Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ತಂದೆ ಕೇಂದ್ರ ಸಚಿವರಾದ ಬಳಿಕ, ತೆರವಾದಂತ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಸ್ಪರ್ಧಿಸೋದು ಫಿಕ್ಸ್ ಎನ್ನಲಾಗುತ್ತಿದೆ. ಇಂದು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಸುಳಿವು ನೀಡಿರುವಂತ ನಿಖಿಲ್ ಕುಮಾರ್ ಅವರು, ಚನ್ನಪಟ್ಟಣದ ಉಪ ಚುನಾವಣೆಯಲ್ಲಿ ಸ್ಪರ್ಧೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು; ಅಭ್ಯರ್ಥಿ ಯಾರು ಆಗಬೇಕೆಂದು ವರಿಷ್ಠರು ನಿರ್ಧಾರ ಮಾಡುತ್ತಾರೆ. ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ರಾಜ್ಯ, ರಾಷ್ಟ್ರೀಯ ನಾಯಕರು ಕೂತು ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದರು. ಎರಡೂ ಪಕ್ಷಗಳ ನಾಯಕರ ಅಭಿಪ್ರಾಯ ಪಡೆದು ಅಂತಿಮವಾಗಿ ಆ ವರದಿಯನ್ನು ವರಿಷ್ಠರಿಗೆ ಸಲ್ಲಿಕೆ ಮಾಡುತ್ತೇವೆ. ಸದ್ಯಕ್ಕೆ ಅಲ್ಲಿ ನನ್ನ ಸ್ಪರ್ಧೆ ಚರ್ಚೆ ಅಪ್ರಸ್ತುತ. ಮಾಜಿ ಸಚಿವರಾದ ಸಿ.ಪಿ.ಯೋಗೇಶ್ವರ್ ಕೂಡ ಮೈತ್ರಿ ಅಭ್ಯರ್ಥಿ ಗೆಲುವಿಗೆ ಕಾರಣರಾಗಿದ್ದಾರೆ. ಹೀಗಾಗಿ ಅಂತಿಮವಾಗಿ ಅಭ್ಯರ್ಥಿ ಯಾರಾಗಬೇಕೆಂದು ಎರಡು ಪಕ್ಷಗಳ ವರಿಷ್ಠರು ನಿರ್ಧಾರ ಮಾಡುತ್ತಾರೆ ಎಂದು ನಿಖಿಲ್ ಅವರು ತಿಳಿಸಿದರು. https://kannadanewsnow.com/kannada/court-issues-non-bailable-warrant-against-former-cm-bs-yediyurappa/ https://kannadanewsnow.com/kannada/good-news-for-untrained-state-government-primary-school-teachers-state-govt-orders-pay-scale/
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿಕೊಂಡು ಬಂದಿದ್ದಂತ ದರ್ಶನ್ ಅಂಡ್ ಗ್ಯಾಂಗ್, ಆತನ ಮೇಲೆ ಭೀಕರವಾಗಿ ಹಲ್ಲೆ ಮಾಡಿ ಹತ್ಯೆ ಮಾಡಲಾಗಿತ್ತು. ಇದು ಯಾವುದೇ ಸಿನಿಮಾಗೂ ಕಡಿಮೆಯಿಲ್ಲ ಎನ್ನಲಾಗಿತ್ತು. ಹೀಗಾಗಿಯೇ ದರ್ಶನ್ ಅಂಡ್ ಗ್ಯಾಂಗ್ ಅರೆಸ್ಟ್ ಎಂಬ ಟೈಟಲ್ ನಡಿಯಲ್ಲೇ ಚಿತ್ರವನ್ನು ಮಾಡೋ ಸುಳಿವನ್ನು ನಿರ್ದೇಶಕ ರಾಮ್ ಗೋಪಾಲ್ ವರ್ಮಾ ನೀಡಿದ್ದಾರೆ. ನಟ ದರ್ಶನ್ ಅಂಡ್ ಗ್ಯಾಂಗ್ ನಡೆಸಿದಂತ ರೇಣುಕಾಸ್ವಾಮಿ ಹತ್ಯೆ ಪ್ರಕರಣ ದಿನಕ್ಕೊಂದು ತಿರುಪು ಪಡೆಯುತ್ತಿದೆ. ಇಂದು ಪ್ರಕರಣ ಸಂಬಂಧ ಸ್ಪೋಟಕ ಮಾಹಿತಿ ಹೊರಬಿದ್ದಿದ್ದು, ರೇಣುಕಾಸ್ವಾಮಿ ಮರ್ಮಾಂಗಕ್ಕೆ ಒದ್ದಿದ್ದೇ ನಟ ದರ್ಶನ್. ಆ ಕಾರಣಕ್ಕೇ ರೇಣುಕಾಸ್ವಾಮಿ ಶೆಡ್ ನಲ್ಲೇ ಸಾವನ್ನಪ್ಪಿರೋದಾಗಿ ಹೇಳಲಾಗುತ್ತಿತ್ತು. ಇದೇ ಸಂದರ್ಭದಲ್ಲಿ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಎಕ್ಸ್ ನಲ್ಲಿ ಪೋಸ್ಟ್ ಒಂದು ಮಾಡಿದ್ದು, ಅದರಲ್ಲಿ ಒಬ್ಬ ಸ್ಟಾರ್ ತನ್ನ ವೈಯಕ್ತಿಕ ಜೀವನದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದ ಇನ್ನೊಬ್ಬ ಡೈ ಹಾರ್ಡ್ ಅಭಿಮಾನಿಯನ್ನು ಕೊಲ್ಲಲು ಒಬ್ಬ ಡೈ ಹಾರ್ಡ್ ಫ್ಯಾನ್ ಅನ್ನು ಬಳಸುತ್ತಿರುವುದು ಸ್ಟಾರ್…
ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿದ್ದಂತ ಪೋಕ್ಸೋ ಕೇಸಲ್ಲಿ ಸಿಐಡಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಈ ಬೆನ್ನಲ್ಲೇ ಕೋರ್ಟ್ ನಿಂದ ಬಿಎಸ್ ಯಡಿಯೂರಪ್ಪ ಅವರಿಗೆ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿರೋದಾಗಿ ತಿಳಿದು ಬಂದಿದೆ. ಪೋಕ್ಸ್ ಕೇಸ್ ನಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಬಂಧನದ ಭೀತಿ ಎದುರಾಗಿದೆ. ಬೆಂಗಳೂರಿನ 1ನೇ ತ್ವರಿತ ನ್ಯಾಯಾಲಯವು ಇಂದು ಅವರ ವಿರುದ್ಧ ಜಾಮೀನು ರಹಿತ ಬಂಧನದ ವಾರಂಟ್ ಜಾರಿಗೊಳಿಸಿದೆ. ಮತ್ತೊಂದೆಡೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಸಿಐಡಿ ಪೊಲೀಸರು ಪೋಕ್ಸೋ ಕೇಸ್ ನಲ್ಲಿ ಅಗತ್ಯ ಬಿದ್ದರೇ ಯಾವುದೇ ಸಂದರ್ಭದಲ್ಲಿ ಬಂಧಿಸಬಹುದು ಅಂತ ತಿಳಿಸಿದ್ದರು. ಈ ಬೆನ್ನಲ್ಲೇ ಕೋರ್ಟ್ ನಿಂದ ಯಡಿಯೂರಪ್ಪಗೆ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿಗೊಳಿಸಲಾಗಿದೆ. https://kannadanewsnow.com/kannada/good-news-for-untrained-state-government-primary-school-teachers-state-govt-orders-pay-scale/ https://kannadanewsnow.com/kannada/school-roof-collapses-in-raichur-several-students-injured/
ನವದೆಹಲಿ: ನೀಟ್-ಯುಜಿ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪಗಳನ್ನು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ನಿರಾಕರಿಸಿದ್ದಾರೆ. ಅಲ್ಲದೇ ಗ್ರೇಸ್ ಅಂಕ ನೀಡಲಾಗುವುದು ಅಂತ ಘೋಷಣೆ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಸಚಿವರು, ಪರೀಕ್ಷೆಯ ಸಮಯದಲ್ಲಿ ಕಳೆದುಹೋದ ಸಮಯವನ್ನು ಸರಿದೂಗಿಸಲು ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು. 13 ಭಾಷೆಗಳಲ್ಲಿ ನಡೆಯುವ ಪರೀಕ್ಷೆಗಳಿಗೆ ಸುಮಾರು 4,500 ಕೇಂದ್ರಗಳಿವೆ. ಈ ಬಾರಿ ಪರೀಕ್ಷೆ ನಡೆದಾಗ 4500 ಕೇಂದ್ರಗಳ ಪೈಕಿ 6 ಕೇಂದ್ರಗಳಲ್ಲಿ ತಪ್ಪು ಪ್ರಶ್ನೆ ಪತ್ರಿಕೆಗಳನ್ನು ಕಳುಹಿಸಲಾಗಿದೆ. ಸರಿಯಾದ ಪ್ರಶ್ನೆ ಪತ್ರಿಕೆಯನ್ನು ನಂತರ ಒದಗಿಸಲಾಯಿತು ಆದರೆ ಇದು ಸ್ವಲ್ಪ ಸಮಯ ತೆಗೆದುಕೊಂಡಿತು” ಎಂದು ಪ್ರಧಾನ್ ಸುದ್ದಿಗಾರರಿಗೆ ತಿಳಿಸಿದರು. “ಈ ಕೇಂದ್ರಗಳಲ್ಲಿ ಸುಮಾರು 1,563 ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಬರೆಯುತ್ತಿದ್ದರು ಮತ್ತು ಸಮಯ ನಷ್ಟವನ್ನು ಎದುರಿಸಬೇಕಾಯಿತು. ಮರುಪರೀಕ್ಷೆಯ ಬದಲು ಗ್ರೇಸ್ ಅಂಕಗಳನ್ನು ನೀಡಲಾಗುತ್ತದೆ ಎಂದು ಸುಪ್ರೀಂ ಕೋರ್ಟ್ ನ ಸ್ಥಾಯಿ ಆದೇಶದಲ್ಲಿ ತಿಳಿಸಲಾಗಿದೆ. ಎನ್ಟಿಎ ತಜ್ಞರ ಸಮಿತಿಯನ್ನು ರಚಿಸಿತು ಮತ್ತು…
ಬೆಂಗಳೂರು: ನಗರದಲ್ಲಿ ಅನಧಿಕೃತ ಜಾಹೀರಾತು ಮುಕ್ತ ಅಭಿಯಾನಕ್ಕೆ ಉತ್ತಮ ಸ್ಪಂದನೆ ದೊರೆತಿದೆ. ಜೂನ್.1ರಿಂದ ಜೂನ್.12ರವರೆಗೆ 1259 ಫ್ಲೆಕ್ಸ್, ಬ್ಯಾನರ್, ಎಲ್ಇಡಿ, ಹೋರ್ಡಿಂಗ್ ಗಳ ತೆರವು ಮಾಡಲಾಗಿದೆ. ಈ ಸಂಬಂಧ 12 ಎಫ್ಐಆರ್ ಕೂಡ ದಾಖಲಾಗಿದೆ. ನಗರದಾದ್ಯಂತ ಅನಧಿಕೃತವಾಗಿ ಅಳವಡಿಸಿರುವ ಫ್ಲೆಕ್ಸ್, ಬ್ಯಾನರ್ ಗಳ ತೆರವು ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ. ಈ ಸಂಬಂಧ ಉಪ ಮುಖ್ಯಮಂತ್ರಿಗಳು ಹಾಗೂ ನಗರಾಭಿವೃದ್ಧಿ ಸಚಿವರಾದ ಡಿ.ಕೆ ಶಿವಕುಮಾರ್ ರವರು ಕೂಡಾ ನಗರದಲ್ಲಿ ಯಾವುದೇ ಅನಧಿಕೃತ ಜಾಹೀರಾತುಗಳು ಅಳವಡಿಸಿದಂತೆ ಸೂಕ್ತ ಕ್ರಮ ವಹಿಸಲು ಸೂಚನೆ ನೀಡಿರುತ್ತಾರೆ. ಅದರಂತೆ, ದಿನಾಂಕ: 01-06-2024 ರಿಂದ ಇದುವರೆಗೆ 1259 ಫ್ಲೆಕ್ಸ್, ಬ್ಯಾನರ್, ಎಲ್.ಇ.ಡಿ ಹಾಗೂ ಹೋರ್ಡಿಂಗ್ಸ್ ಗಳನ್ನು ತೆರವುಗೊಳಿಸಲಾಗಿದೆ. ಪೊಲೀಸ್ ಠಾಣೆಯಲ್ಲಿ 27 ದೂರುಗಳನ್ನು ದಾಖಲಿಸಿದ್ದು, ಅದರಲ್ಲಿ 12 ಎಫ್.ಐ.ಆರ್ ಗಳನ್ನು ದಾಖಲಿಸಲಾಗಿದೆ. ಅನಧಿಕೃತ ಜಾಹೀರಾತುಗಳ ಮಾಹಿತಿ ನೀಡಿ ಪಾಲಿಕೆಯ ವ್ಯಾಪ್ತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ “ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಹೊರಾಂಗಣ ಜಾಹೀರಾತು ಫಲಕ ಮತ್ತು ಸಾರ್ವಜನಿಕ ಸಂದೇಶದ ಉಪ ವಿಧಿಗಳು-2018″ ರಲ್ಲಿ ಅಂಗಡಿ…
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ (ಜೆ & ಕೆ) ಹೆಚ್ಚುತ್ತಿರುವ ಪರಿಸ್ಥಿತಿಗೆ ಪ್ರತಿಕ್ರಿಯೆಯಾಗಿ ಪ್ರಧಾನಿ ನರೇಂದ್ರ ಮೋದಿ ನಿರ್ಣಾಯಕ ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ಪ್ರಧಾನಿ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಪರಿಶೀಲನಾ ಸಭೆಯ ನಂತರ, ಅವರು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್ಎಸ್ಎ) ಮತ್ತು ಇತರ ಉನ್ನತ ಅಧಿಕಾರಿಗಳಿಗೆ ರಾಷ್ಟ್ರದ ಭಯೋತ್ಪಾದನಾ ನಿಗ್ರಹ ಸಾಮರ್ಥ್ಯಗಳ ಸಂಪೂರ್ಣ ಸಜ್ಜುಗೊಳಿಸುವಂತೆ ಸೂಚನೆ ನೀಡಿದರು. ಭದ್ರತಾ ಪಡೆಗಳನ್ನು ತಕ್ಷಣ ನಿಯೋಜಿಸುವ ಮತ್ತು ಈ ಪ್ರದೇಶದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ತೀವ್ರಗೊಳಿಸುವ ಬಗ್ಗೆ ಚರ್ಚಿಸಲು ಪ್ರಧಾನಿ ಮೋದಿ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ತೊಡಗಿಸಿಕೊಂಡರು. ಹೆಚ್ಚುವರಿಯಾಗಿ, ಚಾಲ್ತಿಯಲ್ಲಿರುವ ಪರಿಸ್ಥಿತಿಗಳ ಬೆಳಕಿನಲ್ಲಿ ಮೌಲ್ಯಮಾಪನ ಮತ್ತು ಕಾರ್ಯತಂತ್ರವನ್ನು ರೂಪಿಸಲು ಅವರು ಜೆ &ಕೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರೊಂದಿಗೆ ಸಂವಹನ ನಡೆಸಿದರು. ಅಂದಹಾಗೇ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಜಮ್ಮು ಮತ್ತು ಕಾಶ್ಮೀರದ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದರು. ರಾಷ್ಟ್ರೀಯ ಭದ್ರತಾ ಸಲಹೆಗಾರ…
ಮಂಡ್ಯ: ಜಿಲ್ಲೆಯಲ್ಲಿ ಇಂದು ಈಜಲು ಕಾವೇರಿ ನದಿಗೆ ಇಳಿದಿದ್ದಂತ ಇಬ್ಬರು ಯುವಕರು ನೀರುಪಾಲಾಗಿರುವಂತ ಘಟನೆ, ಶ್ರೀರಂಗಪಟ್ಟಣದ ಗಂಜಾಮ್ ಸಮೀಪದ ನಿಮಿಷಾಂಭ ದೇಗುಲದ ಬಳಿ ನಡೆದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗ ಪಟ್ಟಣದ ನಿಮಿಷಾಂಭ ದೇಗುಲದ ಬಳಿಯಲ್ಲಿ ಕಾವೇರಿ ನದಿಯಲ್ಲಿ ಈಜಲು ತೆರಳಿದ್ದಂತ ಇಬ್ಬರು ಯುವಕರು ನೀರು ಪಾಲಾಗಿರೋದಾಗಿ ತಿಳಿದು ಬಂದಿದೆ. ಕಾವೇರಿ ನದಿಯಲ್ಲಿ ಈಜಲು ಹೋಗಿ ನೀರುಪಾಲಾದವರನ್ನು ವಿಶಾಲ್(19), ರೋಹಣ್(17) ಎಂಬುದಾಗಿ ಗುರುತಿಸಲಾಗಿದೆ. ಈ ಇಬ್ಬರು ಬೆಂಗಳೂರು ಮತ್ತು ತಮಿಳಉನಾಡು ಮೂಲದ ಯುವಕರಾಗಿದ್ದರು. ಮೈಸೂರಿನ ಅರ್ಜಿ ಮನೆಗೆ ಬಂದು ಕುಟುಂಬದ ಜೊತೆಗೆ ದೇಗುಲಕ್ಕೆ ಹೋಗಿದ್ದಾಗ, ನಿಮಿಷಾಂಭ ದೇಗುಲದ ಬಳಿಯಲ್ಲಿ ಕಾವೇರಿ ನದಿಯಲ್ಲಿ ಈಜಲು ತೆರಳಿದ್ದರು. ಈ ವೇಳೆ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಈ ಸಂಬಂಧ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ಗಿರೀಶ್ ರಾಜ್, ಮಂಡ್ಯ https://kannadanewsnow.com/kannada/good-news-for-untrained-state-government-primary-school-teachers-state-govt-orders-pay-scale/ https://kannadanewsnow.com/kannada/duniya-vijays-divorce-petition-rejected-by-family-court/
ಬೆಂಗಳೂರು: ತನ್ನ ಪತ್ನಿ ವಿರುದ್ಧ ಕ್ರೌರ್ಯ ಆರೋಪ ಹೊರಿಸಿದ್ದಂತ ನಟ ದುನಿಯಾ ವಿಜಯ್, ಕೌಟುಂಬಿಕ ನ್ಯಾಯಾಲಯಕ್ಕೆ ವಿಚ್ಛೇದನಕ್ಕಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಇಂತಹ ಅರ್ಜಿಯನ್ನು ಕ್ರೌರ್ಯ ಆರೋಪ ಸಾಭೀತು ಪಡಿಸದ ಹಿನ್ನಲೆಯಲ್ಲಿ ಕೋರ್ಟ್ ವಜಾಗೊಳಿಸಿದೆ. ಇಂದು ಬೆಂಗಳೂರಿನ ಶಾಂತಿನಗರದಲ್ಲಿರುವಂತ ಕೌಟುಂಬಿಕ ನ್ಯಾಯಾಲಯದಲ್ಲಿ ನಟ ದುನಿಯಾ ವಿಜಯ್ ಅವರು ಕ್ರೌರ್ಯ ಆರೋಪದಲ್ಲಿ ಪತ್ನಿ ನಾಗರತ್ನರಿಂದ ವಿಚ್ಛೇಧನ ನೀಡುವಂತೆ ಸಲ್ಲಿಸಿದ್ದಂತ ಅರ್ಜಿಯನ್ನು ವಿಚಾರಣೆ ನಡೆಸಿತು. ನಟ ದುನಿಯಾ ವಿಜಯ್ ಅವರು ಪತ್ನಿ ನಾಗರತ್ನ ವಿರುದ್ಧ ಮಾಡಿದ್ದಂತ ಕ್ರೌರ್ಯ ಆರೋಪಗಳನ್ನು ಸಾಭೀತುಪಡಿಸೋದಕ್ಕೆ ನ್ಯಾಯಾಲಯದಲ್ಲಿ ಸಾಧ್ಯವಾಗಲಿಲ್ಲ. ಈ ಹಿನ್ನಲೆಯಲ್ಲಿ ನಟ ದುನಿಯಾ ವಿಜಯ್ ಅವರು ಪತ್ನಿ ನಾಗರತ್ನರಿಂದ ವಿಚ್ಛೇದನ ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. https://kannadanewsnow.com/kannada/good-news-for-untrained-state-government-primary-school-teachers-state-govt-orders-pay-scale/ https://kannadanewsnow.com/kannada/school-roof-collapses-in-raichur-several-students-injured/
ಬೆಂಗಳೂರು: ನಟ ದುನಿಯಾ ವಿಜಯ್ ಅವರು ವಿಚ್ಛೇಧನ ಕೋರಿ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿಯನ್ನು ಸಲ್ಲಿಸಿದ್ದರು. ಇಂತಹ ಅರ್ಜಿಯನ್ನು ಕೌಟುಂಬಿಕ ನ್ಯಾಯಾಲಯವು ವಜಾಗೊಳಿಸಿದೆ. ಬೆಂಗಳೂರಿನ ಶಾಂತಿನಗರದಲ್ಲಿರುವಂತ ಕೌಟುಂಬಿಕ ನ್ಯಾಯಾಲಯಕ್ಕೆ ನಟ ದುನಿಯಾ ವಿಜಯ್ ವಿಚ್ಛೇಧನ ಕೋರಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಕೌಟುಂಬಿಕ ನ್ಯಾಯಾಲಯವು, ಅರ್ಜಿಯನ್ನು ವಜಾಗೊಳಿಸಿರೋದಾಗಿ ತಿಳಿದು ಬಂದಿದೆ. ಅಂದಹಾಗೇ ನಟ ದುನಿಯಾ ವಿಜಯ್ ಕ್ರೌರ್ಯದ ಆಧಾರದಲ್ಲಿ ಪತ್ನಿ ನಾಗರತ್ನರಿಂದ ವಿಚ್ಛೇಧನ ನೀಡುವಂತೆ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿಯನ್ನು ಸಲ್ಲಿಸಿದ್ದರು. ಆದರೇ ಆರೋಪ ಸಾಭೀತು ಪಡಿಸಲು ಸಾಧ್ಯವಾಗದ ಹಿನ್ನಲೆಯಲ್ಲಿ ನಟ ದುನಿಯಾ ವಿಜಯ್ ಸಲ್ಲಿಸಿದ್ದಂತ ವಿಚ್ಛೇಧನ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ ಸಂಬಂಧ ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/there-is-a-taliban-government-in-the-state-hindus-are-being-mentally-harassed-by-the-police-r-ashoka/ https://kannadanewsnow.com/kannada/good-news-for-untrained-state-government-primary-school-teachers-state-govt-orders-pay-scale/
ಬೆಂಗಳೂರು: ಕಾಂಗ್ರೆಸ್ ಸರ್ಕಾರ ತಾಲಿಬಾನ್ ಸರ್ಕಾರವಾಗಿ ಬದಲಾಗಿದ್ದು, ಹಿಂದೂಗಳಿಗೆ ಮಾನಸಿಕ ಹಿಂಸೆ ನೀಡಲಾಗುತ್ತಿದೆ. ಇದರ ವಿರುದ್ಧ ಬಿಜೆಪಿ ಹೋರಾಟ ನಡೆಸಿ ಬುದ್ಧಿ ಕಲಿಸಲಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಟಿಪ್ಪು ದೆವ್ವ ಹಿಡಿದಿದೆ. ಇದಕ್ಕಾಗಿಯೇ ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆಯಾದರೂ ಕಾಂಗ್ರೆಸ್ ಸರ್ಕಾರ, ಕಾರ್ಯಕರ್ತರ ವಿರುದ್ಧವೇ ಪ್ರಕರಣ ದಾಖಲಿಸಿದೆ. ಪಾಕಿಸ್ತಾನದ ಕುನ್ನಿಗಳು ಎಂದು ಹೇಳಿದ್ದಾಗಿ ಪೊಲೀಸರು ಹೇಳಿದ್ದಾರೆ. ಆದರೆ ಇದಕ್ಕೆ ಯಾವುದೇ ದಾಖಲೆ ಇಲ್ಲ. ಬಿಜೆಪಿ ಕಾರ್ಯಕರ್ತರು ಭಾರತ್ ಮಾತಾ ಕೀ ಜೈ ಎಂದಿದ್ದರು. ಆದರೂ ಮುಸ್ಲಿಮರನ್ನು ರಕ್ಷಣೆ ಮಾಡಿ ಹಿಂದೂಗಳಿಗೆ ಮಾನಸಿಕ ಹಿಂಸೆ ನೀಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಜನರು ಬುದ್ಧಿ ಕಲಿಸಿದ್ದಾರೆ. ಅದೇ ರೀತಿ ಮತ್ತೆ ಬುದ್ಧಿ ಕಲಿಸಲು ಬಿಜೆಪಿಯಿಂದ ದೊಡ್ಡ ಹೋರಾಟ ಮಾಡಲಾಗುವುದು. ಮತಕ್ಕಾಗಿ ಅಲ್ಪಸಂಖ್ಯಾತರನ್ನು ಓಲೈಕೆ ಮಾಡಲಾಗುತ್ತಿದೆ ಎಂದು ದೂರಿದರು. ಸಮರ್ಪಕ ತನಿಖೆ ನಡೆಯಲಿ ಚಿತ್ರನಟ ದರ್ಶನ್…