Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿರುವ ಪ್ರಕರಣಗಳಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡ ಮನೀಶ್ ಸಿಸೋಡಿಯಾ ಅವರಿಗೆ ದೆಹಲಿ ಹೈಕೋರ್ಟ್ ಮಂಗಳವಾರ ಜಾಮೀನು ನಿರಾಕರಿಸಿದೆ. ಮನಿ ಲಾಂಡರಿಂಗ್ ತಡೆ ಕಾಯ್ದೆಯ (ಪಿಎಂಎಲ್ಎ) ಸೆಕ್ಷನ್ 3 ರ ಅಡಿಯಲ್ಲಿ ಪ್ರಾಸಿಕ್ಯೂಷನ್ ಅಕ್ರಮ ಹಣ ವರ್ಗಾವಣೆಯ ಪ್ರಕರಣವನ್ನು ಮೇಲ್ನೋಟಕ್ಕೆ ಮಾಡಿದೆ ಎಂದು ಗಮನಿಸಿದ ನ್ಯಾಯಮೂರ್ತಿ ಸ್ವರಣ ಕಾಂತಾ ಶರ್ಮಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದರು. ಸಿಸೋಡಿಯಾ ಅವರ ನಡವಳಿಕೆಯು “ಪ್ರಜಾಪ್ರಭುತ್ವದ ತತ್ವಗಳಿಗೆ ದೊಡ್ಡ ದ್ರೋಹವಾಗಿದೆ” ಎಂದು ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಾಲಯ ಹೇಳಿದೆ. ಎಲೆಕ್ಟ್ರಾನಿಕ್ ಪುರಾವೆಗಳು ಸೇರಿದಂತೆ ನಿರ್ಣಾಯಕ ಪುರಾವೆಗಳನ್ನು ನಾಶಪಡಿಸುವ ಕೃತ್ಯಗಳಲ್ಲಿ ಸಿಸೋಡಿಯಾ ಭಾಗಿಯಾಗಿದ್ದಾರೆ ಎಂದು ನ್ಯಾಯಾಲಯ ಗಮನಿಸಿದೆ. ಈ ನಿಟ್ಟಿನಲ್ಲಿ, ಏಕಸದಸ್ಯ ಪೀಠವು ಹಾನಿಯಾಗಿದೆ ಎಂದು ಹೇಳಲಾದ ಎರಡು ಮೊಬೈಲ್ ಫೋನ್ ಗಳನ್ನು ಉಲ್ಲೇಖಿಸಿದೆ. ಸಿಸೋಡಿಯಾ ದೆಹಲಿ ಸರ್ಕಾರದಲ್ಲಿ ಪ್ರಮುಖ ಸ್ಥಾನವನ್ನು ಹೊಂದಿದ್ದಾರೆ. ಅನೇಕ ಖಾತೆಗಳನ್ನು ನಿರ್ವಹಿಸುತ್ತಿದ್ದಾರೆ.…
ಧಾರವಾಡ: ಬೆಳೆ ಹಾನಿ, ಬೆಳೆ ಪರಿಹಾರ ಜಮೆ ಅಗದೆ ಇರುವ ರೈತರು ತಾವು ಖಾತೆ ಹೊಂದಿರುವ ಬ್ಯಾಂಕಗೆ ಭೇಟಿ ನೀಡಿ, ಖಾತೆ ಚಾಲ್ತಿ ಇರುವ ಬಗ್ಗೆ, ಕೆವೈಸಿ ಅಪಡೆಟ್ ಆಗಿರುವ ಬಗ್ಗೆ ಮತ್ತು ಪ್ರೂಟ್ಸ್ ಸಂಖ್ಯೆ ಹೊಂದಿರುವ ಬಗ್ಗೆ ಪರಿಶೀಲಿಸಿ, ಖಾತರಿ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಅಕೌಂಟ್‍ಗಳನ್ನು ನಿಬರ್ಂಧಿಸಿರುವುದು ಅಥವಾ ಫ್ರೀಜ್ ಮಾಡಿರುವುದು ಹಾಗೂ ಯಾವ ರೈತರ ಖಾತೆಯನ್ನು ಮುಚ್ಚಲಾಗಿದೆಯೋ ಅಂತಹ ಫಲಾನುಭವಿಗಳು ಬ್ಯಾಂಕ್‍ಗೆ ಹೋಗಿ ಅಕೌಂಟ್ ರಿ ಓಪನ್ ಮಾಡಿಸಬೇಕು. ಫ್ರೂಟ್ಸ್ ಅಪ್‍ಡೇಟ್‍ನಲ್ಲಿ ಆಧಾರ್ ಹೆಸರು ಹೊಂದಿಕೆಯಾಗುತ್ತಿಲ್ಲ ಆ ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ಹೆಸರು ಅಪ್ಡೇಟ ಮಾಡಿಸಬೇಕು. ಆಧಾರ್ ಅನ್ನು ಬ್ಯಾಂಕ್‍ನೊಂದಿಗೆ ಸೀಡ್, ಖಾತೆಗೆ ಆಧಾರ್ ಮ್ಯಾಪ್, ಕುಸಿದ ಪಾವತಿ ಹಾಗೂ ಎನ್.ಪಿ.ಸಿ.ಐ ಸೀಡಿಂಗ್ ಸಮಸ್ಯೆ ಇರುವಂತ ಫಲಾನುಭವಿಗಳು ಬ್ಯಾಂಕ್‍ಗೆ ಹೋಗಿ ಎನ್.ಪಿ.ಸಿ.ಐ (ಓPಅI) ಮಾಡಿಸಬೇಕು ಎಂದು ಅವರು ತಿಳಿಸಿದ್ದಾರೆ. ಅಮಾನ್ಯ ಸ್ವೀಕೃತ ಐ.ಎಫ್.ಎಸ್.ಸಿ ಕೋಡ್ ಹೊಂದಿರುವ ಫಲಾನುಭವಿಗಳು…
ಬಳ್ಳಾರಿ: ಪ್ರಸಕ್ತ ಸಾಲಿನ ಸರ್ಕಾರಿ ಹಾಗೂ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ವಿವಿಧ ವೃತ್ತಿಗಳಿಗೆ ಪ್ರವೇಶಕ್ಕಾಗಿ ಮೆರಿಟ್-ಕಮ್-ರಿಸರ್ವೇಶನ್ ಆಧಾರದ ಮೇಲೆ ಬಳ್ಳಾರಿ ಜಿಲ್ಲೆಯಲ್ಲಿ ಬರುವ ಸಂಸ್ಥೆಗಳಲ್ಲಿ ಆನ್‍ಲೈನ್ ಮೂಲಕ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ. ಎಸ್ಸೆಸ್ಸೆಲ್ಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಹೈಕ(371ಜೆ) ಪ್ರಮಾಣಪತ್ರ ಮತ್ತು ಟಿಸಿ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಕನ್ನಡ ಹಾಗೂ ಗ್ರಾಮೀಣ ಪ್ರಮಾಣ ಪತ್ರಗಳು ಹಾಗೂ ಇನ್ನೀತರ ದಾಖಲೆಗಳೊಂದಿಗೆ ಎಸ್ಸೆಸ್ಸೆಲ್ಸಿ ಉತ್ತೀರ್ಣರಾದ ಅರ್ಹ ಆಸಕ್ತ ಅಭ್ಯರ್ಥಿಗಳು ಬಳ್ಳಾರಿಯ ಕಂಟೋನ್ಮೆಂಟ್ ಪ್ರದೇಶದ ರೇಡಿಯೋ ಪಾರ್ಕ್ ಹತ್ತಿರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಜೂ.03 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಟಾಟಾ ಉದ್ಯೋಗ ಯೋಜನೆಯಡಿ ಅನುಷ್ಠಾನಗೊಳಿಸಿರುವ 03 ಮತ್ತು 10 ದೀರ್ಘಾವಧಿಯ ವೃತ್ತಿಗಳಿಗೆ ಆನ್‍ಲೈನ್‍ನಲ್ಲ್ಲಿ ಮೊದಲ ಆದ್ಯತೆ ಮೇರೆಗೆ ನೇರವಾಗಿ ಪ್ರವೇಶ ಮಾಡಿಕೊಳ್ಳಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಬಳ್ಳಾರಿ ಹಾಗೂ ಹತ್ತಿರದ ಸರ್ಕಾರಿ ಐಟಿಐ ಗೆ ಭೇಟಿ ನೀಡಿ…
ಬಳ್ಳಾರಿ: ಸಿದ್ಧ ಉಡುಪು ಸಂಶೋಧನೆ ತರಬೇತಿ ವಿನ್ಯಾಸ ಮತ್ತು ಅಭಿವೃದ್ಧಿ ಕೇಂದ್ರ ಸಂಸ್ಥೆಯು 2023-24 ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಥಮ ಬಿಎಸ್ಸಿ (ಗಾರ್ಮೆಂಟ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಾಲಜಿ) ವೃತ್ತಿಪರ ಪದವಿ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ. ವೃತ್ತಿಪರ ಪದವಿ ಕೋರ್ಸ್ ಪ್ರವೇಶಾತಿಗೆ ಯಾವುದೇ ದ್ವಿತೀಯ ಪಿಯುಸಿ (ಕಲೆ, ವಾಣಿಜ್ಯ, ವಿಜ್ಞಾನ, ಶಿಕ್ಷಣ ಹಾಗೂ ಯಾವುದೇ ಡಿಪ್ಲೋಮಾ) ವಿಭಾಗದಲ್ಲಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳು ಅರ್ಹರಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ನಗರದ ನಲ್ಲಚೆರುವು ಮೊದಲನೇಯ ರೈಲ್ವೇ ಗೇಟ್ ಹತ್ತಿರ, ಜಿಲ್ಲಾ ಕ್ರೀಡಾಂಗಣ ಮೈದಾನ ರಸ್ತೆಯ ಜಿಆರ್‍ಟಿಡಿಸಿ ಕಾಲೇಜಿನ ಪ್ರಾಂಶುಪಾಲರ ಕಚೇರಿ ಹಾಗೂ ಬೋಧಕ ಸಿಬ್ಬಂದಿಗಳ ಮೊ.9741264655, 9844862576, 9844474235, 8123126127 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು : ರಾಜ್ಯಾದ್ಯಂತ ಮುಂಗಾರು ಕೃಷಿ ಚಟುವಟಿಕೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಬೀಜ ಮತ್ತು ಗೊಬ್ಬರಕ್ಕೆ ಕೊರತೆಯಾಗದಂತೆ ನೋಡಿಕೊಳ್ಳಿ ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಬೀಜ ಮತ್ತು ಗೊಬ್ಬರಕ್ಕಾಗಿ ಹಾವೇರಿಯಲ್ಲಿ ರೈತರು ಸಾಲುಗಟ್ಟಿ ನಿಂತಿದ್ದ ವಿಷಯ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿಗಳು ಕೃಷಿ ಸಚಿವ ಚೆಲುವರಾಯಸ್ವಾಮಿ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರು ಕೃಷಿ ಚಟುವಟಿಕೆ ಆರಂಭಿಸಿದ್ದಾರೆ. ಆದ್ದರಿಂದ ರೈತರು ಬೀಜ, ಗೊಬ್ಬರಕ್ಕೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಬಾರದು ಎಂದು ಹೇಳಿದರು. ತಕ್ಷಣ ಇಲಾಖೆಯ ಅಧಿಕಾರಿಗಳ ಸಭೆ ಕರೆದು ಬೀಜ, ಗೊಬ್ಬರದ ದಾಸ್ತಾನು ಕುರಿತು ಮಾಹಿತಿ ಪಡೆದುಕೊಳ್ಳಿ ಎಂದು ಸಿಎಂ ತಿಳಿಸಿದರು. https://kannadanewsnow.com/kannada/get-ready-for-local-body-polls-kpcc-president-dk-shivakumar-to-party-workers-shivakumars-call/ https://kannadanewsnow.com/kannada/cwma-directs-karnataka-to-release-2-5-tmc-of-water-to-tamil-nadu/
ಬೆಂಗಳೂರು : “ಶೀಘ್ರದಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದು, ಜನರ ಕೈಗೆ ಅಧಿಕಾರ ಹೋಗಲಿದೆ. ಹೀಗಾಗಿ ಪಕ್ಷದ ನಾಯಕರು, ಕಾರ್ಯಕರ್ತರು ಈ ಚುನಾವಣೆಗಳಿಗೆ ಸಿದ್ಧತೆ ಮಾಡಿಕೊಳ್ಳಬೇಕು” ಎಂದು ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ನಡೆದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ವೇಳೆ ಅವರು ಹೇಳಿದ್ದಿಷ್ಟು: “ಪಂಡಿತ್ ನೆಹರು, ರಾಜಗೋಪಾಲಾಚಾರಿ, ಕೆಂಗಲ್ ಹನುಮಂತಯ್ಯ, ಬಿ.ಡಿ.ಜತ್ತಿ, ಮಲ್ಲಿಕಾರ್ಜುನ ಖರ್ಗೆ ಅವರು ಸೇರಿದಂತೆ ಅನೇಕ ನಾಯಕರು ಸ್ಥಳೀಯ ಸಂಸ್ಥೆಗಳ ಚುನಾವಣೆ ಮೂಲಕ ರಾಷ್ಟ್ರಮಟ್ಟಕ್ಕೆ ಬೆಳೆದವರು. ಸಂಘಟನೆ ಬಲಗೊಳಿಸಬೇಕು. ಪಕ್ಷದ ಎಲ್ಲಾ ಘಟಕಗಳನ್ನು ವಿಸರ್ಜಿಸಿ ಹೊಸದಾಗಿ ರಚಿಸುವ ಸಮಯ ಬಂದಿದೆ. ಮೊದಲು ಪಕ್ಷದ ಕೆಲಸ ಮಾಡಬೇಕು. ಕೇವಲ ಗುರುತಿನ ಚೀಟಿಗೋಸ್ಕರ ಬರುವವರು ಮನೆಯಲ್ಲಿಯೇ ಇರಿ. ಖಾದಿ ಬಟ್ಟೆ ಹಾಕಿಕೊಂಡು, ಕಾರು ಇಟ್ಟುಕೊಂಡು ಎಂಎಲ್ ಸಿ ಮಾಡಿ, ಅಧ್ಯಕ್ಷನನ್ನಾಗಿ ಮಾಡಿ ಎಂದರೆ ಅದು ಇಲ್ಲಿ ನಡೆಯುವುದಿಲ್ಲ. ಕೆಲಸ ಮಾಡುವವರಿಗೆ ಆದ್ಯತೆ. ನಿಮ್ಮ…
ಬೆಂಗಳೂರು: ಹೊರಗುತ್ತಿಗೆ ನೇಮಕಾತಿ ವಿಚಾರದಲ್ಲಿ ದಲಿತರಿಗೆ ವಂಚನೆ ಮಾಡುವ ಮೀಸಲಾತಿಯನ್ನು ರಾಜ್ಯದ ಕಾಂಗ್ರೆಸ್ ಸರಕಾರ ಅಂಗೀಕರಿಸಿದೆ ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪರಿಶಿಷ್ಟ ಜಾತಿ, ವರ್ಗಗಳು ಮತ್ತು ಮಹಿಳಾ ಮೀಸಲಾತಿಗೆ ಅನುಗುಣವಾಗಿ ರಾಜ್ಯ ಸರಕಾರವು ಗುತ್ತಿಗೆ ಆಧಾರದಲ್ಲಿ ನೇಮಕಾತಿಯಲ್ಲಿ ಮಾಡುವುದರಲ್ಲೂ ಕೂಡ ಮೀಸಲಾತಿ ನೀಡಿರುವುದಾಗಿ ತಿಳಿಸಿದ್ದು ಸ್ವಾಗತಾರ್ಹ. 2022-23ರಲ್ಲಿ ನಮ್ಮ ಸರಕಾರ ಇದ್ದಾಗ ಬಸವರಾಜ ಬೊಮ್ಮಾಯಿಯವರು ಈ ಕುರಿತು ತೀರ್ಮಾನ ಮಾಡಿದ್ದರು. ಈ ಕುರಿತು ಪರಿಶಿಷ್ಟ ಜಾತಿ, ವರ್ಗದವರು ಬಹುದಿನಗಳ ಕಾಲ ಹೋರಾಟ ಮಾಡಿದ್ದರು. ಮೇಲ್ಮನೆಯಲ್ಲಿ ನಾನು ಈ ಕುರಿತು ಪ್ರಶ್ನಿಸಿದ್ದೆ. ಹೊರಗುತ್ತಿಗೆ ನೀಡುವಾಗ ಪರಿಶಿಷ್ಟ ಜಾತಿ, ವರ್ಗಗಳಿಗೆ ಅನ್ಯಾಯ ಆಗುತ್ತಿದೆ. ಅದರಲ್ಲೂ ಮೀಸಲಾತಿ ಕೊಡಲು ಕೇಳಿದ್ದೆ. ಆಗಲೇ ಸರಕಾರ ಒಪ್ಪಿಗೆ ಕೊಟ್ಟಿತ್ತು ಎಂದು ನೆನಪಿಸಿದರು. ಕಾಂಗ್ರೆಸ್ ಸರಕಾರ ಬಂದು ಒಂದು ವರ್ಷ ಕಳೆದರೂ, ನಾವು ಒತ್ತಡ ಹೇರಿದ್ದರೂ…
ಬೆಂಗಳೂರು : ರಾಜ್ಯದ ವಸತಿ ಶಿಕ್ಷಣ ಶಾಲೆ, ಕಾಲೇಜುಗಳಲ್ಲಿ 6ನೇ ತರಗತಿ ಪ್ರವೇಶಾತಿಗಾಗಿ ವಿಶೇಷ ಮೀಸಲಾತಿಯನ್ನು ನೀಡಲಾಗುತ್ತಿದೆ. ಈ ಕುರಿತಂತೆ ರಾಜ್ಯ ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ 826 ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ ಡಾ|| ಬಿ.ಆರ್. ಅಂಬೇಡ್ಕರ್/ ಅಟಲ್ ಬಿಹಾರಿ ವಾಜಪೇಯಿ/ಶ್ರೀಮತಿ ಇಂದಿರಾಗಾಂಧಿ /ಏಕಲವ್ಯ ಮಾದರಿ ವಸತಿ ಶಾಲೆ/ಕಾಲೇಜುಗಳ ಪೈಕಿ 807 ವಸತಿ ಶಾಲೆಗಳಲ್ಲಿ 25%ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ಮಕ್ಕಳು, ಹೆಚ್‍ಐವಿಗೆ ತುತ್ತಾದ ಪೋಷಕರ ಮಕ್ಕಳು, ಒಬ್ಬ ಪೋಷಕರನ್ನು ಮಾತ್ರ ಹೊಂದಿರುವ ಅಥವಾ ಅನಾಥ ಮಕ್ಕಳುಗಳಿಗೆ ಶೇ 10% ರಷ್ಟು ಮೀಸಲಾತಿಯನ್ನು ನಿಗದಿಪಡಿಸಿ 6ನೇ ತರಗತಿ ಪ್ರವೇಶ ಕಲ್ಪಿಸಲು ಅನುಮೋದನೆ ನೀಡಿ ಸರ್ಕಾರದ ಆದೇಶಿಸಿದೆ ಎಂದು ತಿಳಿಸಿದ್ದಾರೆ. ಇನ್ನೂ ರಾಜ್ಯದ ವಿವಿಧ ಜಿಲ್ಲೆಗಳ ವಿಕಲಚೇತನರು ಇದರ ಸದುಪಯೋಗ ಪಡೆದುಕೊಳ್ಳುವಂತೆ ರಾಜ್ಯ ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ರಾಜ್ಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. https://kannadanewsnow.com/kannada/the-pen-drive-was-the-first-to-reach-dk-it-was-driver-karthik-hdk-explosive-bomb/ https://kannadanewsnow.com/kannada/cwma-directs-karnataka-to-release-2-5-tmc-of-water-to-tamil-nadu/
ಬೆಂಗಳೂರು : “ಕುಮಾರಸ್ವಾಮಿ ಅವರು ಕಿಂಗ್ ಮೇಕರ್ ಆಗುತ್ತೇನೆ ಎಂದುಕೊಂಡಿದ್ದರು. ನನ್ನ ಅಧ್ಯಕ್ಷತೆಗೆ ಜನರು 136 ಸ್ಥಾನ, ಅವರಿಗೆ 19 ಸ್ಥಾನ ನೀಡಿದ್ದಾರೆ. ಈಗ ಅಧಿಕಾರ ಸಿಗದೆ ಕೈ, ಕೈ ಹೊಸಕಿಕೊಳ್ಳುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವ್ಯಂಗ್ಯವಾಡಿದರು. ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದದಲ್ಲಿ ಡಿ.ಕೆ.ಶಿವಕುಮಾರ್ ರಾಜಿನಾಮೆ ನೀಡಲಿ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆಗೆ ಅವರು ತಿರುಗೇಟು ನೀಡಿದ ಅವರು, “ಅಸೂಯೆಗೆ ಎಲ್ಲಾದರೂ ಮದ್ದಿದೆಯೇ? ಶಕ್ತಿ ಕಳೆದುಕೊಂಡಿದ್ದೇವೆ ಎಂದು ಕುಮಾರಸ್ವಾಮಿ ಅವರು ಬಿಜೆಪಿ ಜೊತೆ ಸೇರಿಕೊಂಡಿದ್ದಾರೆ. ಅವರು ಏನು ಬೇಕಾದರೂ ಮಾತನಾಡಿಕೊಳ್ಳಲಿ. ನಾನು ರಾಜೀನಾಮೆ ಕೊಡಬೇಕು ಎಂದು ಅವರು ಆಸೆ ಪಡುವುದನ್ನು ನಾನು ತಪ್ಪು ಎಂದು ಹೇಳಲು ಆಗುತ್ತದೆಯೇ?” ಎಂದರು. ಎಂಎಲ್ ಸಿ ಚುನಾವಣೆ ಬಗ್ಗೆ ಕೇಳಿದಾಗ “ಮೊದಲು ಶಿಕ್ಷಕ, ಪದವೀದರ ಕ್ಷೇತ್ರದ ಚುನಾವಣೆ ಮುಗಿಯಲಿ ನಂತರ ಇದರ ಬಗ್ಗೆ ಕೆಲಸ ಪ್ರಾರಂಭ ಮಾಡುತ್ತೇವೆ” ಎಂದರು. ಇದೇ ವೇಳೆ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಮಂಜುನಾಥ್ ಗೌಡ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ರಕ್ತದಾನ ಮಾಡಿದ…
ಚಿತ್ರದುರ್ಗ: ನಿತ್ಯ ಯೋಗ ಮಾಡುವವರಿಗೆ ಯಾವುದೇ ರೋಗ ಬರುವುದಿಲ್ಲವೆಂದು ಬಸವೇಶ್ವರ ಆಸ್ಪತ್ರೆಯ ವ್ಯವಸ್ಥಾಪಕರಾದ ಸತ್ಯನಾರಾಯಣ್ ಹೇಳಿದರು. ಚಿತ್ರದುರ್ಗದ ಐಯುಡಿಪಿ ಬಡಾವಣೆಯ ನಿಸರ್ಗ ಯೋಗ,ಕ್ರೀಡಾ ಮತ್ತು ಸಾಂಸ್ಕೃತಿಕ ಕೇಂದ್ರವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿದ ಅವರು, ಚಿತ್ರದುರ್ಗ ನಗರದ ಹೊರವಲಯದಲ್ಲಿರುವ ಜಿಸಿಬಿ ಬಸಣ್ಣಅವರ ನರ್ಸರಿಯಲ್ಲಿ ನಡೆದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಮಾತನಾಡಿದರು. ಕಳೆದ ಹತ್ತು ವರ್ಷಗಳ ಹಿಂದೆ ತಾವು ಸಹ ದೈತ್ಯ ದೇಹವನ್ನು ಹೊಂದಿದ್ದು,ನಿರಂತರ ವ್ಯಾಯಾಮ, ವಾಕಿಂಗ್ ಹಾಗು ಆಹಾರ ಬಳಕೆಯಲ್ಲಿ ನಿಯಮವನ್ನು ಪಾಲಿಸುವ ಮೂಲಕ ದೇಹದ ತೂಕವನ್ನು ಇಳಿಸಿದ್ದೇನೆ.ಅಂದು ದಡೂತಿ ದೇಹದಿಂದ ತುಂಭಾ ಹಿಂಸೆ ಅನುಭವಿಸಿದ್ದೆನು. ಆಗ ಸ್ವಯಂ ನಿರ್ಧಾರದಿಂದ ವ್ಯಾಯಾಮ ಹಾಗು ಆಹಾರದಲ್ಲಿ ಕಠಿಣ ಪಾಲನೆ ಮಾಡುವ ಮೂಲಕ ತಮ್ಮ ಎತ್ತರಕ್ಕೆ ತಕ್ಕಂತೆ ತೂಕವನ್ನು ಮಿತವಾಗಿಸುವಲ್ಲಿ ಯಶಸ್ವಿಯಾಗಿದ್ದೇನೆ.ಹೀಗಾಗಿ ನನ್ನ ಸಾಧನೆಯ ಬಗ್ಹೆ ನನಗೆ ಹೆಮ್ಮೆ ಇದೆ ಎಂದು ಸಂತಸ ವ್ಯಕ್ತಪಡಿಸಿದರು. ಇನ್ನು ಇದೇ ವೇಳೆ ಮಾತನಾಡಿದ ಯೋಗ ಕೇಂದ್ರದ ಯೋಗಗುರುಗಳಾದ ಶಿವಲಿಂಗಪ್ಪ ಅವರು,ಸತತ ಹತ್ತುವರ್ಷಗಳ ಪರಿಶ್ರಮದಿಂದ ನಮ್ಮ ಯೋಗ ಕೇಂದ್ರ…