Author: kannadanewsnow09

ಬೆಂಗಳೂರು: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ವಾರದಲ್ಲಿ ಪೂರ್ತಿ ಒಂದು ದಿನ ರಜೆ ನೀಡುವುದು ಕಡ್ಡಾಗೊಳಿಸಿ, ರಾಜ್ಯ ಸರ್ಕಾರ ಆದೇಶಿಸಿದೆ. ಈ ಸಂಬಂಧ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಪಸ್ತುತ ವಾರಕ್ಕೆ ಎರಡು ಭಾರಿ ಅರ್ಧ ದಿನ ರಜೆ ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ಈ ಕೆಳಕಂಡ ಷರತ್ತುಗಳನ್ನು ಪೂರೈಸಿಕೊಂಡು, ವಾರದಲ್ಲಿ ಪೂರ್ತಿ ಒಂದು ದಿನ ರಜೆ ಘೋಷಿಸಲು ಸರ್ಕಾರದ ಅನುಮೋದನೆ ನೀಡಿದೆ ಎಂದು ತಮಗೆ ತಿಳಿಸಲು ನಿರ್ದೇಶಿಸಿದ್ದಾರೆ. 1. ದಿನನಿತ್ಯದ ಸ್ವಚ್ಛತಾ ಕೆಲಸ ಕಾರ್ಯಗಳಿಗೆ ತೊಂದರೆಯಾಗದಂತೆ ಶೇ.85% ರಷ್ಟು ಹಾಜರಾತಿ ಖಚಿತಪಡಿಸಿಕೊಂಡು ಒಂದು ರಜೆ ನೀಡಲು; 2. ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯ ಸ್ವಚ್ಛತಾ ಕಾರ್ಯಕ್ಕೆ ಈಗಾಗಲೇ ನೇಮಿಸಿರುವ ಸಿಬ್ಬಂದಿಗೆ ವಾರದ ರಜೆ ನೀಡುವ ಸಂದರ್ಭದಲ್ಲಿ ಬೇರೊಬ್ಬ ನೌಕರರನ್ನು ಸದರಿ ಕಾರ್ಯಕ್ಕೆ ನಿಯೋಜಿಸುವ ಮೇರೆಗೆ ರಜೆಯ ಅವಶ್ಯಕತೆಯಿರುವ ಪೌರಕಾರ್ಮಿಕರಿಗೆ…

Read More

ಮೈಸೂರು: ರಾಜ್ಯದ ಸಾವಿರಾರು ಬಗರ್ ಹುಕುಂ ಸಾಗುವಳಿದಾರ ರೈತರು ಸಾಗುವಳಿ ಪತ್ರವನ್ನು ನಿರೀಕ್ಷೆಯಲ್ಲಿದ್ದಾರೆ. ಇವರಿಗೆ ಗುಡ್ ನ್ಯೂಸ್ ಎನ್ನುವಂತೆ ರೈತರು ಸಾಗುವಳಿ ಚೀಟಿಗಾಗಿ ಸಲ್ಲಿಸಿರುವಂತ ಅರ್ಜಿಯನ್ನು 8 ತಿಂಗಳಲ್ಲಿ ಕ್ಲಿಯರ್ ಮಾಡುವಂತೆ ಕಂದಾಯ ಸಚಿವ ಕೃಷ್ಣಭೈರೇಗೌಡ ಡೆಡ್ ಲೈನ್ ನೀಡಿದ್ದಾರೆ. ಇಂದು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಬಗರ್‌ ಹುಕುಂ ಅರ್ಜಿಗಳ ವಿಲೇವಾರಿಗೆ ತಹಶೀಲ್ದಾರರಿಗೆ 8 ತಿಂಗಳ ಗಡುವು ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು. ಬಡ ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಅಕ್ರಮ ಸಾಗುವಳಿಯ ಸಕ್ರಮೀಕರಣಕ್ಕಾಗಿ ಬಗರ್‌ಹುಕುಂ ಅಡಿ ರಾಜ್ಯ ಸರ್ಕಾರ ಅರ್ಜಿ ಸ್ವೀಕರಿಸಿದೆ. ಲಕ್ಷಾಂತರ ಅರ್ಜಿಗಳು ಈಗಾಗಲೇ ಸಲ್ಲಿಕೆಯಾಗಿದ್ದು, ಈ ಎಲ್ಲಾ ಅರ್ಜಿಗಳನ್ನು ಮುಂದಿನ 8 ತಿಂಗಳಲ್ಲಿ ವಿಲೇವಾರಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಸಚಿವರು ತಿಳಿಸಿದರು. ರಾಜ್ಯಾದ್ಯಂತ 163 ಕ್ಷೇತ್ರಗಳಲ್ಲಿ ಬಗರ್‌ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ರಚಿಸಲಾಗಿದೆ. ಜುಲೈ ತಿಂಗಳಿಂದ ಆರಂಭಿಸಿ ಪ್ರತಿ ತಿಂಗಳೂ ತಾಲೂಕವಾರು ತಿಂಗಳಿಗೆ ಇಷ್ಟು ಅರ್ಜಿ ವಿಲೇಗೆ…

Read More

ಬೆಂಗಳೂರು: ಡೆಂಘೀ ಪ್ರಕರಣಗಳ ಟೆಸ್ಟಿಂಗ್ ಗೆ ಖಾಸಗಿ ಆಸ್ಪತ್ರೆಗಳಿಗೂ ದರ ನಿಗದಿ ಮಾಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನ ವಿಧಾನ ಸೌಧದಲ್ಲಿ ಇಂದು ಡೆಂಘೀ ನಿಯಂತ್ರಣ ಕುರಿತು ಬಿಬಿಎಂಪಿ, ಗ್ರಾಮೀಣಾಭಿವೃದ್ಧಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಬುಧವಾರವೇ ದರ ನಿಗದಿ ಕುರಿತು ಸುತ್ತೋಲೆ ಹೊರಡಿಸುವುದಾಗಿ ಮಾಧ್ಯಮಗಳಿಗೆ ತಿಳಿಸಿದರು. ಅಲ್ಲದೇ ಖಾಸಗಿ ಆಸ್ಪತ್ರೆಗಳು ಕಡ್ಡಾಯವಗಿ ಡೆಂಘೀ ಪಾಸಿಟಿವ್ ಪ್ರಕರಣಗಳ ಕುರಿತು ಸರ್ಕಾರಕ್ಕೆ ಮಾಹಿತಿ ನೀಡುವಂತೆ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಕಳೆದ ಸಾಲಿಗೆ ಹೊಲಿಸಿದರೆ ಈ ಬಾರಿ ಡೆಂಘೀ ಪ್ರಕರಣಗಳ ಟೆಸ್ಟಿಂಗ್ ನಲ್ಲಿ ಶೇ 42 ರಷ್ಟು ಹೆಚ್ಚಳವಾಗಿದೆ. ಸಾಧ್ಯವಾದಷ್ಟು ಮುಂಚಿತವಾಗಿ ಡೆಂಘೀ ಪಾಸಿಟಿವ್ ಪ್ರಕರಣಗಳನ್ನ ಪತ್ತೆ ಹಚ್ಚಿದಾಗ ಮಾತ್ರ ಸಾವುಗಳನ್ನ ತಡೆಯಲು ಸಾಧ್ಯ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಬಿಬಿಎಂಪಿ ಅಧಿಕಾರಿಗಳು ಹೆಚ್ಚು ನಿಗಾ ವಹಿಸುವಂತೆ ಸಚಿವ ದಿನೇಶ್ ಗುಂಡೂರಾವ್ ಸಭೆಯಲ್ಲಿ ಸೂಚನೆ ನೀಡಿದರು. ಸಭೆ ಬಳಿಕ ಮಾಧ್ಯಮಗಳಿಗೆ…

Read More

ಮಂಗಳೂರು: ಜುಲೈ 3ನೇ ವಾರದಲ್ಲಿ ರಾಜ್ಯದ ವಿವಿಧ ಚಾರಣ ಪಥಗಳಿಗೆ ಆನ್ ಲೈನ್ ಮೂಲಕ ಟಿಕೆಟ್ ಬುಕ್ಕಿಂಗ್ ಮಾಡುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಮಂಗಳೂರಿನ ಪಡೀಲ್ ನಲ್ಲಿರುವ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಜನವರಿ 26ರಂದು ಕುಮಾರಪರ್ವತಕ್ಕೆ ಸಾವಿರಾರು ಚಾರಣಿಗರು ಒಂದೇ ದಿನ ಲಗ್ಗೆ ಇಟ್ಟು ಗೊಂದಲ ಉಂಟಾದ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾದ ಚಾರಣಕ್ಕೆ ಈ ಆಗಸ್ಟ್ ನಿಂದ ಮರು ಚಾಲನೆ ನೀಡಲಾಗುವುದು ಎಂದು ತಿಳಿಸಿದರು. ಸಾಮಾನ್ಯವಾಗಿ ಮಳೆಗಾಲದಲ್ಲಿ ಯಾವುದೇ ಚಾರಣ ಪಥಕ್ಕೆ ಪ್ರವೇಶ ನಿರಾಕರಿಸಲಾಗುತ್ತದೆ. ಕಾರಣ ಚಾರಣಿಗರು ಅಪಾಯಕ್ಕೆ ಈಡಾಗುವ ಸಂಭವ ಹೆಚ್ಚಾಗಿರುತ್ತದೆ, ಜೊತೆಗೆ ಇಲ್ಲಿನ ಜೀವರಾಶಿ ಮತ್ತು ಮೊಳಕೆಯೊಡೆಯುವ ಸಸ್ಯರಾಶಿಗೂ ತೊಂದರೆ ಆಗುತ್ತದೆ ಹೀಗಾಗಿ ಆಗಸ್ಟ್ ನಿಂದ ಚಾರಣಕ್ಕೆ ಮರು ಚಾಲನೆ ನೀಡುವುದಾಗಿ ತಿಳಿಸಿದರು. ಈಗಾಗಲೇ ರಾಜ್ಯದ ಹಲವು ಚಾರಣ ಪಥಗಳನ್ನು ಪರಿಸರ ಪ್ರವಾಸೋದ್ಯಮ ವಿಭಾಗ ನಿರ್ವಹಿಸುತ್ತಿದ್ದು, ಆನ್ ಲೈನ್ ಟಿಕೆಟ್ ವ್ಯವಸ್ಥೆ…

Read More

ನವದೆಹಲಿ: ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಸಿಕಂದ ರಾವ್ ತಹಸಿಲ್ನಲ್ಲಿ ಮಂಗಳವಾರ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಕಾಲ್ತುಳಿತ ಘಟನೆಯಲ್ಲಿ ಕನಿಷ್ಠ 50 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ದೃಢಪಡಿಸಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಮತ್ತು ಗಾಯಗೊಂಡವರಿಗೆ ತಲಾ 50,000 ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ. ಈ ದುರಂತದ ಕಾರಣಗಳನ್ನು ತನಿಖೆ ಮಾಡಲು ಮುಖ್ಯಮಂತ್ರಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಮತ್ತು ಅಲಿಗಢ ಪೊಲೀಸ್ ಆಯುಕ್ತರನ್ನು ಒಳಗೊಂಡ ತಂಡವನ್ನು ರಚಿಸಿದ್ದಾರೆ. “ಈವರೆಗೆ 23 ಮಹಿಳೆಯರು, 3 ಮಕ್ಕಳು ಮತ್ತು 1 ಪುರುಷ ಸೇರಿದಂತೆ 27 ಮೃತ ದೇಹಗಳನ್ನು ಇಟಾ ಆಸ್ಪತ್ರೆಯಲ್ಲಿ ಸ್ವೀಕರಿಸಲಾಗಿದೆ. ಗಾಯಾಳುಗಳು ಆಸ್ಪತ್ರೆಗೆ ತಲುಪಿಲ್ಲ ಎಂದು ಇಟಾದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು, 27 ಶವಗಳನ್ನು ಗುರುತಿಸಲಾಗುತ್ತಿದೆ ಎಂದು ಹೇಳಿದರು. ಈ ಕಾರ್ಯಕ್ರಮಕ್ಕೆ ಜನರು ಹೆಚ್ಚಿನ…

Read More

ಹಾಸನ : ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲುಪಾಲಾಗಿದ್ದಂತ ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಲಾಗಿತ್ತು. ಇಂದು ಅವರು ಜೈಲಿನಿಂದ ರಿಲೀಸ್ ಆಗಿದ್ದಾರೆ. ಜೂನ್.5ರಂದು ಹಾಸನ ಜಿಲ್ಲಾ ನ್ಯಾಯಾಲಯವು ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿತ್ತು. ಆ ಬಳಿಕ ಜಾಮೀನು ನೀಡೋದಕ್ಕೆ ನಿರಾಕರಿಸಿತ್ತು. ಈ ಹಿನ್ನಲೆಯಲ್ಲಿ ವಕೀಲ ದೇವರಾಜೇಗೌಡ ಅವರು ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜಾಮೀನಿಗಾಗಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ್ದಂತ ನ್ಯಾಯಪೀಠವು, ಜಾಮೀನು ಮಂಜೂರು ಮಾಡಲಾಗಿತ್ತು. ಇಂದು ಅತ್ಯಾಚಾರ ಆರೋಪ ಕೇಸಲ್ಲಿ ಹಾಸನ ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಂತ ವಕೀಲ ದೇವಾರಾಜೇಗೌಡ ಅವರನ್ನು, ಕೋರ್ಟ್ ಜಾಮೀನಿನ ಹಿನ್ನಲೆಯಲ್ಲಿ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. https://kannadanewsnow.com/kannada/anant-ambanis-mass-wedding-to-be-held-ahead-of-his-wedding-rs-1-lakh-each-distributed-to-bride/ https://kannadanewsnow.com/kannada/actress-harshika-ponacha-and-bhuvan-ponnanna-expecting-their-first-child/

Read More

ಮುಂಬೈ : ಮುಕೇಶ್- ನೀತಾ ಅಂಬಾನಿ ದಂಪತಿಯ ಮಗ ಅನಂತ್ ಅಂಬಾನಿ ಅವರ ಮದುವೆ ಇದೇ ಜುಲೈ ಹನ್ನೆರಡನೇ ತಾರೀಕಿಗೆ ರಾಧಿಕಾ ಮರ್ಚೆಂಟ್ ಜೊತೆಗೆ ನಡೆಯಲಿದೆ. ಅದಕ್ಕೂ ಮುನ್ನ ಅಂಬಾನಿ ಕುಟುಂಬದಿಂದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮುಂಬೈನಿಂದ 100 ಕಿಮೀ ದೂರದಲ್ಲಿರುವ ಪಾಲ್ಘರ್ ಪ್ರದೇಶದಲ್ಲಿನ ಐವತ್ತಕ್ಕೂ ಹೆಚ್ಚು ಜೋಡಿಗಳಿಗೆ, ಅದರಲ್ಲೂ ಆರ್ಥಿಕವಾಗಿ ಹಿಂದುಳಿದಂಥ ವಧು- ವರರಿಗೆ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ನಡೆಸಲಾಯಿತು. ರಿಲಯನ್ಸ್ ಕಾರ್ಪೊರೇಟ್ ಪಾರ್ಕ್ ನಲ್ಲಿ ನಡೆದ ವಿವಾಹ ಸಮಾರಂಭವದಲ್ಲಿ ಈ ನೂತನ ದಂಪತಿಗಳ ಕುಟುಂಬದ ಪರವಾಗಿ ಸುಮಾರು 800 ಜನರು ಭಾಗವಹಿಸಿದ್ದರು. ಅನಂತ್- ರಾಧಿಕಾ ಮದುವೆಗೆ ಇದು ಆರಂಭಿಕ ಕಾರ್ಯಕ್ರಮವಾಗಿದ್ದು, ಮುಂದಿನ ಮದುವೆ ಋತುವಿನಲ್ಲಿ ದೇಶದಾದ್ಯಂತ ಈ ರೀತಿಯಾಗಿ ನೂರಕ್ಕೂ ಹೆಚ್ಚು ವಿವಾಹಗಳಿಗೆ ಅಂಬಾನಿ ಕುಟುಂಬದ ಬೆಂಬಲ ದೊರೆಯಲಿದೆ. ಈ ಬಗ್ಗೆ ಸಂಕಲ್ಪವನ್ನೇ ಮಾಡಿಕೊಂಡಿದ್ದಾರೆ. ಅಂಬಾನಿ ಕುಟುಂಬವು ಈ ತನಕ ಅನುಸರಿಸಿಕೊಂಡು ಬಂದಿರುವ ಸರ್ವಕಾಲದಲ್ಲೂ ಮಾನ್ಯವಾದ ತತ್ವ ಏನೆಂದರೆ, ಮಾನವ ಸೇವೆಯೇ ಮಾಧವ ಸೇವೆ ಎಂಬುದು. ಅಂದರೆ…

Read More

ಚನ್ನಪಟ್ಟಣ: ನಾಡ ಕಚೇರಿಯಲ್ಲಿ ಪಿಂಚಣಿ ಮಾಡಿಕೊಡಲು ಹರ್ಷಿತ ಎನ್ನುವ ನೌಕರಳು 50 ಸಾವಿರ ಲಂಚ ಕೇಳುತ್ತಾ ಇದ್ದಾರೆ ಎಂದು ದೊಡ್ಡ ಮಳೂರು ಗ್ರಾಮದ 70 ವರ್ಷದ ಯಶೋಧಮ್ಮ ದೂರು ನೀಡಿದಾಗ ಸಿಟ್ಟಾದ ಡಿಸಿಎಂ ಅವರು ಜಿಲ್ಲಾಧಿಕಾರಿಗಳನ್ನು ಕರೆದು “ಕೂಡಲೇ ಇದರ ಬಗ್ಗೆ ತನಿಖೆ ಮಾಡಬೇಕು. ತಪ್ಪು ಸಾಬೀತಾದರೆ ಈ ಅಧಿಕಾರಿಯನ್ನು ಅಮಾನತು ಮಾಡಬೇಕು. ನನಗೆ ಕೂಡಲೇ ಮಾಹಿತಿ ನೀಡಬೇಕು ಎಂದು ಸ್ಥಳದಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಅಮಾನತಿಗೆ ಸೂಚನೆ ನೀಡಿದರು. ಇಂದು ಚನ್ನಪಟ್ಟಣದಲ್ಲಿ ಮಾತನಾಡಿದಂತ ಅವರು, ಒಂದೇ ದಿನ ಪಡಿತರ ಕೊಡುತ್ತಿದ್ದಾರೆ ಎಷ್ಟು ಬಾರಿ ಮನವಿ ಮಾಡಿದರು ಕೇಳುತ್ತಿಲ್ಲ. ದೂರದ ಊರುಗಳಿಗೆ ನಡೆದುಕೊಂಡು ಹೋಗಬೇಕು ಎಂದು ಕೋಟಮಾರನಹಳ್ಳಿ ಮಂಜುಳಾ ಅವರು ದೂರು ನೀಡಿದಾಗ “ಎಲ್ಲಾ ಪಡಿತರ ವಾಟ್ಸಪ್ ಗುಂಪು ರಚನೆ ಮಾಡಿ ಮಾಹಿತಿ ನೀಡಿ. ಜನರಿಗೆ ಕಷ್ಟ ಕೊಡುತ್ತಿರುವ ವಿತರಕರ ಲೈಸೆನ್ಸ್ ರದ್ದು ಮಾಡಿ. ತಂತ್ರಜ್ಞಾನ ಮುಂದುವರೆದರು ಬಳಸಿಕೊಳ್ಳಲು ನಿಮಗೆ ಏನು ತೊಂದರೆ. ಜನರ ಕಷ್ಟ ನಿಮಗೆ ಅರ್ಥ ಆಗುವುದಿಲ್ಲವೇ? ” ಎಂದು ಆಹಾರ…

Read More

ಚನ್ನಪಟ್ಟಣ: “ಯಾರೇ ಬರಲಿ, ಯಾರೇ ಹೋಗಲಿ, ಏನೇ ಟೀಕೆ ಮಾಡಲಿ, ನಾನು ತಲೆಕೆಡಿಸಿ ಕೊಳ್ಳುವುದಿಲ್ಲ. “ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ. ಜನರಿಗೆ ಸಹಾಯ ಮಾಡಿದ್ದು ಮಾತ್ರ ಶಾಶ್ವತ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು. ಬೈರಾಪಟ್ಟಣ ಹಾಗೂ ಹೊಂಗನೂರಿನ ಬಳಿ ಸುಣ್ಣಘಟ್ಟದಲ್ಲಿ ನಡೆದ ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು “ಯಾರು ಏನೇ ಹೇಳಿದರು ನನಗೆ ಜನ ಸೇವೆ ಮುಖ್ಯ. ನಾನು ನಿಮ್ಮ ಮನೆ ಮಗ, ಸೇವಕ. ಚನ್ನಪಟ್ಟಣ ತಾಲೂಕಿನ ಜನತೆಗೆ ಶಿವಕುಮಾರ್ ಮನೆ ಬಾಗಿಲು ಸದಾ ತೆರೆದಿರುತ್ತದೆ ” ಎಂದರು. ಈಗ ಬಂದಿದ್ದಾರೆ ಚುನಾವಣೆ ಆದ ನಂತರ ಹೋಗುತ್ತಾರೆ ಎಂದು ಕೆಲವರು ಹೇಳುತ್ತಿದ್ದಾರೆ. ಅಧಿಕಾರ ಇದ್ದಾಗ ಜನರ ಕೆಲಸ ಮಾಡಬೇಕಿತ್ತು. ಬಡವರ ಕೆಲಸ ಮಾಡಬೇಡಿ ಎಂದು ಕುಮಾರಣ್ಣ ಮತ್ತು ಯೋಗೇಶ್ವರ್ ಗೂ ಹೇಳಿಲ್ಲ. ಕೆಲಸ ಮಾಡಬೇಡಿ ಎಂದು ಯಾರಾದರು ಅಡ್ಡ ಹಾಕಿಕೊಂಡಿದ್ದರೆ? ನಾವು ಈಗ ನಮ್ಮದೇ ಶೈಲಿಯಲ್ಲಿ ಕೆಲಸ ಮಾಡುತ್ತಿದ್ದೇವೆ” ಎಂದು ತಿರುಗೇಟು…

Read More

ನವದೆಹಲಿ: ಹಿಂದೂಗಳ ಬಗ್ಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೀಡಿದ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ತಿರುಗೇಟು ನೀಡಿದ್ದು, ಜನರು ಶತಮಾನಗಳವರೆಗೆ ಅವರನ್ನು ಕ್ಷಮಿಸುವುದಿಲ್ಲ ಎಂದು ಹೇಳಿದ್ದಾರೆ. ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸಿದ ಪ್ರಧಾನಿ, “ಜನರು ಶತಮಾನಗಳವರೆಗೆ ಅವರನ್ನು ಕ್ಷಮಿಸುವುದಿಲ್ಲ… ಹಿಂದೂ ಸಹಿಷ್ಣು. ಹಿಂದೂಗಳ ಮೇಲೆ ಸುಳ್ಳು ಆರೋಪ ಹೊರಿಸಲು ಪಿತೂರಿ ನಡೆಸಲಾಯಿತು. ಹಿಂದೂಗಳು ಹಿಂಸಾತ್ಮಕರು ಎಂದು ಹೇಳಲಾಗುತ್ತಿತ್ತು. ಇದು ನಿಮ್ಮ ಪಾತ್ರ, ಆಲೋಚನೆ ಮತ್ತು ದ್ವೇಷ. ರಾಹುಲ್ ಗಾಂಧಿ ಅವರು ಶಿವ, ಯೇಸುಕ್ರಿಸ್ತ ಮತ್ತು ಗುರುನಾನಕ್ ಅವರ ಫೋಟೋಗಳನ್ನು ತೋರಿಸುತ್ತಿರುವುದನ್ನು ಉಲ್ಲೇಖಿಸಿ ದೇವರ ಫೋಟೋಗಳನ್ನು ಪ್ರದರ್ಶಿಸುವುದರಿಂದ ನಾಗರಿಕರಿಗೆ ನೋವಾಗಿದೆ ಎಂದು ಪ್ರಧಾನಿ ಹೇಳಿದರು. “ಅವರು ನಮ್ಮ ದೇವರುಗಳನ್ನು ಅವಮಾನಿಸಿದ್ದಾರೆ. ಜಿಂಕೆ ದರ್ಶನ ಹೋಟೆ ಹೈ, ಉಂಕೆ ಪ್ರದರ್ಶನ ನಹೀ ಹೋಟೆ” ಎಂದು ಅವರು ಟೀಕಿಸಿದರು. “ನಿನ್ನೆಯನ್ನು ನೋಡಿದ ನಂತರ, ಇದು ಕಾಕತಾಳೀಯವೋ ಅಥವಾ ಪ್ರಯೋಗವೋ ಎಂದು ಹಿಂದೂಗಳು ಯೋಚಿಸಬೇಕು” ಎಂದು ಅವರು ಹೇಳಿದರು.…

Read More