Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಮೊಳಕಾಲ್ಮೂರು ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದವರು ಡಾ.ಬಿ ಯೋಗೇಶ್ ಬಾಬು. ಅವರನ್ನು ಮನವೊಲಿಸಿದ್ದಂತ ಕಾಂಗ್ರೆಸ್ ಪಕ್ಷದ ನಾಯಕರು ಎನ್.ವೈ ಗೋಪಾಲಕೃಷ್ಣ ಅವರಿಗೆ ಕೊನೆಯ ಕ್ಷಣದಲ್ಲಿ ಟಿಕೆಟ್ ನೀಡಿದ್ದರು. ಇಂತಹ ಡಾ.ಬಿ ಯೋಗೇಶ್ ಬಾಬು ಅವರನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕರ್ನಾಟಕ ದ್ರಾಕ್ಷಾರಸ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶಿದ್ದಾರೆ. ಈ ಕುರಿತಂತೆ ಸರ್ಕಾರದ ಕಾರ್ಯದರ್ಶಿಯಾಗಿರುವಂತ ರಂದೀಪ್.ಡಿ ಅವರು ಟಿಪ್ಪಣಿ ಹೊರಡಿಸಿದ್ದು, ವಿವಿಧ ನಿಗಮ/ಮಂಡಳಿ/ಪ್ರಾಧಿಕಾರಗಳ ಅಧ್ಯಕ್ಷರು/ಉಪಾಧ್ಯಕ್ಷರ ನೇಮಕಾತಿ ಆದೇಶಗಳನ್ನು ಸಂಬಂಧಪಟ್ಟ ಆಡಳಿತ ಇಲಾಖೆಗಳು ಹೊರಡಿಸಬೇಕಾಗಿರುತ್ತದೆ. ಅದರಂತೆ, ಸದರಿಯವರು ನೇಮಕಗೊಂಡ ದಿನಾಂಕದಿಂದ ಮುಂದಿನ ಎರಡು ವರ್ಷಗಳ ಅವಧಿಯವರೆಗೆ ಕಾರ್ಯನಿರ್ವಹಿಸುವಂತೆ ತಕ್ಷಣದಿಂದ ಜಾರಿಗೆ ಬರುವಂತೆ ಸದರಿ ನೇಮಕಾತಿ ಆದೇಶಗಳನ್ನು ಹೊರಡಿಸಲು ಸಂಬಂಧಪಟ್ಟ ಆಡಳಿತ ಇಲಾಖೆಗಳಿಗೆ ಈ ಮೂಲಕ ಸೂಚಿಸಿದ್ದಾರೆ. ಈಗ ಬಿಡುಗಡೆಯಾಗಿರುವಂತ 44 ನಿಗಮ ಮಂಡಳಿಯ ಅಧ್ಯಕ್ಷರು, ಉಪಾಧ್ಯಕ್ಷರ ನೇಮಕಾತಿ ಆದೇಶದ ಪಟ್ಟಿಯಲ್ಲಿ, ಕಾಂಗ್ರೆಸ್ ಪಕ್ಷದ ಯುವ ಮುಖಂಡ ಡಾ.ಬಿ ಯೋಗೇಶ್ ಬಾಬು ಅವರನ್ನು ಕರ್ನಾಟಕ ದ್ರಾಕ್ಷಾರಸ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಕ…
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೊನೆಗೂ ಕಾರ್ಯಕರ್ತರ ಒತ್ತಡಕ್ಕೆ ಮಣಿದು, 44 ನಿಗಮ ಮಂಡಳಿಯ ಸ್ಥಾನಗಳಿಗೆ ಅಧ್ಯಕ್ಷರು, ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಸಂಬಂಧ ಟಿಪ್ಪಣಿ ಹೊರಡಿಸಿರುವಂತ ಅವರು, ವಿವಿಧ ನಿಗಮ/ಮಂಡಳಿ/ಪ್ರಾಧಿಕಾರಗಳ ಅಧ್ಯಕ್ಷರು/ಉಪಾಧ್ಯಕ್ಷರ ನೇಮಕಾತಿ ಆದೇಶಗಳನ್ನು ಸಂಬಂಧಪಟ್ಟ ಆಡಳಿತ ಇಲಾಖೆಗಳು ಹೊರಡಿಸಬೇಕಾಗಿರುತ್ತದೆ. ಅದರಂತೆ, ಸದರಿಯವರು ನೇಮಕಗೊಂಡ ದಿನಾಂಕದಿಂದ ಮುಂದಿನ ಎರಡು ವರ್ಷಗಳ ಅವಧಿಯವರೆಗೆ ಕಾರ್ಯನಿರ್ವಹಿಸುವಂತೆ ತಕ್ಷಣದಿಂದ ಜಾರಿಗೆ ಬರುವಂತೆ ಸದರಿ ನೇಮಕಾತಿ ಆದೇಶಗಳನ್ನು ಹೊರಡಿಸಲು ಸಂಬಂಧಪಟ್ಟ ಆಡಳಿತ ಇಲಾಖೆಗಳಿಗೆ ಈ ಮೂಲಕ ಸೂಚಿಸಿದ್ದಾರೆ. ಇಲ್ಲಿದೆ 44 ನಿಗಮ-ಮಂಡಳಿ ಅಧ್ಯಕ್ಷರು, ಉಪಾಧ್ಯಕ್ಷರ ಪಟ್ಟಿ ಕಾಂತಾ ನಾಯ್ಕ್ – ಅಧ್ಯಕ್ಷರು, ಕೌಶಲ್ಯಾಭಿವೃದ್ಧಿ ನಿಗಮ ವಿನೋದ್ ಕೆ ಅಸೂಟಿ- ಉಪಾಧ್ಯಕ್ಷರು, ಕರ್ನಾಟಕ ಕ್ರೀಡಾ ಪ್ರಾಧಿಕಾರ ಬಿ.ಹೆಚ್ ಹರೀಶ್ – ಅಧ್ಯಕ್ಷರು, ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ಡಾ.ಅಂಶುಮಂತ್ – ಅಧ್ಯಕ್ಷರು, ಭದ್ರಾ ಕಾಡಾ, ಶಿವಮೊಗ್ಗ ಆಂಜನೇಯಲು ಜೆ.ಎಸ್ – ಅಧ್ಯಕ್ಷರು, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ ಡಾ.ಬಿ ಯೋಗೇಶ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೊನೆಗೂ ಕಾಂಗ್ರೆಸ್ ಕಾರ್ಯಕರ್ತರ ಬೇಡಿಕೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. 40 ನಿಗಮ ಮಂಡಳಿ ಸ್ಥಾನಗಳಿಗೆ ಕಾರ್ಯಕರ್ತರಿಗೆ ನೀಡುವುದಕ್ಕೆ ಸಿಎಂ ಸಿದ್ಧರಾಮಯ್ಯ ಅನುಮೋದನೆ ನೀಡಿದ್ದಾರೆ. ಈ ಮೂಲಕ ಕಾಂಗ್ರೆಸ್ ಕಾರ್ಯಕರ್ತರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಈ ಕುರಿತಂತೆ ನಿನ್ನೆ ಮಾಹಿತಿ ಹಂಚಿಕೊಂಡಿರುವಂತ ಸಿಎಂ ಕಚೇರಿಯು 44 ಮಂದಿ ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿಯನ್ನು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದಿಸಿದ್ದಾರೆ. ಈ ಪಟ್ಟಿ ಆಯಾ ಇಲಾಖೆಗಳಿಗೆ ರವಾನೆಯಾಗಿದೆ. ನಾಳೆ ಆಯಾ ಇಲಾಖೆಗಳಿಂದ ಪ್ರತಿಯೊಬ್ಬರಿಗೂ ವೈಯುಕ್ತಿಕವಾಗಿ ನೇಮಕ ಆದೇಶ ರವಾನೆಯಾಗಲಿದೆ ಎಂದಿತ್ತು. ಇದೀಗ 44 ಕಾಂಗ್ರೆಸ್ ಕಾರ್ಯಕರ್ತರಿಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನವನ್ನು ನೀಡಿ, ಸಿಎಂ ಸಿದ್ಧರಾಮಯ್ಯ ಅವರು ಟಿಪ್ಪಣಿಯನ್ನು ಹೊರಡಿಸಿದ್ದಾರೆ. ಆಯಾ ಇಲಾಖೆಯಿಂದ ಸಂಬಂಧಿಸಿದವರಿಗೆ ಮಾಹಿತಿ ನೀಡುವಂತೆಯೂ ತಿಳಿಸಿದ್ದಾರೆ. ಇಲ್ಲಿದೆ 44 ಕಾಂಗ್ರೆಸ್ ಕಾರ್ಯಕರ್ತರಿಗೆ ನೀಡಲಾಗಿರುವಂತ ಅಧ್ಯಕ್ಷ, ಉಪಾಧ್ಯಕ್ಷರ ಪಟ್ಟಿ
ಮಹಾರಾಷ್ಟ್ರ: ಪ್ರಧಾನಿ ನರೇಂದ್ರ ಮೋದಿಯವರು 21,000 ಕೋಟಿ ರೂಪಾಯಿ ಮೌಲ್ಯದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM Kisan Samman Nidhi Yojana -PM-Kisan) ಯೋಜನೆಯ 16 ನೇ ಕಂತನ್ನು ಮಹಾರಾಷ್ಟ್ರದ ಯವತ್ಮಾಲ್ನಿಂದ ಸಾರ್ವಜನಿಕ ಸಭೆಯಲ್ಲಿ ಬಿಡುಗಡೆ ಮಾಡಿದರು. ಹಾಗಾದರೇ ಅನ್ನದಾತರೇ ನಿಮ್ಮ ಖಾತೆಗೆ ಪಿಎಂ-ಕಿಸಾನ್ ಯೋಜನೆ ಹಣ ಬಂದಿದ್ಯಾ ಅಂತ ಚೆಕ್ ಮಾಡೋ ಬಗ್ಗೆ ಮುಂದೆ ಓದಿ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM Kisan Samman Nidhi Yojana -PM-Kisan) ನ 16 ನೇ ಕಂತು ಇಂದು ಬಿಡುಗಡೆ ಮಾಡಲಾಗಿದೆ. 2,000 ರೂ.ಗಳ ಈ ಕಂತು, ಸಣ್ಣ ಮತ್ತು ಅತಿಸಣ್ಣ ರೈತರನ್ನು ಬೆಂಬಲಿಸುವ ಸರ್ಕಾರದ ನಿರಂತರ ಪ್ರಯತ್ನಗಳಲ್ಲಿ ಮತ್ತೊಂದು ಹೆಜ್ಜೆಯಾಗಿದೆ. ಪಿಎಂ-ಕಿಸಾನ್ ಯೋಜನೆಯ ಪ್ರಮುಖ ವಿವರಗಳು ಪಿಎಂ-ಕಿಸಾನ್ ಯೋಜನೆಯಡಿ, ಅರ್ಹ ರೈತರಿಗೆ ವಾರ್ಷಿಕವಾಗಿ 6,000 ರೂ.ಗಳ ಆರ್ಥಿಕ ನೆರವು ನೀಡಲಾಗುತ್ತದೆ, ಪ್ರತಿ ನಾಲ್ಕು ತಿಂಗಳಿಗೊಮ್ಮೆ ತಲಾ 2,000 ರೂ.ಗಳ ಮೂರು ಕಂತುಗಳಲ್ಲಿ ವಿತರಿಸಲಾಗುತ್ತದೆ. ನೇರ ಲಾಭ…
ಬೆಂಗಳೂರು: ಬಿಬಿಎಂಪಿಯ ವ್ಯಾಪ್ತಿಯಲ್ಲಿರುವ ವಾಣಿಜ್ಯ ಉದ್ದಿಮೆಗಳ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಭಾಷೆಯನ್ನು ಪ್ರದರ್ಶಿಸುವುವದಕ್ಕೆ ಇಂದು ಸಂಜೆಯವರೆಗೆ ಡೆಡ್ ಲೈನ್ ನೀಡಲಾಗಿದೆ. ಒಂದು ವೇಳೆ ಫೆ.29ರ ಇಂದು ಶೇ.60ರಷ್ಟು ಕನ್ನಡವಿರುವಂತ ನಾಮಫಲಕಗಳನ್ನು ಹಾಕದೇ ಇದ್ದರೇ, ಅಂತಹ ಮಳಿಗೆಗೆ ಬೀಗಮುದ್ರೆ, ಲೈಸೆನ್ಸ್ ರದ್ದುಗೊಳಿಸುವುದಾಗಿ ಬಿಬಿಎಂಪಿ ಎಚ್ಚರಿಕೆ ನೀಡಿದೆ. ಈ ಕುರಿತಂತೆ ಬಿಬಿಎಂಪಿಯ ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಸುರೋಳ್ಕರ್ ವಿಕಾಸ್ ಕಿಶೋರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಮತ್ತು ಮಂಜೂರಾತಿಯೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ವಾಣಿಜ್ಯ ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್‌ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್‌ಗಳು ಮುಂತಾದವುಗಳು ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ. 60 ರಷ್ಟು ಪ್ರದರ್ಶಿಸಲಾಗಿದೆ ಮತ್ತು ಕನ್ನಡ ಭಾಷೆಯು ನಾಮಫಲಕದ ಮೇಲ್ಬಾಗದಲ್ಲಿ ಪ್ರದರ್ಶಿತವಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಉಲ್ಲೇಖಿತ ವಿಶೇಷ ರಾಜ್ಯ ಪತ್ರಿಕೆ ಅಧಿಸೂಚನಾ ಪತ್ರದಲ್ಲಿ ಸೂಚಿಸಲಾಗಿದೆ ಎಂದಿದ್ದಾರೆ. ಅದರಂತೆ, ಈ ಹಿಂದೆ ಮಾನ್ಯ ಮುಖ್ಯ…
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೊನೆಗೂ ಕಾಂಗ್ರೆಸ್ ಕಾರ್ಯಕರ್ತರ ಬೇಡಿಕೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. 40 ನಿಗಮ ಮಂಡಳಿ ಸ್ಥಾನಗಳಿಗೆ ಕಾರ್ಯಕರ್ತರಿಗೆ ನೀಡುವುದಕ್ಕೆ ಸಿಎಂ ಸಿದ್ಧರಾಮಯ್ಯ ಅನುಮೋದನೆ ನೀಡಿದ್ದಾರೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಸಿಎಂ ಕಚೇರಿಯು 44 ಮಂದಿ ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿಯನ್ನು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದಿಸಿದ್ದಾರೆ. ಈ ಪಟ್ಟಿ ಆಯಾ ಇಲಾಖೆಗಳಿಗೆ ರವಾನೆಯಾಗಿದೆ. ನಾಳೆ ಆಯಾ ಇಲಾಖೆಗಳಿಂದ ಪ್ರತಿಯೊಬ್ಬರಿಗೂ ವೈಯುಕ್ತಿಕವಾಗಿ ನೇಮಕ ಆದೇಶ ರವಾನೆಯಾಗಲಿದೆ ಎಂದಿದೆ. ಈಗಾಗಲೇ ಸಿಎಂ ಸಿದ್ಧರಾಮಯ್ಯ ಶಾಸಕರಿಗೆ ನಿಗಮ-ಮಂಡಳಿ ಸ್ಥಾನ ನೀಡಿ ಆದೇಶಿಸಿದ್ದರು. ಆ ಬಳಿಕ ಕಾರ್ಯಕರ್ತರಿಗೂ ನೀಡುವುದಾಗಿ ತಿಳಿಸಿದ್ದರು. ಅದರಂತೆ ಇದೀಗ 40 ನಿಗಮ-ಮಂಡಳಿ ಸ್ಥಾನಗಳನ್ನು ಕಾರ್ಯಕರ್ತರಿಗೆ ನೀಡುವುದಕ್ಕೆ ಸಿಎಂ ಸಿದ್ಧರಾಮಯ್ಯ ಅನುಮೋದನೆ ನೀಡಿದ್ದಾರೆ. ಈ ಮೂಲಕ ಕಾಂಗ್ರೆಸ್ ಕಾರ್ಯಕರ್ತರಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಬೆಂಗಳೂರು: ರಾಜ್ಯಾಧ್ಯಂತ ಸರ್ಕಾರಿ ಆಸ್ಪತ್ರೆಯಿಂದ 200 ಮೀಟರ್ ಅಂತರದಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಚಿಕಿತ್ಸಾ ಪ್ರಯೋಗಾಲಯಗಳನ್ನು ಬಂದ್ ಮಾಡುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಅಲ್ಲದೇ ಸರ್ಕಾರಿ ಆಸ್ಪತ್ರೆಯಿಂದ 200 ಮೀಟರ್ ದೂರದೊಳಗೆ ಯಾವುದೇ ಹೊಸ ಖಾಸಗಿ ಚಿಕಿತ್ಸಾ ಪ್ರಯೋಗಾಲಯಕ್ಕೆ ಅನುಮತಿ ನೀಡದಂತೆ ಆದೇಶಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಅದರಲ್ಲಿ ಕೆ.ಪಿ.ಎಂ.ಇ ತಿದ್ದುಪಡಿ ಅಧಿನಿಯಮ, 2017 ರ ಸೆಕ್ಷನ್ 6 ರನ್ವಯ, ದಿನಾಂಕ. 04-04-2019 ರಿಂದ ಜಾರಿಗೆ ಬರುವಂತೆ, ಸರ್ಕಾರಿ ಆಸ್ಪತ್ರೆಯಿಂದ / ರಾಜ್ಯ ಸರ್ಕಾರ / ಕೇಂದ್ರ ಸರ್ಕಾರ / ಸ್ಥಳೀಯ ನಿಕಾಯಗಳು ಒಡೆತನ ಹೊಂದಿರುವ ನಿಯಂತ್ರಣ ಹೊಂದಿರುವ ಸೊಸೈಟಿ ಅಥವಾ ನ್ಯಾಸ / ಸ್ವಾಯತ್ತ ಸಂಸ್ಥೆಯಿಂದ ಪವರ್ತಿಸಲಾದ ಅಥವಾ ನಿರ್ವಹಿಸಲಾದ ಆಸ್ಪತ್ರೆಯಿಂದ 200 ಮೀಟರ್ ದೂರದೊಳಗೆ ಯಾವುದೇ ಹೊಸ ಖಾಸಗಿ ಚಿಕಿತ್ಸಾ ಪ್ರಯೋಗಾಲಯಕ್ಕೆ ಅನುಮತಿಯನ್ನು ನೀಡತಕ್ಕದ್ದಲ್ಲ ಎಂದು ತಿಳಿಸಿದ್ದಾರೆ. ಅದಾಗ್ಯೂ, ಕೆಲವು ಅನಧಿಕೃತ ಖಾಸಗಿ ಚಿಕಿತ್ಸಾ ಪ್ರಯೋಗಾಲಯಗಳು, ಸರ್ಕಾರಿ ಆಸ್ಪತ್ರೆಯಿಂದ 200…
ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದಂತ ಜಾತಿಗಣತಿ ವರದಿಯನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದಂತ ಜಯಪ್ರಕಾಶ್ ಹೆಗಡೆಯವರು ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಸಲ್ಲಿಸಲಿದ್ದಾರೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಅವರು ಇಂದು ಜಾತಿಗಣತಿ ವರದಿಯನ್ನು ಸಲ್ಲಿಸೋದಕ್ಕೆ ಕೊನೆಯ ದಿನವಾಗಿದೆ. ಈ ಹಿನ್ನಲೆಯಲ್ಲಿ ಸಿಎಂ ಸಿದ್ಧರಾಮಯ್ಯ ಅವರಿಗೆ ಇಂದು ಜಾತಿಗಣತಿ ವರದಿಯನ್ನು ಸಲ್ಲಿಸಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ. ಲೋಕಸಭಾ ಚುನಾವಣೆಗೆ ಮುನ್ನವೇ ರಾಜ್ಯದಲ್ಲಿ ಜಾತಿಗಣತಿ ವರದಿ ಪ್ರಕರಗೊಳ್ಳುವ ಸಾಧ್ಯತೆ ಇದೆ. ಜಾತಿ ಗಣತಿಯ ವರದಿಯ ಆಧಾರದ ಮೇಲೆ ಲೋಕಸಭಾ ಚುನಾವಣೆಯನ್ನು ಎದುರಿಸೋದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎನ್ನಲಾಗುತ್ತಿದೆ.
ಬೆಂಗಳೂರು: ಕಳೆದ ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದ್ದ ಶುಚಿ ಯೋಜನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮರುಚಾಲನೆ ನೀಡಿದ್ದಾರೆ. 10 ರಿಂದ 18 ವರ್ಷದ ಹೆಣ್ಣುಮಕ್ಕಳಿಗೆ ಸ್ಯಾನಿಟರಿ ನ್ಯಾಪ್‌ಕಿನ್ ಉಚಿತವಾಗಿ ನೀಡುವ ಮಹತ್ವದ ಯೋಜನೆಗೆ ಬೆಂಗಳೂರಿನಲ್ಲಿ ಬುಧವಾರದಂದು ಚಾಲನೆ ನೀಡಲಾಯಿತು. ಜ್ಞಾನಜ್ಯೋತಿ ಸಭಾಂಗಣದಲ್ಲಿ ಹೆಣ್ಣುಮಕ್ಕಳು ಆರೋಗ್ಯ ಸಚಿವರೊಂದಿಗೆ ಜ್ಯೋತಿ ಬೆಳಗಿಸಿ, ಯೋಜನೆಗೆ ಮರುಚಾಲನೆ ನೀಡುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ರಾಜ್ಯದ ಸರ್ಕಾರಿ, ಅನುದಾನಿತ ಶಾಲಾ ಕಾಲೇಜುಗಳಲ್ಲಿಯ ಸುಮಾರು 19 ಲಕ್ಷ ಹೆಣ್ಣುಮಕ್ಕಳಿಗೆ ಉಚಿತವಾಗಿ ಸ್ಯಾನಿಟರಿ ನ್ಯಾಪ್‌ಕಿನ್ ಗಳ ವಿತರಣೆ ಬುಧವಾರದಿಂದ ಆರಂಭಿಸಲಾಗಿದೆ. ಆರೋಗ್ಯ ಇಲಾಖೆ ನೇರವಾಗಿ ಶಾಲೆಗಳಿಗೆ ಸ್ಯಾನಿಟರಿ ಪ್ಯಾಡ್ ಗಳನ್ನ ತಲುಪಿಸಲಿದ್ದು, ಶಾಲೆಯ ಮುಖ್ಯಸ್ಥರು ಹೆಣ್ಣುಮಕ್ಕಳಿಗೆ ಕಿಟ್ ಗಳನ್ನ ವಿತರಣೆ ಮಾಡಲಿದ್ದಾರೆ. ಒಂದು ಪ್ಯಾಕ್ ನಲ್ಲಿ 10 ಸ್ಯಾನಿಟರಿ ನ್ಯಾಪ್‌ಕಿನ್ ಗಳಿದ್ದು, ಒಂದು ವರ್ಷಕ್ಕೆ ಸಾಕಾಗುವಷ್ಟು ಸ್ಯಾನಿಟರಿ ನ್ಯಾಪ್‌ಕಿನ್ ಗಳಿರುವ ಕಿಟ್ ಗಳನ್ನ ಒಟ್ಟಿಗೆ ವಿದ್ಯಾರ್ಥಿನಿಯರಿಗೆ ನೀಡಲಾಗುವುದು. ಕಾರ್ಯಕ್ರಮಕ್ಕೆ ಅರ್ಥಪೂರ್ಣ ಚಾಲನೆ ನೀಡಿದ ಬಳಿಕ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಹೆಣ್ಣುಮಕ್ಕಳ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಮಹತ್ವದ ಕ್ರಮವನ್ನು ವಹಿಸಲಾಗಿದೆ. ಇದರ ಭಾಗವಾಗಿ ಅನುಷ್ಠಾನ ಸಮಿತಿಯ ಅಧ್ಯಕ್ಷರನ್ನಾಗಿ ಹೆಚ್.ಎಂ ರೇವಣ್ಣ ಅವರನ್ನು ನೇಮಕ ಮಾಡಲಾಗಿದೆ. ಇದಲ್ಲದೇ ಉಪಾಧ್ಯಕ್ಷರಾಗಿ ನಾಲ್ವರನ್ನು ನೇಮಿಸಿ, ಸಿಎಂ ಸಿದ್ಧರಾಮಯ್ಯ ಆದೇಶಿಸಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಕಚೇರಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಸರ್ಕಾರದ ಐತಿಹಾಸಿಕ ಐದು ಗ್ಯಾರಂಟಿ ಸ್ಕೀಂ ಗಳ ಅನುಷ್ಠಾನ ಸಮಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸಮಿತಿಗೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದಿಸಿದ್ದಾರೆ ಎಂದಿದೆ. ಮಾಜಿ ಸಚಿವ ಹೆಚ್.ಎಂ.ರೇವಣ್ಣ ಅವರು ಅಧ್ಯಕ್ಷರಾಗಿ ಕ್ಯಾಬಿನೆಟ್ ದರ್ಜೆ ಹೊಂದಿದ್ದಾರೆ. ಉಪಾಧ್ಯಕ್ಷರಾಗಿ ಮೆಹರೂಜ್ ಖಾನ್, ಪುಷ್ಪ ಅಮರನಾಥ್, ಎಸ್.ಆರ್.ಪಾಟೀಲ್ ಮತ್ತು ಸೂರಜ್ ಹೆಗ್ಡೆ ಅವರ ಹೆಸರನ್ನು ಸಿಎಂ ಸಿದ್ಧರಾಮಯ್ಯ ಅನುಮೋದಿಸಿದ್ದಾರೆ ಎಂಬುದಾಗಿ ತಿಳಿಸಿದೆ. https://kannadanewsnow.com/kannada/cm-siddaramaiah-gives-green-signal-to-40-congress-workers-to-be-given-corporation-board-seats/ https://kannadanewsnow.com/kannada/state-human-rights-commission-issues-notice-to-bmrcl-for-insulting-farmer-in-metro/