Subscribe to Updates
Get the latest creative news from FooBar about art, design and business.
Author: kannadanewsnow09
ದಾವಣಗೆರೆ : ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಪ್ರಾದೇಶಿಕ ತರಬೇತಿ ಕೇಂದ್ರಗಳ ಸಹಯೋಗದಿಂದ 60 ದಿನಗಳ ಕಾಲ ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದವರಿಗೆ ಹಾಗೂ ಅರಣ್ಯ ಆಧಾರಿತ ಆದಿವಾಸಿ ಸಮುದಾಯದ ವಿದ್ಯಾವಂತ ಯುವಕ ಹಾಗೂ ಯುವತಿಯರಿಗೆ ಸ್ವಾವಲಂಭಿ ಬದುಕು ಸಾಗಿಸಲು ವಿವಿಧ ಕೌಶಲ್ಯಭಿವೃದ್ಧಿ ತರಬೇತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯ ಹಾಗೂ ಅರಣ್ಯ ಆಧಾರಿತ ಆದಿವಾಸಿ ಸಮುದಾಯದ ವಿದ್ಯಾವಂತ ಯುವಕ ಹಾಗೂ ಯುವತಿಯರು ಜಂಟಿ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ದಾವಣಗೆರೆ, ಜಿಲ್ಲಾಡಳಿತ ಭವನ, ಕರೂರು ಇಂಡಸ್ಟ್ರೀಯಲ್ ಏರಿಯಾ, ದಾವಣಗೆರೆ ಅಥವಾ ಸಂಬಂಧಪಟ್ಟ ತಾಲ್ಲೂಕು ಸಹಾಯಕ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ನಾಗರಾಜ ತಿಳಿಸಿದ್ದಾರೆ. https://kannadanewsnow.com/kannada/note-jee-exam-on-may-26/ https://kannadanewsnow.com/kannada/army-doesnt-want-agniveer-we-will-throw-it-in-dustbin-rahul-gandhi/
ಬಳ್ಳಾರಿ : ಜಿಲ್ಲೆಯಲ್ಲಿ ಮೇ 26 ರಂದು ನಗರದ 02 ಕೇಂದ್ರಗಳಲ್ಲಿ ಜೆಇಇ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತ 200 ಮೀಟರ್ ಒಳಗಿನ ಆವರಣವನ್ನು ಸಿಆರ್ಪಿಸಿ ಕಲಂ 144ರ ಮೇರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ. ನಗರದ ಬಿಐಟಿಎಂ ಕಾಲೇಜು ಮತ್ತು ಕಿಷ್ಕಿಂದ ವಿಶ್ವವಿದ್ಯಾಲಯ ಕೇಂದ್ರಗಳಲ್ಲಿ ಜೆಇಇ ಪರೀಕ್ಷೆಗಳು ಬೆಳಿಗ್ಗೆ 09 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಹಾಗೂ ಮಧ್ಯಾಹ್ನ 02.30 ರಿಂದ ಸಂಜೆ 05.30 ರವರೆಗೆ ನಡೆಯಲಿವೆ. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಒಳಗಿನ ಆವರಣವನ್ನು ನಿಬರ್ಂಧಿತ ಪ್ರದೇಶವೆಂದು ಘೋಷಿಸಿದ್ದಾರೆ. ಅನಧೀಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶವನ್ನು ನಿಷೇಧಿಸಿದೆ ಹಾಗೂ ಬೆಳಿಗ್ಗೆ 08 ರಿಂದ ಸಂಜೆ 06 ರ ವರೆಗೆ ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತಲಿನ ಝೆರಾಕ್ಸ್ ಅಂಗಡಿಗಳನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಆದೇಶದಲ್ಲಿ ತಿಳಿಸಿದ್ದಾರೆ. https://kannadanewsnow.com/kannada/have-you-passed-ssp-apply-for-this-gardening-training/ https://kannadanewsnow.com/kannada/army-doesnt-want-agniveer-we-will-throw-it-in-dustbin-rahul-gandhi/
ಬೆಂಗಳೂರು: ತೋಟಗಾರಿಕೆ ಇಲಾಖೆ ವತಿಯಿಂದ 2024-25ನೇ ಸಾಲಿಗೆ 09 ತಿಂಗಳ ತೋಟಗಾರಿಕೆ ತರಬೇತಿಗಾಗಿ ಜಿಲ್ಲೆಯ ರೈತ ಮಕ್ಕಳ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆ ತಿಳಿಸಿದೆ. ಆಯಾ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 2024ರ ಜುಲೈ ರಿಂದ 2025 ರ ಮಾರ್ಚ್ 31 ರ ವರೆಗೆ ಒಟ್ಟು 09 ತಿಂಗಳ ತರಬೇತಿಯನ್ನು ನೀಡಲಾಗುತ್ತದೆ. ವಯೋಮಿತಿ ಅಭ್ಯರ್ಥಿಗಳ ವಯೋಮಿತಿಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 18 ವರ್ಷದಿಂದ 33 ವರ್ಷದೊಳಗೆ ಇರಬೇಕು. ಇತರರಿಗೆ 18 ವರ್ಷದಿಂದ 30 ವರ್ಷದೊಳಗೆ ಹಾಗೂ ಮಾಜಿ ಸೈನಿಕರಿಗೆ 33 ರಿಂದ 65 ವರ್ಷದೊಳಗಿರಬೇಕು. ಅಭ್ಯರ್ಥಿಗಳು ಕನಿಷ್ಠ ಕನ್ನಡ ವಿಷಯಗಳೊಂದಿಗೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ತರಬೇತಿ ಹೊಂದಲು ಬಯಸುವ ಅಭ್ಯರ್ಥಿಯ ತಂದೆ-ತಾಯಿ, ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ ಸ್ವಂತ ಸಾಗುವಳಿ ಮಾಡುತ್ತಿರಬೇಕು. ಅರ್ಜಿಗಳನ್ನು ಮೇ 23 ರಿಂದ ಜೂನ್ 03 ರ ವರೆಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಬಳ್ಳಾರಿ, ಕಚೇರಿಯಲ್ಲಿ ಪಡೆಯಬಹುದು…
ಬಳ್ಳಾರಿ : ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯು ಪ್ರಸಕ್ತ ಸಾಲಿನ ಪ್ರಥಮ ವರ್ಷದ ಡಿ.ಇಎಲ್.ಇಡಿ ಕೋರ್ಸ್ನ ದಾಖಲಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಡಯಟ್ನ ಪ್ರಾಂಶುಪಾಲರು ಹಾಗೂ ನಿರ್ದೇಶಕರು ತಿಳಿಸಿದ್ದಾರೆ. ಅಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಿಂದ ಅಥವಾ ವೆಬ್ಸೈಟ್ www.schooleducation.kar.nic.in ನಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಜೂನ್ 05 ರೊಳಗಾಗಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ www.schooleducation.kar.nic.in ವೆಬ್ಸೈಟ್ ಅಥವಾ ಸಂಸ್ಥೆಯ ಮೊ.9964891659, 9449380535 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/jds-files-complaint-against-rahul-gandhi-for-mass-rape-of-400-women-by-prajwal-revanna/ https://kannadanewsnow.com/kannada/army-doesnt-want-agniveer-we-will-throw-it-in-dustbin-rahul-gandhi/
ದಕ್ಷಿಣ ಕನ್ನಡ: ನಾನು ಪೊಲೀಸರಿಗೆ ಬೈದಿದ್ದು ಯಾವುದೇ ಕಾರ್ಯಕರ್ತರಿಗಾಗಿ, ಅಧಿಕಾರಕ್ಕಾಗಿ ಅಲ್ಲವೇ ಅಲ್ಲ. ಪ್ರಕರಣದಲ್ಲಿ ಇಲ್ಲದೇ ಇದ್ದಂತ ಓರ್ವನನ್ನು ಬಂಧಿಸಿ, ಠಾಣೆಗೆ ಕರೆತಂದಿದ್ದಕ್ಕಾಗಿ ಅಂತ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ಸ್ಪಷ್ಟ ಪಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಾರ್ಡಡಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಅಧಿಕಾರಕ್ಕಾಗಿ ಸಿಎಂ ಸಿದ್ಧರಾಮಯ್ಯ ಈ ಹಿಂದೆ ಶಂಕರ್ ಬಿದರಿ ಕಾಲರ್ ಹಿಡಿದಿರಲಿಲ್ವ? ನಾನು ಪೊಲೀಸರಿಗೆ ಬೈದಿದ್ದು ಕಾರ್ಯಕರ್ತರಿಗಾಗಿ, ಅಧಿಕಾರಕ್ಕಾಗಿ ಅಲ್ಲವೇ ಅಲ್ಲ ಅಂದರು. ಕಾಂಗ್ರೆಸ್ ಪಕ್ಷಕ್ಕೆ ನೈತಿಕತೆ ಇಲ್ಲ. ಪೊಲೀಸರ ಮೇಲೆ ಹೆಚ್ಚು ದೌರ್ಜನ್ಯ ಮಾಡಿದ್ದು ಕಾಂಗ್ರೆಸ್ ನಾಯಕರೇ ಆಗಿದ್ದಾರೆ. ಅಂತವರು ಬಿಜೆಪಿ ನಾಯಕರಿಗೆ ಬುದ್ಧಿ ಹೇಳೋ ಅವಶ್ಯಕತೆಯಿಲ್ಲ ಅಂತ ಕಿಡಿಕಾರಿದರು. ನಾನು ಬೆಳ್ತಂಗಡಿ ಠಾಣೆಗೆ ಪ್ರಕರಣದಲ್ಲಿ ಇಲ್ಲದೇ ಇದ್ದಂತ ಒಬ್ಬನನ್ನು ಕರೆತಂದಿದ್ದರು. ಇದನ್ನು ನಾನು ಮುಲಾಜಿಲ್ಲದೇ ಖಂಡಿಸಿದ್ದೇನೆ. ನಾನು ಯಾವುದೇ ಕಾರ್ಯಕರ್ತ, ಅಧಿಕಾರಕ್ಕಾಗಿ ಬೈದಿದ್ದಲ್ಲ. ಪ್ರಜ್ವಲ್ ರೇವಣ್ಣ ಕೇಸ್ ಆದಾಗ ಕಾಂಗ್ರೆಸ್ ಪ್ರತಿಭಟನೆ ಮಾಡಲಿಲ್ಲವೇ? ಆಗ ಯಾವ ನ್ಯಾಯ, ಕಾನೂನು…
ಪುಣೆ: ಮೇ 19 ರಂದು ಇಬ್ಬರು ಐಟಿ ವೃತ್ತಿಪರರ ಸಾವಿಗೆ ಕಾರಣವಾದ ಕಾರು ಅಪಘಾತದಲ್ಲಿ ಭಾಗಿಯಾಗಿದ್ದ 17 ವರ್ಷದ ಬಾಲಕನಿಗೆ ನೀಡಲಾದ ಜಾಮೀನನ್ನು ಪುಣೆಯ ಬಾಲಾಪರಾಧಿ ನ್ಯಾಯಾಲಯ ಬುಧವಾರ ರದ್ದುಗೊಳಿಸಿದೆ ಎಂದು ಪಿಟಿಐ ವರದಿ ಮಾಡಿದೆ. ನ್ಯಾಯಾಲಯವು ಅವರನ್ನು ಜೂನ್ ೫ ರವರೆಗೆ ವೀಕ್ಷಣಾ ಗೃಹಕ್ಕೆ ರಿಮಾಂಡ್ ಮಾಡಿದೆ. ಮದ್ಯದ ಅಮಲಿನಲ್ಲಿ ಅಪ್ರಾಪ್ತ ಬಾಲಕನೊಬ್ಬ ಚಲಾಯಿಸುತ್ತಿದ್ದ ಐಷಾರಾಮಿ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಐಟಿ ಉದ್ಯೋಗಿಗಳಾದ ಅನೀಶ್ ಅವಧಿ ಮತ್ತು ಅಶ್ವಿನಿ ಕೋಸ್ಟಾ ಭಾನುವಾರ ಸಾವನ್ನಪ್ಪಿದ್ದಾರೆ. ಮೃತರಿಬ್ಬರೂ 24 ವರ್ಷದವರಾಗಿದ್ದು, ಸ್ನೇಹಿತರ ಗುಂಪಿನೊಂದಿಗೆ ಊಟ ಮುಗಿಸಿಕೊಂಡು ಹಿಂದಿರುಗುತ್ತಿದ್ದಾಗ ವೇಗವಾಗಿ ಬಂದ ಪೋರ್ಷೆ ಕಾರು ಡಿಕ್ಕಿ ಹೊಡೆದಿದೆ. ಪ್ರಸಿದ್ಧ ರಿಯಲ್ ಎಸ್ಟೇಟ್ ಡೆವಲಪರ್ನ ಮಗನಾದ ಅಪ್ರಾಪ್ತನಿಗೆ ಘಟನೆ ನಡೆದ ಕೆಲವೇ ಗಂಟೆಗಳ ನಂತರ ಯೆರವಾಡಾ ಸಂಚಾರ ಪೊಲೀಸರೊಂದಿಗೆ 15 ದಿನಗಳ ಕಾಲ ಕೆಲಸ ಮಾಡುತ್ತೇನೆ ಮತ್ತು ರಸ್ತೆ ಅಪಘಾತಗಳ ಬಗ್ಗೆ ಪ್ರಬಂಧ ಬರೆಯುತ್ತೇನೆ ಎಂಬ ಷರತ್ತಿನ ಮೇಲೆ ಜಾಮೀನು…
ಪ್ರತಿಯೊಬ್ಬ ಮನುಷ್ಯನಿಗೂ ಜೀವನದಲ್ಲಿ ಒಂದಲ್ಲಾ ಒಂದು ಕಷ್ಟಗಳು ಬಂದೇ ಬರುತ್ತದೆ, ಅದರಲ್ಲೂ ದರಿದ್ರತನ ಅಥವಾ ದರಿದ್ರ ಬಾಧೆ ಎಂಬುದು ಬಂದರೆ ಮನೆಯಲ್ಲಿ ನೆಮ್ಮದಿ ಇರುವುದಿಲ್ಲ , ಹಣಕಾಸಿನ ವಿಷಯದಲ್ಲಿ ತೊಂದರೆ ಇರುತ್ತದೆ, ಎಷ್ಟೇ ಸಂಪತ್ತು ದುಡಿದರೂ ಕೈಯಲ್ಲಿ ಹಣವು ನಿಲ್ಲುವುದಿಲ್ಲ,ಮಾನಸಿಕ ಗೊಂದಲ,ನಿದ್ದೆ ಬಾರದೆ ಇರುವುದು, ಭಯದ ವಾತವರಣ ನಿರ್ಮಾಣ ಆಗುತ್ತಿದೆ ಎಂದರೆ ಇವೆಲ್ಲವನ್ನು ದರಿದ್ರ ಬಾಧೆ ಎಂದು ಹೇಳಲಾಗುತ್ತದೆ. ಹಾಗಾದರೆ ದರಿದ್ರತನ ದೂರವಾಗಿ ಚಕ್ರವರ್ತಿಯ ರೀತಿ ರಾಜ ಯೋಗದಿಂದ ಜೀವನವನ್ನು ನಡೆಸಬೇಕೆಂದರೆ ಏನು ಮಾಡಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಈ ಪರಿಹಾರವನ್ನು ಶನಿವಾರದ ದಿನ ಮಾಡಬೇಕು. ಮೊದಲಿಗೆ ಶನಿವಾರದ ದಿನ ಕರ್ಪೂರದ 5 ಬಿಲ್ಲೆಗಳನ್ನು ತೆಗೆದುಕೊಳ್ಳಬೇಕು. ಶನಿವಾರದ ದಿನ ರಾತ್ರಿ ಎಲ್ಲಾ ಕೆಲಸವನ್ನು ಮುಗಿಸಿಕೊಂಡು ಇನ್ನೇನು ಮಲಗುತ್ತೀರಿ ಎಂದಾಗ ಕರ್ಪೂರದ ಬಿಲ್ಲೆಗಳನ್ನು ತೆಗೆದುಕೊಂಡು ನಿಮಗಿರುವ ಕಷ್ಟಗಳು, ಸಂಕಷ್ಟಗಳು,ದರಿದ್ರ ಬಾದೆ ಎಲ್ಲವೂ ದೂರವಾಗಲಿ ಎಂದು ಸಂಕಲ್ಪವನ್ನು ಮಾಡಿಕೊಳ್ಳಬೇಕು. ಈ ರೀತಿ ಸಂಕಲ್ಪವನ್ನು ಮಾಡಿದ ನಂತರ ಯಾವುದಾದರೂ ಬಟ್ಟೆಯಲ್ಲಿ ಕರ್ಪೂರದ ಬಿಲ್ಲೆಗಳನ್ನು…
ಮಂಡ್ಯ: ಜಿಲ್ಲೆಯಲ್ಲಿ ಇಂದು ಪ್ರವಾಸಿಗರ ಮೇಲೆ ಹೆಜ್ಜೇನು ದಾಳಿ ನಡೆದಿರುವಂತ ಘಟನೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಈ ಹೆಜ್ಜೇನು ದಾಳಿಯಲ್ಲಿ ಮೂವರು ಪ್ರವಾಸಿಗರು ಗಾಯಗೊಂಡಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಗಂಜಾಮ್ ಬಳಿಯ ಪ್ರವಾಸಿ ಸ್ಥಾನ ಕಾವೇರಿ ಸಂಗಮದಲ್ಲಿ ಪ್ರವಾಸಿಗರ ಮೇಲೆ ಹೆಜ್ಜೇನು ದಾಳಿ ನಡೆದಿದೆ. 15ಕ್ಕೂ ಹೆಚ್ಚು ಜನರ ಮೇಲೆ ಹೆಜ್ಜೇನು ದಾಳಿ ನಡೆಸಿರೋದಾಗಿ ತಿಳಿದು ಬಂದಿದೆ. ಹೆಜ್ಜೇನು ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿರುವಂತ ಮೂವರನ್ನು ಮೈಸೂರಿನ ಆಸ್ಪತ್ರೆಗೆ ರವಾನಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನುಳಿದ ಗಾಯಾಳುಗಳನ್ನು ಶ್ರೀರಂಗಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ಗಿರೀಶ್ ರಾಜ್, ಮಂಡ್ಯ https://kannadanewsnow.com/kannada/govt-didnt-put-up-a-proper-argument-on-cauvery-water-sharing-issue-r-ashoka/ https://kannadanewsnow.com/kannada/jds-files-complaint-against-rahul-gandhi-for-mass-rape-of-400-women-by-prajwal-revanna/
ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಸರಿಯಾದ ವಾದ ಮಂಡಿಸದೆ ರೈತರಿಗೆ ಅನ್ಯಾಯ ಮಾಡಿದೆ. ರಾಜ್ಯದಿಂದ ಹಣ ಲೂಟಿ ಮಾಡಿ ದೆಹಲಿಗೆ ಕಳುಹಿಸುವುದರಲ್ಲೇ ಕಾಂಗ್ರೆಸ್ ನಾಯಕರು ನಿರತರಾಗಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಹರಿಹಾಯ್ದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಸರ್ಕಾರ ಪದೇ ಪದೆ ಎಡವುತ್ತಿದೆ. ಕಾವೇರಿ ಟ್ರಿಬ್ಯೂನಲ್ ಮತ್ತೆ ಎರಡೂವರೆ ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡಲು ಆದೇಶಿಸಿದೆ. ಆದರೆ ಕಾಂಗ್ರೆಸ್ ಸರ್ಕಾರ ದುಡ್ಡು ಹೊಡೆಯಲು ಗಮನ ಕೊಡುತ್ತಿದೆಯೇ ಹೊರತು ನೀರುಳಿಸಲು ಗಮನ ನೀಡುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ್ಯಾಯಾಧಿಕರಣದಲ್ಲಿ ಸರಿಯಾದ ವಾದ ಮಾಡಲು ವ್ಯವಸ್ಥೆ ಮಾಡುತ್ತಿಲ್ಲ. ಕಾವೇರಿ ನೀರಿನ ಬಗ್ಗೆ ಹಾಗೂ ರೈತರ ಬಗ್ಗೆ ಈ ಸರ್ಕಾರ ನಿರ್ಲಕ್ಷ್ಯ ತಾಳಿದೆ. ರೈತರು ಹೋರಾಟ ಮಾಡುತ್ತಿದ್ದರೂ, ಕಾಂಗ್ರೆಸ್ ನಾಯಕರು ದೆಹಲಿಗೆ ಎಷ್ಟು ಹಣ ಎಟಿಎಂನಲ್ಲಿ ಕಳುಹಿಸಬೇಕೆಂದು ಯೋಚನೆ ಮಾಡುತ್ತಿದ್ದಾರೆ. ಕಾವೇರಿ ನದಿ ಪ್ರದೇಶದ ಜನರು ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ. ಸರ್ಕಾರ…
ಬೆಂಗಳೂರು: ಹಾವೇರಿ ಜಿಲ್ಲೆಗೆ ಅಗತ್ಯವಿರುವ ಡಿಎಪಿ, ಯುರಿಯಾ ಹಾಗೂ ಕಾಂಪ್ಲೆಕ್ಸ್ ಗೊಬ್ಬರವನ್ನು ಕೂಡಲೇ ಸರಬರಾಜು ಮಾಡುವಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೃಷಿ ಸಚಿವ ಚಲುವರಾಯಸ್ವಾಮಿಗೆ ಆಗ್ರಹಿಸಿದ್ದಾರೆ. ಕೃಷಿ ಸಚಿವ ಚಲುವರಾಯಸ್ವಾಮಿ ಅವರಿಗೆ ಪತ್ರ ಬರೆದಿರುವ ಅವರು, ತಮಗೆ ಈಗಾಗಲೇ ಮಾಹಿತಿಯಿರುವಂತೆ ಕಳೆದ ಒಂದು ವರ್ಷ ನಮ್ಮ ರೈತರು ಬರಗಾಲದಿಂದ ತತ್ತರಿಸಿ ಹೋಗಿದ್ದಾರೆ. ಕಳೆದ ವರ್ಷ ಅವರು ಬಿತ್ತನೆ ಬೀಜ, ಗೊಬ್ಬರ ಹಾಗೂ ಇತರೆ ಕೃಷಿ ಚಟುವಟಿಕೆಗಳಿಗೆ ವೆಚ್ಚವನ್ನು ಮಾಡಿ ಆರ್ಥಿಕವಾಗಿ ತೀವ್ರ ಸಂಕಷ್ಟದಲ್ಲಿದ್ದಾರೆ. ಹಾಗೂ ಸಾಲದ ಹೊರೆ ರೈತರ ಮೇಲೆ ಹೆಚ್ಚಾಗಿ ಇದ್ದು, ಕೆಲವರಂತೂ ಆತ್ಮಹತ್ಯೆಗೆ ಶರಣಾಗಿರುತ್ತಾರೆ. ತಾವು ರೈತರಿಗೆ ಪರಿಹಾರ ಕೊಟ್ಟಿರುವುದು ಅತ್ಯಲ್ಪ ಹಾಗೂ ತಡವಾಗಿದೆ ಮತ್ತು ತಮ್ಮ ಇಲಾಖೆ ತಿಳಿಸಿದಂತೆ ಆಹಾರ ಧಾನ್ಯ ಉತ್ಪಾದನೆಯಲ್ಲಿ ಶೇಖಡ 50% ಕಡಿಮೆಯಾಗಿದೆ. ಮೇಲೆ ಕಾಣಿಸಿದ ಎಲ್ಲಾ ಕಾರಣಗಳು ಮತ್ತು ಇತ್ತೀಚಿಗೆ ಬೀಳುತ್ತಿರುವ ಮುಂಗಾರು ಮಳೆಯಿಂದ ರೈತರು ಉತ್ಸುಕರಾಗಿ ಬಿತ್ತನೆ ಮಾಡಲು ಸಿದ್ದರಾಗಿದ್ದು, ಅದಕ್ಕಾಗಿ ಗೊಬ್ಬರ ಪಡೆದುಕೊಳ್ಳಲು ಮುಂದೆ ಬಂದ ಸಂದರ್ಭದಲ್ಲಿ…