Subscribe to Updates
Get the latest creative news from FooBar about art, design and business.
Author: kannadanewsnow09
ಧಾರವಾಡ : ಸರಕಾರವು ಯಾವುದೇ ಪ್ರೋತ್ಸಾಹ ಧನ ಅಥವಾ ಸಹಾಯ ಧನವನ್ನು ರೈತರ ಹಾಗೂ ಸಾರ್ವಜನಿಕರ ಜೀವನೋಪಾಯಕ್ಕಾಗಿ ಬಿಡುಗಡೆ ಮಾಡುತ್ತದೆ. ಆದ್ದರಿಂದ ಬರ ಪರಿಹಾರದ ಹಣ ಸೇರಿದಂತೆ ವೃದ್ಯಾಪ್ಯ ವೇತನ, ಅಂಗವಿಕಲರ ಮಾಶಾಸನ, ನರೆಗಾ ಕೂಲಿ ಹಾಗೂ ಇತರೆ ಸರಕಾರದಿಂದ ಬಿಡುಗಡೆ ಆಗಿರುವಂತಹ ಪ್ರೋತ್ಸಾಹ ಧನ ನೇರವಾಗಿ ಫಲಾನುಭವಿಗಳ ಖಾತೆಗೆ (ಡಿಬಿಟಿ ಮೂಲಕ) ಸಂದಾಯವಾಗಿರುವಂತಹ ಹಣವನ್ನು ಯಾವುದೇ ಕಾರಣಕ್ಕೆ ಸಾಲದ ಖಾತೆಗೆ ಜಮಾ ಮಾಡಬಾರದೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಅವರು ನಿನ್ನೆ ಸಂಜೆ (ಮೇ.17) ಸರಕಾರದಿಂದ ಬಿಡುಗಡೆ ಮಾಡಿರುವ ಬರ ಪರಿಹಾರದ ಹಣವು ಬ್ಯಾಂಕಿನಲ್ಲಿ ಸಾಲದ ಖಾತೆಗೆ ಜಮಾ ಆಗಿತ್ತಿರುವ ಕುರಿತು ರೈತರಿಂದ ದೂರುಗಳ ಕಾರಣ ಧಾರವಾಡ ರೂಡ್ ಸೆಟ್ ಆವರಣದ ಸಭಾಂಗಣದಲ್ಲಿ (RUDSETI) ಆವರಣದಲ್ಲಿ ಆರ್.ಬಿ.ಐ ಅಧಿಕಾರಿ ಮೋನಿ ರಾಜ ಬ್ರಹ್ಮ, ಜಿಲ್ಲಾ ಲೀಡ ಬ್ಯಾಂಕ ವ್ಯವಸ್ಥಾಪಕರ ಶ್ರೀ ಪ್ರಭುದೇವ ಎನ್ ಜಿ ಅವರ ಉಪಸ್ಥಿತಿಯಲ್ಲಿ ಜಿಲ್ಲೆಯ ಎಲ್ಲಾ ಬ್ಯಾಂಕಿನ ವ್ಯವಸ್ಥಾಪಕರುಗಳ ಜೊತೆ ತುರ್ತು ಸಭೆಯನ್ನು ಜರುಗಿಸಿ,…
ಬೆಂಗಳೂರು: ಕಳೆದ ವರ್ಷ ಜುಲೈನಲ್ಲಿ ನಡೆದ ವನಮಹೋತ್ಸವದ ಸಂದರ್ಭದಲ್ಲಿ ಅರಣ್ಯ ಇಲಾಖೆಯಿಂದ ನಡೆಲಾದ 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕುಳಿದಿವೆ ಎಂಬ ಬಗ್ಗೆ ಆಡಿಟ್ ವರದಿಯನ್ನು 3 ತಿಂಗಳೊಳಗಾಗಿ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಆದೇಶ ನೀಡಿದ್ದಾರೆ. ಬೆಂಗಳೂರಿನ ಅರಣ್ಯ ಭವನದಲ್ಲಿಂದು ನಡೆದ ಅರಣ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಪ್ರಸಕ್ತ ಸಾಲಿನಲ್ಲಿ ಎಷ್ಟು ಸಸಿಗಳನ್ನು ನೆಡಲು ಯೋಜನೆ ರೂಪಿಸಲಾಗಿದೆ. ಇಲಾಖೆಯ ನರ್ಸರಿಗಳಲ್ಲಿ ಎಷ್ಟು ಎತ್ತರದ ಸಸಿ ಬೆಳೆಸಲಾಗಿದೆ ಎಂಬ ಬಗ್ಗೆ 7 ದಿನಗಳೊಳಗಾಗಿ ಮಾಹಿತಿ ನೀಡುವಂತೆಯೂ ತಿಳಿಸಿದರು. ವನ್ಯಜೀವಿಗಳ ಅಂಗಾಂಗಗಳಿಂದ ತಯಾರಿಸಿದ ಉತ್ಪನ್ನಗಳನ್ನು, ಟ್ರೋಫಿ, ಫಲಕಗಳನ್ನು ಸರ್ಕಾರಕ್ಕೆ ಮರಳಿಸಲು ನೀಡಲಾಗದ್ದ ಗಡುವು ಏಪ್ರಿಲ್ 9ರಂದು ಮುಕ್ತಾಯವಾಗಿದ್ದು, ಕೆಲವರು ಹೈಕೋರ್ಟ್ ನಲ್ಲಿ ತಡೆಯಾಜ್ಞೆ ತಂದ ಹಿನ್ನೆಲೆಯಲ್ಲಿ ಉಂಟಾಗಿರುವ ಗೊಂದಲದಿಂದಾಗಿ ಮತ್ತೆ 2-3 ತಿಂಗಳುಗಳ ಕಾಲ ಹೆಚ್ಚಿನ ಕಾಲಾವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ನ್ಯಾಯಾಲಯದ ತೀರ್ಪು ಬಂದ ಬಳಿಕ ಈ ಬಗ್ಗೆ…
ಮಡಿಕೇರಿ : ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಪದವೀಧರರ ಕ್ಷೇತ್ರಗಳಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನಡೆಯಲಿರುವ ಚುನಾವಣೆ ಸಂಬಂಧ ಭಾರತ ಚುನಾವಣಾ ಆಯೋಗವು ಹಿರಿಯ ಐಎಎಸ್ ಅಧಿಕಾರಿಗಳನ್ನು ಚುನಾವಣಾ ವೀಕ್ಷಕರನ್ನಾಗಿ ನೇಮಕ ಮಾಡಿ ಆದೇಶಿಸಿದೆ. ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರಕ್ಕೆ (ಕೊಡಗು ಜಿಲ್ಲೆ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆ) ಚುನಾವಣಾ ವೀಕ್ಷಕರಾಗಿ ಅನಿಲ್ ಕುಮಾರ್ ಟಿ.ಕೆ, ಸಹಾಯಕ ಅಧಿಕಾರಿಯಾಗಿ ಮೈಸೂರು ಜಿಲ್ಲೆ ತೋಟಗಾರಿಕೆ ಇಲಾಖೆಯ ವಿಭಾಗೀಯ ಜಂಟಿ ನಿರ್ದೇಶಕರ ಕಚೇರಿಯ ಉಪ ನಿರ್ದೇಶಕರಾದ ರುದ್ರೇಶ್ ಕೆ. ದೂ. ಸಂ.9964174107, 7204064565. ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರ(ಕೊಡಗು ಜಿಲ್ಲೆ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆ) ಕ್ಕೆ ಹರ್ಷ್ ಗುಪ್ತ ಅವರನ್ನು ಚುನಾವಣಾ ವೀಕ್ಷಕರಾಗಿ ಹಾಗೂ ಸಹಾಯಕ ಅಧಿಕಾರಿಯಾಗಿ ಮೈಸೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಎಂ.ಡಿ.ಸುದರ್ಶನ್ ಅವರನ್ನು ನೇಮಕ ಮಾಡಿದೆ. ದೂ.ಸಂ.9448244340,…
ಮಡಿಕೇರಿ : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರಗಳ ಚುನಾವಣೆ-2024 ಕ್ಕೆ ಸಂಬಂಧಿಸಿದಂತೆ ಸ್ವೀಕೃತವಾದ ನಾಮಪತ್ರಗಳ ಪರಿಶೀಲನಾ ಕಾರ್ಯವು ಶುಕ್ರವಾರ(ಮೇ,17) ನಡೆಯಿತು. ನಾಮಪತ್ರಗಳ ಪರಿಶೀಲನೆಯಲ್ಲಿ ಕ್ಷೇತ್ರವಾರು ನಾಮಪತ್ರಗಳು ಅಂಗೀಕಾರ ಮತ್ತು ತಿರಸ್ಕøತವಾಗಿರುವ ವಿವರ ಇಂತಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ 13 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, 13 ನಾಮಪತ್ರಗಳು ಅಂಗೀಕೃತವಾಗಿವೆ. ನೈರುತ್ಯ ಪದವೀಧರರ ಕ್ಷೇತ್ರಕ್ಕೆ 11 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, 11 ನಾಮಪತ್ರಗಳು ಅಂಗೀಕೃತವಾಗಿವೆ. ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ 10 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, 9 ನಾಮಪತ್ರಗಳು ಅಂಗೀಕೃತವಾಗಿವೆ. 01 ನಾಮಪತ್ರ ತಿರಸ್ಕೃತಗೊಂಡಿದೆ. ಎಂ.ಸತೀಶ್ ಕಾರಂತ್, ಪಕ್ಷೇತ್ರ ಅಭ್ಯರ್ಥಿ ಅವರು ನಮೂನೆ-26 ನೋಟರಿ ಅಫಿಡವಿಟ್ ಹಾಗೂ ವಿಧಾನಸಭಾ ಮತದಾರರ ಪಟ್ಟಿಯ ದೃಢೀಕೃತ ಪ್ರತಿಯನ್ನು ಸಲ್ಲಿಸದಿರುವುದರಿಂದ ತಿರಸ್ಕøತಗೊಂಡಿರುತ್ತದೆ. ಮೇ, 20 ರ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರಗಳನ್ನು ಹಿಂಪಡೆಯಲು ಅವಕಾಶವಿರುತ್ತದೆ ಎಂದು ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ…
ಬಳ್ಳಾರಿ : ಜಿಲ್ಲೆಯನ್ನು ಬರಗಾಲ ಬರಪೀಡಿತ ಎಂದು ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಜಿಲ್ಲೆಯ 36,944 ರೈತರ ಖಾತೆಗೆ ಎರಡು ಹಂತಗಳಲ್ಲಿ ಡಿಬಿಟಿ ಮೂಲಕ ಒಟ್ಟು 41.40 ಕೋಟಿ ರೂ. ಗಳನ್ನು ಜಮೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. 2023-24 ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯ ಎಲ್ಲಾ 05 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಸರ್ಕಾವು ಘೋಷಣೆ ಮಾಡಿದೆ. ಮುಂಗಾರು ಹಂಗಾಮಿನಲ್ಲಿ ಹಾನಿಯಾಗಿರುವ ಬೆಳೆಗಳಿಗೆ ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿಯ ಆಧಾರದ ಮೇರೆಗೆ ಫ್ರೂಟ್ಸ್ ಐಡಿ ಹೊಂದಿರುವ, ಪಹಣಿ ಜೋಡಣೆಯಾಗಿರುವ ರೈತರಿಗೆ ಡಿಬಿಟಿ ಮೂಲಕ ಎಸ್‍ಡಿಆರ್‍ಎಫ್ ಮಾರ್ಗಸೂಚಿಯಂತೆ ಈಗಾಗಲೇ 9 ಕಂತುಗಳಲ್ಲಿ ಮೊದಲನೆ ಕಂತಾಗಿ ಗರಿಷ್ಠ ರೂ.2000 ರವರೆಗೆ ಒಟ್ಟು 36,944 ರೈತರಿಗೆ ರೂ.7.26 ಕೊಟಿ ಪರಿಹಾರ ಬೆಳೆ ಹಾನಿ ಪರಿಹಾರವನ್ನು ವಿತರಿಸಲಾಗಿದೆ. ಎರಡನೇ ಹಂತದಲ್ಲಿ ಜಿಲ್ಲೆಯ ಅರ್ಹ 31351 ರೈತರುಗಳಿಗೆ ಎನ್‍ಡಿಆರ್‍ಎಫ್ ಮಾರ್ಗಸೂಚಿನ್ವಯ ರೂ.34.03 ಕೋಟಿ ಪರಿಹಾರವನ್ನು (ಇನ್ ಪುಟ್ ಸಬ್ಸಿಡಿ) ವಿತರಣೆ ಮಾಡಲು ಅನುಮೋದನೆ ನೀಡಿ, ಡಿಬಿಟಿ ಮೂಲಕ…
ಬಳ್ಳಾರಿ: ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ ಮೋಕಾ-ಮೀನಹಳ್ಳಿ ಮಾರ್ಗದ ಲಿಲೋ ನಿರ್ಮಾಣ ಕಾರ್ಯವನ್ನು ತುರ್ತಾಗಿ ಕೈಗೆತ್ತಿಕೊಳ್ಳುತ್ತಿರುವುದರಿಂದ 110/11ಕೆ.ವಿ ಮೀನಹಳ್ಳಿ ಉಪಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಎಲ್ಲಾ 11ಕೆ.ವಿ ಮಾರ್ಗಗಳಲ್ಲಿ ಮೇ 20 ರಂದು ಬೆಳಿಗ್ಗೆ 07 ರಿಂದ ಸಂಜೆ 07 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಜೆಸ್ಕಾಂನ ಕಾರ್ಯ ಮತ್ತು ಪಾಲನಾ ಗ್ರಾಮೀಣ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಮೋಹನಬಾಬು ಅವರು ತಿಳಿಸಿರುತ್ತಾರೆ. ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು ಎಫ್-2 ಚಾಗನೂರು ಐಪಿ ಫೀಡರ್ ಮಾರ್ಗದ ಮೀನಹಳ್ಳಿ, ಶಿಡಿಗಿನಮೋಳ, ಕೆ.ವೀರಾಪುರ, ಕಾರೆಕಲ್ಲು, ಚಾಗನೂರು. ಎಫ್-1 ಮೀನಹಳ್ಳಿ/ ಕೆ.ವೀರಾಪುರ ಎನ್.ಜೆ.ವೈ ಮಾರ್ಗದ ಮೀನಹಳ್ಳಿ, ಶಿಡಿಗಿನಮೋಳ, ಕೆ.ವೀರಾಪುರ ಕಾರೆಕಲ್ಲು ಗ್ರಾಮ. ಎಫ್-4 ಎ.ಟಿ.ಪಿ.ಎಸ್ ಚೆಳ್ಳಗುರ್ಕಿ ಮಾರ್ಗದ ಹಗರಿ, ಪಿ.ಡಿ.ಹಳ್ಳಿ, ಕಗ್ಗಲ್, ಲಿಂಗದೇವನಹಳ್ಳಿ, ಯಾಳ್ಪಿ, ಜೋಳದರಾಶಿ, ಚೆಳ್ಳಗುರ್ಕಿ ಗ್ರಾಮ. ಎಫ್-5 ಹಗರಿ ಐಪಿ ಫೀಡರ್ ಮಾರ್ಗದ ಹಗರಿ, ಪಿ.ಡಿ.ಹಳ್ಳಿ, ಕಗ್ಗಲ್, ಲಿಂಗದೇವನಹಳ್ಳಿ, ಯಳ್ಪಿ, ಜೋಳದರಾಶಿ, ಚೆಳ್ಳಗುರ್ಕಿ ಕೃಷಿ ಪ್ರದೇಶಗಳು. ಎಫ್-6 ಫೀಡರ್ ಮಾರ್ಗದ ಎ-ಒನ್ ಕೋಲ್ಡ್ ಸ್ಟೋರೆಜ್, ಮೆ.ಜಾನಕಿ ಕಾರ್ಪೋ,ಪ್ರೈ.ಲಿ,…
ಬಳ್ಳಾರಿ : ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ(ಸಿಡಾಕ್) ಇವರ ಸಂಯುಕ್ತಾಶ್ರಯದಲ್ಲಿ ಸ್ವಯಂ ಉದ್ಯಮಗಳನ್ನು ಪ್ರಾರಂಭಿಸಲು ಆಸಕ್ತಿಯಿರುವವರಿಗೆ ವಿವಿಧ ವೃತ್ತಿಗಳಲ್ಲಿ 30 ದಿನಗಳ ನಿರ್ದಿಷ್ಟ ವಲಯಾಧಾರಿತ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಬಳ್ಳಾರಿಯಲ್ಲಿ ಕಂಪ್ಯೂಟರ್ ಹಾರ್ಡ್‍ವೇರ್ ಮತ್ತು ನೆಟ್‍ವರ್ಕಿಂಗ್ ತರಬೇತಿ, ಸಂಡೂರಿನಲ್ಲಿ ಬ್ಯೂಟಿ ಪಾರ್ಲರ್ ಮ್ಯಾನೇಜ್‍ಮೆಂಟ್ ತರಬೇತಿ, ಕುರುಗೋಡುನಲ್ಲಿ ಫ್ಯಾಷನ್ ಡಿಸೈನಿಂಗ್ ತರಬೇತಿ, ಸಿರಗುಪ್ಪದಲ್ಲಿ ಎಲೆಕ್ಟ್ರಿಕಲ್ ಹೋಮ್ ಅಪ್ಲೈಯನ್ಸ್ ತರಬೇತಿ ಹಾಗೂ ಕಂಪ್ಲಿಯಲ್ಲಿ ಮೊಬೈಲ್ ಫೋನ್ಸ್ ರಿಪೇರ್ಸ್ ಮತ್ತು ಸರ್ವೀಸಿಂಗ್ ಬಗ್ಗೆ ತರಬೇತಿಗಳನ್ನು ಹಮ್ಮಿಕೊಳ್ಳಲು ಯೋಜಿಸಲಾಗಿದೆ. ಆಯಾ ವೃತ್ತಿಗಳಲ್ಲಿ ಪ್ರಾಯೋಗಿಕ ಹಾಗೂ ಸಿದ್ಧಾಂತದೊಂದಿಗೆ ಸ್ವಯಂ ಉದ್ಯಮಗಳ ಬಗ್ಗೆ ಮಾಹಿತಿ, ಉದ್ಯಮಶೀಲತೆ, ಯಶಸ್ವಿ ಉದ್ಯಮಶೀಲರ ಗುಣ ಲಕ್ಷಣಗಳು, ಉದ್ಯಮಗಳನ್ನು ಪ್ರಾರಂಭಿಸುವ ಹಂತಗಳು, ಸ್ವಯಂ ಉದ್ಯೋಗಕ್ಕೆ ಇರುವ ಸರ್ಕಾರದ ಯೋಜನೆಗಳು, ಬ್ಯಾಂಕ್ ವ್ಯವಹಾರ ಮಾಡುವ ಬಗ್ಗೆ, ಸಾಲ ಮತ್ತು ಹಣಕಾಸು ಮತ್ತು ಹಣಕಾಸೇತರ ಸೌಲಭ್ಯಗಳ ಬಗ್ಗೆ, ಲೆಕ್ಕ ಪತ್ರ ನಿರ್ವಹಣೆ, ಯೋಜನಾ ವರದಿ ತಯಾರಿಕೆ, ಸಾಲ ಸೌಲಭ್ಯಕ್ಕಾಗಿ…
ಬೆಂಗಳೂರು: ಮಾನ್ಸೂನ್ ಮಳೆಯು ಕೇರಳಕ್ಕೆ ಮೇ.31ರಂದು ಕಾಲಿಡಲಿದೆ. ಆ ಬಳಿಕ ಕರ್ನಾಟಕಕ್ಕೆ ಜೂನ್.10ರ ಬಳಿಕ ಮುಂಗಾರು ಪ್ರವೇಶಿಸಲಿದೆ. ಈ ಕುರಿತಂತೆ ರಾಜ್ಯ ಹವಾಮಾನ ಇಲಾಖೆಯ ಮಾಹಿತಿ ಹಂಚಿಕೊಂಡಿದ್ದು, ರಾಜ್ಯದಲ್ಲಿ ಬರಗಾಲ ಮರೆಯಾಗುವ ಎಲ್ಲಾ ಮುನ್ಸೂಚನೆಗಳು ಕಂಡು ಬರುತ್ತಿವೆ. ಜೂನ್.10ರ ಬಳಿಕ ಮುಂಗಾರು ರಾಜ್ಯಕ್ಕೆ ಪ್ರವೇಶಿಸಲಿದ್ದು, ಉತ್ತಮ ಮಳೆಯಾಗುವ ಮುನ್ಸೂಚನೆ ಇದೆ ಎಂದಿದೆ. ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್ ನಲ್ಲೂ ಕರ್ನಾಟಕದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂಬುದಾಗಿ ರಾಜ್ಯದ ರೈತರಿಗೆ ಸಂತಸದ ಸುದ್ದಿಯನ್ನು ನೀಡಿದೆ. https://kannadanewsnow.com/kannada/state-government-exempts-development-works-from-model-code-of-conduct/ https://kannadanewsnow.com/kannada/important-information-for-those-who-applied-for-admission-to-class-6-in-minority-residential-schools/
ದಾವಣಗೆರೆ ; ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು ಹಾಗೂ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಗಳಿಗೆ 2024-25ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆಯನ್ನು ಮೇ.19 ರಂದು ನಡೆಸಲಾಗುವುದು. ವಿದ್ಯಾರ್ಥಿಗಳ ಪ್ರವೇಶ ಪತ್ರ (HALL TICKET) ವನ್ನು ಆಯಾ ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳಲ್ಲಿ ವಿತರಿಸಲಾಗುತ್ತಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆಯ 6ನೇ ತರಗತಿ ಪ್ರವೇಶಕ್ಕಾಗಿ ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಿರುವ ಎಲ್ಲಾ ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ಪಡೆದುಕೊಳ್ಳುವಂತೆ ತಿಳಿಸಿದೆ. ಪ್ರವೇಶ ಪತ್ರ ಪಡೆಯಲು ಬರುವ ವಿದ್ಯಾರ್ಥಿ, ಪೋಷಕರು ವಿದ್ಯಾರ್ಥಿಯ ಪಾಸ್ ಪೋರ್ಟ್ ಅಳತೆಯ ಎರಡು ಭಾವಚಿತ್ರ, ಆಧಾರಕಾರ್ಡ್, ಅರ್ಜಿ ಸಲ್ಲಿಸಿರುವ ಪ್ರತಿಯನ್ನು ಕಡ್ಡಾಯವಾಗಿ ತರಬೇಕು. https://kannadanewsnow.com/kannada/bjp-jds-government-has-taken-away-teachers-pension-dr-k-k-manjunath-kumar/ https://kannadanewsnow.com/kannada/state-government-exempts-development-works-from-model-code-of-conduct/
ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಅಷ್ಟೇ ಅಲ್ಲ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾಂಗ್ರೆಸ್ ಗೆಲುವಿನ ನಗೆ ಬೀರಲಿದೆ. ಶಿಕ್ಷಕರ ಸಮಸ್ಯೆ ನಿವಾರಣೆಗಾಗಿ ನಾನು ಶ್ರಮಿಸುತ್ತೇನೆ. ನೈರುತ್ಯ ಶಿಕ್ಷಕರ ಕ್ಷೇತ್ರದ ಮತದಾರರು ತಮಗೆ ಮತ ನೀಡುವಂತೆ ಕಾಂಗ್ರೆಸ್ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಕೋರಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಕೆ ಕೆ ಮಂಜುನಾಥ್ ಅವರು, 2018ರಲ್ಲೇ ಕಾಂಗ್ರೆಸ್ ಸರ್ಕಾರವು ಶೇ.30ರಷ್ಟು ಶಿಕ್ಷಕರ ವೇತನವನ್ನು ಹೆಚ್ಚಿಸಿದೆ ಎಂದರು. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಸರ್ಕಾರವು ಶಿಕ್ಷಕರ ಪಿಂಚಣಿಯನ್ನು ಕಿತ್ತುಕೊಂಡಿದೆ. ಇದರ ಪರಿಣಾಮ ಅನುದಾನಿತ ಶಿಕ್ಷಕರು ಬೀದಿ ಪಾಲು ಮಾಡಿದಂತೆ ಆಗಿದೆ. ಇದನ್ನು ಶಿಕ್ಷಕರು ಎಂದು ಮರೆಯಲಾರರು ಎಂದು ಹೇಳಿದರು. ಈ ಸಂದರ್ಭದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಡಿಸಿಸಿ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಸಚಿವ ಅಭಯಚಂದ್ರ ಜೈನ್ ಸೇರಿದಂತೆ ವಿವಿಧ ಮುಖಂಡರು ಉಪಸ್ಥಿತರಾಗಿದ್ದರು. https://kannadanewsnow.com/kannada/state-government-exempts-development-works-from-model-code-of-conduct/ https://kannadanewsnow.com/kannada/the-sale-of-liquor-will-be-banned-from-6-am-on-may-22-to-6-pm-on-may-23-in-this-police-station-limits-in-bengaluru/