Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: 402 ಪೊಲೀಸ್ ಇನ್ಸ್ ಪೆಕ್ಟರ್ ನೇಮಕಾತಿ ಪರೀಕ್ಷೆಯು ಕೆಲ ದಿನಗಳ ಹಿಂದೆಯೇ ನಡೆಯಬೇಕಿತ್ತು. ಆದರೇ ಎರಡು ಪರೀಕ್ಷೆಗಳು ಒಂದೇ ದಿನ ನಿಗದಿಯಾಗಿದ್ದರಿಂದ ಮುಂದೂಡಿಕೆ ಮಾಡಲಾಗಿತ್ತು. ಈ ಪರೀಕ್ಷೆ ಅಕ್ಟೋಬರ್.3ರಂದು ನಡೆಯಲಿದೆ. ಇಂತಹ ಪರೀಕ್ಷೆಗೆ ಕೆಇಎಯಿಂದ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ಅಕ್ಟೋಬರ್ 3ರಂದು ನಡೆಯುವ ಪೋಲಿಸ್ ಸಬ್ ಇನ್ಸ್‌ಪೆಕ್ಟರ್ (PSI) ಪರೀಕ್ಷೆ ಗೆ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ವೆಬ್ ಸೈಟ್ ನಲ್ಲಿ ಲಿಂಕ್ ಬಿಡುಗಡೆ ಮಾಡಲಾಗಿದೆ. ಅರ್ಹರು ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು KEA ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ. https://twitter.com/KEA_karnataka/status/1839675174016229835 ಪ್ರವೇಶ ಪತ್ರವನ್ನು ಈ ರೀತಿ ಡೌನ್ ಲೋಡ್ ಮಾಡಿಕೊಳ್ಳಿ 402 ಪಿಎಸ್‌ಐ ಹುದ್ದೆ ಪರೀಕ್ಷೆ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳಲು https://cetonline.karnataka.gov.in/hallticket_va/forms/HALLTICKET.aspx ಕ್ಕೆ ಭೇಟಿ ನೀಡಿ. ತೆರೆದ ವೆಬ್‌ಪೇಜ್‌ನಲ್ಲಿ ಪಿಎಸ್‌ಐ ಪರೀಕ್ಷೆ ಆಯ್ಕೆ ಮಾಡಿ. ನಿಮ್ಮ ಅಪ್ಲಿಕೇಶನ್…
ಬೆಂಗಳೂರು: ಇದೇ ಮೊದಲ ಬಾರಿಗೆ ಈ ವರ್ಷ ಮೂರು ಬಾರಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ನಡೆಸಲಾಗಿತ್ತು. ಎರಡು ಬಾರಿ ಅನುತ್ತೀರ್ಣರಾದವರಿಗೆ ಮೂರನೇ ಬಾರಿಯೂ ಅವಕಾಶ ನೀಡಲಾಗಿತ್ತು. ಅಲ್ಲದೇ ಎರಡೂ ಬಾರಿ ಉತ್ತೀರ್ಣರಾದವರೂ ಮೂರನೇ ಬಾರಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು. ಹೀಗೆ ಪರೀಕ್ಷೆ ಬರೆದಂತ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯನ್ನು ಕೆಇಎ ಬಿಡುಗಡೆ ಮಾಡಿದೆ. ಹೌದು ಪಿಯುಸಿ 3ನೇ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ Options ದಾಖಲಿಸಲು ಶನಿವಾರವೇ ಲಿಂಕ್ ಬಿಡುಗಡೆ ಮಾಡಲಾಗಿದೆ ಎಂಬುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮಾಹಿತಿ ನೀಡಿದೆ. ಅ.4ರವರೆಗೆ ತಮಗೆ ಇಷ್ಟ ಇರುವ ಕಾಲೇಜು ಮತ್ತು ಕೋರ್ಸ್ ಗಳನ್ನು ದಾಖಲಿಸಿಕೊಳ್ಳಬಹುದು. ಈ ಸುತ್ತಿನಲ್ಲಿ ಸೀಟು ಸಿಕ್ಕಿದ ನಂತರ ಕಡ್ಡಾಯವಾಗಿ ಪ್ರವೇಶ ಪಡೆಯಬೇಕು. ಇಲ್ಲದಿದ್ದರೆ ಶುಲ್ಕದ ಐದು ಪಟ್ಟು ದಂಡ ಕಟ್ಟಬೇಕಾಗುತ್ತದೆ ಎಂದು ತಿಳಿಸಿದೆ. https://twitter.com/KEA_karnataka/status/1840008068819513466 #UGCET ಎಂಜಿನಿಯರಿಂಗ್ ಇತ್ಯಾದಿ ಕೋರ್ಸ್ ಗಳ ಪ್ರವೇಶಕ್ಕೆ ಇದುವರೆಗೂ ಸೀಟು ಸಿಗದೇ ಇರುವವರು, ಮೊದಲ ಸುತ್ತಿನಲ್ಲಿ Choice & Options ದಾಖಲು ಮಾಡದವರಿಗೆ 2nd…
ಕಲಬುರ್ಗಿ: ಕೌಟುಂಬಿಕ ಕಲಹಕ್ಕೆ ಬೇಸತ್ತಂತ ಪತಿಯೊಬ್ಬ, ಪತ್ನಿಯನ್ನೇ ಕುಡುಗೋಲಿನಿಂದ ಕೊಚ್ಚಿ ಕೊಲೆಗೈದು, ಪೊಲೀಸ್ ಠಾಣೆಗೆ ತೆರಳಿ ಶರಣಾಗಿರುವಂತ ಘಟನೆ ಕಲಬುರ್ಗಿಯ ಸೇಡಂನ ಬೇಟಗೇರ(ಬಿ) ಗ್ರಾಮದಲ್ಲಿ ನಡೆದಿದೆ. ಕಲಬುರ್ಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಬೇಡಗೇರ(ಬಿ) ಗ್ರಾಮದ ನಾಗಮ್ಮ ಹಾಗೂ ಶೇಖರಪ್ಪ ನಡುವೆ ಕೌಟುಂಬಿಕ ಕಲಹ ಉಂಟಾಗಿತ್ತು. ದಿನೇ ದಿನೇ ಹೆಚ್ಚಾಗಿ ಇದರಿಂದ ಬೇಸತ್ತು ಕೂಡ ಹೋಗಲಾಗಿತ್ತು ಎನ್ನಲಾಗಿದೆ. ಕೌಟುಂಬಿಕ ಕಲಹಕ್ಕೆ ಬೇಸತ್ತಿದ್ದಂತ ಶೇಖರಪ್ಪ ತನ್ನ ಪತ್ನಿ ನಾಗಮ್ಮ(42) ಎಂಬುವರನ್ನು ಕುಡುಗೋಲಿನಿಂದ ಕೊಚ್ಚಿ ಕೊಲೆ ಗೈದಿದ್ದಾರೆ. ಆ ಬಳಿಕ ಸೇಡಂ ಪೊಲೀಸ್ ಠಾಣೆಗೆ ತೆರಳಿ ಪೊಲೀಸರ ಮುಂದೆ ಶರಣಾಗಿರುವುದಾಗಿ ತಿಳಿದು ಬಂದಿದೆ. ಈ ಸಂಬಂಧ ಸೇಡಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/nepal-floods-death-toll-rises-to-112/ https://kannadanewsnow.com/kannada/rape-case-sit-raids-11-locations-belonging-to-munirathna-seizes-crucial-documents/
ಕಠ್ಮಂಡು: ನೇಪಾಳದಲ್ಲಿ ಪ್ರವಾಹಕ್ಕೆ ಸಂಬಂಧಿಸಿದ ಇತ್ತೀಚಿನ ನವೀಕರಣಗಳಲ್ಲಿ, ಸಾವಿನ ಸಂಖ್ಯೆ 112 ಕ್ಕೆ ಏರಿದೆ ಎಂದು ಸಶಸ್ತ್ರ ಪೊಲೀಸ್ ಪಡೆ ಮತ್ತು ನೇಪಾಳ ಪೊಲೀಸ್ ಡೇಟಾಬೇಸ್ ತಿಳಿಸಿದೆ. ದೇಶದಲ್ಲಿ ಧಾರಾಕಾರ ಮಳೆಯಿಂದಾಗಿ ಉಂಟಾದ ಭೂಕುಸಿತ ಮತ್ತು ಪ್ರವಾಹದಲ್ಲಿ ಡಜನ್ಗಟ್ಟಲೆ ಜನರು ಇನ್ನೂ ಕಾಣೆಯಾಗಿದ್ದಾರೆ. ಇದಕ್ಕೂ ಮುನ್ನ ಶನಿವಾರ, ನೇಪಾಳದಲ್ಲಿ ಕನಿಷ್ಠ 66 ಜನರು ಸಾವನ್ನಪ್ಪಿದ್ದಾರೆ ಮತ್ತು ಗಾಯಗೊಂಡಿದ್ದಾರೆ ಮತ್ತು 60 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನೇಪಾಳದ ಕೆಲವು ಭಾಗಗಳು ಗುರುವಾರದಿಂದ ಮಳೆಯಿಂದ ಜಲಾವೃತವಾಗಿದ್ದು, ವಿಪತ್ತು ಅಧಿಕಾರಿಗಳು ಹಠಾತ್ ಪ್ರವಾಹದ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ನಿರಂತರ ಮಳೆಯಿಂದಾಗಿ ಹಿಮಾಲಯನ್ ರಾಷ್ಟ್ರದಲ್ಲಿ ಪ್ರಾಣ ಕಳೆದುಕೊಂಡ 66 ಜನರಲ್ಲಿ 34 ಜನರು ಕಠ್ಮಂಡು ಕಣಿವೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ನೇಪಾಳ ಪೊಲೀಸ್ ಉಪ ವಕ್ತಾರ ಬಿಶ್ವೋ ಅಧಿಕಾರಿ ಶನಿವಾರ ತಿಳಿಸಿದ್ದಾರೆ. ಪ್ರವಾಹದಲ್ಲಿ 60 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಶನಿವಾರ ದೇಶಾದ್ಯಂತ ಒಟ್ಟು 79 ಜನರು ಕಾಣೆಯಾಗಿದ್ದು, ಕಠ್ಮಂಡು ಕಣಿವೆಯಲ್ಲಿ 16 ಜನರು ಕಾಣೆಯಾಗಿದ್ದಾರೆ.…
ಬೆಂಗಳೂರು: ಸಚಿವ ದಿನೇಶ್ ಗುಂಡೂರಾವ್ ಆಹಾರ ಗುಣಮಟ್ಟ ಕಾಪಾಡುವ ನಿಟ್ಟಿನಲ್ಲಿ ಸುರಕ್ಷತೆ ವಹಿಸುವಂತೆ ಸೂಚನೆಯನ್ನು ಆಹಾರ ಇಲಾಖೆಗೆ ನೀಡಿದ್ದರು. ಈ ಬೆನ್ನಲ್ಲೇ ಬೆಂಗಳೂರಿನ ಬೇಕರಿ ತಿನಿಸಿಗಳ ಮಾದರಿಯನ್ನು ಸಂಗ್ರಹಿಸಿ, ಪರೀಕ್ಷೆಗೆ ಕಳುಹಿಸಲಾಗಿತ್ತು. ಇಂತಹ ಬೇಕರಿ ಕೇಕ್ ಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿರುವಂತ ಶಾಕಿಂಗ್ ಮಾಹಿತಿ ರಿಪೋರ್ಟ್ ನಲ್ಲಿ ಬಹಿರಂಗಗೊಂಡಿದೆ. ಬೆಂಗಳೂರಿನ ಹಲವು ಬೇಕರಿಗಳಿಂದ ಬೇಕರಿ ಉತ್ಪನ್ನಗಳನ್ನು ಸಂಗ್ರಹಿಸಿದ್ದಂತ ಆಹಾರ ಮತ್ತು ಗುಣಮಟ್ಟ ಇಲಾಖೆಯು, ಅವುಗಳನ್ನು ಪರೀಕ್ಷೆಗಾಗಿ ಲ್ಯಾಬ್ ಗೆ ರವಾನಿಸಿತ್ತು. ಹೀಗೆ ಕಳುಹಿಸಲಾಗಿದ್ದಂತ ಮಾದರಿಯ 12 ಬೇಕರಿಗಳ ಕೇಕ್ ನಲ್ಲಿ ಮಾರಣಾಂತಿಕ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಬೇಕರಿ ಕೇಕ್ ಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳಿರುವಂತ ರೆಡ್ ವೆಲ್ ವೆಟ್, ಬ್ಲಾಕ್ ಫಾರೆಸ್ಟ್ ಪತ್ತೆಯಾಗಿದೆ. 12 ಮಾದರಿಗಳಲ್ಲಿ ಅಲೂನಾ ರೆಡ್, ನನ್ ಟೆಸ್ ಯೆಲ್ಲೋ ಕೂಡ ಪತ್ತೆಯಾಗಿದೆ. ಇನ್ನೂ ಕೃತಕ ಬಣ್ಣ ಬಳಕೆಯಿಂದಲೇ ಕ್ಯಾನ್ಸರ್ ಕಾರಕ ಅಂಶಗಳು ಬೇಕರಿ ಕೇಕುಗಳಲ್ಲಿ ಕಂಡು ಬಂದಿದ್ದಾಗಿ ಹೇಳಲಾಗುತ್ತಿದೆ. ಹೀಗಾಗಿ…
ಬೆಂಗಳೂರು: ದಿಢೀರ್ ಹೃದಯಾಘಾತದಿಂದ ಸಂಭವಿಸುವ ಸಾವುಗಳನ್ನು ತಪ್ಪಿಸುವ ಸಲುವಾಗಿ ರಾಜ್ಯ ಸರ್ಕಾರದಿಂದ ಜಾರಿಗೆ ತಂದಂತ ಯೋಜನೆಯಲ್ಲಿ ಡಾ. ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆಯೂ ಒಂದಾಗಿದೆ. ಇಂದಿನ ವಿಶ್ವ ಹೃದಯ ದಿನದಂದು ಮಹತ್ವದ ವಿಚಾರ ಎನ್ನುವಂತೆ ಈ ಯೋಜನೆಯಡಿ 240 ಜನರ ಬಾಳಿಗೆ ಬೆಳಕಾಗಿದೆ. ಹೌದು ಡಾ.ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆಯ ಅಡಿಯಲ್ಲಿ 7 ತಿಂಗಳಲ್ಲಿ ಗೋಲ್ಡನ್ ಹವರ್ ನಲ್ಲಿ 240 ಜೀವಗಳನ್ನು ರಕ್ಷಣೆ ಮಾಡುವ ಮೂಲಕ ಹೊಸ ದಾಖಲೆಯನ್ನೇ ರಾಜ್ಯ ಸರ್ಕಾರದ ಯೋಜನೆ ಬರೆದಿದೆ. ರಾಜ್ಯ ಸರ್ಕಾರ ಜಾರಿಗೊಳಿಸಿದಂತ ಡಾ.ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆಯ 2ನೇ ಹಂತಕ್ಕೆ ಮಾ.20, 2024ರಂದು ಚಾಲನೆ ನೀಡಿದ ನಂತ್ರ ಜೀವ ರಕ್ಷಕವಾಗಿರುವ ಟೆನೆಕ್ಷಪ್ಲೆಸ್ ಇಂಜೆಕ್ಷನ್ ಒದಗಿಸಲಾಗುತ್ತಿದೆ. 25 ಸಾವಿರ ರೂಪಾಯಿ ಮೊತ್ತದ ಚುಚ್ಚುಮದ್ದು ಹೃದಯಾಘಾತಕ್ಕೆ ಒಳಗಾದವರಿಗೆ ಉಚಿತವಾಗಿ ನೀಡಲಾಗುತ್ತಿದೆ. ಇದರಿಂದ ರೋಗಿಯ ಹೃದಯ ರಕ್ತನಾಳದಲ್ಲಿ ಹೆಪ್ಪುಗಟ್ಟಿರುವ ರಕ್ತ ತಿಳಿಗೊಂಡು, ಎದೆನೋವು ಕಡಿಮೆಯಾಗಿ ಪ್ರಾಣಾಪಾಯ ತಪ್ಪಲಿದೆ. ಆ ಬಳಿಕ…
ಹರಿಯಾಣ: ಕರ್ನಾಟಕದಲ್ಲಿನ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸೇರಿದಂತೆ ವಿಪಕ್ಷಗಳ ಆಡಳಿತದ ಸರ್ಕಾರಗಳ ವಿರುದ್ಧ ಪ್ರಧಾನಿ ಮೋದಿ ವಾಗ್ಧಾಳಿ ನಡೆಸಿದ್ದಾರೆ. ಕರ್ನಾಟಕದಲ್ಲಿ ನೂರಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೇ ಸಿದ್ಧರಾಮಯ್ಯ ಸರ್ಕಾರ ಮಾತ್ರ ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಗಂಭೀರ ಆರೋಪ ಮಾಡಿದ್ದಾರೆ. ಹರಿಯಾಣ ವಿಧಾನಸಭಾ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ಕರ್ನಾಟಕದಲ್ಲಿ ಪ್ರಸ್ತುತ ಕಾಂಗ್ರೆಸ್ ನ ಆಡಳಿತದಲ್ಲಿ ನೂರಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೇ ಕಾಂಗ್ರೆಸ್ ಪಕ್ಷ ರೈತರ ಜೀವನದ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಅವರು ಕೇವಲ ಸುಳ್ಳು ಭರವಸೆಗಳನ್ನು ನೀಡುತ್ತಾರೆ. ದ್ರೋಹ ಮಾಡುವ ಇತಿಹಾಸ ಹೊಂದಿದ್ದಾರೆ ಎಂಬುದಾಗಿ ವಾಗ್ಧಾಳಿ ನಡೆಸಿದರು. ಕಾಂಗ್ರೆಸ್ ಪಕ್ಷ ಎಂದಿಗೂ ರೈತರ ಸಮಸ್ಯೆಗಳನ್ನು ಪರಿಹರಿಸುವ ಬಗ್ಗೆ ಗಂಭೀರವಾಗಿಲ್ಲ. ಬಿಜೆಪಿ ಸರ್ಕಾರ ಆ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದರು. https://kannadanewsnow.com/kannada/6-killed-over-20-injured-in-truck-bus-collision-in-uttar-pradesh/ https://kannadanewsnow.com/kannada/rape-case-sit-raids-11-locations-belonging-to-munirathna-seizes-crucial-documents/
ಮೈಹಾರ್: ಮಧ್ಯಪ್ರದೇಶದ ಮೈಹಾರ್ ಜಿಲ್ಲೆಯಲ್ಲಿ ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 20 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲಾ ಕೇಂದ್ರದಿಂದ 25 ಕಿ.ಮೀ ದೂರದಲ್ಲಿರುವ ನಾದನ್ ದೆಹತ್ ಪೊಲೀಸ್ ಠಾಣೆಯ ಬಳಿ ಈ ಅಪಘಾತ ಸಂಭವಿಸಿದೆ. ಪೊಲೀಸರ ಪ್ರಕಾರ, ಪ್ರಯಾಗ್ರಾಜ್ನಿಂದ ನಾಗ್ಪುರಕ್ಕೆ ತೆರಳುತ್ತಿದ್ದ ಬಸ್ ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಲ್ಲು ತುಂಬಿದ ಡಂಪರ್ ಟ್ರಕ್ಗೆ ಡಿಕ್ಕಿ ಹೊಡೆದಿದೆ. ಗಾಯಗೊಂಡ ಆರು ಮಂದಿಯನ್ನು ಸತ್ನಾಗೆ ಕಳುಹಿಸಲಾಗಿದೆ ಗಾಯಗೊಂಡವರಲ್ಲಿ ಆರು ಜನರ ಸ್ಥಿತಿ ಗಂಭೀರವಾಗಿದೆ ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಸತ್ನಾಕ್ಕೆ ಕಳುಹಿಸಲಾಗಿದೆ ಎಂದು ಮೈಹಾರ್ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಅಗರ್ವಾಲ್ ತಿಳಿಸಿದ್ದಾರೆ. ಉಳಿದ ಗಾಯಾಳುಗಳು ಮೈಹಾರ್ ಮತ್ತು ಅಮರ್ಪಟಾನ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಅಪಘಾತದಲ್ಲಿ ಗಾಯಗೊಂಡ 17-20 ಜನರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಎಸ್ಪಿ ಅಗರ್ವಾಲ್…
ಬೆಂಗಳೂರು: ತೀವ್ರ ಕೂತೂಹಲ ಮೂಡಿಸಿದ್ದಂತ ಬಿಗ್ ಬಾಸ್ ಕನ್ನಡ 11 ಆವೃತ್ತಿಯು ಇಂದಿನಿಂದ ಕಲರ್ಸ್ ಕನ್ನಡದಲ್ಲಿ ಆರಂಭಗೊಳ್ಳಲಿದೆ. ಈ ಸ್ಪರ್ಧೆಯಲ್ಲಿ ಭಾಗಿಯಾಗುವಂತ ಸ್ಪರ್ಧಿಗಳ ಹೆಸರು ಕೂಡ ರಿವೀಲ್ ಆಗಿದ್ದು, ನಾಲ್ವರು ಹೆಸರು ಫೈನಲ್ ಆಗಿದೆ. ಆ ಬಗ್ಗೆ ಮುಂದೆ ಓದಿ. ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋಗಳಲ್ಲಿ ಒಂದಾದ ಬಿಗ್ ಬಾಸ್ ಕನ್ನಡ 11ರ ಆವೃತ್ತಿಗೆ ಕ್ಷಣಗಣನೆ ಆರಂಭವಾಗಿದೆ. ಇಂದು ಸಂಜೆ 6 ಗಂಟೆಗೆ ಕಲರ್ಸ್ ಕನ್ನಡ ಚಾನಲ್ ನಲ್ಲಿ ಬಿಗ್ ಬಾಸ್ ಹೊಸ ಆವೃತ್ತಿಗೆ ಚಾಲನೆ ದೊರೆಯಲಿದೆ. ಹತ್ತು ಸೀಸನ್ ಗಳಲ್ಲಿ ನಿರೂಪಣೆ ಮಾಡಿಕೊಂಡು ಬಂದಿರುವಂತ ನಟ ಕಿಚ್ಚ ಸುದೀಪ್ ನಿರೂಪಣೆ ಈ ಸೀಜನ್ ನಲ್ಲೂ ಮುಂದುವರೆಯಲಿದೆ. ಈ ಬಾರಿ 16 ಸ್ಪರ್ಧಿಗಳ ಕುರಿತಂತೆ ವೀಕ್ಷಕರಲ್ಲಿ ಕುತೂಹಲ ಹೆಚ್ಚಿದ್ದು, ಇದಕ್ಕೂ ಮುನ್ನಾ ರಾಜಾ ರಾಣಿ ಗ್ರ್ಯಾಂಡ್ ಫಿನಾಲೆಯಲ್ಲಿ ನಾಲ್ವರು ಸ್ಪರ್ಧಿಗಳ ಹೆಸರನ್ನು ರಿವೀಲ್ ಮಾಡಿ, ಘೋಷಿಸಲಾಗಿದೆ. ಇವರೇ ನೋಡಿ ದೊಡ್ಮನೆ ಪ್ರವೇಶಿಸುವಂತ ಐವರು ಸ್ಪರ್ಧಿಗಳು ಬಿಗ್ ಬಾಸ್ ಕನ್ನಡ 11ರ…
ಬೆಂಗಳೂರು: ಅತ್ಯಾಚಾರ ಪ್ರಕರಣ ಆರೋಪ ಎದುರಿಸುತ್ತಿರುವಂತ ಬಿಜೆಪಿ ಶಾಸಕ ಮುನಿರತ್ನಗೆ ಸೇರಿದಂತೆ 11 ಕಡೆಗಳಲ್ಲಿ ಎಸ್ಐಟಿ ದಾಳಿ ನಡೆಸಿದೆ. ಈ ದಾಳಿಯ ವೇಳೆಯಲ್ಲಿ ಪೆನ್ ಡ್ರೈವ್, ಹಾರ್ಡ್ ಡಿಸ್ಕ್ ಸೇರಿದಂತೆ ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಶನಿವಾರದಂದು ವಿಶೇಷ ತನಿಖಾ ತಂಡದಿಂದ ಶಾಸಕ ಮುನಿರತ್ನಗೆ ಸೇರಿದಂತೆ 11 ಕಡೆಯಲ್ಲಿ ಅತ್ಯಾಚಾರ ಪ್ರಕರಣ ಸಂಬಂಧ ದಾಳಿಯನ್ನು ನಡೆಸಲಾಗಿದೆ. ಈ ದಾಳಿಯ ವೇಳೆಯಲ್ಲಿ ಶಾಸಕರ ನಿವಾಸದಲ್ಲಿದ್ದಂತ ಹಾರ್ಡ್ ಡಿಸ್ಕ್, ಪೆನ್ ಡ್ರೈವ್, 2 ಲ್ಯಾಪ್ ಟಾಪ್, ಸಿಸಿಟಿವಿ ಡಿವಿಆರ್ ಮತ್ತು ಶಾಸಕರ ಆಪ್ತರ ಮನೆಗಳಲ್ಲಿ ಪೆನ್ ಡ್ರೈವ್ ಸೇರಿದಂತೆ ಕೆಲ ದಾಖಲೆಗಳನ್ನು ಜಪ್ತಿ ಮಾಡಲಾಗಿದೆ. ಇನ್ನೂ ಪೆನ್ ಡ್ರೈವ್ ನಲ್ಲಿ ಇರುವಂತ ಮಾಹಿತಿ ಬಗ್ಗೆ ಕುತೂಹಲ ಮೂಡಿದ್ದು, ಅವುಗಳನ್ನು ಸೈಬರ್ ತಜ್ಞರ ಪರಿಶೀಲನೆಗೆ ಎಸ್ಐಟಿ ಕಳುಹಿಸಿದೆ. ಅದರಲ್ಲಿ ಯಾವೆಲ್ಲಾ ದಾಖಲೆಗಳು, ವೀಡಿಯೋಗಳಿದ್ದಾವೆ ಎಂಬುದು ಪರಿಶೀಲನೆಯ ನಂತ್ರ ತಿಳಿಯಲಿದೆ.













