್ಸುಗಳಿಗೆ ತಗಲುವ ವೆಚ್ಚ ರೂ. 336 ಕೋಟಿ ಯನ್ನು ಸರ್ಕಾರವು ಭರಿಸಲಿದೆ ಹಾಗೂ ರೂ.2 7.82 ಕೋಟಿಗಳನ್ನು ಬೆಂಗಳೂರು…
ಯಾವುದೇ ಕೈಯಲ್ಲಿರುವ ಬೆರಳುಗಳು ಒಂದೇ ರೀತಿ ಇಲ್ಲ, ಅದೇ ರೀತಿ ಜೀವನದಲ್ಲೂ ಏರುಪೇರು ಆಗುತ್ತಲೇ ಇರುತ್ತದೆ. ಒಂದು ವೇಳೆ ತಂತ್ರ ಶಕ್ತಿಯಿಂದ ತೊಂದರೆ ಅನುಭವಿಸುತ್ತಿದ್ದರೆ ಅಥವಾ ಹಣದ ಸಮಸ್ಯೆಯನ್ನು ಎದುರಿಸುತ್ತಿದ್ದರೆ ,ಶತ್ರುಗಳಿಂದ ನಿಮಗೆ ತೊಂದರೆಯಾಗುತ್ತಿದ್ದರೆ ,ಗಂಡ-ಹೆಂಡತಿ ನಡುವೆ ಯಾವುದಾದರೂ ವಿಚಾರಕ್ಕೆ ಯಾವಾಗಲೂ ಕಲಹ ಆಗುತ್ತಿದ್ದರೆ ನಾವು ಇಂದು ತಿಳಿಸಿಕೊಡುವ ಈ ಉಪಾಯವನ್ನು ಮಾಡಿದರೆ ಜೀವನವಿಡಿ ಸುಖ ಶಾಂತಿ ಹಾಗೂ ನೆಮ್ಮದಿಯಿಂದ ಜೀವನವನ್ನು ನಡೆಸಬಹುದು. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ,…
ಬೆಂಗಳೂರು: ಡೆಂಗಿ ನಿಯಂತ್ರಣ ಕ್ರಮಗಳ ಜೊತೆಗೆ ಝೀಕಾ ವೈರಸ್ ಬಗ್ಗೆಯೂ ಅಲರ್ಟ್ ಆಗಿರುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಸಿಇಒ ಅವರಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು ಡಿ.ಸಿ, ಸಿಇಒ ಹಾಗೂ ಸ್ಥಳೀಯ ಪಾಲಿಕೆಯ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಸಚಿವರು, ಡೆಂಗಿ ಹಾಟ್ ಸ್ಪಾಟ್ ಗಳನ್ನ ಪತ್ತೆ ಹಚ್ಚಿ ಮುಂಜಾಗೃತ ಕ್ರಮಗಳನ್ನ ಕೈಗೊಳ್ಳುವಂತೆ ಸೂಚಿಸಿದರು. ಎಲ್ಲಿ ಹೆಚ್ಚು ಡೆಂಗಿ ಪ್ರಕರಣಗಳು ಕಂಡುಬರುತ್ತವೆ, ಅಂತಹ ಸ್ಥಳಗಳಲ್ಲಿ ಫೀವರ್ ಕ್ಲಿನಿಕ್ ತೆರಯಲು ಸಲಹೆ ನೀಡಿದರು. ಇಂಥಹ ಪ್ರದೇಶಗಳಲ್ಲಿ ಯಾರಿಗೆ ಜ್ವರ ಕಂಡುಬಂದರು, ಕಡ್ಡಾಯವಾಗಿ ಡೆಂಗಿ ಟೆಸ್ಟಿಂಗ್ ಗೆ ಒಳಪಡಿಸಿ. ಆರಂಭದಲ್ಲೇ ಡೆಂಗಿ ಪತ್ತೆ ಆದರೆ ಚಿಕಿತ್ಸೆ ನೀಡಿ ಗುಣಪಡಿಸಬಹುದು. ವಿಳಂಭವಾದಾಗ ಸಾವುಗಳು ಸಂಭವಿಸುತ್ತವೆ. ಡೆಂಗಿಯಿಂದ ಇದರಿಂದ ಡೆಂಗಿಯಿಂದಾಗುವ ಸಾವುಗಳಾಗಬಾರದು. ಸಾವುಗಳಾಗದಂತೆ ಮುನ್ನೆಚ್ಚರಿಕೆ ವಹಿಸುವುದು ಆದ್ಯತೆಯಾಗಬೇಕು ಎಂದು ಅಧಿಕಾರಿಗಳಿಗೆ ಹೇಳಿದರು. ಜನರಿಗೆ ಜಾಗೃತಿ ಮೂಡಿಸಲು ಜಿಲ್ಲಾಡಳಿತ ಮುಂದಾಗಬೇಕು. ಮನೆ ಮನೆಗೆ ಆಶಾ ಕಾರ್ಯಕರ್ತರ ಭೇಟಿ ಮಾಡಬೇಕು.…
ಬೆಂಗಳೂರು: ರಾಜ್ಯದ ಲೋಕಾಯುಕ್ತದ ಉಪ ಲೋಕಾಯುಕ್ತರನ್ನಾಗಿ ನ್ಯಾಯಮೂರ್ತಿ ಬಿ.ವೀರಪ್ಪ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೇಮಕಾತಿ ಆದೇಶವನ್ನು ಪ್ರಕಟಿಸಿದ್ದು, ಅದರಲ್ಲಿ ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತರನ್ನಾಗಿ ನ್ಯಾಯಮೂರ್ತಿ ಬಿ.ವೀರಪ್ಪ ಅವರನ್ನು ನೇಮಕ ಮಾಡಿರುವುದಾಗಿ ತಿಳಿಸಿದ್ದಾರೆ. ಅಂದಹಾಗೇ ಕೋಲಾರದ ಶ್ರೀನಿವಾಸಪುರ ತಾಲೂಕಿನ ನಾಗದೇನಹಳ್ಳಿ ಗ್ರಾಮದ ವೀರಪ್ಪ ಅವರು ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾಗಿ ಅತಿ ಹೆಚ್ಚು ವ್ಯಾಜ್ಯಗಳನ್ನು ಇತ್ಯರ್ಥಪಡಿಸುವ ಮೂಲಕ ದಾಖಲೆ ಬರೆದಿದ್ದಾರೆ. ಅಲ್ಲದೇ ರಾಜ್ಯದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ಆದಾಯ ತಂದ ಸಂಚಾರ ನಿಯಮ ಉಲ್ಲಂಘನೆ ದಂಡದ ಮೇಲೆ ಶೇ.50ರಷ್ಟು ರಿಯಾಯಿತಿ ಘೋಷಿಸಿದ ರಾಜ್ಯ ಸರಕಾರ ಕ್ರಮದಲ್ಲಿ ವೀರಪ್ಪ ಅವರ ಪಾತ್ರ ಪ್ರಮುಖವಾಗಿತ್ತು. ಕರ್ನಾಟಕ ಹೈಕೋರ್ಟ್ನಲ್ಲಿ ಸೇವೆ ಸಲ್ಲಿಸಿರುವ ವೀರಪ್ಪ ಅವರು ಈ ಹಿಂದೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಕ್ಕೆ ಅಧಿಕಾರವನ್ನು ರದ್ದುಗೊಳಿಸಿ ಲೋಕಾಯುಕ್ತ ಸಂಸ್ಥೆಯ ಅಧಿಕಾರವನ್ನು ಪುನರ್ ಸ್ಥಾಪನೆ ಮಾಡಿದ್ದರು. ಈಗ ಇಂತಹ ಅವರನ್ನು ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತರನ್ನಾಗಿ ನ್ಯಾಯಮೂರ್ತಿ ಬಿ…
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ಎನ್ನುವಂತೆ ಇಂದು ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯು ಸರ್ಕಾರಿ ನೌಕರರಿಗೆ 2018ರಿಂದ 2020ರ ಅವಧಿಯವರೆಗೆ ಬಾಕಿ ಇದ್ದಂತ 2 ವರ್ಷಗಳ ಕೆಜಿಐಡಿ ಬೋನಸ್ ನೀಡಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಕೆ.ಜಿ.ಐ.ಡಿ ವಿಮಾ ಯೋಜನೆಯ ಕಡ್ಡಾಯ ವಿಮಾದಾರರಿಗೆ 2018-20 ದ್ವೈವಾರ್ಷಿಕ ಅವಧಿಗೆ ಅಧಿಲಾಭಾಂಶ (Bonus) ಘೋಷಣೆ ಮಾಡಲು ಪ್ರಸ್ತಾಪಿಸಲಾಗಿದ್ದು, ದಿನಾಂಕ: 01.04.2018 ರಿಂದ 31.03.2020ರ ದ್ವೈವಾರ್ಷಿಕ ಅವಧಿಯಲ್ಲಿ ಚಾಲ್ತಿಯಲ್ಲಿದ್ದ ಎಲ್ಲಾ ಪಾಲಿಸಿಗಳಿಗೆ ವಿಮಾ ಮೊತ್ತದ ಮೇಲೆ ಪ್ರತಿ ಸಾವಿರ ರೂಪಾಯಿಗಳಿಗೆ ಪ್ರತಿ ವರ್ಷಕ್ಕೆ ರೂ.80/- ರಂತೆ ಲಾಭಾಂಶ (ಬೋನಸ್) ಘೋಷಿಸಲು; ಮತ್ತು ಅವಧಿ ಪೂರ್ಣ, ಮರಣಜನ್ಯ ಹಾಗೂ ವಿಮಾ ತ್ಯಾಗ ಮೌಲ್ಯಗಳಿಂದ ದಿನಾಂಕ: 01.04.2020 ರಿಂದ 31.03.2022 ರ ಅವಧಿಯಲ್ಲಿ ಹೊರ ಹೋಗಿರುವ ವಿಮಾ ಪಾಲಿಸಿಗಳಿಗೆ ಪ್ರತಿ ಸಾವಿರ ರೂಪಾಯಿಗಳಿಗೆ ಪ್ರತಿ ವರ್ಷಕ್ಕೆ…
ಬೆಂಗಳೂರು : ಗ್ರಾಮೀಣಾಭಿವೃದ್ಧಿ ಇಲಾಖೆಯ ಗ್ರಾಮ ಪಂಚಾಯತಿ ಅಧಿಕಾರಿಗಳು ( PDO ) ಸೇರಿದಂತೆ ಹಲವು ನೌಕರರನ್ನು ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡಲು ಇಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ತ್ವರಿತ ಸೇವಾ ಪೂರೈಕೆ, ಭ್ರಷ್ಟಾಚಾರ ನಿಯಂತ್ರಣ ಮತ್ತು ದಕ್ಷತೆಯನ್ನು ಹೆಚ್ಚಿಸಲು ಪ್ರಸಕ್ತ ವರ್ಷದಿಂದ ವರ್ಗಾವಣೆಗಳಿಗೆ ಅನ್ವಯಿಸುವಂತೆ ಕೌನ್ಸಿಲಿಂಗ್ ಪದ್ಧತಿಯನ್ನು ಜಾರಿಗೊಳಿಸಲಾಗುವುದು ಎಂದು 2024-25 ಆಯವ್ಯಯದಲ್ಲಿ ಘೋಷಿಸಲಾಗಿತ್ತು ಎಂದು ತಿಳಿಸಿರುವ ಸಚಿವರು ಅದರಂತೆ, ಹಿರಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್-1 ಮತ್ತು ಗ್ರೇಡ್-2) ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಗಳನ್ನು ಈ ವರ್ಷದಿಂದ ಕೌನ್ಸಿಲಿಂಗ್ ಮೂಲಕ ಮಾಡಲಾಗುವುದು ಎಂದು ಹೇಳಿದ್ದಾರೆ. ಈ ಸಂಬಂಧ ನಿಯಮಗಳನ್ನು ರೂಪಿಸಿದ ನಂತರ ವರ್ಗಾವಣೆ ಪ್ರಕ್ರಿಯೆಯನ್ನು…