Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಸಾಗರದಲ್ಲಿ ಹುಟ್ಟಿ ಬೆಳೆದು ಅಮೇರಿಕಾದಲ್ಲಿ ವಾಸಿಯಾಗಿರುವಂತ ಅಪ್ಪಟ ಕನ್ನಡಿಗ ಡಾ.ಡಿಎಂ ಸಾಗರ್ ಅವರು ಕನ್ನಡದಲ್ಲಿ ಬರೆದಿರುವಂತ ವಿಲಕ್ಷಣ ಜಲಜಾಲ ಎನ್ನುವ ಪುಸ್ತಕವನ್ನು ನಾಳೆ ಬಿಡುಗಡೆಗೊಳಿಸಲಾಗುತ್ತಿದೆ. ಇಂದು ಸಾಗರದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಂತ ಅಶ್ವಿನಿ ಕುಮಾರ್ ಅವರು, ದೊಡ್ಡೇರಿ ಮಹಾಬಲಗಿರಿರಾವ್, ಡಾ.ಡಿಎಂ ಸಾಗರ್ ಮತ್ತು ರಜನಿ ದೊಡ್ಡೇರಿ ಕುಟುಂಬ, ಅಭಿನಯ ಸಾಗರ(ರಿ) ಹಾಗೂ ಜೋಷಿ ಫೌಂಡೇಷನ್ ಸಾಗರ ಇವರ ಸಂಯುಕ್ತ ಆಶ್ರಯದಲ್ಲಿ ನಾಳೆ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ ಎಂದರು. ದಿನಾಂಕ 21-11-2024ರ ನಾಳೆ ಸಂಜೆ 4 ಗಂಟೆಗೆ ಸಾಗರ ನಗರದ ಅಗ್ರಹಾರ ಬಳಿಯಲ್ಲಿ ಇರುವಂತ ಶೃಂಗೇರಿ ಶಂಕರಮಠದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಪುಸ್ತಕ ಬಿಡುಗಡೆಗೂ ಮುನ್ನ ಸುಭದ್ರಾ ಕಲ್ಯಾಣ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಆ ಬಳಿಕ ಸಂಜೆ 7 ಗಂಟೆಗೆ ಡಾ.ಡಿಎಂ ಸಾಗರ್ ಅವರು ಬರೆದಿರುವಂತ ವಿಲಕ್ಷಣ ಜಲಜಾಲ ಎನ್ನುವಂತ ನೀರಿನ ಕುರಿತು ವೈಜ್ಞಾನಿಕ ಕೌತುಕಗಳು ಇರುವಂತ ಪುಸ್ತಕ ಬಿಡುಗಡೆಯಾಗಲಿದೆ ಎಂದು ತಿಳಿಸಿದರು.…
ಬೆಳಗಾವಿ: ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ರದ್ದು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ಗೃಹಲಕ್ಷ್ಮೀ ಯೋಜನೆ ವಿಚಾರವಾಗಿ ನಾನು ಸ್ಪಷ್ಟವಾಗಿ ಪ್ರತಿಕ್ರಿಯೆ ನೀಡಿದ್ದೇನೆ. ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ಹೊಂದಿದವರಿಗೆ, ಯಾರು ತೆರಿಗೆ ಕಟ್ಟುವುದಿಲ್ಲ ಅಂತಹವರಿಗೆ ಗೃಹಲಕ್ಷ್ಮೀ ಹಣ ಸಂದಾಯ ಆಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟಪಡಿಸಿದರು. 80 ಸಾವಿರ ಬಿಪಿಎಲ್ ಕಾರ್ಡ್ ಗಳನ್ನ ರದ್ದತಿ ಮಾಡುವ ಬದಲಿಗೆ ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆ ಮಾಡಿರುವುದರಿಂದ ಯಾವುದೇ ಗೊಂದಲ ಇಲ್ಲ, ಎಪಿಎಲ್, ಬಿಪಿಎಲ್ ಇದ್ದವರಿಗೆ ಗೃಹಲಕ್ಷ್ಮೀ ಹಣ ಬಂದೇ ಬರುತ್ತೆ ಎಂದು ಸಚಿವರು ಹೇಳಿದರು. ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿರುವ (ಬೀಮ್ಸ್) ಅವ್ಯವಸ್ಥೆಗಳಿಗೆ ಸರ್ಜರಿ ಆಗಬೇಕಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ವೈದ್ಯರ ನಿರ್ಲಕ್ಷ್ಯ ದಿಂದ ಬಾಣಂತಿ ಸಾವನ್ನಪ್ಪಿರುವ ಕುರಿತು ಪ್ರತಿಕ್ರಿಯಿಸಿದ ಸಚಿವರು, ತಪ್ಪಿತಸ್ಥರ ಮೇಲೆ ಕಠಿಣ ಕ್ರಮವಾಗಬೇಕು. ಶಿಸ್ತು, ಆರೋಗ್ಯದ ದೃಷ್ಟಿಯಿಂದ ಆಸ್ಪತ್ರೆಯಲ್ಲಿ ಕೆಲವೊಂದು…
ಬೆಂಗಳೂರು: ರಾಜ್ಯದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಶಸ್ತ್ರ ಚಿಕಿತ್ಸೆಗೆ ಸಂಬಂಧಿಸಿದಂತೆ ತಜ್ಞ ವೈದ್ಯರಿಂದ ಸಲಹೆ ಪಡೆಯಲು ಸರ್ಕಾರದಿಂದ ಸಹಾಯವಾಣಿ ಸಂಖ್ಯೆಯನ್ನು ಆರಂಭಿಸಲಾಗಿದೆ. ರೋಗಿಗಳು ಕ್ಲಿಷ್ಟಕರ ಶಸ್ತ್ರಚಿಕಿತ್ಸೆಗೆ ಒಳಗಾಗುವ ಸಂದರ್ಭದಲ್ಲಿ ತಜ್ಞ ವೈದ್ಯರಿಂದ ಉಚಿತವಾಗಿ ಎರಡನೇ ಅಭಿಪ್ರಾಯ ಪಡೆಯಲು ಅನುಕೂಲವಾಗುವಂತೆ ದೇಶದಲ್ಲಿಯೇ ಮೊದಲ ಬಾರಿಗೆ ಸಹಾಯವಾಣಿ ಪ್ರಾರಂಭಿಸಲಾಗಿದೆ. 1800 4258 330 ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/1859212172100006334 ರೋಗಿಗಳಿಗೆ ಸೂಕ್ತ ಮಾರ್ಗದರ್ಶನ ಹಾಗೂ ಆತ್ಮವಿಶ್ವಾಸ ತುಂಬುವತ್ತ ನೂತನ ಕಾರ್ಯಕ್ರಮ ಜಾರಿಗೆ ತರಲಾಗಿದೆ. ಶಸ್ತ್ರಚಿಕಿತ್ಸೆಗಳ ಕುರಿತು ಉಚಿತವಾಗಿ ಎರಡನೇ ವೈದ್ಯಕೀಯ ಅಭಿಪ್ರಾಯ ಪಡೆಯಲು ವೇದಿಕೆಯನ್ನು ಆರೋಗ್ಯ ಇಲಾಖೆ ಕಲ್ಪಿಸಿದೆ. ಸರ್ಜರಿ ಅವಶ್ಯಕತೆ ಇದೆಯೋ, ಇಲ್ಲವೋ ಹಾಗೂ ಪರ್ಯಾಯ ಚಿಕಿತ್ಸಾ ವಿಧಾನಗಳು ಏನು? ಎಂಬುದರ ಬಗ್ಗೆ ತಜ್ಞ ವೈದ್ಯರಿಂದ ಸಲಹೆ ಸಿಗಲಿದೆ. ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಅನಾರೋಗ್ಯ ಪೀಡಿತರಾಗಿ ಶಸ್ತ್ರ ಚಿಕಿತ್ಸೆ ಬಗ್ಗೆ ಸೂಚಿಸಿದಾಗ, ಮತ್ತಷ್ಟು ಉಚಿತ ಸಲಹೆಗಾಗಿ 1800 4258 330…
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ವಿದ್ಯಮಾನಗಳು ಚುರುಕುಗೊಂಡಿವೆ. ಪಕ್ಷದ ನಾಯಕತ್ವದ ವಿರುದ್ಧ ಸಮರ ಸಾರಿರುವ ಭಿನ್ನಮತಿಯರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪಕ್ಷದ ನಿಷ್ಠಾವಂತ ನಾಯಕರು ಆಗ್ರಹಿಸಿದ್ದಾರೆ. ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ನಿವಾಸದಲ್ಲಿ ಸಭೆ ಸೇರಿದ 20ಕ್ಕೂ ಹೆಚ್ಚು ಹಿರಿಯ ಮುಖಂಡರು ರಾಜ್ಯ ಸರ್ಕಾರದ ಅಕ್ರಮಗಳ ವಿರುದ್ಧ ಪಕ್ಷದ ಅಧ್ಯಕ್ಷ ವಿಜಯೇಂದ್ರ ಮತ್ತು ಪ್ರತಿ ಪಕ್ಷ ನಾಯಕರ ನೇತೃತ್ವದಲ್ಲಿ ಹೋರಾಟ ನಡೆಯಬೇಕು ಎಂದು ಒತ್ತಾಯಿಸಿದ್ದಾರೆ. ವಕ್ಫ್ ಒತ್ತುವರಿ ತೆರವು ವಿರೋಧಿ ಹೋರಾಟದ ಹೆಸರಿನಲ್ಲಿ ಪಕ್ಷದ ಕೆಲವು ನಾಯಕರು ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿದ್ದಾರೆ ಇದು ಪಕ್ಷ ಸಂಘಟನೆ ಮತ್ತು ಕಾರ್ಯಕರ್ತರ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಈ ಹಿನ್ನೆಲೆಯಲ್ಲಿ ಹೈಕಮಾಂಡ್ ತಕ್ಷಣವೇ ಮಧ್ಯ ಪ್ರವೇಶಿಸಿ ಎಲ್ಲ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದ್ದಾರೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷರು ಮತ್ತು ಪ್ರತಿ ಪಕ್ಷ ನಾಯಕರನ್ನು ಹೈಕಮಾಂಡ್ ನೇಮಕ ಮಾಡಿದೆ ಈ ವಿಷಯವಾಗಿ ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ತಲೆಬಾಗಬೇಕು. ಆದರೆ ಕೆಲವರು ಈ…
ಮಡಿಕೇರಿ :-ಪ್ರಸಕ್ತ (2024-25) ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್ಡಿ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ,3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ನೀಡುವ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್, 05 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ: https://bcwd.karnataka.gov.in/ ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಪ್ರವರ್ಗ-2ಎ, 3ಎ, 3ಬಿ ರೂ. 8 ಲಕ್ಷ ಆಗಿರುತ್ತದೆ. ಹೆಚ್ಚಿನ ಮಾಹಿತಿಗೆ ಹಾಗೂ ಷರತ್ತು ನಿಬಂಧನೆಗೆ ಸಹಾಯವಾಣಿ ಸಂಖ್ಯೆ 8050770004 ನ್ನು ಸಂಪರ್ಕಿಸಿ ಕಚೇರಿ ವೇಳೆಯಲ್ಲಿ ಮಾಹಿತಿಯನ್ನು ಪಡೆಯಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪಿ.ಪಿ.ಕವಿತಾ ಅವರು ತಿಳಿಸಿದ್ದಾರೆ. https://kannadanewsnow.com/kannada/good-news-for-farmers-who-applied-for-bagar-hukum-cultivation-card-file-verification-begins/ https://kannadanewsnow.com/kannada/breaking-we-will-not-allow-india-to-become-hindu-rashtra-yathindra-siddaramaiah/
ನವದೆಹಲಿ: ಮಹಾರಾಷ್ಟ್ರ ವಿಧಾನಸಭ ಚುನಾವಣೆಗೆ ಮತದಾನ ಮುಕ್ತಾಯಗೊಂಡಿದೆ. ಈ ಬೆನ್ನಲ್ಲೇ ಮತದಾನೋತ್ತರ ಸಮೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಪಿ-ಮಾರ್ಕ್ ಸಮೀಕ್ಷೆಯಲ್ಲಿ ಮಹಾಯುತಿ ಮೈತ್ರಿಕೂಟ ಹೆಚ್ಚು ಸ್ಥಾನ ಗಳಿಸುವುದಾಗಿ ತಿಳಿದೆ. ಪಿ-ಮಾರ್ಕ್ ಚುನಾವಣೋತ್ತರ ಸಮೀಕ್ಷೆಯು ಮಹಾಯುತಿ ಮೈತ್ರಿಕೂಟಕ್ಕೆ ಪುನರಾಗಮನವಾಗಲಿದೆ ಎಂದು ಭವಿಷ್ಯ ನುಡಿದಿದೆ ಮಹಾಯುತಿ ಮೈತ್ರಿಕೂಟ – 137-157 ಸ್ಥಾನಗಳು ಎಂವಿಎ – 126-146 ಸ್ಥಾನಗಳು ಇತರರು – 2-8 ಸ್ಥಾನಗಳು ಸಮೀಕ್ಷೆಯ ಮೊದಲ ಭವಿಷ್ಯ ಇಲ್ಲಿದೆ. ಪಿ-ಮಾರ್ಕ್ ಭವಿಷ್ಯ ನುಡಿದಿದ್ದು, ಬಿಜೆಪಿ ನೇತೃತ್ವದ ಮಹಾಯುತಿ ಮಹಾರಾಷ್ಟ್ರದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ. ಆದಾಗ್ಯೂ, ಎಂವಿಎ 126 ರಿಂದ 146 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಸಮೀಕ್ಷಾ ವರದಿಯಲ್ಲಿ ತಿಳಿಸಲಾಗಿದೆ. ಎಬಿಪಿ-ಮ್ಯಾಟ್ರಿಜ್ ಮಹಾಯುತಿಗೆ ಸ್ಪಷ್ಟ ಮುನ್ನಡೆ ಮಹಾಯುತಿ – 150-170 ಸ್ಥಾನಗಳು ಎಂವಿಎ – 110-130 ಸ್ಥಾನಗಳು ಚುನಾವಣೋತ್ತರ ಸಮೀಕ್ಷೆಗಳನ್ನು ಯಾರು ನಡೆಸುತ್ತಿದ್ದಾರೆ? ಈಗಿನಂತೆ, ಈ ಪ್ರಾದೇಶಿಕ ಚಾನೆಲ್ ಗಳು ಮಹಾರಾಷ್ಟ್ರದ ಚುನಾವಣೋತ್ತರ ಸಮೀಕ್ಷೆಗಳನ್ನು ಬಿಡುಗಡೆ ಮಾಡುತ್ತವೆ. ಅವುಗಳೆಂದರೆ ಎನ್ಡಿಟಿವಿ ಮರಾಠಿ, ಎಬಿಪಿ ಮಜಾ, ಟಿವಿ 9…
ಮಡಿಕೇರಿ : ಮಡಿಕೇರಿ ತಾಲ್ಲೂಕು ವ್ಯಾಪ್ತಿಯ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಹೆಚ್ಚುವರಿ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆಯು ನೆರವಂಡ ಉಮೇಶ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಿತು. ಈ ಸಮಿತಿಗೆ ಒಟ್ಟು 17 ಕಡತಗಳನ್ನು ಮಂಡಿಸಿದ್ದು, ಈ ಪೈಕಿ 16 ಕಡತಗಳನ್ನು ಮಂಜೂರಾತಿಗೆ ಶಿಫಾರಸ್ಸು ಮಾಡಿ ಆಕ್ಷೇಪಣೆ ಅವಧಿಗೆ ಸಲ್ಲಿಸಲಾಯಿತು. ಸದಸ್ಯರಾದ ತುಳಸಿ ಗಾಂಧಿ ಪ್ರಸಾದ್, ಕೇಟೋಳಿ ಮೋಹನ್ ರಾಜ್, ಎಚ್.ಬಿ.ರಘು, ಸದಸ್ಯ ಕಾರ್ಯದರ್ಶಿಯಾದ ತಹಶೀಲ್ದಾರ್ ಪ್ರವೀಣ್ ಕುಮಾರ್ ಪಿ.ಸಿ., ಜಿಲ್ಲಾ ಭೂಮಿ ಸಮಾಲೋಚಕರು ಹಾಗೂ ಕಂದಾಯ ಅಧಿಕಾರಿಗಳು ಹಾಜರಿದ್ದರು. https://kannadanewsnow.com/kannada/independent-candidate-dies-of-heart-attack-at-polling-booth/ https://kannadanewsnow.com/kannada/in-a-big-relief-to-former-pakistan-pm-imran-khan-bail-granted-in-govt-gift-case/
ಪುಣೆ: ಮಹಾರಾಷ್ಟ್ರದ ಬೀಡ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸ್ವತಂತ್ರ ಅಭ್ಯರ್ಥಿ ಬಾಳಾಸಾಹೇಬ್ ಶಿಂಧೆ ಅವರು ಮತದಾನದ ದಿನದಂದು ಮತಗಟ್ಟೆಯಲ್ಲಿ ಹಠಾತ್ ಹೃದಯಾಘಾತದಿಂದ ನಿಧನರಾದರು. ಶಿಂಧೆ ಅವರನ್ನು ತಕ್ಷಣ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಸುಧಾರಿತ ಆರೈಕೆಗಾಗಿ ಮತ್ತೊಂದು ಸೌಲಭ್ಯಕ್ಕೆ ಸ್ಥಳಾಂತರಿಸಲಾಯಿತು. ಆದರೆ, ಅವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು. ಜಾರ್ಖಂಡ್ನಲ್ಲಿ ನಡೆದ ಚುನಾವಣೆಯಲ್ಲಿ ಹೆಚ್ಚಿನ ಮತದಾನವಾಗಿದೆ ಎಂದು ಚುನಾವಣಾ ಆಯೋಗ (ಇಸಿಐ) ದಾಖಲಿಸಿದೆ. ಸಂಜೆ 5 ಗಂಟೆ ವೇಳೆಗೆ ಜಾರ್ಖಂಡ್ನಲ್ಲಿ ಶೇ.67.59ರಷ್ಟು ಮತದಾನವಾಗಿದೆ. https://kannadanewsnow.com/kannada/maharashtra-jharkhand-assembly-elections-heres-the-details-of-polling-till-5-pm/ https://kannadanewsnow.com/kannada/in-a-big-relief-to-former-pakistan-pm-imran-khan-bail-granted-in-govt-gift-case/
ನವದೆಹಲಿ: ಸಂಜೆ 5 ಗಂಟೆಯವರೆಗೆ, ಜಾರ್ಖಂಡ್ (ಹಂತ -2) ಮತ್ತು ಮಹಾರಾಷ್ಟ್ರದಲ್ಲಿ ಕ್ರಮವಾಗಿ 67.59% ಮತ್ತು 58.22% ಮತದಾನವಾಗಿದೆ ಎಂದು ಭಾರತದ ಚುನಾವಣಾ ಆಯೋಗ ತಿಳಿಸಿದೆ. ಮುಂಬೈ ನಗರದಲ್ಲಿ ಶೇ.49.07ರಷ್ಟು ಮತದಾನವಾಗಿದ್ದರೆ, ಮುಂಬೈ ಉಪನಗರದಲ್ಲಿ ಶೇ.51.76ರಷ್ಟು ಮತದಾನವಾಗಿದೆ. ನಟ ಶಾರುಖ್ ಖಾನ್ ಪತ್ನಿ ಗೌರಿ ಖಾನ್, ಮಗಳು ಸುಹಾನಾ ಖಾನ್ ಮತ್ತು ಮಗ ಆರ್ಯನ್ ಖಾನ್ ಅವರೊಂದಿಗೆ ಮತ ಚಲಾಯಿಸಿದರು. ನಟಿ ಶ್ರದ್ಧಾ ಕಪೂರ್ ತನ್ನ ತಾಯಿ ಶಿವಾಂಗಿ ಕೊಲ್ಹಾಪುರೆ, ಚಿಕ್ಕಮ್ಮ ಮತ್ತು ನಟಿ ಪದ್ಮಿನಿ ಕೊಲ್ಹಾಪುರೆ ಮತ್ತು ಸಹೋದರ ಸಿದ್ಧಾಂತ್ ಕಪೂರ್ ಅವರೊಂದಿಗೆ ಮುಂಬೈನಲ್ಲಿ ಮತ ಚಲಾಯಿಸಿದರು. ಗಾಯಕ ಉದಿತ್ ನಾರಾಯಣ್ ಕೂಡ ಮತ ಚಲಾಯಿಸಿದರು. https://kannadanewsnow.com/kannada/good-news-for-people-suffering-from-high-blood-pressure-aiims-doctors-develop-new-drug/ https://kannadanewsnow.com/kannada/in-a-big-relief-to-former-pakistan-pm-imran-khan-bail-granted-in-govt-gift-case/
ಇಸ್ಲಾಮಾಬಾದ್: ಸರ್ಕಾರಿ ಉಡುಗೊರೆಗಳನ್ನು ಅಕ್ರಮವಾಗಿ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಪಾಕಿಸ್ತಾನದ ನ್ಯಾಯಾಲಯವು ಜಾಮೀನು ನೀಡಿದೆ ಎಂದು ಅವರ ಪಕ್ಷ ಬುಧವಾರ ತಿಳಿಸಿದೆ. 71 ವರ್ಷದ ಖಾನ್ ಕಳೆದ ವರ್ಷ ಆಗಸ್ಟ್ನಿಂದ ಜೈಲಿನಲ್ಲಿದ್ದಾರೆ, ಆದರೆ ರಾಜ್ಯದ ವಿರುದ್ಧ ಹಿಂಸಾಚಾರವನ್ನು ಪ್ರಚೋದಿಸುವುದು ಸೇರಿದಂತೆ ಹಲವಾರು ಇತರ ಪ್ರಕರಣಗಳನ್ನು ಎದುರಿಸುತ್ತಿರುವ ಕಾರಣ ತೊಂದರೆಗೀಡಾದ ರಾಜಕಾರಣಿಯನ್ನು ಬಿಡುಗಡೆ ಮಾಡಲಾಗುತ್ತದೆಯೇ ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ. “ಇಂದು ಅಧಿಕೃತ ಆದೇಶ ಬಂದರೆ, ಅವರ ಕುಟುಂಬ ಮತ್ತು ಬೆಂಬಲಿಗರು ಅವರ ಬಿಡುಗಡೆಗಾಗಿ ಅಧಿಕಾರಿಗಳನ್ನು ಸಂಪರ್ಕಿಸುತ್ತಾರೆ” ಎಂದು ಅವರ ಪಕ್ಷದ ವಕೀಲರಲ್ಲಿ ಒಬ್ಬರಾದ ಸಲ್ಮಾನ್ ಸಫ್ದರ್ ಸುದ್ದಿಗಾರರಿಗೆ ತಿಳಿಸಿದರು. ಜಿಯೋ ನ್ಯೂಸ್ ಜೊತೆ ಮಾತನಾಡಿದ ಖೈಬರ್ ಪಖ್ತುನ್ಖ್ವಾ ಸರ್ಕಾರದ ವಕ್ತಾರ ಬ್ಯಾರಿಸ್ಟರ್ ಮುಹಮ್ಮದ್ ಅಲಿ ಸೈಫ್, ತೋಶಾಖನಾ 2.0 ಪ್ರಕರಣದಲ್ಲಿ ಹೈಕೋರ್ಟ್ ತೀರ್ಪನ್ನು ಸ್ವಾಗತಿಸಿದರು. ಇಸ್ಲಾಮಾಬಾದ್ ಹೈಕೋರ್ಟ್ ಬುಧವಾರ ಅವರಿಗೆ ಜಾಮೀನು ನೀಡಿದ ಪ್ರಕರಣವನ್ನು ತೋಶಾಖಾನಾ ಅಥವಾ ರಾಜ್ಯ ಖಜಾನೆ ಪ್ರಕರಣ ಎಂದು…













