Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : ರಾಜಧಾನಿ ಬೆಂಗಳೂರು ಅರಮನೆ ಮೈದಾನದಲ್ಲಿ ಫೆಬ್ರವರಿ 26 ಮತ್ತು 27ರಂದು ಕೌಶಲ್ಯಾಭಿವೃದ್ಧಿ ಇಲಾಖೆ ವತಿಯಿಂದ ನಡೆದ ಯುವ ಸಮೃದ್ಧಿ ಸಮ್ಮೇಳನದಲ್ಲಿ ಸುಮಾರು 9,651 ಉದ್ಯೋಗ ಆಕಾಂಕ್ಷಿಗಳಿಗೆ ಸ್ಥಳದಲ್ಲೇ ಉದ್ಯೋಗ ನೀಡುವ ಮೂಲಕ ಹೊಸ ದಾಖಲೆ ಬರೆದಿದ್ದೇವೆ ಎಂದು ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದರು. ಬುಧವಾರ ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಯುವ ಸಮೃದ್ಧಿ ಸಮ್ಮೇಳನದ ಕುರಿತಂತೆ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು 53,913 ಪುರುಷರು, 32,494 ಮಹಿಳೆಯರು, ಇತರೆ 42 ಸೇರಿಂದತೆ ಒಟ್ಟು ಆನ್‍ಲೈನ್ ಮೂಲಕ 86,451 ಅಭ್ಯರ್ಥಿಗಳು ಹೆಸರನ್ನು ನೋಂದಣಿ ಮಾಡಿಕೊಂಡಿದ್ದರು. ಸಮ್ಮೇಳನಕ್ಕೆ 44527 ಅಭ್ಯರ್ಥಿಗಳು ಹಾಜರಾಗಿದ್ದರು. ಇದರಲ್ಲಿ ಶೈಕ್ಷಣಿಕ ಅರ್ಹತೆಗನುಗುಣವಾಗಿ ಒಟ್ಟು 9,651 ಉದ್ಯೋಗ ಆಕಾಂಕ್ಷಿಗಳಿಗೆ ಉದ್ಯೋಗ ನೀಡಿದ್ದೇವೆ ಎಂದು ಪಾಟೀಲ್ ಮಾಹಿತಿ ನೀಡಿದರು. 16,865 ಅರ್ಜಿಗಳು ಪರಿಶೀಲನೆ ಹಂತದಲ್ಲಿವೆ. 2,457 ಅರ್ಜಿಗಳನ್ನು ತಾಂತ್ರಿಕ ಕಾರಣಗಳಿಂದ ತಿರಸ್ಕರಿಸಲಾಗಿದೆ. 15,461 ಅಭ್ಯರ್ಥಿಗಳು ಸಂದರ್ಶನಕ್ಕೊಳಗಾಗಿದ್ದರು. ಅಭ್ಯರ್ಥಿಗಳ ಪೂರ್ಣ ವಿವರಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಇವರಿಗೂ ಕೂಡ ಉದ್ಯೋಗ ನೀಡಲಾಗುತ್ತದೆ.…
ಬೆಂಗಳೂರು: ಟ್ಯಾಂಕರ್ ಮಾಫಿಯಾದಲ್ಲಿ ಕಾರ್ಪೊರೇಟರ್‌ಗಳು, ಮಾಜಿ ಕಾರ್ಪೊರೇಟರ್‌ಗಳು, ಶಾಸಕರ ಸಂಬಂಧಿಗಳು ಮತ್ತು ಶಾಸಕರ ಹಿಂದೆ ಮುಂದೆ ತಿರುಗುವರೇ ಇದ್ದಾರೆ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಇದೆಲ್ಲವೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಮೂಗಿನ ನೇರಕ್ಕೆ ನಡೆಯುತ್ತಿದ್ದರೂ ಕಂಡೂಕಾಣದಂತಿರುವುದು ಅನುಮಾನ ಹುಟ್ಟಿಸುತ್ತಿದೆ. ಮಾಫಿಯಾದಲ್ಲಿ ಶಿವಕುಮಾರ್ ಪಾತ್ರದ ಬಗ್ಗೆ ಶಂಕೆ ಮೂಡುತ್ತದೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಹೇಳಿದರು. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾವೇರಿ ನೀರಿಗೆ ಪರ್ಯಾಯವಾಗಿ ಬಿಡಬ್ಲ್ಯುಎಸ್‌ಎಸ್‌ಬಿ ಏನನ್ನೂ ಮಾಡಿಲ್ಲ. ಇಡೀ ಬೆಂಗಳೂರಿನಲ್ಲಿ ಬಿಡಬ್ಲ್ಯುಎಸ್‌ಎಸ್‌ಬಿ 108 ಬೋರ್ ವೆಲ್‌ಗಳನ್ನು ಮಾತ್ರ ಹಾಕಿಸಿದೆ ಎನ್ನುವುದು ಮಾಹಿತಿ ಹಕ್ಕು ಕಾಯ್ದೆಯಡಿ ತಿಳಿದುಬಂದಿದೆ. ಇದರರ್ಥ ಬಿಡಬ್ಲ್ಯುಎಸ್‌ಎಸ್‌ಬಿ ಬೆಂಗಳೂರಿಗೆ ಸಂಪೂರ್ಣವಾಗಿ ನೀರು ಸರಬರಾಜು ಮಾಡಲು ಕೆಲಸವನ್ನೇ ಮಾಡಿಲ್ಲ ಎಂದರು. ಕಾವೇರಿ ನೀರು ಬೆಂಗಳೂರಿನ ಎಲ್ಲಾ ಮನೆಗಳಿಗೂ ತಲುಪುತ್ತಿಲ್ಲ. ಬಿಬಿಎಂಪಿ ಕೂಡ 1,534 ಬೋರ್‌ವೆಲ್‌ಗಳನ್ನು ಕೊರೆಸಿದ್ದು, ಈ ಎರಡೂ ಸಂಸ್ಥೆಗಳು ಎಲ್ಲಾ ಮನೆಗಳಿಗೂ ನೀರು ಒದಗಿಸುವಲ್ಲಿ ಸಂಪೂರ್ಣವಾಗಿ…
ಬೆಂಗಳೂರು: ಬೇಸಿಗೆಯ ಹೊತ್ತಿನಲ್ಲೇ ನೀರಿನ ಅಭಾವವನ್ನೇ ಬಂಡವಾಳ ಮಾಡಿಕೊಂಡು ಬೆಂಗಳೂರಲ್ಲಿ ಟ್ಯಾಂಕರ್ ನೀರಿನ ದರ ಹೆಚ್ಚಳ ಸೇರಿದಂತೆ ಜನರಿಗೆ ಬರೆಯನ್ನು ಎಳೆಯಲಾಗಿತ್ತು. ಈಗ ಬೆಂಗಳೂರಲ್ಲಿ ವಾಟರ್ ಟ್ಯಾಂಕರ್ ಮಾಫಿಯಾಗೆ ಬಿಬಿಎಂಪಿ ಕಡಿವಾಣ ಹಾಕುವಂತ ನಿರ್ಧಾರ ಕೈಗೊಂಡಿದೆ. ಅಲ್ಲದೇ ಮಾರ್ಚ್.7ರೊಳಗೆ ವಾಟರ್ ಟ್ಯಾಂಕರ್ ನೋಂದಣಿ ಮಾಡಿಸಿಕೊಳ್ಳುವಂತೆ ಖಡಕ್ ಸೂಚನೆ ನೀಡಿದೆ. ಈ ಸಂಬಂಧ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಅವರು, ವಾಟರ್ ಟ್ಯಾಂಕ್ ಮಾಲೀಕರು ಮಾರ್ಚ್.7ರ ಒಳಗಾಗಿ ನೀರು ಸರಬರಾಜು ಮಾಡುವುದಕ್ಕೆ ನೋಂದಣಿ ಮಾಡಿಕೊಳ್ಳಬೇಕು. ಒಂದು ವೇಳೆ ನೋಂದಣಿ ಮಾಡಿಕೊಳ್ಳದೇ ಇದ್ದರೇ ಅಂತಹ ವಾಟರ್ ಟ್ಯಾಂಕರ್ ಗಳನ್ನು ವಶಕ್ಕೆ ಪಡೆಯೋದಾಗಿ ಎಚ್ಚರಿಕೆ ನೀಡಿದರು. ವಾಟರ್ ಟ್ಯಾಂಕರ್ ಗಳು ಟ್ರೇಡ್ ಲೈಸೆನ್ಸ್ ಪಡೆಯಬೇಕು. ಸಾರಿಗೆ ಇಲಾಖೆ ಪ್ರಕಾರ 3,500 ವಾಟರ್ ಟ್ಯಾಂಕರ್ ಗಳು ಇದ್ದಾವೆ. ಇವುಗಳೆಲ್ಲ ಮಾರ್ಚ್.1ರಿಂದ ಮಾರ್ಚ್.7ರೊಳಗಾಗಿ ನೋಂದಣಿ ಮಾಡಿಕೊಳ್ಳಬೇಕು. ಟ್ರೇಡ್ ಲೈಸೆನ್ಸ್ ಪಡೆಯದೇ ನೀರು ಸರಬರಾಜು ಮಾಡುವಂತಿಲ್ಲ. ನೋಂದಣಿ ಮಾಡಿಕೊಳ್ಳದಂತ ಟ್ಯಾಂಕರ್ ಗಳನ್ನು…
ಪಂಡಿತ್ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ ಹಾಗೂ ಅರ್ಚಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪಂಡಿತ್ ವಿದ್ಯಾಧರ್ ನಕ್ಷತ್ರಿ 9686268564 ನಾಳೇಯ ದಿನ ಆಂಜನೇಯ ಸ್ವಾಮಿಯ ಹನುಮಾನ್ ಚಾಲೀಸ ಪಾರಾಯಣ ಮಾಡಿರಿ ಇದರಿಂದ ನಿಮಗೆ ಸಾಕಷ್ಟು ಒಳಿತು ಆಗುತ್ತದೆ ಕುಟುಂಬ ಜನಕ್ಕೂಸಹ ಸಾಕಷ್ಟು ಒಳ್ಳೆಯದು ಆಗಲಿದೆ. ಓಂ ಶ್ರೀ ಆಂಜನೇಯಾಯ ನಮಃ ಓಂ ಮಹಾವೀರಾಯ ನಮಃ ಓಂ ಹನುಮತೇ ನಮಃ ಓಂ ಸೀತಾದೇವಿ ಮುದ್ರಾಪ್ರದಾಯಕಾಯ ನಮಃ ಓಂ ಮಾರುತಾತ್ಮಜಾಯ ನಮಃ ಓಂ ತತ್ತ್ವ ಜ್ಞಾನ ಪ್ರದಾನ…
ನವದೆಹಲಿ : 2016ರಲ್ಲಿ ಯುಎಸ್ನಿಂದ ಭಾರತಕ್ಕೆ ಮರಳಿದ ಭಾರತೀಯ ಮೂಲದ ಮಹಿಳೆ ಐಸಿಐಸಿಐ ಬ್ಯಾಂಕಿನ ವ್ಯವಸ್ಥಾಪಕರು ಮೋಸದ ಚಟುವಟಿಕೆಗಳಲ್ಲಿ ತೊಡಗುವ ಮೂಲಕ 13.5 ಕೋಟಿ ರೂ.ಗಳನ್ನು ವಂಚಿಸಿದ್ದಾರೆ ಎಂದು ಆರೋಪಿಸಿದ್ದರು. ಈ ಬಗ್ಗೆ ನಿಮ್ಮ ಕನ್ನಡ ನ್ಯೂಸ್ ನೌ ಕೂಡ ಸುದ್ದಿ ಮಾಡಿತ್ತು. ಈ ಬೆನ್ನಲ್ಲೇ ಐಸಿಐಸಿಐ ಬ್ಯಾಂಕ್ ನಿಂದ ಮಹತ್ವದ ಸ್ಪಷ್ಟನೆ ನೀಡಲಾಗಿದೆ. ಅದು ಏನು ಅಂತ ಮುಂದೆ ಓದಿ. ಈ ಕುರಿತಂತೆ ಐಸಿಐಸಿಐ ಬ್ಯಾಂಕ್ ನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ನಮ್ಮ ಗ್ರಾಹಕರು ನಮ್ಮ ಅತ್ಯಂತ ಆದ್ಯತೆ. ಅವರ ಹಿತಾಸಕ್ತಿಗಳನ್ನು ರಕ್ಷಿಸಲು ನಾವು ಸಂಪೂರ್ಣವಾಗಿ ಸಮರ್ಪಿತರಾಗಿದ್ದೇವೆ. ಈ ಸಂದರ್ಭದಲ್ಲಿಯೂ, ಗ್ರಾಹಕರ ಆರ್ಥಿಕ ಹಿತಾಸಕ್ತಿಗಳನ್ನು ರಕ್ಷಿಸಲಾಗಿದೆ ಎಂದು ನಾವು ಖಚಿತಪಡಿಸುತ್ತೇವೆ ಎಂದಿದೆ. ವಾಸ್ತವವಾಗಿ, ತನಿಖೆಯ ಫಲಿತಾಂಶ ಬರುವವರೆಗೆ ವಿವಾದಿತ ಮೊತ್ತವಾದ 9.27 ಕೋಟಿ ರೂ.ಗಳನ್ನು (ಅವರು ಈಗಾಗಲೇ 2 ಕೋಟಿ ರೂ.ಗಳ ಸ್ಥಿರ ಠೇವಣಿಯನ್ನು ನಗದೀಕರಿಸಿದ್ದಾರೆ) ಅವರ ಖಾತೆಗೆ ವರ್ಗಾಯಿಸಲು ನಾವು ಸಿದ್ಧರಿದ್ದೇವೆ ಎಂದು ನಾವು ಗ್ರಾಹಕರಿಗೆ ತಿಳಿಸಿದ್ದೇವೆ…
ಬೆಂಗಳೂರು: ನಿರುದ್ಯೋಗಿ ಪದವೀಧರರು, ಡಿಪ್ಲೋಮಾ ಓದಿದವರು ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಿದ್ದರೇ ಪ್ರತಿ ತಿಂಗಳು ಸ್ವಯಂ ಘೋಷಣೆ ಮಾಡದೇ ಹೋದಲ್ಲಿ ಯುವನಿಧಿ ಸೌಲಭ್ಯದಿಂದ ಅನರ್ಹ ಎಂಬುದಾಗಿ ರಾಜ್ಯ ಸರ್ಕಾರ ಸ್ಪಷ್ಟ ಪಡಿಸಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿದ್ದು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ʼಯುವನಿಧಿʼ ಅಡಿಯಲ್ಲಿ ಈಗಾಗಲೇ ಸೇವಾಸಿಂಧು ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡ ಪದವೀಧರರು/ ಸ್ನಾತಕೋತ್ತರ ಪದವೀಧರರು ಮತ್ತು ಡಿಪ್ಲೋಮಾದಾರರು ಅವರ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿನಗಳನ್ನು ಪೂರೈಸಿದ ಅಭ್ಯರ್ಥಿಗಳಿಗೆ ಜನವರಿ 2024ರಲ್ಲಿ ನೇರ ನಗದು ವರ್ಗಾವಣೆ ಮಾಡಲಾಗಿರುತ್ತದೆ ಎಂದು ತಿಳಿಸಿದೆ. ಫೆಬ್ರವರಿ 2024ರಲ್ಲಿ ಪ್ರಯೋಜನ ಪಡೆಯಲು ಅಭ್ಯರ್ಥಿಗಳು 29.02.2024ರೊಳಗೆ ತಾನು ನಿರುದ್ಯೋಗಿ ಎಂದು ಕಡ್ಡಾಯವಾಗಿ ಸ್ವಯಂ ಘೋಷಣೆ ಮಾಡಬೇಕು. ಸೂಚಿತ ಸಮಯದೊಳಗೆ ಮಾಸಿಕ ಸ್ವಯಂ ಘೋಷಣೆ ಮಾಡದೇ ಹೋದಲ್ಲಿ ʼಯುವನಿಧಿʼ ನೇರ ನಗದು ವರ್ಗಾವಣೆ ಸೌಲಭ್ಯದಿಂದ ಅನರ್ಹಗೊಳಿಸಲಾಗುವುದು ಎಂಬುದಾಗಿ ರಾಜ್ಯ ಸರ್ಕಾರ ಹೇಳಿದೆ. https://kannadanewsnow.com/kannada/bitcoin-case-court-sends-accused-to-7-day-sit-custody/ https://kannadanewsnow.com/kannada/bengaluru-miscreants-set-ablaze-jcb-during-encroachment-complaint-lodged-against-two-accused/
BREAKING: ರಾಜ್ಯದ ‘ವಿದ್ಯುತ್ ಬಳಕೆದಾರ’ರಿಗೆ ಗುಡ್ ನ್ಯೂಸ್: ‘ದರ ಇಳಿಕೆ’ ಮಾಡಿ ಸರ್ಕಾರ ಆದೇಶ | Electricity Price
ಬೆಂಗಳೂರು: ರಾಜ್ಯ ಸರ್ಕಾರದಿಂದ ವಿದ್ಯುತ್ ಗ್ರಾಹಕರಿಗೆ ಗುಡ್ ನ್ಯೂಸ್ ಎನ್ನುವಂತೆ ವಿದ್ಯುತ್ ದರವನ್ನು ಇಳಿಕೆ ಮಾಡಲಾಗಿದೆ. ಈ ಸಂಬಂಧ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಿಂದ ಅಧಿಕೃತ ವಿದ್ಯುತ್ ದರ ಇಳಿಕೆಯ ಅಧಿಕೃತ ಪರಿಷ್ಕರಣೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಇಂದು ವಿದ್ಯುತ್ ಪರಿಷ್ಕರಣೆಯ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು, ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕ.ವಿ.ನಿ.ಆ)ವು ಆರ್ಥಿಕ ವರ್ಷ 2024-25ನೇ ಸಾಲಿಗೆ ಎಲ್ಲಾ ವಿತರಣಾ ಪರವಾನಿಗೆದಾರರ ವ್ಯಾಪ್ತಿಯ ಗ್ರಾಹಕರಿಗೆ ಅನ್ವಯವಾಗುವಂತೆ ವಿದ್ಯುಚ್ಛಕ್ತಿ ದರಗಳ ಪರಿಷ್ಕರಣೆಯನ್ನು ಅನುಮೋದಿಸಿದೆ ಎಂದಿದೆ. ದರ ಆದೇಶದ ಪ್ರಮುಖ ಅಂಶಗಳು * ಆರ್ಥಿಕ ವರ್ಷ 2024-25ರಲ್ಲಿ ಅಲ್ಪ ಪ್ರಮಾಣದ ಹೆಚ್ಚಳವನ್ನು ಎಲ್ಲಾ ಪವರ್ಗಗಳ ಗ್ರಾಹಕರಿಗೆ ದರ ಮರುಹೊಂದಾಣಿಕೆ ಮಾಡಲು ಉಪಯೋಗಿಸಲಾಗಿದೆ. * ವಾಣಿಜ್ಯ, ಕೈಗಾರಿಕಾ ಮತ್ತು ಗೃಹ ಬಳಕೆ ಗ್ರಾಹಕರ ವಿದ್ಯುತ್ ದರದಲ್ಲಿ ಗಣನೀಯ ಇಳಿಕೆ. (ಪ್ರತಿ ತಿಂಗಳು 100 ಯೂನಿಟ್‌ಗಳಿಗಿಂತ ಹೆಚ್ಚಿನ ಬಳಕೆಗೆ) * ಎಲ್.ಟಿ. ಗೃಹ ಬಳಕೆ ವಿದ್ಯುತ್ ದೀಪ: 100…
ಬೆಂಗಳೂರು: ರಾಜ್ಯದ ಜನತೆಗೆ ಇಂದು ಸಂಜೆಯೊಳಗೆ ಕರೆಂಟ್ ಶಾಕ್ ಅನ್ನು ಸರ್ಕಾರ ನೀಡಲಿದೆ ಎನ್ನಲಾಗುತ್ತಿತ್ತು. ಅಲ್ಲದೇ ವಿದ್ಯುತ್ ದರ ಪರಿಷ್ಕರಣೆ ಮಾಡಿ ಏರಿಕೆಯ ಬರೆಯನ್ನು ಎಳೆಯಲಾಗುತ್ತದೆ ಎಂದು ಹೇಳಲಾಗುತ್ತಿತ್ತು. ಆದರೇ ಕರೆಂಟ್ ಶಾಕ್ ನಲ್ಲಿದ್ದಂತ ರಾಜ್ಯದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ವಿದ್ಯುತ್ ದರ ಭಾರೀ ಇಳಿಕೆ ಮಾಡಲಾಗಿದೆ. ಈ ಕುರಿತಂತೆ ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗ ( KERC ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಎಲ್ ಟಿ ಗೃಹ ಬಳಕೆಯಲ ವಿದ್ಯುತ್ ದೀಪದ 100 ಯೂನಿಟ್ ಗಳಿಗಿಂತ ಹೆಚ್ಚಿನ ಬಳಕೆಗೆ ಪ್ರತಿ ಯೂನಿಟ್ ಗೆ 110 ಪೈಸೆ ಇಳಿಕೆ ಮಾಡಲಾಗಿದೆ. ಅಲ್ಲದೇ ಹೆಚ್.ಟಿ ವಾಣಿಜ್ಯ ಬಳಕೆಯ ಇಂಧನ ಶುಲ್ಕ ಪ್ರತಿ ಯೂನಿಟ್ ಗೆ 125ಪೈಸೆ ನಿಗದಿ ಮಾಡಿದ್ದರೇ, ಡಿಮಾಂಡ್ ಶುಲ್ಕ ಪ್ರತಿ ಕೆವಿಎಗೆ ರೂ.10 ಇಳಿಕೆ ಮಾಡಲಾಗಿದೆ. ಇನ್ನೂ ಹೆಚ್.ಟಿ ಕೈಗಾರಿ ಇಂಧನ ಬಳಕೆ ಶುಲ್ಕ ಪ್ರತಿ ಯೂನಿಟ್ ಗೆ 50 ಪೈಸೆ ಮಾಡಿದ್ದರೇ, ಡಿಮಾಂಡ್ ಶುಲ್ಕ…
ಬೆಂಗಳೂರು: ರಾಜ್ಯದಲ್ಲಿ ತಲ್ಲಣವನ್ನೇ ಸೃಷ್ಠಿಸಿದ್ದಂತ ಬಿಟ್ ಕಾಯಿನ್ ಪ್ರಕರಣದಲ್ಲಿ ಇಂದು ಮತ್ತೊಬ್ಬ ಇನ್ಸ್ ಸ್ಪೆಕ್ಟರ್ ಅನ್ನು ಬಂಧಿಸಲಾಗಿದೆ. ಈ ಮೂಲಕ ಬಿಟ್ ಕಾಯಿನ್ ಪ್ರಕರಣದ ತನಿಖೆಯನ್ನು ಸಿಐಡಿ SIT ಪೊಲೀಸರು ಚುರುಕುಗೊಳಿಸಿದ್ದಾರೆ. ಬಿಟ್ ಕಾಯಿನ್ ಪ್ರಕರಣದಲ್ಲಿ ಈ ಹಿಂದೆ ಹಲವರನ್ನು ಬಂಧಿಸಲಾಗಿತ್ತು. ತನಿಖೆಯನ್ನು ಸಿಐಡಿಗೆ ವಹಿಸಿ ಸರ್ಕಾರ ಆದೇಶಿಸಿತ್ತು. ಈ ಬೆನ್ನಲ್ಲೇ ತನಿಖೆ ಚುರುಕುಗೊಳಿಸಿರುವಂತ ಸಿಐಡಿ ಪೊಲೀಸರು, ಇಂದು ಪ್ರಕರಣದಲ್ಲಿ ಇನ್ಸ್ ಸ್ಪೆಕ್ಟರ್ ಲಕ್ಷ್ಮೀಕಾಂತಯ್ಯ ಅವರನ್ನು ಬಂಧಿಸಲಾಗಿದೆ. ಬಂಧಿತ ಇನ್ಸ್ ಸ್ಪೆಕ್ಟರ್ ಲಕ್ಷ್ಮೀಕಾಂತಯ್ಯ ಅವರು ಈ ಹಿಂದೆ ಬಿಟ್ ಕಾಯಿನ್ ಪ್ರಕರಣದ ತನಿಖಾಧಿಕಾರಿಯಾಗಿದ್ದರು. ಅವರನ್ನು ಬಂಧಿಸಿರುವಂತ ಸಿಐಡಿ ಎಸ್ಐಟಿ ಪೊಲೀಸರು, ಕೆಲ ಹೊತ್ತಿನಲ್ಲೇ ಅವರನ್ನು ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. https://kannadanewsnow.com/kannada/karnataka-co-operative-societies-bill-suffers-setback-in-legislative-council-speaker-to-select-committee/ https://kannadanewsnow.com/kannada/dysp-attacked-during-protest-by-bjp-workers-in-tumkur-over-alleged-pro-pakistan-slogans/
ಬೆಂಗಳೂರು: ಕರ್ನಾಟಕ ಸಹಕಾರ ಸಂಘಗಳ ವಿಧೇಯಕವನ್ನು ಇಂದು ವಿಧಾನಪರಿಷತ್ತಿನಲ್ಲಿ ರಾಜ್ಯ ಸರ್ಕಾರದಿಂದ ಮಂಡಿಸಲಾಗಿತ್ತು. ಆದರೇ ರಾಜ್ಯ ಸರ್ಕಾರಕ್ಕೆ ಹಿನ್ನಡೆ ಎನ್ನುವಂತೆ ಸಭಾಪತಿಗಳು ವಿಧೇಯಕವನ್ನು ಸೆಲೆಕ್ಟ್ ಕಮಿಟಿಗೆ ಹಾಕಿದ್ದಾರೆ. ಈ ಮೂಲಕ ವಿಧಾನ ಪರಿಷತ್ತಿನಲ್ಲಿ ಸರ್ಕಾರಕ್ಕೆ ಭಾರೀ ಹಿನ್ನಲೆಯುಂಟಾದಂತೆ ಆಗಿದೆ. ವಿಧಾನಸಭೆಯಲ್ಲಿ ಮಂಡನೆಯಾಗಿ, ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕವನ್ನು ರಾಜ್ಯ ಸರ್ಕಾರ ಮಂಡಿಸಿ ಅಂಗೀಕಾರವನ್ನು ಪಡೆದಿತ್ತು. ಆ ಬಳಿಕ ಇಂದು ವಿಧಾನಪರಿಷತ್ತಿನಲ್ಲಿ ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕವನ್ನು ಮಂಡಿಸಲಾಗಿತ್ತು. ವಿಧಾನಸೌಧದದಲ್ಲಿ ಪಾಕಿಸ್ತಾನ್ ಜಿಂದಾಬಾಂದ್ ಘೋಷಣೆಯ ವಿಚಾರವಾಗಿ ಸನದಲ್ಲಿ ಆಡಳಿತ, ವಿಪಕ್ಷಗಳ ನಡುವೆ ವಾಕ್ ಸಮರವೇ ನಡೆಯಿತು. ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕರು ಹೀಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡು, ಸದನದ ಭಾವಿಗೆ ಇಳಿದು ಪ್ರತಿಭಟನೆಯನ್ನು ನಡೆಸಲಾಯಿತು. ಈ ಪ್ರತಿಭಟನೆಯ ನಡುವೆಯೂ ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕವನ್ನು ಮಂಡಿಸಲಾಯಿತ್ತು. ಆದ್ರೇ ಈ ವಿಧೇಯಕವನ್ನು ಸಭಾಪತಿ ಬಸವರಾಜ ಹೊರಟ್ಟಿಯವರು ಮತಕ್ಕೆ ಹಾಕದೇ ಸೆಲೆಕ್ಟ್ ಕಮಿಟಿಗೆ ಹಾಕಿದ ಕಾರಣ, ರಾಜ್ಯ ಸರ್ಕಾರಕ್ಕೆ ಹಿನ್ನಡೆ ಆದಂತೆ…