Subscribe to Updates
Get the latest creative news from FooBar about art, design and business.
Author: kannadanewsnow09
ರಾಂಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಜಾರ್ಖಂಡ್ ಸಿಎಂ ಸೊರೇನ್ ಅವರು ಇಡಿ ಬಂಧನದ ಭೀತಿಯಿಂದ ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಇಂದು ಇಡಿ ವಿಚಾರಣೆಗೆ ಹಾಜರಾಗಿದ್ದಂತ ಅವರನ್ನು, ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ಜಾರಿ ನಿರ್ದೇಶನಾಲಯದ ವಿಚಾರಣೆಯು ಬುಧವಾರ ಮಧ್ಯಾಹ್ನ ಅವರ ರಾಂಚಿ ನಿವಾಸದಲ್ಲಿ ಪ್ರಾರಂಭವಾಯಿತು. ಈ ವಿಚಾರಣೆಯ ಬಳಿಕ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿರೋದಾಗಿ ತಿಳಿದು ಬಂದಿದೆ. ತನಿಖಾ ಸಂಸ್ಥೆಯ ಅಧಿಕಾರಿಗಳು ಏಳು ಗಂಟೆಗಳಿಗೂ ಹೆಚ್ಚು ಕಾಲ ಅವರ ನಿವಾಸದಲ್ಲಿ ಬೀಡುಬಿಟ್ಟಿದ್ದರು. ಅವರ ನಿವಾಸದ ಒಳಗೆ ಮತ್ತು ಹೊರಗೆ ಭಾರಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಈಗ ಅಲ್ಲಿಗೆ ಉನ್ನತ ಅಧಿಕಾರಿಗಳಲ್ಲಿ ರಾಜ್ಯದ ಪೊಲೀಸ್ ಮಹಾನಿರ್ದೇಶಕ ಅಜಯ್ ಕುಮಾರ್ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ಎಲ್ ಖಿಯಾಂಗೇಟ್ ಧಾವಿಸಿದ್ದಾರೆ. ಸೊರೆನ್ ಅವರ ಮನೆಯ ಹೊರಗಿನ ಇತ್ತೀಚಿನ ದೃಶ್ಯಗಳು ಹೆಚ್ಚಿನ ಸಂಖ್ಯೆಯ ಪೊಲೀಸರು ಮತ್ತು ಭದ್ರತಾ…
ಬೆಂಗಳೂರು: ಸಿಇಟಿ 2024ರ ಪರೀಕ್ಷೆಗೆ ನೋಂದಾಯಿಸಿಕೊಳ್ಳೋದಕ್ಕೆ ಹಾಗೂ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸೋದಕ್ಕೆ ದಿನಾಂಕವನ್ನು ವಿಸ್ತರಿಸಲಾಗಿದೆ. ಈ ಕುರಿತಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಆನ್ ಲೈನ್ ಅರ್ಜಿ ಸಲ್ಲಿಸದೇ ಇರುವ ಹಾಗೂ ಶುಲ್ಕವನ್ನು ಪಾವತಿಸದೇ ಇರೋ ಅಭ್ಯರ್ಥಿಗಳ ಅನುಕೂಲಕ್ಕಾಗಿ ದಿನಾಂಕ 18-04-2024 ಮತ್ತು 19-04-2024ರಂದು ನಡೆಸಲಾಗುವ ಸಿಇಟಿ-2024ಕ್ಕೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ ಮಾಡಲಾಗಿದೆ ಎಂದಿದೆ. ಸಿಇಟಿ-2024ಕ್ಕೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು 20-02-2024ರ ರಾತ್ರಿ 11.59ರವರೆಗೆ ಹಾಗೂ 23-02-2024ರ ಸಂಜೆ 5.30ರವರೆಗೆ ಶುಲ್ಕ ಪಾವತಿಸಲು ದಿನಾಂಕವನ್ನು ವಿಸ್ತರಿಸಲಾಗಿದೆ ಎಂಬುದಾಗಿ ಕೆಇಎ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. https://kannadanewsnow.com/kannada/state-level-mega-job-fair-to-be-organised-on-feb-19-20/ https://kannadanewsnow.com/kannada/breaking-cuet-pg-2024-registration-deadline-extended-applications-can-be-submitted-till-february-7/
ಬೆಂಗಳೂರು: ತೈವಾನ್ ಮೂಲದ ಜಗದ್ವಿಖ್ಯಾತ ಕಂಪನಿ ವಿಸ್ಟ್ರಾನ್, ರಾಜ್ಯದಲ್ಲಿ 1,500 ಕೋಟಿ ರೂ. ಹೂಡಿಕೆಯೊಂದಿಗೆ ತನ್ನ ಲ್ಯಾಪ್-ಟಾಪ್ ಉತ್ಪಾದನಾ ಘಟಕವನ್ನು ಆರಂಭಿಸಲಿದೆ. ಈ ಸಂಬಂಧ ಅದು ರಾಜ್ಯ ಸರಕಾರದೊಂದಿಗೆ ಬುಧವಾರ ಇಲ್ಲಿ ಅಧಿಕೃತವಾಗಿ ಒಡಂಬಡಿಕೆಗೆ ಅಂಕಿತ ಹಾಕಿತು. ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರ ಸಮ್ಮುಖದಲ್ಲಿ ರಾಜ್ಯದ ಪರವಾಗಿ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ವಿಸ್ಟ್ರಾನ್ ಕಂಪನಿಯ ಅಧ್ಯಕ್ಷ ಅಲೆಕ್ ಲಾಯ್ ಅವರು ಪರಸ್ಪರ ಒಪ್ಪಂದಕ್ಕೆ ಸಹಿ ಹಾಕಿದರು. ಖನಿಜ ಭವನದಲ್ಲಿ ಈ ಸಭೆ ನಡೆಯಿತು. ನಂತರ ಸಚಿವ ಪಾಟೀಲ ಮಾತನಾಡಿ, `ವಿಸ್ಟ್ರಾನ್ ಕಂಪನಿಯು ಈಗಾಗಲೇ ಕೋಲಾರದಲ್ಲಿ ತನ್ನ ಘಟಕವನ್ನು ಹೊಂದಿದೆ. ಆದರೆ, ಈ ಹೊಸ ಹೂಡಿಕೆಯ ಮೂಲಕ ರಾಜ್ಯದಲ್ಲಿ ಪ್ರಪ್ರಥಮ ಲ್ಯಾಪ್-ಟಾಪ್ ತಯಾರಿಕಾ ಘಟಕವೂ ಬರುತ್ತಿದ್ದು, 2026ರ ಜನವರಿ ವೇಳೆಗೆ ಇದರಲ್ಲಿ ಉತ್ಪಾದನಾ ಚಟುವಟಿಕೆ ಆರಂಭಿಸಲಿದೆ. ಈ ಯೋಜನೆಯಿಂದ 3,000ಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ’ ಎಂದರು. ವಿಸ್ಟ್ರಾನ್ ಕಂಪನಿಯ ಈ ಯೋಜನೆಗಾಗಿ…
ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯಿಂದ ( School Education Department ) 2023-24ನೇ ಸಾಲಿನ ರಾಜ್ಯಮಟ್ಟದ ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ( SSLC Preparatory Exam 2024 ) ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. 2023-24ನೇ ಸಾಲಿನ ರಾಜ್ಯಮಟ್ಟದ ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷಾ ವೇಳಾಪಟ್ಟಿಯನ್ನು ಈ ಕೆಳಕಂಡಂತೆ ಪ್ರಕಟಿಸಲಾಗಿದೆ ಎಂದಿದ್ದಾರೆ. ಹೀಗಿದೆ ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿ -ದಿನಾಂಕ 26-02-2024ರ ಸೋಮವಾರ – ಪ್ರಥಮ ಭಾಷೆ – ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್(NCERT), ಸಂಸ್ಕೃತ -ದಿನಾಂಕ 27-02-2024 – ಮಂಗಳವಾರ – ದ್ವಿತೀಯ ಭಾಷೆ – ಇಂಗ್ಲಿಷ್, ಕನ್ನಡ -ದಿನಾಂಕ 28-02-2024 – ಬುಧವಾರ – ತೃತೀಯ ಭಾಷೆ – ಹಿಂದಿ (…
ಬೆಂಗಳೂರು: ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಾಗಿದ್ದಂತ ಡಾ.ಸಿಎನ್ ಮಂಜುನಾಥ್ ಅವರು ಇಂದು ನಿವೃತ್ತರಾಗಿದ್ದರು. ಈ ಹಿನ್ನಲೆಯಲ್ಲಿ ಅವರ ಸ್ಥಾನಕ್ಕೆ ಪ್ರಭಾರ ನಿರ್ದೇಶಕರನ್ನಾಗಿ ಡಾ.ರವೀಂದ್ರ ನಾಥ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಟ್ರೀಟ್ಮೆಂಟ್ ಫಸ್ಟ್, ಪೇಮೆಂಟ್ ನೆಕ್ಸ್ಟ್ ಎಂಬ ಧ್ಯೇಯದೊಂದಿಗೆ ಜನಸಾಮಾನ್ಯರಿಗೆ ಗುಣಮುಟ್ಟದ ಚಿಕಿತ್ಸೆ ನೀಡುವ ಮೂಲಕ ಹೆಸರುವಾಸಿಯಾಗಿದ್ದವರು ಜಯದೇವ ಹೃದ್ರೋಗ ವಿಜ್ಞಾನ ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಸಿಎನ್ ಮಂಜುನಾಥ್ ಅವರು. ಇಂತಹ ಅವರು ಇಂದು ತಮ್ಮ ಸೇವೆಯಿಂದ ನಿವೃತ್ತರಾಗಿದ್ದಾರೆ. ಕಳೆದ 16 ವರ್ಷಗಳಿಂದ ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿ ಸೇವೆಸಲ್ಲಿಸಿದ್ದಂತ ಅವರು, 75 ಲಕ್ಷ ಜನರಿಗೆ ಹೃದ್ರೋಗ ಚಿಕಿತ್ಸೆ, 8 ಲಕ್ಷ ಜನರಿಗೆ ಶಸ್ತ್ರ ಚಿಕಿತ್ಸೆ ಮಾಡುವ ಮೂಲಕ ಹೊಸ ದಾಖಲೆಯನ್ನು ನಿರ್ಮಿಸಿದ್ದರು. ಇದೀಗ ಡಾ.ಸಿಎನ್ ಮಂಜುನಾಥ್ ಅವರು ನಿವೃತ್ತರಾದ ನಂತ್ರ, ಜಯದೇವ ಹೃದ್ರೋಗ ಸಂಸ್ಥೆಗೆ ಪ್ರಭಾರ ನಿರ್ದೇಶಕರನ್ನಾಗಿ 69 ವರ್ಷದ ಡಾ.ರವೀಂದ್ರನಾಥ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. https://kannadanewsnow.com/kannada/congress-party-to-organise-massive-workers-convention-in-mangaluru-on-feb-17/ https://kannadanewsnow.com/kannada/breaking-cuet-pg-2024-registration-deadline-extended-applications-can-be-submitted-till-february-7/
ಬೆಂಗಳೂರು: ದಿನಾಂಕ 17-02-2024ರಂದು ಮಂಗಳೂರಿನಲ್ಲಿ ಶನಿವಾರ ಮಧ್ಯಾಹ್ನ 2 ಗಂಟೆಗೆ ಕಾಂಗ್ರೆಸ್ ಪಕ್ಷದಿಂದ ಬೃಹತ್ ಕಾರ್ಯಕರ್ತರ ಸಮಾವೇಶವನ್ನ ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾಹಿತಿ ಹಂಚಿಕೊಂಡಿದ್ದು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಸೂಚನೆಯ ಮೇರೆಗೆ ದಿನಾಂಕ 17-02-2024ರ ಶನಿವಾರ ಮಧ್ಯಾಹ್ನ 2 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ರಾಜ್ಯಮಟ್ಟದ ಬೃಹತ್ ಕಾರ್ಯಕರ್ತರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದಿದ್ದಾರೆ. ಈ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷರಾದಂತ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ಧರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಸಚಿವರು, ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಈ ಸಮಾವೇಶವನ್ನು ಯಶಸ್ವಿಗೊಳಿಸಲು ರಾಜ್ಯದ ಎಲ್ಲಾ ಸಚಿವರು, ಸಂಸದರು, ಶಾಸಕರು, ಕೆಪಿಸಿಸಿ ಪದಾಧಿಕಾರಿಗಳು, 2023ರ ವಿಧಾನಸಭೆ ಅಭ್ಯರ್ಥಿಗಳು, ಆಕಾಂಕ್ಷಿಗಳು ಸೇರಿದಂತೆ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ತಪ್ಪದೇ ಭಾಗವಹಿಸುವಂತೆ ಸೂಚಿಸಿದ್ದಾರೆ. https://kannadanewsnow.com/kannada/state-government-constitutes-committee-to-select-annual-film-awards/ https://kannadanewsnow.com/kannada/state-level-mega-job-fair-to-be-organised-on-feb-19-20/
ಬೆಂಗಳೂರು: 2019, 2020 ಮತ್ತು 2021ನೇ ಕ್ಯಾಲೆಂಡರ್ ವರ್ಷದ ಕನ್ನಡ ಮತ್ತು ಪ್ರಾದೇಶಿಕ ಭಾಷೆಗಳ ಚಲನಚಿತ್ರಗಳನ್ನು ವಾರ್ಷಿಕ ರಾಜ್ಯ ಚಲನಚಿತ್ರ ಪ್ರಶಸ್ತಿಗೆ ಆಯ್ಕೆ ಮಾಡಲು ಪ್ರಶಸ್ತಿ ಆಯ್ಕೆ ಸಮಿತಿಯನ್ನು ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಲಾಗಿದ್ದು, ಕರ್ನಾಟಕ ಚಲನಚಿತ್ರ ನೀತ-2011ರ ಅನ್ವಯ ಪ್ರತಿ ಕ್ಯಾಲೆಂಡರ್ ವರ್ಷದ ರಾಜ್ಯ ಚಲನಚಿತ್ರ ವಾರ್ಷಿಕ ಪ್ರಶಸ್ತಿಗಾಗಿ ಚಲನಚಿತ್ರಗಳನ್ನು ಆಯ್ಕೆ ಮಾಡುವ ಸಲುವಾಗಿ ಅಧ್ಯಕ್ಷರು, ಸದಸ್ಯರು ಹಾಗೂ 9 ಜನರ ಸಮಿತಿಯನ್ನು ರಚಿಸಲಾಗಿದೆ. ಇದರಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು, ನಿರ್ದೇಶಷಕರು ಸಮಿತಿಯ ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ ಎಂದಿದೆ. ಇನ್ನುಳಿದಂತೆ 8 ಜನರಲ್ಲಿ ಒಬ್ಬರನ್ನು ಅಧ್ಯಕ್ಷರನ್ನಾಗಿ ಹಾಗೂ ಇನ್ನುಳಿದ 7 ಜನ ಸದಸ್ಯರನ್ನು ನಾಮನಿರ್ದೇಶನ ಮಾಡಬೇಕಾಗಿರುತ್ತದೆ. ಆದ್ದರಿಂದ 2019, 20 ಮತ್ತು 21ನೇ ಕ್ಯಾಲೆಂಡರ್ ವರ್ಷದ ರಾಜ್ಯ ಚಲನಚಿತ್ರ ಪ್ರಶಸ್ತಿ ಆಯ್ಕೆ ಸಮಿತಿ ರಚಿಸಲು ಸಂಭವನೀಯ ಗಣ್ಯರ ಪಟ್ಟಿಯನ್ನು ಸಲ್ಲಿಸುತ್ತಾ, ಆಯ್ಕೆ ಸಮಿತಿಗೆ ಆಯ್ಕೆ ಮಾಡಿ ಆದೇಶ ಹೊರಡಿಸಲಾಗಿದೆ…
ಬೆಂಗಳೂರು: ರಾಜ್ಯದ ಯಶಸ್ವಿನಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ, ಇನ್ಮುಂದೆ ಯೋಜನೆಯಡಿ 1 ವಾರದೊಳಗೆ ಚಿಕಿತ್ಸೆ ಬಿಲ್ ಪಾವತಿಸುವಂತ ವ್ಯವಸ್ಥೆಯನ್ನು ಸರ್ಕಾರ ಜಾರಿಗೊಳಿಸುತ್ತಿದೆ. ಈ ಕುರಿತಂತೆ ಸಹಕಾರ ಸಚಿವ ಕೆ.ಎನ್ ರಾಜಣ್ಣ ಮಾಹಿತಿ ಹಂಚಿಕೊಂಡಿದ್ದು, ಯಶಸ್ವಿನಿ ಯೋಜನೆಯಡಿ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡಿದ ಒಂದು ವಾರದೊಳಗೆ ಬಿಲ್ ಪಾವತಿ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಹಾಗೆಯೇ ಯೋಜನೆಯಡಿ ಚಿಕಿತ್ಸಾ ದರವನ್ನು ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಚಿಕಿತ್ಸಾ ದರಕ್ಕೆ ಸಮಾನವಾಗಿ ಪರಿಷಅಕರಿಸಲು ನಿರ್ಧರಿಸಲಾಗಿದೆ ಎಂದಿದ್ದಾರೆ. ಒಟ್ಟಾರೆಯಾಗಿ ಯಶಸ್ವಿನಿ ಯೋಜನೆಯಡಿ ಚಿಕಿತ್ಸಾ ದರವನ್ನು ಕೇಂದ್ರದ ‘ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ’ ಯೋಜನೆಯ ದರಕ್ಕೆ ಸಮಾನವಾಗಿ ಪರಿಷ್ಕರಿಸಲು ನಿರ್ಧರಿಸಲಾಗಿದ್ದು, ಇದಕ್ಕೆ ಖಾಸಗಿ ಆಸ್ಪತ್ರೆಗಳು ಸಮ್ಮತಿಸಿವೆ ಎಂದು ಸಹಕಾರಿ ಸಚಿವ ಕೆ. ಎನ್. ರಾಜಣ್ಣ ತಿಳಿಸಿದ್ದಾರೆ. https://kannadanewsnow.com/kannada/state-level-mega-job-fair-to-be-organised-on-feb-19-20/ https://kannadanewsnow.com/kannada/breaking-cuet-pg-2024-registration-deadline-extended-applications-can-be-submitted-till-february-7/
ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಭೂಮಿ ಒತ್ತುವರಿ ತಡೆಗೆ ಸರ್ಕಾರದಿಂದ ಮಹತ್ವದ ಕ್ರಮವನ್ನು ಕೈಗೊಳ್ಳಲಾಗಿದೆ. ಒಂದು ಇಂಚು ಸರ್ಕಾರಿ ಭೂಮಿಯನ್ನು ಒತ್ತುವರಿಯಾಗದಂತೆ ತಡೆಯೋದಕ್ಕೆ ಬೀಟ್ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತಿದೆ. ಈ ಕುರಿತಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾಹಿತಿ ಹಂಚಿಕೊಂಡಿದ್ದು ರಾಜ್ಯಾಧ್ಯಂತ ಸರ್ಕಾರಿ ಜಮೀನುಗಳ ಸ್ಥಳ, ವಿಸ್ತೀರ್ಣ ಮತ್ತು ನಕ್ಷೆಯನ್ನು ಮೊಬೈಲ್ ಆಪ್ ನಲ್ಲಿ ದಾಖಲಿಸುವ ಕಾರ್ಯ ಮಾರ್ಚ್ ತಿಂಗಳ ಅಂತ್ಯಕ್ಕೆ ಪೂರ್ಣವಾಗಲಿದೆ ಎಂದಿದ್ದಾರೆ. ಈ ಪ್ರಕ್ರಿಯೆ ಪೂರ್ಣವಾದರೇ ಪ್ರತಿ ಮೂರು ತಿಂಗಳಿಗೊಮ್ಮ ವಾಸ್ತವ ಸ್ಥಿತಿಗತಿ ಅರಿಯಲು ನಿರಂತರ ಬೀಟ್ ವ್ಯವಸ್ಥೆ ಇರಲಿದ್ದು, ಒಂದಿಂಚೂ ಸರ್ಕಾರಿ ಭೂಮಿ ಕಬಳಿಕೆಯಾಗದಂತೆ ತಡೆಯುವ ಪರಿಣಾಮಕಾರಿ ವ್ಯವಸ್ಥೆಯನ್ನು ರಾಜ್ಯದಲ್ಲಿ ಜಾರಿಗೆ ತರಲಾಗುತ್ತಿದೆ ಎಂಬುದಾಗಿ ತಿಳಿಸಿದ್ದಾರೆ. ಒಟ್ಟಾರೆಯಾಗಿ ರಾಜ್ಯಾದ್ಯಂತ ಸರ್ಕಾರಿ ಜಮೀನುಗಳ ಒತ್ತುವರಿ, ಕಬಳಿಕೆ ತಡೆಗೆ ‘ಬೀಟ್’ ವ್ಯವಸ್ಥೆ ಜಾರಿ ಮಾಡುತ್ತಿರುವ ಸರ್ಕಾರ, ಎಲ್ಲ ಸರ್ಕಾರಿ ಭೂಮಿಯ ಮಾಹಿತಿ (ಡೇಟಾ ಬೇಸ್) ಸಿದ್ಧಪಡಿಸಿದೆ. ಈ ಜಮೀನುಗಳ ಸ್ಥಳ, ವಿಸ್ತೀರ್ಣ, ಆಕಾರ್ ಬಂದ್ ಸಿದ್ಧಪಡಿಸಲು ಮೊಬೈಲ್ ಆ್ಯಪ್ ಅಭಿವೃದ್ಧಿ ಪಡಿಸಲಾಗಿದೆ. ಈ ಆ್ಯಪ್ ಬಳಸಿ…
ಕಲಬುರ್ಗಿ: ಜಿಲ್ಲೆಯಲ್ಲಿ ಮನೆಯ ಮುಂದೆ ಆಟವಾಡುತ್ತಿದ್ದಂತ ಮಗುವಿನ ಮೇಲೆ ಶಾಲಾ ವಾಹನವೊಂದು ಹರಿದ ಪರಿಣಾಮ, ಸ್ಥಳದಲ್ಲೇ ಮಗು ದುರ್ಮಣರ ಹೊಂದಿರುವಂತ ಘಟನೆ ಇಂದು ನಡೆದಿದೆ. ಈ ಹಿನ್ನಲೆಯಲ್ಲಿ ಶಾಲಾ ವಾಹನವನ್ನು ಜಖಂ ಗೊಳಿಸಲಾಗಿದೆ. ಕಲಬುರ್ಗಿ ನಗರದ ಸಂಗಮೇಶ್ವರ ಕಾಲೋನಿಯಲ್ಲಿ ನ್ಯಾಷನಲ್ ಪಬ್ಲಿಕ್ ಶಾಲೆಯ ಬಸ್ ಹರಿದು ಮನೆಯ ಮುಂದೆ ಆಟವಾಡುತ್ತಿದ್ದಂತ ಮಗುವೊಂದು ಧಾರುಣವಾಗಿ ಸಾವನ್ನಪ್ಪಿದೆ. ಮೃತ ಮಗುವನ್ನು ಮನೋಜ್(2) ಎಂಬುದಾಗಿ ಗುರುತಿಸಲಾಗಿದೆ. ಶಾಲಾ ವಾಹನ ಚಾಲಕನ ನಿರ್ಲಕ್ಷ್ಯದಿಂದ ಮಗು ಸಾವನ್ನಪ್ಪಿದೆ ಎಂಬುದಾಗಿ ಆರೋಪಿಸಿ, ಪೋಷಕರು, ಸಂಬಂಧಿಕರು ಶಾಲಾ ಬಸ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಕಲ್ಲು ತೂರಾಟ ನಡೆಸಿದ ಕಾರಣ, ನ್ಯಾಷನಲ್ ಪಬ್ಲಿಕ್ ಶಾಲೆಯ ಬಸ್ಸಿನ ಗ್ಲಾಸ್ ಪುಡಿ ಪುಡಿಯಾಗಿದೆ. ಘಟನೆಯ ಬಳಿಕ ಶಾಲಾ ವಾಹನದ ಚಾಲಕ ಬಸ್ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಸ್ಥಳಕ್ಕೆ ಆಗಮಿಸಿದಂತ ಕಲಬುರ್ಗಿ ಸಂಚಾರ-2 ಠಾಣೆಯ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. https://kannadanewsnow.com/kannada/state-level-mega-job-fair-to-be-organised-on-feb-19-20/ https://kannadanewsnow.com/kannada/breaking-rbi-bans-new-customer-addition-to-paytm-bank/